ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಅತ್ಯಂತ ಅರ್ಥವತ್ತಾಗಿ ಕೆಲಸ ಮಾಡಿದ ಕೆಲವೇ ಕೆಲವು ವ್ಯಕ್ತಿಗಳಲ್ಲಿ ಎಸ್. ಜನಾರ್ದನ್ ಮರವಂತೆ ಅವರು ಒಬ್ಬರು. ಮರವಂತೆಯನ್ನೇ ತನ್ನ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ರಾಜ್ಯ, ರಾಷ್ಟ್ರಕ್ಕೆ ಒ೦ದು ಮಾದರಿ ಗ್ರಾಮ ಪಂಚಾಯತ್ ಆಗಿ ಮುಂದಿಟ್ಟವರು. ಪಂಚಾಯತ್ ರಾಜ್ ವ್ಯವಸ್ಥೆಗೆ ದೊಡ್ಡ ಶಕ್ತಿಯಾಗಿದ್ದ ಜನಾರ್ದನ ಮರವಂತೆ ಅವರ ನಿಧನ ವ್ಯವಸ್ಥೆಗೆ ದೊಡ್ಡ ನಷ್ಟವಾಗಿದೆ. ಅವರ ಚಿಂತನೆಗಳು, ನಿಲುವು, ಯೋಜನೆಗಳು ಸದಾ ನೆನಪಿನಲ್ಲಿ ಉಳಿಯುವ೦ತೆ ಕಾರ್ಯ ಯೋಜನೆಯೊಂದನ್ನು ರೂಪಿಸೋಣ ಎ೦ದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಲಕ್ಷ್ಮೀ ನರಸಿ೦ಹ ಕಲಾ ಮಂದಿರದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟ ರಿ., ಜನಪ್ರತಿನಿಧಿ ಪ್ರಕಾಶನ ಕುಂದಾಪುರ, ಸದ್ಭಾವನಾ ವೇದಿಕೆ ರಿ., ಕುಂದಾಪುರ, ನಮ್ಮಭೂಮಿ ಹಟ್ಟಿಯಂಗಡಿ ಇವರ ಆಶ್ರಯದಲ್ಲಿ ನಡೆದ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್. ಜನಾರ್ದನ ಮರವಂತೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ/ಕುಂದಾಪುರ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಗ್ಯಾರಂಟಿಗೆ ವಾರಂಟಿ ಇಲ್ಲಾ, ವ್ಯಾಲಿಡಿಟಿ ಇಲ್ಲಾ, ಗ್ಯಾರಂಟಿ ಪುಸ್ತಕದ ಹಾಳೆ ಮದ್ಯದಲ್ಲಿ ಇರುವ ನವಿಲುಗರಿ ಎಂದು ಟೀಕಿಸಿದ ಬಿಜೆಪಿ ಅವರಿಂದ ಗ್ಯಾರಂಟಿ ಯೋಜನೆಯ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ಅಗತ್ಯವಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ತಿಂಗಳುಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಾಗ ಈ ಗ್ಯಾರಂಟಿಯಿಂದ ಜನ ಸೋಮಾರಿಗಳಾಗುತ್ತಾರೆ. ಗ್ಯಾರಂಟಿಯಿಂದ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸಿದ ಬಿಜೆಪಿ ನಾಯಕರು ಇಂದು ಸರ್ಕಾರ ಮೂರು ವರ್ಷಗಳ ನಂತರ ಗ್ಯಾರಂಟಿ ಫಲಾನುಭವಿಗಳ ಪುನರ್ ಪರಿಶೀಲನೆಗೆ ಮರು ಅರ್ಜಿ ಸಲ್ಲಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಹೇಳಿಕೆ ಬಗ್ಗೆ ರಾಜಕಾರಣ ಮಾಡುವ ಬಿಜೆಪಿಯವರಿಗೆ ಈ ಗ್ಯಾರಂಟಿ ಯೋಜನೆ ನಿದ್ದೆಗೆಡಿಸಿದ್ದು ಗ್ಯಾರಂಟಿ. ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಉದ್ದೇಶ ಸರ್ಕಾರದ ಎಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಲ್ಲಿ ಪರಿಸರ ಪ್ರಜ್ಞೆ ಜಾಗೃತಗೊಳಿಸುವ ಕಾರ್ಯ ನಿಜಕ್ಕೂ ಅರ್ಥಪೂರ್ಣ ಕಾರ್ಯ ಎಂದು ಪಂಚವರ್ಣ ನಿರಂತರ ಪರಿಸರಸ್ನೇಹಿ ಅಭಿಯಾನವನ್ನು ಶಿಕ್ಷಣ ತಜ್ಞ ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡರು ಮುಕ್ತ ಕಂಠದಿಂದ ಶ್ಲಾಘಿಸಿದರು. ಅವರು ಭಾನುವಾರ ಕೋಟದ ಹಂದಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪೇತ್ರಿ ಅನ್ನಪೂರ್ಣ ನರ್ಸರಿ ಇವರ ಸಹಯೋಗದೊಂದಿಗೆ 305ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗಿಡ ಮರಗಳ ಬಗ್ಗೆ ಮಕ್ಕಳಿಗೆ ನಮ್ಮ ಹಿಂದಿನ ಹಿರಿಯರು ತಿಳಿ ಹೇಳುವ ಕಾರ್ಯ ಮಾಡಿದ್ದರು ಆದರೆ ಇದೀಗ ಅದರ ಬಗ್ಗೆ ಅರಿವು ಕ್ಷೀಣಿಸಿದೆ ಈ ದಿಸೆಯಲ್ಲಿ ಪೋಷಕರು ಅದರ ಬಗ್ಗೆ ಜಾಗೃತಗೊಳಿಸುವ ಕಾರ್ಯ ಮಾಡಲಿ ಪರಿಸರ ಸಮತೋಲನದಿಂದ ಇದ್ದರೆ ವಾತಾವರಣದಲ್ಲಿ ವೈಪರೀತ್ಯಗಳು ಇನ್ನಿಲ್ಲದಂತ್ತಾಗುತ್ತದೆ.ಪಂಚವರ್ಣ ಸಂಘಟನೆ ನಿತ್ಯ ನಿರಂತರವಾಗಿ ಪರಿಸರದ ಬಗೆಗಿನ ಕಾಳಜಿ ಕಾರ್ಯಕ್ರಮಗಳು ಇತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗಾಣಿಗ ಪ್ರತಿಷ್ಠಾನ ರಿ. ಬೈಂದೂರು ಇದರ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಕಲಿಕಾ ಸಾಮಾಗ್ರ ವಿತರಣೆ ಕಾರ್ಯಕ್ರಮ ಹಾಗೂ ಸಮಾಜದ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಇಲ್ಲಿನ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೈಂದೂರು ಗಂಗನಾಡು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರಮ ಪಟ್ಟು ಅಭ್ಯಾಸ ಮಾಡಬೇಕಾಗಿದೆ. ಉನ್ನತ ವ್ಯಾಸಂಗ ಮಾಡುವತ್ತ ಎಲ್ಲ ವಿದ್ಯಾರ್ಥಿಗಳು ಗಮನ ಹರಿಸಬೇಕು. ದುಶ್ಚಟಗಳಿಂದ ದೂರವಾಗಿ ತಮ್ಮ ವಿದ್ಯಾರ್ಥಿ ಜೀವನವನ್ನು ಉತ್ತಮವಾಗಿಸಿಟ್ಟುಕೊಳ್ಳಬೇಕು ಎಂದರು. ಗಾಣಿಗ ಪ್ರತಿಷ್ಠಾನ ರಿ. ಬೈಂದೂರು ಇದರ ಅಧ್ಯಕ್ಷರಾದ ಕೆ. ರಮೇಶ್ ಗಾಣಿಗ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಮಾಜದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಟ್ರಷ್ಟ ಸ್ಥಾಪಿಸಿ ಕಾರ್ಯಕ್ರಮ ಮಾಡಲಾಗುತ್ತದೆ. ಸಮಜದಲ್ಲಿರುವ ಅಸಾಯಕರನ್ನು ಗುರುತಿಸಿ ಅವರಿಗೆ ಸಹಾಯ ಮಾಡುವುದು, ಸಾಧಕರನ್ನು ಗುರುತಿಸುವ ಕೆಲಸ ಆಗ ಬೇಕಾಗಿದೆ ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಿಂದಿನ ನಮ್ಮ ಹಿರಿಯರು ನೀಡಿದ ಆಹಾರ ಕ್ರಮಗಳನ್ನು ಬಿಟ್ಟು ಆಧುನಿಕ ಆಹಾರ ಪದ್ಧತಿಗೆ ಒಗ್ಗಿಕೊಳ್ಳುತ್ತಿರುವುದು ಬೇಸರದ ಸಂಗತಿ ಅದರಲ್ಲೂ ಇಂದಿನ ಮಕ್ಕಳು ಜಂಕ್ ಪುಡ್ ಸೇವನೆಯಿಂದ ಹಲವಾರು ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಹೇಳಿದರು. ಅವರು ಶನಿವಾರ ತೆಕ್ಕಟ್ಟೆ ಕುವೆಂಪು ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅರಿವು ನಿಮ್ಮಗಿರಲಿ ನೆರವು ಆರೋಗ್ಯ ಮಾಹಿತಿ 14ನೇ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸೊಪ್ಪು ತರಕಾರಿಗಳನ್ನು ಹೆಚ್ಚು ಸೇವಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ ಉದ್ಘಾಟಿಸಿ ಪಂಚವರ್ಣ ಸಂಘಟನೆಯ ಸಾಮಾಜಿಕ ಕಾರ್ಯವನ್ನು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳನ್ನು ಗಂಗೊಳ್ಳಿಯ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮಲ್ಯರಬೆಟ್ಟು ಅಂಗನವಾಡಿಯ ಪ್ರಾರಂಭೋತ್ಸವವನ್ನು ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಅನಿತಾ ಖಾರ್ವಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಗನವಾಡಿಗೆ ಆಗಮಿಸಿದ ಪುಟಾಣಿಗಳಿಗೆ ತಿಲಕವನ್ನಿಟ್ಟು ಆರತಿ ಬೆಳಗಿಸಿ ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ ಅವರು ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಶುಭ ಹಾರೈಸಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸಮಿತ್ರಾ ಜಿ., ಜಿ.ಈಶ್ವರ, ವೀಣಾ, ಶೋಭಾ, ನಿಹಾಪ್, ರೋಶನಮೀನ್ ಚೌಗುಲೆ, ಅಬೀರಾ, ಕೃಷ್ಣ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅನಿತಾ ಖಾರ್ವಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಇಲ್ಲಿ ಬಾಹ್ಯಕಾಶವೇ ಮಿತಿ:ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ ವಕೀಲ ವೃತ್ತಿಯಲ್ಲಿ ದೊರೆಯುವ ಹೆಸರು, ಗೌರವ ಮತ್ತು ಆರ್ಥಿಕ ಯಶಸ್ಸು ಬೇರೆ ಯಾವ ಕ್ಷೇತ್ರಗಳಲ್ಲೂ ಸಿಗಲಾರದು. ಇಲ್ಲಿ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ ಎಂದರು. ಮೂರನೇ ಚುನಾವಣೆಯಲ್ಲಿ ಗೆಲುವು:ವಿದ್ಯಾರ್ಥಿ ಜೀವನದಲ್ಲಿ ಕಾಲೇಜು ನಾಯಕತ್ವ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಬಳಿಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಎದುರಿಸಿದ್ದೆ. ಇದೀಗ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಮೂರನೇ ಪ್ರಮುಖ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದೇನೆ. ತಾನು ಮೂಲತಃ ವೈದ್ಯನಾಗುವ ಕನಸು ಕಂಡಿದ್ದೆ. ಆದರೆ ಪಿಸಿಎಂಬಿ ವಿಭಾಗದಲ್ಲಿ ಅನುತ್ತೀರ್ಣನಾದ ಬಳಿಕ ಕಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಸಾವಿತ್ರಿ ಪ್ರಭು ಅವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು. ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಇಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತ್ರಿಷಾ ವಂದಿಸಿ, ಯಕ್ಷಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ, ಸರ್ವೇ ಹಾಗೂ ಅರಣ್ಯ ಇಲಾಖೆ ಸಹಿತ ಇನ್ನಿತರ ಇಲಾಖೆಗಳ ಹಂತದಲ್ಲಿ ಹಲವು ಸಮಯಗಳಿಂದ ಬಾಕಿ ಇರುವ ಕಡತಗಳ ವಿಲೇವಾರಿ ಕುರಿತು ಕುಂದಾಪುರ ಉಪ ವಿಭಾಗಾಧಿಕಾರಿಗಳ ಉಪಸ್ಥಿತಿಯಲ್ಲಿ ಬೈಂದೂರು ತಾಲೂಕು ಕಚೇರಿ ಕೋರ್ಟ್ ಹಾಲ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇಲಾಖೆಗಳ ವಿವಿಧ ವಿಭಾಗಗಳಲ್ಲಿ ಹಲವು ತಿಂಗಳಿಂದ ಬಾಕಿ ಇರುವ ಕಡತಗಳ ತ್ವರಿತ ವಿಲೇವಾರಿ ಮಾಡಲು ಸೂಚನೆ ನೀಡಿದರು. ಅಕ್ರಮ ಸಕ್ರಮ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ಕ್ರಮ:ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 179 ಅರ್ಜಿಗಳು ಬಗರ್ ಹುಕುಂ ತಂತ್ರಾಂಶದಲ್ಲಿ ಸೇರಿಸಲು ಬಾಕಿ ಇದ್ದು ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ವಂಚಿತರಾಗುತ್ತಿರುವ ಕಾರಣ ಸದರಿ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಳವಡಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದರು. ಪ್ಲಾಟಿಂಗ್ ಸಮಸ್ಯೆ ನಿವಾರಣೆಗೆ ಪ್ರಕ್ರಿಯೆ ಚುರುಕುಗೊಳಿಸಿ:ಜಡ್ಕಲ್ ಹಾಗೂ ಮುದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಸ್ನೇಹಕೂಟ, ಶ್ರೀರಾಮ ಭಜನಾ ಮಂಡಳಿ ಮಣೂರು, ಸ್ತೋತ್ರ ಪಠಣ ಸಂಘ ಮಣೂರು ಮತ್ತು ಮಣೂರು ಪರಿಸರದ ಮಹಿಳೆಯರಿಂದ ಅಧಿಕ ಜೇಷ್ಠ ಮಾಸ (ಪುರುಷೋತ್ತಮ ಮಾಸ)ದ ಪ್ರಯುಕ್ತ ಶ್ರೀ ಲಕ್ಷ್ಮಿ ಶೋಭಾನ ಪಠಣ ಹಾಗೂ ಹರಿನಾಮ ಸಂಕೀರ್ತನೆ ಕಾರ್ಯಕ್ರಮ ಗುರುವಾರ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಹಮ್ಮಿಕೊಂಡಿತು. ಮಹಾಲಿಂಗೇಶ್ವರ ದೇವಸ್ಥಾನದ ಹೇರಂಭ ಕಲಾ ವೇದಿಕೆಯಲ್ಲಿ ಅಧಿಕಮಾಸದ ನಾಲ್ಕು ವಾರಗಳಲ್ಲಿ ನಡೆಸಲಾದ ಈ ವಿಶೇಷ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮವನ್ನು ಮಣೂರು ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಉಪಸ್ಥಿತಿಯಲ್ಲಿ ಸಂಪನ್ನಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ನೇಹಕೂಟದ ಅಧ್ಯಕ್ಷ ಭಾರತಿ ವಿ ಮಯ್ಯ ಅವರು ಅಧಿಕ ಮಾಸದ ಬಗ್ಗೆ ಮಾಹಿತಿಯನ್ನು ನೀಡಿದರು.ಇದೇ ವೇಳೆ ದೇಗುಲದ ವತಿಯಿಂದ ಭಾಗವಹಿಸಿದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿತು. ಸಂಘದ ಮುಖ್ಯಸ್ಥೆ ಭಾರತಿ ಮಯ್ಯ ಅವರಿಗೆ ದೇವಸ್ಥಾನದ ವತಿಯಿಂದ ಸ್ಮರಣೆಕೆಯನ್ನು ನೀಡಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಅಚ್ಯುತಹಂದೆ, ಸುಫಲ ಶೆಟ್ಟಿ ಹಾಗೂ ಊರ…
