ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿಯಲ್ಲಿ, ಕೋಟೇಶ್ವರ ಶ್ರೀದೇವಿ ಡೆಂಟಲ್ ಕ್ಲಿನಿಕ್ನ ಡಾ. ಜಗದೀಶ್ ಹಾಗೂ ಅವರ ತಂಡವು ದಂತ ಆರೈಕೆ ಮತ್ತು ಹಲ್ಲುಗಳ ಸ್ವಚ್ಛತೆಯ ಕುರಿತ ವಿಶೇಷ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕೋಟೇಶ್ವರದ ಶ್ರೀದೇವಿ ದಂತ ಚಿಕಿತ್ಸಾಲಯದ ಡಾ. ಜಗದೀಶ್ ಅವರು ಪುಟ್ಟ ಮಕ್ಕಳಿಗೆ , ಹಲ್ಲುಗಳನ್ನು ಸರಿಯಾಗಿ ಬ್ರಷ್ ಮಾಡುವ ವಿಧಾನ ಹಾಗೂ ದಂತ ಆರೋಗ್ಯದ ಮಹತ್ವವನ್ನು ದಂತಪಂಗ್ತಿಯ ವಿಶೇಷ ಆಕರ್ಷಕ ಮಾಡೆಲ್ ಗಳೊಂದಿಗೆ ವಿವರಿಸಿ ಅರ್ಥೈಸಿದರು.ವಿದ್ಯಾ ಅಕಾಡೆಮಿಯ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿ ವೈದ್ಯರು ಹೇಳಿದ್ದನ್ನು ಪಾಲಿಸಿ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುತ್ತೇವೆಂದು ವೈದ್ಯರಿಗೆ ಭರವಸೆಯಿತ್ತರು.ಈ ಸಂದರ್ಭದಲ್ಲಿ ಐಎಂಜೆ ಸಂಸ್ಥೆಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ ಮಾತನಾಡಿ, ವಿದ್ಯಾ ಅಕಾಡೆಮಿಯ ಪ್ರಯತ್ನವನ್ನು ಶ್ಲಾಘಿಸಿ, ಮಕ್ಕಳಲ್ಲಿ ದಂತ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಿದ ಡಾ. ಜಗದೀಶ್ ಮತ್ತು ಅವರ ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಅವರು, ಐಎಂಜೆ ಗುಂಪಿನ ಎಲ್ಲಾ ಸಂಸ್ಥೆಗಳು ಸದಾ ವಿದ್ಯಾರ್ಥಿಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ, ಗ್ರಾಫಿಕ್ಸ್ ಮತ್ತು ಶಿಲ್ಪಕಲೆ ವಿಭಾಗಕೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ನಡೆದ ಸಿಬಿಎಸ್ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿರು. ಈ ಪಂದ್ಯಾಟದಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 84 ತಂಡಗಳು ಭಾಗವಹಿಸಿದ್ದವು. ವಿಜೇತರಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 110ನೇ ತಿಂಗಳ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ನೇತಾಜಿ ಕಮಿಟಿ ಫ್ರೆಂಡ್ಸ್ ಇವರ ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಕುದ್ರಿನ ಮುಖ್ಯೋಪಾಧ್ಯಾಯ ರಾಘವೇಂದ್ರ, ಅಂಗನವಾಡಿ ಉಪಾಧ್ಯಾಯಿನಿಯರಾದ ಪ್ರೇಮಲತಾ ಗಣೇಶ್ ಸೇರುಗಾರ, ಸಂಗೀತಾ, ಲಲಿತಾ, ಆಶಾ ಕಾರ್ಯಕರ್ತೆಯರಾದ ಜ್ಯೋತಿ ಪೂಜಾರಿ, ಸಂಗೀತಾ, ನೇತಾಜಿ ಕಮಿಟಿ ಫ್ರೆಂಡ್ಸ್ನ ಅಧ್ಯಕ್ಷ ರಾಘವೇಂದ್ರ ಪೈ, ನಾಗಶ್ರೀ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ರಾಘವೇಂದ್ರ ಪೈ ಅವರನ್ನು ಗೊಂಬೆಯಾಟ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನೇತಾಜಿ ಕಮಿಟಿ ಫ್ರೆಂಡ್ಸ್ನ ವತಿಯಿಂದ ಕ್ರೀಡಾಪಟು ನಾಗಶ್ರೀ ಗಣೇಶ ಸೇರುಗಾರ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಸ್ಥಳೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದರು. ರಾಜೇಂದ್ರ ಪೈ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಡದೋಣಿಯ ಮೂಲಕ ಮೀನುಗಾರಿಕೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಹಿನ್ನಲ್ಲೆಯಲ್ಲಿ ಅದರಲ್ಲಿದ್ದ ಓರ್ವ ಮೀನುಗಾರ ಮೃತಪಟ್ಟು, ಇಬ್ಬರು ಪ್ರಾಣಪಾಯದಿಂದ ಪಾರಾದ ಘಟನೆ ಸಾಸ್ತಾನದ ಕೋಡಿತಲೆ ಅಳಿವೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಮೃತಪಟ್ಟ ಮೀನುಗಾರ ಶರತ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಶಂಕರ್ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಅಕ್ಷಯ ಖಾರ್ವಿ, ಮಂಜುನಾಥ್ ಖಾರ್ವಿ ಹಾಗೂ ಶರತ್ ಖಾರ್ವಿ ಈ ಮೂವರು ಮೀನುಗಾರರು ಮೀನುಗಾರಿಕೆ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೂವರು ನೀರುಪಾಲಗಿದ್ದರು. ಅಕ್ಷಯ ಖಾರ್ವಿ ಹಾಗೂ ಮಂಜುನಾಥ್ ಖಾರ್ವಿ ಅವರು ಈಜಿ ದಡ ಸೇರಿದ್ದರು. ಆದರೆ ಶರತ್ ಖಾರ್ವಿ ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟಿರು. ಅದೃಷ್ಠವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದ ಮಂಜುನಾಥ್ ಖಾರ್ವಿ, ಅಕ್ಷಯ್ ಖಾರ್ವಿ ಇಬ್ಬರು ಮೀನುಗಾರರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಣಿ ಸಮುದ್ರ ಪಾಲಾಗಿದ್ದು ಲಕ್ಷಾಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪ್ರತಿ ಮಗುವಿಗೆ ತಲಾ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಸೆಪ್ಟಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ) ಬೈಂದೂರು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಜನ್ಮದಿನಾಚರಣೆಯನ್ನು ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಯಿಸಲಾಯಿತು. ಈ ವೇಳೆ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರುಗಳು ಹಾಗೂ ಬೈಂದೂರು ಎನ್.ಎಸ್.ಯು.ಐ ಪದಾಧಿಕಾರಿಗಳು ಜೊತೆಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ವಿದ್ಯಾ ದೀವಿಗೆ ಯೋಜನೆಯಡಿ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 95 ಶೇಕಡಕ್ಕಿಂತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಯುವ ಸಾಧಕರಿಗೆ ಸನ್ಮಾನ, ದಿ| ಡಾ. ಮಧುಕರ ಶೆಟ್ಟಿ ಐ.ಪಿ.ಎಸ್ ಸಂಸ್ಕರಣಾ ಪ್ರಶಸ್ತಿ -2025, ದಿ. ಡಾ. ಗೋಪಾಲ ಕೃಷ್ಣ ಶೆಟ್ಟಿ ಸಂಸ್ಕರಣಾ ಪ್ರಗತಿಪರ ಕೃಷಿಕ ಪ್ರಶಸ್ತಿ, ಹಿರಿಯ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಅಗಸ್ಟ್ 24ರ ಭಾನುವಾರ ಬೆಳಿಗ್ಗೆ ಇಲ್ಲಿನ ಆರ್. ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ವಹಿಸಲಿದ್ದಾರೆ. ದುಬೈ ಫಾರ್ಚ್ಯುನ್ ಗ್ರೂಫ್ ಆಫ್ ಹೋಟೇಲ್ಸ್ ಸಿಎಂಡಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಘಟಪ್ರಭಾ ಮನೀಷ್ ಗ್ರೂಫ್ ಆಫ್ ಹೋಟೇಲ್ಸ್ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರರಿಗೆ ಮೋಟಾರ್, ಬಲೆ, ಮತ್ತಿತರ ಸಲಕರಣೆಗಳನ್ನು ಖರೀದಿಸಲು ಸರಕಾರ ವಿವಿಧ ಯೋಜನೆಯಡಿ ಕೆನರಾ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ವಿತರಿಸಲಾಗುತ್ತಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ 50 ಸಾವಿರದಿಂದ ಸಾಲ ಸೌಲಭ್ಯ ನೀಡಲಾಗುತ್ತದೆ. ಸ್ವಸಹಾಯ ಸಂಘಗಳ ಮೂಲಕ ಸ್ತ್ರೀಶಕ್ತಿ ಯೋಜನೆಯಡಿ ಸ್ವ ಉದ್ಯೋಗ ನಡೆಸಲು ಆರ್ಥಿಕ ಸಹಾಯವನ್ನು ಬ್ಯಾಂಕ್ ಮೂಲಕ ಒದಗಿಸಲಾಗುತ್ತದೆ ಎಂದು ಕೆನರಾ ಬ್ಯಾಂಕಿನ ಉಡುಪಿ ವೃತ್ತ ಕಚೇರಿಯ ಎಜಿಎಂ ಟಿ.ಎ.ಎಸ್. ಪೂರ್ಣಾನಂದ ಹೇಳಿದರು. ಅವರು ಗಂಗೊಳ್ಳಿ ಕೆನರಾ ಬ್ಯಾಂಕ್ ಶಾಖೆ ವತಿಯಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆದ ಮೀನುಗಾರರಿಗೆ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಅರ್ಹ ಮೀನುಗಾರ ಫಲಾನುಭವಿಗಳಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅರ್ಹ ಮೀನುಗಾರ ಫಲಾನುಭವಿಗಳಿಗೆ ಸಾಲ ವಿತರಿಸಿ ಮಾತನಾಡಿದ ಕೆನರಾ ಬ್ಯಾಂಕಿನ ಉಡುಪಿ ವೃತ್ತ ಕಚೇರಿಯ ಡಿಜಿಎಂ ಪಬಿತ್ರ ಕುಮಾರದಾಸ್ ಅವರು…
