ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಹಿರಿಯ ಪತ್ರಿಕೋದ್ಯಮಿ, ಬರಹಗಾರ ಸತೀಶ ಚಪ್ಪರಿಕೆ ಅವರ ’ಥೇಮ್ಸ್ ತಟದ ತವಕ ತಲ್ಲಣಗಳು’ ಮತ್ತು ಉದಯೋನ್ಮುಖ ಲೇಖಕ ಯೋಗೀಂದ್ರ ಮರವಂತೆ ಅವರ ’ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ’ ಪುಸ್ತಕಗಳು ಡಿ.19ರ ಸಂಜೆ 5ಕ್ಕೆ ಬೆಂಗಳೂರಿನ ಬನಶಂಕರಿ ಎರಡನೆ ಹಂತದ ಬಿ. ವಿ. ಕಾರಂತ ರಸ್ತೆಯ ಸುಚಿತ್ರ ಫಿಲಂ ಸೊಸೈಟಿಯಲ್ಲಿ ಬಿಡುಗಡೆಗೊಳ್ಳಲಿವೆ. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅಧ್ಯಕ್ಷತೆ ವಹಿಸಿ, ಪುಸ್ತಕ ಬಿಡುಗಡೆ ಮಾಡುವರು. ಹಿರಿಯ ಪತ್ರಕರ್ತ, ಲೇಖಕ ಜೋಗಿ, ಲೇಖಕ, ಅಂಕಣಕಾರ ಕೆ. ಸಿ. ರಘು, ಮೈಲ್ಯಾಂಗ್ ಬುಕ್ಸ್ನ ಸಹ ಸಂಸ್ಥಾಪಕ ವಸಂತ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು. ಪುಸ್ತಕ ಪ್ರಕಟಿಸಿರುವ ನವ ಕರ್ನಾಟಕ ಪಬ್ಲಿಕೇಷನ್ಸ್ನ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ ಉಡುಪ ಉಪಸ್ಥಿತರಿರುವರು. ಸತೀಶ ಚಪ್ಪರಿಕೆ ಪತ್ರಿಕೋದ್ಯಮದ ಉನ್ನತ ಅಧ್ಯಯನಕ್ಕೆ ಬ್ರಿಟಿಷ್ ಶಿವ್ನಿಂಗ್ ಸ್ಕಾಲರ್ಶಿಪ್ ಪಡೆದು ಲಂಡನ್ನಲ್ಲಿ ನಡೆಸಿದ ವ್ಯಾಸಂಗದ ಅವಧಿಯಲ್ಲಿ ಗ್ರೇಟ್ ಬ್ರಿಟನ್ನಲ್ಲಿ ಮಾಡಿದ ವೃತ್ತಿಪರ ನೆಲೆಯೊಳಗಿನ ಸುತ್ತಾಟ ಮತ್ತು ಆ ವೇಳೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳ ಲೋಕಾರ್ಪಣಾ ಸಮಾರಂಭ ಡಿ.22ರ ಬುಧವಾರ ಸಂಜೆ 4 ಗಂಟೆಗೆ ಯು.ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ. ಬೈಂದೂರಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ವಾಹನಗಳ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆಯನ್ನು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಬಿ. ಶೆಟ್ಟಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಎಂಡಿ, ಸಿಇಓ ಮಹಾಬಲೇಶ್ವರ ಎಂ.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಐಪಿಎಸ್, ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಉಡುಪಿ ವಲಯದ ಸಹಾಯಕ ಮಹಾಪ್ರಬಂಧಕ ರಾಜಗೋಪಾಲ ಬಿ., ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.14: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.ssp.karnataka.gov.in/8080/2122, www.backwardclasses.kar.nic.in ಅಥವಾ ತಾಲೂಕು / ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಪತ್ರಕರ್ತ, ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್. ಶೆಣೈಯವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದಿಂದ ನೀಡಲ್ಪಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಡಿ.11ರಂದು ನಡೆದ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 26ರಂದು ಅಪರಾಹ್ನ ಗಂಟೆ 3ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಜಸ್ಟೀಸ್ ಸಂತೋಷ್ ಹೆಗ್ಡೆಯವರು ಪ್ರಶಸ್ತಿ ಪ್ರದಾನಿಸಲಿದ್ದಾರೆ. ಯು. ಎಸ್. ಶೆಣೈಯವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುದೀರ್ಘ 40 ವರ್ಷಗಳ ಅನುಭವವನ್ನು ಹೊಂದಿದವರು. ಮಂಗಳೂರಿನ ನವಭಾರತ, ಇಂಡಿಯನ್ ಎಕ್ಸ್ಪ್ರೆಸ್, ಮುಂಗಾರು, ಹೊಸದಿಗಂತ ಪತ್ರಿಕೆಗಳಲ್ಲೂ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಮುಂದೆ 1991ರಲ್ಲಿ ಕುಂದಾಪುರ ತಾಲೂಕಿನ ಪ್ರಥಮ ಪತ್ರಿಕೆಯಾಗಿ ‘ಕುಂದಪ್ರಭ’ ವಾರಪತ್ರಿಕೆಯನ್ನು ಅವರು ಆರಂಭಿಸಿದರು. ಅಂದಿನಿಂದ ನಿರಂತರ ಮೂರು ದಶಕಗಳಿಂದ ಈ ಪತ್ರಿಕೆಯನ್ನು ನಡೆಸಿಕೊಂಡು ಬಂದಿರುವ ಹೆಗ್ಗಳಿಕೆ ಶೆಣೈಯವರದ್ದು. ಕುಂದಪ್ರಭ ಟ್ರಸ್ಟ್ ಹಾಗೂ ಜೈ ಕೊಂಕಣಿ ಸಂಸ್ಥೆಯ ಅಧ್ಯಕ್ಷರಾಗಿದ್ದು ಪಂಚಗಂಗಾವಳಿ ಉತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್ಗೆ ಚುನಾಯಿತರಾಗಿದ್ದಾರೆ. ದ್ವೈವಾರ್ಷಿಕ ಚುನಾವಣೆ ದ್ವಿಸದಸ್ಯ ಕ್ಷೇತ್ರದ ಫಲಿತಾಂಶದಲ್ಲಿ ಇಬ್ಬರೂ ಅಭ್ಯರ್ಥಿಗಳು ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ಸಾಧಿಸಿದರು. ಒಟ್ಟು 6,011 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 3,672 ಗಳಿಸಿದ್ದು, ಕಾಂಗ್ರೆಸ್ನ ಮಂಜುನಾಥ್ ಭಂಡಾರಿ ಅವರು 2,079 ಮತ ಗಳಿಸಿದ್ದಾರೆ. ಇಬ್ಬರು ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ಧಾರೆ. ಇನ್ನು ಎಸ್ಡಿಪಿಐ ಅಭ್ಯರ್ಥಿ ಶಾಫಿ ಅವರು 204 ಮತಗಳನ್ನು ಗಳಿಸಿದ್ದಾರೆ. ದ.ಕ.ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಎರಡು ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟ 6,040 ಮತದಾರರ ಪೈಕಿ 6,011 ಮಂದಿ ಮತದಾನ ಮಾಡಿದ್ದರು. ಈ ಪೈಕಿ ಈ ಪೈಕಿ 5,955 ಸಿಂಧು ಮತಗಳು ಚಲಾವಣೆಯಾಗಿದ್ದು, 56 ಅಸಿಂಧು ಮತಗಳಾಗಿವೆ. ಈ ಗೆಲುವಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್ಗೆ ಚುನಾಯಿತರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2,079 ಪ್ರಥಮ ಪ್ರಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ನಿರೀಕ್ಷೆಯಂತೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್ಗೆ ಚುನಾಯಿತರಾಗಿದ್ದಾರೆ. ಅವರು ಪ್ರಥಮ ಪ್ರಶಸ್ತ್ಯದ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು 6,011 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 3,672 ಗಳಿಸಿದ್ದು, ಈ ಗೆಲುವಿನ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು ಸತತ ನಾಲ್ಕನೇ ಬಾರಿಗೆ ಪರಿಷತ್ ಪ್ರವೇಶ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇನ್ನೊಬ್ಬರ ಕಷ್ಟಗಳನ್ನು ನಮ್ಮ ಕಷ್ಟ ಎಂಬ ಭಾವನೆಯೊಂದ ಸೇವೆ ಸಲ್ಲಿಸಿದಾಗ ಸಾರ್ಥಕ್ಯ ದೊರೆಯುತ್ತದೆ. ನಾವು ದುಡಿದ ಒಂದು ಭಾಗವನ್ನು ಸಮಾಜಕ್ಕೆ ನೀಡಿದಾಗ ಅದರ ಪ್ರತಿಫಲವೂ ಸಿಕ್ಕೆ ಸಿಗುತ್ತದೆ ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ಬೈಂದೂರಿನ ಶಾರದಾ ವೇದಿಕೆಯಲ್ಲಿ ಜೇಸಿಐ ಬೈಂದೂರು ಸಿಟಿ ಇದರ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ ಜೇಸಿ ಸಂಭ್ರಮ 2021 ಉದ್ಘಾಟಿಸಿ ಮಾತನಾಡಿ ಜೇಸಿ ಸಂಸ್ಥೆ ಯುವ ಜನತೆಯಲ್ಲಿ ವ್ಯಕ್ತಿತ್ವ ನಿರ್ಮಾಣ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡಲು ಶ್ರಮವಹಿಸುತ್ತಿರುವುದು ಶ್ಲಾಘನೀಯ ಎಂದರು. ಮಂಗಳೂರು ವಲಯ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಶ್ರೀಧರ ಪಿ ಅವರಿಗೆ ಈ ಬಾರಿ ಜೇಸಿ ಸಾಧನಶ್ರೀ ಪ್ರಶಸ್ತಿ ಪುರಸ್ಕಾರ ನೀಡಿ, ಗೌರವಿಸಲಾಯಿತು. ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಜೇಸಿಐ ಬೈಂದೂರು ಸಿಟಿಯ ಅಧ್ಯಕ್ಷ ಪಿ ಶ್ರೀಧರ ಆಚಾರ್ಯ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲ ಅವಕಾಶಗಳಿವೆ ಎನ್ನುವ ಮಾತು ಯಾವಾಗಲೂ ಕೇಳಿ ಬರುತ್ತದೆ ಇತ್ತೀಚೆಗೆ ಜಿಲ್ಲೆಯ ಹಿನ್ನೀರಿನ ಪ್ರದೇಶಗಳನ್ನು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದು, ಹೌಸ್ ಬೋಟ್, ಕುದ್ರುಗಳಿಗೆ ಪ್ರವಾಸ, ಕಯಾಕಿಂಗ್ ಚಟುವಟಿಕೆಯಂತಹ ಹೊಸ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಿಲ್ಲೆಯ ಸಾಲಿಗ್ರಾಮ ಸಮೀಪದಲ್ಲಿ ಸೀತಾ ನದಿಯ ಹಿನ್ನೀರಿನಲ್ಲಿನ ಕಾಂಡ್ಲಾ ವನದ ಮಧ್ಯದಲ್ಲಿ ಸಂಚರಿಸುವ ಕಯಾಕಿಂಗ್ ಸಾಹಸ ಯಾನ, ಪ್ರವಾಸಿಗರಿಗೆ ಪ್ರವಾಸದ ಹೊಸ ಅನುಭವ ನೀಡಲಿದೆ. ಸ್ಥಳೀಯ ಯುವಕರಾದ ಮಿಥುನ್ ಕೋಡಿ ಮತ್ತು ಲೋಕೇಶ್ ಈ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು, ಸಾಲಿಗ್ರಾಮದ ಪಾರಂಪಳ್ಳಿ ಬ್ರಿಡ್ಜ್ ಬಳಿ, ಸೀತಾನದಿಯ ಹಿನ್ನಿರಿನ ಕಾಂಡ್ಲಾ ವನದಲ್ಲಿ ಕಯಾಕಿಂಗ್ ಚಟುವಟಿಕೆಗಳನ್ನು ಆರಂಭಿಸಿದ್ದು, ಪ್ರವಾಸಿಗರಿಗೆ, ಸಾಹಸ ಚಟುವಟಿಕೆ ಕೈಗೊಳ್ಳುವ ಆಸಕ್ತರಿಗೆ ಇದು ಅತ್ಯಂತ ಪ್ರಶಸ್ತವಾದ ತಾಣವಾಗಿದೆ. ದಟ್ಟ ಕಾಂಡ್ಲಾವನದ ಮಧ್ಯೆದಲ್ಲಿ ಕಯಾಕಿಂಗ್ ಯಾನ ಆರಂಭಿಸಿರುವುದು ಜಿಲ್ಲೆಯಲ್ಲೆ ಪ್ರಪ್ರಥಮ ಯತ್ನವಾಗಿದೆ. ಇದುವರೆಗೂ ಕಯಾಕಿಂಗ್ ಮಾಡಿ ಯಾವುದೇ ಅನುಭವ ಇಲ್ಲದವರಿಗೂ ಸಹ, ಇಲ್ಲಿನ ತರಬೇತುದಾರರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಆಂದೋಲ ಪ್ರಾರಂಭ ಮಾಡುವುದು ಸುಲಭ ಆದರೆ ಅದನ್ನು ನಿರಂತರವಾಗಿಸುವುದು ದೊಡ್ಡ ಸಾಧನೆ ಈ ನಿಟ್ಟಿನಲ್ಲಿ ಪಂಚವರ್ಣ ಯುವಕ ಮಂಡಲ ಸೇರಿದಂತೆ ಎಲ್ಲಾ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದ್ದಾರೆ ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ ಗಿಳಿಯಾರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಮಣೂರು, ಯಕ್ಷಸೌರಭ ಕಲಾರಂಗ ಕೋಟ, ಮಹಿಳಾ ಬಳಗ ಹಂದಟ್ಟು ಇವರುಗಳ ಸಂಯೋಜನೆಯಲ್ಲಿ ಲಕ್ಷ್ಮೀಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಗ್ರಾಮಪಂಚಾಯತ್, ಕ್ಲಿನ್ ಕುಂದಾಪುರ ಪ್ರೊಜೆಕ್ಟ್, ಪರಿಸರಸ್ನೇಹಿ ಬಳಗ ಮಟ್ನಕಟ್ಟೆ ಕೆರ್ಗಾಲ್ ಉಪ್ಪುಂದ, ಕ್ಲಿನ್ ತ್ರಾಸಿ ಪ್ರೊಜೆಕ್ಟ್, ಸ್ವಚ್ಛತಾ ಮಾಸತಂಡ ಮರಂತೆ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ಮಣೂರು ಮೂಲಕ ಕೋಟ ಹಿರೇಮಹಾಲಿಂಗೇಶ್ವರ ದೇವಸ್ಥಾನದ ವರೆಗೆ ಸುಮಾರು ೩ವರೆ ಕಿಮೀ ದೂರ ಹಮ್ಮಿಕೊಂಡ ನೂರನೇ…
