Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದಲ್ಲಿರುವ ಸಹಕಾರಿ ಸಂಘವೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಘವೇಂದ್ರ ಜೋಗಿ (48) ಅವರು ಕಟ್ಟಬೆಲ್ತೂರಿನ ಮನೆ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಅವರು ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ­ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಳೆದ 18 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಅವರು ಕಟ್‌ಬೆಲ್ತೂರಿನಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಿದ್ದರು. ಮನೆಯಲ್ಲಿ ಡತ್‌ ನೋಟ್‌ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ: 307, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ, ಸೆ.25: ಶಾರ್ಜಾದಲ್ಲಿ ನಿಗೂಢವಾಗಿ ಕೊಲೆಗೀಡಾಗಿರುವ ಕುಂದಾಪುರದ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಶವ ಶಾರ್ಜಾದಿಂದ ಇಂದು ವಿಮಾನದ ಮೂಲಕ ಹುಟ್ಟೂರಿಗೆ ಬರಲಿದೆ. ಗುರುವಾರ ರಾತ್ರಿ 11 ಗಂಟೆಗೆ ಶಾರ್ಜಾದಿಂದ ಪ್ರಕಾಶ್ ಅವರ ಸಂಬಂಧಿಕರು ಹಾಗೂ ಕಂಪೆನಿಯವರು ವಿಮಾನದಲ್ಲಿ ಪಾರ್ಥಿವ ಶರೀರದೊಂದಿಗೆ ಹೊರಟಿದ್ದು, ಶುಕ್ರವಾರ ಬೆಳಗಿನ ಜಾವ 4-5 ಗಂಟೆಯ ಸುಮಾರಿಗೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕಳೆದ 14 ವರ್ಷಗಳಿಂದ ಶಾರ್ಜಾದಲ್ಲಿ ಸಿಮನ್ಸ್ ಕಂಪೆನಿಯ ಖಾಸಗಿ ವಿಮಾನ ಯಾನ ಸಂಸ್ಥೆಯ ಟರ್ಮಿನಲ್ – 2ರಲ್ಲಿ ಹಿರಿಯ – ಮ್ಯಾನೇಜರ್ ಆಗಿದ್ದ ಅಲ್ವಿನ್ ಪ್ರಕಾಶ್ ಕುಂದ‌ರ್ ಅವರ ಮೃತದೇಹವು ಆ.12 ರಂದು ಅಲ್ ಅಮಿನ್ ಎಂಬ ರಸ್ತೆಯ ಪಾರ್ಕಿಂಗ್ ಪ್ರದೇಶದಲ್ಲಿ ಅವರದೇ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ಜತೆಗಿದ್ದ ಪತ್ನಿ ಹಾಗೂ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇದನ್ನೂ ಓದಿ ► ಕುಂದಾಪುರ ಮೂಲದ ವ್ಯಕ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ YES!+ (ಯೂತ್ ಎಂಪವರ್‌ಮೆಂಟ್ ಅಂಡ್ ಸ್ಕಿಲ್ಸ್) ಕುರಿತು ಪರಿಚಯಾತ್ಮಕ ಅಧಿವೇಶನವನ್ನು ಬುಧವಾರ ಆಯೋಜಿಸಲಾಗಿತ್ತು. ಆರ್ಟ್ ಆಫ್ ಲಿವಿಂಗ್ ಯೂತ್ ಫ್ಯಾಕಲ್ಟಿ, ಎಂ.ಬಿ.ಬಿ.ಎಸ್. ಪದವೀಧರರಾದ ಡಾ. ವಿಕಾಸ್ ಗೌತಮ್ ಮತ್ತು ಸಾಫ್ಟ್‌ವೇರ್ ವೃತ್ತಿಪರ ಹಾಗೂ ಆರ್ಟ್ ಆಫ್ ಲಿವಿಂಗ್ ಯೂತ್ ಫ್ಯಾಕಲ್ಟಿ ನವ್ಯ ಕೆ. ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಆತ್ಮವಿಶ್ವಾಸ ವೃದ್ಧಿ, ಸ್ಪಷ್ಟತೆ, ನಿರ್ಧಾರ ಕೈಗೊಳ್ಳುವ ಕೌಶಲ್ಯ ಮತ್ತು ಒತ್ತಡ-ಮುಕ್ತ ಕಲಿಕೆಯನ್ನು ಉತ್ತೇಜಿಸುವ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮವನ್ನು ವಾಣಿಜ್ಯ ಸಂಘದ ಸಂಯೋಜಕಿ ರೂಪಾ ಶೆಟ್ಟಿ ಹಾಗೂ ವ್ಯವಹಾರ ಆಡಳಿತ ಸಂಘದ ಸಂಯೋಜಕಿ ರಕ್ಷಾ ಕೆ.ಸಿ. ಅವರು ಸಂಯೋಜಿಸಿದ್ದರು. ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೈತನ್ಯ ಅವರು ವಂದನಾರ್ಪಣೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ಒಳಗಾಗಿಲ್ಲ ಆದರೆ ರಾಜ್ಯದಲ್ಲಿ ಬಿಜೆಪಿ ರಾಜಕೀಯ ದಿವಾಳಿಯಾಗಿದೆ ಎಂದು ಕೆಪಿಸಿಸಿ ಸಂಯೋಜಕ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ಮುಗಿಲುಮುಟ್ಟಿದೆ. ಬಿಜೆಪಿ ನಾಯಕರುಗಳಲ್ಲಿನ ಬಣ ಬಡಿದಾಟದಿಂದ ಈಗಾಗಲೇ ಬಿಜೆಪಿ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಪರಿಸ್ಥಿತಿಯಲ್ಲಿದೆ. ಇನ್ನೊಂದು ಕಡೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಭರವಸೆ ನೀಡಿದ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗೂ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ಜೊತೆಯಲ್ಲಿ 2028 ರ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವುದನ್ನು ಅರಿತ ಬಿಜೆಪಿ ನಾಯಕರುಗಳು ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವ ಮೊದಲು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಕೂಡಲೇ ಬಿಡುಗಡೆ ಮಾಡುವಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ವಿಶೇಷವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು. ಈ ಹಿನ್ನಲೆಯಲ್ಲಿ ಸಂಘದ ಅಧ್ಯಕ್ಷರಾದ ಯಾದವ ಕರ್ಕೇರ ಮಾತನಾಡಿ, ನಮ್ಮ ಊರು ಹಾಗೂ ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಪ್ರತಿನಿತ್ಯ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ, ನಮ್ಮ ಬಳಗ ಅವರ ಮನೆಗಳಿಗೆ ತೆರಳಿ ಆತ್ಮೀಯವಾಗಿ ಗೌರವ ಸಲ್ಲಿಸಿದ್ದೇವೆ ಇಂತಹ ಕಾರ್ಯ ಭಗವಂತನಿಗೆ ಭಕ್ತಿ ಸಲ್ಲಿಸುವ ಕಾರ್ಯಕ್ಕೆ ಸಮಾನವಾದದ್ದು ಎಂದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ಜೀವನದಲ್ಲಿ ನಾವೇನಾದರೂ ಒಳ್ಳೆ ಸಾಧನೆ ಮಾಡಿದ್ದೇವೆ, ಸುಖವಾಗಿದ್ದೇವೆ ಎಂದಾದರೆ ಹೆತ್ತ ಅಮ್ಮನಿಗೆ, ಜನ್ಮ ಕೊಟ್ಟ ತಂದೆಗೆ ಮತ್ತು ವಿದ್ಯೆ ಕಲಿಸಿದ ಗುರುವಿಗೆ ಧನ್ಯವಾದವನ್ನು ಹೇಳಬೇಕು. ತಮ್ಮೆಲ್ಲ ಕಷ್ಟಗಳನ್ನು ಮರೆತು ವಿದ್ಯಾರ್ಥಿಗಳ ಬದುಕಿನ ಸಾಧನೆಯ ಕಾರಣಕ್ಕೆ ಶ್ರಮಿಸುವ ಶಿಕ್ಷಕರನ್ನು ಗೌರವಿಸಬೇಕು ಎಂದು ವಾಗ್ಮಿ, ಧಾರ್ಮಿಕ ಚಿಂತಕ ಎನ್. ದಾಮೋದರ ಶರ್ಮಾ ಹೇಳಿದರು. ಅವರು  ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ವಲಯ ಮಟ್ಟದ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ವಿದ್ಯಾರ್ಥಿಗಳು ವ್ಯಸನಕ್ಕೆ ತುತ್ತಾಗಬಾರದು. ವಿದ್ಯಾರ್ಥಿ ಜೀವನದಲ್ಲಿ ಎಚ್ಚರ ತಪ್ಪಿದರೆ ಇಡೀ ಜೀವನ ಸಂಪೂರ್ಣ ಹಾಳಾಗುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ದಾರಿಗೆ ಬಂದು ತಮ್ಮ ಭವಿಷ್ಯವನ್ನು ಸರಿಯಾಗಿ ರೂಪಿಸಿಕೊಳ್ಳಬೇಕು. ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ವಲಯ-1ರ ಅಸಿಸ್ಟೆಂಟ್ ಗವರ್ನರ್ ಜೆ. ಶ್ರೀನಾಥ ರಾವ್ ಮಾತನಾಡಿ, ಮಕ್ಕಳಿಗೆ ಮೌಲ್ಯಯುತ ಶಿಕ್ಷಣದ ಅವಶ್ಯಕತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಬುಧವಾರ ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ, ಉಡುಪಿ ಜಿಲ್ಲೆ ಇದರ ಕಾರ್ಯದರ್ಶಿಗಳಾದ ಆನಂದ ಅಡಿಗ ಅವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕರ ಜವಾಬ್ದಾರಿ ಹಾಗೂ ಸೇವೆಯ ಮಹತ್ವದ ಕುರಿತು ತಿಳಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಸೀನಿಯರ್ ರೋವರ್ಸ್ ಮೇಟ್ ಶ್ರೇಯಸ್ ಪ್ರಭು ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೆಂಜರ್ಸ್ ಸ್ವಯಂಸೇವಕಿ ಅಶ್ವಿನಿ ಉದ್ಘಾಟಕರನ್ನು ಪರಿಚಯಿಸಿದರು. ಪೂಜಾಶ್ರೀ ಸ್ವಾಗತಿಸಿದರು. ರೇಂಜರ್ ಲೀಡರ್ ರೇವತಿ ಡಿ. ವಂದಿಸಿದರು. ಸೀನಿಯರ್ ರೆಂಜರ್ಸ್ ಮೇಟ್ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕತಾರ್:‌ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ವತಿಯಿಂದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರ ದಿನಾಚರಣೆಯನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ ಮುಂಬೈ ಹಾಲ್‌ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. “ಭವಿಷ್ಯವನ್ನು ನಿರ್ಮಿಸುವ ದೂರದೃಷ್ಟಿಯ ಸಾಧಕರಿಗೆ ನಮನ” ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮವು ಸರ್ ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿ, ಅಭಿಯಂತ್ರಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಸ್ಮರಿಸುವ ಮೂಲಕ ಆರಂಭಗೊಂಡಿತು. ಕರ್ನಾಟಕ ಸಂಘ ಕತಾರ್‌ನ ಮಾಧ್ಯಮ, ಸಾರ್ವಜನಿಕ ಸಂಪರ್ಕ ಮತ್ತು ಬೆನಿವೊಲೆಂಟ್ ಕಾರ್ಯದರ್ಶಿ ಪ್ರಶಾಂತ್ ಹಿರೇಮಠ್ ಅವರು ಆರಂಭಿಕ ಮಾತುಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಅಭಿಯಂತ್ರಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಬಿಂಬಿಸುವ ವಿಡಿಯೊ ಪ್ರದರ್ಶನ ನಡೆಯಿತು. ಕರ್ನಾಟಕ ಸಂಘ ಕತಾರ್‌ನ ಪ್ರಧಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ (ಆಡಳಿತ) ಉಡುಪಿ ಜಿಲ್ಲೆ ಇವರ ಆಸರೆಯಲ್ಲಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸೃಷ್ಠಿ ಆರ್. (73 ಕೆಜಿ), ಜನನಿ (49 ಕೆಜಿ), ಅಮೂಲ್ಯ( 40 ಕೆಜಿ) ವಿಭಾಗದಲ್ಲಿ ಆಯ್ಕೆಯಾಗಿದ್ದು ರಾಜ್ಯ ಮಟ್ಟಕ್ಕೆ ಅರ್ಹತೆ ಹೊಂದಿರುತ್ತಾರೆ. ಒಟ್ಟು ಜಿಲ್ಲಾ ಸ್ಪರ್ಧೆಯಲ್ಲಿ ಒಂಬತ್ತು ಪುರಸ್ಕಾರಗಳು ಪಡೆದಿದ್ದು ವಿಜೇತರನ್ನು ಮತ್ತು ತರಬೇತಿಗೊಳಿಸಿದ ದೈಹಿಕ ಶಿಕ್ಷಕಿಯಾದ ಮಮತಾ ಅವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರೇಮಾನಂದ್  ಮತ್ತು ಆಡಳಿತ ಮಂಡಳಿ ಅಭಿನಂದಿಸಿ ಶುಭ ಹಾರೈಸಿದೆ

Read More