Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಇಂದಿನ ವಿದ್ಯಾರ್ಥಿಗಳು ಅಧ್ಯಯನ ಮಾಡಿ ದೇಶಕ್ಕೆ ಅವರ ಕೊಡುಗೆಯನ್ನು ತಿಳಿಯಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಕರೆ ನೀಡಿದರು. ಅವರು ಸಮುದಾಯ ಸಾಂಸ್ಕೃತಿಕ ಸಂಘಟನೆ ರಿ. ಕುಂದಾಪುರ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಉಡುಪಿ ಜಿಲ್ಲೆ ಇವರು ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್ ಓದು ಅಭಿಯಾನವನ್ನು ಸಂವಿಧಾನದ ಪ್ರಸ್ತಾವನೆಯನ್ನು ಸಭಿಕರಿಗೆ ಪ್ರತಿಜ್ಞಾ ವಿಧಿಯಾಗಿ ಬೋಧಿಸುವುದರ ಮೂಲಕ ಚಾಲನೆಗೊಳಿಸಿ ಮಾತನಾಡಿದರು. ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಮೂರೂ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಅಂಬೇಡ್ಕರ್ ಅವರ ಸಾರ್ವಜನಿಕ ಜೀವನದ ಒಂದು ಮಹತ್ವದ ಘಟನೆಯ ಕುರಿತು ಯಾವುದೇ ಮಾಧ್ಯಮದಲ್ಲಿ ಪೋಸ್ಟರ್ ರಚನೆ, ಜೈ ಭೀಮ್ ಕ್ವಿಜ್, ಅಂಬೇಡ್ಕರ್ ಅವರ ಜೀವನದ ಕುರಿತಾದ ಯಾವುದೇ ಒಂದು ಮಹತ್ವದ ಘಟನೆಯನ್ನು ಆಧರಿಸಿದ ವೀಡಿಯೋ ಭಾಷಣ, ಸಂವಿಧಾನದ ಪ್ರಸ್ತಾವನೆಯ ಸಂಯೋಜಿತ ಓದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆಯ ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ಇದರ ನೂತನ ಪಧಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತಿಚಿಗೆ ನಡೆಯಿತು. ಸಂಘದ ಗೌರವಾಧ್ಯಕ್ಷರಾಗಿ ರೋಶನ್ ಹುದಾರ್, ಅಧ್ಯಕ್ಷರಾಗಿ ನಾಗಪ್ಪ ಬಿಲ್ಲವ, ಕಾರ್ಯದರ್ಶಿಯಾಗಿ ಚಂದ್ರಶೇಖರ ತಗ್ಗರ್ಸೆ ಆಯ್ಕೆಯಾಗಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ಚಿತ್ರಸಿರಿ – 2022’ ವಿದ್ಯಾರ್ಥಿ ಸ್ವ ರಚಿತ ಚಿತ್ರಕಲಾ ಪ್ರದರ್ಶನ ಇತ್ತಿಚಿಗೆ ಜರುಗಿತು. ಮುದೂರು ಭಾರತ ಮಾತಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಚಂದ್ರಶೇಖರ್ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಮೆಚ್ಚಿಕೊಂಡು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಒದಗಿಸುತ್ತಿರುವ ಕಾಲೇಜಿನ ಕಾಯಕ ಶ್ಞಾಘನೀಯ ಎನ್ನುತ್ತಾ ಅವಕಾಶಗಳನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸಂಜನಾ ಪ್ರಾರ್ಥಿಸಿ, ಸೃಜನ್ ಸ್ವಾಗತಿಸಿ,ಐಶ್ವರ್ಯ ಹಾಗೂ ಕ್ಷಮಾ ಕಾರ್ಯಕ್ರಮ ನಿರೂಪಿಸಿ, ಸುಶಾನ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ನ.27: ನೆಹರು ಯುವ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಏಪ್ರಿಲ್ 1 ರಿಂದ 2022 ಮಾರ್ಚ್ 31 ರ ಒಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕರ್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಪ್ರಶಸ್ತಿ ಪತ್ರದ ಜೊತೆಗೆ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲು ಅರ್ಹತೆ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ಜಿಲ್ಲಾಧಿಕಾರಿ ಕಚೇರಿ ಆವರಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ & ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಹೊಳಪು-2022 ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳಿಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಗೆ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ದಿನವನ್ನು ಗ್ರಾಮ ಪಂಚಾಯತ್ನಲ್ಲಿ ಶನಿವಾರ ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಗಿದ್ದು, ಪ್ರತಿವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ದೇಶದ ಸಾರ್ವಭೌಮತೆ, ಜಾತ್ಯಾತೀತತೆ, ಜನತಂತ್ರಾತ್ಮಕ ಗಣರಾಜ್ಯವನ್ನಾಗಿ ರೂಪಿಸಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ, ಬೈರು ಬಸವ ಖಾರ್ವಿ, ಶಾಂತಿ ಖಾರ್ವಿ, ಸಖು ಉದಯ, ಸುಮಿತಾ ಶೇರುಗಾರ್, ಸಾವಿತ್ರಿ ಖಾರ್ವಿ, ರೇಖಾ ಖಾರ್ವಿ, ನಿರ್ಮಲಾ ಪೂಜಾರಿ, ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅವರು ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರಾದ ಸಂತೋಷ ಶೆಟ್ಟಿ ಗಿಳಿಯಾರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು. ಉಡುಪಿಯ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ರಕ್ಷಿತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಸಂಸ್ಥೆಯ ವೀಕ್ಷಣೆ ಹಾಗೂ ಅಧ್ಯಯನ ವಿಷಯಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿದರು. ಉಡುಪಿ ಜಿಲ್ಲೆಯ ಉಪ್ಪೂರಿನ ಬಳಿ ಇರುವ ಕೆ.ಎಂ.ಎಫ್ ನಂದಿನಿ ಡೈರಿ ಸ್ಥಾವರಕ್ಕೆ ವಿದ್ಯಾರ್ಥಿಗಳು ಭೇಟಿ ಕೊಟ್ಟು ಹಾಲಿನ ಪಾಶ್ಚರೀಕರಣ ಮತ್ತು ಹಾಲನ್ನು ಪ್ಯಾಕೇಟುಗಳಲ್ಲಿ ಸಂಗ್ರಹಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಹಾಲಿನಿಂದ ತಯಾರಾಗುವ ವಿವಿಧ ತಿಂಡಿ – ತಿನಿಸುಗಳು, ಸಂಗ್ರಹಿಸುವ ವಿಧಾನಗಳು ಹಾಗೂ ವಿತರಣಾ ಕ್ರಮಗಳ ಬಗ್ಗೆ ಅರಿತುಕೊಂಡರು. ಆ ಬಳಿಕ ಪೆರ್ಡೂರಿನ ಬುಕ್ಕಿ ಗುಡ್ಡೆಯಲ್ಲಿರುವ ಶ್ರೀ ಗುರು ಆರ್ಯುವೇದಿಕ್ ಕೈಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ಆರ್ಯುವೇದ ಔಷಧಗಳನ್ನು ತಯಾರಿಸುವ ವಿಧಾನ ಹಾಗೂ ಅದರ ಉಪಯೋಗಗಳ ಬಗ್ಗೆ ತಿಳಿದುಕೊಂಡರು. ಈ ಒಂದು ದಿನದ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ ಹಾಗೂ ವೀಕ್ಷಣೆ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ ವಾರ್ಷಿಕ ಕ್ರೀಡೋತ್ಸವ ಇತ್ತಿಚಿಗೆ ಜರುಗಿತು. ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಸುದೀಪ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದೆಂದು ಎಂದರು. ಸಮಾರೋಪ ಸಮಾರಂಭದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ಹೆಚ್, ಮೀರಾ ಸಾಹೇಬ್ರವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾರವರು ಮಾತನಾಡಿ ಕ್ರೀಡೆಗಳು ಶಿಸ್ತು, ಸಂಯಮ ಹಾಗೂ ಏಕಾಗ್ರತೆಯನ್ನು ಕಲಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಭಾಕರ ಶೆಟ್ಟಿಯವರು ಮಕ್ಕಳ ಉತ್ಸಾಹ ಹಾಗೂ ಸ್ಪರ್ಧಾ ಮನೋಭಾವವನ್ನು ಪ್ರಶಂಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಮೊದಲಾದ ಸಾಹಸ ಕ್ರೀಡೆಗಳನ್ನು ಪ್ರದರ್ಶಿಸಿದರು. ದೈಹಿಕ ಶಿಕ್ಷಕರುಗಳಾದ ಆನಂದ್ ಹಾಗೂ ಪ್ರದೀಪ್ ಕುಮಾರ್ ಶೆಟ್ಟಿಯವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣದ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಯುವ ರೆಡ್ ಕ್ರಾಸ್ ಸಂಯೋಜನಾಧಿಕಾರಿಯಾದ ಶ್ರೀ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳಲ್ಲಿ ಸೇವಾ ಮನೋಭಾವನೆ ಬಹುಮುಖ್ಯ ಪಾತ್ರ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸುಭದ್ರ ಸಮಾಜPÉÌ ಆರೋಗ್ಯಯುತ ಯುವಶಕ್ತಿ ಅವಶ್ಯಕ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಚೇತನ್…

Read More