Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಅಂಚೆ ಕಚೇರಿ, ಜೆಸಿಐ ಬೈಂದೂರು ಸಿಟಿ ಹಾಗೂ ಜೆಸಿಐ ಶಿರೂರು ಇವರ ಸಹಯೋಗದೊಂದಿಗೆ ಆಧಾರ ಕಾರ್ಡ್ ನೊಂದಣಿ ಶಿಬಿರವು ಬೈಂದೂರು ಅಂಚೆ ಕಚೇರಿ ಇಲ್ಲಿ ಜರುಗಿತು. ಕಾರ್ಯಕ್ರಮವನ್ನು ಜೆಸಿಐ ಬೈಂದೂರು ಸಿಟಿ ಅಧ್ಯಕ್ಷಮಣಿಕಂಠ ಎಸ್ ಉದ್ಘಾಟಿಸಿದರು. ಅಂಚೆ ಇಲಾಖೆಯ ಉಡುಪಿ ಅಧಿಕ್ಷಕರಾದ ಸುಧಾಕರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜೆಸಿ ಶಿರೂರು ಅಧ್ಯಕ್ಷ ನಾಗೇಶ್, ಬೈಂದೂರು ಜೆಸಿಯ ನಿಯೋಜಿತ ಅಧ್ಯಕ್ಷೆ ಜೆಸಿ ಪ್ರಿಯದರ್ಶಿನಿ ಬೆಸ್ಕೂರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬೈಂದೂರು ಅಂಚೆ ಕಚೇರಿ ಮುಖ್ಯಸ್ಥೆ ರತ್ನಾ ಗೀರಿಶ್ ಸ್ವಾಗತಿಸಿದರು, ಜೆಸಿ ಗೀರಿಶ್ ಮೆಸ್ತಾ ಅವರು ವಂದಿಸಿದರು, ಜೆಸಿ ಪ್ರಕಾಶ್ ಅವರು ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಇದರ ಎ ಪಿ ಭಟ್ ಮತ್ತು ಅತುಲ್ ಭಟ್ ಮಾರ್ಗದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್ 26ರಂದು ಸಂಭವಿಸಲಿರುವ ಕಂಕಣ ಸೂರ್ಯಗ್ರಹಣದ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಬುಧವಾರ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಪೂರ್ಣಪ್ರಜ್ಞಾ ಕಾಲೇಜಿನ ವಿದ್ಯಾರ್ಥಿಗಳಾದ ಜೇಷ್ಠಾ ಪ್ರಭು, ಶಾಂಭವಿ ವಿ ಭಟ್, ಕುಮಾರ ಚವ್ವನ ಹೆಗ್ಡೆ ಮತ್ತು ಮಹಮ್ಮದ್ ಹಶಿಮ್ ಅನ್ವರ್ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ತೆರಳಿ ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿಗಳು ಗ್ರಹಣ ವೀಕ್ಷಿಸಲು ಪಿನ್‌ಹೋಲ್ ಯಂತ್ರ ಹಾಗೂ ಕನ್ನಡಕವನ್ನು ನೀಡಿದರು. ಈ ಸಂದರ್ಭ ಉದ್ಯಮಿಗಳಾದ ಶ್ರೀನಿವಾಸ ಪ್ರಭು ಉಪಸ್ಥಿತರಿದ್ದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ಧನ ದೇವಾಡಿಗ ಸ್ವಾಗತಿಸಿದರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಸಂಚಾಲಕರಾದ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು.

Read More

ಕಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಇಲ್ಲಿಗೆ ಸಮೀಪದ ಆನಗಳ್ಳಿಯ ಹೆಬ್ಬಾರ ಬೆಟ್ಟುವಿನ ಶ್ರೀ ದತ್ತಾಶ್ರಮ, ಶ್ರೀ ಆದಿ ಶಕ್ತಿ ಮಠದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಯ ವಿನಯ್‌ ಗುರೂಜಿ ಹಾಗೂ ದೆಹಲಿಯ ನಾಗ ಸಾಧುಗಳ ಪಂಥದ ರಾಷ್ಟ್ರೀಯ ಜೂನಾ ಅಖಾಡದ ಉಪಾಧ್ಯಕ್ಷ ಅಗಸ್ತ್ಯಗಿರಿ ಮಹಾರಾಜ್‌ ನೇತ್ರತ್ವದಲ್ಲಿ ಬ್ರಹತ್‌ ನರ್ಮದೇಶ್ವರ ಲಿಂಗದ ಪ್ರತಿಷ್ಠಾಪನೆ ನಡೆಯಿತು. ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಬುಧವಾರ ಮುಂಜಾನೆಯಿಂದ ಶಂಕರನಾರಾಯಣದ ಶ್ರೀಶ ಜೋಯಿಸರ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನರ್ಮದಾ ಲಿಂಗಕ್ಕೆ ಹಾಲು, ತುಪ್ಪ, ಜೇನು, ಸಿಯಾಳ, ನೀರು, ರಕ್ತಚಂದನ, ಅರಶಿನ-ಕುಂಕುಮ, ಭಸ್ಮ, ಸಕ್ಕರೆ, ಕಬ್ಬಿನ ಹಾಲು ಸೇರಿದಂತೆ ಪುಣ್ಯ ದ್ರವ್ಯಗಳಿಂದ ಅಭಿಷೇಕ ನೆರವೇರಿಸಲಾಯಿತು. ಈ ವೇಳೆ ನೆರೆದ ಭಕ್ತಸಾಗರವು ಹರಹರ ಮಹಾದೇವ ಘೋಷಣೆಯನ್ನು ಅರ್ಪಿಸಿದರು. ಆದಿವಾಸ ಹೋಮ, ದತ್ತಾಭಿಷೇಕ, ಶತ ರುದ್ರಾಭಿಷೇಕ, ಪವನ ಹೋಮ, ದುರ್ಗಾಷಟಿ ಹೋಮ ಮೊದಲಾದ ಧಾರ್ಮಿಕ ಪೂಜೆ ನಡೆಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಗ್ರಾಮೀಣ ಭಾಗಗಳಿಂದ ಸುತ್ತುವರಿದಿದ್ದ ಕೊಲ್ಲೂರಿನಲ್ಲಿ ಸರ್ವರಿಗೂ ಸುಲಭದಲ್ಲಿ ಪ್ರೌಢಶಿಕ್ಷಣವನ್ನು ಒದಗಿಸಬೇಕೆಂಬ ಮಹೋನ್ನತ ಉದ್ದೇಶದೊಂದಿಗೆ 1969ರಲ್ಲಿ ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಮಂಡಳಿ ಆರಂಭಿಸಿದ ಶಾಲೆ ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಇಂದು ಸವರ್ಣ ಸಂಭ್ರಮಕ್ಕೆ ಸಜ್ಜಾಗಿ ನಿಂತಿದೆ. ಅಂದು ಕೀರ್ತಿಶೇಷ ಯಡ್ತರೆ ಮಂಜಯ್ಯ ಶೆಟ್ಟಿ ಅವರು ಆಡಳಿತ ಮೊಕ್ತೇಸರರಾಗಿದ್ದರು. ಕಾರ್ಯನಿರ್ವಹಣಾಧಿಕಾರಿ ನಾರಾಯಣ ಭಟ್ಟರು ವಿಶೇಷ ಮುತುವರ್ಜಿ ವಹಿಸಿದ್ದರು. ಆರಂಭದಲ್ಲಿ ಶ್ರೀಮಾತಾ ಛತ್ರದ ತಾತ್ಕಾಲಿಕ ಕಟ್ಟಡದಲ್ಲಿ(ಇಂದಿನ ಸಿಂಡಿಕೇಟ್ ಬ್ಯಾಂಕ್ ಇರುವ ಸ್ಥಳದಲ್ಲಿ) ಕೇವಲ ಬೆರಳೆಣಿಕೆಯ ವಿದ್ಯಾರ್ಥಿಗಳಿಂದ ಶಾಲೆಯನ್ನು ಪ್ರಾರಂಭಿಸಲಾಯಿತು. ದಾಖಲಾತಿಯ ಕೊರತೆಯನ್ನು ನೀಗಿಸಲು ಅಂದಿನ ಕಷ್ಟದ ದಿನಗಳಲ್ಲೂ ಸ್ಥಳೀಯ ಅನೇಕ ಮಹನೀಯರು ತಮ್ಮ ಬಂಧುಗಳ ಮಕ್ಕಳನ್ನೋ ಪರಿಚಿತರ ಮಕ್ಕಳನ್ನೋ ತಮ್ಮ ಮನೆಯಲ್ಲಿ ಉಳಿಸಿಕೊಂಡು ಶಾಲೆಯನ್ನು ಬೆಳೆಸಿದರು. 1974 ರಲ್ಲಿ ಸರಕಾರದಿಂದ ಅನುದಾನವನ್ನು ಪಡೆದ ವಿದ್ಯಾಸಂಸ್ಥೆ ಪ್ರಸ್ತುತ ರಾಜ್ಯಮಟ್ಟದಲ್ಲಿ ಉತ್ತಮ ಕನ್ನಡ ಮಾಧ್ಯಮ ಅನುದಾನಿತ ಶಾಲೆಯಾಗಿ ಬೆಳೆದು ನಿಂತಿದೆ. ಮುಂದೆ ಬಿ .ಅಪ್ಪಣ್ಣ ಹೆಗ್ಡೆ, ಬಿ.ಎಂ…

Read More

ಕುಂದಾಪ್ರ ಡಾಟ್ ಕಾಂ’ ಸುದ್ದಿ ಕುಂದಾಪುರ: ‘ಬ್ರಾಹ್ಮಣ ಸಮಾಜದ ಅಭಿವೃದ್ಧಿಗಾಗಿ ತೆಲಂಗಾಣ ರಾಜ್ಯ ರೂಪಿಸಿರುವ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಬ್ರಾಹ್ಮಣ ಸಮಾಜ ಅಭಿವೃದ್ಧಿಗೆ ಮಂಡಳಿ ಸ್ಥಾಪಿಸಿ, ಅದಕ್ಕೆ ಅಗತ್ಯ ಅನುದಾನವನ್ನು ನೀಡುವಂತೆ ಸರ್ಕಾರದ ಗಮನ ಸೆಳೆಯುವುದು ಹಾಗೂ ಲೋಕ ಕಲ್ಯಾಣಾರ್ಥವಾಗಿ ಇದೇ 28 ಹಾಗೂ 29ರಂದು ಕೋಟೇಶ್ವರದಲ್ಲಿ 10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ಆಯೋಜಿಸಲಾಗಿದೆ’ ಎಂದು ಸಮ್ಮೇಳನ ಅಧ್ಯಕ್ಷ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು. ಸಮ್ಮೇಳನ ನಡೆಯುವ ಕೋಟೇಶ್ವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಮಾತನಾಡಿ, ‘ರಾಜ್ಯದಲ್ಲಿರುವ ಅಂದಾಜು 50 ಲಕ್ಷ ಬ್ರಾಹ್ಮಣರ ಅಭಿವೃದ್ಧಿಗೆ ಸರ್ಕಾರ ಸಹಕಾರ ನೀಡಬೇಕು. ಸಮ್ಮೇಳನದಲ್ಲಿ ಬ್ರಾಹ್ಮಣ ಸಮಾಜ ಎದುರಿಸುತ್ತಿರುವ ಸಮಸ್ಯೆ, ಸ್ಥಿತಿ–ಗತಿಯ ಬಗ್ಗೆ ವಿಚಾರ ವಿಮರ್ಶೆ ನಡೆಸಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಾಣುವ ಪ್ರಯತ್ನ ಮಾಡಲಾಗುವುದು. ಬ್ರಾಹ್ಮಣ ಯುವಕರ ಮದುವೆ ಹಾಗೂ ಪೌರೋಹಿತ್ಯಕ್ಕೆ ಪ್ರೋತ್ಸಾಹ ನೀಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಡಿ.17: ದಾಖಲೆಗಳಿಲ್ಲದೇ ಎರ್ನಾಕುಲಂನಿಂದ ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಾಣಿಕ ಮಾಡುತ್ತಿದ್ದ ಆರೋಪದಲ್ಲಿ ಕುಂದಾಪುರ ಹಾಗೂ ಭಟ್ಕಳ ಉಪವಿಭಾಗದ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್ ಉಮ್ಮೆರ್ ಭಟ್ಕಳ್ ಅವರುಗಳಿಂದ ಒಟ್ಟು 61.47 ಲಕ್ಷ ರೂ. ಬೆಲೆಯ,1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ರೈಲಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಅವರು ಕುಂದಾಪುರ, ಬೈಂದೂರು, ಭಟ್ಕಳ ರೈಲು ನಿಲ್ದಾಣಗಳಲ್ಲಿ ಪೊಲೀಸರನ್ನು ನಿಯೋಜಿಸಿ, ಅದರಂತೆ ಬೈಂದೂರಿನಲ್ಲಿ ಓರ್ವ ಹಾಗೂ ಭಟ್ಕಳ ರೈಲ್ವೆ ನಿಲ್ದಾಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಎಸ್‌ಪಿ ನಿಶಾ ಜೇಮ್ಸ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್, ಭಟ್ಕಳ ಎಎಸ್‌ಪಿ ನಿಖಿಲ್, ಬೈಂದೂರು ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ, ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ ೨೧ವರ್ಷಗಳಿಂದ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸಿವರ್ಗಾವಣೆಗೊಂಡ ರೂಪ ಅವರಿಗೆ ವಿನಾಯಕ ಬುಕ್ ಸ್ಟಾಲ್ ಮಾಲಕರಾದ ವಿನೋದ್ ಮೇಸ್ತ ಸನ್ಮಾನಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿಯ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಉರ್ದು ಶಾಲೆಯ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷನಾಗಿದ್ದ ಮೋಹನ್ ಚಂದ್ರ (೪೧) ಬಂಧಿತ ಆರೋಪಿ. ಆರೋಪಿಗೆ ತಲೆಮರೆಸಿಕೊಳ್ಳಲು ಸಹಾಯ ನೀಡಿದ ಆರೋಪದ ಮೇಲೆ ಗಂಗಾಧರ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಉರ್ದು ಶಾಲೆಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಅವರಿಗೆ ಆರೋಪಿ ಮೋಹನ್ ಚಂದ್ರ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಮಾಡಿರುರುವುದಲ್ಲದೇ ಲೈಂಗಿಕ ದೌರ್ಜನ್ಯವೆಸಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಬೈಂದೂರು ಠಾಣೆಯಲ್ಲಿ ಡಿಸೆಂಬರ್ 10ರಂದು ಪ್ರಕರಣ ದಾಖಲಾಗಿತ್ತು. ಆರೋಪಿ ಮೋಹನ್ ಚಂದ್ರ ವಿರುದ್ದ ಈ ಹಿಂದೆಯೂ ಅದೇ ಶಾಲೆಯ ಮಮತಾ ಎನ್ನುವ ಶಿಕ್ಷಕಿಗೂ ಕಿರುಕುಳ ನೀಡಿದ ಆರೋಪವಿದ್ದು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದನು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ್‌ಚಂದ್ರನನ್ನು ಇದೀಗ ವಾರಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಈರ್ವರು ಆರೋಪಿಗಳನ್ನು ಹದಿನೈದು ದಿನಗಳ ಕಾಲ ನ್ಯಾಯಾಂಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ.ಡಿ17: ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವಾಪ್ತಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ನೆತ್ತರು ಹರಿದ ಘಟನೆ ನಡೆದಿದ್ದು, ವ್ಯಕ್ತಿಯೋರ್ವನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ಕಂಡ್ಲೂರು ಸಮೀಪದ ಜೋರ್‌ಮಕ್ಕಿ ನಿವಾಸಿ ಬಾಬು ಶೆಟ್ಟಿ (55) ಎಂದು ಗುರುತಿಸಲಾಗಿದೆ. ಹೆಮ್ಮಾಡಿ – ಕೊಲ್ಲೂರು ರಾಜ್ಯ ಹೆದ್ದಾರಿ ಹಾಗೂ ತಲ್ಲೂರು ನೇರಳಕಟ್ಟೆ ಸಂಪರ್ಕ ರಸ್ತೆಯ ಜಾಡಿ ಕಲ್ಕಂಬ ಎಂಬಲ್ಲಿನ ಮಣ್ಣಿನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ದಾರಿಹೋಕರೊಬ್ಬರು ರಕ್ತಸಿಕ್ತ ದೇಹವನ್ನು ಕಂಡು ಹಟ್ಟಿಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೀವ ಶೆಟ್ಟಿ ಅವರ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ತಿಳಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಲಾರಿ ಚಾಲಕರಾಗಿರುವ ಮೃತ ಬಾಬು ಶೆಟ್ಟಿ ತಮ್ಮ ಮನೆಯಿಂದ ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ತನ್ನ ಹೀರೋ ಹೋಂಡಾ ಬೈಕಿನಲ್ಲಿ ತೆರಳಿದ್ದರು. ಇದರ ನಡುವೆಯೇ ಮಾರ್ಗಮಧ್ಯೆ ಈ ದುಷ್ಕೃತ್ಯ ನಡೆದಿದೆ. ಮೃತರ ಕುತ್ತಿಗೆ, ತಲೆ, ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಇರಿತದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಜನರು ಪ್ರತಿನಿತ್ಯವೂ ತೊಂದರೆಗೆ ಸಿಲುಕುವಂತಾಗಿದೆ. ರಸ್ತೆ ಕಾಮಗಾರಿ ಆರಂಭಕ್ಕೂ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾದುಹೋಗುವ ಪ್ರತಿ ಪಂಚಾಯತಿಯಿಂದಲೂ ಲಿಖಿತವಾಗಿ ಮನವಿಗಳನ್ನು ನೀಡಿದ ಹೊರತಾಗಿಯೂ ಹೆದ್ದಾರಿ ಪ್ರಾಧಿಕಾರ ಜನರ ಸಮಸ್ಯೆಗೆ ಸ್ಪಂದಿಸದೇ ಮೊಂಡುತನ ಮೆರೆದಿದೆ. ಕೇಂದ್ರ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ಜನರ ಗಂಭೀರ ಸಮಸ್ಯೆಗೆ ಯಾವುದೇ ಸ್ಪಂದನೆ ಇಲ್ಲದಂತಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ್ಲೂರಿನಿಂದ ಶಿರೂರು ವರೆಗಿನ ಚತುಷ್ಪಥ ಹೆದ್ದಾರಿ ಕಾಮಗಾರಿ ತೀರ ಅವ್ಯವಸ್ಥಿತವಾಗಿ ನಡೆದಿದ್ದು ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮರವಂತೆಯಿಂದ ಬೈಂದೂರು ವರೆಗೆ ಹಮ್ಮಿಕೊಂಡ ಪಾದಯಾತ್ರೆಯ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಮಾತನಾಡಿ ಕಾಮಗಾರಿ ಅಪೂರ್ಣವಾಗಿರುವಾಗಲೇ ಶಿರೂರು ಗಡಿಭಾಗದಲ್ಲಿ ಟೋಲ್ ಸಂಗ್ರಹಕ್ಕೆ ಐಆರ್‌ಬಿ ಕಂಪೆನಿ ಅಣಿಯಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು.…

Read More