Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ  ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ  ವಿದ್ಯಾರ್ಥಿಗಳಿಗಾಗಿ  ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಶ್ಲೋಕ ಪಠಣ, ಭಾಷಣ, ಏಕಪಾತ್ರಾಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ವೇದಿಕೆಯ ಭಯವನ್ನು ನಿವಾರಿಸಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಯಿತು. ವಿದ್ಯಾರ್ಥಿಗಳು ಉತ್ಸಾಹ ಹಾಗೂ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಹೇಮಮಾಲಿನಿ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ವಿದ್ಯಾರ್ಥಿಗಳಾದಅದ್ವೈತ್, ಸಾತ್ವಿಕ್ ಹಾಗೂ ಚಿನ್ಮಯಿ ಅವರು ಯಶಸ್ವಿಯಾಗಿ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಸಾಹೇಬರಕಟ್ಟೆ ಗರಿಕೆಮಠ ಮೂಲದ ಸಾಮರಾಜ್ (21) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಘಟನೆಯ ವಿವರ:ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸಾಮರಾಜ್, ಜೂನ್ 13ರ ಶನಿವಾರ ಸಂಜೆ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಅವರು ಮುಳುಗಿ ನಾಪತ್ತೆಯಾಗಿದ್ದರು. ಈಶ್ವರ್ ಮಲ್ಪೆ ತಂಡದಿಂದ ಸಾಹಸಿಕ ಶೋಧ ಕಾರ್ಯ:ವಿದ್ಯಾರ್ಥಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ತಕ್ಷಣವೇ ಶೋಧ ಕಾರ್ಯಾಚರಣೆಗೆ ಇಳಿಯಿತು. ಭಾನುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದ ತಂಡ, ಆಕ್ಸಿಜನ್ ಸಿಲಿಂಡರ್ ಬಳಸಿ ಹೊಳೆಯ ಆಳಕ್ಕೆ ಇಳಿದು ತೀವ್ರ ಹುಡುಕಾಟ ಮುಂದುವರಿಸಿದರು. ಕಾರ್ಯಾಚರಣೆಯ ಫಲವಾಗಿ ರವಿವಾರ ಮುಂಜಾನೆ ಹೊಳೆಯ ಮಧ್ಯಭಾಗದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ,  ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಇವರ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದಾ ಫೌಂಡೇಶನ್ ಮಣೂರು ಅನ್ನಪೂರ್ಣ ನರ್ಸರಿ ಇವರ ಮಾರ್ಗದರ್ಶನದಲ್ಲಿ ಕೋಡಿಕನ್ಯಾನದಲ್ಲಿ 3ನೇ ವರ್ಷದ ಪರಿಸರಸ್ನೇಹಿ ಹಸಿರು ಹೆಜ್ಜೆ ಅಭಿಯಾನ ಭಾನುವಾರ ಜರಗಿತು. ಕೋಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರು ಪ್ರಭಾಕರ್ ಮೆಂಡನ್ ಹಾಗೂ ಎಪಿಎಂಸಿ ಮಾಜಿ ಉಪಾಧ್ಯಕ್ಷ ಕೃಷ್ಣ ಪೂಜಾರಿ ಪಿ. ಉಪಸ್ಥಿತಿಯಲ್ಲಿ ಕೋಡಿಕನ್ಯಾನ ಶಂಕರ್ ಬಂಗೇರ ಮನೆಯಿಂದ ಚಾಲನೆ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್., ಸಹಾಯಕಿ ಸಂಗೀತಾ ಕೋಡಿತಲೆ, ಸಹಾಯಕಿ ಅನಿತಾ, ಸಂಜೀವಿನಿ ಸಂಜೀವಿನಿ ಒಕ್ಕೂಟದ ಎಲ್‌ಸಿಆರ್‌ಪಿ ಸುಮಿತ್ರ, ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಷ್ಮಣ್ ಕುಂದರ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಕಳವು ಹಾಗೂ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಗುಜರಾತ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್ ಕುಂಡ್ಲ ತಾಲೂಕಿನ ಲಾಲಾಜಿಬಾಯ್ ಬುದಾಬಾಯ್ ಸೊಲಂಕಿ (37) ಬಂಧಿತ ಆರೋಪಿ. ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ಮನೆಯೊಂದಕ್ಕೆ ಮಾ.18ರಂದು ರಾತ್ರಿ ನುಗ್ಗಿದ ಕಳ್ಳರು, 10,000 ರೂ. ನಗದು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದೇ ದಿನ ಕುಂದಾಪುರ ವಿನಯ್ ಆಸ್ಪತ್ರೆಯ ಸಮೀಪದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕಳವು ಮಾಡಿರುವ ಬಗ್ಗೆಯೂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆರೋಪಿ ವಿಳಾಸದ ಆದರಿಸಿ ಗುಜರಾತ್ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್ ಕುಂಡ್ಲ ಎಂಬಲ್ಲಿಗೆ ತೆರಳಿದ್ದರು. ಅಲ್ಲಿ ಆತನಿಗಾಗಿ ಹುಡುಕಾಟ ನಡೆಸಿದಾಗ ಆತ ಉತ್ತರಕನ್ನಡ ಜಿಲ್ಲೆಯ ಮುರಡೇಶ್ವರದಲ್ಲಿರುವ ಮಾಹಿತಿ ದೊರೆಯಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಅತ್ಯಂತ ಅರ್ಥವತ್ತಾಗಿ ಕೆಲಸ ಮಾಡಿದ ಕೆಲವೇ ಕೆಲವು ವ್ಯಕ್ತಿಗಳಲ್ಲಿ ಎಸ್. ಜನಾರ್ದನ್‌ ಮರವಂತೆ ಅವರು ಒಬ್ಬರು. ಮರವಂತೆಯನ್ನೇ ತನ್ನ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ರಾಜ್ಯ, ರಾಷ್ಟ್ರಕ್ಕೆ ಒ೦ದು ಮಾದರಿ ಗ್ರಾಮ ಪಂಚಾಯತ್ ಆಗಿ ಮುಂದಿಟ್ಟವರು. ಪಂಚಾಯತ್ ರಾಜ್ ವ್ಯವಸ್ಥೆಗೆ ದೊಡ್ಡ ಶಕ್ತಿಯಾಗಿದ್ದ ಜನಾರ್ದನ ಮರವಂತೆ ಅವರ ನಿಧನ ವ್ಯವಸ್ಥೆಗೆ ದೊಡ್ಡ ನಷ್ಟವಾಗಿದೆ. ಅವರ ಚಿಂತನೆಗಳು, ನಿಲುವು, ಯೋಜನೆಗಳು ಸದಾ ನೆನಪಿನಲ್ಲಿ ಉಳಿಯುವ೦ತೆ ಕಾರ್ಯ ಯೋಜನೆಯೊಂದನ್ನು ರೂಪಿಸೋಣ ಎ೦ದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಲಕ್ಷ್ಮೀ ನರಸಿ೦ಹ ಕಲಾ ಮಂದಿರದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟ ರಿ., ಜನಪ್ರತಿನಿಧಿ ಪ್ರಕಾಶನ ಕುಂದಾಪುರ, ಸದ್ಭಾವನಾ ವೇದಿಕೆ ರಿ., ಕುಂದಾಪುರ, ನಮ್ಮಭೂಮಿ ಹಟ್ಟಿಯಂಗಡಿ ಇವರ ಆಶ್ರಯದಲ್ಲಿ ನಡೆದ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್‌. ಜನಾರ್ದನ ಮರವಂತೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ/ಕುಂದಾಪುರ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಗ್ಯಾರಂಟಿಗೆ ವಾರಂಟಿ ಇಲ್ಲಾ, ವ್ಯಾಲಿಡಿಟಿ ಇಲ್ಲಾ, ಗ್ಯಾರಂಟಿ ಪುಸ್ತಕದ ಹಾಳೆ ಮದ್ಯದಲ್ಲಿ ಇರುವ ನವಿಲುಗರಿ ಎಂದು ಟೀಕಿಸಿದ ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳುಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಾಗ ಈ ಗ್ಯಾರಂಟಿಯಿಂದ ಜನ ಸೋಮಾರಿಗಳಾಗುತ್ತಾರೆ. ಗ್ಯಾರಂಟಿಯಿಂದ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸಿದ ಬಿಜೆಪಿ ನಾಯಕರು ಇಂದು ಸರ್ಕಾರ ಮೂರು ವರ್ಷಗಳ ನಂತರ ಗ್ಯಾರಂಟಿ ಫಲಾನುಭವಿಗಳ ಪುನರ್ ಪರಿಶೀಲನೆಗೆ ಮರು ಅರ್ಜಿ ಸಲ್ಲಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಹೇಳಿಕೆ ಬಗ್ಗೆ ರಾಜಕಾರಣ ಮಾಡುವ ಬಿಜೆಪಿಯವರಿಗೆ ಈ ಗ್ಯಾರಂಟಿ ಯೋಜನೆ ನಿದ್ದೆಗೆಡಿಸಿದ್ದು ಗ್ಯಾರಂಟಿ. ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಉದ್ದೇಶ ಸರ್ಕಾರದ ಎಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳಲ್ಲಿ ಪರಿಸರ ಪ್ರಜ್ಞೆ ಜಾಗೃತಗೊಳಿಸುವ ಕಾರ್ಯ ನಿಜಕ್ಕೂ ಅರ್ಥಪೂರ್ಣ ಕಾರ್ಯ ಎಂದು ಪಂಚವರ್ಣ ನಿರಂತರ ಪರಿಸರಸ್ನೇಹಿ ಅಭಿಯಾನವನ್ನು ಶಿಕ್ಷಣ ತಜ್ಞ ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡರು ಮುಕ್ತ ಕಂಠದಿಂದ ಶ್ಲಾಘಿಸಿದರು. ಅವರು ಭಾನುವಾರ ಕೋಟದ ಹಂದಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪೇತ್ರಿ ಅನ್ನಪೂರ್ಣ ನರ್ಸರಿ ಇವರ ಸಹಯೋಗದೊಂದಿಗೆ 305ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗಿಡ ಮರಗಳ ಬಗ್ಗೆ ಮಕ್ಕಳಿಗೆ ನಮ್ಮ ಹಿಂದಿನ ಹಿರಿಯರು ತಿಳಿ ಹೇಳುವ ಕಾರ್ಯ ಮಾಡಿದ್ದರು ಆದರೆ ಇದೀಗ ಅದರ ಬಗ್ಗೆ ಅರಿವು ಕ್ಷೀಣಿಸಿದೆ ಈ ದಿಸೆಯಲ್ಲಿ ಪೋಷಕರು ಅದರ ಬಗ್ಗೆ ಜಾಗೃತಗೊಳಿಸುವ ಕಾರ್ಯ ಮಾಡಲಿ ಪರಿಸರ ಸಮತೋಲನದಿಂದ ಇದ್ದರೆ ವಾತಾವರಣದಲ್ಲಿ ವೈಪರೀತ್ಯಗಳು ಇನ್ನಿಲ್ಲದಂತ್ತಾಗುತ್ತದೆ.ಪಂಚವರ್ಣ ಸಂಘಟನೆ ನಿತ್ಯ ನಿರಂತರವಾಗಿ ಪರಿಸರದ ಬಗೆಗಿನ ಕಾಳಜಿ ಕಾರ್ಯಕ್ರಮಗಳು ಇತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗಾಣಿಗ ಪ್ರತಿಷ್ಠಾನ ರಿ. ಬೈಂದೂರು ಇದರ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಕಲಿಕಾ ಸಾಮಾಗ್ರ ವಿತರಣೆ ಕಾರ್ಯಕ್ರಮ ಹಾಗೂ ಸಮಾಜದ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಇಲ್ಲಿನ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆಯಲ್ಲಿ ಜರುಗಿತು.  ಕಾರ್ಯಕ್ರಮದ ಉದ್ಘಾಟನೆಯನ್ನು ಬೈಂದೂರು ಗಂಗನಾಡು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರಮ ಪಟ್ಟು ಅಭ್ಯಾಸ ಮಾಡಬೇಕಾಗಿದೆ. ಉನ್ನತ ವ್ಯಾಸಂಗ ಮಾಡುವತ್ತ ಎಲ್ಲ ವಿದ್ಯಾರ್ಥಿಗಳು ಗಮನ ಹರಿಸಬೇಕು. ದುಶ್ಚಟಗಳಿಂದ ದೂರವಾಗಿ ತಮ್ಮ ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿಸಿಟ್ಟುಕೊಳ್ಳಬೇಕು ಎಂದರು. ಗಾಣಿಗ ಪ್ರತಿಷ್ಠಾನ ರಿ. ಬೈಂದೂರು ಇದರ ಅಧ್ಯಕ್ಷರಾದ ಕೆ. ರಮೇಶ್ ಗಾಣಿಗ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಮಾಜದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟ್ರಷ್ಟ ಸ್ಥಾಪಿಸಿ ಕಾರ್ಯಕ್ರಮ ಮಾಡಲಾಗುತ್ತದೆ. ಸಮಜದಲ್ಲಿರುವ ಅಸಾಯಕರನ್ನು ಗುರುತಿಸಿ ಅವರಿಗೆ ಸಹಾಯ ಮಾಡುವುದು, ಸಾಧಕರನ್ನು ಗುರುತಿಸುವ ಕೆಲಸ ಆಗ ಬೇಕಾಗಿದೆ ಆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹಿಂದಿನ ನಮ್ಮ ಹಿರಿಯರು ನೀಡಿದ ಆಹಾರ ಕ್ರಮಗಳನ್ನು ಬಿಟ್ಟು ಆಧುನಿಕ ಆಹಾರ ಪದ್ಧತಿಗೆ ಒಗ್ಗಿಕೊಳ್ಳುತ್ತಿರುವುದು ಬೇಸರದ ಸಂಗತಿ ಅದರಲ್ಲೂ ಇಂದಿನ ಮಕ್ಕಳು ಜಂಕ್ ಪುಡ್ ಸೇವನೆಯಿಂದ ಹಲವಾರು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಹೇಳಿದರು. ಅವರು ಶನಿವಾರ ತೆಕ್ಕಟ್ಟೆ ಕುವೆಂಪು ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅರಿವು ನಿಮ್ಮಗಿರಲಿ ನೆರವು ಆರೋಗ್ಯ ಮಾಹಿತಿ 14ನೇ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸೊಪ್ಪು ತರಕಾರಿಗಳನ್ನು ಹೆಚ್ಚು ಸೇವಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ ಉದ್ಘಾಟಿಸಿ ಪಂಚವರ್ಣ ಸಂಘಟನೆಯ ಸಾಮಾಜಿಕ ಕಾರ್ಯವನ್ನು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮಲ್ಯರಬೆಟ್ಟು ಅಂಗನವಾಡಿಯ ಪ್ರಾರಂಭೋತ್ಸವವನ್ನು ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನಿತಾ ಖಾರ್ವಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಗನವಾಡಿಗೆ ಆಗಮಿಸಿದ ಪುಟಾಣಿಗಳಿಗೆ ತಿಲಕವನ್ನಿಟ್ಟು ಆರತಿ ಬೆಳಗಿಸಿ ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅವರು ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಶುಭ ಹಾರೈಸಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸಮಿತ್ರಾ ಜಿ., ಜಿ.ಈಶ್ವರ, ವೀಣಾ, ಶೋಭಾ, ನಿಹಾಪ್, ರೋಶನಮೀನ್ ಚೌಗುಲೆ, ಅಬೀರಾ, ಕೃಷ್ಣ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅನಿತಾ ಖಾರ್ವಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.…

Read More