Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಮೇಲ್ಛಾವಣಿ ಕುಸಿದಿದ್ದು ಕಟ್ಟಡವೂ ಶಿಥಿಲಾವಸ್ಥೆಯಲ್ಲಿದೆ. ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಅಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡ ಬಗ್ಗೆ ದೂರಿಕೊಂಡರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುಕುಮಾರ ಶೆಟ್ಟಿ ಅವರು ಶಾಲೆಯ ದುರಸ್ತಿಯ ಬಗ್ಗೆ ಕಳೆದ ಆರು ವರ್ಷದಿಂದ ಬೇಡಿಕೆಯಿಟ್ಟಿದ್ದರೂ ಯಾರೋಬ್ಬರೂ ಈ ಬಗ್ಗೆ ಗಮನ ಹರಿಸಿಲ್ಲ. ಶಿಥಿಲಗೊಂಡ ಕಟ್ಟಡದಲ್ಲಿಯೇ ಈವರೆಗೆ ಮಕ್ಕಳನ್ನು ಕುಳ್ಳಿರಿಸಿದ್ದು ಇಲಾಖೆಯ ಬೇಜವಬ್ದಾರಿಯನ್ನೂ ತೋರ್ಪಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ್ದ ಡಿಡಿಪಿಐ ಪೋಷಕರನ್ನು ಹೆಸರಿಸಿ ಇಲಾಖೆಯ ನಡೆಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅವರು ಈ ಹಿಂದೆಯೇ ಎಚ್ಚೆತ್ತುಕೊಂಡಿದ್ದರೆ ಇಂದು ಶಾಲೆಯ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಮೇಲ್ಛಾವಣಿ ಕುಸಿದು ತರಗತಿ ನಿಂತಿರುವ ಘಟನೆ ಈ ಭಾಗದಲ್ಲಿ ನಡೆದಿರಲಿಲ್ಲ. ಆಡಳಿತದ ಬೇಜವಾಬ್ದಾರಿಯೇ ಇದೆಲ್ಲದಕ್ಕೂ ಕಾರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ತರಗತಿಯಿಲ್ಲದೇ ಸ್ಥಿತಿ ನಿರ್ಮಾಣವಾಗಿದ್ದು ಇಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅವರ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ವಿದ್ಯಾರ್ಥಿ ಪೋಷಕರೊಂದಿಗೆ ಮಾತನಾಡಿದ ಅವರು ಶಾಲೆಯ ನವೀಕೃತ ಕಟ್ಟಡವನ್ನು ನಿರ್ಮಿಸಲು ಇಲಾಖೆಯಿಂದ 13 ಲಕ್ಷ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಮಂಜೂರು ಮಾಡಲಾಗುವುದು. ಹೊಸ ಕಟ್ಟಡ ನಿರ್ಮಾಣವಾಗುವ ತನಕ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಅಲ್ಲಿಯೇ ತರಗತಿ ನಡೆಸಲು ಸೂಚಿಸಲಾಗಿದ್ದು ನಾಲ್ಕೈದು ದಿನದಲ್ಲಿ ತಾತ್ಕಾಲಿಕ ಶೆಡ್ ನಿರ್ಮಾಣಗೊಳ್ಳಲಿದೆ ಎಂದರು. ಶಿಥಿಲಗೊಂಡಿರುವ ಕಟ್ಟಡವನ್ನು ಕೂಡಲೇ ನೆಲಸಮಗೊಳಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಡಿಡಿಪಿಐ ಅವರಿಗೆ ಸೂಚಿಸಿರುವ ಶಾಸಕರು, ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಕ್ರಮಕೈಗೊಳ್ಳುವಂತೆಯೂ ಸೂಚಿಸಿದರು. ತಾತ್ಕಾಲಿಕ ಶೆಡ್ ನಿರ್ಮಾಣಗೊಳ್ಳುವ ತನಕ ವಿದ್ಯಾರ್ಥಿಗಳ ತರಗತಿಗೆ ಅಡಚಣೆಯಾಗಲಿದ್ದು, ಶೆಡ್ ನಿರ್ಮಾಣಗೊಂಡ ಬಳಿಕ ವಿಶೇಷ ತರಗತಿಗಳನ್ನು ತೆಗೆದುಕೊಂಡು ಸರಿದೂಗಿಸುವಂತೆ ಮುಖ್ಯೋಪಧ್ಯಾಯರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸಮರ್ಪಕವಾಗಿ ಪ್ರತಿಯೋರ್ವರಿಗೂ ತಲುಪುವಂತೆ ಮಾಡಬೇಕಿದೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಿದಲ್ಲಿ ಜನರು ತಮ್ಮ ಕೆಲಸ ಕಾರ್ಯ ಬಿಟ್ಟು ತಾಲೂಕು ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ. ಕಾನೂನಿನ ಇತಿಮಿತಿಯಲ್ಲಿ ಶೀಘ್ರ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪ್ರೀತಿಯಿಂದ ಅವರ ಮನಸ್ಸನ್ನು ಗೆಲ್ಲಿ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ನಾಗೂರು ಶ್ರೀ ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ನಡೆದ ಕಿರಿಮಂಜೇಶ್ವರ, ಕಂಬದಕೋಣೆ, ಹೇರೂರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಪಡಿತರ ಚೀಟಿಗೆ ಆಧಾರ್ ಲಿಂಕ್ ಜೋಡಣೆ ಸಮಸ್ಯೆಯಿಂದ ಹಲವು ಕುಟುಂಬಗಳಿಗೆ ಅನ್ಯಾಯವಾಗಿದ್ದು, ಶೀಘ್ರ ಈ ಸಮಸ್ಯೆಯನ್ನು ಬಗೆಹರಿಸುವಂತೆ ಆಹಾರ ಮತ್ತು ನಾಗರೀಕ ಖಾತೆಯ ಸಚಿವ ಯು.ಟಿ ಖಾದರ್ ಅವರಿಗೆ ಮನವಿ ಮಾಡಲಾಗಿದೆ ಎಂದರು. ಬಸವ ವಸತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಗೆ 1864 ಮನೆ ಮಂಜೂರಾಗಿದ್ದು ಮತ್ಸ್ಯಾಶ್ರಯ ಯೋಜನೆಯಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ರೋಟೆರಿಯನ್‌ಗಳ ಕುಟುಂಬ ಮತ್ತು ವೃತ್ತಿಯ ನಡುವೆ ಉತ್ತಮ ಪ್ರಗತಿಯಿದ್ದರೇ ಇದ್ದರೆ ರೋಟರಿಯೂ ಸರಿಯಾದ ದಾರಿಯಲ್ಲಿ ನಡೆಯುತ್ತದೆ. ಕುಟುಂಬವೂ ರೋಟರಿಯಲ್ಲಿ ಭಾಗಿಯಾದಾಗ ಯೋಜಿತ ಕಾರ್ಯದಲ್ಲಿ ಪೂರ್ಣಪ್ರಮಾಣದ ರೋಟರಿಯ ಸೇವಾ ಕಾರ್ಯ ಯಶಸ್ಸು ಕಾಣಲು ಸಾಧ್ಯವಿದೆ. ಇಂದು ಆತ್ಮವಿಶ್ವಾಸ ಕುಗ್ಗದೆ ಸಮುದಾಯ ಬೆಳೆಯುವಂತೆ ಮಾಡುವ ಕಾರ್ಯ ಸಂಸ್ಥೆಗಳ ಮೂಲಕ ಆಗಬೇಕಿದೆ ಎಂದು ರೋಟರಿ ಮಾಜಿ ಜಿಲ್ಲಾ ಗವರ್ನರ್ ಹೆಚ್. ಎಲ್. ರವಿ ಹೇಳಿದರು. ಅವರು ಬೈಂದೂರು ರೋಟರಿ ಭವನದಲ್ಲಿ ಜರುಗಿದ ರೋಟರಿ ಕ್ಲಬ್ ಬೈಂದೂರು ಪದಪ್ರದಾನ ಸಮಾರಂಭದಲ್ಲಿ ನೂತನ ಅದ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಬೇರೆ ಬೇರೆ ವೃತ್ತಿಯಲ್ಲಿ ತೊಡಗಿಕೊಂಡಿರುವ ೪ ಜನರಿಂದ ಆರಂಭಗೊಂಡ ಮಾಡಿದ ರೋಟರಿ ಇಂದು ವಿಶ್ವದಾದ್ಯಂತ ೧೨ ಲಕ್ಷ ರೊಟೇರಿಯನ್‌ಗಳನ್ನು ಹೊಂದಿದೆ. ಒಳ್ಳೆಯ ಕೆಲಸವನ್ನು ಮಾಡಬೇಕು ಎಂದು ರೋಟರಿ ಫೌಂಡೇಶನ್ ಹೇಳುತ್ತದೆ. ಶಿಕಾಗೋನಲ್ಲಿ ಸಾರ್ವಜನಿಕ ಶೌಚಾಲಯ ಕಟ್ಟಿಸುವುದರಿಂದ ಆರಂಭಗೊಂಡ ರೋಟರಿ ಸೇವೆ, ಅಂಗವಿಕಲತೆ ಹಾಗೂ ಪೊಲೀಯೋ ರೋಗದ…

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಸಂಪೂರ್ಣ ಶಿಥಿಲಗೊಂಡ ಹಳೆಯ ಅಪಾಯಕಾರಿ ಶಾಲಾ ಕಟ್ಟಡದಲ್ಲಿಯೇ ಆಟ ಪಾಠ. ಮಳೆಗಾಲದಲ್ಲಿ ನೀರಿನ ಪಸೆ ಏಳುವ ಕೋಣೆಯೊಳಕ್ಕೆ ಕುಳಿತುಕೊಂಡ ಮಕ್ಕಳಿಗೆ ಶೀತ ಜ್ವರ ತಪ್ಪಿದ್ದಲ್ಲ. ನಿಂತುಕೊಂಡೆ ಮಧ್ಯಾಹ್ನದ ಊಟ ಸೇವಿಸಬೇಕಾದ ದುಸ್ಥಿತಿ. ಪಕ್ಕದ ದೇವಸ್ಥಾನವೊಂದೇ ತಾತ್ಕಾಲಿಕ ಆಸರೆ. ಇಷ್ಟನ್ನೂ ಸಹಿಸಿಕೊಂಡು ಮಕ್ಕಳನ್ನು ಧೈರ್ಯಮಾಡಿ ಶಾಲೆಗೆ ಕಳುಹಿಸಿದ್ದ ಪೋಷಕರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶಾಲೆಯ ಮೇಲ್ಛಾವಣಿ ಮತ್ತಷ್ಟು ಶಿಥಿಲಗೊಂಡು ಹೆಂಚುಗಳು ಗಾಳಿ ಮಳೆಗೆ ಉದುರಿ ಬೀಳುತ್ತಿದ್ದು ಮಕ್ಕಳ ಜೀವಕ್ಕೆ ಹೊಣೆಯಾರು ಎಂದು ಆತಂಕಗೊಂಡಿದ್ದಾರೆ. ಉತ್ತರಿಸಬೇಕಾದ ಅಧಿಕಾರಿಗಳು ಮಾತ್ರ ಉಡಾಫೆಯ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆ. ಇದು ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕರುಣಾಜನಕ ಸ್ಥಿತಿ. ಕಳೆದ ನಾಲ್ಕೈದು ವರ್ಷಗಳಿಂದ ಶಾಲಾ ಕಟ್ಟಡಕ್ಕಾಗಿ ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಿರಂತರವಾಗಿ ಮನವಿ ಮಾಡುತ್ತಾ, ಹೋರಾಟ ನಡೆಸುತ್ತಲೇ ಬಂದಿದ್ದರೂ ಆಶ್ವಾಸನೆಗಳು ಈವರೆಗೂ ಕಾರ್ಯ ರೂಪಕ್ಕೆ ಬಂದಿಲ್ಲ. ಒಂದನೇ ತರಗತಿಯಿಂದ ರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಕೋಟ ಪಡುಕೆರೆ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ನೇತೃತ್ವದಲ್ಲಿ ಕಾಲೇಜು ವೇಳಾಪಟ್ಟಿ ಬದಲಾಯಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬದಲಾದ ಸರಕಾರಿ ಕಾಲೇಜುಗಳ ವೇಳಾಪಟ್ಟಿಯಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ ಎಂಟು ಗಂಟೆಯಿಂದಲೇ ತರಗತಿ ಆರಂಭಿಸುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಸಾಧ್ಯವಿಲ್ಲ. ಕೂಡಲೇ ಈ ಮೊದಲಿನಂತೆಯೇ ತರಗತಿಗಳನ್ನು ಆರಂಭಿಸಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯು ಪಡುಕರೆಯಿಂದ ಸಾಗಿ ನಾಡ ಕಛೇರಿ ಅಧಿಕಾರಿಗಳ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸುಮಾರು 700ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು. ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಧ್ವನಿ-ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ ಮಟ್ಟದ ಸೇವೆ ನೀಡಬಹುದು ಎಂದು ಉಡುಪಿ ಶಿರೂರು ಮಠಾಧಿಪತಿ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿ ಹೇಳಿದರು. ನಾಗೂರು ಶ್ರೀ ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ನಡೆದ ಉಡುಪಿ ಜಿಲ್ಲಾ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಆರನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಸಂಘಟನೆಯ ಸರ್ವ ಸದಸ್ಯರ ಮಾಹಿತಿ ಕೈಪಿಡಿ ಅನಾವರಣ ಹಾಗೂ ’ವಿದ್ಯಾನಿಧಿ’ ಯೋಜನೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಧ್ವನಿ ಬೆಳಕು ಈಗ ಅನಿವಾರ್ಯ ವ್ಯವಸ್ಥೆ. ಅದರ ಸಂಯೋಜಕರು ಹಗಲು ರಾತ್ರಿಯೆನ್ನದೆ ದುಡಿಯುವ ಶ್ರಮಜೀವಿಗಳು. ವೃತ್ತಿಯೊಂದಿಗೆ ಅವರು ನಡೆಸುತ್ತಿರುವ ಸಮಾಜ ಸೇವೆಯ ಕಾರಣದಿಂದ ಸಮಾಜ ಸದಾ ಅವರನ್ನು ಗುರುತಿಸುತ್ತದೆ ಹಾಗೂ ಸ್ಮರಿಸುತ್ತದೆ ಎಂದರು. ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಆವರಣದಲ್ಲಿ ಕುಂದಾಪುರ ತಾಲೂಕಿನ ಉಪ ಅರಣ್ಯ ವಿಭಾಗ ಅಧಿಕಾರಿಗಳಾದ ಎಮ್.ವಿ.ಅಮರನಾಥರವರ ಉಪಸ್ಥಿತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಈ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ೪೦೦ ಕ್ಕೂ ಹೆಚ್ಚು ಮೆಡಿಸಿನ್ ಯುಕ್ತ ಸಸ್ಯಗಳು ಇರುವುದನ್ನು ತಿಳಿದು ಅರಣ್ಯಾದಿಕಾರಿಗಳು ಸಂತಸ ವ್ಯಕ್ತ ಪಡಿಸಿದರು. ಹಸಿರಿನ ಹಬ್ಬಕ್ಕೆ ಚಾಲನೆ ನೀಡಿದ ಎಮ್.ವಿ.ಅಮರನಾಥರವರು ಪರಿಸರದಲ್ಲಿ ಅಸಮತೋಲನ ಉಂಟಾದರೆ ಪ್ರಾಕೃತಿಕ ವಿಕೋಪಗಳಿಗೆ ಹಾಗು ರೋಗರುಜಿನಗಳಿಗೆ ಕಾರಣವಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಕಾಳಜಿಯನ್ನು ಬೆಳೆಸಿಕೊಂಡು ಪರಿಸರ ಸಂರಕ್ಷಣೆಗೆ ಹಾಗು ಅಭಿವೃದ್ದಿಗೆ ಶ್ರಮಿಸಬೇಕಿದೆ ಎಂದು ತಿಳಿಸಿದರು. ’ಹಸಿರು ಮಕ್ಕಳ ಉಸಿರು ’ ಎಂಬಂತೆ ಪರಿಸರ ಜಾಗೃತಿ ನನ್ನಲ್ಲಿ ಇನ್ನಿಲ್ಲದ ಉತ್ಸಾಹ ಸಂತೋಷ ತಂದಿದೆ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿರುವುದು ಉತ್ತಮ ಸಂದೇಶ ನೀಡುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಮುಂದಾಳತ್ವ ವಹಿಸಿ ತಮ್ಮ ಮನೆ ಶಾಲೆ ಓಣಿಗಳಲ್ಲಿ ಸ್ವಚ್ಛತೆ ಮತ್ತು ಪರಿಸರ ಸ್ನೇಹಿ ಕೆಲಸಕ್ಕೆ ಮುಂದಾಗುವಂತೆ ಮಾರ್ಗದರ್ಶನ ನೀಡಿದರು. ’ಮಗುವಿಗೊಂದು ಮರ-ಶಾಲೆಗೊಂದು ವನ ’ ಎಂಬ ಮಾತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ಮತ್ತು ಘನತ್ಯಾಜ್ಯ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು. ಕನ್ನಡ ಪ್ರಾಧ್ಯಾಪಕರಾದ ಕಾಳಾವರ ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಒಬ್ಬ ವ್ಯಕ್ತಿಯ ಸರ್ವೋತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿಯಾಗಿದೆ. ಶಿಸ್ತು, ಸಂಘಟನಾ ಶಕ್ತಿ, ಸಂಪೂರ್ಣ ಮಾಡುವಂತಹ ಶಕ್ತಿ ರಾಷ್ಟ್ರೀಯ ಸೇವಾ ಯೋಜನೆಗೆ ಇದೆ. ನಾಯಕತ್ವ, ಸಂಹ್ಗಟನೆ, ಭಾವೈಕ್ಯತೆಯನ್ನು ಅಳವಿಡಿಸಿಕೊಳ್ಳಿ ಎಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ಆರ್.ಸಂಕೇತ್ ಘನತ್ಯಾಜ್ಯ ನಿರ್ವಹಣೆ ಕುರಿತು, ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ವಿದ್ಯಾರ್ಥಿಗಳಾದ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ತಿಕ್ ಸ್ವಾಗತಿಸಿದರು. ಅವಿನಾಶ್ ಶೆಣೈ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಯ್ಕನಕಟ್ಟೆ ಕೆರ್ಗಾಲ್ ಬಳಿ ಕುಂದಾಪುರ ಭಟ್ಕಳ ಸರಕಾರಿ ಬಸ್ ನಿಲುಗಡೆ ಮಾಡುವಂತೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಬೇಡಿಕೆಯಿಟ್ಟಿದ್ದು ಅದರಂತೆ ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಕೆರ್ಗಾಲಿನಲ್ಲಿ ಇಂದಿನಿಂದ ಬಸ್ ನಿಲುಗಡೆಗೊಳ್ಳಲಿದ್ದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಹಲವಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದು, ಸರಕಾರಿ ಬಸ್ ಪಾಸ್ ಸೌಲಭ್ಯದಿಂದ ವಂಚಿತರಾಗಿದ್ದರು. ಈ ಸಂಬಂಧ ಸಾರ್ವಜನಿಕರು ಸರಕಾರಿ ಬಸ್ ನಿಲುಗಡೆಗೆ ಬೇಡಿಕೆಯಿಟ್ಟಿದ್ದರು. ಇದಕ್ಕೆ ಸ್ಪಂದಿಸಿದ್ದ ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ದೇವಾಡಿಗ ಅವರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ ಕುಂದಾಪುರ ಡಿಪೋ ಮ್ಯಾನೆಜರ್ ಅವರ ಗಮನಕ್ಕೆ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದರು. ಇಂದು ಮೊದಲ ಭಾರಿಗೆ ಬಸ್ ನಿಲುಗಡೆ ಮಾಡಲಾಗಿದ್ದುಸಾರ್ವಜನಿಕರು ಸಂತಸಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ತಾ.ಪಂ ಸದಸ್ಯ ಜಗದೀಶ ದೇವಾಡಿಗ, ಕೆರ್ಗಾಲ್ ಗ್ರಾಪಂ ಅಧ್ಯಕ್ಷ ಸೋಮ,…

Read More