Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವವಾಹಿನಿ ರಿ. ಮಂಗಳೂರು ಇದರ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಎದುರು ಭಾನುವಾರ ಜರುಗಿದ 32ನೇ ವಾರ್ಷಿಕ ಸಮಾವೇಶದಲ್ಲಿ ಯಶಸ್ವಿ ಉದ್ಯಮಿ ಹಾಗೂ ಸಾಧಕ ಗೋವಿಂದ ಬಾಬು ಪೂಜಾರಿ ಅವರಿಗೆ ‘ಯುವ ಸಾಧನಾ’ ಪುರಸ್ಕಾರ ಪ್ರದಾನ ಮಾಡಲಾಯಿತು. ಪುತ್ತೂರು ಉಪವಿಭಾಗ ಸಹಾಯಕ ಕಮಿಷನರ್ ಹೆಚ್. ಕೆ. ಕೃಷ್ಣಮೂರ್ತಿ, ರಾಜ್ಯದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ, ಆರ್ಥಿಕ ಹಾಗೂ ಶಿಕ್ಷಣ ತಜ್ಞ ಸಿ. ಕೆ. ಅಂಚನ್, ಚಲನಚಿತ್ರ ನಿರ್ಮಾಪಕ, ನಟ ಡಾ. ರಾಜಶೇಖರ್ ಕೋಟ್ಯಾನ್, ನಟಿ ನವ್ಯ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ರಿ. ಮಂಗಳೂರು ಇದರ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ೩೨ನೇ ವಾರ್ಷಿಕ ಸಮಾವೇಶದ ಸಂಚಾಲಕ ನಾರಾಯಣ ಪೂಜಾರಿ ಕುರಿಕ್ಕಾರು, ಯುವವಾಹಿನಿಯ ವಿವಿಧ ಘಟಕಗಳು ಪದಾಧಿಕಾರಿಗಳು ಸೇರಿದಂತೆ ಇತರರು ವೇದಿಕೆಯಲ್ಲಿದ್ದರು. ಮಣಿಪಾಲದ ಉದಯ ಸಮೂಹ ಸಂಸ್ಥೆಗಳ ಪ್ರವರ್ತಕ ರಮೇಶ್ ಎ. ಬಂಗೇರ ಅವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಶಿಧರ ಹೆಮ್ಮಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರುಗಳಾಗಿ ಎಸ್. ಎಂ. ಮಝರ್, ಸಂತೋಷ ಕುಂದೇಶ್ವರ, ಕೋಶಾಧಿಕಾರಿಯಾಗಿ ಸತೀಶ ಆಚಾರ್ ಉಳ್ಳೂರು, ಜತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಬಳ್ಕೂರು, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ರಾಘವೇಂದ್ರ ಪೈ, ಉದಯ ಕುಮಾರ ತಲ್ಲೂರು, ವಿನಯ ಪಾಯಸ್, ಜಿ. ಎಂ. ಶೆಣೈ, ಬರ್ನಾಡ್ ಡಿಕೋಸ್ಟ್, ಜಯಶೇಖರ ಮಡಪ್ಪಾಡಿ, ಚಂದ್ರಮ ತಲ್ಲೂರು, ಭಾಸ್ಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಅಳ್ವೆಗದ್ದೆ ಬಂದರಿನ ಸಂಪರ್ಕ ರಸ್ತೆ ದುರಸ್ತಿಗಾಗಿ ೮೦ ಲಕ್ಷ ರೂ ಮಂಜೂರಾಗಿದ್ದು, ಕಾಮಗಾರಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ತಾ. ಪಂ ಸದಸ್ಯ ಪುಪ್ಪರಾಜ ಶೆಟ್ಟಿ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕಕುಮಾರ ಶೆಟ್ಟಿ, ಶಿರೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ರಾಮ ಎಂ. ಮೊಗೇರ್, ಇಂಜಿನೀಯರ್ ವಿಜಯ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಬೈಂದೂರು ಯುವ ಕಾಂಗ್ರೆಸ್ ಕಾರ್ಯಕರ್ತರ ತಂಡ ಭಾನುವಾರ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಸೂಚನೆ ಮೇರೆಗೆ ಬೈಂದೂರು ಪೇಟೆಯಲ್ಲಿ ಪರಿಹಾರ ಸಾಮಾಗ್ರಿ ಸಂಗ್ರಹಣೆ ಕಾರ್ಯ ನಡೆಸಿತು. ಈ ಸಂದರ್ಭ ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಮುಖಂಡರುಗಳಾದ ಎಸ್. ರಾಜು ಪೂಜಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮೋಹನ್ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ದೇವಾಡಿಗ, ಯಡ್ತರೆ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಸದಸ್ಯ ಉಮೆಶ್ ದೇವಾಡಿಗ, ವಾಸು ಪೂಜಾರಿ, ದೀಪಕ್ ನಾವುಂದ, ಸನತ್ ಬಳೆಗಾರ್ ಕೊಲ್ಲೂರು, ಪ್ರಶಾಂತ್ ಪೂಜಾರಿ ಕರ್ಕಿ, ವಿಜಯ್ ನಾಗೂರು, ಜಯಂತ್ ಬಡಾಕೆರೆ, ಹರೀಶ್ ಮರವಂತೆ, ವಿನಾಯಕ್ ಕೊಲ್ಲೂರು, ಸೋಮಶೇಖರ್ ಮೊದಲಾದವರು ಪಾಲ್ಗೊಂಡರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿನ್ನೆ ಸುರಿದ ಬಾರಿ ಮಳೆಗೆ ತಾಲೂಕಿನ  ಕೆರ್ಗಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದು ಅಪಾರ ಹಾನಿ ಸಂಭವಿಸಿದೆ. ಶಾಲೆಯ ಮಧ್ಯಭಾಗದ ಕಟ್ಟಡದ ಗೋಡೆ ಕುಸಿದಿದ್ದು, ಛಾವಣಿ ಹಾರಿ ಹೋಗಿ ಸಂಪೂರ್ಣ ನೆಲಸಮವಾಗಿದೆ. ಇನ್ನೊಂದು ಭಾಗದ ಗೋಡೆಯೂ ಶಿಥಿಲಗೊಂಡಿದ್ದು ಉರುಳುವ ಭೀತಿ ಇದೆ. ಕಳೆದೊಂದು ವಾರದಿಂದ ನಿರಂತರವಾಗಿ ಗಾಳಿಮಳೆ ಸುರಿಯುತ್ತಿದ್ದ ಪರಿಣಾಮ ಶಾಲಾ ಕಟ್ಟಡ ಕುಸಿದಿತ್ತು. ಶಾಲೆಯಲ್ಲಿ 1 ರಿಂದ 5 ತನಕ ಒಟ್ಟು 15 ಮಕ್ಕಳಿದ್ದಾರೆ. ರಾತ್ರಿ ವೇಳೆಯಾದ್ದರಿಂದ ಮತ್ತು ಕಳೆದ ಮೂರು ದಿನದಿಂದ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾಲಾಗೆ 100 ವರ್ಷದ ಇತಿಹಾಸವಿದ್ದು, ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ,

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ,ಅ10 : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜೀವ ಹಾನಿ ಮತ್ತು ಆಸ್ತಿ ಪಾಸ್ತಿ ನಷ್ಟಕ್ಕೊಳಗಾದವರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಿ, ಪರಿಹಾರ ವಿತರಣೆ ಸಂದರ್ಭದಲ್ಲಿ ಸಂತ್ರಸ್ಥರಿಗೆ ಗರಿಷ್ಠ ಪರಿಹಾರ ಒದಗಿಸುವಂತೆ ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಸಂಸದೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯ ಸಂಸದರ ಸಭಾಂಗಣದಲ್ಲಿ ನಡೆದ ನೆರೆ ಹಾವಳಿ ಮತ್ತು ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಳೆಯಿಂದ ಉಂಟಾಗಿರುವ ಹಾನಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಅಧಿಕಾರಿಗಳೂ ದಿನದ ಇಪ್ಪತ್ತನಾಲ್ಕು ಘಂಟೆಯೂ ಸಾರ್ವಜನಿಕರ ಜೊತೆ ಸಂಪರ್ಕದಲ್ಲಿರಬೇಕು ಮತ್ತು ತುರ್ತು ಸಂಧರ್ಭದಲ್ಲಿ ಜನರ ನೆರವಿಗೆ ಧಾವಿಸಲು ಜಿಲ್ಲಾಧಿಕಾರಿ ಸಹಿತ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆ, ಅಗ್ನಿಶಾಮಕ ದಳದವರು ಮತ್ತು ಸಂಬಂಧಪಟ್ಟ ಎಲ್ಲಾ ಇಲಾಖೆಗಳೂ ಸರ್ವ ಸನ್ನದ್ಧರಾಗಿರಬೇಕು ಎಂದರು. ಜಿಲ್ಲೆಯಲ್ಲಿ ಮಳೆ ಮತ್ತು ನೆರೆಯಿಂದ ಹಾನಿಗೊಳಗಾದವರಿಗೆ ಮಾನವೀಯ ನೆಲೆಯಲ್ಲಿ…

Read More

ಕುಂದಾಪ್ರ ಡಾ ಕಾಂ ಸುದ್ದಿ. ಕುಂದಾಪುರ: ಪ್ರಗತಿಪರ ವೈರುದ್ಯಗಳ ನಡುವಿನಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ ರಾಜ್ಯಕ್ಕೆ ಪ್ರಥಮ ಹಾಗೂ ರಾಷ್ಟ್ರದಲ್ಲಿ ೨ನೇ ಸ್ಥಾನದಲ್ಲಿದ್ದೇವೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ಕೊಡವೂರು ರವಿರಾಜ ಹೆಗ್ಡೆಯವರು ತಿಳಿಸಿದರು. ಕುಂದಾಪುರ ರಾಮ ಮಂದಿರದ ಸಭಾ ಭವನದಲ್ಲಿ ನಡೆದ ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿ ಈ ಹಿಂದಿನಂತೆ ವಿವಿಧ ತಾಂತ್ರಿಕ ಸೌಲಭ್ಯಗಳಿಗೆ ಅನುದಾನ ಮುಂದುವರಿಸಿದ್ದು ಇದಲ್ಲದೆ ರೈತ ಕಲ್ಯಾಣ ಟ್ರಸ್ಟ್ ಮೂಲಕ ಜಾನುವಾರು ಹಾಗೂ ಉತ್ಪಾದಕ ಸದಸ್ಯರು ಮರಣ ಹೊಂದಿದಾಗ, ಉತ್ಪಾದಕ ಸದಸ್ಯರು ಆಸ್ಪತ್ರೆಗೆ ದಾಖಲಾಗಿ ಆದ ವೆಚ್ಚದ ಬಾಬ್ತು ಆರ್ಥಿಕ ಸಹಾಯ ನೀಡುತ್ತಿದೆ ಅಲ್ಲದೆ ೧೦೦೦೦ ಜಾನುವಾರುಗಳನ್ನು ವಿಮೆಗೊಳಪಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರು ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ವ್ಯವಸ್ಥಾಪನ ನಿರ್ದೇಶಕರಾದ ಡಾ. ಜಿ.ವಿ ಹೆಗ್ಡೆಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರುಗಳಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಶ್ರೀ ಸಾಯಿ ಗ್ರಾಮೀಣಾಭಿವೃಧ್ಧಿ ಟ್ರಸ್ಟ್ (ರಿ) ಮುಳ್ಳಿಕಟ್ಟೆ ಇವರ ವತಿಯಿಂದ ಸಮಾಜದಲ್ಲಿ ಅಬಾಲರು ಮತ್ತು ವೃದ್ದರು ಯೋಗಕ್ಷೇಮ ಕಾರ್ಯಕ್ರಮದಡಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹೊಲಿಕ್ರಾಸ್ ಕಾನ್ವೆಂಟ್ ವೃದ್ದಾಶ್ರಮ ತ್ರಾಸಿ ಇಲ್ಲಿನ ವಯೋವೃದ್ದರ ಜೊತೆಗೆ ಕೇಕ್ ತಿನ್ನಿಸಿ ಅವರ ಜೊತೆ ಸಣ್ಣ ಸಣ್ಣ ಆಟೋಟಗಳನ್ನು ಏರ್ಪಡಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಚೆರ್‌ಮನ್ ಭಾಸ್ಕರ ಬಿಲ್ಲವ ಕೇಕ್ ತಿನ್ನಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಯಾಗಿ ಬೇಬಿ ಕೊಠಾರಿ ಕೆರ್ಗಾಲ್, ಹರೀಶ ಖಾರ್ವಿ ಉಪ್ಪುಂದ, ಕಾನ್ವೆಂಟ್‌ನ ಸಿಸ್ಟರ‍್ಸ್ ಮತ್ತು ವಿವಿಧ ಸ್ವ.ಸಹಾಯ ಸಂಘದ ಪದಾಧಿಕಾರಿಗಳಾದ ನಾಗರತ್ನ ಹೆಮ್ಮಾಡಿ, ಲಕ್ಷ್ಮಿ ಕಟ್‌ಬೇಲ್ತೂರು, ಪವಿತ್ರಾ, ಶೋಭಾ, ಸುಷನ್ಯ, ಸುವೀಷ ಕುಮಾರ, ಧನ್ಯ, ಮತ್ತು ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘದ ಸಿಬ್ಬಂದಿಗಳಾದ ರೇಖಾ, ಸಂತೋಷ ಮತ್ತು ಪ್ರತಿಭಾ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.09: ಜಿಲ್ಲಾದ್ಯಂತ ವಿಪರಿತ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಅಗಸ್ಟ್ 10ರ ಶನಿವಾರವೂ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ.  ಒಟ್ಟು ಮೂರು ದಿನಗಳ ಕಾಲ ನಿರಂತರ ರಜೆ ನೀಡಿದಂತಾಗಿದೆ. ವಿಪರೀತ ಮಳೆ ಹಾಗೂ ಗಾಳಿಯ ಮುನ್ಸೂಚನೆ ಇರುವುದರಿಂದ ಮುಂದಿನ ಎರಡು ದಿನ ಸುಮಾರು 205ಮಿ.ಮಿ ಮಳೆಯಾಗುವ  ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯೊಳಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ಭಕ್ತರು ನೀರಲ್ಲಿ ನಿಂತು ಪೂಜೆ ಸಲ್ಲಿಸಿದರು. ವರ್ಷಂಪ್ರತಿಯೂ ನೈಸರ್ಗಿಕ ನದಿ ನೀರಿನ ಅಭಿಷೇಕ ಇಲ್ಲಿ ಸಾಮಾನ್ಯಾವಾಗಿದ್ದು ಸುತ್ತಲೂ ಜಲಾವೃತವಾಗಿ ನೀರಿನ ಮಧ್ಯೆ ಕುಳಿತಿರುವ ದೇವಿಯನ್ನು ಕಣ್ತುಂಬಿಸಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವಳದ ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ದೇವಿಗೆ ಅರ್ಚಕರು ಆರತಿ ಬೆಳಗಿದರು. ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ಅಭಿಷೇಕವಾಗುತ್ತದೆ. ನೀರು ಬಂದ ಹಿನ್ನಲೆ ಭಕ್ತರು ನೀರಿನಲ್ಲೇ ತೆರಳಿ ದೇವಿಯ ದರ್ಶನ ಪಡೆದರು. ಬಳಿಕ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ತೆಪ್ಪೋತ್ಸವನ್ನು ನಡೆಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ. ವಾಡಿಕೆಯಂತೆ ಗರ್ಭಗುಡಿಗೆ ಬಂದ ನೀರು ಹರಿದು ಬಂದಿದ್ದು, ಇಲ್ಲಿ ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ನದಿ ನೀರಿನ ಅಭಿಷೇಕ ಸಾಮಾನ್ಯ. ನದಿ ನೀರು ಬಂದ ಹಿನ್ನಲೆಯಲ್ಲಿ ಭಕ್ತರು ಪುಳಕಗೊಂಡಿದ್ದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಚ್ಚಹಸಿರಿನ ಕಾಡಿನ ಮಧ್ಯಭಾಗದಲ್ಲಿರುವ ಕಮಲಶಿಲೆ ಇದೆ.  ಅರಣ್ಯದ ತಪ್ಪಲಿನಲ್ಲಿ ಪವಿತ್ರವಾದ…

Read More