Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಕಳೆದ ಹದಿನೈದು ವರ್ಷಗಳಿಂದ ಸಂಘಟಿಸುತ್ತಿದ್ದು, ಈ ಕರಾವಳಿ ಮಣ್ಣಿನ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಪಂ ಸದಸ್ಯ ಸುರೇಶ ಬಟ್ವಾಡಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನದ ಆಶ್ರಯದಲ್ಲಿ ಶಿರೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಸಿಗದೇ ಅವರ ಪ್ರತಿಭೆ ಕಮರಿ ಹೋಗುತ್ತಿತ್ತು, ಆದರೆ ಈಗ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳು ದೊರಕುತ್ತಿದೆ. ಈ ನೆಲೆಯಲ್ಲಿ ಇದು ಕೇವಲ ಭಾಷಣಕ್ಕೆ ಸೀಮಿತವಾದ ವೇದಿಕೆಯಾಗದೇ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುವಲ್ಲಿ ಪರಿಪೂರ್ಣತೆ ಕಾಣಬೇಕು ಎಂದರು. ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ನಾರಾಯಣ ಗುರುಗಳ ೧೬೩ನೇ ಜನ್ಮ ದಿನಾಚರಣೆಯನ್ನು ಅರ್ಥಗರ್ಬಿತವಾಗಿ ಆಚರಿಸಲಾಯಿತು. ಶ್ರೀ ಗುರುಗಳ ಶ್ರೀರಕ್ಷೆ ಬೇಡುತ್ತಾ ಪುಷ್ಪ ನಮನ ಸಲ್ಲಿಸಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗೋವಿಂದರಾಜು ಇವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಶಾಲೆಯ ಸಂಸ್ಥಾಪಕರಾದ ಡಾ|. ಎನ್.ಕೆ.ಬಿಲ್ಲವ ಸಭಾಧ್ಯಕ್ಷತೆ ವಹಿಸಿ ಶ್ರೀ ಗುರುಗಳನ್ನು ಸ್ಮರಿಸಿ ಗುರುಗಳ ಜೀವನ ಶೈಲಿಯನ್ನು ತಿಳಿಸಿದರು. ಈ ಸಭೆಯಲ್ಲಿ ಗೋಪಾಲ ಕೆ. ಪೂಜಾರಿ ಗೌರವಾಧ್ಯಕ್ಷರು ಬಿಲ್ಲವ ಸಮಾಜ ಸೇವ ಸಂಘ ನಾವುಂದ, ಶೇಖರ ಪೂಜಾರಿ ಉಪಾಧ್ಯಕ್ಷರು. ಶ್ರೀ ಗುರು ನಿತ್ಯಾನಂದ ಕೋ. ಆಪರೇಟಿವ್ ಸೊಸೈಟಿ ಅರೆಹೊಳೆ, ಸುರೇಶ್ ಪೂಜಾರಿ ನಿರ್ದೇಶಕರು ಶ್ರೀ ಗುರು ನಿತ್ಯಾನಂದ ಕೋ. ಆಪರೇಟಿವ್ ಸೊಸೈಟಿ ಅರೆಹೊಳೆ, ಸಾವಿತ್ರಿ ನಿರ್ದೇಶಕರು ಶ್ರೀ ಗುರು ನಿತ್ಯಾನಂದ ಕೋ. ಆಪರೇಟಿವ್ ಸೊಸೈಟಿ ಅರೆಹೊಳೆ, ಶಂಕರ ಪೂಜಾರಿ ಸಂಚಾಲಕರು ಹಾಗೂ ಅರುಣ ಬಿ ಪೂಜಾರಿ ಆಡಳಿತಾಧಿಕಾರಿ ಶುಭದಾ ಶಾಲೆಗಳು ಕಿರಿಮಂಜೇಶ್ವರ. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀ ಗೋವಿಂದರಾಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮೊಬೈಲ್ ಹಾಗೂ ಟಿವಿ ಮಾಧ್ಯಮದಿಂದ ವಿದ್ಯಾರ್ಥಿಗಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಕ್ಷೀಣಿಸುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಅನೇಕ ಕ್ರೀಡೆಗಳು ನಶಿಸಿ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಶಾಲಾ ಕಾಲೇಜುಗಳಲ್ಲಿ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿ ಮಕ್ಕಳನ್ನು ಈ ಕ್ಷೇತ್ರದಲ್ಲಿ ಬೆಳೆಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕುಂದಾಪುರ ವಲಯ ಮಟ್ಟದ ಬಾಲಕರ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಜಿಎಸ್‌ವಿಎಸ್ ಅಸೋಶಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಶಸ್ತಿಗಾಗಿ ಅರ್ಜಿ ಹಾಕಿ ರಾಜಕೀಯ ಒತ್ತಡ ತಂದು ಪ್ರಶಸ್ತಿ ಪಡೆಯುವ ಇಂದಿನ ದಿನಗಳಲ್ಲಿ ತನ್ನ ಕಾರ್ಯ ಸಾಧನೆಯಿಂದ ಹಾಗೂ ಶಾಲೆಯು ಪ್ರತಿ ವರ್ಷ ದಾಖಲಿಸುತ್ತಿರುವ ಶೈಕ್ಷಣಿಕ ಸಾಧನೆಯಿಂದ ಶಾಲೆಯ ಮುಖ್ಯೋಪಾಧ್ಯಾಯರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಪ್ರಶಂಸನೀಯ. ಉತ್ತಮ ಶಿಕ್ಷಕ ಪ್ರಶಸ್ತಿಯು ಶಾಲೆಯ ಇತರ ಶಿಕ್ಷಕರಿಗೆ ಪ್ರೇರಣೆಯಾಗುವಂತಾಗಲಿ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ವತಿಯಿಂದ ಬುಧವಾರ ಜರಗಿದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ೨೦೧೬-೧೭ನೇ ಸಾಲಿನ ಅನುದಾನ ರಹಿತ ಶಾಲೆಗಳ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಬೈಂದೂರು ಕ್ಷೇತ್ರದಲ್ಲಿ ತನ್ನ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದ್ದೇನೆ. ಬೈಂದೂರು ಕ್ಷೇತ್ರದಲ್ಲಿ ಈಗಾಗಲೇ 1664 ಫಲಾನುಭವಿಗಳಿಗೆ ಮನೆಗಳು ಮಂಜೂರು ಮಾಡಲಾಗಿದೆ. ಆಕ್ರಮ ಸಕ್ರಮ ಮತ್ತು 94ಸಿ ಹಾಗೂ 94ಸಿಸಿಯಲ್ಲಿ ಜಾಗ ಮಂಜೂರು ಮಾಡಲಾಗಿದೆ. ಪಶು ಭಾಗ್ಯ ಯೋಜನೆಯಲ್ಲಿ 27 ಗುಂಪುಗಳಿಗೆ ಹಸುಗಳನ್ನು ನೀಡಲಾಗಿದೆ. ಕ್ಷೇತ್ರದಲ್ಲಿ ಸುಮಾರು ರೂ.33 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ, ಯಡಮೊಗೆ ಗ್ರಾಮವನ್ನು ಗ್ರಾಮ ವಿಕಾಸ ಯೋಜನೆಯಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ಬೈಂದೂರು ಕ್ಷೇತ್ರ ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ಹೇಳಿದರು. ಅವರು ಸಿದ್ದಾಪುರ ಶ್ರೀ ರಂಗನಾಥ ಸಭಾ ಭವನದಲ್ಲಿ ನಡೆದ ಸಿದ್ದಾಪುರ, ಉಳ್ಳೂರು 74, ಶಂಕರನಾರಾಯಣ, ಯಡಮೊಗೆ, ಹೊಸಂಗಡಿ, ಮಚ್ಚಟ್ಟು ಗ್ರಾಮ ಪಂಚಾಯತ್‌ ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ವಿವಿಧ ಸವಲತ್ತು ಮತ್ತು ಹಕ್ಕುಪತ್ರವನ್ನು ವಿತರಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾಂತ್ಯದ ಕಳೆದ ನಾಲ್ಕು ವರ್ಷಗಳಲ್ಲಿ ನಡೆಯುತ್ತಿರುವ ಹಿಂದೂ ಮುಖಂಡರು ಹಾಗೂ ಯುವಕರ ಹತ್ಯೆ ಖಂಡಿಸಿ, ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆ ನಿಷೇಧ ಹಾಗೂ ಸಚಿವ ರಮಾನಾಥ ರೈ ಅವರ ರಾಜಿನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಯುವ ಮೋರ್ಚಾ ಮಂಗಳೂರು ಚಲೋ ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದು ಕುಂದಾಪುರ ಹಾಗೂ ಹೆಮ್ಮಾಡಿಯಿಂದ ಬೈಕ್ ರ‍್ಯಾಲಿಯಲ್ಲಿ ಹೊರಟ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರಿಗೆ ಪೊಲೀಸರು ತಡೆಯೊಡ್ಡಿ ಬಂಧಿಸಿ ಬಿಡುಗಡೆಗೊಳಿಸಿದ ಘಟನೆ ನಡೆಯಿತು. ಕುಂದಾಪುರದಲ್ಲಿ ಜರುಗಿದ ಬೈಕ್ ರ‍್ಯಾಲಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಜಿಲ್ಲಾ ಬಿಜೆಪಿ ಹಿಂದೂಳಿದ ಮೋರ್ಚಾಗಳ ಅಧ್ಯಕ್ಷ ರಾಜೇಶ್ ಕಾವೇರಿ, ಮುಖಂಡರುಗಳಾದ ದಿನಕರ್ ಬಾಬು, ಕಿರಣಕುಮಾರ್ ಕೊಡ್ಗಿ, ಮಹೇಶ್ ಕುಮಾರ್, ವಿಠಲ ಪೂಜಾರಿ, ಸದಾನಂದ ಬಳ್ಕೂರು ಸತೀಶ್ ಪೂಜಾರಿ ವಕ್ವಾಡಿ ಮೊದಲಾದವರು ಭಾಗವಹಿಸಿದ್ದರು. ಹೆಮ್ಮಾಡಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿಗಳ ವತಿಯಿಂದ ಗುರುಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪವನ್ ಗಾಣಿಗ, ಸಂತು ಕೋಟ್ಯಾನ್, ರಾಘವೇಂದ್ರ ಬಳೆಗಾರ್, ಸಂದೀಪ್ ಕಾಂಚನ್, ಪ್ರಸಾದ್ ಚಂದನ್, ನಾಗರಾಜ್ ಪೂಜಾರಿ, ಗಣೇಶ್, ರಾಘವೇಂದ್ರ, ಪ್ರಸಾದ್, ಆಶಾ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ನಾರಾಯಣ ಗುರುಗಳ ಒಂದೇ ಜಾತಿ, ಓಂದೇ ಧರ್ಮ ಎನ್ನುವ ಸಂದೇಶವನ್ನು ಜೀವನದಲ್ಲಿ ಅನುಷ್ಟಾನ ಮಾಡಿದರೆ ಈ ಆಚರಣೆಗಳಿಗೆ ನಿಜವಾದ ಅರ್ಥ ಬರುತ್ತದೆ. ಗುರುಗಳ ತತ್ವ, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು  ಕುಂದಾಪುರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಜರಗಿದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ದೀಪಬೆಳಗಿಸಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಉಡುಪಿಯ ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನ ಉಪನ್ಯಾಸಕ ದಯಾನಂದ್‌ ಮಾತನಾಡಿ, ವಿದ್ಯೆ, ಸ್ವತಂತ್ರ, ಸಂಘಟನೆ, ಹೋರಾಟದಿಂದ ಸಮಸ್ಯೆಗಳ ಪರಿಹಾರ ಸಾಧ್ಯ ಎಂದು ಕಂಡುಕೊಂಡ ನಾರಾಯಣಗುರುಗಳು ಸಮಾಜವನ್ನು ಶೈಕ್ಷಣಿಕವಾಗಿ ಮೇಲೆತ್ತುವ ಚಿಂತನೆಯನ್ನು ಕಂಡುಕೊಂಡರು. ಶಿಕ್ಷಣ ಹಾಗೂ ಜ್ಞಾನದ ಕೊರತೆಯಿಂದಾಗಿ ಜನರಿಗೆ ಸಮಸ್ಯೆಗಳು ಎದುರಾಗುತ್ತಿರುವುದನ್ನು ಮನಗಂಡ ಅವರು ಶಿಕ್ಷಣದಿಂದ ಎಲ್ಲಾ ಸಮಸ್ಯೆಗಳ ನಿರ್ಮೂಲನೆ ಸಾಧ್ಯ ಎಂದು ಅರಿತು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಕಾರ್ಯಕ್ಕೆ ಕೈ ಹಾಕಿದರು. ಒಟ್ಟಿನಲ್ಲಿ ಅವರ ತತ್ವ ಸಿದ್ಧಾಂತಗಳ ದಾರಿಯಲ್ಲಿ ನಡೆದ್ದಲ್ಲಿ ಸಮಸ್ಯೆಗಳಿಗೆ ಪರಿಹಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ಅನಂತ ಚತುರ್ದಶಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ೮ ಗಂಟೆಗೆ ದೇವತಾ ಪ್ರಾರ್ಥನೆಯಿಂದ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿತು. ನಂತರ ಕೋಟಿ ತೀರ್ಥಕ್ಕೆ ತೆರಳಿ ಗಂಗಾಪೂಜೆ, ಶೇಷ ಪೂಜೆ ನಡೆದು ಅನಂತ ಕಲಶವನ್ನು ಪುರಮೆರವಣಿಗೆಯೊಂದಿಗೆ ತಂದು ಶ್ರೀ ದೇವಳದಲ್ಲಿ ಸ್ಥಾಪಿಸಲಾಯಿತು. ದೇವಳದಲ್ಲಿ ಕಲ್ಪೋಕ್ತ ಪೂಜೆ, ಗ್ರಂಥಿ ಪೂಜೆ ನಡೆದವು. ಮಧ್ಯಾಹ್ನ ಭಜನೆ, ಶ್ರೀ ಪಟ್ಟಾಭಿ ರಾಮಚಂದ್ರ ದೇವರಿಗೆ ಮಧ್ಯಾಹ್ನ ಪೂಜೆ, ಶ್ರೀ ಅನಂತ ದೇವರಿಗೆ ಮಹಾಪೂಜೆ, ಚತುರ್ದಶ ನಮಸ್ಕಾರಗಳು ನಡೆದವು. ರಾತ್ರಿ ದೇವರಿಗೆ ರಾತ್ರಿ ಪೂಜೆ, ವಸಂತ ಪೂಜೆ, ಅಷ್ಟಾವಧಾನ ಸೇವೆ ಜರುಗಿತು. ದೇವಳವನ್ನು ಪಲ ಪುಷ್ಪದೊಂದಿಗೆ ವಿಶೇಷವಾಗಿ ಸಿಂಗರಿಸಲಾಗಿತ್ತು. ಧಾರ್ಮಿಕ ಕಾರ್ಯಕ್ರಮ ವೇ.ಮೂ. ಶ್ರೀನಿವಾಸ ಭಟ್, ವೇ.ಮೂ ಪ್ರಶಾಂತ ಭಟ್ ಅವರ ನೇತೃತ್ವದಲ್ಲಿ ನಡೆದವು. ಈ ಎಲ್ಲಾ ಕಾರ್ಯಕ್ರಮಕ್ಕೆ ದೇವಳದ ಮೊಕ್ತೇಸರರು,ರಾಮ ಸೇವಾ ಸಂಘದ ಸದಸ್ಯರು, ಸಮಾಜ ಬಾಂಧವರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಯುವ ಚಿತ್ರಕಲಾ ಶಿಕ್ಷಕ ಗಿರೀಶ್ ಗಾಣಿಗ ತಗ್ಗರ್ಸೆ ಅವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಪ್ರತಿವರ್ಷ ಅನುದಾನ ರಹಿತ ಶಾಲಾ ಶಿಕ್ಷರಿಗೆ ನೀಡಲಾಗುತ್ತಿರುವ ಪ್ರಶಸ್ತಿಗೆ ಅವರು ಭಾಜನರಾಗಿದ್ದು, ಉಡುಪಿಯಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರತಿಭಾನ್ವಿತ ಚಿತ್ರಕಲಾ ಶಿಕ್ಷಕ ಗಿರೀಶ್ ಗಾಣಿಗ ತಗ್ಗರ್ಸೆ: ಬೈಂದೂರು ತಗ್ಗರ್ಸೆಯ ಪ್ರತಿಭಾವಂತ ಯುವ ಕಲಾವಿದ, ಚಿತ್ರಕಲಾ ಶಿಕ್ಷಕ ಗಿರೀಶ್ ತನ್ನ ಕಲಾಪ್ರೌಡಿಮೆಯನ್ನೇ ವೃತ್ತಿಯನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡ ಪರಿ ಮೆಚ್ಚುವಂತದ್ದು. ಚಿತ್ರಕಲೆಯಿಂದ ಆರಂಭಿಸಿ, ಮಣ್ಣಿನ ಕಲಾಕೃತಿಗಳನ್ನು ರಚಿಸುವುದರಲ್ಲಿ ಪ್ರಾವಿಣ್ಯತೆ ಹೊಂದಿದ ಗಿರೀಶ್ ತನ್ನ ಶಾಲಾ ದಿನಗಳಲ್ಲಿಯೇ ಹಲವು ಸ್ವರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿದ್ದರು. ಆ ಬಳಿಕ ವಿಜುವಲ್ ಆಟ್ಸ್ ನಲ್ಲಿ ಪದವಿ ಪಡೆದು ಸಂಪೂರ್ಣವಾಗಿ ಚಿತ್ರಕಲೆಯಲ್ಲಿಯೇ ತೊಡಗಿಕೊಂಡರು. ಚಿತ್ರಕಲೆ, ಮರಳು ಶಿಲ್ಪ, ಮಣ್ಣಿನ ಕಲಾಕೃತಿ…

Read More