Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಚಾಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿವಿ ಮಟ್ಟದ ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರ ಭಂಡಾರ್ಕಾಕಾರ್ಸ್ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಸುಕೇಶ್ ಪೂಜಾರಿ ಯಡ್ತರೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯದರ್ಶಿಯಾಗಿ ಬೈಂದೂರು ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿ ಪುನೀತ್ ಪೂಜಾರಿ ತಗ್ಗರ್ಸೆ ಆಯ್ಕೆಗೊಂಡಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಆಗಂತುಕರು ಮಾರಕಾಯುಧ ಹಿಡಿದು ಜನರಲ್ಲಿ ಭಯಸೃಷ್ಟಿಸಿ ಗೋವುಗಳ ಕಳವು ಮಾಡುತ್ತಿದ್ದರೂ ದೂರು ದಾಖಲಿಸುವ ಬದಲು ಪೊಲೀಸರು ಹಸು ಕಳೆದುಕೊಂಡವರನ್ನೇ ಪ್ರಶ್ನಿಸುವ ಸ್ಥಿತಿ ಬಂದಿದೆ. ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದವರು ಗೊಕಳ್ಳರಿಂದ ಬೀದಿಗೆ ಬಂದರೂ ಅವರಿಗೆ ಪರಿಹಾರ ಇರಲಿ ಕಾನೂನು ರಕ್ಷಣೆ ಕೂಡಾ ಇಲ್ಲದಂತಾಗಿದೆ ಎಂದು ಬಿಜೆಪಿ ಮಾಧ್ಯಮ ಸಹಾಯಕ ವಕ್ತಾರೆ ಸುಲೋಚನಾ ಭಟ್ ಆರೋಪಿಸಿದರು. ಅವರು ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನ ಸಭಾ ಕ್ಷೇತ್ರ ಗೋಸಂರಕ್ಷಣಾ ಪ್ರಕೋಷ್ಠದ ಆಶ್ರಯದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ನಡೆದ ಗೋಹತ್ಯೆ ಹಾಗೂ ಗೊಳ್ಳತನ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿ ಗೋಹತ್ಯಗೆ ಮುಂದೆ ನಿಂತು ಪೋಷಿಸುತ್ತಿರುವುದರಿಂದ ನಿರ್ಭ್ಯಯವಾಗಿ ಗೋಕಳವು ನಡೆಯುತ್ತಿದ್ದು, ಕರಾವಳಿಯಲ್ಲಂತೂ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಮಾದಕ ವಸ್ತುಗಳ ಮಾರಾಟದ ಬಗ್ಗೆ ಮಾಹಿತಿ ನೀಡಿದರೆ ನಿರ್ಧಾಕ್ಷಿಣ್ಯವಾಗಿ ಕೊಲ್ಲಲಾಗುತ್ತಿದೆ. ಈ ಕೊಲೆಯ ಹಿಂದೆ ಟಾರ‍್ಗೆಟ್ ಗ್ರೂಫ್ ಇದ್ದು, ಇವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಅ9: ಇಲ್ಲಿಗೆ ಸಮೀಪದ ಅರೆಹೊಳೆಯ ನಿರ್ಜನ ಅರಣ್ಯ ಪ್ರದೇಶದಲ್ಲಿ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತರನ್ನು ಹೇರೂರು ಗ್ರಾಮದ ರಾಗಿಹಕ್ಲು ಸಿದ್ದನಮನೆ ನಿವಾಸಿ ನಾರಾಯಣ ನಾಯ್ಕ (65) ಗುರುತಿಸಲಾಗಿದೆ. ಮೃತ ನಾರಾಯಣ ನಾಯ್ಕ ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದು ಶನಿವಾರ ಬೆಳಗ್ಗೆ ಮನೆಯಿಂದ ಹೊರಟವರು ಮಧ್ಯಾಹ್ನ 12ಗಂಟೆಯ ಸುಮಾರಿಗೆ ಅರೆಹೊಳೆ ಆಶೀರ್ವಾದ ಬಾರ್‌ನಲ್ಲಿ ಮದ್ಯ ಸೇವಿಸಿದ್ದರು ಎಂದು ಬಾರ್ ಮಾಲಕರು ತಿಳಿಸಿದ್ದು ಆ ಬಳಿಕ ಅವರು ನಾಪತ್ತೆಯಾಗಿದ್ದಾರೆ. ಭಾನುವಾರ ಬೆಳಗ್ಗೆ ಬಾರ್ ಹಿಂಭಾಗದಲ್ಲಿರುವ ಮಹಾದೇವ ಮಂಜ ಅವರಿಗೆ ಸೇರಿದ ನಿರ್ಜನ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ. ವರ್ಷದ ಹಿಂದೆ ಅವರ ಪುತ್ರನೊಬ್ಬ ಆಕಸ್ಮಿಕವಾಗಿ ಮೃತಪಟ್ಟಿದ್ದು, ಆ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಹೆಚ್ಚು ಹೆಚ್ಚು ಮದ್ಯ ಸೇವಿಸುತ್ತಿದ್ದರು ಎಂದು ಅವರ ಇನ್ನೊರ್ವ ಪುತ್ರ ರಾಜು ನಾಯ್ಕ ತಿಳಿಸಿದ್ದಾರೆ. ವಿಪರೀತ ಮದ್ಯ ಸೇವನೆ ಚಟಹೊಂದಿರುವ ನಾರಾಯಣ ನಾಯ್ಕ್ ಹೃದಯಾಘಾತದಿಂದ ಅಥವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ವಜ್ರದುಂಬಿ ಗೆಳೆಯರ ಬಳಗದ ನೇತೃತ್ವದಲ್ಲಿ ಹೆಗ್ಡೆ ಮತ್ತು ಹೆಗ್ಡೆ ಮೆಡಿಕಲ್ ಕಂಪನಿಯ ಸಹಭಾಗಿತ್ವದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಚರ್ಮರೋಗ ತಜ್ಞರ ತಂಡದವರಿಂದ ಮೂರನೇ ವರ್ಷದ ಉಚಿತ ಚರ್ಮರೋಗ ಚಿಕಿತ್ಸಾ ಶಿಬಿರ ಮತ್ತು ಉಚಿತ ಔಷಧಿ ವಿತರಣಾ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಖ್ಯಾತ ಚರ್ಮರೋಗ ತಜ್ಞ ಡಾ. ಸತೀಶ್ ಪೈ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ನುಡಿನಮನ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿತ್ತು. ಜಿಪಂ ಸದಸ್ಯೆ ಗೌರಿ ದೇವಾಡಿಗ, ಡಾ. ಸುಧೀರ್ ನಾಯಕ್, ಡಾ. ಅನುರಾಧಾ ಜಿಂದಾಲ್, ಮೆಡಿಕಲ್ ಕಂಪೆನಿಯ ರಿಜನಲ್ ಮ್ಯಾನೇಜರ್ ದಿನೇಶ್ ಕುಮಾರ್, ಉದ್ಯಮಿ ಬಿ. ಜಿ. ಲಕ್ಷ್ಮೀಕಾಂತ್ ಬೆಸ್ಕೂರ್, ಬಳಗದ ಗೌರವ ಸಲಹೆಗಾರ ಸುಬ್ರಹ್ಮಣ್ಯ ಜಿ. ಉಪ್ಪುಂದ, ಉಪಾಧ್ಯಕ್ಷ ಮಂಜುನಾಥ ಜಡ್ಡಿನಮನೆ, ಸಂತೋಷ್ ಒಡೆಯರ್, ಸುರೇಂದ್ರ ಖಾರ್ವಿ, ರಾಘವೇಂದ್ರ ಬಿಜೂರು, ಸತೀಶ್, ಸುರೇಶ್ ಬೆಸ್ಕೂರ್ ಇದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯಬೇಕಾದರೆ ಅವನಿಗೆ ಎಳವೆಯಲ್ಲಿಯೇ ಕ್ರೀಡೆಗೆ ಸರಿಯಾಗಿ ಪ್ರೋತ್ಸಾಹದ ಅಗತ್ಯವಿದೆ. ಅಂತಹ ನಿರಂತರ ಪ್ರೋತ್ಸಾಹವನ್ನು ವಿದ್ಯಾರ್ಥಿಗಳಿಗೆ ನಮ್ಮ ಕುಂದಾಪುರ ಎಜುಕೇಶನ್ ಸೊಸೈಟಿ ಕಲ್ಪಿಸುತ್ತಿದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಗಾಂಧಿ ಮೈದಾನದಲ್ಲಿ ಉ.ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ವಲಯ, ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಎಚ್.ಎಂ.ಎಂ ಅಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ಸಂಪನ್ನಗೊಂಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಉಪಾಧ್ಯಕ್ಷ ರಾಜೇಶ್ ಕಾವೇರಿ, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಕಿಶೋರ್ ಕುಮಾರ್, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ `ಆ್ಯಟ್ರೀಬ್ಯುಟ್ಸ್ ಆಫ್ ಆ್ಯಂಕರ್” ಎಂಬ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹಳೆ ವಿದ್ಯಾರ್ಥಿನಿ, ಪ್ರಸ್ತುತ ನ್ಯೂಸ್ 18 ಕನ್ನಡ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿರುವ ಶಮೀರಾ ಬೆಳವಾಯಿ ಭಾಗವಹಿಸಿದರು. ವಿದ್ಯೂನ್ಮಾನ ಮಾದ್ಯಮಗಳಲ್ಲಿ ನಿರೂಪಕರಾಗಲೂ ಅಗತ್ಯವಿರುವ ಕೌಶಲ್ಯಗಳ ಬಗ್ಗೆ ಬೆಳಕು ಚೆಲ್ಲಿದರು. ನಿರೂಪಕರಾಗಲೂ ಅಂದ-ಚಂದ ಎಂದೂ ಪ್ರಮುಖ ಮಾನದಂಡವಲ್ಲ. ವಿಷಯ ಜ್ಞಾನ, ಪ್ರಸ್ತುತ ವಿದ್ಯಮಾನಗಳ ತಿಳುವಳಿಕೆ, ನಿರಂತರ ಓದು ಪಾತ್ರವಹಿಸುವ ಪ್ರಮುಖ ಕೌಶಲಗಳು ಎಂದರು. ನಿರೂಪಕರಾಗಲೂ ಬೇಕಾದ `ಸಿ’ ಸೂತ್ರವನ್ನು ತಿಳಿಸಿದ ಅವರು, ಕಾನ್ಫಿಡೆನ್ಸ್, ಕ್ಲಾರಿಟಿ, ಕಾನ್ಸಟ್ರೇಶನ್, ಕ್ಯೂರಿಯಾಸಿಟಿ, ಕಾಮನ್‍ಸೆನ್ಸ್ ಗುಣಗಳು ಪ್ರಮುಖ ಪಾತ್ರವಹಿಸುತ್ತವೆ ಎಂದರು. ನಿರೂಪಣೆಯ ಜೊತೆಯಲ್ಲಿ ಹಿನ್ನಲೆಧ್ವನಿಗೆ ಸಂಬಂದಿಸಿದಂತೆ ವಿವಿಧ ಪ್ರಕಾರಗಳ ಸ್ಟೋರಿಗಳಿಗೆ ಬೇಕಾಗುವ ಧ್ವನಿಏರಿಳಿತದ ಪ್ರಾತ್ಯಕ್ಷಿಕೆಯನ್ನು ಮಾಡಿ ತೋರಿಸಿದರು. ಹಾರ್ಡ್ ನ್ಯೂಸ್, ಸೋಪ್ಟ್ ನ್ಯೂಸ್, ಕ್ರೈಂ, ಸ್ಪೋಟ್ಸ್, ಸ್ಪಶೆಲ್ ಸ್ಟೋರಿಗಳ ಧ್ವನಿ ಏರಿಳಿತದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಎಸ್. ಮಣಿಕಂಠ ಬೈಂದೂರು ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ ಜಿ. ಪರಮೇಶ್ವರ ಹಾಗೂ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ, ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷರಾದ ನಿರಂಜನ್ ರಾವ್ ಅವರು ನೇಮಕ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯೂ ಕೂಡಾ ಸರಿಸಮಾನವಾಗಿ ಕುಟುಂಬ ನಿರ್ವಹಣೆ ಮಾಡುತ್ತಿರುವುದು ಕಾಣಬಹುದಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕಿ ಶಾರದಾ ಹೇಳಿದರು. ಬೈಂದೂರು ರೋಟರಿ ಸಭಾಭವನದಲ್ಲಿ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಅರಸಿನ-ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯರಿಂದ ಬಂದಿರುವ ಸಂಪ್ರದಾಯವೂ ಕೂಡಾ ವಿಜ್ಞಾನವೇ ಆಗಿದೆ. ಧಾರ್ಮಿಕ ಸಂಕೇತಗಳು ಒಂದು ಧರ್ಮವನ್ನು ಉಳಿಸಿ, ಬೆಳೆಸುವಲ್ಲಿ ತಮ್ಮದೇ ಆದ ಪಾತ್ರವಹಿಸುತ್ತದೆ. ಅರಶಿನ, ಕುಂಕುಮ, ಕರೀಮಣಿ, ಮೂಗಿನ ನತ್ತು ಹಾಗೂ ಕಾಲುಂಗುರ ಇವುಗಳು ಗೃಹಿಣಿಯರ ಸೌಂದರ್ಯವರ್ಧಕ ಜತೆಗೆ ಮುತ್ತೈದೆ ಸಂಕೇತವಾಗಿದೆ. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಭಾರತೀಯ ನಾರಿ ನಡೆದು ಬಂದ ದಾರಿ ಕಳೆದು ಹೋಗುತ್ತಿದೆ. ನಮ್ಮ ಧಾರ್ಮಿಕ ಅಥವಾ ಇನ್ನಿತರ ಕಾರ್ಯಕ್ರಮಗಳಲ್ಲಿ ನಮ್ಮಲ್ಲಿನ ಕೆಲವರು ಧರಿಸುವ ಬಟ್ಟೆಗಳ ವಿನ್ಯಾಸಗಳು, ಆಹಾರ ಪದ್ದತಿಯೂ ಬದಲಾಗುತ್ತಿದೆ. ಆಧುನಿಕ ಭರಾಟೆಯಲ್ಲಿ ಅರಶಿನ, ಕುಂಕುಮ ಮಾಯವಾಗಿ ಆ ಸ್ಥಳವನ್ನು ಸ್ಟಿಕ್ಕರ್‌ಗಳು ಆವರಿಸಿಕೊಂಡಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಮತ್ತು ಅಭಿಯೋಗ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ಮಧ್ಯಸ್ಥಿಕೆದಾರರ ಮತ್ತು ಸಂಧಾನಕಾರರ ದಿನಾಚರಣೆ ಕುಂದಾಪುರ ಬಾರ್ ಅಸೋಸಿಯೇಶನ್ ಸಭಾಂಗಣದಲ್ಲಿ ಜರುಗಿತು. ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಇದರ ಅಧ್ಯಕ್ಷರಾದ, ಗೌರವಾನ್ವಿತ ಡಿ.ಪಿ ಕುಮಾರ ಸ್ವಾಮಿ ಇವರು ಕಾರ್ಯಕ್ರಮವನ್ನು ಉದ್ಘಾಟಸಿ, ಯಾವುದೇ ಪ್ರಕರಣಗಳನ್ನು ಸಂಧಾನ ಮಾಡುವ ಮೊದಲು ಮಧ್ಯಸ್ಥಿಕೆದಾರರು ಪಕ್ಷಗಾರರ ಮನೋಸ್ಥಿತಿಯನ್ನು ಮೊದಲಿಗೆ ಅರಿತು ಸಂಧಾನ ಪ್ರಕ್ರಿಯೆಯನ್ನು ನಡೆಸಿದರೆ ಅವರು ನಡೆಸಿರುವ ಸಂಧಾನ ಯಶ್ವಸಿಯಾಗಲು ಸಾಧ್ಯ. ಎಂದು ಹೇಳಿದರು. ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಇದರ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಧ್ಯಸ್ಥಿಕೆಯಿಂದ ರಾಜಿಯಾದ ಪ್ರಕರಣಗಳಲ್ಲಿ ಸೋಲು-ಗೆಲುವಿನ ಪ್ರಶ್ನೆ ಉದ್ಭವಿಸದೇ ಇರುವುದರಿಂದ ಕಕ್ಷಿಗಾರರಲ್ಲಿ ದ್ವೇಷ ಭಾವನೆ ಇರುವುದಿಲ್ಲ ಬದಲಾಗಿ ಇಬ್ಬರ ನಡುವೆ ಸಾಮರಸ್ಯದ ಭಾವನೆ ಮೂಡುದಲ್ಲದೇ ನ್ಯಾಯಾಲಯದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು, ತಗ್ಗರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರಿ ಜಾಗ/ಖಾಸಗಿ ಜಾಗ ಗುರುತಿಸಲು ಕಂದಾಯ ನಿರೀಕ್ಷಕರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮತಿ ಸಭೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರೊಡನೆ ಜಂಟಿ ನಡೆಸಲು ಜಿಲ್ಲಾ ಯೋಜನಾ ನಿರ್ದೇಶಕರು ನೀಡಿದ ಸೂಚನೆಯಂತೆ ಈ ಬಗ್ಗೆ ಕೂಡಲೇ ಸಭೆಯನ್ನು ಸಂಯೋಜಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸ್ಥಳೀಯಾಡಳಿತವನ್ನು ಒತ್ತಾಯಿಸಿದರು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪರ ತಾಲೂಕು ಸಮಿತಿ ಮತ್ತು ಬೈಂದೂರು ತಗ್ಗರ್ಸೆ ಗ್ರಾಮಗಳ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಬಡ ನಿವೇಶನ ರಹಿತರಿಂದ ಭೂಮಿ ಹಕ್ಕಿಗಾಗಿ ಪಡೆದ ಅರ್ಜಿಗಳನ್ನು ಗ್ರಾಮ ಪಂಚಾಯತ್ ಕಛೇರಿಗೆ ಹಸ್ತಾಂತರಿಸುವ ಹೋರಾಟ ಕಾರ್ಯಕ್ರಮ ಸಭೆಯಲ್ಲಿ ಅವರು ಮಾತನಾಡಿದರು. ಡೀಮ್ಡ್ ಅರಣ್ಯ ಪ್ರದೇಶ, ಗೋಮಾಳ ಪ್ರದೇಶದಲ್ಲಿ ವಾಸವಾಗಿರುವ ಬಡನಿವೇಶನ ರಹಿತರ ಕುಟುಂಬಕ್ಕೆ ಹಕ್ಕು ಪತ್ರ ಕೊಡಲು ಭೂಕಂದಾಯ ಕಾಯಿದೆ ತಿದ್ದುಪಡಿ ಮಾಡಲು…

Read More