ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಿ.ವಿ, ಮೊಬೈಲ್ ಮುಂತಾದ ಆಧುನಿಕ ಸಾಧನಗಳಿಂದಾಗಿ ಮಕ್ಕಳು ಆಟಕ್ಕೆ ಕುತ್ತು ಬಂದಿದೆ. ಆಟ ಆಡುವವರೇ ಇಲ್ಲದಂತಾಗಿದೆ. ಬಹಳಷ್ಟು ಮಕ್ಕಳಲ್ಲಿ ಏಕಾಗ್ರೆತೆ ಕೊರತೆ, ನಿರಾಸಕ್ತಿ ಕಂಡು ಬರುತ್ತಿದೆ ಎಂದು ಖ್ಯಾತ ಮನೋಶಾಸ್ತ್ರಜ್ಞ ಡಾ. ಪಿ. ವಿ ಭಂಡಾರಿ ಆಂತಕ ವ್ಯಕ್ತಪಡಿಸಿದರು. ಅವರು ಕುಂದಾಪುರದ ಕಲಾಮಂದಿರದಲ್ಲಿ ನಡೆದ ಕಾರ್ಟೂನು ಹಬ್ಬ ಮೊದಲ ದಿನ ಉದಯೋನ್ಮುಖ ವ್ಯಂಗ್ಯಚಿತ್ರಕಾರರಿಗಾಗಿ ಆಯೋಜಿಸಲಾಗಿದ್ದ ಕಾರ್ಟೂನು ಸ್ವರ್ಧೆ ಹಾಗೂ ಮಾಯಾ ಕಾಮತ್ ಸ್ಮರಣಾರ್ಥ ಆಯೋಜಿಸಲಾಗಿದ್ದ ಕಾರ್ಟೂನು ಸ್ವರ್ಧೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವ್ಯಂಗ್ಯಚಿತ್ರಕಾರ ರವಿರಾಜ್ ಹಾಲಂಬಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ. ರಶ್ಮಿ ಕುಂದಾಪುರ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ವಿಜಯ ಕರ್ನಾಟಕ ಪತ್ರಿಕೆಯ ಕಿರಿಯ ಸಹ ಸಂಪಾದಕಿ ಮೇರಿ ಜೋಸೆಫ್, ಹಟ್ಟಿಯಂಗಡಿ ಸಿದ್ದಿವಿನಾಯಕ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲರಾದ ಶರಣ್‌ಕುಮಾರ್, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಚೈತ್ರಾ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರ್ಟೂನಿಷ್ಠರಿಗೆ ವಿಶೇಷ ದೃಷ್ಠಿಕೋನವಿದೆ. ನಮಗೆ ಗೊತ್ತಿರುವುದು, ಗೊತ್ತಿಲ್ಲದ್ದು, ಒಳಿತು ಕೆಡುಕುಗಳನ್ನು ರೇಖೆಗಳ ಮೂಲಕ ತೋರಿಸುವ ಚಾಕಚಕ್ಯತೆ ಅವರಲ್ಲಿದೆ. ಸಮಾಜದ ಓರೆ ಕೋರೆಗಳನ್ನು ಚಿತ್ರಿಸಿ ದೇಶಕಟ್ಟುವ ಕೆಲಸದ ಅವರುಗಳ ಶ್ರಮ ವಿಶೇಷವಾದ್ದು ಎಂದು ತರಂಗ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ ಹೇಳಿದರು. ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ನೇತೃತ್ವದಲ್ಲಿ ಕುಂದಾಪುರ ಕಲಾಮಂದಿರಲ್ಲಿ ಆಯೋಜಿಸಲಾಗಿದ್ದ ಕಾರ್ಟೂನು ಹಬ್ಬ 2017 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪತ್ರಕರ್ತರ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ಮಾತನಾಡಿ ಕರಾವಳಿಯ ಮಣ್ಣಿಗೆ ಕಲೆಯ ಸೆಳೆತವಿದೆ. ಅದಕ್ಕೆ ತಕ್ಕಂತೆ ಪ್ರೋತ್ಸಾಹ ದೊರೆತರೆ ಅವರಲ್ಲಿನ ಪ್ರತಿಭೆ ಅನಾವರಣಗೊಳ್ಳುತ್ತದೆ. ಪೋರ್ಬ್ಸ್ ಪತ್ರಿಕೆಯಲ್ಲಿ ಕುಂದಾಪುರದ ಸತೀಶ್ ಆಚಾರ‍್ಯ ಅವರ ಹೆಸರು ಪ್ರಟಕವಾಗಿರುವುದೇ ಅವರ ಸಾಧನೆಯ ಮಟ್ಟವನ್ನು ತಿಳಿಸುತ್ತದೆ. ತಾನು ಬೆಳೆಯುವುದರೊಂದಿಗೆ ಇತರರನ್ನು ಬೆಳೆಸುವ ಅವರ ಗುಣ ಅವರನ್ನು ಈ ಮಟ್ಟಕ್ಕೆ ತಂದಿದೆ ಎಂದರು. ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದ, ಶಿಕ್ಷಕ ಮನು ಹಂದಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖಾಸಗಿ ಆಸ್ಪತ್ರೆಗೆ ಹಾಜರಾಗದ ವೈದ್ಯರು, ಬಾಗಿಲು ತೆರೆಯದ ಆಸ್ಪತ್ರೆ ಔಷಧಾಲಯ. ಸರ್ಕಾರಿ ಆಸ್ಪತ್ರೆಗೆ ಮುಗಿಬಿದ್ದ ರೋಗಿಗಳು. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಪರದಾಡಿದ ರೋಗಿಗಳು. ವೈದ್ಯರ ರಜೆ ಬೋರ್ಡ್, ವೈದ್ಯರ ಕೊಠಡಿಯಲ್ಲಿ ಖಾಲಿ ಕುರ್ಚಿ! ಇದು ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಗುರುವಾರ ಕಂಡು ಬಂದ ದೃಶ್ಯ. ಖಾಸಗಿ ಆಸ್ಪತ್ರೆ ನಿಯಂತ್ರಣ ಮಸೂದೆ ವಿರೋಧಿಸಿ ಖಾಸಗಿ ವೈದ್ಯರು ಸೇವೆ ಸ್ಥಗಿತಗೊಳಿಸಿ ಹೂಡಿದ್ದ ಮುಷ್ಕರದಿಂದಾಗಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಅನಿವಾರ್ಯ ಕಾರಣಗಳಿಂದ ಗೈರು ಹಿನ್ನೆಲೆಯಲ್ಲಿ ಆರೋಗ್ಯ ಸೇವೆಯ ಬಗ್ಗೆ ಕುಂದಾಪ್ರ ಡಾಟ್ ಕಾಂ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡುಬಂದ ಸಾಮಾನ್ಯ ದೃಶ್ಯ. ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಸರಕಾರಿ ಅಸ್ಪತ್ರೆ ವೈದ್ಯರು ಹಾಜರಾತಿ ಕಡ್ಡಾಯ ಎಂಬ ಆದೇಶ ಮಾಡಿದ್ದರೂ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ವೈದ್ಯರ ಅನುಪಸ್ಥಿತಿಯಲ್ಲಿ ರೋಗಿಗಳು ಪರದಾಡುವ ಸ್ಥಿತಿ ಕಂಡು ಬಂತು. ಕುಂದಾಪುರ ಸರ್ಕಾರಿ ಆಸ್ಪತ್ರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸಾಗರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಹಾಗೂ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯ ಮಟ್ಟದ ’ಉತ್ತಮ ಸಹಕಾರಿ’ ಪ್ರಶಸ್ತಿ ಲಭಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ 64ನೇ ಸಹಕಾರಿ ಸಪ್ತಾಹದ ಅಂಗವಾಗಿ ಸಹಕಾರಿ ಕ್ಷೇತ್ರದ ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಸಹಕಾರಿಗಳನ್ನು ಗುರುತಿಸಿ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪತ್ತಿನ ಸಹಕಾರ ಬ್ಯಾಂಕುಗಳ ವಿಭಾಗದಲ್ಲಿ ರಾಜು ಪೂಜಾರಿ ಅವರನ್ನು ಉತ್ತಮ ಸಹಕಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕಳೆದ 23 ವರ್ಷಗಳಿಂದ ಸಹಕಾರಿ ಕ್ಷೇತ್ರದ ವಿವಿಧ ಸಂಸ್ಥೆಗಳಲ್ಲಿ ಅವರು ಸಲ್ಲಿಸಿರುವ ಸೇವೆಯನ್ನು ಪ್ರಶಸ್ತಿಯ ಆಯ್ಕೆ ಸಮಿತಿ ಪರಿಗಣಿಸಿದೆ. ನ 17ರಂದು ಬಾಗಲಕೋಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ’೬೪ನೇಯ ಸಹಕಾರಿ ಸಪ್ತಾಹ’ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಸಚಿವ ರಮೇಶ್ ಜಾರಕಿಹೊಳೆ ಪ್ರಶಸ್ತಿ ಪ್ರದಾನ ಮಾಡಲಿದ್ದು ಸಚಿವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನ.19ರ ಭಾನುವಾರ ಬೆಳಿಗ್ಗೆ 10ಗಂಟೆಗೆ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಆರ್.ಆರ್. ಕಾಂಪ್ಲೆಕ್ಸ್‌ನಲ್ಲಿ ಶ್ರೀ ಸಾಯಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಿ. ಹಾಗೂ ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘ ನಿ. ಈ ಎರಡು ಸಂಸ್ಥೆಗಳು ಶುಭಾರಂಭಗೊಳ್ಳಲಿದ್ದು ಸಾರ್ವಜನಿಕರು ಸಂಸ್ಥೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಡಳಿತ ಟ್ರಸ್ಟ್ರೀ ಎನ್. ಪಂಜು ಬಿಲ್ಲವ ಹಾಗೂ ಸಹಕಾರಿ ಸಂಘದ ಅಧ್ಯಕ್ಷೆ ನಿರ್ಮಲ ಶಂಕರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಸಾಯಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ರಿ. ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸ್ವಸಹಾಯ ಸಂಘವನ್ನು ರಚಿಸಿ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹಿಸುವುದು, ಸ್ವ ಉದ್ಯೋಗ ಮಾಹಿತಿ ನೀಡುವುದು, ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವುದು, ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವುದು, ರಕ್ತದಾನಕ್ಕೆ ಪ್ರೋತ್ಸಾಹಿಸುವುದು, ಅಶಕ್ತ-ಅನಾಥರ ಸೇವೆಗೆ ಬದ್ಧವಾಗಿರುವುದು, ಕನ್ನಡ ನಾಡು ನುಡಿ ಭಾಷೆ ರಕ್ಷಣೆಗೆ ಹೋರಾಡುವುದು ಮುಂತಾದ ಉದ್ದೇಶದೊಂದಿಗೆ ಸಂಸ್ಥೆಯನ್ನು ಆರಂಭಿಸಲಾಗುತ್ತಿದೆ. ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘದ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವ ಮತ್ತು ಉತ್ತಮ ಅಂಕಗಳನ್ನು ಪಡೆಯುವ ಕೌಶಲ್ಯ ಹೆಚ್ಚಿಸುವ ಅಂಶಗಳು ಅನಿವಾರ್ಯವಾಗಿದೆ. ಒತ್ತಡವನ್ನು ನಿಭಾಯಿಸುವಿಕೆ ಮತ್ತು ಉತ್ತಮವಾಗಿ ಪ್ರಶ್ನೆಪತ್ರಿಕೆಯಲ್ಲಿ ಉತ್ತರವನ್ನು ಬರೆಯಬಲ್ಲ ಸಾಮರ್ಥವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಹೊಂದಿದಾಗ ಮಾತ್ರ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗುರುಕುಲ ಪಬ್ಲಿಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಮಕ್ಕಳಿಗೆ ವಿಶೇಷವಾದ ಎರಡು ದಿವಸಗಳ ಪರೀಕ್ಷೇಯ ವಿವಿಧ ಆಯಾಮಗಳು ಎನ್ನುವ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಒಂದಾದ ಆರ್.ಸಿ.ಚೈಲ್ಡ್ ಡೆವೆಲಪ್‌ಮೆಂಟ್ ಎಜೆನ್ಸಿಯ ತಂಡದ ಸಹಾಯದಿಂದ ಮಕ್ಕಳಿಗೆ ವಿಭಿನ್ನ ಬಗೆಯ ಪರೀಕ್ಷೇಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಾಹಿತಿಗಳನ್ನು ನೀಡಲಾಯಿತು. ಕ್ಲಿಷ್ಟಕರ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳ ವಿಭಿನ್ನ ಬಗೆಯ ಪರಿಕಲ್ಪನೆಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಬೇಕಾದ ಪದ್ಧತಿಗಳ ಬಗ್ಗೆ ಕ್ರೀಯಾ ಚಟುವಟಿಕೆಗಳ ಮೂಲಕ ತಿಳಿಸಲಾಯಿತು. ಸ್ಮರಣಾ ಕೌಶಲ್ಯ, ಬರವಣಿಗೆಯ ಸಾಮರ್ಥ್ಯ ಮತ್ತು ಧೀರ್ಘವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಹದ ಅತೀ ಮುಖ್ಯ ಅಂಗವಾಗಿರುವ ಕಣ್ಣುಗಳ ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ನೇತ್ರ ತಪಾಸಣಾ ಶಿಬಿರಗಳು ಸಹಕಾರಿಯಾಗಿದೆ. ದೇಶದಲ್ಲಿ ಲಕ್ಷಾಂತರ ಜನರು ಕಣ್ಣಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ. ಈ ನೆಲೆಯಲ್ಲಿ ಅಂಧತ್ವ ನಿವಾರಣಾ ಅಭಿಯಾನಕ್ಕೆ ಸ್ವಯಂಪ್ರೇರಿತ ನೇತ್ರದಾನಿಗಳು ಕೈಜೋಡಿಸಬೇಕು ಎಂದು ಕೋಟ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರೂಪಶ್ರೀ ಹೇಳಿದರು. ದೊಂಬೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ ಮತ್ತು ಚಾರಿಟೀಸ್ ಕೋಟ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ, ಉಡುಪಿ ವಿಜಯ್ ಬ್ಯಾಂಕ್ ರಿಟಾಯರ್ಡ್ ಆಫೀಸರ‍್ಸ್ ವೆಲ್‌ಫೇರ್ ಸೋಷಿಯಲ್ ಸೆಂಟರ್, ಮಾರಿಕಾಂಬಾ ಯೂತ್ ಕ್ಲಬ್ ಹವ್ಯಾಸಿ ಕಲಾತಂಡ ಕಳವಾಡಿ-ಬೈಂದೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ವಯಸ್ಸಾದಂತೆ ಕಣ್ಣಿನ ಮಸೂರ…
ಉತ್ತಮ ಕಥೆಯ ಸಿನೆಮಾ ಮಾತ್ರ ಬದುಕಿಗೆ ಹತ್ತಿರವಾಗುತ್ತೆ,: ರಾಜ್ ಬಿ. ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಹಾಗೂ ಹಿಂದಿ ಚಿತ್ರರಂಗದಲ್ಲಿ ಕರಾವಳಿಯ ಹಲವಾರು ಪ್ರತಿಭೆಗಳು ತೊಡಗಿಸಿಕೊಂಡಿದ್ದು, ತಮ್ಮದೇ ಭಿನ್ನ ಶೈಲಿಯ ಮೂಲಕ ಚಿತ್ರರಸಿಕರ ಮನದಲ್ಲಿ ನೆಲೆಯಾಗಿದ್ದಾರೆ. ಸಿನೆಮಾ ರಂಗದಲ್ಲಿ ಶ್ರಮವಹಿಸಿ ಸಾಧನೆಗೈದ ವ್ಯಕ್ತಿಗಳ ಮಾರ್ಗದರ್ಶನ ದೊರೆತರೆ ಸಿನೆಮಾದಲ್ಲಿ ತೊಡಗಿಸಿಕೊಳ್ಳುವವರಿಗೆ ಭವಿಷ್ಯದಲ್ಲಿ ಉತ್ತಮ ದಾರಿಯನ್ನು ಕಂಡುಕೊಳ್ಳಲು ಸಾಧ್ಯವಿದೆ ಎಂದು ಸಹನ ಗ್ರೂಫ್ಸ್‌ನ ಮಾಲಿಕ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಭಾನುವಾರ ಇಲ್ಲಿನ ಸಹನಾ ಕನ್ವೆನ್ಷನ್ ಸೆಂಟರ್‌ನಲ್ಲಿ ಕಾಣಿ ಸ್ಟೂಡಿಯೋ ಆಶ್ರಯದಲ್ಲಿ ಜರುಗಿದ ’ಪಿಚ್ಚರ್ ಡೈರಿಸ್’ ಸಿನೆಮಾ ತಯಾರಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಒಂದು ಮೊಟ್ಟೆಯ ಕಥೆ ಸಿನೆಮಾದ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಮಾತನಾಡಿ ಇಂದಿನ ಬಹುತೇಕ ಕಿರುಚಿತ್ರಗಳಿಗೆ ನಿರ್ದಿಷ್ಟವಾದ ಉದ್ದೇಶವೇ ಇರುವುದಿಲ್ಲ. ಹಲವರು ನಿರ್ದೇಶಕರಾಗಬೇಕು ಎಂಬ ಹಂಬಲದಿಂದ ಕಿರುಚಿತ್ರ ಮಾಡುತ್ತಿದ್ದಾರೆ. ಆದರೆ ಕಿರುಚಿತ್ರ ತಯಾರಿಯ ಹಿಂದೆ ಕಥೆಯನ್ನು ಹೇಳಬೇಕು ಎಂಬ…
ಕುಂದಾಪ್ರ ಡಾಟ್ ಕಾಂ ವರದಿ ನ.17ರ ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ ಇದಿರು ನೋಡುತ್ತಿರುತ್ತಾರೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವ. ಈ ಹಬ್ಬಕ್ಕೆ ಒಂದು ವಾರವಿರುವಾಗಲೇ ನಗರದ ಬೀದಿಗಳ ಬದಿಯಲ್ಲಿ ಸಂಚಾರೀ ಅಂಗಡಿಗಳವರು ಸಾಲುಗಟ್ಟಿ ಬೀಡು ಬಿಡುತ್ತಾರೆ. ದೇವಾಲಯದಲ್ಲಿ ದೀಪಾಲಂಕಾರ ಮತ್ತಿತರ ಸಿದ್ಧತೆಗಳು ಆರಂಭವಾಗುತ್ತವೆ. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುತ್ತದೆ. ಈ ಸಂದರ್ಭದಲ್ಲಿ ರಥೋತ್ಸವದ ಮಾದರಿಯಲ್ಲೇ ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಘಟನೆಯ ಏಳಿಗೆಗೋಸ್ಕರ ಯಾವುದೇ ಫಲಾಪೇಕ್ಷೆಗಳಿಲ್ಲದೇ ಸಮಾನ ಮನಸ್ಕರು ಒಟ್ಟಾಗಿ ಮಾಡಿದ ಸ್ವಾರ್ಥರಹಿತವಾದ ಶ್ರಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಬುದ್ಧವಂತಿಕೆ, ಕಾರ್ಯಚತುರತೆ ಹಾಗೆಯೇ ಹಿರಿಯರು ಹಾಕಿಕೊಟ್ಟ ವಿಚಾರಧಾರೆಗಳನ್ನು ಹೀಗೆಯೆ ಉಳಿಸಿ ಬೆಳೆಸಬೇಕು ಎಂದು ಕರಸಾಸಂ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೆ ಶಕ್ತಿವಂತರಿಗಿಂತ ಭಕ್ತಿವಂತರು ಹೆಚ್ಚಾಗಿದ್ದರು. ಆದರೆ ಈಗ ಕೆಲವು ಸಂಘಟನೆಗಳಲ್ಲಿ ಶಕ್ತಿವಂತರೇ ಮೇಲ್ಗೈ ಸಾಧಿಸಿರುವುದರಿಂದ ಪರಸ್ಪರ ಅನುಮಾನಗಳು, ಭಿನ್ನಾಭಿಪ್ರಾಯಗಳು ಕಂಡುಬರುತ್ತಿದ್ದು, ಸಮಾಜದ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಟ್ರಸ್ಟ್ ಹೆಸರೇ ಸೂಚಿಸುವಂತೆ ಪರಸ್ಪರ ವಿಶ್ವಾಸದಿಂದ ಸರ್ವರೂ ಸಮಾನರು ಎಂಬ ನೆಲೆಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ನಮ್ಮ ಜೀವನದ ಸಾರ್ಥಕತೆ ಕಾಣಬಹುದು. ಯಕ್ಷಗಾನ ಕಲೆ ಉಳಿಸುವ ನಿಟ್ಟಿನಲ್ಲಿ ಆಸಕ್ತರಿಗೆ ಯಕ್ಷಗಾನ, ಮುಖವರ್ಣಿಕೆ ಉಚಿತ ತರಬೇತಿ ಮತ್ತು ಅಶಕ್ತ ಯಕ್ಷ ಕಲಾವಿದರಿಗೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ…
