Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆಯ ಯುಜಿಡಿ ಕಾಮಗಾರಿ ಫಿಟ್‌ವೆಲ್ ನಿರ್ಮಿಸಲು ಅಗತ್ಯವಿರುವ ಸ್ಥಳ ಖರೀದಿಗಾಗಿ ಸರ್ಕಾರವು ದುಪ್ಪಟ್ಟು ಹಣ ಪಾವತಿಸಿದೆ. ಯಾವುದೇ ಅಭಿವೃದ್ಧಿ ಕಾರ್ಯಮಾಡದ ಹೊಳೆ ಬದಿ ಜಾಗದಲ್ಲಿ ನಷ್ಟ ಪರಿಹಾರ ಎಂದು ತೋರಿಸಿ ಒಟ್ಟು 97 ಲಕ್ಷ ಜಾಗದ ಮಾಲೀಕರಿಗೆ ಸಂದಾಯ ಮಾಡಲಾಗಿದೆ. ಪುರಸಭೆ ಸದಸ್ಯರ ಅವಗಹಣೆಗೆ ತರದೇ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯ ಮಾಡಿರುವ ಹಿಂದಿನ ಉದ್ದೇಶವೇನು. ಜಾಗ ಖರೀದಿಗಾಗಿ ಸಂದಾಯ ಮಾಡಿರುವ ಹಣ ಕುರಿತು ತನಿಖೆ ನಡೆಸಬೇಕು ಎಂದು ಪುರಸಭೆ ಆಡಳಿತ ಪಕ್ಷ ಸದಸ್ಯ ಗಿರೀಶ್ ದೇವಾಡಿಗ ಹೇಳಿದ್ದಾರೆ. ಕುಂದಾಪುರ ಪುರಸಭೆ ಡಾ| ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರ ಮಾತಿಗೆ ಸಭೆಯಲ್ಲಿ ಸಮಮತ ವ್ಯಕ್ತವಾಗಿದ್ದು, ತನಿಕೆಗೆ ಆಗ್ರಹಿಸಿದ್ದಾರೆ. ಸರ್ಕಾರದ ದರಪಟ್ಟಿ ಹಾಗೂ ಭೂ ಮಾಲೀಕರಿಗೆ ಕೊಟ್ಟ ಪರಿಹಾರಕ್ಕೆ ಭಾರಿ ವ್ಯತ್ಯಾಸವಿದೆ. ಸಮಿತಿ ನಿಗದಿ ಮಾಡಿದ ದರಪಟ್ಟಿಯ ಬಗ್ಗೆ ಪುರಸಭೆ ಸಭೆಯಲ್ಲಿ ಗಮನಕ್ಕೆ ತಾರದೆ ಬರೋಬ್ಬರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಪಾರು ರೋಟರಿ ಕ್ಲಬ್‌ನಿಂದ ಪದಗ್ರಣ ಕಾರ್ಯಕ್ರಮ ಇಲ್ಲಿನ ವಂಡ್ಸೆ ಅತ್ರಾಡಿ ವಿಜಯಾ ಮಕ್ಕಳ ಕೂಟ ಆಂಗ್ಲಾ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಜರುಗಿತು. ರೋಟರಿ ನೂತನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸಹಾಯಕ ರಾಜ್ಯಪಾಲ ಧನಂಜಯ ಪ್ರಭು ಪದಗ್ರಹಣ ನೆರವೇರಿಸಿದರು. ವಲಯ ಸೇನಾನಿ ಗಂಗಾಧರ ಉಡುಪ ಸಂಸ್ಥೆ ಕೈಪಿಡಿ ಧರ್ಪಣ ಬಿಡುಗಡೆ ಮಾಡಿದರು. ವಂಡ್ಸೆ ಗ್ರಾಪಂ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, 43 ಬಾರಿ ರಕ್ತದಾನ ಮಾಡಿದ ಸಮಾಜ ಸೇವಕ ರಾಘವೇಂದ್ರ ನೆಂಪು ಅವರನ್ನು ಸನ್ಮಾನಿಸಲಾಯಿತು. ನೂತನ ರೋಟರಿ ಸದಸ್ಯರಾಗಿ ನಿವೃತ್ತ ಪ್ರೌಢಶಾಲಾ ಶಿಕ್ಷಕ ನರಸಿಂಹ ನಾಯ್ಕ್ ಅವರ ಬರಮಾಡಿಕೊಳ್ಳಲಾಯಿತು. ಈ ಸಂದರ್ಭ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ರೋಟರಿ ನಿಕಟಪೂರ್ವ ಅಧ್ಯಕ್ಷ ಸತೀಶ್ ಶೆಟ್ಟಿ ಮೂಡುಬಗೆ, ಮಾಜಿ ಕಾರ‍್ಯದರ್ಶಿ ಸುರೇಂದ್ರ ಶೆಟ್ಟಿ ಇದ್ದರು. ಆನಂದ ಮಾಸ್ಟರ್ ಸ್ವಾಗತಿಸಿದರು. ದಿನೇಶ್ ಪೂಜಾರಿ ಗೊರಟೆ ಪ್ರಾರ್ಥಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ. ಬಿ. ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕ ಆಯೋಜಿಸಿದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಕುಂದಾಪುರ ಮೂಲದ ಮಾಜಿ ಸೈನಿಕ ರವಿಚಂದ್ರ ಶೆಟ್ಟಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸೈನ್ಯದ ಸಿಕ್ಕಿಂ ಮತ್ತು ಸಿಯಾಚಿನ್ ದಿನಗಳನ್ನು ನೆನಪಿಸಿ ರೋಮಾಂಚನಗೊಳಿಸಿದರು. ಸೈನ್ಯಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವುದಾಗಿಯೂ ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ, ಕಾರ್ಗಿಲ್ ಯುದ್ಧದ ಆ ಸಂದರ್ಭಗಳು ಮತ್ತು ಮತ್ತು ಆಗಿನ ದೇಶದ ಪರಿಸ್ಥಿತಿ ಬಗ್ಗೆ ವಿವರಿಸಿದರು. ಆಪರೇಶನ್ ಸಫೇದ್ ಸಾಗರ್, ಆಪರೇಶನ್ ತಲ್ವಾರ್, ಆಪರೇಶನ್ ವಿಜಯ್ ಹೀಗೆ ಕ್ಷಿಪ್ರಗತಿಯಲ್ಲಿ ವಿರೋಧಿಗಳನ್ನು ಮೆಟ್ಟಿನಿಂತ ಭಾರತ ಸೈನ್ಯದ ಪರಾಕ್ರಮ, ಯೋಗಿಂದರ್ ಸಿಂಗ್ ಯಾದವ್, ಸೌರಭ್ ಕಾಲಿಯಾ ಹೀಗೆ ಅನೇಕ ಸೈನಿಕರ ಸಾಹಸಗಾಥೆಗಳನ್ನು ಸ್ಮರಿಸಿದರು. ದೇಶ ಭಕ್ತಿ ಮತ್ತು ದೇಶಪ್ರೇಮ ಪ್ರತಿದಿನದ ನಮ್ಮ ಜೀವನದಲ್ಲಿ ಸದಾ ಜಾಗೃತವಾಗಿರಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಳೆದ ಎರಡು ವರ್ಷಗಳಿಂದ ಕರೋನಾ ಅನೇಕರ ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ಸಹಸ್ರಾರು ಕುಟುಂಬಗಳನ್ನು ಬೀದಿ ಪಾಲು ಮಾಡಿದೆ. ಈ ವರ್ಷ ಕರೋನಾ ಎರಡನೇ ಅಲೆಯಲ್ಲಿ ಅತಿ ಹೆಚ್ಚು ಪ್ರಾಣ ಹಾನಿಯಾಗಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಮೇಲೆ ಪರಿಣಮ ಬೀರುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ವಿಶ್ಲೇಷಿಸುತ್ತಿದ್ದಾರೆ. ಕರೋನಾ ೩ನೇ ಅಲೆಯನ್ನು ಎದುರಿಸುವ ಸಲುವಾಗಿ ಮಕ್ಕಳನ್ನು ರಕ್ಷಿಸಲು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಾತೆಯರು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ದೈನಂದಿನ ಜೀವನದಲ್ಲಿ ಯೋಗ, ಪ್ರಾಣಾಯಾಮಗಳನ್ನು ಅಳವಡಿಸಿಕೊಂಡು ಮಕ್ಕಳಿಗೂ ಕೂಡ ಇದನ್ನು ಕಲಿಸಿಕೊಡಬೇಕಿದೆ. ಕರೋನಾವನ್ನು ಧೈರ್ಯದಿಂದ ಎದುರಿಸಲು ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳ ಅರೋಗ್ಯಕರ ಜೀವನಕ್ಕೆ ಪೂರಕವಾದ ಚಟುವಟಿಕೆಗಳನ್ನು ನಿರಂತವಾಗಿ ಮಾಡಬೇಕು ಎಂದು ಸಂಪನ್ಮೂಲ ವ್ಯಕ್ತಿ ಡಾ. ಶಿಲ್ಪಾ ಹೇಳಿದರು. ರಾಷ್ಟ್ರ ಸೇವಿಕಾ ಸಮಿತಿ ಕುಂದಾಪುರ ಮತ್ತು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.27: ಕಾರಿನಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಯುವಕರನ್ನು ಪ್ರಶ್ನಿಸಿದ ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮೇಲೆ ಕಾರು ಚಾಲಕ ಹಲ್ಲೆ ನಡೆಸಿದ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ. ಇದಿನಬ್ಬ ಸಾಹೀದ್ ಆರೋಪಿಯಾಗಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಗಿದ್ದೇನು:ಶಂಕರನಾರಾಯಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೆಬಲ್ ವಿಲ್ಪೇಡ್ ಡಿ’ಸೋಜಾ (50) ಅವರು ಸಮವಸ್ತ್ರದಲ್ಲಿ ಇತರ ಸಿಬ್ಬಂದಿಗಳ ಜೊತೆಗೆ ಕರ್ತವ್ಯದಲ್ಲಿದ್ದು ಕೋವಿಡ್ -19 ಮಾರ್ಗಸೂಚಿಯಂತೆ ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮಾಸ್ಕ್ ಧರಿಸದೇ ತಿರುಗಾಟ ಮಾಡುವವರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕಾರಿನಲ್ಲಿ 4 ಜನ ಪ್ರಯಾಣ ಮಾಡುತ್ತಿದ್ದನ್ನು ನೋಡಿ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಮಾಸ್ಕ್ ಧರಿಸದೆ ಪ್ರಯಾಣ ಮಾಡುತ್ತಿದ್ದ ಬಗ್ಗೆ ವಿಚಾರಿಸುತ್ತಿರುವಾಗ ಕಾರಿನ ಚಾಲಕ ಆರೋಪಿ ಇದಿನಬ್ಬ ಸಾಹೀದ್ ಕಾರಿನಿಂದ ಇಳಿದು ಬಂದು ಹೆಡ್ ಕಾನ್ಸ್ಟೆಬಲ್ ವಿಲ್ಪೇಡ್ ಡಿ’ಸೋಜಾ ಮೈ ಮೇಲೆ ಬಿದ್ದು ಕೈಯಿಂದ ಬೆನ್ನಿಗೆ ಹಾಗೂ ಕಪಾಳಕ್ಕೆ ಹೊಡೆದು ಹಲ್ಲೆಮಾಡಿ ಸಮವಸ್ತ್ರವನ್ನು ಹರಿದು ಹಾಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗುವಂತೆ ಬೈಂದೂರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆ ರಮೇಶ್ ಗಾಣಿಗ, ಗ್ರಾಮ ಪಂಚಾಯತ್ ಸದಸ್ಯ ಕೆ ಪ್ರಕಾಶ್ ಪೂಜಾರಿ, ಕಾಂಗ್ರೆಸ್ ಮುಖಂಡ ವಾಸುದೇವ್ ಯಡಿಯಾಳ, ಚಂದ್ರ ಬಳೆಗಾರ, ವಾಸು ಮೊಗವೀರ, ನಾರಾಯಣ ಶೆಟ್ಟಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕೆ. ರಮೇಶ್ ಗಾಣಿಗ ಕುಟುಂಬದವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಒಂದು ಹೊತ್ತಿನ ಅನ್ನದಾನ ಸೇವೆಯನ್ನು ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್‌ನ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಇಲ್ಲಿನ ಸ.ವಿ. ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ರೋಟರಿಯ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದ ರೋಟರಿ ಜಿಲ್ಲೆ ೩೧೮೨ ವಲಯ ೧ರ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ್ ಶೆಟ್ಟಿ, ರೋಟರಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದೆ. ರೋಟರಿ ಸದಸ್ಯರು ನಿಸ್ವಾರ್ಥವಾಗಿ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಆಯಾ ಪ್ರದೇಶದ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಅನೇಕ ಉತ್ತಮ ಸೇವೆಗಳ ಮೂಲಕ ಉತ್ತಮ ಹೆಸರು ಪಡೆದುಕೊಂಡಿರುವ ಗಂಗೊಳ್ಳಿ ರೋಟರಿ ಸಂಸ್ಥೆ ರೋಟರಿಯ ಧ್ಯೇಯೋದ್ದೇಶಗಳಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ನೂತನ ಅಧ್ಯಕ್ಷ ರಾಜೇಶ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಸಂಚಾಲಕ ಎಸ್.ನಿತ್ಯಾನಂದ ಪೈ ಮತ್ತು ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಶುಭಾಶಂಸನೆಗೈದರು. ಇದೇ ಸಂದರ್ಭ ಪ್ರಸಕ್ತ ಸಾಲಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜದ ಒಳಿತು ಕೆಡುಕುಗಳ ವಿಮರ್ಶೆ ಮಾಡಿ ಒಳಿತನ್ನು ಸ್ವೀಕರಿಸುವ ಪ್ರಬುದ್ಧ ಮನಸ್ಸುಗಳ ನಿರ್ಮಾಣ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಜ್ಞಾನ ಭೀಕ್ಷಾ ಪಾದಯಾತ್ರೆಯ ವಿವೇಕಾನಂದ ಹೆಚ್. ಕೆ. ಹೇಳಿದರು. ಅವರು, ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲಾ ಘಟಕ ಇದರ ಸಹಯೋಗದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದರು. ಶಾಲಾ ವಾಚನಾಲಯ ಸಂದರ್ಶಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಣಾಕರ ಶೆಟ್ಟಿ, ರತ್ತುಬಾಯ್ ಜನತಾ ಪ್ರೌಢ ಶಾಲೆ ಮುಖ್ಯ ಉಪಾಧ್ಯಯರಾದ ಮಂಜು ಕಾಳವಾರ, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರವೀಂದ್ರ ಪಿ, ನಿವೃತ್ತ ಶಿಕ್ಷಕರಾದ ತಿಮ್ಮಪ್ಪಯ್ಯ ಜಿ. ಕಲಾವಿದರಾದ ಗಿರೀಶ್ ಬೈಂದೂರು, ಮಾರುತಿ, ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದ್ಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿ ಕ್ಷಕಿ ಮುಕ್ತಾ ಪಿ. ಸ್ವಾಗತಿಸಿದರು. ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲಾ ಘಟಕದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯ ಸಮೀಪದ ಹೊಳೆದಂಡೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವೊಂದು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉಪ್ಪುಂದ ಕರ್ಕಿಕಳಿ ವಿಶ್ವನಾಥ ಖಾರ್ವಿ ಅವರ ಪುತ್ರ ಸರ್ವದ (2 ವರ್ಷ 1 ತಿಂಗಳು) ಮೃತ ದುರ್ದೈವಿ. ಸೋಮವಾರ ಮಧ್ಯಾಹ್ನ 3:30ರ ವೇಳೆಗೆ ವಿಶ್ವನಾಥ ಖಾರ್ವಿ ಅವರು ಮನೆಯ ಕೋಣೆಯಲ್ಲಿ ಮಗುವನ್ನು ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಮಗುವಿನ ತಾಯಿ ಬೇರೆ ಕೆಲಸದಲ್ಲಿ ನಿರತರಾಗಿದ್ದರು. ಸುಮಾರು 4 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಕೋಣೆಯಲ್ಲಿ ಮಲಗಿದ್ದ ಮಗು ಎದ್ದು, ಯಾರ ಗಮನಕ್ಕೂ ಬಾರದಂತೆ ಮನೆಯ ಸಮೀಪ ಹರಿಯುವ ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಹೋಗಿತ್ತು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದೆ. ಮೃತದೇಹವು ತೇಲಿಕೊಂಡು ಹೋಗಿ ಎಡಮಾವಿನ ಹೊಳೆಯು ಸಮುದ್ರವನ್ನು ಸೇರುವ ಉಪ್ಪುಂದ-ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ನೀರಿನಲ್ಲಿ ದೊರೆತಿರುವುದಾಗಿ ವರದಿಯಾಗಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಸನಾತನ ಹಿಂದು ಧರ್ಮದಲ್ಲಿ ಗುರುಪೂರ್ಣಿಮೆಗೆ ವಿಶೇಷ ಮಹತ್ವದ ಸ್ಥಾನವಿದೆ. ಗುರುಗಳ ಆಶೀರ್ವಾದವಿಲ್ಲದೆ ಯಾರೂ ಕೂಡ ಜೀವದಲ್ಲಿ ಯಶಸ್ವಿಯಾಗಲಾರರು ಎಂದು ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಅರುಣ್ ಕುಮಾರ್ ಜಿ.ಟಿ. ಹೇಳಿದರು. ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಸಭಾಭವನದಲ್ಲಿ ಗುರುಪೂರ್ಣಿಮೆ ಅಂಗವಾಗಿ ಜರಗಿದ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಜಿ.ಈಶ್ವರ, ಅರ್ಚಕ ಶಿವ ಜಿ.ಟಿ., ಮಹೇಶ ಜಿ.ಡಿ., ನರಸಿಂಹ ಕೆ., ರಾಘವೇಂದ್ರ ಜಿ.ಟಿ., ಚೇತನ್ ಮತ್ತಿತರರು ಉಪಸ್ಥಿತರಿದ್ದರು. ಅರುಣ್ ಕುಮಾರ್ ಜಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಕಾಂತ ಎನ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Read More