ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಆವರದಣವು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕಾರಣಕ್ಕಾಗಿ ಏಳು ದಿನಗಳ ಕಾಲ ವರ್ಣಬೆಳಕಿನ ಚಿತ್ತಾರದಿಂದ ಕಂಗೊಳಿಸಿತು. ಎತ್ತ ನೋಡಿದರೂ ಮಿನುಗುತ್ತಿರುವ ವಿದ್ಯುತ್ ದೀಪಾಲಂಕಾರಗಳು ವಿದ್ಯಾಗಿರಿಗೆ ಉತ್ಸವದ ರಂಗು ತುಂಬಿದ್ದವು. ಆಳ್ವಾಸ್ ಆವರಣದ ಮುಂಭಾಗದಿಂದ ಜಾಂಬೂರಿ ಪ್ರವೇಶದವರೆಗೆ ಕಾಲೇಜಿನ ಪ್ರವೇಶ ದ್ವಾರ ಸೇರಿದಂತೆ ವಿವಿಧ ಮುಖ್ಯದ್ವಾರ, ಸುತ್ತಲಿನ ಪರಿಸರ, ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು. ಹಲವುಕಡೆ ಬೆಳಕಿನ ಅಕ್ಷರಗಳು ಸ್ವಾಗತಕೋರುತ್ತಿರುವ ದೃಶ್ಯ ಅತ್ಯಾಕರ್ಷಕವಾಗಿದ್ದು ನೋಡುಗರ ಕಣ್ಮನಸೆಳೆಯುತ್ತಿತ್ತು. ಮುಖ್ಯ ಬೀದಿಗಳ ತುಂಬ ಹಲವು ಆಕೃತಿಗಳ ಮೇಲೆ ಕಂಗೂಳಿಸುವ ವಿದ್ಯುತ್ ದೀಪದ ಬೆಳಕು ಎಲ್ಲರ ಗಮನ ಸೆಳಯುವಲ್ಲಿ ಯಶಸ್ವಿಯಾಯಿತು. ಸಂಪಿಗೆ ರಸ್ತೆಯಿಂದ ಕ್ಯಾಂಪಸ್ ಪ್ರವೇಶಿಸುವ ದಾರಿಯುದ್ದಕ್ಕೂ ಪಿರಮಿಡ್ ಮಾದರಿಯಲ್ಲಿ ಸಾಲಾಗಿ ನಿಂತಿರುವ ವಿದ್ಯುತ್ ದೀಪಾಲಂಕಾರಗಳ ಗೋಪುರಗಳ ನೋಟ ವಿಶೇಷವೆನ್ನಿಸಿತ್ತು. ಅಷ್ಟೇ ಅಲ್ಲದೇ ಕ್ಯಾಂಪಸ್ ಆವರಣದಲ್ಲಿ ಬೆಳಕಿನಿಂದ ಕಂಗೊಳಿಸುತ್ತಿದ್ದ ಹಲವು ಪ್ರಾಣಿಗಳ ಪ್ರತಿಕೃತಿಗಳು ನೋಡುಗರನ್ನು ಆಕರ್ಷಿಸಿದವು. ವರದಿ: ತೇಜಶ್ವಿನಿ ಕಾಂತರಾಜ್, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಅಂತರಕಾಲೇಜು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಆತ್ರಾಡಿ ಪ್ರಮೋದ್ ಶೆಟ್ಟಿ, 67ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಅಂತರ್ ವಿ.ವಿ. ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇದು ಮಂಗಳೂರು ವಿ.ವಿ.ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಆಳ್ವಾಸ್ ಗೆ ಒಲಿದ ಚೊಚ್ಚಲ ಚಿನ್ನದ ಪದಕವಾಗಿದೆ. ರಾಷ್ಟ್ರೀಯ ಮಟ್ಟದ ಅಂತರ್ ವಿ.ವಿ. ಕರಾಟೆ ಸ್ಪರ್ಧೆಯು ಜನವರಿ ಎರಡನೇ ವಾರದಲ್ಲಿ ಛತ್ತೀಸ್ ಘರ್ ರಾಜ್ಯದ ಭಿಲಾಸ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿಶ್ವ ವಿದ್ಯಾನಿಲಯದಲ್ಲಿ ನಡೆಯಲಿದೆ. ಆಳ್ವಾಸ್ ಸಾಂಸ್ಕೃತಿಕ ಯೋಜನೆಯ ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿರುವ ಪ್ರಮೋದ್, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಹಲವಾರು ನಾಟಕದಲ್ಲಿ ಅಭಿನಯಿಸಿ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧೆಗೈಯುತ್ತಿರುವ ಪ್ರಮೋದ್ ಅವರನ್ನು, ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಹೊಸ ಚಿಂತನೆಗೆ ಪೋಷಕರ ಸಹಕಾರ ಆಗತ್ಯ, ಅವರ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸಬೇಕು, ಕಾರಂತರ ಬಾಲ ಪುರಸ್ಕಾರದಿಂದ ಮಕ್ಕಳಲ್ಲಿ ಇನ್ನೂ ಹೊಸ ಹುರುಪು ಸೃಷ್ಠಿ ಸಾಧ್ಯ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಡೆದ ಕಾರಂತರ ಇಪ್ಪತ್ತೈದನೇ ಪುಣ್ಯ ಸ್ಮರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ – ಸಾಹಿತ್ಯಿಕ ರಸಗವಳ ಅನೂಹ್ಯ-೨೦೨೨ (ನಾವೀನ್ಯದ ಗೌಜಿ) ಮೂರನೇ ದಿನದ ಕಾರ್ಯಕ್ರಮದಲ್ಲಿ ಡಾ|| ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರದಾನ ಮಾಡಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ನ ದೃತಿ ಎಸ್, ಜಿ.ಎಂ. ವಿದ್ಯಾನಿಕೇತನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.26: ಶಾಲಾ ಕಟ್ಟದ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್ ಸೂಚನೆ ನೀಡಿದರು. ಅವರು ನಗರದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಕಳೆದ ಮೂರು ವರ್ಷಗಳ ನಿರ್ಮಾಣ ಹಾಗೂ ದುರಸ್ಥಿ ಕಾಮಗಾರಿಗಳ ಪ್ರಗತಿ ವಿವರಗಳನ್ನು ಪರಿಶೀಲಿಸಿದ ಅವರು, ಬೇರೆ ಬೇರೆ ಅನುದಾನಗಳನ್ನು ಒಗ್ಗೂಡಿಸಿ ಕಾಮಗಾರಿ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿಗಳಿಗೆ ತಿಳಿಸಿದರು. ವಿವೇಕಾ ಶಾಲಾ ಕಾಮಗಾರಿಯಲ್ಲಿ ೧೫೦ ಕಾಮಗಾರಿಗಳಿಗೆ ಪಿ.ಡಬ್ಲ್ಯೂ.ಡಿ ಹಾಗೂ ೩೮ ಕಾಮಗಾರಿಗಳಿಗೆ ಕೆ.ಆರ್.ಐ.ಡಿ.ಎಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪುತ್ತಿಗೆಯ ಶ್ರೀ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಸೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ ಹಾಗೂ ಭಾರತ್ ಸೌಟ್ಸ್ ಗೈಡ್ಸ್ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ ಮೋಹನ್ ಆಳ್ವರಿಗೆ ಸೌಟ್ಸ್ ಮತ್ತು ಗೈಡ್ಸ್ ಅತ್ಯುನ್ನತ ಪ್ರಶಸ್ತಿಯಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಈ ಸಂದರ್ಭ ಭಾರತ್ ಸೌಟ್ಸ್ ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಅವರು ಸೇರಿದಂತೆ ಹಲವು ಅತಿಥಿ ಗಣ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.26: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ೮೧೨೨ ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗಧಿಪಡಿಸಿರುವ ನಿಗಧಿತ ದಿನಾಂಕಗಳಂದು ನೊಂದಣಿ ಮಾಡಲು ಆದ್ಯತೆ ನೀಡುವಂತೆ ಹೇಳಿದರು. ಅವರು ಇಂದು ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಪ್ರಸ್ತುತ ಪರಿಷ್ಕರಣೆ ಅವಧಿಯಲ್ಲಿ ಮತದಾರರ ಸೇರ್ಪಡೆ,ತಿದ್ದುಪಡಿ ಕುರಿತ ಎಲ್ಲಾ ಸಂಕ್ಷಿಪ್ತ ವಿವರಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡುವಂತೆ ತಿಳಿಸಿದ ಅವರು, ಪರಿಷ್ಕರಣೆ ಅವಧಿಯಲ್ಲಿ ಸಾರ್ವನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ, ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಅಂತಿಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಾನವನಲ್ಲಿ ಸಹಾಯ ಪ್ರವೃತ್ತಿ ಮುಖ್ಯ. ಸೌಟ್ಸ್ -ಗೈಡ್ಸ್ ಸಂಸ್ಥೆ ಮಗುವಿಗೆ ಸಹಾಯ ಮನೋಭಾವ ಬೆಳೆಸುವಲ್ಲಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಜಾಂಬೂರಿ ಸಾರ್ಥಕತೆ ಪಡೆದಿದೆ ಎಂದು ಭಾರತ್ ಸ್ಕೌಟ್ಸ್-ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಹೇಳಿದರು ಪುತ್ತಿಗೆಯ ಶ್ರೀ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಸೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸಮಾರೋಪ ಭಾಷಣದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಸೌಟ್ಸ್ ಗೈಡ್ಸ್ ಸಂಸ್ಥೆ ಆರಂಭವಾಗಿ ೧೫೦ ವ? ಕಳೆದವು ಆದರೆ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಭಾರತದಲ್ಲಿ ನಡೆದಿದೆ. ಸಹಸ್ರಾರು ಮಂದಿ ಶಿಬಿರಾರ್ಥಿಗಳಿಗೆ ಹಲವು ಮೇಳಗಳ ಮೂಲಕ ಸಂಸ್ಕೃತಿಯ ಅನಾವರಣ ಸಾಧ್ಯವಾಗಿದೆ. ವಿಶ್ವ ಭ್ರಾತೃತ್ವ ಸಾರಲು ಇದಕ್ಕಿಂತ ದೊಡ್ಡ ವೇದಿಕೆ ದೊರೆಯಲು ಸಾಧ್ಯವಿಲ್ಲ. ಇಂತಹ ಯಶಸ್ಸು ಸ್ಕೌಟ್ಸ್ – ಗೈಡ್ಸ್ ಇತಿಹಾಸದಲ್ಲಿ ಹೊಸ ಮೈಲುಗಳು ಸೃಷ್ಟಿಸಿದೆ. ಇಂತಹ ಯಶಸ್ಸಿಗೆ ಬಹು ದೊಡ್ಡ ಮಟ್ಟದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ ಡಿ.26: ಮಂಗಳೂರು ವಿವಿ ವತಿಯಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಅಂತರಕಾಲೇಜು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿ, ಆಳ್ವಾಸ್ ಸ್ಪೋರ್ಟ್ಸ್ ಕರಾಟೆ ತರಬೇತಿ ಕೇಂದ್ರದ ವೃಂದಾ – 55, ಕೆಜಿ ವಿಭಾಗದ ಕುಮಿಟೆ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಬಹುಮಾನ ಮತ್ತು ಟೀಮ್ ಕುಮಿಟೆಯಲ್ಲಿ ಬೆಳ್ಳಿ ಪದಕದೊಂದಿಗೆ ದ್ವಿತೀಯ ಬಹುಮಾನ ವಿಜೇತರಾಗಿದ್ದಾರೆ. ವೃಂದಾ ಇವರು ಶಿವರಾಮ ಪ್ರಭು ಮತ್ತು ರೇಷ್ಮಾ ಎಸ್. ಪ್ರಭು ದಂಪತಿಯ ಸುಪುತ್ರಿ, ಪ್ರಸ್ತುತ ಆಳ್ವಾಸ್ ಸ್ಪೋರ್ಟ್ಸ್ ಕರಾಟೆ ತರಬೇತಿ ಕೇಂದ್ರದ ರಾಷ್ಟ್ರೀಯ ಕರಾಟೆಪಟು, ತರಬೇತುದಾರರಾದ ಆತ್ರಾಡಿ ಪ್ರಮೋದ್ ಶೆಟ್ಟಿ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯ ಇವರ ಚೊಚ್ಚಲ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ, ಟ್ರಸ್ಠಿ ವಿವೇಕ್ ಆಳ್ವ, ಪ್ರಾಂಶುಪಾಲರಾದ ಡಾ. ಕುರಿಯನ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ತಿಲಕ್ ಶೆಟ್ಟಿ ಇವರು ಶುಭಹಾರೈಸಿದ್ದಾರೆ.
ಐಶ್ವರ್ಯ ಕೋಣನ | ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕರಕುಶಲ ವಸ್ತು ಪ್ರದರ್ಶನದಲ್ಲಿ ಖ್ಯಾತನಾಮರ ಚಿತ್ರಗಳು ತೆಂಗಿನ ಕಾಯಿಯಲ್ಲಿ ಮೂಡಿದ್ದವು. ಅಬ್ದಲ್ ಕಲಾಂ, ಬುದ್ಧ, ಬಸವಣ್ಣ, ಶಿವಾಜಿಯ ಕೆತ್ತನೆಗಳು, ಪರಮೇಶ್ವರ ಸ್ವರೂಪ ವಿನ್ಯಾಸಗಳು ವಿಶೇಷವೆನ್ನಿಸಿದವು. ಅಲ್ಲದೇ ಜೋಕರ್, ಎತ್ತಿನ ಗಾಡಿ ಮತ್ತು ಪ್ರಾಣಿಗಳ ವಿನ್ಯಾಸಗಳು ತೆಂಗಿನ ಕಾಯಿ ಕೆತ್ತನೆಯಲ್ಲಿ ಕಾಣಿಸಿಕೊಂಡವು. ತೆಂಗಿನಕಾಯಿಯ ವಿನೂತನ ವಿನ್ಯಾಸಗಳಲ್ಲಿ, ಶಿವ, ಗಣೇಶ, ಹಾಗೂ ಇನ್ನಿತರ ತೆಂಗಿನಕಾಯಿಯ ಮೂರ್ತಿಗಳು ಗಮನಸೆಳೆದವು, ಧಾರವಾಡದ ಜಗದೀಶ್ ಅವರು ತೆಂಗಿನ ಕಾಯಿಯಲ್ಲಿ ವಿವಿಧ ಬಗೆಯ ಕಲಾಕೃತಿಗಳನ್ನು ರೂಪಿಸುವುದರ ಮೂಲಕ ಹಲವರ ಗಮನ ಸೆಳೆದಿದ್ದಾರೆ. ತಾವು ಹಿರಿಯರಿಂದ ಕಲಿತ ಕೌಶಲ್ಯವನ್ನು ಹೊಸ ಪೀಳಿಗೆಗೂ ದಾಟಿಸಬೇಕು ಎಂಬ ಆಶಯದೊಂದಿಗೆ ತೆಂಗಿನ ಕಾಯಿಯ ಚಿತ್ರಗಳನ್ನು ಕೆತ್ತಿ ಮಾರಾಟ ಮಾಡುತ್ತಿದ್ದಾರೆ. ತೆಂಗಿನಕಾಯಿಯಲ್ಲಿ ಮೂಡಿರುವ ಈ ವಿಶೇಷ ವಿನ್ಯಾಸ ನೋಡಲು ಸಾವಿರಾರು ಜನ ಬರುತಿದ್ದಾರೆ. ತೆಂಗಿನಕಾಯಿಯಂದರೆ ಅಡುಗೆಗೆ ಅಥವಾ ಎಳನೀರಿಗೆ ಅಷ್ಟೇ ಎಂದು ತಿಳಿದಿದ್ದವರು ಇಲ್ಲಿಗೆ ಭೇಟಿ ನೀಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪ್ರತಿನಿತ್ಯ ಸಾವಿರಾರು ವಿಧ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇಲ್ಲಿ ಸುಭದ್ರತೆಯನ್ನು ಕಾಯ್ದುಕೊಳ್ಳಲು ಅಗ್ನಿ ಶಾಮಕ ದಳದ ಸೇವಕರು ಸಕಲ ಸಿದ್ದತೆಗಳೊಂದಿಗೆ ಕಾರ್ಯನಿರತರಾಗಿದ್ದರು. ಜಾಂಬೂರಿಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರತಿ ಕ್ಷಣದ ಕಾರ್ಯಚರಣೆಗೆ ಸ್ಪಂದಿಸಲು 8 ಫೈರ್ ಎಂಜಿನ್, 9 ಅಗ್ನಿ ಬೈಕ್ಗಳು ಹಾಗೂ ಎರಡು ಕ್ಯು.ಆರ್.ವಿ ವಾಹನದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಗಳೂರಿನ ಮುಖ್ಯ ಅಗ್ನಿ ಶಾಮಕ ಅಧಿಕಾರಿ ಜಿ.ತಿಪ್ಪೆಸಾಮಿ ಮಾರ್ಗದರ್ಶನದಲ್ಲಿ ಮಂಗಳೂರು, ಉಡುಪಿ ಮತ್ತು ಮೈಸೂರು ವಿಭಾಗದ ಏಳು ಡಿ.ಎಫ್.ಒ ಅಧಿಕಾರಿಗಳು ಸತತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟೂ ೯೮ ಅಗ್ನಿ ಸೇವಕ ಸಿಬ್ಬಂದಿಗಳು ಯಾವುದೇ ಕಠಿಣ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧರಾಗಿದ್ದರು. ತುರ್ತು ಪರಿಸ್ಥತಿಯಲ್ಲಿ ಮಾಹಿತಿ ದೊರಕಲು ಒಂದು ಮುಖ್ಯ ಕಂಟ್ರೋಲ್ ರೂಂ ಮತ್ತು ಎಂಟು ಫೈರ್ ಎಂಜಿನ್ ಜೊತೆಗೆ ಎಂಟು ಅಗ್ನಿ ಬೈಕ್ಗಳು ವಿದ್ಯಾಗಿರಿಯ ಎಂಟು ಪ್ರಮುಖ ಸ್ಥಳಗಳಲ್ಲಿ ಸಿದ್ಧಪಡಿಸಲಾಗಿದೆ. ಕಿರಿದಾದ ಸ್ಥಳದಲ್ಲಿಯೂ ಸರಾಗವಾಗಿ ಸಂಚರಿಸುವ ಕ್ಯು.ಆರ್.ವಿ…
