ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಎಲ್ಲಾ ವಗ೯ದ ಕಾಮಿ೯ಕರಿಗೆ ಕೊರೋನಾ ನಗದು ಪರಿಹಾರಕ್ಕೆ ಒತ್ತಾಯಿಸಿ, ಸಿಪಿಐ(ಎಂ) ಪಕ್ಷದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಸಾವ೯ಜನಿಕ ಉಚಿತ ಲಸಿಕೆ, ಔಷಧಿಚಿಕಿತ್ಸೆಗಾಗಿ, ರೂ.10000 ನೇರ ನಗದು, ಉಚಿತ ಪಡಿತರಕ್ಕಾಗಿ, ರೈತ, ಕಾಮಿ೯ಕರ ವಿರೋಧಿ ಕಾನೂನುಗಳ ರದ್ಧತಿಗಾಗಿ, 200 ದಿನಗಳ ಉದ್ಯೋಗ ಖಾತ್ರಿಗಾಗಿ, ನಗರಗಳಿಗೂ ವಿಸ್ತರಣೆಗಾಗಿ, ಕೊರೊನಾ ಮುಂಚೂಣಿ ಕಾಯ೯ಕತ೯ರಿಗೆ ಸೂಕ್ತ ರಕ್ಷಣೆಗಾಗಿ, ಭಾದಿತ ಎಲ್ಲಾ ಕಾಮಿ೯ಕರಿಗೂ ಪೂಣ೯ ವೇತನ ಇತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಯಿತು. ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾಯ೯ದಶಿ೯ ಮಂಡಳಿ ಸದಸ್ಯ ಕೋಣಿ ವೆಂಕಟೇಶ ನಾಯಕ್ ,ನಾಗರತ್ನ ನಾಡ. ಬೈಂದೂರು ವಲಯ ಸಮಿತಿ ಮುಖಂಡ ಗಣೇಶ ತೊಂಡೆಮಕ್ಕಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಚಂದ್ರ ದೇವಾಡಿಗ ಉಪ್ಪುಂದ,ಮಾಧವ ದೇವಾಡಿಗ ಉಪ್ಪುಂದ ,ನಾಗಮ್ಮ ಮಸಾಲೆಮನೆ ಯಡ್ತರೆ, ರಾಮ ಕಾಟಿಮನೆ ಪಡುವರಿ, ನಾಗೇಂದ್ರ ಯಡ್ತರೆ, ಲಕ್ಷ್ಮಣ ಯಡ್ತರೆ, ಗಣೇಶ ಮೊಗವೀರ,ರವಿ ಗಾಣಿಗ ಉಪ್ಪುಂದ, ಹರೀಶ ಬೈಂದೂರು, ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ರಾಮಚಂದ್ರ ಭಟ್ ಕಾವೇರಿ ಮಾಗ೯…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮ ಮಟ್ಟದಲ್ಲಿ ಪಂಚಾಯತ್ ಪ್ರತಿನಿಧಿಗಳು, ಅಧಿಕಾರಿಗಳು, ಆಶಾ ಕಾರ್ಯಕರ್ತರು ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘಟಿತ ಕಾರ್ಯದಿಂದಾಗಿ ಕೆಲವೇ ದಿನಗಳಲ್ಲಿ ರಾಜ್ಯ ಕೋವಿಡ್ ಮುಕ್ತವಾಗುವ ವಿಶ್ವಾಸವಿದೆ ಎಂದು ರಾಜ್ಯ ಧಾರ್ಮಿಕ ದತ್ತಿ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ಬೈಂದೂರು ಪಟ್ಟಣ ಪಂಚಾಯತ್, ನಾವುಂದ, ಮರವಂತೆ ಹಾಗೂ ನಾಡ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಸಭೆ ನಡೆಸಿದ ಬಳಿಕ ಮಾತನಾಡಿ ನಮ್ಮ ಗ್ರಾಮ, ವಾರ್ಡ್ ಕೋವಿಡ್ ಮುಕ್ತವಾಗಿ ಮಾಡುತ್ತೇವೆ ಎಂದು ನಿಂತರೆ ಖಂಡಿತವಾಗಿ ಕೋವಿಡ್ ನಿಯಂತ್ರಣಕ್ಕೆ ತರಲು ಸಾಧ್ಯವಿದೆ ಎಂದರು. ಸಭೆಯಲ್ಲಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಹೆಚ್. ಎಸ್., ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ವೈದ್ಯಾಧಿಕಾರಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಡಾ. ನಂದಿನಿ, ಡಾ. ಸಹನಾ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ► ಬಿ.ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾನ್ಯ ಜಿಲ್ಲಾಧಿಕಾರಿಯ ಆದೇಶದ ಅನ್ವಯದಡಿ ಇಂದಿನಿಂದ ದಿನಗಳ ಕಾಲ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ, ಬ್ಯಾಂಕ್, ಸೊಸೈಟಿ ಹಾಗೂ ಸಂಘ ಸಂಸ್ಥೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ಗೆ ಹೊಸ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಬೈಂದೂರು ಪಟ್ಟಣ ಪಂಚಾಯತ್ಗೆ ಆಡಳಿತಾಧಿಕಾರಿಯನ್ನಾಗಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್. ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ನಿಸ್ವಾರ್ಥ ಸೇವಾ ಟ್ರಸ್ಟ್ ಸದಸ್ಯರಿಂದ 2ನೆಯ ಹಂತದ ಸೇವಾ ಕಾರ್ಯದಲ್ಲಿ ಲಾಕ್ ಡೌನ್ ಸಂದರ್ಭ ಕೆಲಸವಿಲ್ಲದೆ ಊಟಕ್ಕೂ ಕಷ್ಟಪಡುತ್ತಿರುವ ಸಂಕಷ್ಟದಲ್ಲಿರುವ 40 ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ದಿನ ನಿತ್ಯ ಉಪಯೋಗಕ್ಕೆ ಅಗತ್ಯವಿರುವ ಸಾಮಾಗ್ರಗಳನ್ನು ಕಿಟ್ ಒಳಗೊಂಡಿತ್ತು. ಟ್ರಸ್ಟ್ ಕಾರ್ಯಕ್ಕೆ ದಾನಿಗಳು ಧನ ಸಹಾಯ ಮಾಡಿದ್ದು, ಟ್ರಸ್ಟ್ ಸದಸ್ಯರು ಅವರಿಗೆ ಗಿಡ ನೀಡಿ ಪರವಾಗಿ ಧನ್ಯವಾದ ಸಲ್ಲಿಸಿದರು. ಇದನ್ನೂ ಓದಿ ► ಜೆಸಿಐ ಕುಂದಾಪುರ ಸಿಟಿಯಿಂದ ಲಾಕ್ಡೌನ್ನಲ್ಲಿ ಹಸಿದವರಿಗೆ ಊಟ: ನಿತ್ಯವೂ 200ಕ್ಕೂ ಅಧಿಕ ಮಂದಿಗೆ ವಿತರಣೆ – https://kundapraa.com/?p=48043 . ► ಕೊಟೇಶ್ವರ ಶ್ರೀ ರಾಮ ಸಂಘದ ವತಿಯಿಂದ ಲಾಕ್ಡೌನ್ ಅವಧಿಯಲ್ಲಿ ಉಚಿತ ಉಪಹಾರದ ವ್ಯವಸ್ಥೆ – https://kundapraa.com/?p=47877 . ► ಗಂಗೊಳ್ಳಿ ಯುವಕರಿಂದ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ಊಟೋಪಚಾರ ವ್ಯವಸ್ಥೆ -https://kundapraa.com/?p=47808 . ► ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲದಿಂದ ಹಸಿದವರಿಗೆ ಊಟ ವಿತರಣೆ – https://kundapraa.com/?p=48029 .…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಸುತ ಕೋವಿಡ್ 2 ನೇ ಅಲೆಯು ಕಡಿಮೆಯಾಗುತ್ತಿದ್ದು, ಮುಂದೆ ಕೋವಿಡ್ 3 ನೇ ಅಲೆ ಕಂಡುಬರುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈಗಿನಿಂದಲೇ ಅದನ್ನು ಎದುರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವ ಅಗತ್ಯವಿದ್ದು ಈ ಬಗ್ಗೆ ಜಿಲ್ಲೆಯ ವೈದ್ಯಕೀಯ ಪರಿಣಿತರ ತಂಡದ ಸದಸ್ಯರು ಸೂಕ್ತ ಯೋಜನೆ ರೂಪಿಸಲು ತಮ್ಮ ಸಲಹೆಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಮೊದಲನೇ ಅಲೆಯು 60 ವರ್ಷ ಮೇಲ್ಟಟ್ಟವರಲ್ಲಿ ಕಂಡು ಬಂದಿದ್ದು, ಎರಡನೇ ಅಲೆಯು 30 ರಿಂದ 55 ವರ್ಷದ ವಯೋಮಾನದವರಿಗೆ ಹೆಚ್ಚು ಕಂಡುಬಂದಿದ್ದು, ಪ್ರಸ್ತುತ ಈ ಎಲ್ಲಾ ವಯೋಮಿತಿಯವರಿಗೆ ಲಸಿಕೆ ನೀಡಲಾಗುತ್ತಿದ್ದು, 3ನೇ ಅಲೆಯು 18 ಕ್ಕಿಂತ ಕಡಿಮೆ ವಯೋಮಿತಿಯವರಲ್ಲಿ ಕಂಡು ಬರುವ ಸಂಭಾವ್ಯತೆಗಳಿದ್ದು, ಕೋವಿಡ್ ಮೊದಲನೇ ಮತ್ತು 2ನೇ ಅಲೆಯಲ್ಲಿ, ಮಕ್ಕಳಿಗೆ ಸೋಂಕು ಹರಡಿರುವ ಪ್ರಮಾಣ ಶೇ.3 ರಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕಾರ್ಯೋನ್ಮುಖವಾಗುವಂತೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ಗಳೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದರು. ಎಲ್ಲಾ ಗ್ರಾಮಗಳು 10 ದಿನದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಪ್ರಸ್ತುತ ಕಂಡು ಬಂದಿರುವ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಿ, ಯಾವುದೇ ಹೊಸ ಪ್ರಕರಣಗಳು ಕಂಡುಬರದಂತೆ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ತಮ್ಮ ವ್ಯಾಪ್ತಿಯಲ್ಲಿ ಕಠಿಣ ನಿರ್ಭಂಧಗಳನ್ನು ವಿಧಿಸಿ, ಕೋವಿಡ್ ಹರಡುವುದನ್ನು ನಿಯಂತ್ರಿಸಿ, ಕೋವಿಡ್ ಮುಕ್ತ ಗ್ರಾಮಗಳನ್ನಾಗಿಸಬೇಕು ಎಂದರು. ಗ್ರಾಮದಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಸೀಲ್ಡೌನ್ ಮಾಡಿದ ನಂತರ ಅವರ ಜೀವನ ನಿರ್ವಹಣೆಗೆ ಯಾವುದೇ ತೊಂದರೆಯಾಗದಂತೆ ಪಂಚಾಯತ್ ವತಿಯಿಂದ ಆಹಾರ್ ಕಿಟ್ಗಳನ್ನು ವಿತರಿಸಬೇಕು. ಪ್ರತಿದಿನ ಅವರ ಆಕ್ಸಿಜನ್ ಪ್ರಮಾಣವನ್ನು ಪಲ್ಸ್ ಆಕ್ಸಿಮೀಟರ್ ಮೂಲಕ ಪರೀಕ್ಷಿಸಬೇಕು. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಪ್ರತಿದಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳನ್ನು ಹೊರತು ಪಡಿಸಿ ಇತರ ವೈದ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಯನ್ನು ಹೆಚ್ಚಿಸಿ ಸರಕಾರ ಆದೇಶಿಸಿದ್ದು, ಈ ವಿಶೇಷ ಭತ್ಯೆಯನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ. ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷೆ ಡಾ. ವೀಣಾ ಎನ್. ಕಾರಂತ್ ನೇತೃತ್ವದ ಆಯುಷ್ ವೈದ್ಯಾಧಿಕಾರಿಗಳ ನಿಯೋಗ ಈ ಸಂಬಂಧ ಮನವಿಯನ್ನು ರಾಜ್ಯದ ಮುಖ್ಯಮಂತ್ರಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದೆ. ಕೊರೊನಾ ವೈರಾಣುವಿನ ಹಾವಳಿಯ ಸಂದರ್ಭದಲ್ಲಿ ಸರ್ಕಾರವು ಪ್ರತಿಯೊಬ್ಬ ಅಲೋಪಥಿ-ಆಯುಷ್ ವೈದ್ಯಾಧಿಕಾರಿಗಳನ್ನು ವಿವಿಧ ಜವಾಬ್ದಾರಿಗಳ ನಿರ್ವಹಣೆಗೆ ನಿಯೋಜಿಸಿದೆ. ಅಲೋಪಥಿ-ಆಯುಷ್ ವೈದ್ಯಾಧಿಕಾರಿಗಳನ್ನು ಯಾವುದೇ ತಾರತಮ್ಯವಿಲ್ಲದೇ ಎಲ್ಲ ರೀತಿಯ ಸೇವೆಗಳಿಗೂ ನಿಯೋಜಿಸಿ ಸರ್ಕಾರವು ಸರಿಸಮಾನವಾಗಿ ಸೇವೆಯನ್ನು ಪಡೆಯುತ್ತಿದೆ. ಪ್ರತಿ ಹಂತದಲ್ಲಿಯೂ ಕೋವಿಡ್19 ಕೆಲಸ ಕಾರ್ಯಗಳಲ್ಲಿ ಆಯುಷ್ ವೈದ್ಯರನ್ನು ಬಳಸಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 735 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 277, ಕುಂದಾಪುರ, ಬೈಂದೂರು ತಾಲೂಕಿನ 201, ಕಾರ್ಕಳ, ಹೆಬ್ರಿ ತಾಲೂಕಿನ 252 ಮಂದಿಗೆ ಹಾಗೂ ಹೊರ ಜಿಲ್ಲೆಯ 5 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 735 ಪ್ರಕರಣಗಳಲ್ಲಿ 27 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 708 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 62 ವರ್ಷದ ವೃದ್ಧೆ, ಕುಂದಾಪುರದ 69 ವರ್ಷದ ವೃದ್ಧ, 55 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 619 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5205 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3426 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 3025 ಮಂದಿಗೆ ಮೊದಲನೇ ಡೋಸ್, 126 ಮಂದಿಗೆ…
