ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮನುಷ್ಯನ ಜೀವನದಲ್ಲಿ ಸಂಗೀತ ಅವಶ್ಯವಾಗಿದೆ. ಮನಸ್ಸಿಗೆ ಉಲ್ಲಾಸ ನೀಡುವ ಮನಸ್ಸನ್ನು ಪುಳಕಿತಗೊಳಿಸಿ ಜೀವನವನ್ನು ಉತ್ತಮಗೊಳಿಸುವ ಶಕ್ತಿ ಸಂಗೀತಕ್ಕಿದೆ. ಹೀಗಾಗಿ ಸಂಗೀತವನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಹೇಳಿದರು. ಗಂಗೊಳ್ಳಿ ಸಮುದಾಯ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಆಕಾಶವಾಣಿ ಕಲಾವಿದ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರ ಸುಗಮ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತರ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಹಳಷ್ಟು ಶ್ರಮ ಪಡಬೇಕಿದೆ. ಆದರೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಈ ಅವಕಾಶಗಳನ್ನು ಬಳಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅವರನ್ನು ಕೇಂದ್ರ ರೈಲ್ವೆ ಮಂತ್ರಾಲಯವು ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ ಸದಸ್ಯರನ್ನಾಗಿ ಮುಂದಿನ ಎರಡು ವರ್ಷದ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಇತಿಹಾಸದಲ್ಲಿ ಇದೇ ಮೊದಲ ಭಾರಿಗೆ ಕರಾವಳಿ ಭಾಗದವರಿಗೆ ಈ ಅವಕಾಶ ದೊರೆತಿರುವುದು ರಾಷ್ಟ್ರಮಟ್ಟದ ಪ್ರಾತಿನಿಧ್ಯ ಸಿಕ್ಕಿದಂತಾಗಿದೆ. ಮಾಜಿ ಮುಖ್ಯಮಂತ್ರಿ, ಸಂಸದ ಬಿ. ಎಸ್. ಯಡಿಯೂರಪ್ಪ ವೆಂಕಟೇಶ ಕಿಣಿಯವರ ಆಯ್ಕೆ ಕುರಿತಂತೆ ಕೇಂದ್ರ ರೈಲ್ವೆ ಮಂತ್ರಿಗಳಿಗೆ ಶಿಫಾರಸು ಮಾಡಿದ್ದರು. ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಲ್ಲಿ ಕಿಣಿ ಅವರ ಶ್ರಮ ಅಪಾರವಾದದ್ದು. ರೈಲ್ವೆ ಯಾತ್ರಿ ಸಂಘದ ಮೂಲಕ ಹಲವು ವರ್ಷಗಳಿಂದ ನಿರಂತರವಾಗಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸುತ್ತಾ, ಬೇಡಿಕೆಯಿಡುತ್ತಾ ಕಾರ್ಯಸಾಧಿಸುವಲ್ಲಿ ಶ್ರಮಿಸಿದ್ದಾರೆ. ತಮ್ಮ ಉದ್ಯಮದೊಂದಿಗೆ ಬೈಂದೂರಿನ ಅಭಿವೃದ್ಧಿ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಕೆಲವೇ ಕೆಲವರ ಪೈಕಿ ವೆಂಕಟೇಶ ಕಿಣಿ ಅವರೂ ಓರ್ವರೆನಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಪೊಲೀಸ್ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಮತ್ತು ನೊಂದವರ ಪರಿಹಾರದ ಬಗ್ಗೆ ಮಾಹಿತಿ ಶಿಬಿರವನ್ನು ತಾಲೂಕು ಪಂಚಾಯತ್ ಸಭಾಂಗಣ ಕುಂದಾಪುರದಲ್ಲಿ ಜರುಗಿತು. ಕುಂದಾಪುರದ ಹೆಚ್ಚುವರಿ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಪ್ರವೀಣ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಸಿ, ನೊಂದವರಿಗೆ ಪರಿಹಾರ ನೀಡಲು ಕಾನೂನು ಇದ್ದು ಸಿ.ಆರ್.ಪಿ.೩೫೭ಎ ಪ್ರಕಾರ ಅಪರಾಧ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ್ಯಾಯಾಲಯ ಆದೇಶ ನೀಡುತ್ತದೆ, ಸಾವು, ನೋವು, ದೊಂಬಿ ಮುಂತಾದ ಪ್ರಕರಣಗಳಲ್ಲಿ ನೊಂದವರು ಪರಿಹಾರ ಪಡೆಯಬಹುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತಹ ತೀರ್ಪು ಹೊರಬಿದ್ದ ಬಳಿಕ ನೊಂದವರು ಪರಿಹಾರ ಪಡೆಯಲು ಅರ್ಹರು, ಆದ್ದರಿಂದ ನೊಂದವರು ಈ ಕಾಯಿದೆಯ ಪ್ರಯೋಜನ ಪಡೆಯಬೇಕು ಎಂದರು. ಕುಂದಾಪುರ ಬಾರ್ ಅಸೋಸಿಯೇಷನ್ ಕುಂದಾಪುರ ಇದರ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರಾವಣ ಶುಕ್ರವಾರದ ಅಂಗವಾಗಿ ತಾಲೂಕಿನ ಹಲವೆಡೆ ವರಮಹಾಲಕ್ಷ್ಮೀ ವೃತ ಸಂಭ್ರಮದಿಂದ ಜರುಗಿತು. ಕುಂದಾಪುರ, ಗಂಗೊಳ್ಳಿ, ಬಗ್ವಾಡಿ, ಉಪ್ಪುಂದ, ಬೈಂದೂರು, ಸಿದ್ಧಾಪುರ ಮುಂತಾದೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆ, ವೃತಾಚರಣೆಗಳು ಜರುಗಿದವು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಅಗಸ್ಟ್ 8ರಂದು ನಡೆಯಲಿರುವ ರಾಜ್ಯಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಗರು ಗುಜರಾತ್ ಕಾಂಗ್ರೆಸ್ನ ಶಾಸಕರುಗಳಿಗೆ ಕೋಟ್ಯಾಂತರ ರೂಪಾಯಿ ಆಮಿಷ ಒಡ್ಡುತ್ತಿದ್ದಾರೆ. ಮತ್ತು ಅವರಿಂದ ರಾಜೀನಾಮೆ ಕೊಡಿಸುತ್ತಿದ್ದಾರೆ. ಆ ಕಾರಣಕ್ಕೆ ಇಂದನ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗುಜರಾತ್ನ 44 ಶಾಸಕರಿಗೆ ಕರ್ನಾಟಕದಲ್ಲಿ ವಾಸ್ತವ್ಯ ಕಲ್ಪಿಸಲಾಗಿತ್ತು. ಇದರಿಂದ ಹತಾಶರಾದ ಬಿಜೆಪಿ ಹೈಕಮಾಂಡ್ ರಾಜಕೀಯ ದುರುದ್ದೇಶದಿಂದ ಡಿಕೆಶಿಯವರ ಮನೆ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಅತೀ ನೀಚ ರಾಜಕಾರಣಕ್ಕೆ ಮುನ್ನುಡಿ ಬರೆದಿದೆ. ಜೈಲಿಗೆ ಹೋಗಿ ಬಂದ ಕರ್ನಾಟಕದ ಪ್ರಪ್ರಥಮ ಮುಖ್ಯಮಂತ್ರಿ ಎಂದೇ ಕುಖ್ಯಾತರಾಗಿರುವ ಯಡಿಯೂರಪ್ಪನವರ ನೇತೃತ್ವದ ಈ ಬಿಜೆಪಿ ಪಕ್ಷದವರು ಈ ಐಟಿ ದಾಳಿಯು ಭ್ರಷ್ಟಾಚಾರದ ವಿರುದ್ಧದ ಸಮರ ಎಂದು ಹೇಳಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಷಯ ಎಂದು ಕುಂದಾಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದ್ದಾರೆ. ಅವರು ಇಂದು ಕುಂದಾಪುರ ಶಾಸ್ತ್ರೀ ಸರ್ಕಲ್ನಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಮೃತರಾದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯ ಅವರ ಸಾವು ಅನುಮಾನಾಸ್ಪದವಾಗಿದ್ದು ಸೂಕ್ತ ತನಿಕೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಾವುಂದ ರಿಚರ್ಡ್ ಅಲ್ಮೇಡ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾವ್ಯ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಡುತ್ತಿದ್ದು, ವಿದ್ಯಾರ್ಥಿ ಸಮೂಹ ಆತಂಕಗೊಳ್ಳುವಂತಾಗಿದೆ. ಪ್ರಕರಣದ ಕುರಿತಾಗಿ ಪೊಲೀಸರು ಸೂಕ್ತ ತನಿಕೆ ಕೈಗೊಂಡು ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಕಾಲೇಜಿನಿಂದ ನಾವುಂದ ಗ್ರಾಮ ಪಂಚಾಯತ್ ತನಕ ಪ್ರತಿಭಟನಾ ರ್ಯಾಲಿಯಲ್ಲಿ ತೆರಳಿದ ವಿದ್ಯಾರ್ಥಿಗಳು ನಾವುಂದ ಪಂಚಾಯತ್ ಪಿಡಿಒ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಾದ ಅಕ್ಷಯ್, ಯಾಸಿನ್, ಸುಭಾಷ್, ವಿಜಯ್, ಅಶ್ವಿನಿ, ಪ್ರವೀಣ್ ಖಾರ್ವಿ, ಯಜ್ಞೇಶ್, ಕಿರಣ್ ಆಚಾರ್ಯ, ರಂಜಿತ್, ಸುಷ್ಮಾ, ನಿಧಿ ನಾಯಕ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ಯಡ್ತರೆ ಬ್ಯೆಂದೂರು ಇದರ ೨೦೧೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಸಸಿಹಿತ್ಲು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ದೊಟ್ಟಯ ಪೂಜಾರಿ ಅವರು ವಿವಿಧ ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ಕಿಶೋರ್ ಪೂಜಾರಿ ಅವರೂ ಕೂಡ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು, ಉತ್ತಮ ಕಬ್ಬಡ್ಡಿ ಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ ಎಬಿವಿಪಿ ನೇತೃತ್ವದಲ್ಲಿ ಡಾ. ಬಿ. ಬಿ ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭನೆ ಜರುಗಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಘವೇಂದ್ರ ಮಾತನಾಡಿ ಕ್ರೀಡಾಪಟು ಕಾವ್ಯ ಸಾವಿನ ಸುತ್ತ ಹಲವು ಅನುಮಾನಗಳಿದ್ದು ಕ್ರೀಡಾಪಟುವಿನ ಸಾವು ಸಂಶಯ ಮೂಡಿಸುತ್ತಿದೆ. ಹಲವು ದಿನಗಳಿಂದ ಇಡಿ ಪ್ರಕರಣ ಗೊಂದಲ ಹುಟ್ಟಿಸಿದೆ. ಸಾವಿನ ಕುರಿತಾಗಿ ಪೊಲೀಸ್ ಇಲಾಖೆ ವಸ್ತುನಿಷ್ಠ ತನಿಕೆ ನಡೆಸಿ ಕುಟುಂಬಿಕರಿಗೆ ನ್ಯಾಯ ಒದಗಿಸಬೇಕಿದೆ ಎಂದು ಆಗ್ರಹಿಸಿದರು. ಕುಂದಾಪುರ ಡಾ. ಬಿ. ಬಿ ಹೆಗ್ಡೆ ಪ್ರಥಮದರ್ಜೆ ಕಾಲೇಜಿನಿಂದ ಮಿನಿವಿಧಾನಸೌದದ ತನಕ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಬಳಿಕ ತಹಶೀಲ್ದಾರ್ ಬೋರ್ಕರ್ ಅವರ ಮೂಲಕ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಾದ ಗಣೇಶ್, ಭರತ್, ಶ್ರೀಧರ್, ಪ್ರಗತಿ, ಅಕ್ಷತಾ, ಪ್ರತ್ಯಾರ್ಥ, ಆಶ್ರಿತಾ, ಪವನ್, ಮೊದಲಾದವರು ಪ್ರತಿಭಟನೆಯ ನೇತೃತ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಹಂತದಲ್ಲಿ ಇಂಗ್ಲೀಷ್ನಂತಹ ಇತರೇ ಭಾಷೆಗಳಲ್ಲಿ ಮಗು ಪ್ರಭುತ್ವವನ್ನು ಸ್ಥಾಪಿಸಬೇಕಾದರೆ ಮಾತೃಭಾಷೆಯಲ್ಲಿ ಗಟ್ಟಿತನವಿರಬೇಕು. ಮಾತೃಭಾಷೆಯನ್ನೇ ಸರಿಯಾಗಿ ಕಲಿಯಲಾರದ ಮಗುವಿಗೆ ಎಂದು ಅಪರಿಚಿತವಾದ ಇನ್ನೊಂದು ಭಾಷೆ ಬೌದ್ಧಿಕ ಹೊರೆ. ಆದ್ದರಿಂದ ಪೋಷಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ,ಕನಿಷ್ಟ ಐದನೇ ತರಗತಿಯವರೆಗಾದರೂ ಮಕ್ಕಳಿಗೆ ತಮ್ಮ ಮಾತೃಭಾಷೆಯ ಮಾಧ್ಯಮದಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಪ್ರಖ್ಯಾತ ಚಿಂತನಕಾರರಾದ ಕನರಾಡಿ ವಾದಿರಾಜ ಭಟ್ ಅಭಿಪ್ರಾಯ ಪಟ್ಟರು. ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨ನೇ ತರಗತಿಯ ಜೀವನ್ ಹುಟ್ಟು ಹಬ್ಬದ ಪ್ರಯುಕ್ತ ತಾಯಿ ತಂದೆ ಜ್ಯೋತಿ-ಚಂದ್ರ ಅವರು ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ ೬ನೇ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ೨೦೧೭-೧೮ನೇ ಸಾಲಿನ ತಿಂಗಳ ಕಲಿಕಾ ಪ್ರದರ್ಶನದ ಎರಡನೇ ಕಾರ್ಯಕ್ರಮ, ದಶಪ್ರಶ್ನೆ ಎಂಬ ವಿಶಿಷ್ಟ ಸ್ಪರ್ಧಾ ಕಾರ್ಯಕ್ರಮ ಹಾಗೂ ಸರ್ವಪೋಷಕರ ಸಭೆಯು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗರತ್ನ ಹೆಬ್ಬಾರ್ ಇವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕುಂದಾಪುರ-ಗಂಗೊಳ್ಳಿ ನಡುವೆ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿಗಳಿಗೆ ಕುಂದಾಪುರದಲ್ಲಿ ಕೆಲ ಖಾಸಗಿ ಬಸ್ ಏಜೆಂಟರು ಬೆದರಿಕೆ ಹಾಕುತ್ತಿರುವ ಘಟನೆಯನ್ನು ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದ್ದು, ಖಾಸಗಿ ಬಸ್ ಏಜೆಂಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ನಾಗರಿಕ ಹೋರಾಟ ಸಮಿತಿ ತಿಳಿಸಿದೆ. ಕಳೆದ ಎಂಟು ವರ್ಷಗಳಿಂದ ಕುಂದಾಪುರ-ಗಂಗೊಳ್ಳಿ ನಡುವೆ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ಗಳಿಗೆ ಖಾಸಗಿ ಬಸ್ಗಳು ನೀಡುತ್ತಿರುವ ತೊಂದರೆ ಇನ್ನೂ ಮುಂದುವರಿದ್ದು, ಅನಗತ್ಯ ತೊಂದರೆ ನೀಡುತ್ತಿರುವ ಹಾಗೂ ಸಂಘರ್ಷ ಮತ್ತು ಪೈಪೋಟಿಗೆ ಕಾರಣವಾಗುತ್ತಿರುವ ಖಾಸಗಿ ಬಸ್ಸುಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಪ್ರಾದೇಶಿಕ ಪ್ರಾಧಿಕಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಆರ್ಟಿಓ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಈ ಬಗ್ಗೆ ಕ್ರಮಕೈಗೊಳ್ಳದ ಅಧಿಕಾರಿಗಳು ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿ ಕೈ ತೊಳೆದುಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಕಾನೂನು ರೀತ್ಯಾ ಕ್ರಮಕೈಗೊಳ್ಳದಿರುವುದರಿಂದ ಇದೀಗ ಪುನ: ಕೆಲವು ಖಾಸಗಿ ಬಸ್ಸುಗಳು ಕುಂದಾಪುರ-ಗಂಗೊಳ್ಳಿ ನಡುವೆ…
