ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಂಪಾರು ಗ್ರಾಮದ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಹಯೋಗದಲ್ಲಿ ಚಿಗುರು ಮಿಡ್ ಬ್ರೈನ್ ಆಕ್ಟಿವೇಶನ್ ಅಕಾಡೆಮಿ ವತಿಯಿಂದ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ಗಾಂಧಾರಿ ವಿದ್ಯೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಶನಿವಾರದಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕರಾದ ಕೋಟೆಬೆಟ್ಟು ಸುರೇಂದ್ರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಟ್ರಸ್ಟ್‌ನ ಖಜಾಂಚಿ ಹಾಗೂ ಶಾಲಾ ಶೈಕ್ಷಣಿಕ ಸಂಚಾಲಕರು, ರೋಟರಿ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕೊಡ್ಲಾಡಿ, ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಹಾಗೂ ಚಿಗುರು ಮಿಡ್ ಬ್ರೈನ್ ಆಕ್ಟಿವೇಶನ್ ಅಕಾಡೆಮಿಯ ಸಂಸ್ಥಾಪಕರಾದ ಮಹೇಶ್ ಮತ್ತು ದಿವ್ಯಶ್ರೀ ಮಹೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಧನ್ವಿ ಹಾಗೂ ಪ್ರಣಮ್ಯ ಪ್ರಾರ್ಥನೆಗೈದು ಕಾರ್ಯಕ್ರಮಕ್ಕೆ ಶುಭಾರಂಭ ಮಾಡಿದರು. ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಸಭಿಕರನ್ನು ಸ್ವಾಗತಿಸಿ, ಗ್ರಾಮೀಣ ಭಾಗದ ಮಕ್ಕಳಿಗಾಗಿ ಇಂತಹ ಅಪೂರ್ವ ಅವಕಾಶವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘ-ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಅತ್ಯಂತ ಪ್ರಶಂಸನೀಯ ಕಾರ್ಯ ಎಂದು ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮೂಡುಗಿಳಿಯಾರಿನಲ್ಲಿ ಗಿಳಿಯಾರು ಯುವಕ ಮಂಡಲ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಿಳಿಯಾರು ಯುವಕ ಮಂಡಲ ತನ್ನೂರಿನ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಶ್ರಮಿಸುತ್ತಿವುದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ವಾರ್ಷಿಕೋತ್ಸವ ಅಥವಾ ದಶಮಾನೋತ್ಸವ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ಆಚರಿಸುವುದರ ಮೂಲಕ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಸತತ ಹತ್ತು ವರ್ಷ ಸೇವೆ ಸಲ್ಲಿಸಿದ ಏಳು ಸೇವಾಧ್ಯಕ್ಷರಿಗೆ ಪುಷ್ಭ ನೀಡಿ ಗೌರವಿಸಲಾಯಿತು. ಗಿಳಿಯಾರು ಯುವಕ ಮಂಡಲದ ದಶಮ ಸಂಭ್ರಮದ ಪುರಸ್ಕಾರವನ್ನು ಸಮಾಜಸೇವಕ ರವಿ ಕಟಪಾಡಿ ಇವರಿಗೆ ನೀಡಲಾಯಿತು . ಸಭಾಧ್ಯಕ್ಷತೆಯನ್ನು ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ಸುಭಾಷ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ನ್ಯೂ ಕರ್ನಾಟಕ ಬಿಲ್ಡಸ್೯ ಮಾಲಿಕ ಚೇತನ್ ಕುಮಾರ್ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಮುಕ್ತೇಸರ ಮಹಾಬಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಫೈನಲ್‌ನಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ತಂಡವನ್ನು ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ವಿಜೇತ ತಂಡದ ಪಲ್ಲವಿ ಉತ್ತಮ ಬ್ಯಾಟರ್, ನಳಿನಾಕ್ಷಿ ಉತ್ತಮ ವಿಕೆಟ್ ಕೀಪರ್ ಮತ್ತು ಕೃಪಾ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವರ ಸನ್ನಿಧಿಯಲ್ಲಿ ಅಧಿಕ ಜ್ಯೇಷ್ಠ ಮಾಸದ ಪ್ರಯುಕ್ತ ವಿಶೇಷವಾಗಿ ಹಮ್ಮಿಕೊಂಡಿದ್ದ ಸಹಸ್ರ ಪ್ರದಕ್ಷಿಣ ನಮಸ್ಕಾರ ಕಾರ್ಯಕ್ರಮಕ್ಕೆ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಿ. ಚಂದ್ರಶೇಖರ ಉಪಾಧ್ಯ ಚಾಲನೆ ನೀಡಿದರು. ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ನಡೆಯುತ್ತಿರುವ ಈ ಸಹಸ್ರ ಪ್ರದಕ್ಷಿಣ ನಮಸ್ಕಾರ ದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ, ಪ್ರಧಾನ ಅರ್ಚಕ ಪಿ. ಜನಾರ್ದನ ಅಡಿಗ, ಬ್ರಾಹ್ಮಣ ಮಹಾಸಭಾದ ಗೌರವಾಧ್ಯಕ್ಷ ಯಂ.ಶಿವರಾಮ ಉಡುಪ, ಅಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಉಪಾಧ್ಯಕ್ಷ ಸಿ ಸುಬ್ರಾಯ ಉರಾಳ, ಕೋಶಾಧಿಕಾರಿ ನಾಗರಾಜ ಉಪಾಧ್ಯ,ಶ್ರೀ ದೇವಳದ ಸಿಬ್ಬಂದಿಗಳು, ವಲಯದ ಹೆಚ್ಚಿನ ಮಹಿಳಾ ಸದಸ್ಯರು , ಗ್ರಾಮ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭಾದ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಕಾರ್ಯಕ್ರಮದ ಔಚಿತ್ಯದ ಕುರಿತು ಮಾಹಿತಿ ನೀಡಿ, ಅಧಿಕ ಜ್ಯೇಷ್ಠ ಮಾಸದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ 2026–27ನೇ ಶೈಕ್ಷಣಿಕ ವರ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಬಿ.ಕಾಂ. ಜೊತೆ ಸಿಎ, ಸಿಎಸ್, ಸಿಎಂಎ ಅಧ್ಯಯನ ನಡೆಸಲಿರುವ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಉಡುಪಿಯ ವಿ-ರೀಚ್ ಅಕಾಡೆಮಿಯ ಸಂಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿಗಧಿಪಡಿಸಿ, ದೃಢಸಂಕಲ್ಪ ಮತ್ತು ಶ್ರಮದ ಮೂಲಕ ಸಾಧನೆಯತ್ತ ಮುನ್ನಡೆಯಬೇಕು. ಪರಿಶ್ರಮ, ಸಮಯ ನಿರ್ವಹಣೆ, ದೃಢ ಸಂಕಲ್ಪ ಯಶಸ್ಸಿನ ಮೂಲ ಮಂತ್ರ ಎಂದರು. ಇದೇ ಸಂದರ್ಭ ಅವರು ಭವಿಷ್ಯದ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಸಿಎ, ಸಿಎಸ್, ಸಿಎಂಎ ಮುಂತಾದ ವೃತ್ತಿಪರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗಾವಕಾಶಗಳು ಲಭಿಸಲಿದ್ದು, ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರ ಡಾ. ಚೇತನ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಸಿದ್ದಾಪುರ – ಶಿವಮೊಗ್ಗ ಜಿಲ್ಲಾ ರಸ್ತೆ ಪಕ್ಕದಲ್ಲಿ ಚಿರತೆಯೊಂದನ್ನು ಕೊಂದು ಬಿಸಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಫೆ.04ರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯಡಮೊಗೆಯ ಮಂಜುನಾಥ ಶೆಟ್ಟಿ ಎಂಬುವವರನ್ನು ಮಾ.21ರಂದು ದಸ್ತಗಿರಿ ಮಾಡಿ, ಪ್ರಕರಣದ ಬಗ್ಗೆಬಅವರ ಹೇಳಿಕೆಯಂತೆ ಎ1 ಆರೋಪಿ ಕಂಡ್ಲೂರಿನ ಮಹಮ್ಮದ್ ನದೀಮ್ ಕರಾಣಿ, ಎ5 ಆರೋಪಿ ಹನೆಬಚ್ಚಲು ನಾಗರಾಜ ಭೋವಿ, ಎ6 ಆರೋಪಿ ಹನೆಬಚ್ಚಲು ವೆಂಕಟರಮಣ ಭೋವಿ ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಪ್ರಕರಣದಲ್ಲಿ ಬಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಬಾಗಿಯಾದ ಆರೋಪಿತರಿಂದ ಚಿರತೆಯ ಕಳವಾದ 4 ಕಾಲಿನ ಉಗುರು ಹಾಗು ಮೂಳೆಯ ಬಿಡಿ ಭಾಗಗಳು, ಬಂದೂಕು-01, ಜೀವಂತ ಗುಂಡುಗಳು-05, 02 ಮೋಟಾರ್ ಬೈಕುಗಳು ಹಾಗೂ ಇತರ ಸೊತ್ತುಗಳನ್ನು ಸರಕಾರದ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ರಿ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಸ್ತು, ಸುಸಂಸ್ಕೃತ ನಡವಳಿಕೆ ಮೂಲಕ ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಎತ್ತಿ ಹಿಡಿಯಬೇಕು ಮತ್ತು ಹಿರಿಯವರು ಹಾಕಿಕೊಟ್ಟ ಮಾರ್ಗವನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಚಲಿತದಲ್ಲಿ ಸಿಗುವಂತಹ ಅವಕಾಶಗಳ ಸದ್ಬಳಕೆ ಮಾಡಿ ಕೌಶಲ, ಪ್ರತಿಭೆ ಮತ್ತು ನಿಷ್ಠೆಯನ್ನು ಉದ್ದೀಪನಗೊಳಿಸುವುದರಿಂದ ವಿದ್ಯೆಯ ವರ್ಚಸ್ಸು ಅಧಿಕವಾಗುತ್ತದೆ ಎಂದು ರಾಜಗೋಪಾಲ ಆಚಾರ್ಯ ರಥ ಶಿಲ್ಪಿಗಳು ಕೋಟೇಶ್ವರ ಹೇಳಿದರು. ಅವರು ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರತಿಭಾ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಾ ಸ್ಪರ್ಧೆ ಸಿಂಚನ ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ಧ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಭವಿಷ್ಯದ ಪಯಣದಲ್ಲಿ ಉನ್ನತ ಶಿಖರ ಮುಟ್ಟಬೇಕು ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕ ನಾಗರಾಜ ಯು., ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿ ಪ್ರತಿನಿಧಿಗಳಾದ ವೈಷ್ಣವಿ ಮತ್ತು ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಸುಮಶ್ರೀ, ಉಪನ್ಯಾಸಕರು ಕುಂದಾಪುರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಮಾನ ಅವಕಾಶ ಘಟಕದ ಆಶ್ರಯದಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಗುರುವಾರದಂದು ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಕುಲಾಲ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ, ಮೂಲಭೂತ ಹಕ್ಕುಗಳು, ವಿದ್ಯಾರ್ಥಿವೇತನಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ಸರ್ಕಾರಿ ಉದ್ಯೋಗಾವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ವಿದ್ಯಾರ್ಥಿಗಳು ತಮ್ಮ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯತೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಸಂವಿಧಾನಾತ್ಮಕ ಮೌಲ್ಯಗಳನ್ನು ರೂಢಿಸಿಕೊಂಡು, ವಿಶ್ವಾತ್ಮಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಿ ಎಂದರು. ಸಮಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಸತಿ ಹಾಗೂ ಬಹುಮಹಡಿ ವಸತಿ ಸಮುಚ್ಛಯಗಳು ಕೊಳಚೆ ಹಾಗೂ ತ್ಯಾಜ್ಯ ನೀರುಗಳನ್ನು ಶುದ್ದೀಕರಣ ನಿರ್ವಹಣೆ ಮಾಡದೇ ತೋಡುಗಳ ಮೂಲಕ ನದಿಗೆ ಬಿಟ್ಟು ಜಲಮಾಲಿನ್ಯ ಉಂಟುಮಾಡಿದರೆ ಅಂತಹ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಲತ್ಯಾಜ್ಯ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಸತಿ ಸಮುಚ್ಛಯಗಳು, ತ್ಯಾಜ್ಯ ನಿರ್ವಹಣಾ ಘಟಕಗಳ ಇರುವಿಕೆ, ಅವುಗಳ ನಿರ್ವಹಣೆ, ತ್ಯಾಜ್ಯ ನಿರ್ವಹಣಾ ಘಟಕ ಇಲ್ಲದೇ ಇರುವುದು, ಕಲುಷಿತ ನೀರುಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡದೇ ತೋಡುಗಳಿಗೆ ಬಿಟ್ಟು ಇಂದ್ರಾಳಿ ನದಿ ಮೂಲಗಳಿಗೆ ಬಿಡುವುದರ ಬಗ್ಗೆ ಸವಿಸ್ತಾರವಾದ ಸರ್ವೇ ಕಾರ್ಯಗಳನ್ನು ಎಂ.ಐ.ಟಿ ಸಂಸ್ಥೆಯ ವತಿಯಿಂದ ಕೈಗೊಂಡಿದ್ದು, ಕೆಲವು ವಸತಿ ಹಾಗೂ ಸಮುಚ್ಛಯಗಳು ನೇರವಾಗಿ ನದಿಗೆ ಬಿಡುತ್ತಿರುವ ಬಗ್ಗೆ ಡ್ರೋನ್ ಸರ್ವೇಗಳಲ್ಲಿ ಕಂಡುಬಂದಿದೆ. ಇವುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2025-26ನೇ ಸಾಲಿನ ಎಸ್.ಎಫ್.ಸಿ ಶೇ.5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಮೇ.28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
