Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಸುಮ್ಮನೆ ಆರೋಪ ಮಾಡುವ ಬದಲು ಜನಸಾಮಾನ್ಯ, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆಯನ್ನು ಕೇಳಿದರೆ ಉತ್ತರ ದೊರೆಯುತ್ತೆ. ವಿಧಾನ ಸಭೆಯಲ್ಲಿ ಮಾತನಾಡಿದ್ದೇನೋ ಇಲ್ಲವೋ ಎನ್ನೋದಕ್ಕೆ ನನ್ನ ಬಳಿ ದಾಖಲೆ ಇದೆ. ಅವಶ್ಯವಿದ್ದ ಎಲ್ಲಾ ಕಾರ‍್ಯಕ್ರಮದಲ್ಲೂ ಪಾಲ್ಗೊಂಡಿದ್ದೇನೆ. ಖಾಲಿ ಗೋಡೆ, ಬಿಳಿ ಹಾಳೆ ಮೇಲೆ ಬರೆದದ್ದಕ್ಕೆಲ್ಲಾ ನಾನು ಉತ್ತರಿಸಲಾರೆ. ತಾಂತ್ರಿಕ ಸಮಸ್ಯೆ ಕಳೆದ ಬಳಿಕ ಬಿಜೆಪಿ ಸೇರುತ್ತೇನೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ. ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಭಿವೃದ್ಧಿ ಕೆಲಸ ಬಗ್ಗೆ ಆನಗಳ್ಳಿ ಗ್ರಾಮಸ್ಥರು ಹೇಳಬೇಕು. ಕೋಡಿ ವಾಸಿಗಳು ಮಾತನಾಡಬೇಕು. ಕೋಡಿ, ಆನಗಳ್ಳಿ ಬ್ರಿಜ್ ರಚನೆ ಅಭಿವೃದ್ಧಿ ಅಲ್ಲವಾ? ಕುಂದಾಪುರ ಮಿನಿ ವಿಧಾಸಸೌಧ ರಚನೆ ಆಗಿಲ್ವಾ? ರಸ್ತೆಗಳ ಅಭಿವೃದ್ಧಿ ಮೂರುಕಡೆಜಟ್ಟಿ ನಿರ್ಮಾಣಅಭಿವೃದ್ಧಿಅಲ್ಲವಾ? ತಾಲೂಕಿನಲ್ಲಿ ೩೨ ಗ್ರಾಮ ಪಂಚಾಯತ್, ಒಂದು ಪಟ್ಟಣ ಹಾಗೂ ಪುರಸಭೆ ಇದ್ದು, ಶಾಸಕರ ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎನ್ನೋದಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಕಲ ದಾರ್ಮಿಕ ವಿಧಿ ವಿದಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು. ದೀಪೋತ್ಸವ ಹಾಗೂ ಸಂಕಷ್ಟಹರ ಚತುರ್ಥಿಯ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿತು. ಸಾವಿರಾರು ಭಕ್ತರು ಶ್ರೀ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ದೇವಳದ ಆಡಳಿತ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್, ಪ್ರದಾನ ಅರ್ಚಕ ಹೆಚ್. ಬಾಲಚಂದ್ರ ಭಟ್, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪ್ರಾಂಶುಪಾಲ ಶರಣ್‌ಕುಮಾರ್ ಇನ್ನಿತರರು ಉಪಸ್ಥಿತರಿದ್ದರು ಚಿತ್ರ : ಸಮಾ ಡಿಜಿಟಲ್, ಕುಂದಾಪುರ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿದ್ದು ಬೈಂದೂರು ಶಾಸಕ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ವಿವಿಧ ಗ್ರಾಮಗಳ 21 ರಸ್ತೆಗಳ ಅಭಿವೃದ್ಧಿಗೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. 10 ಕೋಟಿ ರೂ. ವಿಶೇಷ ಅನುದಾನದಲ್ಲಿ ಗುದ್ದಲಿಪೂಜೆ ನಡೆಸಲಾದ ಕಾಮಗಾರಿಗಳು: ಸೇನಾಪುರ ಗ್ರಾಮದ ಗುಡ್ಡೆಯಂಗಡಿಯಿಂದ ಗುಡ್ಡಮಾಡಿ ಮೂಲಕ ಬಂಟ್ವಾಡಿ(ಮಂಜುರ ಮನೆ ಹತ್ತಿರ) ರಸ್ತೆ ಅಭಿವೃದ್ಧಿ ಅನುದಾನ 15.00.ಲಕ್ಷ ರೂಪಾಯಿ ನಾಡಾ ಗ್ರಾ ಪಂ ಬಡಾಕೆರೆ ಸೇತುವೆಯಿಂದ ಬಡಾಕೆರೆ ಹೊಗುವ ರಸ್ತೆ ಅಭಿವೃದ್ಧಿ ಅನುದಾನ. 25.00 ಲಕ್ಷ ರೂಪಾಯಿ ನಾವುಂದ ಗ್ರಾಮದ ನಂದಯ್ಯನ ಮನೆಯಿಂದ ಕರಾವಳಿ ಮೂಲಕ ಮರವಂತೆ ಕೊಡು ರಸ್ತೆ ಅಭಿವೃದ್ಧಿ ಅನುದಾನ 15.00 ಲಕ್ಷ ರೂಪಾಯಿ ನಾವುಂದ ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಿಂದ ಶುಭದಾ ಶಾಲೆವರಗೆ ರಸ್ತೆ ಅಭಿವೃದ್ಧಿ ಅನುದಾನ 15.00 ಲಕ್ಷ ರೂಪಾಯಿ ಕಿರಿಮಂಜೇಶ್ವರ ಗ್ರಾಮದ ನಾಗೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವಿರುದ್ಧ ಜನ ಬೇಸತ್ತಿದ್ದು, ರಾಜ್ಯ ಹಾಗೂ ಬೈಂದೂರಲ್ಲಿ ಕಾಂಗ್ರೆಸ್ ಮುಕ್ತ ಮಾಡುವ ನಿಟ್ಟಿನಲ್ಲಿ ಬೈಂದೂರಲ್ಲಿ ಪರಿವರ್ತನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ‍್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಕುಂದಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ.13ರಂದು ಮಧ್ಯಾಹ್ನ 3ಕ್ಕೆ ನಾಗೂರು ಸಂದೀಪನ ಶಾಲೆ ಮುಂಭಾಗ ಬೃಹತ್ ಪರಿವರ್ತನಾ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ, ಸಂಸದೆ ಶೋಭಾ ಕರಂದ್ಲಾಜೆ ಅಲ್ಲದೆ ರಾಷ್ಟ್ರ ಹಾಗೂ ರಾಜ್ಯಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ನೀಡಿದರು. ಪರಿವರ್ತನಾ ರಥಕ್ಕೆ ತಲ್ಲೂರು ಸಮೀಪ ಭಾರೀ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ. ಅಲ್ಲಿಂದ ಮೆರವಣಿಗೆಯಲ್ಲಿ ನಾಯಕರ ಸಭಾ ಕಾರ‍್ಯಕ್ರಮ ಸ್ವಾಗತಿಸಲಾಗುತ್ತದೆ. 240 ಭೂತ್ ಮಟ್ಟದಿಂದಲೂ ಕಾರ‍್ಯಕರ್ತರು ಪಾಲ್ಗೊಳ್ಳಲಿದ್ದು, 15 ರಿಂದ 20 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಚುನಾವಣೆಗೆ ಗಿಮಿಕ್‌ಗೆ ಕಾಂಗ್ರೆಸ್ ಗುದ್ದಲಿ ಪೂಜೆ: ಬೈಂದೂರಿನಲ್ಲಿ ಬಿಜೆಪಿ ಪ್ರಬಲವಾಗಿದೆ. ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ.ಕ ಮತ್ತು ಉಡುಪಿ ಅಂತರ್ ಜಿಲ್ಲಾ ಮಟ್ಟದ ಐ.ಟಿ.ಐಗಳ ಪಂದ್ಯಾಟದಲ್ಲಿ ರೆ.ಫಾ.ರೋಬರ್ಟ್ ಝಡ್.ಎಂ.ಡಿ’ಸೋಜಾ ಸ್ಮಾರಕ ಕೈಗಾರಿಕಾ ತರಬೇತಿ ಸಂಸ್ಥೆಗೆ ಹಗ್ಗಜಗ್ಗಾಟದಲ್ಲಿ ಪ್ರಥಮ ಮತ್ತು ವಾಲಿಬಾಲ್ ದ್ವಿತೀಯ ಬಹುಮಾನ ಪಡೆದುಕೊಂಡಿದೆ. ತಂಡದ ಸದಸ್ಯರೊಂದಿಗೆ ಸಂಸ್ಥೆಯ ಪ್ರಾಂಶುಪಾಲರಾದ ಮನೋಹರ್.ಆರ್.ಕಾಮತ್, ಸಂಸ್ಥೆಯ ತರಭೇತಿ ಅಧಿಕಾರಿಯಾದ ರಾಜೇಶ್ ಕೆ.ಸಿ, ಕ್ರೀಡಾ ತರಭೇತುದಾರರಾದ ಕಿಶೋರ್ ಸಸಿಹಿತ್ಲು ಬೈಂದೂರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಜೊತೆಯಲ್ಲಿ ಹಾಸುಹೊಕ್ಕಾಗಿ ಹೆಣೆದುಕೊಂಡಿರುವ ಕನ್ನಡ ಭಾಷೆ ಇಂದು ಅಳಿವಿನಂಚಿನತ್ತ ಸಾಗುತ್ತಿದೆ. ಭಾಷೆಯ ಉಳಿಸುವಿಕೆಯಲ್ಲಿ ನಾವು ನಮ್ಮ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕಿದೆ ಎಂದು ಸಾಹಿತಿ, ನ್ಯಾಯವಾದಿ ಎ.ಎಸ್.ಎನ್ ಹೆಬ್ಬಾರ್ ಅವರು ಹೇಳಿದರು. ಅವರು ಇತ್ತಿಚಿಗೆ ಕುಂದಾಪುರದ ದಿನೇಶ್ ಐತಾಳರ ಮನೆಯಲ್ಲಿ ನಡೆದ ’ಮನೆಯಂಗಳದಲ್ಲಿ ಸಾಹಿತ್ಯ’ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯರು ಸಾಹಿತ್ಯಕೃಷಿಯಲ್ಲಿ ಅಲ್ಪತೃಪ್ತರಾಗದೇ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಹಾಗೂ ಉತ್ತಮ ಗುಣಮಟ್ಟದ ಪ್ರಬುದ್ಧ ಸಾಹಿತ್ಯಕ್ಕೆ ಪ್ರಾಮುಖ್ಯತೆ ದೊರೆಯುವಂತಾಗಬೇಕು ಎಂದು ಆಶಿಸಿದರು. ಈ ಸಂದರ್ಭ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಾಚಾರ್ ಅವರನ್ನು ಸನ್ಮಾನಿಸಲಾಯಿತು. ದಿನೇಶ್ ಐತಾಳ್ ಅವರು ಉಪಸ್ಥಿತರಿದ್ದರು. ಅಧ್ಯಾಪಕಿ ನಾಗಮ್ಮ, ಸುಪ್ರಸನ್ನ ನಕ್ಕತ್ತಾಯ, ಪ್ರಕಾಶ್ ಹೆಬ್ಬಾರ್, ಪೂರ್ಣಿಮಾ ಭಟ್, ಸುಮಿತ್ರಾ ಐತಾಳ್ ಕವನಗಳನ್ನು ವಾಚಿಸಿದರು. ಕಸಾಪ ಕಾರ್ಯದರ್ಶಿ ಡಾ. ಕಿಶೋರ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸಿದ್ಧ ರಂಗಕರ್ಮಿ ಕುಂದಾಪುರ ರೂಪಕಲಾ ಸಂಸ್ಥೆಯ ನಿರ್ದೇಶಕ ಕೆ ಸತೀಶ ಪೈ ಅವರಿಗೆ ಚಿಕ್ಕಮಗಳೂರಿನ ಸಾಂಸ್ಕೃತಿಕ ಸಂಘವು ’ನಟ ಶಿರೋಮಣಿ’ ಬಿರುದು ನೀಡಿ ಗೌರವಿಸಿದೆ. ಚಿಕ್ಕಮಗಳೂರಿನ ಕುವೆಂಪು ರಂಗಮಂದಿರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕೆ.ಸತೀಶ ಪೈ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಿ ಬಿರುದು ನೀಡಿ ಸತ್ಕರಿಸಿ ಮಾತನಾಡಿದ ಚಿಕ್ಕಮಗಳೂರು ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಉಜ್ವಲ್ ಡಿ.ಪಡುಬಿದ್ರಿ, ಕಳೆದ ೪೦ ವರ್ಷಗಳಿಂದ ರಂಗಭೂಮಿಯಲ್ಲಿ ವಿವಿಧ ನಾಟಕಗಳನ್ನು ಪ್ರದರ್ಶಿಸಿ ಜನರ ಮನ್ನಣೆಗೆ ಪಾತ್ರವಾಗಿರುವ ಕುಂದಾಪುರದ ರೂಪಕಲಾ ಸಂಸ್ಥೆ ಇಂದು ವಿದೇಶಗಳಲ್ಲಿ ನಾಟಕ ಪ್ರದರ್ಶನಗಳನ್ನು ನೀಡುತ್ತಿದೆ. ನಶಿಸಿ ಹೋಗುತ್ತಿರುವ ನಾಟಕ ಕಲೆಯನ್ನು ಉಳಿಸಿ ಬೆಳೆಸಲು ಕೆ.ಸತೀಶ ಪೈ ನೇತೃತ್ವದ ರೂಪಕಲಾ ಸಂಸ್ಥೆ ಶ್ರಮಿಸುತ್ತಿರುವುದು ಅಭಿನಂದನೀಯ. ಸರ್ಕಾರ ಇಂತಹ ಕಲಾವಿದರ ಸೇವೆಯನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಈ ಕಲೆಯನ್ನು ಉಳಿಸಿ ಬೆಳೆಸಲು ಪ್ರೋತ್ಸಾಹ ನೀಡಬೇಕಿದೆ ಎಂದರು. ಸಂಘದ ಗೌರವಾಧ್ಯಕ್ಷ ಆರ್.ಶೇಷಾದ್ರಿ, ಅಧ್ಯಕ್ಷ ಗಿರಿಧರ ಯತೀಶ್ ಎಂ.ಎಸ್., ಸುವರ್ಣ ಮಹೋತ್ಸವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭವಿಷ್ಯದ ಅವಕಾಶಗಳನ್ನು ಗಿಟ್ಟಿಸಿಕೊಳ್ಳಲು ಸ್ವರ್ಧಾತ್ಮಕ ಪರೀಕ್ಷೆಗಳು ರಹದಾರಿಯಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೇ ಸ್ವರ್ಧಾತ್ಮಕ ಪರೀಕ್ಷೆ ಎದುರಿಸುವ ತಯಾರಿ ಮಾಡಿಕೊಂಡರೇ ಸುಲಭವಾಗಿ ಗುರಿ ಸಾಧಿಸಲು ಸಾಧ್ಯವಿದೆ ಎಂದು ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಹೇಳಿದರು. ಅವರು ಬೈಂದೂರು ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ನೇತೃತ್ವದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು, ರೋಟರಿ ಕ್ಲಬ್ ಬೈಂದೂರು, ಇಂಟರ‍್ಯಾಕ್ಟ್ ಕ್ಲಬ್ ಬೈಂದೂರು ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಎನ್‌ಟಿಎಸ್‌ಇ ಹಗೂ ಎನ್‌ಎಂಎಂಎಸ್ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಇಂದು ಕೆಎಎಸ್ ಐಎಎಸ್ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿಫುಲ ಅವಕಾಶಗಳಿದ್ದು ಸೂಕ್ತ ತಯಾರಿಯೊಂದಿಗೆ ಅವುಗಳನ್ನು ಬಳಸಿಕೊಳ್ಳುವ ಚಾಕಚಕ್ಯತೆ ಹೊಂದಿರಬೇಕಾಗುತ್ತದೆ ಎಂದರು. ಬೈಂದೂರು ರೋಟರಿ ಅಧ್ಯಕ್ಷ ಎಚ್. ಕೃಷ್ಣಪ್ಪ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ವೆಂಕಟೇಶ ಕಾರಂತ್, ಬೈಂದೂರು ಜ್ಯೂನಿಯರ್ ಕಾಲೇಜಿನ ಇಂಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ವಸಂತ್, ಕಾರ್ಯದರ್ಶಿ ಸೌರಭ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಕಾರ್ತಿಕ ಮಾಸದಲ್ಲಿ ಜರಗುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಶನಿವಾರ ಜರಗಿತು. ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ಕಲ್ಯಾಣೋತ್ಸವದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನೆರವೇರಿತು. ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ ದಂಪತಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಯಜಮಾನಿಕೆ ವಹಿಸಿದ್ದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮಂಡಳಿ ಸದಸ್ಯರಾದ ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ಜಿ.ವೆಂಕಟೇಶ ನಾಯಕ್, ಜಿ.ನಾರಾಯಣ ಆಚಾರ್ಯ ಕುಟುಂಬಸ್ಥರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಉಪಸ್ಥಿತರಿದ್ದರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Read More