ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಇಲಾಖೆ ವಿವಿಧ ಹಂತಗಳಲ್ಲಿ ನಡೆಸುತ್ತಿರುವ ವಾರ್ಷಿಕ ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು ಒರೆಗೆ ಹಚ್ಚಿ, ಬೆಳಕಿಗೆ ತಂದು ಬೆಳೆಸುವ ಉತ್ತಮ ಕಾರ್ಯಕ್ರಮ. ಅದರಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಧೈರ್ಯ, ಸ್ಥೈರ್ಯ, ಧೀಮಂತಿಕೆ ಬೆಳಸಿಕೊಳ್ಳುತ್ತಾರೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ನಾವುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಬೈಂದೂರು ವಲಯ ಮಟ್ಟದ ಎರಡು ದಿನಗಳ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ವಲಯದ ೧೮೦ ಶಾಲೆಗಳ ೧೫೦೦ ವಿದ್ಯಾರ್ಥಿಳು ಎರಡು ಸ್ಪರ್ಧಾ ಹಂತಗಳನ್ನು ದಾಟಿಬಂದು ಭಾಗವಹಿಸುವ ಈ ಕಾರ್ಯಕ್ರಮ ಕ್ಷೇತ್ರದ ನಿಜವಾದ ಪ್ರತಿಭಾ ಸಂಗಮ. ಈ ಮಕ್ಕಳು ಪ್ರಮಾಣಿಕ, ಕರ್ತವ್ಯನಿಷ್ಠ ಅಧ್ಯಾಪಕರ ಕೈಯಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ರೂಢಿಸಿಕೊಳ್ಳಬಹುದು. ಆ ನಿಟ್ಟಿನಲಿ ಅವರಿಗೆ ಮಾರ್ಗದರ್ಶನ ದೊರೆಯಲಿ ಎಂದು ಅವರು ಆಶಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ಆನಂದ ಜಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನೂತನವಾಗಿ ಅಸ್ತಿತ್ವಕ್ಕೆ ಬಂದ ಬೈಂದೂರು ತಾಲೂಕಿನಲ್ಲಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭಗೊಳ್ಳುತ್ತಿದ್ದು, ಅ.೩೧ರ ಶುಕ್ರವಾರ ಬೆಳಿಗ್ಗೆ ೧೦:೩೦ಕ್ಕೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶಪ್ರಸಾದ್ ಪಾಂಡೇಲು ವಹಿಸಿಕೊಳ್ಳಲಿದ್ದಾರೆ. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಸಂಘದ ಉದ್ಘಾಟನೆ ನೆರವೇರಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೆಬೆಟ್ಟು ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ► ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜನಾರ್ದನ ಮರವಂತೆ – https://kundapraa.com/?p=29630 .
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಸ್. ಜನಾರ್ದನ ಮರವಂತೆ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಎಸ್. ಅರುಣಕುಮಾರ್ ಶಿರೂರು, ಉಪಾಧ್ಯಕ್ಷರಾಗಿ ಉದಯ ಪಡಿಯಾರ್, ಅಂದುಕಾ ಎ.ಎಸ್, ಕೊಶಾಧಿಕಾರಿಯಾಗಿ ನರಸಿಂಹ ಬಿ. ನಾಯಕ್, ಸಂಘಟನಾ ಕಾರ್ಯದರ್ಶಿಯಾಗಿ ರಾಮ ಬಿಜೂರು, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುನಿಲ್ ಹೆಚ್. ಜಿ. ಬೈಂದೂರು, ಗಿರೀಶ್ ಶಿರೂರು, ಕೃಷ್ಣ ಬಿಜೂರು, ಸುಶಾಂತ್ ಬೈಂದೂರು, ಯೋಗೇಶ್ ಶಿರೂರು ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾರಿಕಾಂಬಾ ಯೂತ್ ಕ್ಲಬ್ (ಹವ್ಯಾಸಿ ಕಲಾತಂಡ) ಕಳವಾಡಿ ಬೈಂದೂರು, ಸುದ್ದಿ ಟಿವಿ, ಬೈಂದೂರು ವಲಯ ಅರಣ್ಯ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ನಿರಂತರ ಗಿಡ ನೆಡುವ ಅಭಿಯಾನ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ಮಯ್ಯಾಡಿ ಎಸ್.ಡಿ.ಎಮ್. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ನಿರಂತರ ಗಿಡ ನೆಡುವ ಅಭಿಯಾನವನ್ನು ಬೈಂದೂರು ವಲಯ ಅರಣ್ಯಾಧಿಕಾರಿ ಗೋವಿಂದ ಪಟಗಾರ್ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ, ಪರಿಸರ ದಿನಾಚರಣೆಯಂದು ಮಾತ್ರ ಗಿಡ ನೆಡುವ ಕಾರ್ಯಕ್ರಮ ನಡೆಯುತ್ತದೆ. ಇತ್ತಿಚೀನ ದಿನಗಳಲ್ಲಿ ವನಮಹೋತ್ಸವ ಎನ್ನುವುದು ಫ್ಯಾಶನ್ ಆಗಿದೆ. ಆದರೆ ಕಳವಾಡಿ-ಬೈಂದೂರು ಮಾರಿಕಾಂಬಾ ಯೂತ್ ಕ್ಲಬ್‌ನ ಸದಸ್ಯರು ನಿರಂತವಾಗಿ ಗಿಡ ನೆಡುವ ಕಾರ್ಯ ಬಹಳ ಶ್ಲಾಘನೀಯ ಎಂದರು. ಕಳವಾಡಿ-ಬೈಂದೂರು ಮಾರಿಕಾಂಬಾ ಯೂತ್ ಕ್ಲಬ್‌ನ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಸಿನಿಯರ್ ಸಿಟಿಜನ್ ಅಸೋಷಿಯೇಶನ್ ಅಧ್ಯಕ್ಷ ವಸಂತ ಹೆಗ್ಡೆ ಮಾತನಾಡಿ, ಪರಿಸರ ಸಂರಕ್ಷಣೆ ಕುರಿತು ಶಾಲೆ-ಕಾಲೇಜು ವಿದ್ಯಾರ್ಥಿಗಳಲ್ಲಿ ನಿರಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಕ್ರಮ ಗಣಿಗಾರಿಕೆ ಭೂ ಅತಿಕ್ರಮಣ ಪ್ರಕರಣಗಳ ಸಾಕ್ಷಿದಾರರಾಗಿದ್ದ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಜೊತೆಗಿದ್ದವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೈಂದೂರು ಕಾಲ್ತೋಡಿನ ಸಮೀಪದ ಹೇರಂಜಾಲು ಎಂಬಲ್ಲಿ ನಡೆದಿದೆ. ಕಾಲ್ತೋಡು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿರುವ ಜನಾರ್ಧನ ನಾಯಕ್ ಹಾಗೂ ಜೊತೆಗಿದ್ದ ಬಡಿಯ ಹಾಂಡ ಎಂಬುವರೇ ಗಂಭೀರ ಹಲ್ಲೆಗೊಳಗಾದವರು. 2017ರ ಅಕ್ಟೋಬರ್ನಲ್ಲಿ ಕಾಲ್ತೋಡಿನ ವಿಜಯ ಶೆಟ್ಟಿ ಎಂಬುವರ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧಿಸಿ ಎಸಿಬಿಗೆ ನೀಡಲಾಗಿದ್ದ ದೂರಿಗೆ ಹಲ್ಲೆಗೊಳಗಾಗಿರುವ ಜನಾರ್ಧನ ನಾಯಕ್ ಸಾಕ್ಷ್ಯ ನುಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಆರೋಪಿ ವಿಜಯ ಶೆಟ್ಟಿ ಜನಾರ್ಧನ ನಾಯಕ್ ಎಂಬುವರನ್ನು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಬೆದರಿಕೆ ಕರೆಯ ರೆಕಾರ್ಡನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಜನಾರ್ಧನ ನಾಯಕ್ ನೀಡಿದ್ದರು. ಆದರೆ ತನಿಖೆ ಮಂದಗತಿಯಲ್ಲಿ ಸಾಗುತ್ತಿದ್ದು ಬೆಂಗಳೂರಿನ ಎಸಿಬಿ ಅಧಿಕಾರಿಗಳು ನಾಲ್ಕು ದಿನದ ಹಿಂದೆ ಹೊಸಕೋಟೆ ಪ್ರದೇಶಕ್ಕೆ ಪರಿಶೀಲನೆ ನಡೆಸಲು ಆಗಮಿಸಿದ್ದರು. ಈ ಸಂದರ್ಭ ಸ್ಥಳದಲ್ಲಿದ್ದ ಬಡಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉದ್ಯಮ, ಸಾಮಾಜಿಕ , ಶೈಕ್ಷಣಿಕ ವಲಯದಲ್ಲಿ ಮಾಡಿದ ಸಾಧನೆಗಾಗಿ ಜೆಸಿಐ ಶಿರೂರು ಘಟಕದ ಸ್ಥಾಪಕ ಅಧ್ಯಕ್ಷ ಮೋಹನ್ ರೇವಣ್ಕರ್ ಅವರಿಗೆ ಪುತ್ತೂರಿನಲ್ಲಿ ನಡೆದ ವಲಯ ಹದಿನೈದರ ವ್ಯವಹಾರ ಪ್ರಗತಿ ಸಮ್ಮೇಳನದಲ್ಲಿ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ರಾಕೇಶ ಕುಂಜೂರು , ವಲಯ ಪೂರ್ವ ಅಧ್ಯಕ್ಷ ರಾಘವೇಂದ್ರ ಪ್ರಭು , ನಿಕಟಪೂರ್ವ ಅಧ್ಯಕ್ಷ ಸಂತೋಷ ಪೂಜಾರಿ, ಜೆಸಿಐ ಶಿರೂರು ಘಟಕದ ಅಧ್ಯಕ್ಷ ಪಾಂಡುರಂಗ ಅಳ್ವೆಗದ್ದೆ, ಪ್ರಸಾದ ಪ್ರಭು, ಗಿರೀಶ ಮೇಸ್ತ, ಕೃಷ್ಣಮೂರ್ತಿ ಶೇಟ್, ಮಾದೇವ ಪೂಜಾರಿ, ವಿನೋದ ಮೇಸ್ತ, ಕೃಷ್ಣ ಪೂಜಾರಿ ಇತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ಜರುಗಿತು. ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ರಾಖಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ, ಮುಖಂಡ ಎಸ್. ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಭಿಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಕಾಂಗ್ರೆಸ್ ಸದಸ್ಯರು ಬೈಂದೂರು ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ರಾಖಿ ಶುಭಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2017-18ನೇ ಸಾಲಿನಲ್ಲಿ 44.66 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಹಿಂದಿನ ಆರ್ಥಿಕ ವರ್ಷಗಳಿಗಿಂತ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಭಾನುವಾರ ಬೈಂದೂರಿನ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2017-18ನೇ ಸಾಲಿನಲ್ಲಿ ರೂ. 11.59 ಕೋಟಿ ಠೇವಣಿ ಹೊಂದಿದ್ದು 11.25 ಕೋಟಿ ಸಾಲ ನೀಡಿ ಆರ್ಥಿಕ ವರ್ಷದಲ್ಲಿ ಸುಮಾರು 43 ಕೋಟಿಯಷ್ಟು ವಹಿವಾಟು ನಡೆಸಿದೆ. ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಮುನ್ನಡೆಯುತ್ತಿದ್ದರೇ, ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತ್ತೀಚೆಗೆ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ಬಾಲಕರ ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ದೈಹಿಕ ಶಿಕ್ಷಕ ಪ್ರಣಯ್‌ಕುಮಾರ್ ಶೆಟ್ಟಿ ಮತ್ತು ಶಿಕ್ಷಕಿ ಜುನಿತಾ ಮಚಾದೋ ಅವರೊಂದಿಗೆ ವಿದ್ಯಾರ್ಥಿಗಳು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ನಡೆಯಿತು. ದೇವಸ್ಥಾನದ ಅರ್ಚಕ ಬಿ.ಕೃಷ್ಣಮೂರ್ತಿ ನಾವಡ ಇವರ ನೇತ್ರತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಶಿವರಾಮ ಪೂಜಾರಿ ಹಾಗೂ ಸದಸ್ಯರು ಹಾಜರಿದ್ದರು.
