Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ ನೀಡಲಾಗುತ್ತಿರುವ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿಯು ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಗೋವಿಂದ ಬಿಲ್ಲವ ಕೆ. ಇವರಿಗೆ ದೊರೆತಿದೆ. ಕ್ರೀಯಾಶೀಲ ಶಿಕ್ಷಕರಾಗಿರುವ ಗೋವಿಂದ ಬಿಲ್ಲವ ಅವರು ೧೯೮೨ರಲ್ಲಿ ಶಿಕ್ಷಕರಾಗಿ ನೇಮಕಗೊಂಡು ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಂತರ ಪ್ರೌಢಶಾಲೆ ಶಿಕ್ಷಕರಾಗಿ ಬಡ್ತಿಹೊಂದಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಇವರು ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರಿಗೆ ವಿವಿಧ ತರಬೇತಿಗಳನ್ನು ನೀಡಿದ್ದಾರೆ. ಮುಖ್ಯೋಪಾಧ್ಯಾಯರಾಗಿಯೂ ಶಾಲಾಡಳಿತದ ಅನುಭವ ಹೊಂದಿದ್ದು, ಪ್ರಸ್ತುತ ಕಿರಿಮಂಜೇಶ್ವರ ಶಾಲೆಯಲ್ಲಿ ಒಂಭತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ೩೫ ವರ್ಷ ಸೇವಾ ಅನುಭವ ಹೊಂದಿದ ಇವರು ಇಲಾಖೆ ನೀಡುತ್ತಿರುವ ತರಬೇತಿಗಳನ್ನು ಪಡೆದು ಅದನ್ನು ತರಗತಿಯಲ್ಲಿ ಬೋಧನಾ ಕಲಿಕಾ ಪ್ರಕ್ರೀಯೇಯಲ್ಲಿ ಅಳವಡಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿಯೂ ಕ್ರೀಯಾಶೀಲರಾಗಿರುವ ಇವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೈಂದೂರು ಮಂಡಲ ಯುವಮೋರ್ಚಾ ನೇತೃತ್ವದಲ್ಲಿ ನಂದನವನ ಮಹಾಬಲೇಶ್ವರ ದೇವಸ್ಥಾನದ ಪರಿಸರದ ಸ್ವಚ್ಚತಾ ಕಾರ್ಯ ಜರುಗಿತು. ಈ ಸಂದರ್ಭ ಯುವಮೋರ್ಚ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ಶೆಟ್ಟಿ, ಖಂಬದಕೋಣೆ ಪ್ರಖಂಡ ಯುವಮೋರ್ಚ ಅಧ್ಯಕ್ಷ ರಾಘವೇಂದ್ರ ಖಂಬದಕೋಣೆ, ಪ್ರಧಾನ ಕಾರ್ಯದರ್ಶಿ ರಮೇಶ, ಗೋವಿಂದ, ಕ್ಷೇತ್ರ ಯುವಮೋರ್ಚ ಕಾರ್ಯಕಾರಿಣಿ ಸದಸ್ಯ ನಾಗರಾಜ ಪೂಜಾರಿ ಕೆರ್ಗಾಲು, ಕರಣದಾಸ ಹಾಗೂ ಇತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಮೋಘ ಆರ್ ಎಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಪ್ರತಿಭಾವಂತ ವಿದ್ಯಾರ್ಥಿಯಾದ ಅಮೋಘ್ ಮೂಡನಗದ್ದೆ ಶಾಂತಾ ಮತ್ತು ರಾಘವೇಂದ್ರ ಗಾಣಿಗ ದಂಪತಿಗಳ ಪುತ್ರನಾಗಿರುತ್ತಾನೆ. ಆಯ್ಕೆಯಾದ ವಿದ್ಯಾರ್ಥಿಗೆ, ನಿರ್ದೇಶನ ನೀಡಿದ ಶಿಕ್ಷಕ ಶ್ರೀಧರ್ ಪಿ., ಮತ್ತು ಶಾಲೆಯ ಎಲ್ಲಾ ಶಿಕ್ಷಕ ವೃಂದಕ್ಕೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪ್ರಭಾಕರ್, ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಗಾಣಿಗ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೆಂಕಟ್ರಮಣ ದೇವಾಡಿಗ ಅಭಿನಂದಿಸಿದ್ದಾರೆ.

Read More

ಸೋಮಶೇಖರ್ ಪಡುಕೆರೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಕುಂದಾಪುರ ತಾಲೂಕಿನ ವಿಶ್ವನಾಥ್‌ ಭಾಸ್ಕರ ಗಾಣಿಗ, ದಕ್ಷಿಣ ಆಫ್ರಿಕಾದ ಪೊಷೆಫ್‌ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಮೂರು ಚಿನ್ನ ಹಾಗೂ 1 ಬೆಳ್ಳಿ ಪದಕ ಗೆದ್ದಿದ್ದಾರೆ. 83 ಕೆಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ವಿಶ್ವನಾಥ್‌, ಸ್ಕ್ವಾಟ್‌, ಡೆಡ್‌ಲಿಫ್ಟ್‌ ಹಾಗೂ ಸಮಗ್ರ ವಿಭಾಗದಲ್ಲಿ ಚಿನ್ನ ಗೆದ್ದರೆ, ಬೆಂಚ್‌ಪ್ರೆಸ್‌ನಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ಕೊಯಮತ್ತೂರಿನಲ್ಲಿ ನಡೆದ ಏಷ್ಯನ್‌ ಪವರ್‌ಲಿಫ್ಟಿಂಗ್‌ನಲ್ಲಿ ಪದಕ ಗೆಲ್ಲುವ ಮೂಲಕ ವಿಶ್ವನಾಥ್‌ ಮೊದಲ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದರು. ರಾಜ್ಯ, ವಿಶ್ವವಿದ್ಯಾಲಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ದಾಖಲೆಗಳನ್ನು ಬರೆದು ದೇಶದ ಬಲಿಷ್ಠ ಪುರುಷ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರತಿಕೂಲ ಹವಾಮಾನ: ಪೊಷೆಫ್‌ಸ್ಟ್ರೂಮ್‌ನಿಂದ ಮಾತನಾಡಿದ ವಿಶ್ವನಾಥ್‌, ”ಇಲ್ಲಿನ ಹವಾಮಾನಕ್ಕೆ ಹೊಂದಿಕೊಳ್ಳಲು ಕಷ್ಟವಾಯಿತು. ಇದರಿಂದಾಗಿ ಬೆಂಚ್‌ಪ್ರೆಸ್‌ನಲ್ಲಿ ಎತ್ತಿದ ಭಾರ ಕಡಿಮೆಯಾಯಿತು. ಸ್ಕ್ವಾಟ್‌ನಲ್ಲಿ 270 ಕೆಜಿ, ಬೆಂಚ್‌ಪ್ರೆಸ್‌ನಲ್ಲಿ 155…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಸೇರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ. ಆದರೆ ಈವರೆಗೆ ’ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಿಲ್ಲ. ಸೂಕ್ತ ಸಮಯದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ. ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ. ’ತಾನು ಬಿಜೆಪಿ ಬೆಂಬಲಿಸುತ್ತೇನೆ ಎಂದು ತಿಳಿದಿದ್ದರೂ ಸಿದ್ದರಾಮಯ್ಯ ಅವರು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ’ ’ಬಿಜೆಪಿ ಅಥವಾ ಕಾಂಗ್ರೆಸ್ ಯಾವ ಪಕ್ಷ ಸೇರಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಕುಂದಾಪುರದ ವಾಜಪೇಯಿ ಎಂದೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಸಿದ್ಧಿ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದರೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಿವಷ್ಟು ಜನ ಬೆಂಬಲ ಹಾಲಾಡಿ ಅವರಿಗಿದೆ. ಆದ್ದರಿಂದ, ಅವರನ್ನು ಪಕ್ಷಕ್ಕೆ ಸೆಳೆಯಲು ಎರಡೂ ಪಕ್ಷಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಹಿತ್ಯದ ರಚನೆ ಸ್ವಹಿತಾಸಕ್ತಿಯಿಂದ ಕೂಡಿರದೆ, ಅದರಿಂದ ಸಮಾಜ ಸುಧಾರಣೆ ಹಾಗೂ ವ್ಯಕ್ತಿತ್ವ ವಿಕಸನವಾಗಬೇಕೆಂಬ ತುಡಿತ ಪ್ರತಿಯೊಬ್ಬ ಶ್ರೇಷ್ಠ ಸಾಹಿತಿಯದ್ದಾಗಿರುತ್ತದೆ. ಮೌಲ್ಯಾಧಾರಿತ ಬರಹಗಳು ಜಾತಿ, ಧರ್ಮದ ಎಲ್ಲೆ ಮೀರಿ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರುತ್ತವೆ. ಸಾಮಾಜಿಕ ಕಳಕಳಿಯಿಂದ ಕೂಡಿದ ಸಾಹಿತ್ಯ ರಚಿಸಿದ ಮೊಗೇರಿ ಗೋಪಾಲಕೃಷ್ಣ ಅಡಿಗರ ದೂರದೃಷ್ಟಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬೈಂದೂರು ಇವರ ಸಹಯೋಗದಲ್ಲಿ ನಡೆದ ಪ್ರೋ. ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮ ಶತಾಬ್ದ ಸರಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಧುನಿಕತೆಯ ಮೋಡಿಯಲ್ಲಿ ಇಂದು ಯುವಜನಾಂಗ ಕಲೆ, ಸಾಹಿತ್ಯ, ಸಂಗೀತ ಮೊದಲಾದುವುಗಳಿಂದ ದೂರವಾಗುತ್ತಿದೆ. ಸ್ಪಷ್ಟವಾದ ಗುರಿಯಾಗಲೀ, ಪರಿಪೂರ್ಣವಾದ ಜ್ಞಾನಪ್ರಾಪ್ತಿ ಕಡೆಗಾಗಲೀ ಯೋಚಿಸದೆ ಕೇವಲ ಪದವಿ ಪಡೆಯುವ ವ್ಯಾಮೋಹ ಹೆಚ್ಚುತ್ತಿದೆ. ಬದುಕಿನಲ್ಲಿ ಹೋರಾಟದ ಮನೋಭಾವನೆ ಬೆಳೆಸಿಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಪರಿವಾರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ್ದು, ಪೂರ್ವನುಮತಿಯಿಲ್ಲದೇ ಪ್ರತಿಭಟನೆಗೆ ಮಾಡುತ್ತಿದ್ದಾರೆಂಬ ಕಾರಣವೊಡ್ಡಿ ಪ್ರತಿಭಟನೆಗೆ ಮುಂದಾದ ಮುಖಂಡರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದ ಘಟನೆ ನಡೆಯಿತು. [quote bgcolor=”#ffffff” arrow=”yes” align=”right”]ಪ್ರಕರಣದ ಹಿನ್ನೆಲೆ ಏನು? ಉಡುಪಿಯ ಕಾಲೇಜೊಂದರಲ್ಲಿ ಓದುತ್ತಿರುವ ಕಾಪು ಮೂಲದ ಅನ್ಯಕೋಮಿನ ಮೂವರು ಯುವತಿಯರು ಹಾಗೂ ಇಬ್ಬರು ಯುವಕರು ಕಾರಿನಲ್ಲಿ ಬೈಂದೂರಿಗೆ ತೆರಳಿ ಅಲ್ಲಿಂದ ಮರವಂತೆಗೆ ಬಂದಿದ್ದರು. ಮರವಂತೆ ಬೀಚ್ ಬಳಿ ವಿದ್ಯಾರ್ಥಿಗಳ ವರ್ತನೆಯನ್ನು ಗಮನಿಸುತ್ತಿದ್ದ ಸಂಘಟನೆ ಕಾರ‍್ಯಕರ್ತರು, ಅವರು ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಹಿಂಬಾಲಿಸಿ ಕೋಟೇಶ್ವರ ಸಂಘಟನೆಗೆ ಮಾಹಿತಿ ನೀಡಿದ್ದರು. ಕೋಟೇಶ್ವರದಲ್ಲಿ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ವಿಚಾರಣೆ ಬಳಿಕ ವಿದ್ಯಾರ್ಥಿಗಳ ತಪ್ಪಿಲ್ಲ ಎಂದು ಪೊಲೀಸರು ತಿಳಿಸಿದಾಗ, ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೈಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿ ಅವಿನಾಶ್ ಆಚಾರ್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಪ್ರತಿಷ್ಠಿತ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ (ನ್ಯಾಕ್)ಯಿಂದ 4 ಅಂಕದಲ್ಲಿ 3.32 ಅಂಕದೊಂದಿಗೆ ‘ಎ’ ಶ್ರೇಣಿ ದೊರೆತಿದ್ದು ಕಾಲೇಜಿನ ಕೀರ್ತಿ ಮುಕುಟಕ್ಕೊಂದು ಗರಿ ಸೇರಿದಂತಾಗಿದೆ. ಈ ಬಗ್ಗೆ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ ಮಾತನಾಡಿ, ಕಾಲೇಜಿನ ಸಮಗ್ರ ಗುಣಮಟ್ಟವನ್ನು ಪರಿಶೀಲಿಸಿ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ ’ಎ’ ಶ್ರೇಣಿಯ ಮಾನ್ಯತೆ ನೀಡಿದೆ. ಇದರೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸ್ವಾಯತ್ತ ಕಾಲೇಜುಗಳನ್ನು ಹೊರತುಪಡಿಸಿದರೆ, ಭಂಡಾರ್ಕಾರ್ಸ್ ಅತ್ಯುತ್ತಮ ಗುಣಮಟ್ಟ ಹೊಂದಿರುವ ಕಾಲೇಜು ಎಂಬ ಕೀರ್ತಿಯನ್ನು ಗಳಿಸಿಕೊಂಡಿದೆ ಎಂದು ತಿಳಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಸಮಗ್ರ ಶೈಕ್ಷಣಿಕ ಗುಣಮಟ್ಟ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಪರಿಗಣಿಸಿ ನ್ಯಾಕ್ ಸಮಿತಿ ಅಂಕಗಳನ್ನು ನೀಡುತ್ತದೆ. ಕಳೆದ ಆರು ವರ್ಷಗಳ ಹಿಂದೆ ಕಾಲೇಜಿಗೆ ‘ಎ’ ಗ್ರೇಡ್‌ನೊಂದಿಗೆ 3.24 ಅಂಕಗಳೊಂದಿಗೆ ನ್ಯಾಕ್ ಮಾನ್ಯತೆ ದೊರತಿತ್ತು. ಈ ಭಾರಿ ಮರುಮೌಲ್ಯಮಾಪನದಲ್ಲಿ ನ್ಯಾಕ್‌ನಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ರಟ್ಟಾಡಿಯ ಸಂಪತ್ ಕುಮಾರ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿರುವ ಸಂಪತ್ ಕುಮಾರ್ ಶೆಟ್ಟಿ ಅವರನ್ನು ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಚೇತನ್ ಚಾಮನ್ ಅವರು ಆಯ್ಕೆ ಮಾಡಿದ್ದಾರೆ.

Read More