ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ್ ಪೂಜಾರಿ ಉಪ್ಪುಂದ ಪುನರಾಯ್ಕೆಯಾಗಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮನ್ಯನವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಅನುಮತಿಯ ಮೇರೆಗೆ ಉಡುಪಿ ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಶೇಖರ್ ಪೂಜಾರಿ ಉಪ್ಪುಂದ ಅವರನ್ನು ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತರು ವಿಶ್ವ ಗುರುಗಳು ಅವರ ಜೀವನವೇ ಎಲ್ಲಾರಿಗೂ ಮಾದರಿಯಾಗಿದ್ದು, ಸಮಾಜಕ್ಕೆ ನೀಡಿದ ಕೊಡುಗೆಯನ್ನು ಅಮೂಲ್ಯವಾಗಿದ್ದು ಇಂದಿನ ಯುವಕರು ಕಾರಂತರ ಬದುಕನ್ನು ಅನುಸರಿಸಿ ಅವರಂತೆ ಬದುಕನ್ನು ರೂಪಿಸಿಕೊಳ್ಳಲು ಪ್ರಯತ್ನಿಸಿ ಸಮಾಜಕ್ಕೆ ತನ್ನಿಂದಾದ ನೆರವು ನೀಡಬೇಕು ಎಂದು ಮುಜರಾಯಿ ಇಲಾಖೆಯ ಉಪ ಆಯುಕ್ತ ಕೆ. ಜಯಪ್ರಕಾಶ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಕಿರು ಸಂಭಾಗಣ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಥೀಮ್ ಪಾರ್ಕ್ನಲ್ಲಿ ನಡೆಯುವ ಚಟುವಟಿಕೆ, ಕಾರ್ಯಕ್ರಮಗಳು ಮಾದರಿಯಾಗಿದ್ದು ಇನ್ನಷ್ಟೂ ಅಭಿವೃದ್ಧಿ ಜೊತೆಗೆ ನಿರಂತರ ಸಾಹಿತ್ಯದ ಕಂಪು ಹರಡಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊಲ್ಲೂರು ವ್ಯವಸ್ಥಾಪನ ಸಮಿತಿ ಸದಸ್ಯ ಕೆ.ಪಿ ಶೇಖರ್, ಅಮೃತೇಶ್ವರಿ ವ್ಯವಸ್ಥಾಪನ ಸಮಿತಿ ಸದಸ್ಯ ಸುಂದರ್ ಕೆ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್, ಸಹಾಯಕಿ ಸುಜಾತ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಂಕಣ ರೈಲ್ವೆ ವಿಭಾಗೀಯ ಅಧಿಕಾರಿ ಬಿ ಬಿ ನಿಕ್ಕಮ್ ಮತ್ತು ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯಿಂದ ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಕುಂದು ಕೊರತೆ ಬಗ್ಗೆ ಚರ್ಚೆ ನಡೆಸಿ ಪರಿಶೀಲಿಸಲಾಯಿತು. ಕುಂದಾಪುರದಲ್ಲಿ ಪ್ರಯಾಣಿಕರ ಗಣಕಿಕ್ರತ ಸೀಟು ಕಾದಿರಿಸುವಿಕೆ (PRSS ), ನಿಲ್ದಾಣದ ದುರಸ್ತಿ ಕಾರ್ಯ, ವಿಸ್ಟಾಡೋಮ್ ಪ್ರವಾಸಿ ರೈಲು ಕಾರವಾರದ ವರೆಗೂ ವಿಸ್ತರಣೆಗೆ ನಿಲ್ದಾಣ ದಲ್ಲಿ ಹೈ ಮಾಸ್ಕ್ ದೀಪದ ಅಳವಡಿಕೆ, ನೇತ್ರಾವತಿ ನಿಲುಗಡೆ ಮತ್ತು ಬೆಂಗಳೂರು ಕಾರವಾರ ಹಗಲು ರೈಲು ಪುನಃ ಆರಂಭದ ಬಗ್ಗೆ ಚರ್ಚಿಸಲಾಯಿತು. ಸಮಿತಿ ಅಧ್ಯಕ್ಷ ಗಣೇಶ ಪುತ್ರನ್ ಪ್ರಯಾಣಿಕರ ಕುಂದು ಕೊರತೆ ಬಗ್ಗೆ ವಿವರಸಿದರು. ಹೈ ಮಾಸ್ಕ್ ದೀಪವನ್ನು ಕೂಡಲೇ ಅಳವಡಿಸಲು ನಿಕ್ಕಮ್ ಸ್ಥಳದಲ್ಲೆ ನಿರ್ಣಯ ಕೈಗೊಂಡರು. ಉಳಿದ ವಿಷಯ ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವದು ಎಂದು ಸಮಿತಿಗೆ ಭರವಸೆ ನೀಡಿದರು. ಕುಂದಾಪುರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್, ತಾಂತ್ರಿಕ ಸಲಹೆಗಾರ ಗೌತಮ್ ಶೆಟ್ಟಿ, ಕೋಶಾಧಿಕಾರಿ ಉದಯ ಭಂಡಾರ್ಕರ ಗೌರವ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮೀಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ, ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿರುವ, 21ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜುಲೈ 22 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ yuvaspandana.udupi@gmail.com ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಅಥವಾ ಯುವ ಸ್ಪಂದನ ಕೇಂದ್ರ, ದೂರವಾಣಿ ಸಂಖ್ಯೆ 0820-2533933 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಲಾಯಿತು. ವಲಯ 1ರ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ ಅವರು ಗಂಗೊಳ್ಳಿ ರೋಟರಿ ವತಿಯಿಂದ ಕೊಡ ಮಾಡಿದ ಮಾಸ್ಕ್ಗಳನ್ನು ಎಸ್.ವಿ.ಶಾಲೆಗಳ ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಅವರಿಗೆ ಹಸ್ತಾಂತರಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನಾರಾಯಣ ಇ. ನಾಯ್ಕ, ವಲಯ ಸೇನಾನಿ ಕೆ. ರಾಮನಾಥ ನಾಯಕ ಹಾಗೂ ಕ್ಲಬ್ನ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.18ರ ವರೆಗೆ ಮಳೆಯ ಪ್ರಮಾಣ ಹೆಚ್ಚಾಗಳಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ ಜು.18 ರ ವರೆಗೆ ಸಾಕಷ್ಟು ಪ್ರಮಾಣದಲ್ಲಿ ಮಳೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತವಾಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಗೆ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿರುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಗಳಿಗೆ, ಬೀಚ್ ಗಳಿಗೆ ಹೋಗುವುದು, ಈಜಾಡುವುದು ಮಾಡಬಾರದು. ಸಮುದ್ರದಲ್ಲಿ ನೀರಿನ ಒರೆತ ಹೆಚ್ಚಾಗಿರುವುದರಿಂದ ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಆದ್ದರಿಂದ ಜಿಲ್ಲೆಗೆ ಬರುವ ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲಸಗಳಿಗೆ ಹೊರಗೆ ತೆರಳುವವರಿಗೆ ಹಾಗೂ ಮೀನುಗಾರಿಕೆಗೆ ತೆರಳುವವರಿಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡರು.
ನಮ್ಮಲ್ಲಿ ಹೆಚ್ಚಿನವರು ಮುಖಕ್ಕಾಗಿ ಸಾಕಷ್ಟು ಸಮಯವನ್ನು ಕಳೆಯುತ್ತಾರೆ, ಆದರೆ ನಮ್ಮ ಪಾದಗಳಿಗೆ ಕನಿಷ್ಠ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತದೆ. ಆದರೆ ಅದಕ್ಕೂ ಒಮ್ಮೊಮ್ಮೆ ಆರೈಕೆ ಬೇಕಾಗುತ್ತದೆ. ಬೊಜ್ಜು, ಸರಿಯಾಗಿ ಅಳವಡಿಸದ ಬೂಟುಗಳು, ದೀರ್ಘಕಾಲದವರೆಗೆ ನಿಂತಿರುವುದು, ಶುಷ್ಕ ಚರ್ಮ, ಸರಿಯಾದ ಆರೈಕೆ ಮತ್ತು ನೈರ್ಮಲ್ಯದ ಕೊರತೆಯಿಂದಾಗಿ ಹಿಮ್ಮಡಿಗಳು ಸಾಮಾನ್ಯವಾಗಿ ಒಡೆಯುತ್ತದೆ. ಈ ಲೇಖನದಲ್ಲಿ ನಿಮ್ಮ ಬಿರುಕು ಬಿಟ್ಟ ಹಿಮ್ಮಡಿಯ ಸಮಸ್ಯೆ ನಿವಾರಣೆಗೆ ಕೆಲವು ಮನೆಮದ್ದುಗಳ ಮಾಹಿತಿಯನ್ನು ನೀಡಲಾಗಿದೆ. ಬಾಳೆಹಣ್ಣು: ವಿಟಮಿನ್ ಎ, ಬಿ 6 ಮತ್ತು ಸಿ ಒಳಗೊಂಡಿರುವ ಬಾಳೆಹಣ್ಣಿನ ಪೋಷಕಾಂಶಗಳ ಸಮೃದ್ಧಿಯು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಮತ್ತು ಚರ್ಮವನ್ನು ಚೆನ್ನಾಗಿ ಹೈಡ್ರೀಕರಿಸುತ್ತದೆ. ಬಾಳೆಹಣ್ಣು ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು ಅದು ಪಾದಗಳನ್ನು ತೇವವಾಗಿರಿಸುತ್ತದೆ ಮತ್ತು ಚರ್ಮ ಒಣಗುವುದನ್ನು ತಡೆಯುತ್ತದೆ. ಬಳಸುವ ವಿಧಾನ: 2 ಮಾಗಿದ ಬಾಳೆಹಣ್ಣು ಮ್ಯಾಶ್ ಮಾಡಿ, ನಯವಾದ ಪೇಸ್ಟ್ ಆಗಿ ತೆಗೆದುಕೊಳ್ಳಿ. ಬಲಿಯದ ಬಾಳೆಹಣ್ಣುಗಳು ಚರ್ಮಕ್ಕೆ ಒಳ್ಳೆಯದಲ್ಲದ ಆಮ್ಲವನ್ನು ಹೊಂದಿರುವುದರಿಂದ ಅದನ್ನು ತಪ್ಪಿಸಿ. ಕಾಲ್ಬೆರಳ ಉಗುರುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೇಸಿಐ ಬೈಂದೂರು ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಜೇಸಿ ವಲಯ 15ರ ಉಪಾಧ್ಯಕ್ಷ ಜೆಎಫ್ಎಫ್ ನಾಗೇಶ್ ನಾವಡ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಪ್ರತಿಯೊಂದು ಜೀವಿಗೆ ಉಸಿರಾಡಲು ಗಾಳಿ ಅತ್ಯವಶ್ಯ, ಪರಿಸರ ಕಾಳಜಿ ಇಂದು ಪ್ರಮುಖವಾಗಿದ್ದು, ಸಸಿಗಳನ್ನು ನೆಟ್ಟು ಅವುಗಳನ್ನು ಹೆಮ್ಮರವಾಗಿಸುವ ಜವಾಬ್ದಾರಿ ನಮ್ಮೆಲ್ಲರಲ್ಲಿದೆ ಎಂದರು. ಜೇಸಿಐ ಬೈಂದೂರು ಸಿಟಿಯ ಅಧ್ಯಕ್ಷ ಜೇಸಿ ಶ್ರೀಧರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಜೇಸಿ ಬೈಂದೂರು ಸಿಟಿಯ ವಲಯಾಧಿಕಾರಿ ಜೇಸಿ ಮಣಿಕಂಠ ಎಸ್, ಘಟಕದ ಪೂರ್ವಾಧ್ಯಕ್ಷೆ ಜೇಸಿ ಪ್ರಿಯದರ್ಶಿನಿ ಬೆಸ್ಕೂರು, ಘಟಕದ ಜೇಸಿರೇಟ್ ಅಧ್ಯಕ್ಷೆ ಜೇಸಿರೆಟ್ ಅನಿತಾ ಆರ್. ಕೆ. ಮರವಂತೆ, ಘಟಕದ ಉಪಾಧ್ಯಕ್ಷರಾದ ಜೇಸಿ ಸಕ್ಕು ಕಲ್ಮಕ್ಕಿ, ಜೇಸಿ ಸೌಮ್ಯ, ಜೇಸಿ ಸುಶಾಂತ್ ಆಚಾರ್, ಘಟಕದ ಖಜಾಂಚಿ ಜೇಸಿ ಪ್ರೇಮಾ ವಿ. ಶೆಟ್ಟಿ, ಸದಸ್ಯರಾದ ಜೇಸಿ ರಾಘವೇಂದ್ರ ಹೊಳ್ಳ, ಜೇಸಿ ಸುಮಾ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ರೋಟರಿ ರೈತ ಬಂಧು ಕಾರ್ಯಕ್ರಮದ ಅಡಿಯಲ್ಲಿ ಗಂಗೊಳ್ಳಿಯ ಕೃಷಿಕ ಗಣಪತಿ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಣಪತಿ ಶೇರುಗಾರ ಅವರ ಗದ್ದೆಯಲ್ಲಿ ನಾಟಿಯ ಸಮಯದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಗಣಪತಿ ಶೇರುಗಾರ್ ಅವರನ್ನು ಗೌರವಿಸಿದರು. ಕಾರ್ಯದರ್ಶಿ ನಾರಾಯಣ ಇ. ನಾಯ್ಕ, ವಲಯ ಸೇನಾನಿ ಕೆ. ರಾಮನಾಥ ನಾಯಕ, ಬಿ. ಲಕ್ಷ್ಮೀಕಾಂತ ಮಡಿವಾಳ, ಜಯಂತಿ ಶೇರುಗಾರ ಹಾಗೂ ಊರಿನ ರೈತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕೋಟ ಪಿಎಸ್ಐ ಸಂತೋಷ್ ಬಿ.ಪಿ ನೇತೃತ್ವದ ತಂಡ ಬಂಧಿಸಿದೆ. ಕೋಟತಟ್ಟು ಪಡುಕೆರೆಯ ಇಬ್ರಾಹಿಂ ಅಲಿಯಾಸ್ ಆಕಾಶವಾಣಿ ಇಬ್ರಾಹಿಂ (55) ಬಂಧಿತ ಆರೋಪಿ. ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವಾಗ ಕೋಟದ ವರುಣತೀರ್ಥ ಕೆರೆ ಸಮೀಪ ಅಡ್ಡಗಟ್ಟಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಸುಮಾರು 1ಕೆ.ಜಿ 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಸ್ಥಳಕ್ಕೆ ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
