ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿಂತೆ, ಜಿಲ್ಲಾ ನೋಂದಣಾಧಿಕಾರಿ ಮತ್ತು ಉಪ-ನೋಂದಣಾಧಿಕಾರಿ ಕಚೇರಿಗಳು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವುದರ ಜೊತೆಗೆ ಕೋವಿಡ್ನ ಮೂರನೇ ಅಲೆಯ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್ಗಳನ್ನು ಸಂಪೂರ್ಣವಾಗಿ ಲಾಕ್ಡೌನ್ ಮುಂದುವರೆಸಬೇಕು ಎಂದರು. ಕಳೆದ ಐದು ದಿನಗಳಿಂದ 50 ಕ್ಕೂ ಹೆಚ್ಚು ಪ್ರಕರಣಗಳು ಇರುವ ಗ್ರಾಮಪಂಚಾಯತ್ಗಳನ್ನು ಪೂರ್ಣ ಪ್ರಮಾಣದ ಲಾಕ್ಡೌನ್ ಮಾಡಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ಈ ಹಿನ್ನೆಲೆ ಪ್ರಸಕ್ತ 50 ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವ ಪರಿಸರ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಇವರ ವತಿಯಿಂದ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಉರ್ದು ಶಾಲೆ ಬಸ್ರೂರು, ಗಂಗೊಳ್ಳಿ ಮತ್ತು ಶಿರೂರಿನಲ್ಲಿ ಸಸ್ಯಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಆರೋಗ್ಯ ಅಧಿಕಾರಿ ಡಾ. ವಿದ್ಯಾ , ಡಾ. ರಮೇಶ್ ಶೆಟ್ಟಿ ಮತ್ತು ಇತರ ಸಿಬ್ಬಂದಿಗಳು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಇಮ್ತಿಯಾಜ್ ಬಸ್ರೂರ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಕುಂದಾಪುರ ಜಿಲ್ಲಾ ಸಮಿತಿ ಸದಸ್ಯ ಫಯೀಜ್ ಬಸ್ರೂರ್, ಸಹಾದ್ ಬಸ್ರೂರ್ ಮತ್ತು ಸದಸ್ಯರಾದ ಸಮೀರ್, ಅಫ್ನಾನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶುದ್ದ ಕುಡಿಯುವ ನೀರಿನ ಯೋಜನೆಗೆ 346.39ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ಹೆಮ್ಮಾಡಿ ಜಯಶ್ರೀ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಂದೂರು ಕ್ಷೇತ್ರದ ಅಭಿವೃದ್ದಿಗೆ ಮಾಡುವಂತದ್ದು ನಮ್ಮ ಕರ್ತವ್ಯ ಅದೇ ರೀತಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಬಜೆಟ್ನಲ್ಲಿ ಅನುಮೋದನೆಯಾಗಿದ್ದು ತಿಂಗಳೊಳಗೆ ಟೆಂಡರ್ ಕರೆದು 788 ಗ್ರಾಮೀಣ ಜನವಸತಿಗಳಿಗೆ 2.42ಲಕ್ಷ ಜನಗಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಡುವರಿ, ಯಡ್ತರೆ, ಬೈಂದೂರು ಪಟ್ಟಣಗಳನ್ನು ಸಹ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಯೋಜನೆ ಒಟ್ಟು 346.39 ಕೋಟಿ ರೂ. ಆಗಿದ್ದು ಇದರಲ್ಲಿ 139 ಕೋಟಿ ಕೇಂದ್ರ ಸರಕಾರದ್ದಾಗಿದ್ದು ರಾಜ್ಯ ಸರಕಾರದ ಪಾಲು 80 ಕೋಟಿ, ನಬಾರ್ಡ್ನಲ್ಲಿ 176 ಕೋಟಿ ಒಟ್ಟು ಈ ಯೋಜನೆ ಸಂಪೂರ್ಣವಾಗಲೂ ಸುಮಾರು 500 ಕೋಟಿ ಬೇಕಾಗುತ್ತದೆ ಮುಂದಿನ 2 ವರ್ಷದಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಇದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ 16 ಗ್ರಾಮ ಪಂಚಾಯತ್ ಸಂಪೂರ್ಣ ಲಾಕ್ಡೌನ್ ಅವಧಿ ಜೂ.14ರ ತನಕ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. 50ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಗ್ರಾಮ ಪಂಚಾಯತ್, ಬೈಂದೂರು ತಾಲೂಕಿನ ಶಿರೂರು, ಜಡ್ಕಲ್ ಹಾಗೂ ನಾಡ ಗ್ರಾಮ ಪಂಚಾಯತ್, ಹೆಬ್ರಿ ತಾಲೂಕಿನ ಬೆಳ್ವೆ, ವರಂಗ ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ ಗ್ರಾಮ ಪಂಚಾಯತ್, ಕಾಪು ತಾಲೂಕಿನ ಶಿರ್ವ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ತಾಲೂಕನ ಬೆಳ್ಮಣ್ಣು, ಮಿಯಾರು, ಪಳ್ಳಿ, ಕಕ್ಕಂದೂರು, ನಲ್ಲೂರು, ಮರ್ಣೆ ಗ್ರಾಮ ಪಂಚಾಯತ್ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ವಿಸ್ತರಿಸಲಾದ ಗ್ರಾಮ ಪಂಚಾಯತಿಗಳಿಗೆ ಅಗತ್ಯ ವಸ್ತುಗಳ ಖರೀದಿಗೆ ಜೂ.9ರ ಬುಧವಾತ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬಳಿಕ ಜೂ.10 ರಿಂದ 14ರ ವರೆಗೆ ಸಂಪೂರ್ಣ ಲಾಕ್ ಡೌನ್ ಮುಂದುವರೆಯಲಿದೆ. ಗ್ರಾಮ ಪಂಚಾಯತಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 204 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 95, ಕುಂದಾಪುರ, ಬೈಂದೂರು ತಾಲೂಕಿನ 49, ಕಾರ್ಕಳ, ಹೆಬ್ರಿ ತಾಲೂಕಿನ 51 ಮಂದಿಗೆ ಹಾಗೂ ಹೊರ ಜಿಲ್ಲೆಯ 9 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 204 ಪ್ರಕರಣಗಳಲ್ಲಿ 22 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 182 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕುಂದಾಪುರ ತಾಲೂಕಿನ 23 ವರ್ಷದ ಮಹಿಳೆ, ಉಡುಪಿ ತಾಲೂಕಿನ 75 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 504 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3783 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2616 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 9863 ಮಂದಿಗೆ ಮೊದಲನೇ ಡೋಸ್, 602 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ.…
ಅಡುಗೆ ಕೋಣೆಯಲ್ಲಿ ಏನಾದರೂ ಸಿಹಿ ಪದಾರ್ಥಗಳನ್ನು ಮಾಡಿಟ್ಟರೆ ಸಾಕು, ಇರುವೆಗಳು ಎಲ್ಲಿಂದಲೋ ಬಂದು ಸೇರುತ್ತವೆ. ನಿಮ್ಮ ಮನೆಯಲ್ಲೂ ಇದೇ ಸಮಸ್ಯೆ ಇದೆಯೇ? ಇರುವೆ ಕಾಟದಿಂದ ಸಾಕಾಗಿ ಹೋಗಿದೆಯೇ? ಹಾಗಿದ್ದರೆ ಇಲ್ಲಿದೆ ಸಿಂಪಲ್ ಟ್ರಿಕ್ಸ್. ಇರುವೆಗಳ ವಿರುದ್ಧ ಹೋರಾಡಲು ನೆರವಾಗುವ ಇನ್ನಷ್ಟು ನೈಸರ್ಗಿಕ ವಿಧಾನಗಳು ಇಲ್ಲಿವೆ. ಅರಿಶಿನ ಕುಂಕುಮ: ಇರುವೆಗಳನ್ನು ಹೋಗಲಾಡಿಸಲು ಮಾಡಬಹುದಾದ ಒಂದು ತಂತ್ರವೆಂದರೆ ಅರಿಶಿನ ಮತ್ತು ಕುಂಕುಮ. ಇರುವೆಗಳಿಂದ ತುಂಬಿದ ಜಾಗದಲ್ಲಿ ಸ್ವಲ್ಪ ಅರಿಶಿನ, ಕುಂಕುಮವನ್ನು ಇಟ್ಟು ನೋಡಿ! ಕರ್ಪೂರ: ಕರ್ಪೂರವನ್ನು ಇರುವೆ ಇರುವ ಜಾಗಕ್ಕೆ ಹಾಕಿ ಮ್ಯಾಜಿಕ್ ನೋಡಿ!! ಕರ್ಪೂರದ ಪರಿಮಳಕ್ಕೆ ಇರುವೆಗಳು ಜಾಗ ಖಾಲಿ ಮಾಡುತ್ತವೆ. ಪೆಪ್ಪರ್ ಮಿಂಟ್ ಎಣ್ಣೆ: ಇರುವೆಗಳ ಬಾಧೆ ಇದ್ದರೆ ನಿವಾರಿಸಲು ಇರುವೆಗಳು ಬರುವ ಜಾಗಕ್ಕೆ ಈ ಸಾರಭೂತ ತೈಲದ 10 ಹನಿಗಳನ್ನು ಸಿಂಪಡಿಸಿ ನೋಡಿ ಸಕ್ಕರೆ: ಹೌದು! ಸಣ್ಣ ಕಪ್ಪು ಇರುವೆಗಳಿದ್ದರೆ, ಸಕ್ಕರೆಯ ಕೆಲವು ಕಣಗಳನ್ನು ಚಿಮುಕಿಸಿ. 5 ನಿಮಿಷಗಳ ನಂತರ ಪರಿಶೀಲಿಸಿ ವಿನೆಗರ್: 1 ಕಪ್ ವಿನೇಗರ್ ಅನ್ನು ಸಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋವಿಡ್ ಸಂಬಂಧಸಿದ ಜೂನ್ 4ರಂದು ಬೈಂದೂರು ತಾಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೈಂದೂರು- ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ 766-ಸಿ ಗೆ ಹೊಂದಿಕೊಂಡಿರುವ ಗೋಳಿಹೊಳೆ ಗ್ರಾಮದ ಹೆಲಿಪ್ಯಾಡ್ ಪಕ್ಕದಲ್ಲಿರುವ ಸ.ನಂ:310 ರಲ್ಲಿ ಸುಮಾರು 5.00 ಎಕ್ರೆ ಸರಕಾರಿ ಜಮೀನು ಅತಿಕ್ರಮಿಸಿ, ಅಲ್ಲಿರುವ ಬೆಲೆಬಾಳುವ ಮರ-ಮಟ್ಟುಗಳನ್ನು ನೆಲಸಮ ಮಾಡಿ, ಸರಕಾರಿ ಜಮೀನನ್ನು ಕಬಳಿಸಿರುವುದು ಕಂಡುಬಂದಿರುತ್ತದೆ. ಕೋವಿಡ್ -19ರ ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಜಮೀನನ್ನು ಅತಿಕ್ರಮಿಸುವ ಕ್ರಮವು ಕಾನೂನುಬಾಹಿರವಾಗಿದ್ದು, ಈ ಅತಿಕ್ರಮಣವನ್ನು ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಬೈಂದೂರು ತಹಶೀಲ್ದಾರರಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ 2011 ರಜನಗಣತಿಯಲ್ಲಿ 2,95,984 ಕುಟುಂಬಗಳು ದಾಖಲಾಗಿದ್ದು, ಪ್ರಸ್ತುತ ಮೇ ಅಂತ್ಯದವರೆಗೆ 28,264 ಅಂತ್ಯೋದಯಅನ್ನ ಮತ್ತು 1,61,987 ಆದ್ಯತಾ ಸೇರಿಒಟ್ಟು 1,90,251 ಕುಟುಂಬಗಳಿಗೆ ಆದ್ಯತಾ (ಬಿ.ಪಿ.ಎಲ್) ಪಡಿತರಚೀಟಿ ಹಾಗೂ 1,05,733 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರಚೀಟಿ ನೀಡಲಾಗಿರುತ್ತದೆ. ವೇತನವನ್ನುಗಣನೆಗೆ ತೆಗೆದುಕೊಳ್ಳದ ಸರ್ಕಾರದಅಥವಾ ಸರ್ಕಾರದಿಂದಅನುದಾನ ಪಡೆಯುತ್ತಿರುವ ಸಂಸ್ಥೆಗಳು ಹಾಗೂ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯತೆರಿಗೆ, ಸೇವಾ ತೆರಿಗೆ, ವ್ಯಾಟ್ ಹಾಗೂ ವೃತ್ತಿತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಭಾಗದಲ್ಲಿಮೂರು ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವಾದ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 394 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 207, ಕುಂದಾಪುರ, ಬೈಂದೂರು ತಾಲೂಕಿನ 110, ಕಾರ್ಕಳ, ಹೆಬ್ರಿ ತಾಲೂಕಿನ 70 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 394 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 371 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಕುಂದಾಪುರ ತಾಲೂಕಿನ 85 ವರ್ಷದ ಮಹಿಳೆ, 61 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 628 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4085 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3374 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4913 ಮಂದಿಗೆ ಮೊದಲನೇ ಡೋಸ್, 522 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ…
