ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ ಖ್ಯಾತ ಕನ್ನಡಪರ ಸಂಸ್ಥೆ ಕನ್ನಡ ಭವನದ ರಜತ ಸಂಭ್ರಮ – ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ಳಾರಿಯ ಖ್ಯಾತ ವರ್ಷಿಣಿ ಎಂಟರ್ಪ್ರೈಸಸ್ ಮಾಲಿಕರಾದ, ಸುಮಾರು 3500 ಉದ್ಯೋಗಾರ್ಥಿಗಳಿಗೆ ಅನ್ನದಾತರಾಗಿರುವ, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವಾ ನಿರತರಾಗಿರುವ ಶ್ರೀ ಕೊತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನಲ್ಲಿ “ಉದ್ಯೋಗ ರತ್ನ “ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮ್ಮೇಳನ ಸರ್ವಾಧ್ಯಕ್ಷರಾದ ನಿವ್ರಿತ್ತ ಐ.ಎ. ಎಸ್ ಅಧಿಕಾರಿ, ಮಾಜಿ ಕರ್ನಾಟಕ ಸರಕಾರದ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸೋಮಶೇಖರ್ ಐ. ಎ.ಎಸ್, ಶ್ರೀಮದ್ ಎಡನೀರು ಮಠ ಅದೀಶರಾದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥರು, ಡಾ. ಬಾಲಕೃಷ್ಣ ಎಸ್. ಮದ್ದೋಡಿ ಎಮ್.ಐ.ಟಿ. ಮಣಿಪಾಲ್ ಸೇರಿ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಅವರು ಕೋತ್ವಲ್ ಪದ್ಮನಾಭ ಶೇರುಗಾರ್ ಅವರಿಗೆ ಪ್ರದಾನ ಮಾಡಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣದ ಜೊತೆಗೆ ನಾಯಕತ್ವ, ಸಹಾಯ, ಸಹಕಾರ ಮನೋಭಾವದೊಂದಿಗೆ ದೇಶಪ್ರೇಮವನ್ನು ಬೆಳೆಸಿಕೊಳ್ಳಿ. ಆ ಮೂಲಕ ಮುಂದೆ ದೇಶದ ಒಳ್ಳೆಯ ಪ್ರಜೆಗಳಾಗುವುದರೊಂದಿಗೆ ಭವಿಷ್ಯದ ನಾಯಕರಾಗಿ ಎಂದು ಉಡುಪಿ ಜಿಲ್ಲೆಯ ಅಥ್ಲೇಟಿಕ್ ಅಸೋಸಿಯೇಶನ್ಸ್ ಅಧ್ಯಕ್ಷರಾದ ಲಯನ್ ಹರಿಪ್ರಸಾದ್ ರೈ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಅವರು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೈಹಿಕ ಕ್ಷಮತೆಯೊಂದಿಗೆ ಮಾನಸಿಕ ಕ್ಷಮತೆಯನ್ನು ಮೈಗೂಡಿಸಿಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಹೆಚ್ಚು ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಆ ಮೂಲಕ ನಾಯಕತ್ವದೊಂದಿಗೆ ಸಮಾಜಮುಖಿಯಾಗಿ ಚಿಂತಿಸುವಂತಾಗಬೇಕು ಎಂದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಉದ್ದೇಶದಿಂದ ಸ್ಥಳೀಯ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಕೆಸರು ಗದ್ದೆಯಲ್ಲಿ ಭತ್ತದ ನಾಟಿ ನೆಡುವ ಕಾರ್ಯಕ್ರಮವನ್ನು ತೆಕ್ಕಟ್ಟೆ ಗ್ರಾಮದ ದ್ಯಾವಸ ಊರಿನ ಪಾರ್ವತಿ ಶೆಟ್ಟಿ ಅವರ ಗದ್ದೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸ್ಥಳೀಯರು ಹಾಗೂ ರೈತರ ಮಾರ್ಗದರ್ಶನದಲ್ಲಿ ಕೆಸರು ಗದ್ದೆಗೆ ಇಳಿದು ಭತ್ತದ ನಾಟಿಯನ್ನು ನೆಟ್ಟರು. ನಾಟಿ ನೆಡುವ ವಿಧಾನ, ಕೃಷಿಯಲ್ಲಿ ಬಳಸುವ ಉಪಕರಣಗಳು ಹಾಗೂ ಭತ್ತದ ಬೆಳೆಯ ಆರೈಕೆಯ ಕುರಿತು ರೈತರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷದಿಂದ ನಾಟಿ ನೆಟ್ಟು ಕೃಷಿಯ ಅನುಭವವನ್ನು ಪಡೆದರು ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಹಾಗೂ ರೈತರ ಪರಿಶ್ರಮದ ಬಗ್ಗೆ ಗೌರವವನ್ನು ಹೆಚ್ಚಿಸಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬಾರ್ಕೂರು ಕಳ್ಳೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ ವ್ಯಕ್ತಿ. ಕುಂದಾಪುರಕ್ಕೆ ಎರಡನೇ ಪತ್ನಿಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಈ ಘಟನೆ ನಡೆದಿದೆ. ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಆಗಿದ್ದೇನು?ಗುರುವಾರ ರಾತ್ರಿ ರಾತ್ರಿ 11:45ರ ಸುಮಾರಿಗೆ ಆರೋಪಿ ಡೆರಿಕ್‌ನು, ಐವನ್ ಅವರಿಗೆ ಕರೆ ಮಾಡಿ ಚಟ್ಲಿ ಕೊಡುವ ವಿಚಾರದಲ್ಲಿ ಹಣ ಬರಲು ಬಾಕಿ ಇದ್ದು, ಈ ವಿಚಾರದಲ್ಲಿ ಡೆರಿಕ್ ನು ಮದ್ಯಸ್ಥಿಕೆ ವಹಿಸಿ ಹಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘ ನಿ. ಕೋಡಿ ಕನ್ಯಾಣ ಇದರ ಐದನೇ ವಾರ್ಷಿಕ ಸಾಮಾನ್ಯ ಸಭೆ ಮಾರಿಕಾಂಬ ದೇಗುಲದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೃಷ್ಣ ಕೆ. ವಹಿಸಿದ್ದರು. ಸಂಘವು ವರದಿ ವರ್ಷದಲ್ಲಿ 10,33,194 ರೂ ಲಾಭವನ್ನು ಗಳಿಸಿದ್ದು ಸದಸ್ಯರಿಗೆ ಶೇಕಡಾ 9.5 ಡಿವಿಡೆಂಡ್ ನೀಡುವುದಾಗಿ ಅಧ್ಯಕ್ಷರಾದ ಕೃಷ್ಣ ಕೆ ಘೋಷಿಸಿದರು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಮತ್ತು ಕಲಾ ಕ್ಷೇತ್ರಗದಲ್ಲಿ ಸಾಧನೆಗೈದ ಸಾಧಕರಾದ ವಿಜಯ್ ನಾಯರಿ, ರಾಜೇಶ್ ಎನ್ ಕರ್ಕೇರ, ಸತೀಶ್ ಖಾರ್ವಿ ಹಾಗೂ ಪ್ರಕಾಶ್ ಖಾರ್ವಿ ಅವರುಗಳನ್ನು ಸನ್ಮಾನಿಸಲಾಯಿತು. ಅಶಕ್ತರಿಗೆ ಸಹಾಯಧನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅರುಣ ಜಿ. ಕುಂದರ್ ಹಾಗೂ ನಿರ್ದೇಶಕರುಗಳಾದ ಪ್ರಭಾಕರ ಎನ್. ಬಂಗೇರ, ಹರ್ಷ ಕೆ.ಬಿ., ಶುಭಕರ ಕುಂದರ್, ಸುಧಾಕರ ಎಸ್. ಕಾಂಚನ್, ದಿನೇಶ್ ಪೂಜಾರಿ, ಸುಜಾತ ಎಸ್., ಪುಷ್ಪಲತಾ ಎಸ್. ಸುವರ್ಣ, ಗುಲಾಬಿ ಹಾಗೂ ಸಹಕಾರಿಯ ಕಾನೂನು ಸಲಹೆಗಾರರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ ಕೋಟತಟ್ಟು ಪಡುಕರೆಯ ಶ್ರೀ ಸದ್ಯೋಜಾತ ದೇಗುಲದ ಸಭಾಂಗಣದಲ್ಲಿ ಜರಗಿತು. ಸಂಘದ 2025-26ನೇ ಸಾಲಿನಲ್ಲಿ ರೂ 3,81,893.29 ನಿವ್ವಳ ಲಾಭ ಗಳಿಸಿದ್ದು ಅದರಲ್ಲಿ ಉತ್ಪಾದಕರಿಗೆ ಶೇ.65% ಬೋನಸ್ ರೂಪದಲ್ಲಿ 1 ಲೀಟರ್ ಹಾಲಿಗೆ ರೂ. 2.34 ಪೈಸೆ ಯಂತೆ ಹಾಗೂ ಶೇಕಡಾ 25 ಡಿವಿಡೆಂಟ್ ಒಟ್ಟಿಗೆ 1.85.900 ರೂ ಗಳನ್ನು ವಿಂಗಡಿಸಿ ಉತ್ಪಾದಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾದ ಬಗ್ಗೆ ಸಭೆಯ ಗನಮಕ್ಕೆ ತರಲಾಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘ ಮಂಗಳೂರು ಇದರ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಒಕ್ಕೂಟದಿಂದ ಸಿಗುವ ಸವಲತ್ತುಗಳ ಕುರಿತು ವಿವರವಾಗಿ ಸದಸ್ಯರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಉತ್ತಮ ಗುಣ ಮಟ್ಟದ ಹಾಲನ್ನು ನೀಡಿ ಸಂಘದ ಅಭಿವೃದ್ಧಿಗೆ ಸಹಕರಿಸಿ ಮುಂದಿನ ಪೀಳಿಗೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಸಾಸ್ತಾನ ಶಿಬಿರ ವ್ಯಾಪ್ತಿಯ ಪಶು ವೈದ್ಯಧಿಕಾರಿ ನಿಜಾಮ್ ಪಟೇಲ್ ರಾಸು ಸಾಕಾಣಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಸರಿಯನ್ನು ಬಲ್ಲವನು ಕೇವಲ ಜ್ಞಾನಿ. ಸರಿಯನ್ನು ಬಲ್ಲವನು ಹಾಗೂ ಸರಿಯಾದ ದಾರಿಯನ್ನು ಇತರರಿಗೆ ತೋರುವವನು ಗುರು. ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಬೇಕಾದ ಕಾರ್ಯ ಗುರುವಿನದ್ದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಶಂಕರಾಚಾರ್ಯರು ಸೈನ್ಯ ಹಾಗೂ ಸಂಪತ್ತು ಯಾವುದೂ ಇಲ್ಲದೇ ದೇಶದಲ್ಲಿ ಧರ್ಮಸಂರಕ್ಷಣೆಯ ಕಾರ್ಯವನ್ನು ಮಾಡಿದರು. ದೇಶಾದ್ಯಂತ ಸಂಚರಿಸಿದ ಶಂಕರರು ಜನರಿಗೆ ಸರಿಯಾದ ದಾರಿಯನ್ನು ತೋರಿದರು ಹಾಗೂ ನಿತ್ಯನಿರಂತರವಾಗಿ ಆ ಕಾರ್ಯ ನಡೆಯುವಂತೆ ಮಾಡಲು ದೇಶಾದ್ಯಂತ ಮಠಗಳನ್ನು ಸ್ಥಾಪಿಸಿದರು. ಹಾಗಾಗಿ ಶಂಕರಾಚಾರ್ಯರ ಉದ್ದೇಶವೇ ಮಠದ ಉದ್ದೇಶವಾಗಿರಬೇಕು. ಶಂಕರರು ತೋರಿದ ದಾರಿಯಲ್ಲಿ ಧರ್ಮ ಪ್ರಸಾರವನ್ನು ಮಾಡುತ್ತಾ, ಸಮಾಜಕ್ಕೆ ಸರಿ – ತಪ್ಪುಗಳನ್ನು ಮಾರ್ಗದರ್ಶನ ಮಾಡುವುದು ಮಠದ ಕಾರ್ಯವಾಗಬೇಕು. ನಮ್ಮ ಮಠದ ಉದ್ದೇಶ ಹಾಗೂ ಈ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಉದ್ದೇಶವೂ ಇದೇ ಆಗಿದೆ. ಜೀವನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 18 ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಹುಡುಗರ -45ಕೆಜಿ ವಿಭಾಗದಲ್ಲಿ ಪ್ರಸಾದ್, -50 ಕೆಜಿ ವಿಭಾಗದಲ್ಲಿ ಅನ್ವೇಷಣ್,-54 ಕೆಜಿ ವಿಭಾಗದಲ್ಲಿ ರಜತ್ ಆರ್,-58 ಕೆಜಿ ವಿಭಾಗದಲ್ಲಿ ಸಾಯಿನಾಥ್ ,- 66 ಕೆಜಿ ವಿಭಾಗದಲ್ಲಿ ಪ್ರವೀಶ್,-70 ಕೆಜಿ ವಿಭಾಗದಲ್ಲಿ ರಯಾನ್ ಅಹಮದ್ ಖಾನ್, -74ಕೆಜಿ ವಿಭಾಗದಲ್ಲಿ ಸೋಹಾನ್, -78ಕೆಜಿ ವಿಭಾಗದಲ್ಲಿ ಪ್ರೀತಮ್, +82ಕೆಜಿ ವಿಭಾಗದಲ್ಲಿ ಸ್ಕಂದ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದರೆ, 17ರ ವಯೋಮಾನದ ಹುಡುಗಿಯರ -40ಕೆಜಿ ವಿಭಾಗದಲ್ಲಿ ಸನ್ಮಿತಾ,-52ಕೆಜಿ ವಿಭಾಗದಲ್ಲಿ ಶರಣ್ಯ,+68 ಕೆಜಿ ವಿಭಾಗದಲ್ಲಿ ಕೃತಿಕಾ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು. 14ರ ವಯೋಮಾನದ ಹುಡುಗರ -25…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ಗುರುಪೂರ್ಣಿಮೆಯ ಪ್ರಯುಕ್ತ ವ್ಯಾಸಪೂಜೆಯು ಹಟ್ಟಿಅಂಗಡಿ ಡಾ. ಹೆಚ್. ಶಾಂತಾರಾಮ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಶಾಲೆಯ ಸಂಸ್ಕೃತ ಅಧ್ಯಾಪಕರಾದ ರಾಮಕೃಷ್ಣ ಉಡುಪರು ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸುತ್ತಾ, ಗುರುಗಳು ತಮ್ಮ ಗುರುಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವ ಈ ಪವಿತ್ರ ದಿನದಲ್ಲಿ, ಜಗತ್ತಿನ ಆದಿಗುರುಗಳಾದ ವೇದವ್ಯಾಸ ಮಹರ್ಷಿಗಳನ್ನು ಭಕ್ತಿಪೂರ್ವಕವಾಗಿ ಸ್ಮರಿಸುವುದು ನಮ್ಮೆಲ್ಲರ ಭಾಗ್ಯ. ವೇದಗಳನ್ನು ಸಂಗ್ರಹಿಸಿ, ಅವುಗಳನ್ನು ಸುಲಭವಾಗಿ ಅಧ್ಯಯನ ಮಾಡಲು ವ್ಯವಸ್ಥಿತಗೊಳಿಸಿದ ಮಹಾನುಭಾವರು ವೇದವ್ಯಾಸರು. ಹದಿನೆಂಟು ಪುರಾಣಗಳ ಮೂಲಕ ದೇವರು, ಧರ್ಮ, ಭಕ್ತಿ ಮತ್ತು ಸನ್ಮಾರ್ಗದ ಸಂದೇಶವನ್ನು ಜನಮಾನಸಕ್ಕೆ ತಲುಪಿಸಿದ ಶ್ರೇಷ್ಠ ಗುರು ಅವರೇ. ಉಪನಿಷತ್ತುಗಳ ಸಾರವನ್ನು ಲೋಕಕ್ಕೆ ಪರಿಚಯಿಸಿದ ವೇದವ್ಯಾಸರು, ಮಹಾಭಾರತ, ಭಗವದ್ಗೀತೆ, ವಿಷ್ಣು ಸಹಸ್ರನಾಮ ಮುಂತಾದ ಅಮೂಲ್ಯ ಆಧ್ಯಾತ್ಮಿಕ ಸಂಪತ್ತನ್ನು ಮಾನವಕುಲಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರ ಅವರ ‘ಮಾರ ಮಿಂದನುʼ ಕಥಾ ಸಂಕಲನ ಆಯ್ಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಗಾರಿನಲ್ಲಿ ಜನಿಸಿದ ಶ್ರೀಧರ ಬಳಗಾರ ಕಳೆದ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಟೀಚರ್ ಎಜುಕೇಟೆರ್ ಆಗಿ ಪಾಠ ಮಾಡುತ್ತ ಸದ್ಯ ಕುಮಟಾದಲ್ಲಿ ನೆಲೆಸಿದ್ದಾರೆ. ‘ಅಧೋಮುಖ'(1995), ‘ಮುಖಾಂತರ’ (1998), ‘ಇಳೆ ಎಂಬ ಕನಸು’ (2003), ಒಂದು ಫೋಟೋದ ನೆಗೆಟಿವ್”(2008), ‘ಈಸಾಡತಾವ ಜೀವ'(2015), ‘ಮಾಲತಿ ಮಾತಾಡಿದಳು'(2023), ‘ಮಾರ ಮಿಂದನು'(2025), ಕಥಾ ಸಂಕಲನಗಳು. ‘ಕೇತಕಿಯ ಬನ'(2003), ‘ಆಡುಕಳ'(2014), ‘ಮೃಗಶಿರ'(2019), ‘ವಿಸರ್ಗ'(2023), ‘ಬಲಿಪಾದ'(2026), ಕಾದಂಬರಿಗಳು. ‘ರಥಬೀದಿ'(2009), ‘ಕಾಲಪಲ್ಲಟ'(2011) ಅಂಕಣ ಬರಹಗಳು. ‘ಮೊಳೆದಷ್ಟು ಹೂವು'(2019) ಲೇಖನ ಸಂಗ್ರಹ. ಕುವೆಂಪು ಭಾಷಾ ಭಾರತಿಗೆ ಪೀಟರ್ ವ್ಯಾಟ್ಸನ್ ಮತ್ತು ನಿರ್ಮಲ್ ವರ್ಮಾರವರ ಆಯ್ದ ಬರಹಗಳ ಅನುವಾದ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಸ್ವಾತಂತ್ರ್ಯೋತ್ತರ ಕನ್ನಡ ಚಿಂತನಾತ್ಮಕ ಲೇಖನಗಳ ಸಂಪಾದನೆ ಮಾಡಿ ಕೊಟ್ಟಿದ್ದಾರೆ. ಕೆಲವು ಕಥೆಗಳು ಇಂಗ್ಲಿಷ್, ತಮಿಳು, ಉರ್ದು ಭಾಷೆಗೆ ಭಾಷಾಂತರಗೊಂಡಿವೆ. ಹಾಗೂ ಕರ್ನಾಟಕ…
