ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಸರಕಾರ ಹಾಗೂ ಮಾಧ್ಯಮಗಳು ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಇಂದಿನ ಜನಾಂಗಕ್ಕೆ ತಲುಪಿಸಲು ವಿಫಲವಾಗುತ್ತಿವೆ. ಇನ್ನು ನಾಲ್ಕೈದು ವರ್ಷಗಳಲ್ಲಿ ಹೊಸ ತಲೆಮಾರಿಗೆ ನಮ್ಮ ಸ್ವಾತಂತ್ರ್ಯ ಹೋರಾಟದ ಕಥನಗಳನ್ನು ತಲುಪಿಸಬಲ್ಲವರು ಇಲ್ಲವಾದ ಬಳಿಕ, ಸ್ವಾತಂತ್ರ್ಯ ಹೋರಾಟ ಹಾಗೂ ಹೋರಾಟಗಾರರೊಂದಿಗಿನ ದೇಶದ ಕೊನೆಯ ಕೊಂಡಿಯೂ ಕಳೆದು ಹೋಗಲಿದೆ. ಈಗಾಗಲೇ ದೇಶದ ಸ್ವಾತಂತ್ರ್ಯ ಹೋರಾಟದ ಭವ್ಯ ಇತಿಹಾಸದ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲದ ಯುವಜನಾಂಗವೊಂದು ನಮ್ಮ ಮುಂದಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಪಾಲಗುಮ್ಮಿ ಸಾಯಿನಾಥ್ ಕಳವಳ ವ್ಯಕ್ತಪಡಿಸಿದರು. ಉಡುಪಿ ಪುರಭವನದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ತಲ್ಲೂರ್ಸ್ ಇನ್ಫೊವ್ಯಾಲಿಡೇಷನ್ಸ್ನ ದಶಮಾನೋತ್ಸವದ ಅಂಗವಾಗಿ ನಡೆದ ತಲ್ಲೂರು ನುಡಿಮಾಲೆ ‘ಕರಾವಳಿ ಕಟ್ಟು’ ದತ್ತಿ ಉಪನ್ಯಾಸ ಮಾಲೆಯಲ್ಲಿ ‘ಡಿಜಿಟಲ್ ಯುಗದಲ್ಲಿ ಗ್ರಾಮೀಣ ಭಾರತ ಕಥನ’ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡುತ್ತಾ “ದೇಶದ ಗ್ರಾಮೀಣ ಭಾಗದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ನೂರಾರು ಕಥೆಗಳನ್ನು, ಇತಿಹಾಸವನ್ನು ನಾವಿಂದು ಓದುವುದಿಲ್ಲ. ಭಾರತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು: ಸಂಘಟನೆಯಿಂದ ಸಂಸ್ಕಾರ ವೃದ್ಧಿಸುತ್ತದೆ. ನಿಸ್ವಾರ್ಥ ಸೇವೆಯಿಂದ ದೇವರು ಹತ್ತಿರನಾಗುತ್ತಾನೆ ಮೊದಲು ನಾವು ಬದಲಾದರೆ ನಮ್ಮ ಮಕ್ಕಳು ಕೂಡಾ ನಮ್ಮನ್ನು ಅನುಸರಿಸುತ್ತಾರೆ. ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡುವಲ್ಲಿ ನಾವು ಎಡವಿದ್ದೇವೆ. ಎಂದು ಜಿಎಸ್ಬಿ ಹಿತರಕ್ಷಣಾ ವೇದಿಕೆ ಸಂಚಾಲಕ ವಿವೇಕಾನಂದ ಶೆಣೈ ಹೇಳಿದರು. ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆದ ಕೊಲ್ಲೂರು ವಲಯ ಜಿಎಸ್ಬಿ. ಸೇವಾ ಸಮಿತಿಯ ನಾಲ್ಕನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ಧಾರ್ಮಿಕ ಆಚರಣೆ ಧೃಡವಾಗಿರಬೇಕು. ಮಕ್ಕಳಿಗೆ ದೇವರು, ಧರ್ಮ, ಗುರು-ಹಿರಿಯರ ಬಗ್ಗೆ ಮನವರಿಕೆ ಮಾಡಬೇಕು ಎಂದರು. ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟನೆ ಅತೀ ಮುಖ್ಯವಾಗಿದ್ದು, ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಆಚರಣೆ, ಅನುಭವ, ಸಮೂಹ ಜೀವನ ಹಾಗೂ ಸಂಸ್ಕಾರ ನಮ್ಮ ಸಮಾಜದ ಬೆಳವಣಿಗೆಗೆ ಸಹಕಾರಿಯಾಗಿದೆ. ಪ್ರತೀ ಮನೆಗಳಲ್ಲಿಯೂ ಸಂಧ್ಯಾಕಾಲದ ಭಜನೆ ಮಾಡಬೇಕು. ಮಕ್ಕಳಿಗೆ ವ್ಯವಹಾರಿಕಾ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದ ಕುರಿತಾದ ಅರಿವು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದುಳಿದ ವರ್ಗಕ್ಕೆ ಸಾಮಾಜಿಕ ನ್ಯಾಯ ನೀಡಿದ ಧೀಮಂತ ನಾಯಕ ಡಿ. ದೇವರಾಜ ಅರಸು ಅವರ ಆಶಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ನಡೆಯುತ್ತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ, ಶೈಕ್ಷಣಿಕ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಬಣ್ಣಿಸಿದರು. ಕುಂದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ದಿ.ದೇವರಾಜು ಅರಸು ೧೦೨ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡುತ್ತಿದ್ದರು. ಅರಸು ದೊಡ್ಡ ಕುಟುಂಬದಲ್ಲಿ ಹುಟ್ಟಿದರೂ ಕೃಷಿಕರಾಗಿ ಭೂಸುಧಾರಣೆ ಮೂಲಕ ಕ್ರಾಂತಿಕಾರಿ ಬದಲವಾಣೆ, ಜತೆ ಹಾವನೂರು ವರದಿ ಜಾರಿಗೆ ತರುವ ಮೂಲಕ ಹಿಂದುಳಿದವರಿಗೆ ಆತ್ಮಸ್ಥೈರ್ಯ ತುಂಬಿ, ಹಲವಾರು ಹಿಂದುಳಿದ ವರ್ಗದ ನಾಯಕರ ಹುಟ್ಟಿಹಾಕಿದರು ಎಂದು ಹೇಳಿದರು. ಮೀಸಲಾತಿಗೆ ಹೆಚ್ಚು ಒತ್ತು ನೀಡಿ, ಕೃಷಿಕರು ಮುಖ್ಯವಾಹಿನಿಗೆ ತರುವಲ್ಲಿ ಅರಸು ಪಾತ್ರ ಮಹತ್ವದ್ದು ಎಂದ ಅವರು ರಾಜ್ಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಮಂಜುನಾಥ ಪೂಜಾರಿ ಮತ್ತು ಪ್ರತಿಮಾ ದಂಪತಿಗಳ ಪುತ್ರ ನಿಶ್ಚಿತ್ (೨ವರ್ಷ) ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು ವೈದ್ಯಕೀಯ ವೆಚ್ಚಕ್ಕೆ ಸುಮಾರು ೮ ಲಕ್ಷಕ್ಕೂ ಮಿಕ್ಕಿ ಹಣದ ಅಗತ್ಯವಿದ್ದು ಬಡ ಕುಟುಂಬ ಅಸಹಾಯಕ ಸ್ಥಿತಿಯಲ್ಲಿರುವ ಪತ್ರಿಕಾ ವರದಿಯನ್ನು ಗಮನಿಸಿದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ವತಿಯಿಂದ ರೂ.೧೦,೦೦೦ ವೈದ್ಯಕೀಯ ನೆರವು ನೀಡಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ರಾಜು ಪೂಜಾರಿ ಮತ್ತು ರಘುರಾಮ ಶೆಟ್ಟಿಯವರು ಬಸ್ರೂರುವಿನಲ್ಲಿರುವ ಮಗುವಿನ ಮನೆಗೆ ತೆರಳಿ ವೈದ್ಯಕೀಯ ನೆರವಿನ ಚೆಕ್ ಮಗುವಿನ ತಾಯಿ ಪ್ರತಿಮಾ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ, ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು, ಬಿದ್ಕಲ್ಕಟ್ಟೆ, ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಭಗತ್ಸಿಂಗ್ ರೋವರ್ ಘಟಕವು ಇತ್ತೀಚೆಗೆ ಕ್ವಿಟ್ ಇಂಡಿಯಾ ಡೇ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಕಾಲೇಜಿನ ಸುತ್ತಮುತ್ತಲಿನ ಪ್ರಯಾಣಿಕರ ತಂಗುದಾಣಗಳಲ್ಲಿ ನಡೆಸಿತು. ಬಿದ್ಕಲ್ಕಟ್ಟೆ ಮುಖ್ಯ ಪೇಟೆಯ ಬಸ್ ತಂಗುದಾಣ, ಕಾಲೇಜಿನ ಮುಂಭಾಗದಲ್ಲಿರುವ ಬಸ್ ತಂಗುದಾಣ, ಹಾಗೂ ಗುಡ್ಡೆ ಅಂಗಡಿಯಲ್ಲಿನ ಬಸ್ ತಂಗುದಾಣಗಳನ್ನು ಭಗತ್ಸಿಂಗ್ ರೋವರ್ ಸದಸ್ಯರು ಸ್ವಚ್ಛತಾ ಕಾರ್ಯ ನೆರವೇರಿಸಿದರು. ಪ್ರಾಂಶುಪಾಲರಾದ ರಾಮ ಹೆಚ್.ನಾಯಕ್ ರೋವರ್ಗಳನ್ನು ಅಭಿನಂದಿಸಿದರು. ರೋವರ್ ಸ್ಕೌಟ್ ಲೀಡರ್ ಮತ್ತು ಉಪನ್ಯಾಸಕ ರವಿಚಂದ್ರ ಮಾರ್ಗದರ್ಶನ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ದೇವಸ್ಥಾನಗಳಲ್ಲಿ ನಿತ್ಯ ನಿರಂತರಾಗಿ ದೇವರ ಪೂಜೆ, ಉಪಾಸನೆಗಳು ನಡೆದುಕೊಂಡು ಬಂದರೆ ದೇವಸ್ಥಾನದಲ್ಲಿ ದೇವರ ಸಾನಿಧ್ಯ ವೃದ್ಧಿಯಾಗುತ್ತದೆ. ದೇವಳಕ್ಕೆ ಆಗಮಿಸುವ ಭಕ್ತರ ಸಕಲ ಇಷ್ಟಾರ್ಥಗಳು ಈಡೇರಿ ದೇವಸ್ಥಾನ ಅಭಿವೃದ್ಧಿಯಾಗುತ್ತದೆ. ಪ್ರತಿಯೊಂದ ಮನೆಗಳಲ್ಲಿ ದೇವರ ಭಜನೆ, ನಾಮಸ್ಮರಣೆ ಮೊದಲಾದ ಧಾರ್ಮಿಕ ಚಟುವಟಿಕೆಗಳು ನಡೆದಾಗ ಜನರಲ್ಲಿ ಧಾರ್ಮಿಕತೆ ಬೆಳೆಯುತ್ತದೆ ಎಂದು ಅಕ್ಕಲಕೋಟ ಸ್ವಾಮಿ ಸಮರ್ಥ ಆಶ್ರಮದ ಮ.ನಿ.ಪ್ರ. ಚೆನ್ನಬಸವ ಸ್ವಾಮೀಜಿ ಹೇಳಿದರು. ಅವರು ಶ್ರೀಮದ್ ವೀರಶೈವ ಶಿವಯೋಗ ಮಂದಿರ ಸಂಸ್ಥೆ ಹಾಗೂ ವೀರಶೈವ ಮಹಾಸಭೆ ಸಂಸ್ಥಾಪಕ ಶ್ರೀ.ಮೆ. ಪ್ರ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ೧೫೦ನೇ ಜನ್ಮ ಮಹೋತ್ಸವದ ನಿಮಿತ್ತ ಗುಜ್ಜಾಡಿ ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಜರಗಿದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಸಮಾಜದಲ್ಲಿ ಹಿಂದುಗಳಿದ ಪಂಗಡಗಳು ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು. ಗೋವುಗಳನ್ನು ರಕ್ಷಣೆ ಮಾಡುವ ಮತ್ತು ಗೋಹತ್ಯೆಯನ್ನು ತಡೆಯುವಲ್ಲಿ ಸಮಾಜದ ಪ್ರತಿಯೊಬ್ಬರು ಕಾರ್ಯತತ್ಪರರಾಗಬೇಕು. ಜೀವನದಲ್ಲಿ ಧಾರ್ಮಿಕ ಮನೋಭಾವ ಬೆಳೆಸಿಕೊಂಡು ಗುರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮಸ್ಥರ ಹಲವು ವರ್ಷದ ವಾರದ ಸಂತೆಯ ಕನಸು ಇಂದು ನನಸಾಗಿದೆ. ಇದಕ್ಕೆ ಸ್ಥಳೀಯ ಗ್ರಾಪಂ ಕೂಡಾ ಕೈಜೋಡಿಸಿದ್ದು, ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿಕೊಟ್ಟಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತಾಗ ಮಾತ್ರ ನಿರ್ಮಾಣದ ಸಾರ್ಥಕತೆ ಕಾಣಲು ಸಾಧ್ಯವಾಗುತ್ತದೆ ಎಂದು ತಾಲೂಕು ಪಂಚಾಯತ್ ಸದಸ್ಯ ಹೆಚ್. ವಿಜಯ್ ಶೆಟ್ಟಿ ಹೇಳಿದರು. ಕಾಲ್ತೋಡು ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಗೊಂಡ ನೂತನ ಮಾರುಕಟ್ಟೆ ಸಂಕೀರ್ಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಯುವಜನತೆ ಸಮಾಜದ ಹಾಗೂ ಊರಿನ ಅಭಿವೃದ್ಧಿಯ ಪರ ದಿಕ್ಕು ಬದಲಾಯಿಸುವ ಉದ್ದೇಶದಿಂದ ಹಾಗೂ ಪರಿಸರದಲ್ಲಿರುವವರಿಗೆ ವಾರಕ್ಕೊಮ್ಮೆ ಅಗತ್ಯವಸ್ತುಗಳು ಒಂದೇ ಕಡೆಯಲ್ಲಿ ಲಭ್ಯವಾಗಬೇಕೆಂಬ ನೆಲೆಯಲ್ಲಿ ಗ್ರಾಪಂ ವಾರದ ಸಂತೆ ಪ್ರಾರಂಭಿಸಿದೆ. ಇದು ಈ ಭಾಗದ ಜನತೆಗೆ ನೀಡಿದ ಕೊಡುಗೆಯಾಗಿದೆ ಎಂದ ಅವರು ವಾರದ (ಪ್ರತೀ ಗುರುವಾರ) ಸಂತೆಗೆ ಬರುವ ವ್ಯಾಪಾರಸ್ಥರಿಗೆ ಒಂದು ವರ್ಷದ ತನಕ ಪಂಚಾಯತ್ ಯಾವುದೇ ರೀತಿಯ ತೆರಿಗೆ, ಸುಂಕವನ್ನು ವಿಧಿಸುವುದಿಲ್ಲ. ಇದನ್ನು ಸಂಪೂರ್ಣ ಮನ್ನಾ ಮಾಡಲಾಗಿದೆ ಎಂದು ಘೋಷಿಸಿದರು. ಆದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ವತಿಯಿಂದ ತ್ರಾಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಖಾರ್ವಿ ಸಭಾ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ೧೦ ಲಕ್ಷ ರೂ.ಗಳ ಚೆಕ್ನ್ನು ಹಸ್ತಾಂತರಿಸಲಾಯಿತು. ಶುಕ್ರವಾರ ತ್ರಾಸಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು ೮ ಕೋಟಿ ರೂ. ವೆಚ್ಚದ ಕೊಂಕಣಿ ಖಾರ್ವಿ ಸಭಾ ಭವನವನ್ನು ವೀಕ್ಷಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ಕಛೇರಿಯ ನಿರ್ದೇಶಕ ಮಹಾವೀರ ಆಜ್ರಿ ಅವರು ಬಳಿಕ ನಡೆದ ಸರಳ ಸಮಾರಂಭದಲ್ಲಿ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ಅಧ್ಯಕ್ಷ ಕೆ.ಬಿ.ಖಾರ್ವಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ೧೦ ಲಕ್ಷ ರೂ.ಗಳ ಚೆಕ್ನ್ನು ಹಸ್ತಾಂತರಿಸಿದರು. ಇದೇ ಸಂದರ್ಭ ನಿರ್ದೇಶಕ ಮಹಾವೀರ ಆಜ್ರಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ., ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಅಭಿರುಚಿ, ಅಭಿಮಾನ ಹಾಗೂ ಹಿರಿಯರ ಸನ್ನಡತೆಯ ಸಹಕಾರದಿಂದ ಸತತ ನಾಲ್ಕು ವರ್ಷಗಳಿಂದ ನಾಗೂರು ಕಲಾಪ್ರಿಯ ಬಳಗ ಪರಿಸರದ ಕಲಾಸಕ್ತರ ಮನಮುಟ್ಟುವಲ್ಲಿ ಯಶಸ್ಸು ಕಂಡಿರುವುದು ಕಲಾಕೃಷಿಯ ಸಾರ್ಥಕತೆಯನ್ನು ಬಿಂಬಿಸುತ್ತದೆ ಎಂದು ಕಿರಿಮಂಜೇಶ್ವರ-ನಾಗೂರು ಅಗಸ್ತೇಶ್ವರ ಆಟೋರಿಕ್ಷಾ, ಟ್ಯಾಕ್ಷಿ ಚಾಲಕ, ಮಾಲಕ ಸಂಘದ ಅಧ್ಯಕ್ಷ ಪ್ರವೀಣ್ಚಂದ್ರ ಶೆಟ್ಟಿ ಹೇಳಿದರು. ನಾಗೂರು ಒಡೆಯರಮಠ ಶ್ರೀಕೃಷ್ಣಲಲಿತ ಕಲಾಮಂದಿರದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಂಗಳವಾರ ಸಂಜೆ ನಡೆದ ಬಡಗುತಿಟ್ಟಿನ ಸಾಂಪ್ರದಾಯಿಕಾ ಯಕ್ಷಗಾನ ’ಯಕ್ಷಾಮೃತ-೪’ರ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಹಾಗೂ ಯಕ್ಷಗುರು ಗಣೇಶ ಹೆಬ್ಬಾರ್ ಇವರನ್ನು ಸನ್ಮಾನಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು ೭೦ ವರ್ಷಗಳು ಕಳೆದರೂ ನಾವೆಲ್ಲರೂ ನೆಮ್ಮದಿಯ ಜೀವನ ಕಳೆದುಕೊಳ್ಳುತ್ತಿದ್ದೇವೆ. ಕಲಾಪೋಷಕರು ಹಾಗೂ ಪ್ರೇಕ್ಷಕರು ಕಲೆ ಮತ್ತು ಕಲಾವಿದರ ಹಿಂದಿರುವ ದೊಡ್ಡಶಕ್ತಿಯಾಗಿದ್ದು, ಆ ನಿಟ್ಟಿನಲ್ಲಿ ಕರಾವಳಿ ಭಾಗದ ಸಾಂಸ್ಕೃತಿಕ ನಗರಿ ಎಂದು ಹೆಸರುಗಳಿಸಿದ ಕಿರಿಮಂಜೇಶ್ವರ-ನಾಗೂರು ಪ್ರದೇಶದ ಜನತೆಗೆ ಕಲಾಪ್ರಿಯ ಬಳಗವು ಪ್ರತೀವರ್ಷ ತನ್ನ ವಿಭಿನ್ನ ಶೈಲಿಯ ಕಾರ್ಯಕ್ರಮಗಳಿಂದ ಮನರಂಜನೆ ವಾತಾವರಣವನ್ನು ನಿರ್ಮಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಜಡ್ಕಲ್: ಗ್ರಾಪಂ ವ್ಯಾಪ್ತಿಯ ಸೆಳ್ಕೋಡು ಸಹಿಪ್ರಾ ಶಾಲೆಯಲ್ಲಿ ಭಾನುವಾರ ಹಳೆವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಸುವರ್ಣ ಸಂಭ್ರಮದ ಲಾಂಛನ ಬಿಡುಗಡೆ ಸಮಾರಂಭ ನಡೆಯಿತು. ಶಾಸಕ ಕೆ. ಗೋಪಾಲ ಪೂಜಾರಿ ಹಳೆವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ಶಾಲೆಯ ಹಳೆವಿದ್ಯಾರ್ಥಿ ಉದ್ಯಮಿ ಸದಾಶಿವ ನಾಯ್ಕ್ ಲಾಂಛನ ಬಿಡುಗಡೆಗೊಳಿಸಿದರು. ಈ ಸಂದರ್ಭ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಸಂಘದ ವತಿಯಿಂದ ಶಾಲೆಗೆ ಕಂಪ್ಯೂಟರ್ ನೀಡಿದರು. ಎಸ್ಡಿಎಂಸಿ ಅಧ್ಯಕ್ಷ ಮಹಾಬಲ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಮಂಗಳೂರು ಎಕ್ಷಿಸ್ ಬ್ಯಾಂಕಿನ ಸಹಾಯಕ ಪ್ರಬಂಧಕ ಲಿಜೋ ಮ್ಯಾಥ್ಯೂ, ಸುವರ್ಣ ವಿದ್ಯಾನಿಧಿ ಅಧ್ಯಕ್ಷ ಸುರೇಂದ್ರ ನಾಯ್ಕ್ ನೇತ್ರಾಡಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ನಾಯ್ಕ್, ಉಪಾಧ್ಯಕ್ಷ ರಘುರಾಮ ಪೂಜಾರಿ, ಬಿಆರ್ಪಿ ನಾಗರಾಜ ಪುತ್ರನ್ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಭಾಸ್ಕರ್ ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಸಿದರು. ಮೇರಿ ಜೋಸೆಫ್ ವಂದಿಸಿದರು. ಸತೀಶ್ ದೇವಾಡಿಗ ನಿರೂಪಿಸಿದರು. ಶಿಕ್ಷಕಿಯರಾದ ಶೈಲಜಾ, ಸುನಿತಾ, ಜಾನಕಿ ಸಹಕರಿಸಿದರು.
