ಯಾರೂ ಕೂಡಾ ರಾತ್ರಿ ಕಳೆದು ಬೆಳಗಾಗುವುದರಲ್ಲಿ ಶ್ರೀಮಂತರಾಗುವುದಿಲ್ಲ, ಖ್ಯಾತಿ ಪಡೆಯುವುದಿಲ್ಲ. ಎಲ್ಲೋ ಒಬ್ಬಿಬ್ಬರಿಗೆ ಲಾಟರಿ ಹೊಡೆಯಬಹುದಷ್ಟೇ. ಉಳಿದಂತೆ ಜಗತ್ತಿನ ಯಶಸ್ವೀ ನಾಯಕರು, ಉದ್ಯಮಿಗಳು, ನಟರು- ಎಲ್ಲರೂ ತಮ್ಮ ದಿನಚರಿಯಲ್ಲೊಂದು ಶಿಸ್ತನ್ನು ರೂಢಿಸಿಕೊಂಡಿರುತ್ತಾರೆ. ಸರಿಯಾದ ಅಭ್ಯಾಸಗಳನ್ನು ಹೊಂದಿರುತ್ತಾರೆ. ಸರಿಯಾದ ಅಭ್ಯಾಸಗಳು ಅವರ ಯೋಚನಾಲಹರಿ ಫೋಕಸ್ ಮಾಡಲು, ಸಾಮರ್ಥ್ಯ ಹೆಚ್ಚಿಸಲು ಕಾರಣವಾಗುತ್ತವೆ. ನಾವೆಲ್ಲರೂ ಮಿಲಿಯನೇರ್ ಆಗುವ ಕನಸು ಕಾಣುತ್ತೇವೆ. ಆದರೆ, ಅದಕ್ಕೆ ಬೇಕಾದ ಸಿದ್ಧತೆಗಳನ್ನು, ಅಭ್ಯಾಸಗಳನ್ನು ಎಲ್ಲರೂ ರೂಢಿಸಿಕೊಳ್ಳುವುದಿಲ್ಲ. ಎಲ್ಲರೂ ತಮ್ಮ ಬದುಕಿನಲ್ಲಿ ಯಶಸ್ಸಿಗಾಗಿ ಅಳವಡಿಸಿಕೊಳ್ಳಬೇಕಾದ ಆರು ಅಭ್ಯಾಸಗಳು ಇಲ್ಲಿವೆ. ಬೇಗ ಏಳುವುದು: ಸೆಲ್ಫ್ ಮೇಡ್ ಮಿಲಿಯನೇರ್ಗಳಲ್ಲಿ ಶೇ.50ರಷ್ಟು ಜನರು ತಮ್ಮ ವೈತ್ತಿ ಬದುಕನ್ನು ಆಱಂಭಿಸಬೇಕಾದ ಸಮಯಕ್ಕಿಂತ ಕನಿಷ್ಠ 3…ಗಂಟೆ ಮೊದಲು ಏಳುತ್ತಾರೆ. ಈ ಸಮಯದಲ್ಲಿ ವೈಯಕ್ತಿಕ ಕೆಲಸಗಳನ್ನು ಮುಗಿಸುವ ಜೊತೆಗೆ ವ್ಯಾಯಾಮ, ದಿನದ ಪ್ಲ್ಯಾನ್ಎಲ್ಲವನ್ನೂ ಮಾಡುತ್ತಾರೆ. ಹೆಚ್ಚೆಚ್ಚು ಓದು: ಯಶಸ್ವೀ ವ್ಯಕ್ತಿಗಳು ಸಿಕ್ಕಾಪಟ್ಟೆ ಓದುತ್ತಾರೆ. ಇದು ಕೇವಲ ಬಿಸ್ನೆಸ್ಗಾಗಿ ಅಲ್ಲ, ವೈಯಕ್ತಿಕ ಬೆಳವಣಿಗೆಗಾಗಿ ಕೂಡಾ. ಅವರು ಹೆಚ್ಚಾಗಿ ಓದುವ ವಿಷಯಗಳು ಬಯೋಗ್ರಫಿ, ಲೀಡರ್ಶಿಪ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಲಾಕ್ಡೌನ್ನಿಂದ ಇತರ ವಲಯಗಳಂತೆ ಬೇಕರಿ ಉತ್ಪನ್ನ ಮಾರಾಟಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಬೇಕರಿ ಉತ್ಪನ್ನಗಳನ್ನು ಮಾರಾಟ ಮಾಡಲು ಬೇಕರಿಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಸು ತಯಾರಿಕಾ ಹಾಗೂ ಮಾರಾಟ ಸಂಘವು ಉಡುಪಿ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಿದೆ. ಜಿಲ್ಲೆಯಲ್ಲಿ 1,500ಕ್ಕೂ ಅಧಿಕ ಬೇಕರಿ ಉತ್ಪನ್ನ ಮಾರಾಟ ಮಾಡುವ ಅಂಗಡಿಗಳಿವೆ. ಹಾಗೆ, ಸುಮಾರು 75ಕ್ಕೂ ಹೆಚ್ಚು ಬೇಕರಿ ಉತ್ಪನ್ನಗಳನ್ನು ಉತ್ಪಾದಿಸುವ ಘಟಕಗಳಿದ್ದು, 15,000 ಕ್ಕೂ ಅಧಿಕ ಕಾರ್ಮಿಕರು ಇದನ್ನೆ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಗಾಗಿ ಲಾಕ್ಡೌನ್ ಅವಧಿಯಲ್ಲಿ ದಿನಸಿ ಸಾಮಗ್ರಿ ಖರೀದಿಗೆ ನೀಡಿರುವ ನಿಗದಿ ಅವಧಿಯಲ್ಲಿ ಬೇಕರಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬೇಕು ಎಂದು ಸಂಘ ಒತ್ತಾಯಿಸಿದೆ. ಜನರಿಗೆ ದಿನಸಿ ವಸ್ತುಗಳಂತೆ ಬ್ರೆಡ್, ಬನ್, ಬಟರ್, ರಸ್ಕ್ ಮುಂತಾದ ಬೇಕರಿ ಉತ್ಪನ್ನಗಳು ಅವಶ್ಯಕವಾಗಿದೆ. ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಬ್ರೆಡ್, ಬನ್ ನೀಡಲಾಗುತ್ತದೆ. ಆದರೆ, ಬೇಕರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಕುಂದಾಪುರ ತಾಲೂಕು ಶಾಖೆಯಿಂದ ವಿಶೇಷ ಚೇತನ ಬಾಲಕನ ವೈದ್ಯಕೀಯ ಚಿಕಿತ್ಸೆಗಾಗಿ ರೂಪಾಯಿ 30,000/- ದೇಣಿಗೆ ನೀಡಲಾಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ ಶೆಟ್ಟಿ ದೇಣಿಗೆಯನ್ನು ಬಾಲಕನ ತಂದೆಗೆ ಹಸ್ತಾಂತರಿಸಿದರು. ಈ ಸಂದರ್ಭ ದೇಣಿಗೆಯ ಪ್ರಾಯೋಜಕರಾದ ಆವರ್ಸೆ ಮುತ್ತಯ್ಯ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸಮಿತಿ ಸದಸ್ಯರಾದ ಗಣೇಶ್ ಆಚಾರ್ಯ, ಡಾ. ಸೋನಿ, ಸೀತಾರಾಮ ನಕ್ಕತ್ತಾಯ, ನಾರಾಯಣ ದೇವಾಡಿಗ ಹಾಗೂ ಜೆಸಿಐ ಸದಸ್ಯರು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 855 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 7 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 380, ಕಾರ್ಕಳ, ಹೆಬ್ರಿ ತಾಲೂಕಿನ 141 ಮಂದಿಗೆ ಹಾಗೂ ಹೊರ ಜಿಲ್ಲೆಯ 10 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 855 ಪ್ರಕರಣಗಳಲ್ಲಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 840 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 63 ವರ್ಷದ ವೃದ್ಧ, 70 ವರ್ಷದ ವೃದ್ಧ, 60 ವರ್ಷದ ವೃದ್ಧ, 45 ವರ್ಷದ ಪುರುಷ, 53 ವರ್ಷದ ಮಹಿಳೆ ಕಾರ್ಕಳದ 60 ವರ್ಷದ ವೃದ್ಧ, 60 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1223 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5960 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2424…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 7ರ ತನಕ ಲಾಕ್ಡೌನ್ ಮುಂದುವರಿಯಲಿದೆ. ಕೋವಿಡ್ ಪರಿಸ್ಥಿತಿ ಮತ್ತು ಲಾಕ್ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜನ ಸಹಕರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್ಡೌನ್ ವಿಧಿಸಲಾಗುತ್ತಿದ್ದು, ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಲಾಕ್ಡೌನ್ ಮಾರ್ಗಸೂಚಿಗಳ ಕುರಿತು ಎಂದು ಸಿಎಂ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, 9 ಗಂಟೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಮೇ 21: ಆರೋಗ್ಯ ಪ್ರಾಧಿಕಾರಗಳು /ವಾರ್ಡ್ ಕಾರ್ಯಪಡೆ / ಗ್ರಾಮ ಕಾರ್ಯಪಡೆಯ ಅಭಿಪ್ರಾಯದಂತೆ ಮನೆಯ ಪ್ರತ್ಯೇಕತೆಗೆ ಅಗತ್ಯವಾದ ಸೌಲಭ್ಯಗಳನ್ನು ಮನೆಗಳಲ್ಲಿ ಹೊಂದಿರದ ಕೋವಿಡ್-19 ರೋಗಿಗಳು ಸಾಂಸ್ಥಿಕ ಪ್ರತ್ಯೇಕತೆಗೆ (ಕೋವಿಡ್ ಕೇರ್ ಸೆಂಟರ್) ಕಡ್ಡಾಯವಾಗಿ ಸ್ಥಳಾಂತರಗೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಸರಕಾರವು ಕೋವಿಡ್ -19 ಪಾಸಿಟಿವ್ ರೋಗಿಗಳನ್ನು ಪರೀಕ್ಷಿಸಲು, ವೈದ್ಯಕೀಯ ನೆರವಿನ ಅಗತ್ಯತೆಯನ್ನು ಪರಿಶೀಲಿಸಿ, ಅಸ್ಪತ್ರೆಗೆ ದಾಖಲಿಸುವುದು ಅವಶ್ಯಕವೆಂದೆನಿಸಿದಲ್ಲಿ ಮಾತ್ರವೇ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್’ಗಳ ಅಧಾರದ ಮೇಲೆ, ಆಸ್ಪತ್ರೆಗಳಲ್ಲಿ ದಾಖಲಿಸುವಂತೆ ಹಾಗೂ ಉಳಿದ ಪ್ರಕರಣಗಳಲ್ಲಿ ರೋಗಿಯ ಮನೆಯಲ್ಲಿಯೇ ಲಭ್ಯವಿರುವ ಸೌಲಭ್ಯಗಳ ಆಧಾರದ ಮೇಲೆ ಹೋಮ್ ಐಸೋಲೆಶನ್ (ಮನೆ ಪ್ರತ್ಯೇಕತೆ) ಅಥವಾ ಸಾಂಸ್ಥಿಕ ಪ್ರತ್ಯೇಕತೆಯನ್ನು ನೀಡುವುದು ಸೂಕ್ತವೆಂದು ಸೂಚಿಸಿದೆ. ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಉಡುಪಿಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗುತ್ತಿದ್ದು, ಈ ಮಧ್ಯೆ ಮನೆಯಲ್ಲಿ ಅಗತ್ಯವಾದ ಸೌಲಭ್ಯಗಳಿಲ್ಲದಿದ್ದರೂ ಇನ್ಸಿಟ್ಯೂಷನಲ್ ಐಸೋಲೇಶನ್ (ಸಾಂಸ್ಥಿಕ ಪ್ರತ್ಯೇಕತೆ) ಮಾಡಿಸಿಕೊಳ್ಳಲು ನಿರಾಕರಿಸುತ್ತಿರುವ ಬಗ್ಗೆ, ರೋಗಿಗಳಿಂದ ಪ್ರತಿರೋಧವ ಎದುರಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ರೋಗಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ಜನರು ಕೋವಿಡ್ ನಿರ್ಲಕ್ಷಿಸಿ ಊರೆಲ್ಲಾ ಸುತ್ತಾಡುತ್ತಿದ್ದಾರೆ. ಕರೋನಾ ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕಿಕರು ಹೊರಗಡೆ ತಿರುಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಕರೋನಾ ಇನ್ನೂ ಹೆಚ್ಚು ಹರಡದಂತೆ ತಡೆಯುವ ಉದ್ದೇಶದಿಂದ ಕರೋನಾ ಕೇಸ್ಗಳು ಹೆಚ್ಚಾಗಿರುವ ಪರಿಸರದಲ್ಲಿನ ಜನರ ಕೋವಿಡ್ ಪರೀಕ್ಷೆ ಮಾಡಲಾಗುವುದು. ಕೋವಿಡ್ ಲಕ್ಷಣ ಇದ್ದವರು ಕೂಡಲೇ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಸೋಂಕಿತರು ಹಾಗೂ ಪ್ರಾಥಮಿಕ ಸಂಪರ್ಕಿತರು ಹೊರಗಡೆ ತಿರುಗಾಡಿದರೆ ಪ್ರಕರಣ ದಾಖಲಿಸಲಾಗುವುದು. ಗಂಗೊಳ್ಳಿಯಲ್ಲಿ ಬೆಳಗಿನ ಸಮಯದಲ್ಲಿ ಜನರ ಹಾಗೂ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಗಸ್ತು ಹೆಚ್ಚಿಸಬೇಕು. ಅಂಗಡಿ, ಮೀನು ಮಾರುಕಟ್ಟೆ ಮುಂತಾದೆಡೆ ಜನರು ಗುಂಪು ಸೇರದಂತೆ ಅಗತ್ಯ ಕ್ರಮಕೈಗೊಳ್ಳಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಸಾಯಿ ಮಹಿಳಾ ಆರ್ಥಿಕ ಸರಕಾರಿ ಸಂಘ ಮುಳ್ಳಿಕಟ್ಟೆ ಹೊಸಾಡು ಇವರಿಂದ ಕರೋನಾ ರೋಗ ಹರಡುವಿಕೆ ತಡೆಗಟ್ಟುವ ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾದ ಸಮಯದಿಂದ ತನ್ನ ಸದಸ್ಯರಿಗೆ ಬ್ಯಾಂಕಿಂಗ್ ಸೇವೆಯನ್ನು ಮನೆ ಬಾಗಿಲಿಗೆ ನೀಡುತ್ತಿದೆ. ಸದಸ್ಯರು ಕರೆಮಾಡಿ ತಿಳಿಸಿದಾಗ ಅವರ ಮನೆಗೆ ಸಂಸ್ಥೆಯ ಸಿಬ್ಬಂದಿಗಳು ಭೇಟಿ ನೀಡಿ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದಾರೆ. ಮತ್ತು ಇದೇ ಸಂದರ್ಭದಲ್ಲಿ ಸದಸ್ಯರಿಗೆ ಸಾಮಾಜಿಕ ಅಂತರ, ಪರಿಸರ ಸ್ವಚ್ಚತೆ, ಆದಷ್ಟು ಅನಗತ್ಯ ಸಂಚಾರ ಮಾಡದೇ ಇರುವ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಬಿಲ್ಲವ, ರೇಖಾ, ಪ್ರತಿಭಾ, ಗಿರೀಶ್, ಮಂಜುನಾಥ್ ಈ ಸೇವೆ ಸಲ್ಲಿಸುತ್ತಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ಈ ಕಾರ್ಯವೈಖರಿಯು ಅಂತ್ಯಂತ ಸಮಯೋಚಿತ ಮತ್ತು ಉಪಯುಕ್ತವಾಗಿದ್ದು ಎಂದು ಸದಸ್ಯರೆಲ್ಲರೂ ಶ್ಲಾಘಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ವಿವಿಧ ದುಡಿಯುವ ವರ್ಗಗಳಿಗೆ ಮುಖ್ಯ ಮಂತ್ರಿಗಳು ನೆರವಿನ ಪ್ಯಾಕೇಜ್ ಘೋಷಿಸಿದ್ದಾರೆ. ಈ ವೇಳೆ ದುಡಿಮೆ ಕಳೆದುಕೊಂಡು, ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಅಸಂಘಟಿತ ವಲಯಕ್ಕೆ ಸೇರಿರುವ ಕರಾವಳಿ ಮೀನುಗಾರರಿಗೂ ನೆರವು ನೀಡಬೇಕು ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ನಾಗೇಶ ಖಾರ್ವಿ ಅಳ್ವೆಕೋಡಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಲಾಕ್ಡೌನ್ನಿಂದ ಮೀನುಗಾರರು ದುಡಿಮೆ ಕಳೆದುಕೊಂಡಿದ್ದಾರೆ. ಅದಕ್ಕಿಂತ ಹಿಂದಿನ ನಾಲ್ಕು ತಿಂಗಳ ಕಾಲ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುವ ಮೀನುಗಾರರು ಮತ್ಸ್ಯಕ್ಷಾಮದಿಂದ ಕಂಗೆಟ್ಟಿದ್ದಾರೆ. ಈಚಿಗಿನ ತೌಕ್ತೆ ಚಂಡಮಾರುತದಿಂದ ಮೀನುಗಾರಿಕಾ ಸಲಕರಣೆಗಳಿಗೂ ಹಾನಿಯಾಗಿದೆ. ಅವರ ವಸತಿ ಪ್ರದೇಶಗಳು ಕಡಲ್ಕೊರೆತದಿಂದ ನಲುಗಿವೆ. ಮೀನುಗಾರಿಕೆಯನ್ನೇ ಅವಲಂಬಿಸಿರುವ ಅವರಿಗೆ ಇವೆಲ್ಲದರಿಂದ ದೊಡ್ಡ ಹೊಡೆತ ಬಿದ್ದಿದೆ. ದೋಣಿ, ಬಲೆ, ಎಂಜಿನ್, ಇತರ ಸಲಕರಣೆಗಳನ್ನು ಖರೀದಿಸಲು ಬ್ಯಾಂಕ್ ಸಾಲ ಪಡೆದವರು ಸಾಲ ಮರುಪಾವತಿ ಮಾಡಲಾರದೆ ಬಡ್ಡಿಯ ಹೊರೆ ಹೊರುವಂತಾಗಿದೆ. ಕೃಷಿಕರಂತೆ ಮೀನುಗಾರರು ಜನರಿಗೆ ಆಹಾರ ಪೂರೈಸುತ್ತಾರೆ. ಅವರ ಸಂಕಷ್ಟ ಕಾಲದಲ್ಲಿ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಲಾಕ್ಡೌನ್ ಹಾಗೂ ಅಕಾಲಿಕ ಮಳೆಯಿಂದಾಗಿ ಕಲ್ಲಂಗಡಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಸಾಲ ಮಾಡಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಕಲ್ಲಂಗಡಿ ಹಣ್ಣು ಕೊಳೆತು ಹೋಗಿ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶಿರೂರಿನಿಂದ ಹೆಮ್ಮಾಡಿಯ ತನಕ ಸುಮಾರು 150 ಹೆಕ್ಟೇರ್ಗೂ ಅಧಿಕ ಕೃಷಿ ಭೂಮಿಯಲ್ಲಿ ಎರಡನೇ ಬೆಳೆಯಾಗಿ ಕಲ್ಲಂಗಡಿ ಬೆಳೆಯುತ್ತಿದ್ದಾರೆ. ಕಿರಿಮಂಜೇಶ್ವರ, ಹೇರೂರು ಕಂಬದಕೋಣೆ ಗ್ರಾಮದಲ್ಲಿ ಬಹುತೇಕ ಕೃಷಿಕರು ಎರಡನೇಯ ಬೆಳೆಯಾಗಿ ಕಲ್ಲಂಗಡಿ ಬೆಳೆಯುತ್ತಿದ್ದಾರೆ. ಈ ಭಾರಿ ಕಟಾವಿನ ಸಂದರ್ಭದಲ್ಲಿಯೇ ಲಾಕ್ಡೌನ್ ಘೋಷಣೆಯಾದ್ದರಿಂದ ಕಲ್ಲಂಗಡಿಗೆ ಮಾರುಕಟ್ಟೆ ಸಮಸ್ಯೆ ಎದುರಾಗಿದೆ. ಹೊರ ರಾಜ್ಯ ವಹಿವಾಟಿಗೆ ಹೊಡೆತ ಬಿದ್ದಿರುವುದರಿಂದ ಎಲ್ಲಾ ಬೆಳೆಯನ್ನು ಸ್ಥಳೀಯವಾಗಿ ಮಾರಾಟ ಮಾಡಬೇಕಿದೆ. ಆದರೆ ಲಾಕ್ಡೌನ್ನಿಂದಾಗಿ ಹೋಟೆಲ್ ಹಾಗೂ ಜ್ಯೂಸ್ ಅಂಗಡಿಗಳಿಗೆ ಬೀಗ ಬಿದ್ದಿರುವುದರಿಂದ ಕಲ್ಲಂಗಡಿ ಬೆಳೆ ಕೇಳುವವರಿಲ್ಲದಂತಾಗಿದೆ. ಪರಿಣಾಮ ದರ ಕುಸಿದಿದೆ. ಸ್ಥಳೀಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲೊಂದಾದ ಕಲ್ಲಂಗಡಿಗೆ ಮಾರುಕಟ್ಟೆ ಸಮಸ್ಯೆಯಿಂದಾಗಿ ರೈತರಿಗೆ ಸೂಕ್ತ ಬೆಲೆ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ.…
