Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಡಿಗರ ಕಾವ್ಯ ಸಾಂದ್ರ ಅನುಭವ ಮತ್ತು ವಿಚಾರಗಳನ್ನು ಹೊಂದಿದ್ದು. ನಮ್ಮ ಪ್ರಾದೇಶಿಕ ನುಡಿಗಟ್ಟು, ಪುರಾಣ, ಸಾಹಿತ್ಯ, ಯಕ್ಷಗಾನ-ತಾಳ ಮದ್ದಳೆಗಳ ಹಿನ್ನೆಲೆಯಿಲ್ಲದೆ, ಸುಲಭವಾಗಿ ಆಸ್ವಾಧಿಸುವುದು ಕಷ್ಟ. ಅಡಿಗರ ಕಾವ್ಯಾ ಸ್ವಾಹನೆಗೆ ಇಲ್ಲಿನ ಸ್ವಂತಃ ಕವಿಗಳೂ, ವಿಚಾರವಂತರೂ ಆದ ಉಪ್ಪುಂದ ಚಂದ್ರ ಶೇಖರ ಹೊಳ್ಳರ ಕಾವ್ಯ ಪ್ರವೇಶಿಕೆ ಅಡಿಗರ ಶತಾಬ್ದಿ ವರ್ಷಕ್ಕೆ ಪ್ರಮುಖ ಕಾಣೆಕೆ ಎಂದು ಡಾ. ಪ್ರೋ. ಕನರಾಡಿ ವಾದಿರಾಜ ಭಟ್ ಹೇಳಿದರು. ಖಂಬದಕೋಣೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಪ್ತಾಹ ಕಾರ್ಯಕ್ರಮದಲ್ಲಿ ಅಡಿಗರ ಕಾವ್ಯ ಪ್ರವೇಶಿಕೆ ಅಡಿಗರ ಕಾವ್ಯದ ಆಸ್ವಾದನೆ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಾಂಶುಪಾಲೆ ಜಯಲಕ್ಮ್ಷೀ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಕವಿ ಅಡಿಗರ ವಿದ್ಯಾರ್ಥಿ ಪ್ರೋ ಕನರಾಡಿಯವರಿಗೆ ಅಡಿಗ ಜನ್ನ ಶತಾಬ್ಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಧ್ಯಮ ಭಾರತಿ ಬೆಂಗಳೂರಿನ ನಿರ್ದೇಶಕ ಎಂ. ಜಯರಾಮ ಅಡಿಗರು ಪ್ರಾಸ್ತಾವಿಸಿದರು. ಸಾಹಿತಿ ಯು. ರಮೇಶ ವೈದ್ಯ, ಪ್ರಸಾರ ಭಾರತಿ ನಿರ್ದೇಶಕ ಎಂ. ಜಯರಾಮ ಅಡಿಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಕೃತ ಬ್ಯಾಂಕುಗಳಂತೆ ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ಕೊಡುವ ಉದ್ದೇಶದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರಂಭಗೊಂಡ ಸಹಕಾರಿ ಸಂಘಗಳು ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಸೌಲಭ್ಯಗಳ ಜತೆಗೆ ಬ್ಯಾಂಕಿಂಗ್ ಸೇವೆ ನೀಡುತ್ತಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ನಾವುಂದದಿಂದ ಕುಂದಾಪುರ ಶಾಸ್ತ್ರಿಸರ್ಕಲ್ ಬಳಿಯ ಗೋವಿಂದ್ರಾಯ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ಗೋಪಾಲಕೃಷ್ಣ ವಿವಿಧೋದ್ಧೇಶ ಸೇವಾ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿ ಉದ್ಘಾಟಿಸಿ ಮಾತನಾಡಿದರು. ಸೇವೆಗೆ ಇನ್ನೊಂದು ಹೆಸರು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ, ಕೃಷಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಭಾಗದ ಸಹಕಾರಿ ಸಂಸ್ಥೆಗಳು ಆರ್ಥಿಕ ಹಾಗೂ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ. ಎಲ್ಲಾ ವರ್ಗದ ಜನರನ್ನು ಉತ್ತಮ ರೀತಿಯಲ್ಲಿ ಸ್ಪಂದಿಸುವ ಜತೆಗೆ ಉದ್ಯೋಗಾವಕಾಶಗಳು ಕೂಡಾ ಹೆಚ್ಚಲು ಸಹಕಾರಿಯಾಗುತ್ತಿದೆ. ಕೇವಲ ಲಾಭದ ದೃಷ್ಠಿಗಿಂತ ಮುಖ್ಯವಾಗಿ ಸಹಕಾರಿ ತತ್ವಗಳನ್ನು ಅಳವಡಿಸಿಕೊಂಡು ಸೇವೆಗೆ ಹೆಚ್ಚು ಮಹತ್ವ ಕೊಡುವುದರ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕುಂದಾಪುರ ತಾಲೂಕು ಸಮಿತಿ ಮತ್ತು ಬೈಂದೂರು ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮಗಳ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಬೈಂದೂರು ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡನಿವೇಶನ ರಹಿತರಿಂದ ಮನೆ ನಿವೇಶನ ಮಂಜೂರಾತಿ ಕೋರಿ ಅರ್ಜಿಗಳನ್ನು ಸ್ವೀಕರಿಸಲಾಯಿತು. ಬೈಂದೂರು ನಿವೇಶನ ರಹಿತರ ಹೋರಾಟ ಸಮಿತಿ ಸಂಚಾಲಕ ಗಣೇಶ ತೊಂಡೆಮಕ್ಕಿ ಅರ್ಜಿ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿದರು. ಈ ಅರ್ಜಿಗಳನ್ನು ಯಡ್ತರೆ ಗ್ರಾಮ ಪಂಚಾಯತ್ ಕಛೇರಿಗೆ ಸೆ.೨೮ರಂದು ಬೆಳಿಗ್ಗೆ ೧೧ ಗಂಟೆಗೆ, ಹಾಗೂ ಬೈಂದೂರು, ತಗ್ಗರ್ಸೆ ಗ್ರಾಮ ಪಂಚಾಯತ್ ಕಛೇರಿಗೆ ಮಧ್ಯಾಹ್ನ ೩ ಗಂಟೆಗೆ ಸಾಮೂಹಿಕವಾಗಿ ಹಸ್ತಾಂತರಿಸಲಾಗುತ್ತದೆ. ಈ ಸಂದರ್ಭ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಕುಂದಾಪುರ ತಾಲೂಕು ಸಮಿತಿ ಕಾರ್ಯದರ್ಶಿ ನಾಗರತ್ನ ನಾಡ, ಮುಖಂಡರಾದ ರಾಜೀವ ಪಡುಕೋಣೆ, ಪದ್ಮಾವತಿ ಶೆಟ್ಟಿ, ಗಣೇಶ ಮೊಗವೀರ, ಸಮ್ಮದ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಪ್ಪುಂದ ಶಂಕರನಾರಾಯಣ ಪುರಾಣಿಕ ಇವರ ಪ್ರಾಯೋಜಕತ್ವದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸುಪ್ರಭಾತ ಮತ್ತು ಭಕ್ತಿಗೀತೆಗಳನ್ನೊಳಗೊಂಡ ಧ್ವನಿಮುದ್ರಿಕೆ (ಸಿಡಿ) ಯನ್ನು ಶಾಸಕ ಕೆ. ಗೋಪಾಲ ಪೂಜಾರಿ ಲೋಕಾರ್ಪಣೆ ಮಾಡಿದರು. ಯುವ ಸಂಗೀತ ನಿರ್ದೇಶಕ ಚಂದ್ರ ಬೈಂದೂರು ಇವರು ಈ ಧ್ವನಿಮುದ್ರಿಕೆಗೆ ಸಾಹಿತ್ಯ ಮತ್ತು ಸಂಗೀತವನ್ನು ಸಂಯೋಜಿಸಿ ಭಕ್ತಿಗೀತೆಗಳ ಗಾಯನವನ್ನೂ ಮಾಡಿದ್ದಾರೆ. ಶ್ರೀದೇವರ ಸುಪ್ರಭಾತವನ್ನು ಉಡುಪಿ ಕೃಷ್ಣ ಕಾರಂತ್ ಹಾಡಿದ್ದಾರೆ. ಈ ಸಂದರ್ಭ ದೇವಳದ ತಂತ್ರಿ ಕೆ. ಮಂಜುನಾಥ ಅಡಿಗ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಉಪ್ಪುಂದ ಗ್ರಾಪಂ ಅಧ್ಯಕ್ಷೆ ದುರ್ಗಮ್ಮ, ಜಿಪಂ ಸದಸ್ಯರಾದ ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ತಾಪಂ ಸದಸ್ಯೆ ಪ್ರಮೀಳಾ ದೇವಾಡಿಗ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮಂಗಳೂರು ಎ. ಜೆ. ಹಾಸ್ಪಿಟಲ್ ಮತ್ತು ಎ. ಜೆ. ವೈದ್ಯಕೀಯ ಮಹಾವಿದ್ಯಾಲಯ ಇವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಹಯೋಗದಲ್ಲಿ ಇಲ್ಲಿನ ಜಗದಾಂಬಿಕಾ ಸಂಕೀರ್ಣದಲ್ಲಿ ಕೊಲ್ಲೂರು ಶರನ್ನವರಾತ್ರಿ ಪ್ರಯುಕ್ತ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ತೆರೆದ ವೈದ್ಯಕೀಯ ತಪಾಸಣೆ ಮತ್ತು ತುರ್ತುಚಿಕಿತ್ಸಾ ಘಟಕವು ಸೆ.೩೦ರ ತನಕ ಉಚಿತವಾಗಿ ಕಾರ್ಯನಿರ್ವಹಿಸುತ್ತದೆ. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ. ಅಭಿಲಾಷ್ ಪಿ. ವಿ. ಇವರು ಈ ವ್ಯವಸ್ಥೆಯ ಉಸ್ತುವಾರಿವಹಿಸಿದ್ದು, ಕಾರ್ಯನಿರ್ವಹಣಾಧಿಕಾರಿ ಜನಾರ್ದನ್ ಜಿ. ಸಿ., ಎಇಒ ಎಚ್. ಕೃಷ್ಣಮೂರ್ತಿ, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ ಸಹಕರಿಸುತ್ತಿದ್ದಾರೆ. ನುರಿತ ಹಾಗೂ ತಜ್ಞ ವೈದ್ಯರ ತಂಡ ಕೊಲ್ಲೂರಿನಲ್ಲಿ ಮೊಕ್ಕಾಂ ಹೂಡಿದ್ದು, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಕೊಲ್ಲೂರು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ, ನಾಗರಾಜ್ ಅಡಿಗ ಮತ್ತು ಮೊದಲಾದವರು ಉಪಸ್ಥಿರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಕೆ.ಪಿ ಉಪಸ್ಥಿತರಿದ್ದಾರೆ. ಪ್ರಿತೇಶ್ ಮತ್ತು ಸುಖೇಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ವಿಜೇತರನ್ನು ಅಭಿನಂದಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ರಾಷ್ಟ್ರ ನಿರ್ಮಾಣದ ಕನಸಿನಂತೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ರಾಜಕೀಯ ಶಕ್ತಿ ಇದ್ದರೆ ಮತ್ತಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಬಹುದೆಂಬ ಉದ್ದೇಶದಿಂದ ಆತ್ಮೀಯರು ಹಾಗೂ ಹಿತಚಿಂತಕರ ಬೆಂಬಲ ಮತ್ತು ಸೂಚನೆಯಂತೆ ಜಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಕರ್ನಾಟಕ ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಹೇಳಿದರು. ಅವರು ತಮ್ಮ ಸಂಗಡಿಗರ ಜೊತೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿ ಪ್ರತಿ ಬೂತ್ ಮಟ್ಟದಲ್ಲಿಯೂ ಯುವಕರನ್ನು ಸಂಘಟಿಸುವ ಕಾರ್ಯ ಮಾಡಲಾಗುವುದು ಎಂದರು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ವಾಸುದೇವ ರಾವ್, ಮಹಾಪ್ರದಾನ ಕಾರ್ಯದರ್ಶಿ ಶ್ರೀಕಾಂತ ಅಡಿಗ ಕೊಲ್ಲೂರು, ಜಿಲ್ಲಾ ಯುವ ಘಟಕದ ಅಧ್ಯಕ್ಷ ರೋಹಿತ್ ಕರಂಬಳ್ಳಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಶೆಟ್ಟಿ ಕೆಂಚನೂರು, ಉಪಾಧ್ಯಕ್ಷೆ ವಿಶಾಲಾಕ್ಷಿ ಶೆಟ್ಟಿ, ಕಾರ್ಯದರ್ಶಿ ಅನಿತಾ ಶೆಟ್ಟಿ, ಜಾತ್ಯಾತೀತ ಜನತಾದಳದ ಅಲ್ಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 2016-17ನೇ ಸಾಲಿನ ಕರ್ನಾಟಕ ಪ್ರೌಡಶಿಕ್ಷಣ ಮಂಡಳಿಯ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡಾ 94.05 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಭ್ರಮರ ಅವರು ಖ್ಯಾತ ಭರತನಾಟ್ಯ ನಿರ್ದೇಶಕ ಕರ್ನಾಟಕ ಕಲಾಶ್ರೀ ವಿದ್ವಾನ್ ಶ್ರೀ ಚಂದ್ರಶೇಖರ ನಾವಡರ ಶಿಷ್ಯೆ ಹಾಗೂ ಬೈಂದೂರು ಸುರಭಿ ಕಲಾಸಂಸ್ಥೆಯ ವಿದ್ಯಾರ್ಥಿನಿಯಾಗಿರುತ್ತಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರವಾಸಿಗರ ಬಗ್ಗೆ ಆ ಪ್ರದೇಶದ ಜನರಿಗೆ ಹೃದಯ ವೈಶಾಲ್ಯತೆ ಇರಬೇಕು. ಈ ನೆಲೆಯಲ್ಲಿ ಇಲಾಖೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರವಾಸಿ ಸ್ಥಳಗಳನ್ನು ಸ್ವಚ್ಛಗೊಳಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ಪ್ರವಾಸಿ ಕಛೇರಿ ಸಹಾಯಕ ನಿರ್ದೇಶಕಿ ಅನಿತಾ ಬಿ. ಆರ್. ಹೇಳಿದರು. ಜಿಲ್ಲಾಡಳಿ ಮತ್ತು ಪ್ರವಾಸೋದ್ಯಮ ಇಲಾಖೆ, ಪಡುವರಿ ಗ್ರಾಮ ಪಂಂಚಾಯತ್, ಬೈಂದೂರು ರೋಟರಿ ಕ್ಲಬ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೈಂದೂರು ಸೋಮೇಶ್ವರ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ನೆಲ, ಜಲದ ಸ್ವಚ್ಛತೆ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸ್ವಚ್ಛತೆ ಹಾಗೂ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇದರಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹುಮುಖ್ಯವಾಗಿದೆ. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಪ್ರವಾಸಿ ಸ್ಥಳಗಳ ಸ್ವಚ್ಛತೆ ಮತ್ತು ಅಭಿವೃದ್ಧಿಯ ಕುರಿತು ಕಾಳಜಿ ವಹಿಸಬೇಕು ಎಂದರು. ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಪ್ರವಾಸಿಗರನ್ನು ಆಕರ್ಷಿಸಲು ನಾವು ಹಿಂದೆ…

Read More