ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. 1983 ರಿಂದ 1999ರ ವರೆಗೆ ಸತತವಾಗಿ 4ಬಾರಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ ಅವರು 2003ರಿಂದ ಇಂದಿನ ತನಕವೂ ವಿಧಾನಪರಿಷತ್ ಸದಸ್ಯರಾಗಿ ಜನಸೇವೆಯಲ್ಲಿ ಸಕ್ರಿಯರು. ಹುಯ್ಯಾರು ಪಟೇಲ್ ಹಿರಿಯಣ್ಣ ಶೆಟ್ಟಿ ಮತ್ತು ಕೊಳ್ಕೆಬೈಲು ಗುಲಾಬಿ ಶೆಡ್ತಿಯವರ ಸುಪುತ್ರನಾಗಿ 1949 ಸೆಪ್ಟೆಂಬರ್ 4ರಂದು ಜನಿಸಿದ ಪ್ರತಾಪ್ ಶೆಟ್ಟರು ಬಿ.ಎ ಪದವಿದರರು. ಪದವಿ ಪಡೆದ ನಂತರ ವಿಜಯಾ ಬ್ಯಾಂಕ್ ನ ಉದ್ಯೋಗಿ ಯಾಗಿ ಪುಣೆ ಹಾಗೂ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸಿ ಆ ನಂತರ ತಂದೆಯವರ ಮರಣದ ತರುವಾಯ ಬ್ಯಾಂಕ್ ಉದ್ಯೋಗ ತೊರೆದು ಊರಿಗೆ ವಾಪಾಸಾಗಿ ಆ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗಿ ತನ್ನ ರಾಜಕೀಯ ಜೀವನವನ್ನು ಜನಸೇವೆಯ ಮೂಲಕ ಆರಂಬಿಸಿದ್ದರು. ಆ ನಂತರ ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಂಗಕರ್ಮಿ, ಶಿಕ್ಷಕ ಕೂರಾಡಿ ಸೀತಾರಾಮ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ ೬೮ ವರ್ಷ ವಯಸ್ಸಾಗಿತ್ತು. ಕೂರಾಡಿ ಸೀತಾರಾಮ ಶೆಟ್ಟಿ ನಿವೃತ್ತ ಅಧ್ಯಾಪಕರಾಗಿದ್ದು ಬಿ.ಎಂ.ಎಂ. ಹೈಸ್ಕೂಲ್ ಕೂರಾಡಿ ಶಾಲೆಯಿಂದ ನಿವೃತ್ತರಾಗಿದ್ದರು. ಕೂರಾಡಿಯವರು ಹಲವು ನಾಟಕಗಳನ್ನು ನಿರ್ದೇಶಿಸಿದ್ದರು. ರಾಜ್ಯ ಉತಮ ಶಿಕ್ಷಕ ಪ್ರಶಸ್ತಿಯನ್ನು ಗಳಿಸಿದ್ದ ಅವರು ಕೆಲವು ಸಮಯದಿಂದ ಅನಾರೋಗ್ಯ ಹೊಂದಿದ್ದರು. ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಎನರ್ಜಿಎಂಡ್ ವೆಟ್ಲ್ಯಾಂಡ್ ರಿಸರ್ಚ್ ಗ್ರೂಪ್, ಸೆಂಟರ್ ಫಾರ್ ಇಕೊಲಾಜಿಕಲ್ ಸಾಯನ್ಸಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯನ್ಸ್ ಬೆಂಗಳೂರು, ಇವರು ಮೂಡಬಿದ್ರೆಯ ಆಳ್ವಾಸ್ನಲ್ಲಿ ಏರ್ಪಡಿಸಿದ್ದ ಲೇಕ್ ಕಾನ್ಫರೆನ್ಸ್ನಲ್ಲಿ ಕೋಟೇಶ್ವರದ ಬೀಜದುಂಡೆ ಕೃಷಿ ಪ್ರಯೋಗಕ್ಕೆ ಮನ್ನಣೆ ದೊರೆತಿದೆ. ಕೋಟೇಶ್ವರದ ರಾಜಾರಾಮ ಪಾಲಿಮರ್ಸ್ನ ಮಾಲಕ ಕೆ. ಸುರೇಶ್ ಕಾಮತ್ ಅವರು ನಡೆಸಿದ ಬೀಜದುಂಡೆ (ಸೀಡ್ ಬಾಲ್) ಭತ್ತದ ಕೃಷಿ ಪ್ರಯೋಗವನ್ನೇ ಆಧಾರವಾಗಿಟ್ಟುಕೊಂಡು ಮಂಗಳೂರು ವಿ. ವಿಯ ಬಾಟನಿ ವಿಭಾಗದ ವಿದ್ಯಾರ್ಥಿನಿ ಕುಂಭಾಸಿಯ ಯು. ಸಂಗೀತಾ ಶೆಣೈ ಪ್ರಸ್ತುತ ಪಡಿಸಿದ ಪೋಸ್ಟರ್ ಪ್ರಸೆಂಟೇಶನ್ A Critical study on Seed ball Technic –An Innovative Agronomic Approa ch in Organic Farming in the Cultivation of OryzasativaL in kundapura Taluk of Udupi District ಎಂಬ ವಿವರಣೆಗೆ ತೀರ್ಪುಗಾರರು ತಲೆದೂಗಿದ್ದು, ಅವರಿಗೆ ಸಹ್ಯಾದ್ರಿ ಯಂಗ್ ಇಕಾಲಾಜಿಸ್ಟ್ (ದ್ವಿತೀಯ) ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನವಂಬರ್ ೨೨…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬದುಕಿನಲ್ಲಿ ಪರರ ಹಸಿವು ಹಾಗೂ ನೋವಿಗೆ ಸ್ಪಂದಿಸುವುದು ಅಗತ್ಯ. ಭ್ರಾತೃತ್ವ ಹಾಗೂ ಸಹೋದರತೆಯ ಮೂಲಕ ಸ್ವಸ್ಥ ಸಮಾಜವನ್ನು ಕಟ್ಟಲು ನಾವೆಲ್ಲರೂ ಪಣ ತೊಡಬೇಕಾಗಿದೆ ಎಂದು ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು. ಅವರು ಕಥೊಲಿಕ್ ಸಭಾ ಉಡುಪಿ ಪ್ರದೇಶ್, ಕುಂದಾಪುರ ವಲಯ ಸಮಿತಿ ಆಶ್ರಯದಲ್ಲಿ ಭಾನುವಾರ ಕುಂದಾಪುರ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡ ಸೌಹಾರ್ದ ಕ್ರಿಸ್ಮಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ಬದುಕು ಯಾಂತ್ರಿಕತೆಯತ್ತ ಸಾಗುತ್ತಿದೆ. ಮಾನವೀಯತೆ ಇಲ್ಲದ ಪ್ರಪಂಚದಲ್ಲಿ ಬದುಕಿತ್ತಿದ್ದೇವೆ ಎಂದು ಭಾಸವಾಗುತ್ತಿದೆ. ಇವನ್ನೆಲ್ಲಾ ಮೀರಿ ಏಕತೆಯ ಮಂತ್ರವನ್ನು ಪಠಿಸುವುದು ಅಗತ್ಯವಾಗಿದೆ ಎಂದರು. ಉಡುಪಿ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ಕ್ರಿಸ್ಮಸ್ ಸಂದೇಶ ನೀಡಿ, ಪ್ರೀತಿ ಮತ್ತು ಶಾಂತಿ ದೇವರು ಕಲಿಸಿದ ಭಾಷೆ. ಭಾರತದಲ್ಲಿ ಬೇರೆ ಬೇರೆ ಧರ್ಮಗಳಿದ್ದರೂ ಎಲ್ಲದರ ಗುರಿಯೂ ದೇವರೊಂದಿಗೆ ಇರುವುದೇ ಆಗಿದೆ. ಎಲ್ಲಾ ಧರ್ಮಗಳೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಂಟರ ಯಾನೆ ನಾಡವರ ಸಂಘದ ವತಿಯಿಂದ ನಿರ್ಮಾಣಗೊಂಡ ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಂಡಾಡಿ ಜಗನ್ನಾಥ ಶೆಟ್ಟಿ ಸಭಾಂಗಣ, ಯಡ್ತರೆ ಮಂಜಯ್ಯ ಶೆಟ್ಟಿ ಅವರ ೧೦೫ನೇ ಜನ್ಮ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂಪತ್ತು ಗಳಿಕೆ ಜೀವನದ ಒಂದು ಭಾಗವೇ ಹೊರತು ಸಂಪತ್ತೇ ಜೀವನವಲ್ಲ. ಹಣದ ಹಿಂದೆ ಓಡುವುದಕ್ಕಿಂತ ಸಾಮಾಜಿಕವಾಗಿ ತೊಡಗಿಸಿಕೊಳ್ಳಬೇಕು. ನಿಸ್ವಾರ್ಥ ಸೇವೆ ಭಗವಂತನಿಗೂ ಪ್ರಿಯವಾಗಿದ್ದು, ಸಂಘಟಿತರಾಗಿ ಸಮಾಜಕ್ಕೆ ನೀಡಿದ ಕೊಡುಗೆ ಶಾಶ್ವತವಾಗಿರುತ್ತದೆ ಎಂದು ಹೇಳಿದರು. ನಮ್ಮ ಬೆಳವಣೆಗೆಯಲ್ಲಿ ಸಮಾಜದ ಕೊಡುಗೆ ತುಂಬಾಯಿದ್ದು ಪ್ರತಿಯೊಬ್ಬರು ಅದನ್ನು ಮರೆಯಬಾರದು, ನಾವು ನಮ್ಮ ಸಮಾಜದೊಂದಿಗೆ ಬೇರೆ ಸಮಾಜದವರನ್ನು ಒಟ್ಟಿಗೆ ಕರೆದುಕೊಂಡು ಹೋದಾಗ ಅವರ ಪ್ರೀತಿ, ವಿಶ್ವಾಸವನ್ನು ಗಳಿಸಬಹುದು. ಕರಾವಳಿ ಜಿಲ್ಲೆಯ ಬಂಟ ಸಮುದಾಯದ ಕೊಡುಗೆಯೂ ಅಪಾರವಾಗಿದ್ದು, ಸಮಾಜದಲ್ಲಿ ಇನ್ನೊಬ್ಬರ ಕಾಲೆಳೆಯುವುದಕ್ಕಿಂತ ಕೈಹಿಡಿದು ಮುನ್ನೆಡೆಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ. ಪ್ರತಿಯೊಬ್ಬರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ದಲಿತ ಸಂಘರ್ಷ ಸಮಿತಿ ಬೈಂದೂರು ವತಿಯಿಂದ ಡಾ ಬಿ.ಆರ್.ಅಂಬೇಡ್ಕರ್ ಅವರ ೬೨ನೇ ಮಹಾ ಪರಿನಿರ್ಮಾಣ ದಿನದವನ್ನು ಬೈಂದೂರಿನ ಸರಕಾರಿ ಪರಿಶಿಷ್ಟ ವರ್ಗದ ಆಶ್ರಯ ಶಾಲೆಯಲ್ಲಿ ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಅವರ ೬೨ನೇ ಮಹಾ ಪರಿನಿರ್ಮಾಣ ದಿನವನ್ನು ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್ ಉದ್ಘಾಟಿಸಿ, ಸಾಕಷ್ಟು ಅವಮಾನ ಮತ್ತು ತಾರತಮ್ಯ ಅನುಭವಿಸಿದರೂ ದೇಶದ ಬಗ್ಗೆ ತಿರಸ್ಕಾರ ಭಾವನೆ ಹೊಂದದೇ ಸಮಾಜ ತಿದ್ದುವ, ಸದೃಢ ಭಾರತ ನಿರ್ಮಾಣದತ್ತ ತಮ್ಮ ಚಿತ್ತ ಹರಿಸಿದ ಅಂಬೇಡ್ಕರ್ ಒಬ್ಬ ಮಹಾನ್ ಮಾನವತಾದಿ. ಅಸ್ಪಶ್ಯರು ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಇಡೀ ಜೀವನನ್ನೇ ಮುಡುಪಾಗಿರಿಸಿದ್ದ ಅಂಬೇಡ್ಕರ್ ಅವರು ನಮ್ಮನ್ನಗಲಿ ೬೨ ವರ್ಷಗಳು ಸಂದಿದ್ದರೂ ಅವರ ವಿಚಾರಧಾರೆಗಳು ಜನಮಾನಸದಲ್ಲಿ ಇಂದಿಗೂ ಆಳವಾಗಿ ಬೇರೂರಿವೆ. ಅಸಮತೋಲನ ಮುಕ್ತ ಭಾರತ ಹಾಗೂ ಅರ್ಥಿಕ ಪ್ರಗತಿಯನ್ನು ಕಂಡಿದ್ದ ಅವರ ಕನಸಗಳನ್ನು ನನಸಾಗಿಸಲು ನಾವಿಂದು ಅವರ ಆಲೋಚನಾ ಸರಣಿಯ ಮಾರ್ಗದಲ್ಲಿ ಮುನ್ನಡೆಯಬೇಕಿದೆ ಎಂದರು. ಬೈಂದೂರು ಸರಕಾರಿ ಪರಿಶಿಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ದಿ ಸಾಧ್ಯವಾಗುತ್ತದೆ. ಸರಕಾರದ ಯೋಜನೆಗಳು ಸಮಪರ್ಕವಾಗಿ ಜನರಿಗೆ ತಲುಪಬೇಕಾದರೆ ಅಧಿಕಾರಿಗಳ ಸ್ಪಂದನೆ ಮುಖ್ಯವಾಗಿರುತ್ತದೆ. ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಸಾಕಷ್ಟು ಅನುಭವ ಇರುವ ಸಂಸದರು ಜನಸ್ಪಂದನೆಯ ಮೂಲಕ ಇನ್ನಷ್ಟು ಸೇವೆ ನೀಡಲು ಅವಕಾಶ ದೊರೆತಂತಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಅವರ ನೂತನ ಕಛೇರಿ ಹಾಗೂ ಜನಸಂಪರ್ಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು, ಕಡಲ್ಕೊರೆತ, ಮರಳು ಸಮಸ್ಯೆ, ಡೀಮ್ಡ್ ಪಾರೆಸ್ಟ್ ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಕ್ಕುಪತ್ರ ದೊರಕದಿರುವುದು ಸೇರಿದಂತೆ ಹತ್ತಾರು ಸಮಸ್ಯೆಗಳಿದ್ದು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂಧಿಸಿದಾಗ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಪಕ್ಷಾತೀತವಾಗಿ ಜನರ ಸಮಸ್ಯೆ ಅರಿಯಲು ಇಲ್ಲಿ ಕಛೇರಿ ತೆರೆಯಲಾಗಿದ್ದು, ಇದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಭಿನ್ನ ಐಡಿಯಾಸ್, ಕಾರ್ಟೂನು ಕುಂದಾಪ್ರ ಬಳಗದ ಆಶ್ರಯದಲ್ಲಿ ಇಲ್ಲಿನ ಕಲಾ ಮಂದಿರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಕಾರ್ಟೂನು ಹಬ್ಬ 2018ಉದ್ಘಾಟನೆಗೊಂಡಿತು. ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಕಾರ್ಟೂನು ಹಬ್ಬ ಉದ್ಘಾಟಿಸಿ ಮಾತನಾಡುತ್ತಿದ್ದರು. ಪತ್ರಕರ್ತ ಶ್ರೀನಿವಾಸ ಜೋಕಟ್ಟೆ, ಪೊಟೋ ಪತ್ರಕರ್ತ ಯಜ್ಞ ಮಂಗಳೂರು, ಪತ್ರಕರ್ತರಾದ ದಯಾಸಾಗರ್ ಚೌಟ, ಯು.ಕೆ.ಕುಮಾರನಾಥ್ ಮಾತನಾಡಿದರು. ಕ್ರೀಡಾ ಪೊಟೋ ಪತ್ರಕರ್ತ ಸುರೇಶ್ ಕೆ. ಕರ್ಕೇರ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ಪ್ರಕಾಶ್ ಶೇಟ್, ಜಯಂತ ಕಾಯ್ಕಿಣಿ ಅವರಿಗೆ ಸಂಗೀತ ನಮನ ಸಲ್ಲಿಸಿದರು. ಗಿರಿಧರ ಕಾರ್ಕಳ, ಅವಿನಾಶ್ ಕಾಮತ್, ಸೋಮಶೇಖರ ಪಡುಕೆರೆ, ಶೇಖರ ಅಜೆಕಾರು, ಧನಂಜಯ ಗುರುಪುರ, ಕೇಶವ ಸಸಿಹಿತ್ಲು, ಸತೀಶ್ ಆಚಾರ್ಯಾ ಹಾಗೂ ಇನ್ನಿತರ ಕಲಾವಿದರ ಜತೆ ಅನೌಪಚಾರಿಕ ಸಮ್ಮಿಲನ ನಡೆಯಿತು. ಕಾರ್ಟೂನು ಹಬ್ಬ ಆಯೋಜಕ ಸತೀಶ್ ಆಚಾರ್ಯ ಸ್ವಾಗತಿಸಿದರು. ಗಿರಿಧರ ಕಾರ್ಕಳ ಅತಿಥಿಗಳ ಪರಿಚಯಿಸಿದರು. ರಾಮಕೃಷ್ಣ ಹೇರ್ಳೆ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ವರದಿ ಡಿ.೦6ರಂದು ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ ಇದಿರು ನೋಡುತ್ತಿರುತ್ತಾರೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವ. ಈ ಹಬ್ಬಕ್ಕೆ ಒಂದು ವಾರವಿರುವಾಗಲೇ ನಗರದ ಬೀದಿಗಳ ಬದಿಯಲ್ಲಿ ಸಂಚಾರೀ ಅಂಗಡಿಗಳವರು ಸಾಲುಗಟ್ಟಿ ಬೀಡು ಬಿಡುತ್ತಾರೆ. ದೇವಾಲಯದಲ್ಲಿ ದೀಪಾಲಂಕಾರ ಮತ್ತಿತರ ಸಿದ್ಧತೆಗಳು ಆರಂಭವಾಗುತ್ತವೆ. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುತ್ತದೆ. ಈ ಸಂದರ್ಭದಲ್ಲಿ ರಥೋತ್ಸವದ ಮಾದರಿಯಲ್ಲೇ ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ. ಕೊನೆಯ…
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ ಗೊಂದು ಚಾಟಿ. ಜನಸಾಮಾನ್ಯರಿಗೆ ನಗುವಿನ ಚಟಾಕಿ. ವಾಸ್ತವದ ಅನಾವರಣ. ಕಾರ್ಟೂನಿಷ್ಠರಲ್ಲಿ ಕಲಾವಿದ, ಪತ್ರಕರ್ತ ಏಕಕಾಲದಲ್ಲಿ ಜಾಗೃತನಾಗಿರುತ್ತಾನೆ. ನೂರು ಪದಗಳಲ್ಲಿ ಹೇಳಬಹುದಾದದ್ದನ್ನು ಒಂದು ರೇಖೆಯಲ್ಲಿ ಹೇಳಿ ಮುಗಿಸುವ ಛಾತಿ ಕಾರ್ಟೂನಿಷ್ಠರದ್ದು. ಇಂತಹ ಕಾರ್ಟೂನಿಷ್ಠ ರನ್ನು ಕಾರ್ಟೂನಿಷ್ಠರ ತವರು, ಕುಂದಾಪುರದಲ್ಲಿ ಒಗ್ಗೂಡಿಸಿ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ, ಐದನೇ ವರ್ಷವೂ ಸಜ್ಜುಗೊಂಡಿದೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ತಂಡದ ಕಾರ್ಟೂನಿಷ್ಠರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ರಂಗು ರಂಗಾಗಿ ನಡೆಯುತ್ತಿದ್ದು ಈ ಭಾರಿಯೂ ನಾಲ್ಕು ದಿನಗಳ ಕಾಲ ಕುಂದಾಪುರದ ಕಲಾಮಂದಿರದಲ್ಲಿ ಜರುಗಲಿದೆ. ಹಬ್ಬದಲ್ಲಿ ಕಾರ್ಟೂನು ಪ್ರದರ್ಶನ, ಸ್ಕೂಲ್ ಟೂನ್ ಚಾಂಪಿಯನ್ಶಿಪ್ ಕಾರ್ಟೂನು ಸ್ವರ್ಧೆ,…
