Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾ ಎಸ್‌ಜಿಎಸ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಫೌಂಡೇಶನ್ ಕಾಲೇಜ್ &ರಿಸರ್ಚ್ ಸೆಂಟರ್‌ನಲ್ಲಿ ನಡೆದ ಟ್ರ್ಯಾಕ್ಸ್ ಇಂಟರ್‌ನ್ಯಾಶನಲ್ ಯೋಗದಲ್ಲಿ ಅಥ್ಲೆಟಿಕ್ ಯೋಗ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಮೊದಲ ಸ್ಥಾನ ಹಾಗೂ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದು ಮರಳಿದ ಮರವಂತೆ ಧನ್ವಿ ಪೂಜಾರಿಗೆ ಗುರುವಾರ ಕುಂದಾಪುರ ತಾಲೂಕು ಬಿಲ್ಲವ ಸಂಘ, ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಧನ್ವಿ ಪೂಜಾರಿಗೆ ಅದ್ದೂರಿ ಸ್ವಾಗತ ನೀಡಿ ತೆರದ ವಾಹನದಲ್ಲಿ ಮರವಂತೆಯವರೆಗೆ ಮೆರವಣಿಗೆ ಮೂಲಕ ಕರೆದೊಯ್ದರು. ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಬಿಲ್ಲವ ಮುಖಂಡರಾದ ಮಂಜು ಬಿಲ್ಲವ, ಭಾಸ್ಕರ ಬಿಲ್ಲವ, ಮಹಿಳಾ ಸಾಂತ್ವಾನ ಕೇಂದ್ರದ ಅಧ್ಯಕ್ಷೆ ರಾಧಾದಾಸ್, ನಾರಾಯಣಗುರು ಯುವಕ ಮಂಡಲ, ಮೈಲಾರೇಶ್ವರ ಯುವಕ ಮಂಡಲ, ರಾಯಲ್ ಕ್ಲಬ್, ಕುಂದಾಪುರ ಜೆಸಿಐ, ಸಂಗಮ್ ಫ್ರೆಂಡ್ಸ್ ಕುಂದಾಪುರ, ಕುಂದಾಪುರ ಪುರಸಭೆಯ ಸದಸ್ಯರುಗಳು, ಮಿರಾಕಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಂಬದಕೋಣೆ ಗ್ರಾಮದ ಎಡಮಾವಿನಹೊಳೆ ಬೊಬ್ಬರ್ಯಗುಂಡಿ ಹೊಳೆಯಲ್ಲಿ ಆಟವಾಡಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ದಾರುಣ ಘಟನೆ ನಡೆದಿದೆ. ಕಂಬದಕೋಣೆಯ ದೊಡ್ಮನೆ ಹಳಗೇರಿ ನಿವಾಸಿ ವೆಂಕಪ್ಪ ಶೆಟ್ಟಿ ಅವರ ಪುತ್ರ ವಂಶಿತ್ ಶೆಟ್ಟಿ (12) ಹಾಗೂ ಹಳಗೇರಿ ಪಟೇಲರಮನೆ ನಿವಾಸಿ ರತ್ನಾಕರ ಶೆಟ್ಟಿ ಅವರ ಪುತ್ರ ರಿತೇಶ್ ಶೆಟ್ಟಿ (12) ನೀರುಪಾಲದ ದುರ್ದೈವಿ ಬಾಲಕರು. ಕಂಬದಕೋಣೆ ಸಂದೀಪನ್ ಆಂಗ್ಲಮಾಧ್ಯಮ ಶಾಲೆಯಲ್ಲಿ ೭ ತರಗತಿ ಕಲಿಯುತ್ತಿರುವ ಈರ್ವರು ಶಾಲೆಗೆ ರಜೆ ಇದ್ದ ಕಾರಣ ಆಟವಾಡಲು ಗೆಳೆಯರೊಂದಿಗೆ ತೆರಳಿದ್ದರು. ಈ ವೇಳೆ ಕಾಲು ತೊಳೆಯಲು ಹೊಳೆಯ ನೀರಿಗಿಳಿದ ಓರ್ವನ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು, ಇದೇ ಸಂದರ್ಭ ಆತನ ರಕ್ಷಣೆಗೆ ಬಂದ ಇನ್ನೊರ್ವನೂ ಮುಳುಗಿದ್ದಾನೆ. ಸಂಜೆಯ ತನಕ ಶೋಧಕಾರ್ಯ ನಡೆಸಿ ವಂಶಿಕ್ ಶೆಟ್ಟಿಯ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ನಾಪತ್ತೆಯಾಗಿರುವ ಇನ್ನೊರ್ವನಿಗಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಆಗಮಿಸಿ ಘಟನೆಯ ಬಗೆಗೆ ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶಿರೂರು ಹತ್ತಿರದ ಸುಂಕದಗುಂಡಿ ಸೇತುವೆ ಸಮೀಪ ಗುರುವಾರ ನಡೆದ ಲಾರಿ ಹಾಗೂ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದು, ಸಹ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸಾವಿಗೀಡಾದ ಚಾಲಕನನ್ನು ವಂಡ್ಸೆ ನಿವಾಸಿ ನಿತೇಶ್ ಮೊಗವೀರ(23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಸಂತೋಷ ಶೆಟ್ಟಿ (20 )ಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ವರ್ಷದಿಂದ ಬಾಗಲಕೋಟೆಯಲ್ಲಿ ಹೊಟೇಲ್‌ ನಡೆಸುತ್ತಿದ್ದು, ಮನೆಯಲ್ಲಿ ಪೂಜೆ ಇದ್ದ ಕಾರಣ ಊರಿಗೆ ಬರುತಿದ್ದರು. ಈ ಸಮಯದಲ್ಲಿ ಸ್ನೇಹಿತ ಸಂತೋಷ ಶೆಟ್ಟಿ ಕೂಡ ಜತೆಯಲ್ಲಿ ಹೊರಟಿದ್ದರು. ಸಂಜೆ ವೇಳೆಗೆ ವಿಪರೀತ ಮಳೆ ಬಂದ ಕಾರಣ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾದುದು ಸರಕಾರದ ಕರ್ತವ್ಯ. ಶಾಲಾ ಕೊಠಡಿಗಳಿಲ್ಲದ ಶಾಲೆಗಳಿಗೆ ಸರಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸಿ ಶಾಲಾ ಕೊಠಡಿಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ನೂತನ ತರಗತಿ ಕೋಣೆ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ಶಾಲಾ ಕಟ್ಟಡದ ದುರಸ್ಥಿಗೂ ಅನುದಾನ ನೀಡಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರಕಾರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ತರಗತಿ ಕೋಣೆಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ.ಗುಜ್ಜಾಡಿ, ರಾಜು ದೇವಾಡಿಗ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಮಾಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಡಾ| ಶಿವರಾಮ ಕಾರಂತರು ಸಾಹಿತ್ಯ ಲೋಕದ ಮುತ್ತು, ಅವರ ಸಾಹಿತ್ಯ ಲೋಕದ ಕೊಡುಗೆ ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿದಿದೆ, ಅವರ ಈ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಪಸರಿಸುವ ಉದ್ದೇಶದಿಂದ ಕಾರಂತ ಥೀಮ್ ಪಾರ್ಕ್‌ನ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ ಬ್ಯಾಂಕ್ ಕೋಟ ಶಾಖೆಯ ಪ್ರಬಂಧಕ ಗಣೇಶ್ ಹೊಳ್ಳ ತಿಳಿಸಿದರು. ಅವರು ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಕಾರಂತೋತ್ಸವ ಪುನರ್ವಸು-೨೦೧೯ (ಮಳೆಬಿಲ್ಲಿನ ಕನವರಿಕೆ) ಕಾರ್ಯಕ್ರಮದ ಎರಡನೇ ದಿನ ರಾಜ್ಯಮಟ್ಟದ ಚಲನಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವೈದ್ಯ ಭಾಸ್ಕರ್ ಆಚಾರ್ಯ ಮಾತಾನಾಡಿ ಕಾರಂತರ ಬದುಕು ಬರಹ ಯುವ ಜನಾಂಗಕ್ಕೆ ಪ್ರೇರಕವಾಗಿದ್ದು,ನಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಲು ಪ್ರಯತಿಸಬೇಕು ಎಂದರು. ಕ.ಸಾ.ಪ ಕೋಟ ಹೋಬಳಿ ಘಟಕದ ಅಧ್ಯಕ್ಷ ಶ್ರೀ ಸತೀಶ್ ವಡ್ಡರ್ಸೆ ಮಾತನಾಡಿ ಕಾರಂತರ ಕಾದಂಬರಿಗಳು ಪ್ರಕೃತಿ ಮತ್ತು ಮಾನವ ಸಂಬಂಧಗಳ ಒಳಸುಳಿಗಳನ್ನು ಬಿಚ್ಚಿಡುತ್ತಾ ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳುವ ಅಗತ್ಯತೆ ತಿಳಿಸುತ್ತಾ ಸರ್ವಕಾಲಕ್ಕೂ ಸಲ್ಲುವಂತವುಗಳು ಎಂದು ಹೇಳಿದರು. ಕೋಟತಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಅರಿವು ಹೊಂದಿರಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಗವರ್ನರ್ ನ್ಯಾ. ಕೆ.ಎನ್. ಫಣೀಂದ್ರ ಹೇಳಿದ್ದಾರೆ. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ನ್ಯಾಯಂಗ ಅಕಾಡೆಮಿ ಬೆಂಗಳೂರು, ಉಡುಪಿ ಜಿಲ್ಲಾ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ , ಜಿಲ್ಲೆಯ ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು , ವಕೀಲರು ಮತ್ತು ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳಿಗೆ ನಡೆದ ಎಲೆಕ್ಟ್ರಾನಿಕ್ಸ್ ಪುರಾವೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ೨೦೦೦ ಇಸವಿಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಜಾರಿಗೆ ಬಂದಿದ್ದರೂ ಸಹ ಇದುವರೆಗೆ ಈ ಕುರಿತು ಸೂಕ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಹೊಸ ಬಸ್ ನಿಲ್ದಾಣದ ಸಮೀಪ ನೂತನವಾಗಿ ಪ್ರಾರಂಭಗೊಂಡ ನಮ್ಮನೆ ಮಾಂಸಾಹಾರಿ ಊಟದ ಹೋಟೆಲ್‌ನ್ನು ಮುಂಬೈ ಉದ್ಯಮಿ, ಹಂಗಳೂರು ಪ್ರಸನ್ನ ಆಂಜನೇಯ ದೇವಸ್ಥಾನದ ಸ್ಥಾಪಕರಾದ ಸುರೇಶ ಡಿ ಪಡುಕೋಣೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಂದಾಪುರದ ತಹಶೀಲ್ದಾರ್ ತಿಪ್ಪೇಸ್ವಾಮಿ, ಕಟ್ಟಡದ ಮಾಲೀಕರದ ಪ್ರೇಮಾನಂದ ಶೆಟ್ಟಿ, ಕುಂದಾಪುರ ವಲಯ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ರಾಜಾ ಮಠದ ಬೆಟ್ಟು, ದತ್ತಾತ್ರೆಯ ದೇವಾಡಿಗ, ಚಂದ್ರಶೇಖರ ದೇವಾಡಿಗ, ಆನಂದ್ ಕೆ ಏನ್, ದಿನೇಶ್ ವಿ ದೇವಾಡಿಗ, ಉದಯ ಹೇರಿಕೇರಿ, ರಾಮ ದೇವಾಡಿಗ, ಸಂಸ್ಥೆಯ ಪಾಲುದಾರರಾದ ನಾಗರಾಜ್ ರಾಯಪ್ಪನಮಠ, ನವೀನ್, ಚಂದ್ರ ರಾಯಪ್ಪನಮಠ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾದ ಕೌಲಾಲಂಪುರದಲ್ಲಿರುವ ಎಸ್‌ಜಿಎಸ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಫೌಂಡೇಶನ್ ಕಾಲೇಜ್ ಎಂಡ್ ರಿಸರ್ಚ್ ಸೆಂಟರ್‌ನಲ್ಲಿ ಅ. ೧೨, ೧೩ರಂದು ನಡೆದ ಟ್ರ್ಯಾಕ್ಸ್ ಇಂಟರ್‌ನ್ಯಾಶನಲ್ ಯೋಗ ಕಾರ್ನಿವಲ್‌ನಲ್ಲಿ ಮರವಂತೆಯ 11ರ ಹರೆಯದ ಚುರುಕಿನ ಬಾಲೆ ಧನ್ವಿ ಪೂಜಾರಿ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ವಿಕ್ರಮ ಮೆರೆದಿದ್ದಾಳೆ. ಅಥ್ಲೆಟಿಕ್ ಯೋಗ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಹತ್ತಾರು ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ, ಪ್ರಶಸ್ತಿ ಗಳಿಸಿರುವ ಧನ್ವಿ ಕಳೆದ ತಿಂಗಳ ೧೮ರಂದು ಬೆಂಗಳೂರಿನ ಫ್ರೀಡಮ್ ಪಾರ್ಕ್‌ನಲ್ಲಿ ನಡೆದ ಐದನೆಯ ರಾಷ್ಟ್ರೀಯ ಅಥ್ಲೆಟಿಕ್ಸ್ ಯೋಗಾಸನ ಸ್ಫರ್ಧೆಯ ೧೦-೧೨ ವಯೋವಿಭಾಗದಲ್ಲಿ ಅರ್ಹತಾ ಪತ್ರ ಗಳಿಸಿದ್ದಳು. ೨೪, ೨೫ರಂದು ಚೆನ್ನೈನಲ್ಲಿ ನಡೆದ ಜಾಗತಿಕ ಯೋಗೋತ್ಸವದಲ್ಲಿ ನಾಲ್ಕನೆಯ ಸ್ಥಾನ ಗಳಿಸುವುದರ ಜತೆಗೆ ಜಾಗತಿಕ ದಾಖಲೆ ಪ್ರಯತ್ನದಲ್ಲಿ ಒಂದೂವರೆ ನಿಮಿಷ ಕಾಲ ವೀರಭದ್ರಾಸನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರಿನ ಬಿಜೈ ಚರ್ಚ್ ಹಾಲ್‌ನಲ್ಲಿ ನಡೆದ ಜೇಸಿ ವಲಯ ಸಮ್ಮೇಳನದಲ್ಲಿ ಕೆ. ಕಾರ್ತಿಕೇಯ ಮಧ್ಯಸ್ಥ 2020 ರ ಸಾಲಿನ ಜೇಸಿ ವಲಯ 15ರ ನೂತನ ವಲಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯುವ ಉದ್ಯಮಿಯಾಗಿರುವ ಇವರು ಸಂಘಟನಾ ಚತುರರಾಗಿದ್ದು, 2006ರಲ್ಲಿ ಜೇಸಿಐ ಕುಂದಾಪುರ ಸಿಟಿಯ ಸದಸ್ಯರಾಗಿ ಸೇರ್ಪಡೆಗೊಂಡು, ಜೇಸಿ ವಲಯದಲ್ಲಿ ಹೊಸ ಚೈತ್ಯನ್ಯ ಮೂಡಿಸಿದರು. ೨೦೦೮ ರಲ್ಲಿ ನಿರ್ದೇಶಕರಾಗಿ 2009ರಲ್ಲಿ ಉಪಾಧ್ಯಕ್ಷರಾಗಿ 2010 ರಲ್ಲಿ ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷರಾಗಿ ಮಾಡಿದ ದಾಖಲೆ ಕಾರ್ಯಕ್ರಮಗಳ ಸರಣಿ ಸಾಧನೆಗಾಗಿ ವಲಯ ಮಟ್ಟದ ಪ್ರಶಸ್ತಿಗಳ ಮಹಾಪೂರವೇ ಕುಂದಾಪುರಕ್ಕೆ ಹರಿದು ಬಂದಿತ್ತು. 2018ರ ವಲಯ ಅಭಿವೃದ್ಧಿ ಮತ್ತು ಬೆಳವಣಿಗೆಯ ನಿರ್ದೇಶಕರಾಗಿ ಕೆ. ಕಾರ್ತಿಕೇಯ ಮಧ್ಯಸ್ಥರ ನೇತೃತ್ವದಲ್ಲಿ ವಲಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಯನ್ನು ಗಳಿಸಿದ್ದು, 2019ರ ವಲಯ ಉಪಾಧ್ಯಕ್ಷರಾಗಿ ಇವರು ಮಾಡಿದ ಸಾಧನೆಗೆ ಇವರನ್ನು ವಲಯ 15ರ ಅಧ್ಯಕ್ಷ ಗಾಧಿ ಅಲಂಕರಿಸುವಂತೆ ಮಾಡಿತು. ಇವರು ೧೨ ವಲಯ ಸಮ್ಮೇಳನ ೩ ರಾಷ್ಟ್ರೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸ್ವಯಂ ಘೋಷಣೆಯಿಂದ ಅಥವಾ ಧರ್ಮ, ಜಾತಿಯ ಕಾರಣದಿಂದ ನಾಯಕರಾಗಲು ಸಾಧ್ಯವಿಲ್ಲ. ಬದಲಿಗೆ ಜನರು ಒಪ್ಪಿದರೆ ಮಾತ್ರ ನಿಜವಾದ ನಾಯಕರಾಗಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಶುಕ್ರವಾರ ಬ್ರಹ್ಮಗಿರಿಯ ಎನ್‌ಐಎಸ್‌ಟಿ ನೆಹರು ಯುವ ಕೇಂದ್ರ ಸಂಘಟನಾ ಬೆಂಗಳೂರು, ನೆಹರು ಯುವ ಕೇಂದ್ರ ಉಡುಪಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ೧೫ ದಿನಗಳ ರಾಷ್ಟ್ರೀಯ ಯುವ ಸ್ವಯಂಸೇವಕರ ಪ್ರವೇಶ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಭಾರತದಲ್ಲಿನ ಯುವ ಸಂಪತ್ತಿಗೆ ವಿಶ್ವವೇ ಹೆದರುತ್ತದೆ. ಇಲ್ಲನ ಶಿಕ್ಷಣ ಪದ್ಧತಿ ಹಾಗೂ ವಿಶ್ವದ ಪ್ರಮುಖ ಉದ್ಯೋಗಗಳಲ್ಲಿ ಭಾರತೀಯರೇ ಹೆಚ್ಚಿರುವುದು ಇದಕ್ಕೆ ಕಾರಣ. ಯುವ ಶಕ್ತಿ ಇಂತಹ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು, ಮೊಬೈಲ್ ವ್ಯಸನದಿಂದ ದೂರವಾಗಿ ಧನಾತ್ಮಕ ಚಿಂತನೆಯಿಂದ ದೇಶ ಕಟ್ಟಲು ಮುಂದಾಗಲಿ ಎಂದವರು ಆಶಿಸಿದರು. ಉಡುಪಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಜಿ. ವಿಜಯ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಉಡುಪಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ…

Read More