ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘ ನಿ. ಕೋಡಿ ಕನ್ಯಾಣ ಇದರ ಐದನೇ ವಾರ್ಷಿಕ ಸಾಮಾನ್ಯ ಸಭೆ ಮಾರಿಕಾಂಬ ದೇಗುಲದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೃಷ್ಣ ಕೆ. ವಹಿಸಿದ್ದರು. ಸಂಘವು ವರದಿ ವರ್ಷದಲ್ಲಿ 10,33,194 ರೂ ಲಾಭವನ್ನು ಗಳಿಸಿದ್ದು ಸದಸ್ಯರಿಗೆ ಶೇಕಡಾ 9.5 ಡಿವಿಡೆಂಡ್ ನೀಡುವುದಾಗಿ ಅಧ್ಯಕ್ಷರಾದ ಕೃಷ್ಣ ಕೆ ಘೋಷಿಸಿದರು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಮತ್ತು ಕಲಾ ಕ್ಷೇತ್ರಗದಲ್ಲಿ ಸಾಧನೆಗೈದ ಸಾಧಕರಾದ ವಿಜಯ್ ನಾಯರಿ, ರಾಜೇಶ್ ಎನ್ ಕರ್ಕೇರ, ಸತೀಶ್ ಖಾರ್ವಿ ಹಾಗೂ ಪ್ರಕಾಶ್ ಖಾರ್ವಿ ಅವರುಗಳನ್ನು ಸನ್ಮಾನಿಸಲಾಯಿತು. ಅಶಕ್ತರಿಗೆ ಸಹಾಯಧನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅರುಣ ಜಿ. ಕುಂದರ್ ಹಾಗೂ ನಿರ್ದೇಶಕರುಗಳಾದ ಪ್ರಭಾಕರ ಎನ್. ಬಂಗೇರ, ಹರ್ಷ ಕೆ.ಬಿ., ಶುಭಕರ ಕುಂದರ್, ಸುಧಾಕರ ಎಸ್. ಕಾಂಚನ್, ದಿನೇಶ್ ಪೂಜಾರಿ, ಸುಜಾತ ಎಸ್., ಪುಷ್ಪಲತಾ ಎಸ್. ಸುವರ್ಣ, ಗುಲಾಬಿ ಹಾಗೂ ಸಹಕಾರಿಯ ಕಾನೂನು ಸಲಹೆಗಾರರಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ ಕೋಟತಟ್ಟು ಪಡುಕರೆಯ ಶ್ರೀ ಸದ್ಯೋಜಾತ ದೇಗುಲದ ಸಭಾಂಗಣದಲ್ಲಿ ಜರಗಿತು. ಸಂಘದ 2025-26ನೇ ಸಾಲಿನಲ್ಲಿ ರೂ 3,81,893.29 ನಿವ್ವಳ ಲಾಭ ಗಳಿಸಿದ್ದು ಅದರಲ್ಲಿ ಉತ್ಪಾದಕರಿಗೆ ಶೇ.65% ಬೋನಸ್ ರೂಪದಲ್ಲಿ 1 ಲೀಟರ್ ಹಾಲಿಗೆ ರೂ. 2.34 ಪೈಸೆ ಯಂತೆ ಹಾಗೂ ಶೇಕಡಾ 25 ಡಿವಿಡೆಂಟ್ ಒಟ್ಟಿಗೆ 1.85.900 ರೂ ಗಳನ್ನು ವಿಂಗಡಿಸಿ ಉತ್ಪಾದಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾದ ಬಗ್ಗೆ ಸಭೆಯ ಗನಮಕ್ಕೆ ತರಲಾಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘ ಮಂಗಳೂರು ಇದರ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಒಕ್ಕೂಟದಿಂದ ಸಿಗುವ ಸವಲತ್ತುಗಳ ಕುರಿತು ವಿವರವಾಗಿ ಸದಸ್ಯರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಉತ್ತಮ ಗುಣ ಮಟ್ಟದ ಹಾಲನ್ನು ನೀಡಿ ಸಂಘದ ಅಭಿವೃದ್ಧಿಗೆ ಸಹಕರಿಸಿ ಮುಂದಿನ ಪೀಳಿಗೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವ ಕುರಿತು ಮಾಹಿತಿ ನೀಡಿದರು. ಸಾಸ್ತಾನ ಶಿಬಿರ ವ್ಯಾಪ್ತಿಯ ಪಶು ವೈದ್ಯಧಿಕಾರಿ ನಿಜಾಮ್ ಪಟೇಲ್ ರಾಸು ಸಾಕಾಣಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಸರಿಯನ್ನು ಬಲ್ಲವನು ಕೇವಲ ಜ್ಞಾನಿ. ಸರಿಯನ್ನು ಬಲ್ಲವನು ಹಾಗೂ ಸರಿಯಾದ ದಾರಿಯನ್ನು ಇತರರಿಗೆ ತೋರುವವನು ಗುರು. ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಬೇಕಾದ ಕಾರ್ಯ ಗುರುವಿನದ್ದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಶಂಕರಾಚಾರ್ಯರು ಸೈನ್ಯ ಹಾಗೂ ಸಂಪತ್ತು ಯಾವುದೂ ಇಲ್ಲದೇ ದೇಶದಲ್ಲಿ ಧರ್ಮಸಂರಕ್ಷಣೆಯ ಕಾರ್ಯವನ್ನು ಮಾಡಿದರು. ದೇಶಾದ್ಯಂತ ಸಂಚರಿಸಿದ ಶಂಕರರು ಜನರಿಗೆ ಸರಿಯಾದ ದಾರಿಯನ್ನು ತೋರಿದರು ಹಾಗೂ ನಿತ್ಯನಿರಂತರವಾಗಿ ಆ ಕಾರ್ಯ ನಡೆಯುವಂತೆ ಮಾಡಲು ದೇಶಾದ್ಯಂತ ಮಠಗಳನ್ನು ಸ್ಥಾಪಿಸಿದರು. ಹಾಗಾಗಿ ಶಂಕರಾಚಾರ್ಯರ ಉದ್ದೇಶವೇ ಮಠದ ಉದ್ದೇಶವಾಗಿರಬೇಕು. ಶಂಕರರು ತೋರಿದ ದಾರಿಯಲ್ಲಿ ಧರ್ಮ ಪ್ರಸಾರವನ್ನು ಮಾಡುತ್ತಾ, ಸಮಾಜಕ್ಕೆ ಸರಿ – ತಪ್ಪುಗಳನ್ನು ಮಾರ್ಗದರ್ಶನ ಮಾಡುವುದು ಮಠದ ಕಾರ್ಯವಾಗಬೇಕು. ನಮ್ಮ ಮಠದ ಉದ್ದೇಶ ಹಾಗೂ ಈ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಉದ್ದೇಶವೂ ಇದೇ ಆಗಿದೆ. ಜೀವನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ದಾಖಲೆಯ 18 ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಹುಡುಗರ -45ಕೆಜಿ ವಿಭಾಗದಲ್ಲಿ ಪ್ರಸಾದ್, -50 ಕೆಜಿ ವಿಭಾಗದಲ್ಲಿ ಅನ್ವೇಷಣ್,-54 ಕೆಜಿ ವಿಭಾಗದಲ್ಲಿ ರಜತ್ ಆರ್,-58 ಕೆಜಿ ವಿಭಾಗದಲ್ಲಿ ಸಾಯಿನಾಥ್ ,- 66 ಕೆಜಿ ವಿಭಾಗದಲ್ಲಿ ಪ್ರವೀಶ್,-70 ಕೆಜಿ ವಿಭಾಗದಲ್ಲಿ ರಯಾನ್ ಅಹಮದ್ ಖಾನ್, -74ಕೆಜಿ ವಿಭಾಗದಲ್ಲಿ ಸೋಹಾನ್, -78ಕೆಜಿ ವಿಭಾಗದಲ್ಲಿ ಪ್ರೀತಮ್, +82ಕೆಜಿ ವಿಭಾಗದಲ್ಲಿ ಸ್ಕಂದ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದರೆ, 17ರ ವಯೋಮಾನದ ಹುಡುಗಿಯರ -40ಕೆಜಿ ವಿಭಾಗದಲ್ಲಿ ಸನ್ಮಿತಾ,-52ಕೆಜಿ ವಿಭಾಗದಲ್ಲಿ ಶರಣ್ಯ,+68 ಕೆಜಿ ವಿಭಾಗದಲ್ಲಿ ಕೃತಿಕಾ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು. 14ರ ವಯೋಮಾನದ ಹುಡುಗರ -25…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ಗುರುಪೂರ್ಣಿಮೆಯ ಪ್ರಯುಕ್ತ ವ್ಯಾಸಪೂಜೆಯು ಹಟ್ಟಿಅಂಗಡಿ ಡಾ. ಹೆಚ್. ಶಾಂತಾರಾಮ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಶಾಲೆಯ ಸಂಸ್ಕೃತ ಅಧ್ಯಾಪಕರಾದ ರಾಮಕೃಷ್ಣ ಉಡುಪರು ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸುತ್ತಾ, ಗುರುಗಳು ತಮ್ಮ ಗುರುಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವ ಈ ಪವಿತ್ರ ದಿನದಲ್ಲಿ, ಜಗತ್ತಿನ ಆದಿಗುರುಗಳಾದ ವೇದವ್ಯಾಸ ಮಹರ್ಷಿಗಳನ್ನು ಭಕ್ತಿಪೂರ್ವಕವಾಗಿ ಸ್ಮರಿಸುವುದು ನಮ್ಮೆಲ್ಲರ ಭಾಗ್ಯ. ವೇದಗಳನ್ನು ಸಂಗ್ರಹಿಸಿ, ಅವುಗಳನ್ನು ಸುಲಭವಾಗಿ ಅಧ್ಯಯನ ಮಾಡಲು ವ್ಯವಸ್ಥಿತಗೊಳಿಸಿದ ಮಹಾನುಭಾವರು ವೇದವ್ಯಾಸರು. ಹದಿನೆಂಟು ಪುರಾಣಗಳ ಮೂಲಕ ದೇವರು, ಧರ್ಮ, ಭಕ್ತಿ ಮತ್ತು ಸನ್ಮಾರ್ಗದ ಸಂದೇಶವನ್ನು ಜನಮಾನಸಕ್ಕೆ ತಲುಪಿಸಿದ ಶ್ರೇಷ್ಠ ಗುರು ಅವರೇ. ಉಪನಿಷತ್ತುಗಳ ಸಾರವನ್ನು ಲೋಕಕ್ಕೆ ಪರಿಚಯಿಸಿದ ವೇದವ್ಯಾಸರು, ಮಹಾಭಾರತ, ಭಗವದ್ಗೀತೆ, ವಿಷ್ಣು ಸಹಸ್ರನಾಮ ಮುಂತಾದ ಅಮೂಲ್ಯ ಆಧ್ಯಾತ್ಮಿಕ ಸಂಪತ್ತನ್ನು ಮಾನವಕುಲಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರ ಅವರ ‘ಮಾರ ಮಿಂದನುʼ ಕಥಾ ಸಂಕಲನ ಆಯ್ಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಗಾರಿನಲ್ಲಿ ಜನಿಸಿದ ಶ್ರೀಧರ ಬಳಗಾರ ಕಳೆದ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಟೀಚರ್ ಎಜುಕೇಟೆರ್ ಆಗಿ ಪಾಠ ಮಾಡುತ್ತ ಸದ್ಯ ಕುಮಟಾದಲ್ಲಿ ನೆಲೆಸಿದ್ದಾರೆ. ‘ಅಧೋಮುಖ'(1995), ‘ಮುಖಾಂತರ’ (1998), ‘ಇಳೆ ಎಂಬ ಕನಸು’ (2003), ಒಂದು ಫೋಟೋದ ನೆಗೆಟಿವ್”(2008), ‘ಈಸಾಡತಾವ ಜೀವ'(2015), ‘ಮಾಲತಿ ಮಾತಾಡಿದಳು'(2023), ‘ಮಾರ ಮಿಂದನು'(2025), ಕಥಾ ಸಂಕಲನಗಳು. ‘ಕೇತಕಿಯ ಬನ'(2003), ‘ಆಡುಕಳ'(2014), ‘ಮೃಗಶಿರ'(2019), ‘ವಿಸರ್ಗ'(2023), ‘ಬಲಿಪಾದ'(2026), ಕಾದಂಬರಿಗಳು. ‘ರಥಬೀದಿ'(2009), ‘ಕಾಲಪಲ್ಲಟ'(2011) ಅಂಕಣ ಬರಹಗಳು. ‘ಮೊಳೆದಷ್ಟು ಹೂವು'(2019) ಲೇಖನ ಸಂಗ್ರಹ. ಕುವೆಂಪು ಭಾಷಾ ಭಾರತಿಗೆ ಪೀಟರ್ ವ್ಯಾಟ್ಸನ್ ಮತ್ತು ನಿರ್ಮಲ್ ವರ್ಮಾರವರ ಆಯ್ದ ಬರಹಗಳ ಅನುವಾದ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಸ್ವಾತಂತ್ರ್ಯೋತ್ತರ ಕನ್ನಡ ಚಿಂತನಾತ್ಮಕ ಲೇಖನಗಳ ಸಂಪಾದನೆ ಮಾಡಿ ಕೊಟ್ಟಿದ್ದಾರೆ. ಕೆಲವು ಕಥೆಗಳು ಇಂಗ್ಲಿಷ್, ತಮಿಳು, ಉರ್ದು ಭಾಷೆಗೆ ಭಾಷಾಂತರಗೊಂಡಿವೆ. ಹಾಗೂ ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಪದವಿ ಶಿಕ್ಷಣದಲ್ಲಿ ಕೌಶಲ್ಯ ಸಂಪಾದನೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಮಹತ್ವ ಕೊಡಲಾಗುತ್ತಿದ್ದು ಸಕಾರಾತ್ಮಕ ಚಿಂತನೆಯೊಂದಿಗೆ ಶಿಸ್ತುಬದ್ಧ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಭವಿಷ್ಯದ ಸತ್ಪ್ರಜೆಗಳಾಗುತ್ತಾರೆ. ದೀಪದ ಬೆಳಕು ಮನೆಯನ್ನು ಬೆಳೆಗಿದರೆ, ಜ್ಞಾನದ ಬೆಳಕು ಮನವನ್ನು ಬೆಳಗುತ್ತದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ ಬೆಳಕಿನಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಉಡುಪಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಘು ನಾಯ್ಕ್ ನುಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಎಸ್ಇಪಿ ಶಿಕ್ಷಣ ಪದ್ಧತಿ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಶಿಸ್ತು ಮತ್ತು ಸಮಯಪಾಲನೆಯೊಂದಿಗೆ ಶಿಕ್ಷಣ ಪಡೆದು, ಕಾಲೇಜಿನ ನಿಯಮಗಳನ್ನು ಪಾಲಿಸಿ ಇಲ್ಲಿನ ಮೂಲಭೂತ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಸಿಂಚನಾ ಮತ್ತು ತಂಡದವರು ಪ್ರಾರ್ಥಿಸಿದರು. ಇತ್ತೀಚಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಕೂರು ಎಂಬಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ತಲೆಯ ಮೇಲೆ ಹಾಕಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಕುಂದಾಪುರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಆದೇಶ ನೀಡಿದ್ದಾರೆ. ರಾಜು ಶಿಕ್ಷೆಗೆ ಗುರಿಯಾದ ಆರೋಪಿ. 2023ರ ಮೇ.14ರಂದು ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ನಾಗರಾಜ ಆಚಾರಿ ಗಾರೆ ಕೆಲಸಕ್ಕಾಗಿ ಸಂಗೋದಪ್ಪ ಯಾನೆ ಸಂಗಮೇಶ ಎಂಬ ಮೇಸ್ತ್ರಿಯ ಮೂಲಕ ರಾಜು ಅವರನ್ನು ಕರೆದುಕೊಂಡು ಹೋಗಿದ್ದರು. ರಾತ್ರಿ 9:15 ಗಂಟೆಗೆ ಸಂಗೊದೆಪ್ಪ ಹಾಗೂ ರಾಜು ಸಂಬಳದ ವಿಚಾರ ವಾಗಿ ಗಲಾಟೆ ಮಾಡಿ ಹೊಡೆದಾಡಿಕೊಂಡಿದ್ದು, ಅದರಲ್ಲಿ ರಾಜು ಎಂಬಾತನು ಪಂಚಾಂಗದ ಬಳಿಯಲ್ಲೇ ಇದ್ದ ಕೆಂಪು ಕಲ್ಲನ್ನು ಎತ್ತಿ ಸಂಗೋದಪ್ಪ ಅವರ ತಲೆಯ ಮೇಲೆ ಹಾಕಿ ಕೊಲೆ ಮಾಡಿರುವುದಾಗಿ ದೂರಲಾಗಿತ್ತು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೋಣಿಯ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಜರುಗಿದ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ 17ರ ವಯೋಮಾನದ ಬಾಲಕಿಯರ ವಿಭಾಗದ ಟ್ರೆಡಿಷನಲ್ ಹಾಗೂ ಆರ್ಟಿಸ್ಟಿಕ್ (ಸಿಂಗಲ್ )ಯೋಗಾಸನ ಸ್ಪರ್ಧೆಗಳೆರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಈಕೆ ಅರುಣ ಮಧ್ಯಸ್ಥ ಹಾಗೂ ಲತಾ ಮಧ್ಯಸ್ಥ ದಂಪತಿಯ ಪುತ್ರಿ. ಅಂತೆಯೇ, 14ರ ವಯೋಮಾನದೊಳಗಿನ ಬಾಲಕರ ವಿಭಾಗದ ಟ್ರೆಡಿಷನಲ್ ಯೋಗಾಸನ ಸ್ಪರ್ಧೆಯಲ್ಲಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿಲಾಸ್ ಡಿ. ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಶಾಂತ್ ಮಡಿವಾಳ್, ಚಂದ್ರಶೇಖರ ಮಾರ್ಗದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನಾಧಾರಿತ ಬೆಳೆ ವಿಮೆ (WBCIS) ಯೋಜನೆಯ ಪ್ರೀಮಿಯಂ ಪಾವತಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕವನ್ನು ತಕ್ಷಣ ವಿಸ್ತರಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಜುಲೈ ಅಂತ್ಯದ ವೇಳೆಗೆ ಸಾಮಾನ್ಯವಾಗಿ 249 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 165 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ದಾಖಲಾಗಿದೆ. ಮಳೆಯ ಅಭಾವದಿಂದ ಬಿತ್ತನೆ ಕಾರ್ಯ ವಿಳಂಬವಾಗಿದ್ದು, ಅನೇಕ ಕಡೆಗಳಲ್ಲಿ ಬೆಳೆಗಳು ಸಮರ್ಪಕವಾಗಿ ಬೆಳೆಯದೇ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಶೇ.44 ರಷ್ಟು ಮಳೆ ಕೊರತೆ ದಾಖಲಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. 2026–27ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳು ಮೆಣಸು, ಶುಂಠಿ ಹಾಗೂ ಮಾವು ಬೆಳೆಗಳಿಗೆ ವಿಮೆ ಮಾಡಿಸಲು…
