ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಕಾಂತಾರ’ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ದಿನಾಂಕ ಬುಧವಾರ ವಕೀಲರ ಸಂಘದ ವತಿಯಿಂದ ಸಂಘದ ಹಾಲಿನಲಲಿ ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕಾಂತಾರ ನಟ ರಿಶಬ್ ಶೆಟ್ಟಿ ಅವರು, ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಕುಂದಾಪುರ ವಕೀಲರ ಸಂಘದವರು ನೀಡಿದ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದರು. ಕುಂದಾಪುರದ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್, ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶ ಧನೇಶ್ ಮುಗಳಿ, ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ರೋಹಿಣಿ ಡಿ, ಎರಡನೇ ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ವಿದ್ಯಾ ಎ.ಎಸ್ ಉಪಸ್ಥಿತರಿದ್ದರು. ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಾರ್ ಅಸೋಸೀಯೇಶನ್ ಪ್ರಧಾನ ಕಾರ್ಯದರ್ಶಿ ಜೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಓರ್ವ ಕ್ಷಯ ರೋಗಿಯನ್ನು ದತ್ತು ತೆಗೆದುಕೊಳ್ಳಲಾಯಿತು. ರೋಗಿಗೆ ಆರು ತಿಂಗಳ ವರೆಗೆ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳನ್ನು ಒದಗಿಸುವುದಕ್ಕೆ ಒಪ್ಪಿಗೆ ಸೂಚಿಸಿದ್ದು ಗುರುವಾರ ಸಂಸ್ಥೆಯ ಅಧ್ಯಕ್ಷರಾದ ರಾಜು ಪೂಜಾರಿ ಇವರ ನೇತೃತ್ವದಲ್ಲಿ ಮೊದಲ ತಿಂಗಳ ಆಹಾರಸಮಾಗ್ರಿಯ ಕಿಟ್ಟನ್ನು ವಿತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಊರಿನಲ್ಲಿ ದೇವಸ್ಥಾನ ಅಭಿವೃದ್ಧಿಯಾದರೆ ಆ ಊರು ಕೂಡ ಅಭಿವೃದ್ಧಿಯನ್ನು ಕಾಣುತ್ತದೆ. ದೇವಸ್ಥಾನದಲ್ಲಿ ಜೀವಕಳೆ ಇದ್ದಾಗಲೇ ಊರಿಗೂ, ಭಕ್ತರಿಗೂ ಶ್ರೇಯಸ್ಸು ಎಂದು ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು. ಅವರು ಬುಧವಾರ ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ – ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ, ದೇವಳದ ಸುತ್ತುಪೌಳಿ ಶಂಕುಸ್ಥಾಪನೆ ಮಾಡಿ ಬಳಿಕ ಮಾತನಾಡಿ ಯಡ್ತರೆ ಮನೆಯವರು, ಊರಿನವರು ತೊಡಗಿಸಿಕೊಳ್ಳುವುದರ ಜೊತೆಗೆ ದಾನಿಗಳ ನೆರವಿನಿಂದ ಸುಂದರವಾದ ಪರಿಸರದಲ್ಲಿ ದೇವಸ್ಥಾನ ಪುನರ್ ನಿರ್ಮಾಣವಾಗುತ್ತಿದೆ. ದೇವತಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯಲಿ ಎಂದು ಆಶೀರ್ವದಿಸಿದರು. ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇವಸ್ಥಾನಗಳ ಜೀರ್ಣೋದ್ಧಾರದ ಮೂಲಕ ಸನಾತನ ಸಂಸ್ಕೃತಿಯ ಪುನರುತ್ಥಾನವಾಗಲಿದೆ. ಹಿಂದು ಧರ್ಮ ಶ್ರೇಷ್ಠ ಧರ್ಮವಾಗಿದ್ದು, ಅದರ ಆಚರಣೆ ಹಾಗೂ ಅಳವಡಿಕೆಯಲ್ಲಿ ನೆಮ್ಮದಿಯ ಬದುಕನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆತಿಥ್ಯದಲ್ಲಿ ರೋಟರಿ ವಲಯ 1ರ ಕ್ರೀಡಾ ಸ್ಪರ್ಧೆಗಳು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಭಾರತದ ವಿಶೇಷ ಚೇತನ ಕ್ರಿಕೆಟ್ ತಂಡದ ಪ್ರಮುಖ ಎಸೆತಗಾರ ಪ್ರಥ್ವಿರಾಜ್ ಶೆಟ್ಟಿ ಕ್ರೀಡಾಕೂಟದ ಉದ್ಘಾಟನೆ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ ನಾವುಂದ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಾಂಸ್ಕೃತಿಕ ಸಭಾಪತಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಜಿಲ್ಲಾ ಮೆಂಬರ್ಸಿಪ್ ಚೇರ್ಮನ್ ಕೆ.ಕೆ.ಕಾಂಚನ್, ವಲಯ 1ರ ಅಸಿಸ್ಟೆಂಟ್ ಗವರ್ನರ್ ಡಾ. ಉಮೇಶ್ ಪುತ್ರನ್, ವಲಯ ಟ್ರೈನರ್ ರವಿರಾಜ್ ಶೆಟ್ಟಿ, ವಲಯ ಲೆಪ್ಟಿನೆಂಟ್ ಡಾ. ಪೂರ್ಣೀಮ ಭವಾನಿ ಶಂಕರ್, ಡಾ. ಸಂದೀಪ್ ಕುಮಾರ್ ಶೆಟ್ಟಿ, ವಲಯ ಕ್ರೀಡಾ ಸಂಯೋಜಕ ಪ್ರದೀಪ್ ವಾಜ್ ಹಾಗೂ ಕುಂದಾಪುರ ರೋಟರಿ ಕ್ಲಬ್ ಕ್ರೀಡಾ ಸಭಾಪತಿ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಕುಂದಾಪುರ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಸದಸ್ಯರು ಭಾಗವಹಿಸಿ ಕ್ರೀಡಾ ಸ್ಪರ್ಧೆಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ರೋಟರಿ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶುದ್ಧ ಮನಸ್ಸಿನಿಂದ ಭಗವಂತನ ಸೇವೆ ಮಾಡಿದಾಗ ಮನಸ್ಸಿನ ಅಂತರಂಗ ಶುದ್ಧಿಯಾಗುತ್ತದೆ. ಕೇವಲ ನಮ್ಮ ಅಂತರಂಗ ಶುದ್ಧಿಯಾದರೇ ಸಾಲದು ಎಂಬ ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಮಹಾಲಿಂಗೇಶ್ವರ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಮಾಡಿದ ಸಮಾಜ ಸೇವೆಯ ಕಾರ್ಯ ಸಮಾಜಕ್ಕೊಂದು ಮಾದರಿಯಾಗಿದೆ ಎಂದು ಧಾಮಿ೯ಕ ಮುಖಂಡ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದರು. ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತಾಧಿಗಳಿಗೆ ದೀಪ ಬೆಳಗಿಸಲು ಅನುಕೂಲವಾಗುವಂತೆ ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ವೇದಿಕೆ ಇವರ ನೇತೃತ್ವದಲ್ಲಿ ಕೊಡುಗೆಯಾಗಿ ನೀಡಿದ ದೀಪಗಳ ಸ್ಟಾಂಡ್ ನಲ್ಲಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ದೇವಳಕ್ಕೆ ಹಸ್ತಾಂತರ ಮಾಡಿ ಅವರು ಮಾತನಾಡಿದರು. ದೇವಳದ ಉತ್ಸವ ಸಮಿತಿ ಅಧ್ಯಕ್ಷ ರಾಮಮೂತಿ೯ ಪುರಾಣಿಕ್, ದೇವಳದ ಅರ್ಚಕ ಜನಾ೯ಧನ್ ಐತಾಳ್, ಉದ್ಯಮಿ ಸಂತೋಷ ನಾಯ್ಕ್ ತೆಕ್ಕಟ್ಟೆ, ಕಿರಣ್ ಪೂಜಾರಿ, ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಆನಂದ ಕಾಂಚನ್, ಸುಧೀಂದ್ರ ಗಾಣಿಗ, ವಿಶ್ವನಾಥ್ ಆಚಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ ಕಂಡ ಮಹಾನ್ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿದ ದಾರಿಯಲ್ಲಿ ಮುನ್ನಡೆಯುವ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿರುವುದು ಪ್ರತಿಯೋಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಬೈಂದೂರಿನ ರಂಗಕರ್ಮಿ ಗಣೇಶ್ ಕಾರಂತ್ ಹೇಳಿದರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ತಾಲೂಕು ಮಹಿಳಾ ಒಕ್ಕೂಟ ಬೈಂದೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಆಶ್ರಯದಲ್ಲಿ ಮಂಗಳವಾರ ಡಾ. ಬಿ. ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಬೈಂದೂರಿನ ಪರಿಶಿಷ್ಟ ವರ್ಗದ ಆಶ್ರಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿ, ಶೋಷಿತರು ದನಿಯಾಗಿದ್ದ ಅಂಬೇಡ್ಕರ್ ಅವರು ಪ್ರಪಂಚಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದರು. ಅದರ ಪ್ರಯೋಜವನ್ನು ಪಡೆದು ಮುಖ್ಯವಾಹಿನಿಗೆ ಬಂದವರು, ತಮ್ಮ ಸಮುದಾಯದ ಬಡವರು, ಶೋಷಿತರ ಬಗ್ಗೆ ಕಾಳಹಿ ವಹಿಸುವುದು ಅತಿಮುಖ್ಯವಾಗಿದೆ ಎಂದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ ಕಾರ್ಯಕ್ರಮ ಉದ್ಘಾಟಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆಯವರ ನೇತೃತ್ವದಲ್ಲಿ ವಕೀಲರ ಸಂಘದಿಂದ ಬುಧವಾರ ಬೆಳಿಗ್ಗೆ ಕುಂದಾಪುರ ವಕೀಲರ ಭವನದ ಮುಂಭಾಗದಲ್ಲಿ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು. ಡಿ.3 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ತೀವ್ರವಾಗಿ ಖಂಡಿಸಿದರು. ನ್ಯಾಯಾಲಯದ ಆದೇಶದಂತೆ ಈ ಕೂಡಲೇ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಹಾಗೂ ಹಿರಿಯ, ಕಿರಿಯ & ಮಹಿಳಾ…
ಕುಂದಾಪ್ರ ಡಾಟ್ ಕಾಂ ವರದಿ.ಇಂಗ್ಲೆಂಡಿನ ಪ್ರದರ್ಶನ ಕಲೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಬಯಲಾಟ ಯು.ಕೆ ತಂಡದಿಂದ ಹವ್ಯಾಸಿ ಕಲಾವಿದರಿಂದ, ಇಂಗ್ಲೆಂಡಿನ ಮಿಲ್ಟನ್ ಕೀನ್ಸ್ ನಗರದಲ್ಲಿ ಯಕ್ಷಗಾನ ಬ್ಯಾಲೆ ‘ಜಟಾಯು ಮೋಕ್ಷ’ ಪ್ರದರ್ಶನ ಗೊಂಡಿತು. ಈ ಭಾರಿ ಪ್ರದರ್ಶನಗೊಂಡ ಯಕ್ಷಗಾನ ಬ್ಯಾಲೆ ಜಟಾಯು ಮೋಕ್ಷದ ಪರಿಕಲ್ಪನೆ, ಭಾವರೂಪ, ಸಂಗೀತ ಸಂಯೋಜನೆ ಹಾಗೂ ನಿರ್ದೇಶನವನ್ನು ಉಡುಪಿ ಯಕ್ಷಸಂಜೀವ ಯಕ್ಷಗಾನ ಕೇಂದ್ರದ ನಿರ್ದೇಶಕರಾದ, ಗುರು ಶ್ರೀ ಬನ್ನಂಜೆ ಸಂಜೀವ ಸುವರ್ಣ ಅವರ ಮಾಡಿದ್ದರು. ಅವರ ಮಗ ಶಿಶಿರ ಸುವರ್ಣ ಅದನ್ನ ಇಲ್ಲಿ ಇಂಗ್ಲಡಿನಲ್ಲಿ, ಬಯಲಾಟ ಯು.ಕೆಯ ಕೆಲಾವಿದರಿಗೆ ಬಹಳ ಶ್ರದ್ದೆ ಹಾಗೂ ತಾಳ್ಮೆಯಿಂದ ನಿರ್ದೇಶಿಸಿದರು. ಡಾ. ಗುರುಪ್ರಸಾದ್ ಪಟ್ವಾಲ್ ಹಾಗೂ ಗಿರೀಶ್ ಪ್ರಸಾದ್ ಈ ಪ್ರಯತ್ನದಲ್ಲಿ ಸಹಕಾರಿ ಆದರು. ಯಕ್ಷಗಾನ ಕಲೆಯ ಪೂರ್ವರಂಗದ ಕೋಡಂಗಿ ಹಾಗೂ ಬಾಲಗೋಪಾಲ ನೃತ್ಯದ ಸವಿಯನ್ನ ಜನರಿಗೆ ಉಣಿಸಿದರು ಬಯಲಾಟ ಯು.ಕೆಯ ಕಲಾವಿದರು. ಸ್ಕೊಟ್ಲಾಂಡಿನ ಆಬಾರ್ದೀನಲ್ಲಿ ನೆಲೆಸಿರುವ ಮಂಗಳೂರು ಮೂಲದ ನವೀನ ಹಾಗೂ ನವ್ಯ ಕಿರೋಡಿಯನ್ ಅವರ ಸುಪುತ್ರರಾದ ತನಿಷ್ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಸ್ಟೇಟ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಈ ಮೊದಲು ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ 2022’ ರ ಜೂನಿಯರ್ ವಿಭಾಗದಲ್ಲಿ ಬೆಳ್ಳಿ ಪದಕ, ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ – 22ರ ಜ್ಯೂನಿಯರ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದರು. ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ‘ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ’ಯ ಅಂತರಕಾಲೇಜು ಪುರುಷರ ಖೋಖೋ ಚಾಂಪಿಯನ್ಶಿಫ್ನಲ್ಲಿ ಆಳ್ವಾಸ್ ತಂಡ ಸತತ 14ನೇ ಬಾರಿ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ಮಂಗಳೂರು ವಿವಿಯ 25ಕಾಲೇಜುಗಳು ಭಾಗವಹಿಸಿದ್ದವು. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃ? ಶೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಮಧು ಜಿ.ಆರ್ ಹಾಗೂ ಜಡ್ಕಲ್ನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೆಶಕ ಶೇಶಪ್ಪ ಗೌಡ ಉಪಸ್ಥಿತರಿದ್ದರು.
