Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ಗುರುಪೂರ್ಣಿಮೆಯ ಪ್ರಯುಕ್ತ ವ್ಯಾಸಪೂಜೆಯು ಹಟ್ಟಿಅಂಗಡಿ ಡಾ. ಹೆಚ್. ಶಾಂತಾರಾಮ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಶಾಲೆಯ ಸಂಸ್ಕೃತ ಅಧ್ಯಾಪಕರಾದ ರಾಮಕೃಷ್ಣ ಉಡುಪರು ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸುತ್ತಾ, ಗುರುಗಳು ತಮ್ಮ ಗುರುಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸುವ ಈ ಪವಿತ್ರ ದಿನದಲ್ಲಿ, ಜಗತ್ತಿನ ಆದಿಗುರುಗಳಾದ ವೇದವ್ಯಾಸ ಮಹರ್ಷಿಗಳನ್ನು ಭಕ್ತಿಪೂರ್ವಕವಾಗಿ ಸ್ಮರಿಸುವುದು ನಮ್ಮೆಲ್ಲರ ಭಾಗ್ಯ. ವೇದಗಳನ್ನು ಸಂಗ್ರಹಿಸಿ, ಅವುಗಳನ್ನು ಸುಲಭವಾಗಿ ಅಧ್ಯಯನ ಮಾಡಲು ವ್ಯವಸ್ಥಿತಗೊಳಿಸಿದ ಮಹಾನುಭಾವರು ವೇದವ್ಯಾಸರು. ಹದಿನೆಂಟು ಪುರಾಣಗಳ ಮೂಲಕ ದೇವರು, ಧರ್ಮ, ಭಕ್ತಿ ಮತ್ತು ಸನ್ಮಾರ್ಗದ ಸಂದೇಶವನ್ನು ಜನಮಾನಸಕ್ಕೆ ತಲುಪಿಸಿದ ಶ್ರೇಷ್ಠ ಗುರು ಅವರೇ. ಉಪನಿಷತ್ತುಗಳ ಸಾರವನ್ನು ಲೋಕಕ್ಕೆ ಪರಿಚಯಿಸಿದ ವೇದವ್ಯಾಸರು, ಮಹಾಭಾರತ, ಭಗವದ್ಗೀತೆ, ವಿಷ್ಣು ಸಹಸ್ರನಾಮ ಮುಂತಾದ ಅಮೂಲ್ಯ ಆಧ್ಯಾತ್ಮಿಕ ಸಂಪತ್ತನ್ನು ಮಾನವಕುಲಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಶ್ರೀಧರ ಬಳಗಾರ ಅವರ ‘ಮಾರ ಮಿಂದನುʼ ಕಥಾ ಸಂಕಲನ ಆಯ್ಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಗಾರಿನಲ್ಲಿ ಜನಿಸಿದ ಶ್ರೀಧರ ಬಳಗಾರ ಕಳೆದ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಟೀಚರ್ ಎಜುಕೇಟೆರ್ ಆಗಿ ಪಾಠ ಮಾಡುತ್ತ ಸದ್ಯ ಕುಮಟಾದಲ್ಲಿ ನೆಲೆಸಿದ್ದಾರೆ. ‘ಅಧೋಮುಖ'(1995), ‘ಮುಖಾಂತರ’ (1998), ‘ಇಳೆ ಎಂಬ ಕನಸು’ (2003), ಒಂದು ಫೋಟೋದ ನೆಗೆಟಿವ್”(2008), ‘ಈಸಾಡತಾವ ಜೀವ'(2015), ‘ಮಾಲತಿ ಮಾತಾಡಿದಳು'(2023), ‘ಮಾರ ಮಿಂದನು'(2025), ಕಥಾ ಸಂಕಲನಗಳು. ‘ಕೇತಕಿಯ ಬನ'(2003), ‘ಆಡುಕಳ'(2014), ‘ಮೃಗಶಿರ'(2019), ‘ವಿಸರ್ಗ'(2023), ‘ಬಲಿಪಾದ'(2026), ಕಾದಂಬರಿಗಳು. ‘ರಥಬೀದಿ'(2009), ‘ಕಾಲಪಲ್ಲಟ'(2011) ಅಂಕಣ ಬರಹಗಳು. ‘ಮೊಳೆದಷ್ಟು ಹೂವು'(2019) ಲೇಖನ ಸಂಗ್ರಹ. ಕುವೆಂಪು ಭಾಷಾ ಭಾರತಿಗೆ ಪೀಟರ್ ವ್ಯಾಟ್ಸನ್ ಮತ್ತು ನಿರ್ಮಲ್ ವರ್ಮಾರವರ ಆಯ್ದ ಬರಹಗಳ ಅನುವಾದ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಸ್ವಾತಂತ್ರ್ಯೋತ್ತರ ಕನ್ನಡ ಚಿಂತನಾತ್ಮಕ ಲೇಖನಗಳ ಸಂಪಾದನೆ ಮಾಡಿ ಕೊಟ್ಟಿದ್ದಾರೆ. ಕೆಲವು ಕಥೆಗಳು ಇಂಗ್ಲಿಷ್, ತಮಿಳು, ಉರ್ದು ಭಾಷೆಗೆ ಭಾಷಾಂತರಗೊಂಡಿವೆ. ಹಾಗೂ ಕರ್ನಾಟಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಪದವಿ ಶಿಕ್ಷಣದಲ್ಲಿ ಕೌಶಲ್ಯ ಸಂಪಾದನೆ  ಮತ್ತು ವ್ಯಕ್ತಿತ್ವ ವಿಕಸನಕ್ಕೆ ಮಹತ್ವ ಕೊಡಲಾಗುತ್ತಿದ್ದು ಸಕಾರಾತ್ಮಕ ಚಿಂತನೆಯೊಂದಿಗೆ ಶಿಸ್ತುಬದ್ಧ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಭವಿಷ್ಯದ ಸತ್ಪ್ರಜೆಗಳಾಗುತ್ತಾರೆ. ದೀಪದ ಬೆಳಕು ಮನೆಯನ್ನು ಬೆಳೆಗಿದರೆ, ಜ್ಞಾನದ ಬೆಳಕು ಮನವನ್ನು ಬೆಳಗುತ್ತದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಜ್ಞಾನದ  ಬೆಳಕಿನಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಉಡುಪಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಘು ನಾಯ್ಕ್ ನುಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಎಸ್ಇಪಿ ಶಿಕ್ಷಣ ಪದ್ಧತಿ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಶಿಸ್ತು ಮತ್ತು ಸಮಯಪಾಲನೆಯೊಂದಿಗೆ ಶಿಕ್ಷಣ ಪಡೆದು, ಕಾಲೇಜಿನ ನಿಯಮಗಳನ್ನು ಪಾಲಿಸಿ ಇಲ್ಲಿನ ಮೂಲಭೂತ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಸಿಂಚನಾ ಮತ್ತು ತಂಡದವರು ಪ್ರಾರ್ಥಿಸಿದರು. ಇತ್ತೀಚಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂರು ವರ್ಷಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹರ್ಕೂರು ಎಂಬಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ತಲೆಯ ಮೇಲೆ ಹಾಕಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಕುಂದಾಪುರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಆದೇಶ ನೀಡಿದ್ದಾರೆ. ರಾಜು ಶಿಕ್ಷೆಗೆ ಗುರಿಯಾದ ಆರೋಪಿ. 2023ರ ಮೇ.14ರಂದು ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ನಾಗರಾಜ ಆಚಾರಿ ಗಾರೆ ಕೆಲಸಕ್ಕಾಗಿ ಸಂಗೋದಪ್ಪ ಯಾನೆ ಸಂಗಮೇಶ ಎಂಬ ಮೇಸ್ತ್ರಿಯ ಮೂಲಕ ರಾಜು ಅವರನ್ನು ಕರೆದುಕೊಂಡು ಹೋಗಿದ್ದರು. ರಾತ್ರಿ 9:15 ಗಂಟೆಗೆ ಸಂಗೊದೆಪ್ಪ ಹಾಗೂ ರಾಜು ಸಂಬಳದ ವಿಚಾರ ವಾಗಿ ಗಲಾಟೆ ಮಾಡಿ ಹೊಡೆದಾಡಿಕೊಂಡಿದ್ದು, ಅದರಲ್ಲಿ ರಾಜು ಎಂಬಾತನು ಪಂಚಾಂಗದ ಬಳಿಯಲ್ಲೇ ಇದ್ದ ಕೆಂಪು ಕಲ್ಲನ್ನು ಎತ್ತಿ ಸಂಗೋದಪ್ಪ ಅವರ ತಲೆಯ ಮೇಲೆ ಹಾಕಿ ಕೊಲೆ ಮಾಡಿರುವುದಾಗಿ ದೂರಲಾಗಿತ್ತು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೋಣಿಯ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಜರುಗಿದ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ 17ರ ವಯೋಮಾನದ ಬಾಲಕಿಯರ ವಿಭಾಗದ ಟ್ರೆಡಿಷನಲ್‌ ಹಾಗೂ ಆರ್ಟಿಸ್ಟಿಕ್‌ (ಸಿಂಗಲ್‌ )ಯೋಗಾಸನ ಸ್ಪರ್ಧೆಗಳೆರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಈಕೆ ಅರುಣ ಮಧ್ಯಸ್ಥ ಹಾಗೂ ಲತಾ ಮಧ್ಯಸ್ಥ ದಂಪತಿಯ ಪುತ್ರಿ. ಅಂತೆಯೇ, 14ರ ವಯೋಮಾನದೊಳಗಿನ ಬಾಲಕರ ವಿಭಾಗದ ಟ್ರೆಡಿಷನಲ್‌ ಯೋಗಾಸನ ಸ್ಪರ್ಧೆಯಲ್ಲಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿಲಾಸ್‌ ಡಿ. ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಶಾಂತ್‌ ಮಡಿವಾಳ್‌, ಚಂದ್ರಶೇಖರ ಮಾರ್ಗದರ್ಶನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನಾಧಾರಿತ ಬೆಳೆ ವಿಮೆ (WBCIS) ಯೋಜನೆಯ ಪ್ರೀಮಿಯಂ ಪಾವತಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕವನ್ನು ತಕ್ಷಣ ವಿಸ್ತರಿಸುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಜುಲೈ ಅಂತ್ಯದ ವೇಳೆಗೆ ಸಾಮಾನ್ಯವಾಗಿ 249 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 165 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.34 ರಷ್ಟು ಮಳೆ ಕೊರತೆ ದಾಖಲಾಗಿದೆ. ಮಳೆಯ ಅಭಾವದಿಂದ ಬಿತ್ತನೆ ಕಾರ್ಯ ವಿಳಂಬವಾಗಿದ್ದು, ಅನೇಕ ಕಡೆಗಳಲ್ಲಿ ಬೆಳೆಗಳು ಸಮರ್ಪಕವಾಗಿ ಬೆಳೆಯದೇ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಶೇ.44 ರಷ್ಟು ಮಳೆ ಕೊರತೆ ದಾಖಲಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. 2026–27ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳು ಮೆಣಸು, ಶುಂಠಿ ಹಾಗೂ ಮಾವು ಬೆಳೆಗಳಿಗೆ ವಿಮೆ ಮಾಡಿಸಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಸಮರ್ಪಕವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯ ಒಟ್ಟು 10,63,876 ಮತದಾರರಲ್ಲಿ ಒಟ್ಟು 9,87587 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ.92.83ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷದ ವತಿಯಿಂದ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾರೊಬ್ಬ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿ ಕೊಳ್ಳಬೇಕು. ಇದಕ್ಕೆ ರಾಜಕೀಯ ಪಕ್ಷಗಳು, ಬಿಎಲ್‌ಓಗಳು, ಬಿಎಲ್‌ಎಗಳು, ಪರಿಷ್ಕರಣೆ ಕಾರ್ಯದಲ್ಲಿ ಕೈಜೋಡಿಸುವುದರೊಂದಿಗೆ ಪೂರ್ಣ ಪ್ರಮಾಣ ದಲ್ಲಿ ಮತದಾರರ ಕರಡು ಪಟ್ಟಿ ತಯಾರಿಸಲು ಸಹಕಾರ ನೀಡಬೇಕು ಎಂದರು. ಜಿಲ್ಲೆಯಲ್ಲಿ ಒಟ್ಟು 1112 ಮತಗಟ್ಟೆಗಳಿದ್ದು, ಅವುಗಳಲ್ಲಿ 733 ಮತಗಟ್ಟೆಗಳಲ್ಲಿ ಶೇ.100ರಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗೋಳಿಹೊಳೆಯ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜಿ ಸ್ವಾಮೀಜಿ ಅವರ ಚಾತುರ್ಮಾಸ ವ್ರತಾಚರಣೆ – ಬೈಂದೂರು ಚಾತುರ್ಮಾಸಕ್ಕೆ ಬುಧವಾರ ಚಾಲನೆ ದೊರೆಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಧರ್ಮ ಸಭೆಯನ್ನು ಉದ್ಘಾಟಿಸಿದರು. ವ್ರತಾಚರಣೆ ಸಮಿತಿಯ ಗೌರವಾಧ್ಯಕ್ಷ ಗೋಪಾಲ ಪೂಜಾರಿ, ಅಧ್ಯಕ್ಷ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ಮಂಕಾಳ ಎಸ್. ವೈದ್ಯ, ಶಿವಾನಂದ ನಾಯ್ಕ್‌, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎ. ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಡಾ. ವೈ. ಭರತ್ ಕುಮಾ‌ರ್ ಶೆಟ್ಟಿ‌, ಹರೀಶ್ ಪೂಂಜಾ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕರಾದ ಸುನಿಲ್ ನಾಯ್ಕ್‌ ಭಟ್ಕಳ, ಸಂಜೀವ ಮಠಂದೂರು, ವೃತಚರಣೆ ಸಮಿತಿ ಸಂಚಾಲಕ ಶಿವರಾಜ್‌ ಪೂಜಾರಿ ಗೋಳಿಹೊಳೆ, ಪ್ರಮುಖರಾದ ಎಸ್. ರಾಜು ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ದಿನೇಶ ಅಮಿನ್ ಕುಂದಾಪುರ, ಉದ್ಯಮಿ ದಯಾನಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ವಸಂತ್ ಕುಂಜ್‌ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲ ಹಾಗೂ ಶ್ರೀ ಕೃಷ್ಣಧಾಮದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ತಮ್ಮ 39ನೇ ಚಾತುರ್ಮಾಸ್ಯ ವ್ರತವನ್ನು ಬುಧವಾರ ಸಂಕಲ್ಪಿಸಿದ್ದರು. ಚಾತುರ್ಮಾಸ್ಯ ವ್ರತದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು. ನಿನ್ನೆ ಗುರುಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಿದ ಪೂಜ್ಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ಶ್ರೀಗಳಿಗೆ ವಿಶೇಷ ಪ್ರಣಾಮ, ಗೌರವಗಳನ್ನು ಸಲ್ಲಿಸಿ, ಆಶೀರ್ವಾದ ಪಡೆದರು. ಶ್ರೀಗಳ ದೆಹಲಿ ಚಾತುರ್ಮಾಸ್ಯ ಅತ್ಯಂತ ಯಶಸ್ವಿಯಾಗಲಿ ಎಂದು ಇದೇ ಸಂದರ್ಭದಲ್ಲಿ ಸಂಸದರು ಭಕ್ತಿಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ದೆಹಲಿಯಲ್ಲಿ ತಮ್ಮ 39ನೇ ಚಾತುರ್ಮಾಸ್ಯ ವ್ರತದ ಸಂಕಲ್ಪ ಮಾಡಿರುವ ಪೇಜಾವರ ಶ್ರೀಗಳ ಗೌರವಾರ್ಥ ನಡೆದ ಸ್ವಾಗತ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಖಿಲ ಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ವಾರ್ಷಿಕ ಸಮಾವೇಶ ತಮಿಳುನಾಡಿನ ಶ್ರೀರಂಗಂನಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಕರ್ನಾಟಕ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರಾದ ವಾಸ್ತುತಜ್ಞ, ಜ್ಯೋತಿಷಿ, ಸಾಹಿತಿ ಡಾ. ಬಸವರಾಜ್ ಶೆಟ್ಟಿಗಾರ್‌ರವರಿಗೆ ಅಖಿಲ ಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಮಾಜಿ ರಾಷ್ಟ್ರಾಧ್ಯಕ್ಷರಾದ ಬ್ರಹ್ಮರ್ಷಿ ಬೊಜ್ಜನ್ನ ಪಂತುಲುರವರು ಅಕ್ಷರ ಪದ್ಮ ನಿಧಿ ಬಿರುದನ್ನು ರಾಷ್ಟ್ರೀಯ ಮಟ್ಟದಲ್ಲಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಪ್ರಣವ ಪೀಠದ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಡಾ. ಮಾತೇ ಮುಕ್ತಾಂಭಿಕಾದೇವಿ, ಪದ್ಮಭೂಷಣ ಕುಪ್ಪುಸ್ವಾಮಿ ಚೆಟ್ಟಿಯ್ಯಾರ್ ಚೆನೈ, ಶ್ರೀ ಗುರು ಮಾರ್ಕಾಂಡೇಯ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಪ್ರಭುಲಿಂಗ ಸ್ವಾಮಿ, ಅಖಿಲಭಾರತ ಪದ್ಮಶಾಲಿ ಸಂಘ ಹೈದರಾಬ್ ಇದರ ಅಧ್ಯಕ್ಷರಾದ ಕಂದಗಟ್ಲ ಸ್ವಾಮಿ, ಬ್ರಹ್ಮರ್ಷಿ ಪುಂಡಲಿಕಾನಂದ ಕಾಟಿಪಾಮುಲು ಪಂತುಲು, ರಾಷ್ಟ್ರಾಧ್ಯಕ್ಷರಾದ ನೀಲಾ ರಾಧ, ತಮಿಳುನಾಡು ರಾಜ್ಯಾಧ್ಯಕ್ಷರಾದ ವೀರಮಲ್ಲ ರವಿಚಂದ್ರನ್, ಹೈದರಾಬಾದ್ ತೆಲಂಗಾಣದ ರಮೇಶ್ ಋಷಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಅಖಿಲಭಾರತ ಪದ್ಮಬ್ರಾಹ್ಮಣ ಪುರೋಹಿತ ಸಂಘದ ಅಧ್ಯಕ್ಷರಾದ ಬ್ರಹ್ಮರ್ಷಿ ಮಾರ್ಚಾಲು ಕೇಶವಮೂರ್ತಿ…

Read More