Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟದಂತಹ ಗ್ರಾಮೀಣ ಪರಿಸರದಲ್ಲಿ ನೆನಪು ಮೂವೀಸ್‌ನಂತಹ ಸಂಸ್ಥೆ ಸ್ಥಾಪಿಸಿ ಆ ಮೂಲಕ ಕಲಾತ್ಮಕ ಚಲನಚಿತ್ರ ನಿರ್ಮಿಸಿದ ಸಾಧನೆ ಅನನ್ಯ. ಇದರ ಹಿನ್ನೆಲೆ ಶಕ್ತಿಯಾಗಿರುವ ಎಲ್ಲರೂ ಅಭಿನಂದನೆಗೆ ಅರ್ಹರು ಎಂದು ಸಾಹಿತಿ ಶ್ರೀ ಎಮ್ ರಾಮದೇವ ಐತಾಳ್ ನುಡಿದರು. ಅವರು ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ನೆನಪು ಮೂವೀಸ್ ಕೋಟದ ಚೊಚ್ಚಲ ಕಾಣಿಕೆ ಸುಗಂಧಿ ಕನ್ನಡ ಚಲನಚಿತ್ರದ ಪೋಸ್ಟರ್ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂತರಾಷ್ಟ್ರೀಯ ಖ್ಯಾತ ನಿರ್ದೇಶಕರಾದ ಶ್ರೀ ಜಿ. ಮೂರ್ತಿ, ಇದೊಂದು ಐತಿಹಾಸಿಕ ದಾಖಲೆಯಾಗುವ ಚಲನಚಿತ್ರ, ಕಾರಂತರು ನಮ್ಮ ಜೊತೆ ಸದಾ ಇದ್ದಾರೆ ಎಂದು ಸಾರುವ ಚಲನಚಿತ್ರವಾಗಿದ್ದು, ಮುಖ್ಯ ಭೂಮಿಕೆಯಲ್ಲಿ ಸಂಜೀವ ಸುವರ್ಣ, ವಿನಯ ಪ್ರಸಾದ್, ವೈಷ್ಣವಿ ಅಡಿಗ ಅಭಿನಯಿಸಿದ್ದು ಪಿ.ಕೆ.ದಾಸ್, ಪ್ರವೀಣ್ ಗೋಡ್ಖಿಂಡಿ, ಸಂಜೀವ ರೆಡ್ಡಿ, ಗೋಪಿ, ಜಾನ್ಸನ್, ಮೊದಲಾದವರು ದುಡಿದಿದ್ದು ಇದೊಂದು ಹೊಸ ಆಯಾಮ ಸೃಷ್ಠಿಸಲಿದೆ ಎಂದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜು.24: ಜಿಲ್ಲಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಘೋಷಿಸಿದ್ದ ರಜೆ ಜುಲೈ 24ರ ಬುಧವಾರವೂ ಮುಂದುವರಿಯಲಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಅವರು ಜು.23ರಂದು ರಜೆ ಘೋಷಿಸಿದ್ದರು. ಮುಂದಿನ 24 ಗಂಟೆಗಳಲ್ಲಿ ಸುಮಾರು 205ಮಿ.ಮಿ ಮಳೆಯಾಗುವ ಹಾಗೂ ಭಾರಿ ಗಾಳಿ ಬೀಸುವ ಸಂಭವ ಇರುವ ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿಧರ್ಾರವನ್ನು ಮುಂದುವರಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಜಗತ್ತಿನಲ್ಲಿ ಪ್ರತಿಯೊಬ್ಬರೂ ಹುಟ್ಟಿನಿಂದಲೇ ಗ್ರಾಹಕರು. ಆದ್ದರಿಂದ ಯಾವುದೇ ವಸ್ತು ಅಥವಾ ಸೇವೆಯನ್ನು ಪಡೆಯುವ ಮುನ್ನ ಸೂಕ್ಮವಾಗಿ ಪರಿಶೀಲಿಸಬೇಕು. ಗ್ರಾಹಕರ ಹಕ್ಕು ಮತ್ತು ಬಾಧ್ಯತೆಗಳನ್ನು ಅರಿತುಕೊಂಡು ವ್ಯವಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ಒಕ್ಕೂಟದ ಅಧ್ಯಕ್ಷರಾದ ಎಮ್.ಜೆ ಸಾಲಿಯಾನ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಪದವಿ ಅರ್ಥಶಾಸ್ತ್ರ ಹಾಗೂ ವಾಣಿಜ್ಯ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆದ ’ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್’ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಿಗೂ ಪ್ರಾಧಾನ್ಯತೆ ನೀಡಬೇಕಾಗುತ್ತದೆ. ಅವುಗಳಲ್ಲೊಂದಾದ ಗ್ರಾಹಕ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಅತಿ ಕಡಿಮೆ. ಈ ನಿಟ್ಟಿನಲ್ಲಿ ಗ್ರಾಹಕ ಶಿಕ್ಷಣ ಜನಸಾಮಾನ್ಯರಿಗೆ ತಲುಪುವಂತೆ ಮಾಡಲು ಪ್ರಯತ್ನಿಸುವುದು ಈ ಕಾಲದ ಬೇಡಿಕೆಯಾಗಿದೆ. ಆ ಹಿನ್ನಲೆಯಲ್ಲಿ ಗ್ರಾಹಕರ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್, ಗ್ರಾಹಕರ ಶಿಕ್ಷಣದ ಜೊತೆಗೆ ಜೀವನ ಮೌಲ್ಯ, ಸಮಯದ ಸದುಪಯೋಗ, ಶಿಸ್ತುನ್ನು ತಿಳಿಸುತ್ತದೆ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಿರೀಶ್ ಕಾರ್ನಾಡ್ ಅವರು ಕಲೆ ಸಾಹಿತ್ಯದ ವಿವಿಧ ಆಯಾಮಗಳಲ್ಲಿ ತೊಡಗಿಕೊಂಡದ್ದು ಮಾತ್ರವಲ್ಲದೇ ಅದಕ್ಕಾಗಿಯೇ ತಮ್ಮ ಬದುಕನ್ನು ಮೀಸಲಿರಿಸಿದ್ದರು. ದೇಶ ಭಾಷೆಯ ಬಗೆಗೆ ಅವರಲ್ಲಿ ಅಪಾರ ಒಲವಿತ್ತು. ಶೋಷಣೆಯಿಲ್ಲದ ಸೌಹಾರ್ದಯುತ ಸಮಾಜದ ನಿರ್ಮಾಣ ಅವರ ಗುರಿಯಾಗಿತ್ತು. ಕಾರ್ನಾಡರ ಕನಸುಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ಯುವಜನರ ಮೇಲಿದೆ ಎಂದು ಸಮುದಾಯದ ರಾಜ್ಯ ಉಪಾಧ್ಯಕ್ಷ ಬಿ. ಎ. ಇಳಿಗೇರ ಹೇಳಿದರು. ಅವರು ಭಾನುವಾರ ಸಮುದಾಯ ಕುಂದಾಪುರ ಸಂಘಟನೆಯು ಜೆಸಿಐ ಕುಂದಾಪುರ ಹಾಗೂ ಕಸಾಪ ಕೋಟೇಶ್ವರ ಹೋಬಳಿ ಸಹಯೋಗದೊಂದಿಗೆ ಇಲ್ಲಿನ ಜೆಸಿಐ ಭವನದಲ್ಲಿ ಆಯೋಜಿಸಿದ ಕಥಾ ಓದು – 25 ಹಾಗೂ ಕಾರ್ನಾಡರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ನಾಡರು ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ. ಶೊಷಿತರ ಪರ ಸದಾ ನಿಲ್ಲುತ್ತಿದ್ದರು. ಸಾರ್ವಭೌಮತೆಗೆ ವಿರುದ್ಧವಾಗಿ ಕಂಡದ್ದನ್ನು ಪ್ರತಿಭಟಿಸುತ್ತಿದ್ದರು. ಬದುಕಿನಲ್ಲಿ ಅಂದುಕೊಂಡಂತೆ ನಡೆದರು. ಬದುಕು ಮುಗಿಸಿದ ಮೇಲೆಯೂ ಅದೇ ಸರಳತೆ ಮೆರೆದರು. ಅವರದ್ದೊಂದು ಮೇರು ವ್ಯಕ್ತಿತ್ವ ಎಂದು ಬಣ್ಣಿಸಿದರು. ಜೆಸಿಐ ಕುಂದಾಪುರದ ಅಧ್ಯಕ್ಷ ಅಶೋಕ್ ತೆಕ್ಕಟ್ಟೆ, ಸಮುದಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದುಡಿಮೆಯ ಒಂದು ಭಾಗವನ್ನಾದರೂ ಸಮಾಜಕ್ಕೆ ಮೀಸಲಿರಿಸಬೇಕು ಎನ್ನುವ ಮನೋಭಾವ ಹೆಚ್ಚಬೇಕು. ಹಾಗಿದ್ದಾಗಲೇ ಸಮಾಜ ಉದ್ದಾರವಾಗುತ್ತದೆ, ದಾನ ಮಾಡಿವುದರಿಂದ ಮನಸ್ಸಿಗೂ ಸಂತೋಷವುಂಟಾವುತ್ತದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹೇಳಿದರು. ಅವರು ಭಾನುವಾರ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಇ. ಬೈಂದೂರು ಇದರ ೭ನೇ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ ಟ್ರಸ್ಟ್ ಮೂಲಕ ಮನೆ, ವಿದ್ಯುತ್, ವಿದ್ಯಾಭ್ಯಾಸಕ್ಕೆ ಸಹಕಾರ ಮುಂತಾದ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡು ರಾಮಕ್ಷತ್ರಿಯ ಸಮುದಾಯದ ಜನರ ಹೇಳಿಗೆಗೆ ನೆರವಾಗುತ್ತಿರುವುದು ಸಂತೋಷದ ಸಂಗತಿ ಎಂದು ಶ್ಲಾಘೀಸಿದರು. ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದಿನೇಶ್ ಪ್ರಿಂಟರ‍್ಸ್‌ನ ದಿನೇಶ್ ಕುಂದಾಪುರ, ಮಲ್ಲಿಕ್ ಇಂಜಿನಿಯರಿಂಗ್ ಇಂಡಿಯಾ ಪ್ರೈ. ಲಿನ ಕೆ. ಲಕ್ಷ್ಮೀನಾರಾಯಣ, ಕದಂಬ ಗ್ರೂಫ್ ಆಫ್ ಹೋಟೆಲ್ಸ್‌ನ ದಿನೇಶ್ ನೆರಂಬಳ್ಳಿ, ಶ್ರೀ ರಕ್ಷಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಕೆ. ಚಂದ್ರಶೇಖರ್, ಕುಂದಾಪುರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಮುಂಬೈನ ಪ್ರತಿಷ್ಠಿತ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಆಯ್ಕೆಯಾಗಿದ್ದಾರೆ ಈ ಬಗ್ಗೆ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದರು. ದಕ್ಷಿಣಕನ್ನಡ ಜಿಲ್ಲೆಯ ಮಲೆನಾಡು ಪುತ್ತೂರಿನ ಬಜತ್ತೂರು ಗ್ರಾಮದವರಾದ ಚಂದ್ರಶೇಖರ್ ಪಾಲೆತ್ತಾಡಿಯವರು ರೈತಪರ ಚಳವಳಿ, ನಾಟಕ,ಯಕ್ಷಗಾನ, ಭಾಷಣ ಹೀಗೆ ನಾನಾ ರೂಪದಲ್ಲಿ ತನ್ನ ಬಹುತ್ವಗಳಲ್ಲಿ ಕಾಣಿಸಿಕೊಂಡವರು. ವಡ್ಡರ್ಸೆ ರಘುರಾಮ ಶೆಟ್ಟರಂತೆಯೇ ಪತ್ರಿಕಾರಂಗದಲ್ಲಿ ಭಿನ್ನ ದೃಷ್ಠಿಕೋನದೊಂದಿಗೆ ಸಾಗಿದ ಇವರು, ಹೊಸದಿಗಂತ, ಮಂಗಳೂರು ಮಿತ್ರ, ಕರ್ನಾಟಕ ಮಲ್ಲ, ಉದಯದೀಪ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ ಅನಂತರ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದರು. ಮರಾಠಿ ಮಣ್ಣು ಮುಂಬೈನಲ್ಲಿ ಕನ್ನಡದ ಕಂಪನ್ನು ಧಟ್ಟವಾಗಿ ಹಲವಾರು ಸವಾಲುಗಳ ನಡುವೆಯೂ ಪಸರಿಸಿದ ಪಾಲೆತ್ತಾಡಿಯವರು ಪರರಾಜ್ಯವೊಂದರಲ್ಲಿ ಕನ್ನಡ ಭಾಷೆಯ ಪ್ರಾದೇಶಿಕ ಪತ್ರಿಕೆಯೊಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನಿಷ್ಠ ೫೦ ಸ್ವದೇಶಿ ಜಾನುವಾರುಗಳನ್ನು ಕಳೆದ ೩ ವರ್ಷಗಳಿಂದ ಪೋಷಿಸುತ್ತಿದ್ದು, ನೋಂದಾಯಿತ ಟ್ರಸ್ಟ್‌ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ೨೦೧೯-೨೦ ನೇ ಸಾಲಿನಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದು, ಆಸಕ್ತ ಗೋಶಾಲೆಯವರು ಜುಲೈ ೨೨ ರ ಒಳಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ಕಚೇರಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿಯ ಕಚೇರಿ ದೂರವಾಣಿ ಸಂಖ್ಯೆ: 0820-2534024ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ’ ಸುದ್ದಿ ಬೈಂದೂರು: ಕತಾರ್‌ ಇಂಡಿಯನ್ ಕಮ್ಯುನಿಟಿ ಬೆನ್‌ವೆಲೆಂಟ್ (ಐ.ಸಿ.ಬಿ.ಎಫ್)ಸದಸ್ಯರಾಗಿ  ಬೈಂದೂರಿನ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ. ಬೈಂದೂರು ತಗ್ಗರ್ಸೆಯ ಗುರುದತ್ತ ಶೇರುಗಾರ್ ಹಾಗೂ ಮೂಕಾಂಬು ದಂಪತಿಗಳ ಪುತ್ರರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರದ್ದು ಬಹಮುಖ ವ್ಯಕ್ತಿತ್ವ. ಮಯ್ಯಾಡಿ ಧ.ಮ.ಹಿ.ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ದಾವಣಗೆರೆ ಬಾಪೂಜಿ ಫ್ರೌಢಶಾಲೆಯಲ್ಲಿ ಫ್ರೌಢಶಿಕ್ಷಣ ಬಳಿಕ ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿ ರಾಷ್ಟ್ರೀಯ ಹೆದ್ದಾರಿ ೮ರಲ್ಲಿ ಮೇಲುಸ್ತುವಾರಿ ಅಭಿಯಂತರಾಗಿ ಸೇವೆ ಸಲ್ಲಿಸಿ ಬಳಿಕ ಕತಾರ್‌ನ ಗಲ್ಪಾರ್ ಆಲ್ ಮಿಸ್ನಾದ್ ಕಂಪೆನಿಯಲ್ಲಿ ಅಭಿಯಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತಾರ್ ಸೇರಿದಂತೆ ಜಾಗತಿಕ ಮಟ್ಟದ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಕರ್ನಾಟಕ ಸಂಘ ಕತಾರ್ ಉಪಾಧ್ಯಕ್ಷರಾಗಿ ಹಾಗೂ ಖಜಾಂಚಿಯಾಗಿ,ತುಳುಕೂಟ,ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಕತಾರ್ ಕರ್ನಾಟಕ ಪ್ರೆಂಡ್ಸ್‌ನ ಸದಸ್ಯರಾಗಿದ್ದಾರೆ. ನಾಟಕ, ಸಾಂಸ್ಕ್ರತಿಕ ಕಾರ್ಯಕ್ರಮ, ಶೈಕ್ಷಣಿಕ ಹಾಗೂ ಮನೋರಂಜನಾ ಕಾರ್ಯಕ್ರಮದ ಆಯೋಜನೆ ವಿವಿಧ ಸಂಘ ಸಂಸ್ಥೆಗಳ ಸಮನ್ವಯತೆಯೊಂದಿಗೆ ಕಾರ್ಯಕ್ರಮ ಪ್ರಸ್ತುತಿ, ಕತಾರ್ ಚಲನಚಿತ್ರೋತ್ಸವ ಸೇರಿದಂತೆ ವಿವಿಧ ಗಣ್ಯರ ಕಾರ್ಯಕ್ರಮದ ಪ್ರಮುಖ ಉಸ್ತುವಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ , ಮಂಗಳೂರು ಸ್ಮಾಟ್ ಸಿಟಿ ಲಿ.. ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ 2019 ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೋಭಾವನಕ್ಕೆ ಆಳ್ವಾಸ್‍ಗೆ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಆವರಣದಲ್ಲಿ ಉತ್ತಮ ಹಸಿರು ವಲಯ ನಿರ್ವಹಣೆಗಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಪರಿಸರ ಸಂರಕ್ಷಣ ಜಾಗೃತಿಗಾಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶೋಭಾವನ ವಿಶೇಷತೆ: ಮಿಜಾರು ಶೋಭಾವನ ಕ್ಯಾಂಪಸ್‍ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆಳ್ವಾಸ್ ನ್ಯಾಚುರೋಪತಿ ಎಂಡ್ ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಳ್ವಾಸ್ ಹೋಮಿಯೊಪತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥ ಮಹಿಳೆಯರು ವಿವಿಧ ಪಿಜಿಗಳಲ್ಲಿ ಆಶ್ರಯ ಪಡೆದಿದ್ದು, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪಿ.ಜಿ.ಗಳನ್ನು ಆಗಸ್ಟ್ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ. ಅವರು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹವೊಂದರ ಕಟ್ಟಡ ದುರಸ್ಥಿ ನಡೆಯುತ್ತಿದ್ದು, ಮಹಿಳೆಯರ ಸುರಕ್ಷತೆಗೆ ಸಿಸಿ ಟಿವಿ ಅಳವಡಿಕೆಗೆ ಸೂಚಿಸಿದ್ದರೂ ಈವರೆಗೆ ಸಿಸಿಟಿವಿ ಅಳವಡಿಸದಿರುವ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ತಕ್ಷಣದಲ್ಲಿ ಸಿಸಿಟಿವಿ ಅಳವಡಿಸುವಂತೆ ಹಾಸ್ಟೆಲ್ ವಾರ್ಡನ್‌ಗೆ ಸೂಚನೆ ನೀಡಿ, ಆಗಸ್ಟ್ ೧೫ ರ ಒಳಗೆ ಹಾಸ್ಟೆಲ್‌ನಲ್ಲಿರುವ ಇತರ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ…

Read More