Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದೇಶಕ್ಕೆ ಸ್ವಾತಂತ್ರ್ಯ ಬಂದು ೭ ದಶಕ ಪೂರೈಸುವ ಅವಧಿಯಲ್ಲಿದ್ದೇವೆ. ದೇಶದ ಮೂಲಭೂತ ಸೌಕರ‍್ಯಕ್ಕೆ ಕೇಂದ್ರ ರಾಜ್ಯ ಸರಕಾರ ಕೋಟ್ಯಾಂತರ ಹಣ ಖರ್ಚು ಮಾಡಿದೆ. ಆದಾಗ್ಯೂ ಈಗಲೂ ಬಡತನ, ನಿರುದ್ಯೋಗ ಹಸಿವು ಮಹಿಳೆಯರ ಮೇಲೆ ದೌರ್ಜನ್ಯ ಜಾತಿ ತಾರತಮ್ಯ ಅಸ್ಪೃಶ್ಯತೆ ಕಡಿಮೆಯಾಗಲಿಲ್ಲ. ಬದಲಿಗೆ ಹೆಚ್ಚುತ್ತಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರತ್ನ ನಾಡ ಹೇಳಿದರು. ಮನೆ ನಿವೇಶನ ರಹಿತರ ಅರ್ಜಿದಾರರ ಬೃಹತ್ ಸಮಾವೇಶವನ್ನು ಗಂಗೊಳ್ಳಿ ವಿರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ದೇಶಾದ್ಯಂತ ೨೦ ಕೋಟಿ, ರಾಜ್ಯದಲ್ಲಿ ೧ ಕೋಟಿಗೂ ಹೆಚ್ಚು ಕೃಷಿ ಕೂಲಿಕಾರರು ಇದ್ದಾರೆ. ಪ್ರತಿಯೊಬ್ಬನ ತಲೆ ಮೇಲೊಂದು ಸೂರು ನಮ್ಮ ಮೂಲಭೂತ ಹಕ್ಕು. ನಮ್ಮ ಹಕ್ಕನ್ನು ಪಡೆಯಲು ಹೋರಾಟ ಚಳವಳಿಯನ್ನು ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಬೈಂದೂರು ಹಾಗೂ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರ ಮನೆ ಮುಂದೆ ನಿವೇಶನ ರಹಿತರಿಂದ ಭೂಮಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರ, ಪಟ್ಟಣ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅನುಕೂಲವಿದ್ದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಂಟ ಸಮಾಜ ಯುವಕರು ಹಿರಿಯರ ಮಾರ್ಗದರ್ಶನಲ್ಲಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳ ತೆರೆಯುವ ಮೂಲಕ ಎಲ್ಲರಿಗೂ ಉತ್ತಮ ಶಿಕ್ಷಣ ಸಿಗುವಂಣh ವ್ಯವಸ್ಥೆಗೆ ಮುಂದಾಗಬೇಕು. ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ಬಂಟರ ಸಂಘ ಗೌರವ ಪ್ರಧಾನ ಕಾರ‍್ಯದರ್ಶಿ ಜಪ್ತಿ ಸಂತೋಷ ಶೆಟ್ಟಿ ಸಲಹೆ ಮಾಡಿದ್ದಾರೆ. ಕುಂದಾಪುರ ತಾಲೂಕು ಯುವ ಬಂಟರ ಸಂಘ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಬಂಟ್ಸ್ ಕ್ರಿಕೆಟ್ ಟ್ರೋಪಿ ಉದ್ಘಾಟಿಸಿ, ಮಾತನಾಡುತ್ತಿದ್ದರು. ಬಾಂಬೆ ಹೊರತು ಹೊರತು ಪಡಿಸಿದರೆ ಬಂಟ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಧಾನ್ಯತೆ ಸಿಗುತ್ತಿಲ್ಲ. ಬಂಟ ಸಮುದಾಯದ ಹಿರಿಯರು ಯುವ ಬಂಟರನ್ನ ರಾಜಕೀಯದಲ್ಲಿ ಬೆಳಸುವ ಮೂಲಕ ರಾಜಕೀಯ ಪ್ರಧಾನತೆ ಸಿಗುವಂತೆ ಮಾರ್ಗದರ್ಶನ ನೀಡಬೇಕು ಎಂದು ಅವರು ಸಲಹೆ ಮಾಡಿದರು. ಕುಂದಾಪುರ ತಾಲೂಕು ಯುವ ಬಂಟ ಸಂಘ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಬಿಜೆಪಿ ಪಕ್ಷವನ್ನು ಸೇರಿದ ಬಳಿಕ ಮೊದಲ ಭಾರಿಗೆ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಕುಂದಾಪುರ ಬಿಜೆಪಿ ಪದಾಧಿಕಾರಿಗಳು ಜೆಪಿ ಹೆಗ್ಡೆ ಅವರನ್ನು ಬರಮಾಡಿಕೊಂಡು ಘೋಷಣೆಯೊಂದಿಗೆ ಪಕ್ಷದ ಕಛೇರಿಗೆ ಸ್ವಾಗತಿಸಿಕೊಂಡರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆ.ಪಿ ಹೆಗ್ಡೆ, ಕಾರ‍್ಯಕರ್ತರ ಬಲ ಜೊತೆಗಿದ್ದರೇ ನಾಯಕರಿಗೆ ಆನೆ ಬಲ ಬಂದಂತಾಗುತ್ತದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಎಲ್ಲರೂ ಒಟ್ಟು ಸೇರಿದರೆ ಪಕ್ಷಕ್ಕೆ ಶಕ್ತಿ ಬರುತ್ತದೆ. ಒಗ್ಗಟ್ಟಾಗಿ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಅಭಿವೃದ್ಧಿಯ ಚಿಂತನೆ: ಈ ಹಿಂದೆ ಶಾಸಕನಾಗಿದ್ದಾಗ ಬ್ರಹ್ಮಾವರ ತಾಲೂಕು ಕೇಂದ್ರವಾಗಿ ಪರಿವರ್ತಿಸುವ ಚಿಂತನೆಯನ್ನು ಗಟ್ಟಿಗೊಳಿಸಿದ್ದೆ. ಗುಲ್ವಾಡಿ ಕಿಂಡಿ ಆಣೆಕಟ್ಟು ನಿರ್ಮಾಣ ಮಾಡಿದ್ದರಿಂದ ಇಂದು ಕುಂದಾಪುರ ಪುರಸಭೆಗೆ ಶಾಶ್ವತ ಕುಡಿಯುವ ನೀರು ದೊರಕಿದೆ. ಕುಂದಾಪುರ ಪುರಸಭೆ ಒಳಚರಂಡಿ ಯೋಜನೆ ಕೂಡಾ ಸಂಸದನಾಗಿದ್ದ ಕಾಲದಲ್ಲಿ ಮಂಜೂರಾಗಿತ್ತು. ಕಾರ‍್ಯಕರ್ತರು ಅಭಿವೃದ್ದಿ ಹಾಗೂ ಸಮಸ್ಯೆ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಬ್ಬರು ಸರಗಳ್ಳರನ್ನು ಕೋಟ ಪೊಲೀಸ್‌ ಠಾಣೆಯ ಸಿಬ್ಭಂದಿಯೋರ್ವರು ಸಾಹಸ ಮೆರೆದು ಬಂಧಿಸಿದ್ದು, ಆರೋಪಿಗಳನ್ನು ಬುಧವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನಾವುಂದ ನಿವಾಸಿಗಳಾದ ನಾಗೇಶ ಖಾರ್ವಿ(22), ಮಧುಕರ ಖಾರ್ವಿ (25) ಆರೋಪಿಗಳು. ಬೈಕ್‌ನಲ್ಲಿ 15 ಕಿ.ಮೀ. ಬೆನ್ನಟ್ಟಿ ಬಂಧನ ಆರೋಪಿಗಳು ಸೋಮವಾರ ರಾತ್ರಿ ಪಲ್ಸರ್‌ ಬೈಕ್‌ನಲ್ಲಿ ಬಂದು ಸಾಲಿಗ್ರಾಮ ಸಮೀಪ ಕಾರ್ಕಡ ಹಿ.ಪ್ರಾ. ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳ ಕುತ್ತಿಗೆಯಿಂದ ಸರ ಅಪಹರಿಸಲು ಪ್ರಯತ್ನಿಸಿದ್ದು, ಈ ಸಂದರ್ಭ ಆಕೆ ಜೋರಾಗಿ ಕೂಗಿಕೊಂಡಿದ್ದರು. ಆಗ ಸಮೀಪ ಕರ್ತವ್ಯ ನಿರತರಾಗಿದ್ದ ಕೋಟ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಪ್ರದೀಪ್‌ ನಾಯಕ್‌ ಬೈಕ್‌ನಲ್ಲಿ ಅವರನ್ನು ಬೆನ್ನಟ್ಟಿದ್ದು, ಆರೋಪಿಧಿಗಳು ಬೈಕಿನಲ್ಲಿ ಬ್ರಹ್ಮಾವರ ಕಡೆಗೆ ವೇಗವಾಗಿ ಸಾಗಿದರು. ಅನಂತರ ಬ್ರಹ್ಮಾವರ ಆಕಾಶವಾಣಿ ಸರ್ಕಲ್‌ನಿಂದ ಬಾಕೂìರು ರಸ್ತೆಯ ಮೂಲಕ ಪರಾರಿಯಾಗಲು ಯತ್ನಿಸಿದಾಗ ಪ್ರದೀಪ್‌ ನಾಯಕ್‌ ಕೂಡ ಅಷ್ಟೇ ವೇಗದಲ್ಲಿ ಅವರನ್ನು ಬೆನ್ನಟ್ಟಿ ಘಟನೆ ಈ ಕುರಿತು ಸ್ಥಳೀಯರಿಗೆ ಹಾಗೂ ಉನ್ನತ ಪೊಲೀಸ್‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ ದೇವಾಡಿಗ (36) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ. ಬೈಂದೂರು ವಿದ್ಯಾನಗರ ನಿವಾಸಿಯಾದ ಸುಬ್ರಹ್ಮಣ್ಯ ಅವರು ಅತಿಥಿ ಉಪನ್ಯಾಸಕರಾಗಿ ಬೈಂದೂರು ಕಾಲೇಜು ಹಾಗೂ ಭಟ್ಕಳದ ಸಿದ್ಧಾರ್ಥ ಕಾಲೇಜಿನಲ್ಲಿ ಸೇವೆಸಲ್ಲಿಸುತ್ತಿದ್ದರು. ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಿರ್ದೇಶಕಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಓರ್ವ ಸಹೋದರ, ಈರ್ವರು ಸಹೋದರಿಯರು, ಬಂಧುಗಳು ಹಾಗೂ ವಿದ್ಯಾರ್ಥಿ ವೃಂದವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನದ ಸಾನಿಧ್ಯ ಸಂಕೋಚ ಹಾಗೂ ಬಾಲಾಲಯ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮಗಳು ಎರಡು ದಿನಗಳ ಪರ್ಯಾಂತ ಸಾಂಗವಾಗಿ ಜರುಗಿದವು. ಶ್ರೀ ದೇವಳದ ಅಮೂಲಾಗ್ರ ಜೀಣೋದ್ಧಾರದ ಪ್ರಯುಕ್ತ ವೇದಮೂರ್ತಿ ಕುತ್ಯಾರು ಕೇಂಜಿ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಸಾನಿಧ್ಯ ಸಂಕೋಚ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮಗಳು ಜರುಗಿದವು. ನಾಗದೇವರ ದರ್ಶನ, ಕಾಲಭೈರವ ದೇವರ ದರ್ಶನ, ವಿವಿಧ ಹೋಮ ಹವನಾದಿಗಳು ಜರುಗಿದವು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ವೆಂಕಟ ಪೂಜಾರಿ, ಧಾರ್ಮಿಕ ಮುಂದಾಳು ಬಿ.ಎಂ. ಸುಕುಮಾರ ಶೆಟ್ಟಿ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಗಂಗಾನಾಡು, ತೊಕ್ತಿ, ಕ್ಯಾರ್ತೂರು, ಎತ್ತೆಬೇರು ಗ್ರಾಮಗಳಿಗೆ ತಾಲೂಕು ಪಂಚಾಯತ್ ಅನುದಾನದಡಿಯಲ್ಲಿ ಅಳವಡಿಸಲಾದ ಸೋಲಾರ್ ದೀಪಗಳನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವೆಂಕಟ ಪೂಜಾರಿ, ಭಾಸ್ಕರ ಮರಾಠಿ, ಸ್ಥಳೀಯ ಸಿ.ಜೆ. ಪೌಲೋಸ್ ಹಾಗೂ ಇತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಲ್ಲಿ ಮಹಿಳೆಯರನ್ನು ಪೂಜಿಸಲಾಗುತ್ತದೆಯೋ ಅಲ್ಲಿ ದೇವತೆಗಳು ಸಂತುಷ್ಟರಾಗುತ್ತಾರೆ ಎನ್ನುವ ಮಾತನ್ನು ಇಟ್ಟುಕೊಂಡೆ, ಬಾಲ್ಯದಲ್ಲಿ ತಂದೆ-ತಾಯಿಯ ಆಶ್ರಯದಲ್ಲಿ, ಯೌವನದಲ್ಲಿ ಸಂಗಾತಿಯ ಆಶ್ರಯದಲ್ಲಿ, ಮುಪ್ಪಿನಲ್ಲಿ ಮಕ್ಕಳ ಆಶ್ರಯದಲ್ಲಿ ಮಹಿಳೆ ಬೆಳೆಯುವುದರಿಂದ ಆಕೆ ಸಮಾನ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎನ್ನುವ ದ್ವಂದ್ವ ವಾದದ ನಡುವೆ ಮಹಿಳೆಯರು ಇಂದು ಸಮಾಜದಲ್ಲಿ ಸಾಕಷ್ಟು ಪ್ರಬಲರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನು ಜ್ಞಾನ ಕೂಡಾ ಅತೀ ಅಗತ್ಯ ಎಂದು ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಬಾರ್ ಅಸೋಸಿಯೇಶನ್ ಕುಂದಾಪುರ, ಅಭಿಯೋಜಕ ಇಲಾಖೆ ಕುಂದಾಪುರ, ಜೆಸಿಐ ಕುಂದಾಪುರ, ರೋಟರಿ ಕುಂದಾಪುರ, ಮಹಾವಿಷ್ಣು ಯುವಕ ಮಂಡಲ (ರಿ) ಹರೇಗೋಡು, ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕುಂದಾಪುರ , ಮಾನಸತಿ ಯುವತಿ ಮಂಡಲ ಹರೇಗೋಡು ಹಾಗೂ ಶ್ರೀ ಸಾಯಿ ಮಂಟಪ ಶ್ಯಾಮಿಯಾನ ಮತ್ತು ಡೆಕೊರೇಟರ‍್ಸ್ ಕಟ್ಟು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವ್ಯಾಸರಾಜ ಮಠದಲ್ಲಿ ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ನವೀಕೃತಗೊಂಡ ಶ್ರೀ ರಾಮಚಂದ್ರತೀರ್ಥ ಶ್ರೀ ಪಾದಂಗಳರವರ ಮತ್ತು ಶ್ರೀ ಹಯಗ್ರೀವ ತೀರ್ಥ ಶ್ರೀಪಾದಂಗಳರವರ ವೃಂದಾವನಗಳ ಉದ್ಘಾಟನೆಯನ್ನು ಮಠಾದೀಶರಾದ ಪೂಜ್ಯ ಶ್ರೀ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀ ಪಾದಂಗಳರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ವೇದಮೂರ್ತಿ ಶ್ರೀ ವಿಜಯ ಪೆಜತ್ತಾಯ ಇವರ ನೇತೃತ್ವದಲ್ಲಿ ವೃಂದಾವನಗಳ ಸ್ಥಾನ ಶುಧ್ಧಿ, ವಾಸ್ತು ಪೂಜೆ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ಪುಣ್ಯಾಹವಾಚನ, ವೃಂದಾವನ ಶುದ್ಧಿ, ಪವಮಾನ ಹೋಮ, ವಿರಾಜಮಂತ್ರ ಹೋಮ, ನವಕ ಪ್ರಧಾನ ಹೋಮ, ಆಶ್ಲೇಷಾ ಬಲಿ ಸೇರಿದಂತೆ ಅನೇಕ ದಾರ್ಮಿಕ ವಿಧಿ ವಿಧಾನಗಳು ನಡೆದವು. ಸಮಾಜ ಭಾಂದವರಿಂದ ಶ್ರೀ ಗುರುಗಳ ಪಾದ ಪೂಜೆ, ಹಾಗೂ ಗುರುಗಳಿಂದ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು. ತಾಲೂಕು ಗಾಣಿಗ ಸೇವಾ ಸಂಘ ಅಧ್ಯಕ್ಷ ಶ್ರೀನಿವಾಸ ಗಾಣಿಗ, ಕಾರ್ಯದರ್ಶಿ ಶಿವಾನಂದ ರಾವ್, ಕೋಶಾಧಿಕಾರಿ ಶಂಕರನಾರಾಯಣ ಗಾಣಿಗ, ಹೊಟೇಲ್ ಉದ್ಯಮಿಗಳಾದ ಹಳ್ಳಿಮನೆ ಸಂಜೀವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಕಾರ‍್ಯಕ್ರಮ ಜರುಗಿತು. ಉಡುಪಿ ಎ.ವಿ.ಬಾಳಿಗ ಅಡ್ಮಿನಿಸ್ಟ್ರೇಟರ್ ಶ್ರೀಮತಿ. ಸೌಜನ್ಯ ಶೆಟ್ಟಿ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಬಳಿಕ ಮಾತನಾಡಿ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವವಾಗಿದೆ ಮಕ್ಕಳು ಹಿರಿಯರು ಹೇಳಿದ್ದನ್ನು ಕೇಳುವುದಿಲ್ಲ, ಬದಲಾಗಿ ನಾವು ಮಾಡುವುದನ್ನು ಅನುಕರಣೆ ಮಾಡುತ್ತಾರೆ. ಮಕ್ಕಳ ಮನಸ್ಸು ಹೂವಿನಂತೆ ಮೃದುವಾಗಿರುತ್ತದೆ. ಅವರ ಸೂಕ್ಷ್ಮತೆಗಳನ್ನು ಅರಿತು ಅರ್ಥೈಸಿಕೊಳ್ಳಬೇಕಾಗಿರುವುದು ಪೋಷಕರ ಕರ್ತವ್ಯ. ಮಕ್ಕಳಿಗೆ ಹೊಡೆಯುವುದರಿಂದ ಅವರ ಬೆಳವಣಿಗೆಯ ವ್ಯಕ್ತಿತ್ವವನ್ನು ಚಿವುಟಿದಂತಾಗುತ್ತದೆ. ಆ ನಿಟ್ಟಿನಲ್ಲಿ ಪೋಷಕರು ಶಿಕ್ಷಕರ ಜೊತೆಗೂಡಿ ಸಹಕರಿಸಿದಾಗ ಉತ್ತಮ ಮಕ್ಕಳನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆಯೆಂದು ನುಡಿದರು. ಈ ಸಂದರ್ಭದಲ್ಲಿ ಬಾಂಡ್ಯ ಶಿಕ್ಷಣಸಂಸ್ಥೆಯ ಜಂಟಿ ಕಾರ‍್ಯನಿರ್ವಾಹಕಿ ಅನುಪಮ. ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲರಾದ ಸಾಯಿಜು ಕೆ. ಆರ್. ನಾಯರ್ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಐಸಿರಿ ಮತ್ತು ವೇದಾಂತ್ ಕಾರ‍್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಆದ್ಯಾ ಶೆಟ್ಟಿ ಸ್ವಾಗತಿಸಿದರು. ಮೂಸಾ…

Read More