ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೧೬-೧೭ನೇ ಶೈಕ್ಷಣಿಕ ವರ್ಷದಲ್ಲಿ ಆರಂಭಿಸಿದ ಯಶಸ್ವೀ ಕಾರ್ಯಕ್ರಮವಾದ ತಿಂಗಳ ಕಲಿಕಾ ಪ್ರದರ್ಶನದ ೨೦೧೭-೧೮ನೇ ಸಾಲಿನ ಮೊದಲ ಕಾರ್ಯಕ್ರಮ, ೭ನೇ ತರಗತಿಯ ಸಂಪತ್ ಹುಟ್ಟು ಹಬ್ಬದ ಪ್ರಯುಕ್ತ ತಾಯಿ ತಂದೆ ಸುಜಾತ ಸಂತೋಷ್ ಅವರು ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ ೫ನೇ ಸಂಚಿಕೆ ಅನಾವರಣ ಹಾಗೂ ಸರ್ವಪೋಷಕರ ಸಭೆಯು ಇತ್ತೀಚೆಗೆ ಶಾಲಾ ನೋಟ್‌ಪುಸ್ತಕದ ದಾನಿಗಳಾದ ಶ್ರೀ ಎಂ.ದಿನೇಶ ಹೆಗ್ಡೆಯವರ ಗೌರವ ಉಪಸ್ಥಿತಿಯಲ್ಲಿ ಜರುಗಿತು. ಚಾರಣ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ಹತ್ತಾರು ಚಟುವಟಿಕೆಗಳ ಮೂಲಕ ಶಾಲೆ ಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಿಂದಲೇ ಶಾಲಾ ದಾಖಲಾತಿ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದರು. ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮನೋಜ್‌ಕುಮಾರ್ ಶೆಟ್ಟಿ, ಎಸ್.ಡಿ.ಎಂ,ಸಿ ಅಧ್ಯಕ್ಷರಾದ ಶ್ರೀ ಶಾಂತರಾಮ, ಉಪಾಧ್ಯಕ್ಷರಾದ ಸುಧಾಕರ, ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗರತ್ನ ಉಡುಪ, ಸಹಶಿಕ್ಷಕರುಗಳಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ನಾಟಿ ಕಾರ್ಯ ಪೂರ್ಣಗೊಂಡಿದೆ. ಕಂಠದಮನೆಯ ಕುಂಟುಂಬಿಕರಲ್ಲಿ ಹಿರಿಯವರಾದ ಟಿ. ನಾರಾಯಣ ಹೆಗ್ಡೆ ಅವರ ಮಾರ್ಗದರ್ಶನಲ್ಲಿ ನೂರಾರು ಮಂದಿ ಕೃಷಿ ಕಾರ್ಮಿಕರಿಂದ ವಾಡಿಕೆಯಂತೆ ಒಂದೇ ದಿನದಲ್ಲಿ ನಾಟಿ ಕಾರ್ಯ ಪೂರ್ಣಗೊಂಡಿದೆ. ಸಾಂಪ್ರದಾಯಿಕ ಕಾರ್ಯ ಚಾಲನೆ ನೀಡುವ ವೇಳೆಗೆ ಜಿಪಂ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ಗ್ರಾಪಂ ಸದಸ್ಯ ಕಂಠದಮನೆ ಬಾಲಕೃಷ್ಣ ಹೆಗ್ಡೆ, ಕಂಠದಮನೆ ಸುಬಾಶ್ಚಂದ್ರ ಶೆಟ್ಟಿ, ಉದಯ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಸಾಂಪ್ರದಾಯಿಕ ಕೃಷಿ ಕಾರ್ಯ: ಕಂಠದಮನೆಯ ಎದುರೇ 5.14 ಎಕರೆ ವಿಸ್ತೀರ್ಣವಾದ ಕಂಬಳಗದ್ದೆ ಇದ್ದು, ಇದು ದೇವರಗದ್ದೆ ಎಂಬ ನಂಬಿಕೆ ಸ್ಥಳೀಯರಲ್ಲಿದೆ. ಇಲ್ಲಿರುವ ವೀರಗಲ್ಲು, ಶಾಸನಗಳು ಇದು ಪುರಾತನವಾದುದು ಎಂಬುದಕ್ಕೆ ಪುಷ್ಠಿ ನೀಡುತ್ತದೆ. ಇಂದಿಗೂ ಕೂಡ ಇಲ್ಲಿ ಹಿಂದಿನ ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು ಮಳೆಗಾಲ ಆರಂಭವಾಗುತ್ತಿದ್ದಂತೆ ನಾಟಿ ಕಾರ್ಯಕ್ಕೆ ತಯಾರಿ ನಡೆಯುತ್ತದೆ. ಇಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಶ್ವಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಹಿಪ್ರಾ ಶಾಲೆ ಕಾಳವಾರದ ನಿಹಾಲ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಾರ್ಕಡ ಸಹಿಪ್ರಾ ಶಾಲೆ ಕಾರ್ತಿಕ್ ದ್ವಿತೀಯ ಸ್ಥಾನವನ್ನೂ, ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಅನಿರುದ್ಧ ತೃತೀಯ ಸ್ಥಾನವನ್ನೂ ಹಾಗೂ ಕುಂದಾಪುರ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿ ಶ್ರೇಯಸ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಕಶ್ಚಿ ಚೆಸ್ ಸ್ಕೂಲ್‌ನಲ್ಲಿ ತರಬೇತಿ ಪಡೆದಿದ್ದಾರೆ. ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟೇಶ ಆಚಾರ್ಯ ಕೋಟೇಶ್ವರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಸ್ರೂರು ಶಾರದಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸೂರಜ್ ಶೆಟ್ಟಿ, ಕಶ್ವಿ ಸ್ಕೂಲ್ ತರಬೇತುದಾರ ಗುರುರಾಜ್ ಶೆಟ್ಟಿ ಉಪಸ್ಥಿತರಿದ್ದರು. ಸಚಿನ್ ಶೆಟ್ಟಿ, ಪ್ರದೀಪ್ ರಾವ್ ಹಾಗೂ ದೀಪಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುಸ್ತಕವು ಜ್ನಾನದ ಸಂಕೇತ. ಭಾರತೀಯ ಸಂಸ್ಕೃತಿಯಲ್ಲಿ ಪುಸ್ತಕಗಳಿಗೆ ಅತ್ಯಂತ ವಿಶೇಷ ಸ್ಥಾನವಿದೆ. ಸಂಸ್ಕೃತಿ, ಧರ್ಮ ಮತ್ತು ಜ್ನಾನ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತವಾಗಲು ಮುಖ್ಯ ಕಾರಣ ಪುಸ್ತಕ. ಪುಸ್ತಕ ಸಂಸ್ಕೃತಿ ರೂಢಿಯಾಗಲಿ. ಅದಕ್ಕೆ ಈ ಕಾರ್ಯಕ್ರಮವು ನಾಂದಿಯಾಗಲಿ ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರಾದ ಡಾ.ಹೆಚ್.ವಿ.ನರಂಸಿಂಹಮೂರ್ತಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಭಂಡರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ನಡೆದ ಪುಸ್ತಕ ಹಸ್ತಾಂತರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬಾಪೂಜಿ ವಿದ್ಯಾಸಂಸ್ಥೆ ದಾವಣಗೆರೆಯ ನಿವೃತ್ತ ಸಂಸ್ಕೃತ ಉಪನ್ಯಾಸಕರಾದ ಡಾ.ಎನ್.ಕೆ ರಾಮಚಂದ್ರ ಪ್ರಾಂಶುಪಾಲರಿಗೆ ಪುಸ್ತಕ ಹಸ್ತಾಂತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ.ಯಶವಂತಿ ಕೆ ಸ್ವಾಗತಿಸಿದರು. ಉಪಾನ್ಯಾಸಕಿ ಗಾಯತ್ರಿ ಸುವರ್ಣ ವಂದಿಸಿದರು. ವಿದ್ಯಾರ್ಥಿನಿ ಶ್ರೀ ಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಮೂಲ ಸಿದ್ಧಾಂತಕ್ಕೆ ಬದ್ಧರಾಗಿದ್ದುಕೊಂಡು ಕಾಲಕ್ಕೆ ಅನುಗುಣವಾಗಿ ತನ್ನ ಕಾರ‍್ಯ ಚಟುವಟಿಕೆಗಳಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಂಡು ಸಾಗಬೇಕು. ಹಾಗಾದಾಗ ಸಂಸ್ಥೆ ಬೇಳೆಯಲು ಸಾಧ್ಯ ಎಂದು ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಖಾರ್ವಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಶಾರದಾ ಮಂಟಪದಲ್ಲಿ ನಡೆದ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ (ರಿ) ಯ ಎರಡನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಸಮಿತಿಯ ಕಳೆದ ವರುಷದ ಆಯವ್ಯಯ ಪಟ್ಟಿಯನ್ನು ಮಂಡಿಸಲಾಯಿತು. ಮುಂದಿನ ಎರಡು ವರುಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ನೇಮಿಸಲಾಯಿತು. ಅಧ್ಯಕ್ಷರಾಗಿ ಭಾಸ್ಕರ್ ಖಾರ್ವಿ ಅವಿರೋಧವಾಗಿ ಮರುಆಯ್ಕೆಯಾದರು.ಸಮಿತಿ ಉಪಾಧ್ಯಕ್ಷರಾಗಿ ರಾಮಚಂದ್ರ ಖಾರ್ವಿ, ಪ್ರಧಾನ ಕಾರ‍್ಯದರ್ಶಿಯಾಗಿ ಜಯರಾಮ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ದೇವಾಡಿಗ ಎಸ್, ಕಾರ‍್ಯದರ್ಶಿಯಾಗಿ ಗುರುರಾಜ್ ದೇವಾಡಿಗ, ಜೊತೆ ಕಾರ‍್ಯದರ್ಶಿಯಾಗಿ ಸಂತೋಷ ಖಾರ್ವಿ, ಜೊತೆ ಕೋಶಾಧಿಕಾರಿಯಾಗಿ ಜಗದೀಶ ಖಾರ್ವಿ, ಸಾಂಸ್ಕೃತಿಕ ಕಾರ‍್ಯದರ್ಶಿಯಾಗಿ ಸತೀಶ್ ಖಾರ್ವಿ ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ: ಪತ್ರಿಕೋಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಖ್ಯಾತ ಪತ್ರಕರ್ತ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಬ್ರಹ್ಮಾವರ ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ಪ್ರತಿಷ್ಟಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋಧ್ಯಮ ಪ್ರಶಸ್ತಿಗೆ ಈ ಬಾರಿ ಪತ್ರಿಕೋಧ್ಯಮ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಹಾಯ್ ಬೆಂಗಳೂರ್ ಪತ್ರಿಕೆಯ ಸಂಪಾದಕ, ಖ್ಯಾತ ಬರಹಗಾರ ರವಿಬೆಳಗೆರೆ ಅವರನ್ನು ಆಯ್ಕೆ ಮಾಡಲಾಗಿದೆ. ಬ್ರಹ್ಮಾವರ ಪ್ರೆಸ್‌ಕ್ಲಬ್ ಕಳೆದ ವರ್ಷದಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಕಳೆದ ಬಾರಿ ಸುವರ್ಣ ನ್ಯೂಸ್‌ನ ಕವರ್ ಸ್ಟೋರಿ ಖ್ಯಾತಿಯ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಪ್ರಶಸ್ತಿ ಪಡೆದಿದ್ದರು. ಜುಲೈ ೨೩ ರಂದು ಬ್ರಹ್ಮಾವರದ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕನಾರ್ಟಕ ಲೋಕಾಯುಕ್ತರಾದ ವಿಶ್ವನಾಥ್ ಶೆಟ್ಟಿ, ಆರೋಗ್ಯ ಸಚಿವ ರಮೇಶ್ ಕುಮಾರ್, ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು ಹಾಗೂ ಕಾರ್ಯಕ್ರಮದ ಆರಂಭದಲ್ಲಿ ಪತ್ರಿಕೋದ್ಯಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಮಣ್ಣಿನ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಕಂಬಳ ಪ್ರೇಮಿಗಳು ಹಾಗೂ ಸಂಘಟಕರುಗಳ ಹಲವು ಸಮಯದ ಹೋರಾಟಕ್ಕೆ ಗೆಲುವು ದೊರೆತಿದ್ದು, ಆತಂಕ ದೂರವಾಗಿದೆ. ಕೇಂದ್ರ ಸರಕಾರ ಜೂ.3ರಂದು ಸುಗ್ರೀವಾಜ್ಞೆ ಹೊರಡಿಸಿದ್ದು ಕೇಂದ್ರ ಸರಕಾರದ ಅಧೀನ ಕಾರ್ಯದರ್ಶಿ ತಂಕೋಲನ್ ಹೌಕಿಪ್ ಅಂಕಿತ ಹಾಕಿ ರಾಜ್ಯಕ್ಕೆ ರವಾನಿಸಿದ್ದಾರೆ. ಮೂಲಕ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕಂಬಳದ ತಿದ್ದುಪಡಿ ವಿಧೇಯಕ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ. ಈ ಕಡತ ಕರ್ನಾಟಕದ ಸಂಸದೀಯ ಕಾರ್ಯದರ್ಶಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ, ಕಾರ್ಯದರ್ಶಿಗೆ ರವಾನೆಯಾಗಲಿದೆ. ರಾಜ್ಯಕ್ಕೆ ಕಳುಹಿಸಿಕೊಟ್ಟ ಕಂಬಳ ಕಾನೂನು ತಿದ್ದುಪಡಿ ವಿಧೇಯಕ ಮುಂದಿನ ವಿಧಾನಸಭೆ ಮತ್ತು ವಿಧಾನಸಭೆ ಅಧಿವೇಶನದಲ್ಲಿ ಗಜೆಟ್ ನೋಟಿಫಿಕೇಶನ್ ಆಗುವುದರೊಂದಿಗೆ ಕಾನೂನಾಗಿ ಮಾರ್ಪಾಡಾಗಲಿದೆ. ಕಂಬಳ ಕ್ರೀಡೆಗೆ ಸುಗ್ರೀವಾಜ್ಞೆ ಪ್ರಕಟವಾದ ಕಾರಣ ಕಂಬಳ ಕ್ರೀಡೆ ಆಯೋಜನೆಗೆ ಯಾವುದೇ ಅಡ್ಡಿ ಆತಂಕವಿಲ್ಲ. ಕಂಬಳ ಉಳಿವಿಗಾಗಿ ನಡೆಸಲಾಗಿದ್ದ ಹೋರಾಟಕ್ಕೆ ಕೊನೆಗೂ ಜಯ ದೊರೆತಂತಾಗಿದೆ. ಚಿತ್ರ: ಅಂತರ್ಜಾಲ ಮೂಲ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಸುವರ್ಣ ಸಂಭ್ರಮದಲ್ಲಿರುವ ಶ್ರೀ ಸಾಲಿಗ್ರಾಮ ಮೇಳದ ಪ್ರಧಾನ ಭಾಗವತ ಹಾಲಾಡಿ ರಾಘವೇಂದ್ರ ಮಯ್ಯ ಅವರನ್ನು ದಂಪತಿ ಸಹಿತ ಮಣೂರು ಮಯ್ಯ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾತ್ರಿ ಅದ್ದೂರಿಯಾಗಿ ಸನ್ಮಾನಿಸಲಾಯತು. ರಾಘವೇಂದ್ರ ಮಯ್ಯರು ಊರಿಗೆ ತಮ್ಮ ಭಾಗವತಿಕೆಯ ಮೂಲಕ ಕೀರ್ತಿ ತಂದಿದ್ದಾರೆ. ಮೊದಲು ನಮ್ಮ ಹಾಲಾಡಿ ಭಜನೆ, ನಾಟಕ ಯಕ್ಷಗಾನ ಜಾನಪದ ನೃತ್ಯ ಕಲೆಗಳಿಗೆ ಹೇಳಿ ಮಾಡಿಸಿದಂತೆ ಇತ್ತು ಈಗ ಅದೆಲ್ಲಾ ಮಾಯವಾಗುತ್ತಿದೆ ಎಂದು ಅತಿಥಿ ಬೆಂಗಳೂರಿನ ಉದ್ಯಮಿ ಹಾಲಾಡಿ ಕುದ್ರುಮನೆ ಶ್ರೀನಿವಾಸ ಶೆಟ್ಟಿ ಅಭಿಪ್ರಾಯ ಪಟ್ಟರು. ಮುಂದಿನ ತಿರುಗಾಟ ಸಾಲಿಗ್ರಾ,ಮ ಮೇಳದ 50 ನೇ ವರ್ಷ ಮತ್ತು ನನಗೂ ಈಗ 50. ಮೇಳದ ನಿತ್ಯ ಸಂಭ್ರಮಕ್ಕೆ ಎಲ್ಲರು ಆಶೀರ್ವಾದ ಮಾಡಿ ಎಂದು ಸನ್ಮಾನಕ್ಕೆ ಉತ್ತರಿಸಿದ ಮಯ್ಯ ಅಭಿಪ್ರಾಯ ಪಟ್ಟರು. ಸುದ್ದಿ ಟಿವಿ ಸಂಪಾದಕ ಶಶಿಧರ್ ಭಟ್, ಕಲಾವಿದ ಶಶಿಧರ ಕೋಟೆ, ನರಸಿಂಹ ಐತಾಳ್, ಸುಬ್ರಮಣ್ಯ ಮಿತ್ತಂತಾಯ, ವಾಸುದೇವ ಮಯ್ಯ, ಪುಷ್ಟ ಮಯ್ಯ, ರಾಧಾಕೃಷ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ವಕ್ವಾಡಿ: ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ೨೦೧೬-೧೭ ನೇ ಸಾಲಿನಲ್ಲಿ ಅಖಿಲ ಭಾರತೀಯ ರಾಷ್ಟ್ರಭಾಷಾ ವಿಕಾಸ ಸಮಿತಿಯು ಆಯೋಜಿಸಿದ ರಾಷ್ಟ್ರ ಮಟ್ಟದ ಹಿಂದಿ ಪರೀಕ್ಷೆಯಲ್ಲಿ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ತನ್ಮಯ ಶೆಟ್ಟಿ, ಅಬ್ದುಲ್ ಸಲಾಂ, ರಕ್ಷಣ್ ಕುಂದಾಪುರ ಮತ್ತು ಸಮಿತಾ ಅವರುಗಳು ಹಿಂದಿ ಶಿಕ್ಷಕ ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಪರೀಕ್ಷೆ ಬರೆದು ಬಾಲರತ್ನ ಪುರಸ್ಕಾರಕ್ಕೆ ಭಾಜನರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಮುಖ್ಯಸ್ಥರು ಅಭಿನಂದಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಮಣಿ ಕೃಷ್ಣಸ್ವಾಮಿ ಅಕಾಡೆಮಿ(ರಿ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ತೆಂಕುತಿಟ್ಟಿನ ಆಯ್ದ ೧೫೦ ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ‍್ಯಾಗಾರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ವಿದಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ಕಾರ‍್ಯಗಾರವನ್ನು ಉದ್ಘಾಟಿಸಿ, ನಮ್ಮ ಜೀವನದಲ್ಲಿ ಎದುರಾಗುವ ಪ್ರತಿ ಕ್ಷಣವು ಕಲಿಕೆಗೆ ಅವಕಾಶ ಮಾಡಿಕೊಡುತ್ತದೆ, ಅದರ ಸಂಪೂರ್ಣ ಲಾಭವನ್ನು ಪಡೆದುಕೊಂಡಾಗ ಬದುಕಿನಲ್ಲಿ ಉನ್ನತ ಸ್ಥಾನಕ್ಕೆರಲು ಸಾಧ್ಯ ಎಲ್ಲಾ ಒಳ್ಳೆಯ ವಿಚಾರಗಳೂ ನನ್ನ ಬಳಿಗೆ ಹರಿದು ಬರಲಿ ಎಂಬ ಮುಕ್ತ ಮನಸ್ಸು ನಮ್ಮಲ್ಲಿರಬೇಕು ಎಂದು ತಿಳಿಸಿದರು. ಭಗವಂತನಲ್ಲಿ ಪ್ರತಿ ಕ್ಷಣವೂ ತನ್ನ ಅಂತರಂಗ ಸೌಂದರ‍್ಯವನ್ನು ಇಮ್ಮಡಿಗೊಳಿಸುವ ಶಕ್ತಿಯನ್ನು ನೀಡು ಎಂದು ಪ್ರಾರ್ಥಿಸಬೇಕು. ಸೌಂದರ‍್ಯ ಪ್ರಜ್ಞೆ ಇರುವ ವ್ಯಕ್ತಿ ತನ್ನ ಜೀವನದ ಪ್ರತಿ ಕ್ಷಣವನ್ನೂ ಸಂತೋಷದಿಂದ ಕಳೆಯಲು ಸಾಧ್ಯ ಸಾಂಸ್ಕೃತಿಕವಾದ ಎಲ್ಲಾ ಆಯಾಮಗಳಲ್ಲಿಯೂ ದಾಖಲೀಕರಿಸುವ ಪ್ರವೃತ್ತಿ ಬೆಳೆಯಬೇಕು,…
