Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಪುನಃಪ್ರತಿಷ್ಠೆ ಹಾಗೂ ಅಷ್ಟಬಂಧ ಸಹಸ್ರ ಕಲಶ, ಬ್ರಹ್ಮಕುಂಬಾಭಿಷೇಕ ಹಾಗೂ ಮಹಾ ಅನ್ನಸಂತರ್ಪಣೆಗೆ ಕಾರ್ಯಕ್ರಮ ಮಾಚ್ 27ರಿಂದ ಎಪ್ರಿಲ್ 04ರ ತನಕ ಜರುಗಲಿದ್ದು, ಪೂರ್ವಭಾವಿಯಾಗಿ ಬುಧವಾರ ದೇವಳದ ವಠಾರದಲ್ಲಿ ಚಪ್ಪರ ಮುಹೂರ್ತ ಜರುಗಿತು. ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ, ಅರ್ಚಕರುಗಳಾಗ ಗಣಪಯ್ಯ ಹಾಗೂ ವೆಂಕಟಾಚಲ ಮಯ್ಯ ಅವರ ಮಾರ್ಗದರ್ಶನದಲ್ಲಿ ಚಪ್ಪರ ಮೂಹೂರ್ತ ಕಾರ್ಯ ನಡೆಯಿತು. ಈ ಸಂದರ್ಭ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಚಂದ್ರಶೇಖರ ಶೆಟ್ಟಿ ಕಳವಾಡಿ, ಕೆ. ವಸಂತ ಕುಮಾರ್ ಶೆಟ್ಟಿ ಕಾರಿಕಟ್ಟೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ದಿವಾಕರ ಹೆಗ್ಡೆ ಕಳವಾಡಿ, ಕಾರ್ಯದರ್ಶಿ ಸಂಜೀವ ಆಚಾರ್ಯ, ಉತ್ಸವ ಸಮಿತಿ ಅಧ್ಯಕ್ಷರಾದ ಹೆಚ್. ವಸಂತ ಹೆಗ್ಡೆ ಕಳವಾಡಿ, ದೇವಳದ ಟ್ರಸ್ಟೀಗಳಾದ ಎಸ್. ರಾಜು ಪೂಜಾರಿ ಯಡ್ತರೆ, ರಾಮ ಮೊಗವೀರ ಕಳವಾಡಿ, ಸೀತಾರಾಮ ಕೊಠಾರಿ, ಸುಬ್ಬಣ್ಣ ಶೆಟ್ಟಿ ಸಣ್ಮನೆ, ನಾಗಯ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2019 ರಿಂದ ಡಿಸೆಂಬರ್ 2019 ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕೃತಿಗಳ ಪ್ರಕಾಶಕರು/ ಮುದ್ರಕರು/ ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು -2019 ಬಹುಮಾನವನ್ನು ನೀಡಲಾಗುವುದು. ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಏಪ್ರಿಲ್ 4 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು ಇಲ್ಲಿಗೆ ಕಳುಹಿಸಬೇಕು. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಬೆಂಗಳೂರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಶ್ರೀ ಶಾರದಾ ಕನ್‌ಸೆಲ್ಟೆನ್ಸಿ ಸರ್ವಿಸಸ್, ಆದಾಯ ತೆರಿಗೆ ಪಾನ್ ಕಾರ್ಡ್ ಸೆಂಟರ್, ಕುಂದಾಪುರ ಇದರ ವತಿಯಿಂದ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಪಾನ್ ಕಾರ್ಡ್ ಮೇಳ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಶ್ರೀ ಶಾರದಾ ಕನ್‌ಸೆಲ್ಟೆನ್ಸಿ ಸರ್ವಿಸ್‌ನ ನರ್ಮದಾ ಎಸ್. ಪ್ರಭು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯು ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಮಂಗಳವಾರ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪೂರ್ಣಪ್ರಜ್ಞಾ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ, ತುಳುನಾಡಿನ ಶಾಸನಗಳ ಮಹತ್ವ ಎಂಬ ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ತುಳುನಾಡಿನ ಇತಿಹಾಸ, ಇಲ್ಲಿನ ರಾಜವಂಶಗಳು, ಅವರ ಕಾಲದಲ್ಲಿ ರಚಿತವಾದ ಶಾಸನಗಳ ಕುರಿತ ವಿಚಾರಗಳನ್ನು ತಿಳಿಸುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಐತಿಹಾಸಿಕ ಸ್ಮಾರಕಗಳು ಹಾಗೂ ಶಾಸನಗಳ ರಕ್ಷಣೆ ವಿದ್ಯಾರ್ಥಿಗಳ ಹೊಣೆಯಾಗಿರಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಘು ನಾಯ್ಕ, ಪ್ರಾಧ್ಯಾಪಕರಾದ ಡಾ. ಅಶ್ವತ್ಥ ನಾಯ್ಕ, ಶಿವಕುಮಾರ್, ನಾಗರಾಜ ಶೆಟ್ಟಿ, ಲತಾ ಪೂಜಾರಿ ಹಾಗೂ ಶಿವಯ್ಯ ಗೌಡ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಮೋಹನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಮೇಘನ ನಿರೂಪಿಸಿದರು. ಅನುಷಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಪತ್ರಿಕೋದ್ಯಮ ವಿದ್ಯಾರ್ಥಿಗಳು ತಮ್ಮಜ್ಞಾನದ ಪರಿಧಿಯನ್ನು ಒಂದೇ ವಿಷಯಕ್ಕೆ ಸೀಮಿತವಾಗಿಸದೇ ಎಲ್ಲ ವಿಚಾರಗಳನ್ನು ಅರಿಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕ ಡಾ. ಗಣೇಶ್ ಅಮೀನ್‌ಗಡ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಅಲಂಗಾರಿನ ಪಂಡಿತ್ ರೆಸಾರ್ಟ್‌ನಲ್ಲಿ ಆಯೋಜಿಸಲಾದ ಒಂದು ದಿನದ ಬರಹ ಕೌಶಲ ಕಾರ್ಯಗಾರದಲ್ಲಿ ಮಾತನಾಡಿದರು. ಸತತ ಓದು ಹಾಗೂ ಜಿಜ್ಞಾಸೆಯ ಮನೋಭಾವದಿಂದ ಬರವಣಿಗೆ ಸಾಧ್ಯ. ಪ್ರತಿಯೊಬ್ಬರೂ ತಮ್ಮದೇ ಶೈಲಿಯ ಬರವಣಿಗೆ ಬೆಳೆಸಿಕೊಳ್ಳಬೇಕು. ವಿವಿಧ ಪತ್ರಿಕೆಯ ಅಂಕಣಗಳಿಗೆ ತಮ್ಮ ಬರಹಗಳನ್ನು ಕಳುಹಿಸಬೇಕು. ಆಗ ಮಾತ್ರ ಪತ್ರಿಕೋದ್ಯಮದಲ್ಲಿ ತಮ್ಮ ಛಾಪನ್ನು ಮೂಡಿಸಬಹುದು. ಓದುಗನನ್ನು ಓದಿಸಿಕೊಂಡು ಹೋಗುವಂತಹ ಬರವಣಿಗೆ ರೂಢಿಸಿಕೊಂಡಾಗ ಮಾತ್ರ ಉತ್ತಮ ಬರಹಗಾರನಾಗಲು ಸಾಧ್ಯ ಎಂದರು. ರೆಸಾರ್ಟ್‌ನ ಸುತ್ತಮುತ್ತಲಿರುವ ಪರಿಸರದಲ್ಲಿರುವ ವಿಷಯಗಳ ಕುರಿತು ತಮ್ಮದೇ ಶೈಲಿಯಲ್ಲಿ ಬರೆಯುವ ಪ್ರಾಯೋಗಿಕ ಚಟುವಟಿಕೆ ನಡೆಸಲಾಯಿತು. ಆರ್ಗನ್ ಡೊನೇಶನ್ ಇಂಡಿಯಾ ಫೌಂಡೇಶನ್‌ನ ಅಧ್ಯಕ್ಷ ಲಾಲ್‌ಗೋಯಲ್ ವಿದ್ಯಾರ್ಥಿಗಳಿಗೆ ಅಂಗದಾನದ ಮಹತ್ವ ತಿಳಿಸಿದರು. ಪತ್ರಿಕೋದ್ಯಮ ವಿದ್ಯಾರ್ಥಿಗಳು ಅಂಗದಾನದ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪರಿಸರ ಮಾಲಿನ್ಯ ಕಡಿಮೆಗೊಳಿಸಲು ಏಪ್ರಿಲ್ 1 ರಿಂದ ಭಾರತ್ ಸ್ಟೇಜ್-6 (ಬಿಎಸ್-6) ವಾಹನಗಳನ್ನು ಮಾತ್ರ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಸರ್ವೋಚ್ಚ ನ್ಯಾಯಾಲಯ ಹಾಗೂ ಸಾರಿಗೆ ಆಯುಕ್ತರ ಆದೇಶದನ್ವಯ ಏಪ್ರಿಲ್ 1 ರಿಂದ ಭಾರತ್ ಸ್ಟೇಜ್-4 (ಬಿಎಸ್-4) ಮಾಪನದ ವಾಹನ ಮಾರಾಟ ಹಾಗೂ ನೋಂದಣಿ ಮಾಡುವಂತಿಲ್ಲ. ಬಿಎಸ್-4 ಮಾಪನದ ವಾಹನಗಳನ್ನು ಖರೀದಿಸಿ, ಇದುವರೆಗೂ ನೋಂದಣಿ ಮಾಡಿಸಿಕೊಳ್ಳದೇ ಇರುವವರು, ವಾಹನಗಳ ದಾಖಲೆಗಳನ್ನು ಸಲ್ಲಿಸಿ ಮಾರ್ಚ್ 31 ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಜಿಲ್ಲೆಯ ಹಲವು ಜೆಸಿಬಿ ಎಕ್ಸವೇಟರ್, ಕ್ರೇನ್ ಹಾಗೂ ಇನ್ನಿತರ ಸಾರಿಗೆ / ಖಾಸಗಿ ವಾಹನಗಳು ಇದುವರೆಗೂ ನೋಂದಾಯಿಸದೇ ಇರುವುದು ಗಮನಕ್ಕೆ ಬಂದಿದ್ದು, ಅಂತಹ ವಾಹನಗಳ ಮಾಲೀಕರು, ತಮ್ಮ ವಾಹನಗಳ ದಾಖಲಾತಿ ಸಲ್ಲಿಸಿ, ಮಾರ್ಚ್ 31 ರ ಒಳಗೆ ನೋಂದಾಯಿಸಿಕೊಳ್ಳಬೇಕು. ಏಪ್ರಿಲ್ 1 ರಿಂದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭಾರತ್ ಸ್ಟೇಜ್-6 (ಬಿಎಸ್-6) ವಾಹನಗಳನ್ನು ಮಾತ್ರ ನೋಂದಣಿ ಮಾಡಲಾಗುವುದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 13028 ರೆಗ್ಯೂಲರ್, 484 ರೆಗ್ಯೂಲರ್ ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು 14034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿಭದ್ರತೆಯಲ್ಲಿ, ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಪರೀಕ್ಷಾ ಸಿದ್ದತೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಯಾವುದೇ ಲೋಪಗಳಿಲ್ಲದಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೇಂಜರ್ಸ್ ಘಟಕದ ಆಶ್ರಯದಲ್ಲಿ ಒಂದು ದಿನದ ಹೊರಾಂಗಣ ಕಾರ್ಯಕ್ರಮ ನಡೆಯಿತು. ರೇಂಜರ್ಸ್ ಘಟಕದ ಸುಮಾರು 28 ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿಗಳನ್ನು ನೆಡುವುದರ ಮೂಲಕ ಶಾಲಾ ಕೈತೋಟ ನಿರ್ಮಾಣ, ಶಾಲಾ ಪರಿಸರದ ಸ್ವಚ್ಛತೆ ಮುಂತಾದ ಕಾರ್ಯಕ್ರಮಗಳಲ್ಲಿ ಶ್ರಮದಾನ ಮಾಡಿದರು ಹಾಗೂ ಅಲ್ಲಿನ ವಿಶೇಷ ಮಕ್ಕಳ ಕುರಿತಾದ ಮಾಹಿತಿಯನ್ನು ಪಡೆದರು. ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು, ಗೌರವ ಶಿಕ್ಷಕಿ ಮನೋರಮ, ರೇಂಜರ್ಸ್ ಘಟಕದ ಲೀಡರ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜ್ಯೋತಿ ಪ್ರಸನ್ನ ಹಾಗೂ ಶಾಲೆಯ ಇತರ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾಲೇಜಿನ ವಾಣಿಜ್ಯ – ನಿರ್ವಹಣಾ ಸಂಘ ಮತ್ತು ಉದ್ಯಮಶೀಲತೆ ಕೇಂದ್ರದ ವತಿಯಿಂದ ಕೈಗಾರಿಕಾ ಭೇಟಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಇರುವ ಏಸ್ ಬಾಂಡ್ ಕಂಪೆನಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು. ಅದೇ ವೇಳೆಯಲ್ಲಿ ಏಸ್ ಬಾಂಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸಂದೀಪ್ ಅವರು ಕಂಪೆನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ವೀಣಾ ಭಟ್ ಮತ್ತು ಸ್ವಸ್ತಿ ಆರ್. ಶೆಟ್ಟಿ, ಉದ್ಯಮಶೀಲತೆ ಕೇಂದ್ರದ ಸಂಯೋಜಕರಾದ ಯೋಗೀಶ್ ಶಾನುಭೋಗ್ ಮತ್ತು ಧನಶ್ರೀ ಎಮ್. ಕಿಣಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.

Read More