Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ದಂಡಾಧಿಕಾರಿಗಳ ಅಧಿಸೂಚನೆಯನ್ವಯ ಉಡುಪಿ ಹಾಗೂ ಕುಂದಾಪುರ ತಾಲೂಕು ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಕಲರ್ ಕೋಡಿಂಗ್ (ವಲಯವಾರು) ನೀಡಲಾಗುತ್ತಿದ್ದು, ಈ ಬಗ್ಗೆ ಆಟೋರಿಕ್ಷಾ ಮಾಲಕರು ಪರವಾನಿಗೆ ಮತ್ತು ವಾಹನದ ಮೂಲ ದಾಖಲೆಗಳನ್ನು ಹಾಜರುಪಡಿಸಿ, ವಲಯವಾರು ಸ್ಟಿಕ್ಕರ್‌ನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಸಾರಿಗೆ ಸೌಧ, ಮಣಿಪಾಲ ಇಲ್ಲಿ ಕಚೇರಿಯ ಸಮಯದಲ್ಲಿ ಪಡೆಯುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ 30 ರ ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆದರೆ ನಿಗದಿತ ಸಮಯದಲ್ಲಿ ಕಾಮಗಾರಿ ದುರಸ್ತಿ ಆಗದ ಕಾರಣ ಹಾಗೂ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ವಾಹನ ಸಂಚಾರ ನಿಷೇಧ ಆದೇಶವನ್ನು ಮೇ 15 ರ ವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ. ಈ ಅವಧಿಯಲ್ಲಿ ಸಾಮಾನ್ಯ ಬಸ್ಸ್‌ಗಳು, ಜೀಪು, ವ್ಯಾನ್, ಎಲ್.ಸಿ.ವಿ(ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ ಮಾರ್ಗವಾಗಿ ಹಾಗೂ ರಾಜಹಂಸ, ಐರಾವತ ಬಸ್ಸ್‌ಗಳು, ಖಾಸಗಿ ಲಕ್ಸುರಿ ಬಸ್‌ಗಳು, ಬುಲೆಟ್ ಟ್ಯಾಂಕರ‍್ಸ್, ಷಿಪ್ ಕಾರ್ಗೋ ಕಂಟೈನರ‍್ಸ್, ಲಾಂಗ್ ಚಾಸೀಸ್ ವಾಹನಗಳು ಉಡುಪಿ-ಕುಂದಾಪುರ-ಸಿದ್ಧಾಪುರ-ಹೊಸಗಂಡಿ- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮೂಲಕ ಸಂಚರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019-20 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಗೊಳಪಟ್ಟ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇಲಾಖಾ ವತಿಯಿಂದ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಯಲ್ಲಿ 6 ನೇ ತರಗತಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲು ಸರ್ಕಾರವು ಅವಕಾಶ ಕಲ್ಪಿಸಿದೆ. 5 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು 6 ನೇ ತರಗತಿಗೆ ಒಟ್ಟು 25 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಮೇ 2 ರಿಂದ ಪಡೆದು ಭರ್ತಿ ಮಾಡಿ ಅರ್ಹ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮೇ 13 ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2574814 ಅನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಿಐಟಿಯು ಹಾಗೂ ವಿವಿಧ ಸಂಘಟನೆ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಪುರಮೆರವಣಿಗೆ ಹಾಗೂ ಬಹಿರಂಗ ಸಮಾವೇಶ ಜರುಗಿತು. ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್ ಮಾತನಾಡಿ ಸಾಮ್ರಾಜ್ಯಶಾಹಿ, ಬಂಡವಾಳಶಾಹಿ ಧೋರಣೆಯಿಂದ ಕಾರ್ಮಿಕರ ಶೋಷಣೆ ಇಂದಿಗೂ ನಿಂತಿಲ್ಲ. ಸಾಮಾಜ್ಯಶಾಹಿ, ಬಂಡವಾಳಶಾಹಿ ನಡುವೆ ಸಿಲುಕಿದ ಕಾರ್ಮಿಕ ಇನ್ನೂ ಕಷ್ಟ ಕೂಲಿ ಪಡೆಯಲಾಗಿಲ್ಲ ಎಂದರೆ ಅದಕ್ಕಿಂತ ದೊಡ್ಡ ದೌರ್ಭಾಗ್ಯ ಮತ್ತೊಂದಿಲ್ಲ. ಇದರೊಟ್ಟಿಗೆ ನೌಕರಶಾಹಿ ಆಡಳಿತ ಕಾರ್ಮಿಕ ವಲಯಕ್ಕೆ ದೊಡ್ಡ ಅಪಾಯ ತರಲಿದೆ ಎಂದ ಅವರು ಕಾರ್ಮಿಕ ಸಂಘಟನೆಗಳು ಕನಿಷ್ಟ ಕೂಲಿ ಸೌಲಭ್ಯಗಳ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಕಾರ್ಮಿಕರ ಸಂಘಟನೆಗಳಲ್ಲಿ ಹೆಚ್ಚು ಹೆಚ್ಚು ಕಾರ್ಮಿಕರು ತೊಗಸಿಕೊಳ್ಳುವ ಮೂಲಕ ಕಾರ್ಮಿಕ ವಲಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು. ಸಿಐಟಿಯು ತಾಲೂಕು ಅಧ್ಯಕ್ಷ ಹೆಚ್.ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭೆ ಮಾಜಿ ಅಧ್ಯಕ್ಷ ವಿ.ನರಸಿಂಹ, ಕಟ್ಟಡ ಕಾರ್ಮಿಕ ಸಂಘಟನೆ ಅಧ್ಯಕ್ಷ ಯು.ದಾಸ ಭಂಡಾರಿ, ಬೀಡಿ ಕಾರ್ಮಿಕ ಸಂಘಟನೆ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳ ರಂಗ ತರಬೇತಿಯನ್ನು ಆಯೋಜಿಸುವ ಮೂಲಕ ಲಾವಣ್ಯವೇ ಹುಟ್ಟುಹಾಕಿದ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ದಾಟಿಸುವ ಕೆಲಸವನ್ನು ಹಲವು ವರ್ಷದಿಂದ ಯಶಸ್ವಿಯಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಮಂಗಳವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಲಾವಣ್ಯ ರಿ. ಬೈಂದೂರು ಸಂಸ್ಥೆಯ ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ಸಿದ್ಧಗೊಂಡ ಗುಬ್ಬಿ ಹಾಡು ಹಾಗೂ ತಾಯಿಯ ಕಣ್ಣು ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಲಾವಣ್ಯದ ನಿರ್ದೇಶಕರಾದ ಶ್ರೀನಿವಾಸ ಪ್ರಭು ಉಪ್ಪುಂದ ಉಪಸ್ಥಿತರಿದ್ದರು. ಈ ಸಂದರ್ಭ ಗುಬ್ಬಿ ಹಾಡು ನಾಟಕದ ನಿರ್ದೇಶಕ ನಾಗೇಂದ್ರ ಬಂಕೇಶ್ವರ ಹಾಗೂ ತಾಯಿಯ ಕಣ್ಣು ನಾಟಕದ ನಿರ್ದೇಶಕ ರೋಶನ್ ಕುಮಾರ್ ಅವರನ್ನು ಗೌರವಿಸಲಾಯಿತು. ಇತ್ತಿಚೆಗೆ ವಿವಾಹವಾದ ಲಾವಣ್ಯ ಕಲಾವಿದೆ ಚೈತ್ರಾ ಹಾಗೂ ಸತೀಶ್ ದಂಪತಿಗಳನ್ನು ಅಭಿನಂದಿಸಲಾಯಿತು. ಲಾವಣ್ಯ ರಿ. ಬೈಂದೂರು ಅಧ್ಯಕ್ಷ ಎಚ್. ಉದಯ ಆಚಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮೂರ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಸಂಜನಾ ಉಡುಪ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 620 ಅಂಕ ಪಡೆದ ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಳಾಗಿದ್ದಾಳೆ. ಈಕೆ ಕೋಟ ವಿವೇಕ ಕಾಲೇಜು ಪ್ರಾಂಶುಪಾಲರಾದ ಜಗದೀಶ್ ನಾವಡ ಹಾಗೂ ಸುವರ್ಣ ದಂಪತಿಗಳ ಪುತ್ರಿಯಾಗಿದ್ದು ಪಿಯುಸಿಯಲ್ಲಿ ಸೈನ್ಸ್ ವ್ಯಾಸಂಗ ಮಾಡಿ ಮುಂದೆ ವೈದ್ಯಕೀಯ ಪದವಿ ಪಡೆಯುವ ಹಂಬಲದಲ್ಲಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಅನಘ ಉಡುಪ 625ರಲ್ಲಿ 623 ಅಂಕ ಪಡೆದು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಈಕೆ ಕೋಟ ಮಣೂರು ವಿನಯಾ ನಾಗೇಶ್ ಉಡುಪ ದಂಪತಿಗಳ ಪುತ್ರಿಯಾಗಿದ್ದು, ಮುಂದೆ ಏರೋಸ್ಪೆಸ್ ಇಂಜಿನಿಯರ್ ಆಗುವ ಬಯಕೆ ಹೊಂದಿದ್ದಾಳೆ. .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ತುತಿ ತೋಳಾರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಳಾಗಿದ್ದಾಳೆ. ಈಕೆ ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ನಿವಾಸಿ ಸುರೇಶ್ ತೋಳಾರ್ ಹಾಗೂ ಜ್ಯೋತಿ ಎಸ್. ತೋಳಾರ್ ದಂಪತಿಗಳ ಪುತ್ರಿಯಾಗಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 29ರಿಂದ ನಾಲ್ಕು ದಿನ ನಡೆಯಲಿರುವ ಬೈಂದೂರು ತಾಲ್ಲೂಕು ಉಳ್ಳೂರಿನ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನರಷ್ಟಬಂಧ ಪ್ರತಿಷ್ಠೆ, ಬ್ರಹ್ಮಕಲಶೋತ್ಸವಕ್ಕೆ ಎಲ್ಲ ಸಿದ್ಧತೆಗಳು ಮುಗಿದಿದ್ದು, ಸೋಮವಾರ ಆರಂಭಿಕ ವಿಧಿಗಳನ್ನು ನಡೆಸಲಾಗಿದೆ. 1ರಂದು ಪುನರಷ್ಟಬಂಧ, 2ರಂದು ಬ್ರಹ್ಮಕಲಶೋತ್ಸವ ನಡೆಯುವುದು ಎಂದು ದೇವಸ್ಥಾನದ ಆಡಳಿತ ಧರ್ಮದರ್ಶಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ದೇವಾಲಯ ಇರುವ ಸ್ಥಳವನ್ನು ಮುನಿಕಟ್ಟೆ ಎಂದು ಕರೆಯಲಾಗುತ್ತಿತ್ತು. ಮುನಿ ತಪಸ್ಸು ಆಚರಿಸಿ, ದುರ್ಗಾಪರಮೇಶ್ವರಿಯನ್ನು ಒಲಿಸಿಕೊಂಡು ಅವಳು ಇಲ್ಲಿ ನೆಲೆ ನಿಲ್ಲುವಂತೆ ಮಾಡಿದರು ಎಂಬ ಹಿನ್ನೆಲೆಯ ಈ ಕ್ಷೇತ್ರವನ್ನು ಪರಿಸರದ ಜನರು ನೂರಾರು ವರ್ಷಗಳಿಂದ ಆರಾಧಿಸಿಕೊಂಡು ಬಂದಿರುವರು. ಕೆಂಪು ಕಲ್ಲಿನ ಗುಹೆಯಂತಹ ಈ ಶ್ರದ್ಧಾಕೇಂದ್ರವನ್ನು ವೈ. ಚಂದ್ರಶೇಖರ ಶೆಟ್ಟಿ ಅವರ ನೇತೃತ್ವದಲ್ಲಿ ೧೨ ವರ್ಷಗಳ ಹಿಂದೆ ಶಿಲಾಮಯ ದೇಗುಲವಾಗಿ ರೂಪಿಸಲಾಯಿತು. ಆ ಹಿನ್ನೆಲೆಯಲ್ಲಿ ಈಗ ಪುನರಷ್ಟಬಂಧ, ಬ್ರಹ್ಮಕಲಶೋತ್ಸವದ ಜತೆಗೆ ಶ್ರೀ ಗಣಪತಿ, ಶಾಸ್ತಾ, ನಾಗದೇವರ ಪ್ರತಿಷ್ಠೆ, ಸುತ್ತು ಪೌಳಿ,…

Read More