ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಗೊಂಬೆಯಾಟದ ಮಾಹಿತಿ ನೀಡುವಂತಹ ಫೋಟೋ ಗ್ಯಾಲರಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಇತ್ತೀಚೆಗೆ ಗೊಂಬೆ ಮನೆಯಲ್ಲಿ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಹರಿಕೃಷ್ಣ ಪುನರೂರು, ಗೊಂಬೆಯಾಟ ಕಲೆಯನ್ನು ಎಲ್ಲರೂ ಸೇರಿ ಉಳಿಸಬೇಕು. ಮುಂದೆ ಈ ಸಂಸ್ಥೆ ಇನ್ನೂ ಹೆಚ್ಚಿನ ಯಶಸ್ಸನ್ನು ಕಾಣಲಿ ಎಂದು ಹೇಳಿದರು. ಉಪ್ಪಿನಕುದ್ರು ಗೊಂಬೆಯಾಟ ಟ್ರಸ್ಟ್ ನ ನವೀಕೃತ ವೆಬ್ ಸೈಟ್ ನ್ನು ಕೆನರಾ ಬ್ಯಾಂಕಿನ ನಿವೃತ್ತ ಮೆನೇಜರ್ ಬಿ.ಆರ್. ನರಸಿಂಹ ರಾವ್, ಉಡುಪಿ ಇವರು ಉದ್ಘಾಟಿಸಿದರು. ಇವರನ್ನು ಗೊಂಬೆಯಾಟ ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಶೀರ್ಷಿಕೆಯಡಿಯಲ್ಲಿ 2019-20ನೇ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ. ಕಾರ್ತಿಕ್ ಐತಾಳ್ (611/625) ಮತ್ತು 2019-20ನೇ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕುಂದಾಪುರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಎರಡೂವರೆ ದಶಕ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದವಿ ನಿರ್ವಹಿಸಿ ಅದನ್ನು ಉಭಯ ಜಿಲ್ಲೆಗಳ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ಸದೃಢವಾಗಿ ಬೆಳೆಸಿದ ಎಸ್. ರಾಜು ಪೂಜಾರಿ ಅವರನ್ನು ನಾವುಂದ ಸಂಘದ ಪ್ರಧಾನ ಕಾರ್ಯಾಲಯದಲ್ಲಿ ನಿರ್ದೇಶಕ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿ ಅಭಿನಂದಿಸಿ, ಸನ್ಮಾನಿಸಿದರು. ಉಪಾಧ್ಯಕ್ಷ ಚಂದ್ರಶೀಲ ಶೆಟ್ಟಿ ಮಾತನಾಡಿ, 25 ವರ್ಷಗಳ ಹಿಂದೆ ಸಂಘದ ಸಾಧನೆ ಸಾಮಾನ್ಯ ಮಟ್ಟದಲ್ಲಿತ್ತು. ರಾಜು ಪೂಜಾರಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಿಸಿದ ಕಾರಣ ಅದರ ಸದಸ್ಯ ಸಂಖ್ಯೆ, ಪಾಲು ಬಂಡವಾಳ, ಠೇವಣಿ, ಕ್ಷೇಮನಿಧಿ ಗಣನೀಯವಾಗಿ ವೃದ್ಧಿಯಾಯಿತು. ಸ್ವಂತ ನಿಧಿ ಮತ್ತು ಕೇಂದ್ರ ಸಹಕಾರಿ ಬ್ಯಾಂಕಿನ ಸಾಲ ಬಳಸಿಕೊಂಡು ವಿವಿಧ ಉದ್ದೇಶಗಳಿಗೆ ದೊಡ್ಡ ಮೊತ್ತದ ಸಾಲ ವಿತರಿಸಲು ಸಾಧ್ಯವಾಯಿತು. ಪರಿಣಾಮವಾಗಿ ಸಂಘ ಹಂತಹಂತವಾಗಿ ಪ್ರಗತಿಯತ್ತ ಸಾಗಿತು’ ಎಂದರು. ನಿರ್ದೇಶಕ ಎಂ. ಅಣ್ಣಪ್ಪ ಬಿಲ್ಲವ, ಎಸ್. ರಾಜು ಪೂಜಾರಿ ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ದುಡ್ಡಿನಗುಳಿ ಒಕ್ಕೂಟದಲ್ಲಿ ವಿವಿಧ ಗ್ರಹೋಪಯೋಗಿ ವಸ್ತುಗಳ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಆನಂದ್ ಕೆ. ವಹಿಸಿದ್ದರು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಅವರು ಸದಸ್ಯರಿಗೆ ಸೋಲಾರ್, ಕುಕ್ ಸ್ಟೌವ್, ಫ್ರಿಡ್ಜ್, ಗ್ರ್ಯಾಂಡರ್ ಟೈಲರಿಂಗ್ ಮಿಷನ್, ಗೋದ್ರೇಜ್, ಟಿವಿ, ಫ್ಯಾನ್, ಮಿಕ್ಸಿ, ಇನ್ನಿತರ ಗ್ರಹ ಉಪಯೋಗಿ ವಸ್ತುಗಳನ್ನು ವಿತರಿಸಿದರು. ವಲಯ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ್, ಜನಜಾಗೃತಿ ಸದಸ್ಯರಾದ ಮಹಾಬಲ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಸವಿತಾ, ಅಂಗನವಾಡಿ ಶಿಕ್ಷಕಿ ಶಾರದಾ, ಮೆಕ್ಕೆ ಒಕ್ಕೂಟದ ಅಧ್ಯಕ್ಷ ಎಂ. ಜೆ. ಬೇಬಿ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ನಾಯ್ಕ್, ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಜ್ಯೋತಿ, ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗೀತಾ, ತಾಲೂಕು ಕೃಷಿ ಅಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ ಕೃಷಿ, ಪಶು – ಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆ ಜೊತೆಗೆ ಸರಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸುವ ಹಿನ್ನಲೆಯಲ್ಲಿ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಪ್ರಾಂಶುಪಾಲರಾದ ಡಾ. ಕೆ. ವಿ. ಸುಧೀರ್ ಕಾಮತ್, ಪೊ. ಸಂದೇಶ್, ತಾಂತ್ರಿಕ ಅಧಿಕಾರಿಯಾದ ರಂಜಿತ್ ಜಿ. ಎಚ್. ಹಾಗೂ ದಿನೇಶ್ರವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ್ ಪಾರಂಪಳ್ಳಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮವನ್ನು ಆಯೋಜಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಾರಂತ ಥೀಮ್ ಪಾರ್ಕ್ಗೆ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಇತ್ತೀಚೆಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರ್ಟ್ ಗ್ಯಾಲರಿ, ರಂಗ ಮಂದಿರ , ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ವೀಕ್ಷಿಸಿ ಮಾತನಾಡಿದ ಅಂಬಾತನಯ ಮುದ್ರಾಡಿ, ಶಿವರಾಮ ಕಾರಂತರು ಯಕ್ಷಗಾನ ಕ್ಷೇತ್ರಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ, ಯಕ್ಷಗಾನ ಬ್ಯಾಲೆ ಮೂಲಕ ವಿದೇಶಗಳಲ್ಲಿ ಯಕ್ಷಗಾನದ ಕಂಪನ್ನು ಪಸರಿಸಿದವರು ಕಾರಂತರು ಅಂತಹ ವ್ಯಕ್ತಿ ಹೆಸರಿನಲ್ಲಿ ಈ ಕಾರಂತ ಥೀಮ್ ಪಾರ್ಕ್ ಚಟುವಟಿಕೆ ನಡೆಸುತ್ತಿರುವ ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ನಮ ತುಳುವೆರ್ ಸಂಘಟನೆಯ ಸುಕುಮಾರ್ ಮುದ್ರಾಡಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಲಲಿತಾ ಮತ್ತಿತ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮದುವೆ ನಿಂತು ಹೋದ ಕಾರಣಕ್ಕೆ ಮನನೊಂದು ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಗ್ರಾಮದಲ್ಲಿ ನಡೆದಿದೆ. ನಾಡ ಗುಡ್ಡೆಯಂಗಡಿ ನಿವಾಸಿ ಮುರಳೀಧರ ನಾಯಕ್ ಅವರ ಪುತ್ರಿ ಸ್ಫೂರ್ತಿ ಎಂ. ನಾಯಕ್ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಗಸ್ಟ್ 16 ರಂದು ಉಡುಪಿಯ ಯುವಕನೊಂದಿಗೆ ಸ್ಪೂರ್ತಿಯ ಮದುವೆ ನಿಶ್ಚಿತಾರ್ಥ ಮಾಡಿದ್ದು, ಬಳಿಕ ಕಾರಣಾಂತರಗಳಿಂದ ಈ ಮದುವೆ ನಿಂತು ಹೋಗಿತ್ತು. ಇದೇ ವಿಚಾರದಲ್ಲಿ ಸ್ಫೂರ್ತಿ ಬಹಳಷ್ಟು ನೊಂದುಕೊಂಡಿದ್ದಳು. ನ.6 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ನಡೆಯುತ್ತಿರುವ ವಾರಾಂತ್ಯ ಉಪನ್ಯಾಸ ಮಾಲಿಕೆ ವಿಚಾರ ಸಂಕಿರಣ ವಿಚಾರಗೋಷ್ಠಿ ಸಾಂಸ್ಕೃತಿಕ ಚಿತ್ತಾರ ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರೇರಣೆ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು. ಉಪನ್ಯಾಸದಲ್ಲಿ ಮಾತನಾಡಿದ ಉಡುಪಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಕ್ಕಳು ಚಿಕ್ಕವರಿದ್ದಾಗ ಅವರ ಆಸಕ್ತಿ ಕ್ಷೇತ್ರವನ್ನು ಗುರುತಿಸಿ ಅದರಂತೆ ಪ್ರೋತ್ಸಾಹ ನೀಡಿದಾಗ ಮಕ್ಕಳು ಬದುಕಿನಲ್ಲಿ ಏನಾದರೂ ಸಾಧಿಸೋಕೆ ಸಾಧ್ಯ. ಮಕ್ಕಳಲ್ಲಿ ಸಕರಾತ್ಮಕ ವಿಷಯಗಳನ್ನು ಯೋಚಿಸುವ ಗುಣಗಳನ್ನು ಬೆಳೆಸುವುದು ಪೋಷಕರ ಹಾಗೂ ಶಿಕ್ಷಕರ ಕೆಲಸ ಅದನ್ನು ಚಿಕ್ಕ ಮಕ್ಕಳಿರುವಾಗಲೇ ಪ್ರೇರೆಪಿಸಿದಾಗ ಮಕ್ಕಳು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ನಿರೂಪಿಸಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತಾವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಟ್ರಸ್ಟಿ ಸತೀಶ್ ವಡ್ಡರ್ಸೆ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ತ್ರಾಸಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಕಛೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ’ಜ್ಞಾನತಾಣ’ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್, ಕೋವಿಡ್ ಸಮಸ್ಯೆಯಿಂದ ಶಾಲೆಗಳು ಮುಚ್ಚಿರುವ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಗ್ರಾಮೀಣ ಮಕ್ಕಳಲ್ಲಿ ಅಂತರ್ಜಾಲ ಶಿಕ್ಷಣದ ಮಹತ್ವವನ್ನು ತಿಳಿಸಲು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ, ಭವಿಷ್ಯದಲ್ಲಿ ಅವರ ಕಲಿಕೆಯನ್ನು ಗಮನದಲ್ಲಿಟ್ಟುಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿರುವ ’ಜ್ಞಾನತಾಣ’ ಕಾರ್ಯಕ್ರಮ ಗ್ರಾಮೀಣ ಮಕ್ಕಳ ವಿದ್ಯಾಬ್ಯಾಸಕ್ಕೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದ್ಭಳಕೆ ಮಾಡಿಕೊಳ್ಳಬೇಕು. ಸರಕಾರ ಕೂಡ ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಇರುವ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಆಶಯ ವ್ಯಕ್ತಪಡಿಸಿರುವುದು ಶ್ಲಾಘನೀಯ, ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿತ್ತು. ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಸಿದಿತ್ತು. ಆದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ‘ಪ್ರವಾದಿ ಮುಹಮ್ಮದರ ಜೀವನ ಮತ್ತು ಸಂದೇಶ ಪರಿಚಯ’ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ, ಕೆಲವೇ ಕುತರ್ಕಿಗಳ ಅವಹೇಳನ, ಅಗೌರವದ ಕೃತಿಗಳಿಂದ ಜಗತ್ತಿಗೆ ಬೆಳಕು ನೀಡಿದ ಪ್ರವಾದಿ ಮತ್ತು ಮಹಾತ್ಮರ ವ್ಯಕ್ತಿತ್ವ ಮತ್ತು ಸಂದೇಶಗಳಿಗೆ ಚ್ಯುತಿ ಉಂಟಾಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ನೊಂದವರು ಅಷ್ಟೇ ಕೀಳುಮಟ್ಟದ ಪ್ರತಿಕ್ರಿಯೆ ನೀಡಬಾರದು, ಮಹಾನ್ ವ್ಯಕ್ತಿಗಳು ಯಾವ ಮತ, ಪಂಥಗಳಿಗೆ ಸೇರಿದ್ದರೂ ಅವರು ಸಾರುವ ಸಂದೇಶಗಳ ಸಾರ ಜಗತ್ತಿಗೇ ಮಾರ್ಗದರ್ಶಕ ಆಗಿರುತ್ತದೆ. ಪ್ರವಾದಿ ಮುಹಮ್ಮದರು ಈ ಸಾಲಿಗೆ ಸೇರಿದವರು. ಒಕ್ಕೂಟ ನಡೆಸುವ ಇಂತಹ ಕಾರ್ಯಕ್ರಮಗಳು ವಾಸ್ತವ ವಿಚಾರಗಳನ್ನು ಪ್ರಚುರಪಡಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ನಾವುಂದ ಆಕಳಬೈಲು ಜುಮ್ಮಾ ಮಸೀದಿಯ ಖತೀಬ್ ಮೌಲಾನಾ ಇಸ್ಮಾಯಿಲ್ ಮುಸ್ಲಿಯಾರ್, ಪ್ರವಾದಿ ಮುಹಮ್ಮದರ ಜೀವನ ಮತ್ತು ಸಂದೇಶಗಳನ್ನು ವಿವರಿಸಿದರು. ಬೈಂದೂರು ಹೋಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮರವಂತೆ ಮೀನುಗಾರರ ಸಹಕಾರಿ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ ಇತ್ತಿಚೆಗೆ ನಡೆಯಿತು. ಶಂಕು ಸ್ಥಾಪನೆ ಮಾಡಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕರಾವಳಿಯ ಆರ್ಥಿಕ ಜೀವನಾಡಿಯಾಗಿರುವ ಮೀನುಗಾರಿಕೆಗೆ ಮೀನುಗಾರರ ಸಹಕಾರ ಸಂಘಗಳು ದೀರ್ಘ ಕಾಲದಿಂದ ಹಣಕಾಸಿನ ಹಾಗೂ ಅಗತ್ಯ ಪರಿಕರಗಳನ್ನು ಪೂರೈಸುವ ಮೂಲಕ ಬೆಂಬಲ ನೀಡುತ್ತ ಬಂದಿವೆ ಎಂದು ಹೇಳಿದರು. ಮರವಂತೆಯ ಸಂಘವು ಜಿಲ್ಲೆಯ ಅತ್ಯಂತ ಹಳೆಯ ಸಂಸ್ಥೆಗಳಲ್ಲಿ ಒಂದು. ಅದರಿಂದ ಪರಿಸರದ ಮೀನುಗಾರರು ಹೆಚ್ಚಿನ ಸೇವೆ ನಿರೀಕ್ಷಿಸುತ್ತಾರೆ. ಅದಕ್ಕೆ ಅನುಗುಣವಾಗಿ ಸಂಘ ತನ್ನ ವ್ಯವಹಾರವನ್ನು ವಿಸ್ತರಿಸಿಕೊಳ್ಳಬೇಕು. ಅದರ ನೂತನ ಕಟ್ಟಡ ಮತ್ತು ಅನ್ಯ ಚಟುವಟಿಕೆಗಳಿಗೆ ಸರ್ಕಾರದಿಂದ ಸಿಗುವ ಎಲ್ಲ ನೆರವನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಸಂಘದ ಅಧ್ಯಕ್ಷ ಪ್ರವೀಣ ಖಾರ್ವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೈತ್ರಾ ವಂದಿಸಿದರು. ಸಂಘದ ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಖಾರ್ವಿ, ಭಾಗ್ಯಾ, ನಿರ್ದೇಶಕ ಮಂಡಳಿಯ ಸದಸ್ಯರು, ಗ್ರಾಮ ಪಂಚಾಯಿತಿ ಮಾಜಿ…
