Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕೇಂದ್ರ ಸರಕಾರ ದೇಶದಲ್ಲಿ ಗೋಹತ್ಯೆ ನಿಷೇಧಿಸುವ ಕುರಿತು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸಿ ಗಂಗೊಳ್ಳಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಸಂಭ್ರಮಾಚರಣೆ ನಡೆಸಿದರು. ಮ್ಯಾಂಗನೀಸ್ ರಸ್ತೆಯ ಬಳಿ ಮುಖ್ಯರಸ್ತೆಯ ಸಮೀಪ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಕೇಂದ್ರ ಸರಕಾರದ ಗೋಹತ್ಯೆ ನಿಷೇಧದ ಅದೇಶವನ್ನು ಸ್ವಾಗತಿಸಿ ಸರಕಾರದ ಕ್ರಮವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಮೂರು ವರ್ಷ ಪೂರೈಸುತ್ತಿರುವ ಸುಸದಂರ್ಭದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ ಎಂದು ಕಾರ್ಯಕರ್ತರು ಕೇಂದ್ರ ಸರಕಾರ ಕಾರ್ಯವನ್ನು ಶ್ಲಾಘಿಸಿದರು. ಬೈಂದೂರು ಕ್ಷೇತ್ರ ಬಿಜೆಪಿ ಮುಖಂಡ ರಾಮಪ್ಪ ಖಾರ್ವಿ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗ್ರಾಪಂ ಸದಸ್ಯ ಬಿ.ಗಣೇಶ ಶೆಣೈ, ಬಿಜೆಪಿ ಕಾರ್ಯಕರ್ತರಾದ ಶಂಕರ ದೇವಾಡಿಗ, ರತ್ನಾಕರ ಗಾಣಿಗ, ನವೀನ ದೊಡ್ಡಹಿತ್ಲು, ದಿಲೀಪ್ ಖಾರ್ವಿ, ಮೋಹನ ಖಾರ್ವಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಕಾರ್ಯಗಾರ ಜರುಗಿತು. ಆದರ್ಶ ವಿದ್ಯಾಕೇಂದ್ರದ ಪ್ರಾಂಶುಪಾಲ ಬಿನಿಮೋನ್ ವಿ.ಆರ್ ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗುರುತಿಸುವ ಬಗೆ ಹೇಗೆ, ತರತಗತಿಯಲ್ಲಿ ಶಿಕ್ಷಕನ ವರ್ತನೆ ಎಷ್ಟು ಮಹತ್ವಪೂರ್ಣವಾಗಿರುತ್ತದೆ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ದಿನದಿಂದ ದಿನಕ್ಕೆ ಅಭಿವೃದ್ಧಿಗೊಳಿಸುವುದು ಹೇಗೆ ಎಂಬುದನ್ನು ವಿವರಿಸಿದರು. ಮಕ್ಕಳ ಮಾನಸಿಕ ಸ್ಥಿತಿ ಸೂಕ್ಷ್ಮತೆಯಿಂದ ಕೂಡಿರುತ್ತದೆ. ಅವರ ಸೂಕ್ಷ್ಮತೆಯನ್ನು ಅರಿತು, ಅರ್ಥೈಸಿಕೊಂಡು ಚಟುವಟಿಕೆಗಳ ಮೂಲಕ ಪ್ರೋತ್ಸಾಹಿಸುವುದು ಶಿಕ್ಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಹೆದರಿಸುವುದರಿಂದ, ಉತ್ಸಾಹ ಮೊಟಕುಗೊಳಿಸುವುದರಿಂದ ಅವರ ಬೆಳವಣಿಗೆಯ ವ್ಯಕ್ತಿತ್ವಕ್ಕೆ ಧಕ್ಕೆಯುಂಟುಮಾಡಿದಂತಾಗುತ್ತದೆ. ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಉತ್ಸಾಹವನ್ನು ಪ್ರೋತ್ಸಾಹಿಸುವ ಬಗೆ ಹೇಗೆ, ಗುಣಮಟ್ಟ ಅಂಶಗಳನ್ನು ಸಂಗ್ರಹಿಸಿ ಬೋಧಿಸುವ ಬಗೆ ಏಷ್ಟು ಉಪಯುಕ್ತ ಎಂದರು. ಕಾರ್ಯಗಾರದಲ್ಲಿ ಶಾಲಾ ಪ್ರಿನ್ಸಿಪಾಲರಾದ ಸಾಯಿಜು.ಕೆ.ಆರ್. ನಾಯರ್ ಮತ್ತು ಉಪ ಪ್ರಾಂಶುಪಾಲರಾದ ಶ್ರೀ. ಸುನಂದಾ ಪಾಟೀಲ್ ರವರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಶಿಕ್ಷಕರಾದ ಶ್ರೀ. ರಾಮಚಂದ್ರ ಹೆಬ್ಬಾರ್ ಸ್ವಾಗತಿಸಿದರು. ಸಮಾಜ ವಿಜ್ಞಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಖೆ ಹೊಂದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದ ಅಂಗಡಿಯ ಪ್ರತ್ಯೇಖ ದಾಸ್ತಾನು ಕೊಠಡಿಯಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಅಡಿಕೆ, ಕಾಳು ಮೆಣಸು, ರಬ್ಬರ್ ಶೀಟ್ ಮುಂತಾದ ಉತ್ಪನ್ನಗಳನ್ನು ದೋಚಿಕೊಂಡು ತೆರಳಿರುವ ಘಟನೆ ವರದಿಯಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಜಡ್ಕಲ್ ಸೈಂಟ್ ಜಾಜ್ ಚರ್ಚ್ ಕಾಂಪೆಕ್ಸ್‌ನಲಿದ್ದ್ಲ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ  ಜಡ್ಕಲ್ ಶಾಖೆ ದಾಸ್ತಾನು ಕೊಠಡಿಯ ಬಾಗಿಲು ಮುರಿದು ಸುಮಾರು 16ಲಕ್ಷ ಮೌಲ್ಯದ ಅಡಿಕೆ ಹಾಗೂ 2 ಲಕ್ಷ ಮೌಲ್ಯದ ಕಾಳುಮೆಣಸು ದೊಚಿರುವ ಕಳ್ಳರು, ಪಕ್ಕದ ಸಬಾಸ್ಟಿನ್ ಪಟ್ಟಾಮನ & ಸನ್ಸ್ ಅಂಗಡಿಗೆ ಸೇರಿದ್ದ ದಾಸ್ತಾನು ಕೊಠಡಿಯಿಂದ ಸುಮಾರು 2.44 ಲಕ್ಷ ಮೌಲ್ಯದ3 ಸಾವಿರ ಕೆ.ಜಿ ರಬ್ಬರ್ ಶೀಟ್, 45,600ರೂ ಮೌಲ್ಯದ 40 ಡಬ್ಬಿ ಸ್ಟಿಕ್‌ವೆಲ್ ಗಮ್, 44.800ರೂ ಮೌಲ್ಯದ 310ಕೆ.ಜಿ ಪ್ಲಾಸ್ಟಿಕ್ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಹೊಳೆ ಬದಿಯಲ್ಲಿ ಕುಡಿಯುವ ನೀರಿಗಾಗಿ ತೆಗೆಯಲಾದ ಹೊಂಡಕ್ಕೆ 11 ವರ್ಷದ ಬಾಲಕಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಹೆಂಗವಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೋಡಾಬೈಲು ಮರೂರು ಸಂಪರ್ಕದ ಮಧ್ಯ ಭಾಗದಲ್ಲಿ ಹರಿಯುವ ತೊಂಭತ್ತು ಹೊಳೆಯಲ್ಲಿ ನಡೆದಿದೆ. ಕೋಡಾಬೈಲು ಸರಸ್ವತಿ ಹಾಗೂ ಮೋಹನ ದಂಪತಿಯ ಇಬ್ಬರು ಹೆಣ್ಣು ಮಕ್ಕಳಲ್ಲಿ ಸ್ವಾತಿ ಹಿರಿಯಳು. ತೊಂಭತ್ತು ಶ್ರೀ ದುರ್ಗಾ ಪರಮಮೇಶ್ವರಿ ಅನು ದಾನಿತ ಶಾಲೆಯ 6ನೇ ತರಗತಿಗೆ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ. ಘಟನೆ: ಸ್ವಾತಿ ಹಾಗೂ ಸಂಬಂಧಿಕರ ಮಕ್ಕಳೊಂದಿಗೆ ಮನೆ ಸಮೀಪದಲ್ಲಿ ನೀರಿಲ್ಲದೇ ಬತ್ತಿದ ಹೊಳೆಯ ಕಡೆಗಳಲ್ಲಿ ಆಟವಾಡಲು ಹೋಗಿದ್ದರು. ಆ ಸಂದರ್ಭದಲ್ಲಿ ಸ್ವಾತಿ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಜತೆಗಿದ್ದ ಮಕ್ಕಳು ಕೂಡ ಆಟವಾಡುತ್ತಿದ್ದರು. ಮಕ್ಕಳಿಗೆ ಸ್ವಾತಿ ಕಾಣದ್ದರಿಂದ ಗಿಡದ ನಡುವೆ ಅಡಗಿ ಕೊಂಡಿರಬೇಕೆಂದು ಹುಡುಕಾಡಿದ್ದಾರೆ. ಸ್ವಲ್ಪ ಹೊತ್ತಿನ ಅನಂತರ ಮಕ್ಕಳು ಸ್ವಾತಿಯನ್ನು ಮನೆಯ ತನಕ ಹುಡುಕಿಕೊಂಡು ಹೋಗಿದ್ದಾರೆ. ಮನೆಯವರಲ್ಲಿ ಮಕ್ಕಳು ಸ್ವಾತಿಯನ್ನು ಹುಡುಕಿದರೂ ಸಿಗಲಿಲ್ಲವೆಂದು ತಿಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿ ಗ್ರಾಮದ ವಿನಾಯಕ ಸೋಮಿಲ್ ಸಮೀಪದ ನಿವಾಸಿ ಹರೀಶ ಜಿ.ಕೆ. (26) ಅವರು ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆರವಿನ ಅಗತ್ಯವಿದೆ. ಕುಟುಂಬದ ಆಧಾರಸ್ತಂಭವಾಗಿದ್ದ ಹರೀಶ ಜಿ.ಕೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಕಳೆದ ನಾಲ್ಕು ತಿಂಗಳ ಹಿಂದೆ ಇವರ ಎರಡೂ ಮೂತ್ರಪಿಂಡಗಳು ವೈಫಲ್ಯವಾಗಿದ್ದು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂ.ಗಳನ್ನು ಮೂತ್ರಪಿಂಡದ ಚಿಕಿತ್ಸೆಗಾಗಿ ಖರ್ಚು ಮಾಡಿರುವ ಇವರು ಮುಂದಿನ ಚಿಕಿತ್ಸೆಗಾಗಿ ಹಣ ಹೊಂದಿಸಲಾಗದೆ ಕಂಗಾಲಾಗಿದ್ದಾರೆ. ಮನೆಯಲ್ಲಿ ದುಡಿಯುವವರು ಬೇರೆ ಯಾರೂ ಇಲ್ಲವಾದ್ದರಿಂದ ಈ ಕುಟುಂಬ ಭಾರೀ ಅತಂತ್ರತೆಯಲ್ಲಿ ಸಿಲುಕಿದೆ. ನೆರವಿಗೆ ಮನವಿ: ಕಳೆದ ನಾಲ್ಕು ತಿಂಗಳಿನಿಂದ ಮೂತ್ರಪಿಂಡಗಳ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಹರೀಶ ಅವರಿಗೆ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಮಾಡುವ ಅನಿವಾರ್ಯತೆ ಇದೆ. ಡಯಾಲಿಸಿದ್ ಹಾಗೂ ಔಷಧೋಪಚಾರಕ್ಕಾಗಿ ಪ್ರತಿವಾರ ಸುಮಾರು 10 ಸಾವಿರ ರೂ.ಗಳ ಅವಶ್ಯತೆ ಇದ್ದು ಇಷ್ಟೊಂದು ಹಣವನ್ನು ಹೊಂದಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಭಟ್ಕಳ: ತಾಲೂಕಿನ ಅನಂತವಾಡಿ ಸಮೀಪ ರಾ.ಹೆ 66ರಲ್ಲಿ ಬೆಳಿಗ್ಗೆ ಖಾಸಗಿ ಬಸ್ ಹಾಗೂ ಟೆಂಪೋ ನಡುವಿನ ನಡೆದ ಭೀಕರ ಅಪಘಾತದಲ್ಲಿ ಮದುಮಗಳು ಸೇರಿದಂತೆ 7 ಮಂದಿ ದಾರುಣವಾಗಿ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿಗೆ ಗಾಯಗಳಾದ ಘಟನೆ ವರದಿಯಾಗಿದೆ. ಮೃತರನ್ನು ಮಧುಮಗಳು ದಿವ್ಯಾ ಕುರ್ಡೇಕರ್ (35), ಪಾಲಾಕ್ಷಿ (42), ಬೇಬಿ (38), ಸುಬ್ರಹ್ಮಣ್ಯ (15), ಖಾಸಗಿ ಬಸ್ ಚಾಲಕ ವಾಲ್ಮೀಕಿ (35), ಟೆಂಪೋ ಚಾಲಕ ನಾಗಪ್ಪ ಗಣಿಗಾರ್ (48) ಎಂದು ಗುರುತಿಸಲಾಗಿದೆ. ಸಿರಸಿ-ಧಾರವಾಡದಿಂದ ಮದುವೆಯ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಹೊನ್ನಾವರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಅನಂತವಾಡಿ ಬಳಿ ಮುಖಮುಖಿ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಟೆಂಪೋ ಮಗುಚಿ ಬಿದ್ದಿದ್ದು ಬಸ್ಸಿನ ಮುಂಭಾಗ ನಚ್ಚುಗುಜ್ಜಾಗಿದೆ. ಗಾಯಾಳುಗಳನ್ನು ಭಟ್ಕಳ, ಮುರ್ಡೇಶ್ವರ, ಕುಂದಾಪುರ ಹಾಗೂ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಹಾಗೂ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ : ಭಟ್ಕಳ ಸಮೀಪ ಅನಂತವಾಡಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ದಾಖಲಾದ ಕುಂದಾಪುರ ಖಾಸಗಿ ಆಸ್ಪತ್ರೆಗೆ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಭೇಟಿ ನೀಡಿ, ಗಾಯಗಳುಗಳಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾರಣ ಅಪಘಾತಗಳು ಹೆಚ್ಚಾಗಿದೆ. ರಸ್ತೆ ಸೂಚನಾ ನಿಯಮ ಅನುಸರಿಸಲು ವಿಫಲರಾದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಈ ಬಗ್ಗೆ ಎಸ್ಪಿ, ಎಎಸ್ಪಿ ಮತ್ತು ರಸ್ತೆ ನಿರ್ಮಾಣದ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತೇನೆ. ಕೆಲಸ ಸರಿಯಾಗಿ ನಿರ್ವಹಿಸದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. ಆದಾಯ ತೆರಿಗೆ ಇಲಾಖೆಯಿಂದ ಗಾಯಗೊಂಡ ವ್ಯಕ್ತಿಗಳಿಗೆ 5,೦೦೦ ರೂ. ಹಾಗೂ ಹೆಚ್ಚಿನ ಅನುದಾನದ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತರುತ್ತೇನೆ. ಗಾಯಗೊಂಡವರಿಗೆ ಸಹಾಯ ಮಾಡಲು ಪೊಲೀಸ್ ಇಲಾಖೆ ಸಿದ್ಧವಿದೆ ಎಂದರು. ಕಾರವಾರ ಎಸ್ಪಿ ವಿನಾಯಕ್ ಪಟೇಲ್, ಡಿವೈಎಸ್ಪಿ ಪ್ರವೀಣ್ ಕುಮಾರ್ ಮತ್ತು ಪೋಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಮಂಜಪ್ಪ ಇದ್ದರು. ಭಟ್ಕಳ: ಭೀಕರ ಅಪಘಾತದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಜವುಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಆಗಮಿಸಿ ಬುಧವಾರ ತನ್ನ 60ನೇ ಹುಟ್ಟುಹಬ್ಬದ ಸಲುವಾಗಿ ಚಂಡಿಕಾ ಹೋಮ ಸೇವೆ ಸಲ್ಲಿಸಿದರು. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಆರ್ಥಿಕವಾಗಿ ಬಲಿಷ್ಠವಾಗಿರುವ ಮುಜರಾಯಿ ದೇವಸ್ಥಾನಗಳನ್ನು ಗುರುತಿಸಿ ಆ ಮೂಲಕ ಮುಜರಾಯಿ ಇಲಾಖೆಯ ಆದಾಯವಿಲ್ಲದ ಸಣ್ಣ ದೇವಸ್ಥಾನಗಳನ್ನು ದತ್ತು ಸ್ವೀಕರಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಲ್ಲೂರು ದೇವಸ್ಥಾನದಲ್ಲಿರುವ 76 ನೌಕರರನ್ನು ಖಾಯಂಗೊಳಿಸುವ ಬಗ್ಗೆ ಸರಕಾರದೊಡನೆ ಚರ್ಚಿಸಲಾಗಿದ್ದು ಅತೀ ಶೀಘ್ರದಲ್ಲೇ ಅವರನ್ನು ಖಾಯಂಗೊಳಿಸಲಾಗುವುದು ಎಂದರು. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿನ ಕಾರ್ಯನಿರ್ವಹಧಿಣಾಕಾರಿ ಸಹಿತ ಖಾಲಿ ಇರುವ ಹುದ್ದೆಗಳಿಗೆ ತತ್‌ಕ್ಷಣ ನೇಮಕ ಮಾಡಲಾಗುವುದು. ಕೊಲ್ಲೂರಿನಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಹಮ್ಮಿಕೊಳ್ಳಲಾದ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಭೋಜನ ಶಾಲೆ ನಿರ್ಮಾಣದ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿಗ್ಗಜರನ್ನು ಗುರುತಿಸಿ ನೀಡಲಾಗುತ್ತಿರುವ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯು ಬೈಂದೂರಿನ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ದೊರಕಿದೆ. ಪ್ರಸ್ತುತ ಕತಾರಿನಲ್ಲಿ ನೆಲೆಸಿರುವ ಸುಬ್ರಹ್ಮಣ್ಯ ಅವರು ಕನ್ನಡ ನಾಡು ನುಡಿಗಾಗಿ ಸಲ್ಲಿಸಲಾಗುತ್ತಿರುವ ಸೇವೆಯನ್ನು ಗುರುತಿಸಿ ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಕತಾರ್‌ನಲ್ಲಿ ಪಸರಿಸುತ್ತಿರುವ ಸುಬ್ರಹ್ಮಣ್ಯ ಅವರು ಕತಾರ್ ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತಾರ್ ಕರ್ನಾಟಕ ಸಂಘದ ಮೂಲಕ ಹತ್ತಾರು ಕನ್ನಡಪರ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 2013-15ನೇ ಸಾಲಿನಲ್ಲಿ ಕರ್ನಾಟಕ ಸಂಘ ಕತಾರಿನ ಸದಸ್ಯತ್ವ ನೋಂದಣಿ ಸಂಚಾಲಕರಾಗಿ, ಕಾರ್ಯಕಾರಣಿ ಸಮಿತಿಯ ಖಜಾಂಜಿಯಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ಕ್ರೀಯಾಶೀಲ ವ್ಯಕ್ತಿತ್ವ, ಸಮಾಜ ಸೇವೆಯಡೆಗಿನ ನಿರಂತರ ತುಡಿತ ಹಾಗೂ ಅತ್ಯುತ್ತಮ ಸಂಘಟನಾ ಕೌಶಲ್ಯದಿಂದ ಸುಬ್ರಹ್ಮಣ್ಯ ಎಲ್ಲರ ಮೆಚ್ಚುಗೆಗೆ ಪಾತ್ರರಾದವರು. ಕತಾರ್ ಕರ್ನಾಟಕ ಸಂಘಕ್ಕೆ ಕನ್ನಡಿಗರನ್ನು ಸದಸ್ಯರನ್ನಾಗಿ ಸೇರಿಸುವಲ್ಲಿ ಹಾಗೂ ಈ ಭಾಗದಲ್ಲಿ ವಿವಿಧ…

Read More

ಹತ್ತು ಹಲವು ಸೌಲಭ್ಯಗಳೊಂದಿಗೆ ಉಚಿತ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಕುಂದಾಪ್ರ ಡಾಟ್ ಕಾಂ ವರದಿ.  ಗಂಗೊಳ್ಳಿ: ಸರಕಾರಿ ಶಾಲೆಗಳಿಂದ ಮಕ್ಕಳು ವಿಮುಖರಾಗಿ ಖಾಸಗಿ ಶಾಲೆಗಳತ್ತ ಮುಖಮಾಡುತ್ತಿರುವ ಕಾಲಘಟ್ಟದಲ್ಲಿ ಹಳೆ ವಿದ್ಯಾರ್ಥಿಗಳು ಮಾತ್ರ ತಾವು ಕಲಿತ ಸರಕಾರಿ ಶಾಲೆಗಳ ಉಳಿವಿಗೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಲೇ ಬಂದಿದ್ದಾರೆ. ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆದು ಸರಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ದೊರೆಯುವಂತೆ ಮಾಡುವುದರ ಜೊತೆಗೆ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಸತತವಾಗಿ ಶ್ರಮಿಸುತ್ತ ತಾವು ಕಲಿತ ತಮ್ಮೂರಿನ ಶಾಲೆಯ ಶ್ರೇಯಸ್ಸಿನಲ್ಲಿ ತೊಡಗಿಕೊಂಡಿದ್ದಾರೆ ಎಂಬುದು ಸರಕಾರಿ ಶಾಲೆಗಳ ಉಳಿವಿನ ಬಗೆಗೊಂದು ಆಶಾಭಾವನೆ ಮೂಡಿಸಿದೆ. ಶತಮಾನ ಪೂರೈಸಿರುವ ಗಂಗೊಳ್ಳಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ಇಂತಹದ್ದೊಂದು ಪ್ರಯತ್ನವನ್ನು ಕಳೆದ ಎರಡು ದಶಕಗಳ ಹಿಂದಿನಿಂದಲೇ ಆರಂಭಿಸಿಕೊಂಡು ಬಂದಿದ್ದು ಶಾಲೆಯ ಸರ್ವತೋಮುಖ ಏಳಿಗೆಯಲ್ಲಿ ಜೊತೆಯಾಗಿದ್ದಾರೆ. ಹಳೆ ವಿದ್ಯಾರ್ಥಿಗಳ ನಿರಂತರ ಪ್ರಯತ್ನದಿಂದಾಗಿ ಪ್ರಸ್ತುತ ವರ್ಷದಿಂದ ಶಾಲೆಗೆ ಮಕ್ಕಳ ದಾಖಲಾತಿಯೂ ಹೆಚ್ಚಿದೆ. ಶತಮಾನ ಕಂಡ ಶಾಲೆ: 1895ರಲ್ಲಿ ದಿ. ಶಾಬುದ್ದೀನ್ ಅಬ್ದುರ್ರಹೀಮ್…

Read More