ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ, ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ ಜರುಗಿತು. ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಅವರು ಶಾಲಾ ಸಂಸತ್ತನ್ನು ಉದ್ಘಾಟಿಸಿ ಸಂದರ್ಭಗಳೇ ಸಂಬಂಧಗಳ ಆಳವನ್ನು ಮತ್ತು ವಾಸ್ತವವನ್ನು ತಿಳಿಸುವಂತೆ, ಶಾಲಾ ಸಂಸತ್ತು ಮಕ್ಕಳಿಗೆ ಸಂಸತ್ತಿನ ಬಗ್ಗೆ ಮೌಲ್ಯಯುತವಾದ ಅಂಶವನ್ನು ತಿಳಿಸಿದರು. ಸೋಲು ಗೆಲುವು ಇವೆರಡು ಜೀವನದ ಒಂದು ಭಾಗವಾಗಿದೆ. ಬದುಕಿನ ಎರಡು ಮುಖಗಳಾಗಿವೆ. ಇಂತಹ ಸಂದರ್ಭದಲ್ಲಿಯುವ ಪೀಳಿಗೆಯ ವಿದ್ಯಾರ್ಥಿಗಳಾದ ನೀವು ಶಾಸಕಾಂಗದ ಪ್ರತಿನಿಧಿಯಾಗಿ ಚುನಾಯಿತರಾದಲ್ಲಿ ಈಗಿನ ಶಾಸಕಾಂಗದ ನಿಯಮಗಳನ್ನು ಸಧೃಡಗೊಳಿಸುವಲ್ಲಿ ಪ್ರಯತ್ನಿಸುವವರಾಗಿರಬೇಕು ಎಂದು ಸಲಹೆ ನೀಡಿದರು. ಹಾಗೆಯೇ ಸಂಸತ್ತಿನ ಬಗ್ಗೆ ವಿದ್ಯಾರ್ಥಿಗಳಿಗಿದ್ದ ಕೆಲವು ಗೊಂದಲಗಳನ್ನು ನಿವಾರಿಸಿದರು. ಮಕ್ಕಳ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಾಂಡ್ಯಾ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯ ನಿರ್ವಾಹಕರಾದ ಕೆ. ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸನ್ನಿ ಪಿ. ಜಾನ್ ಮತ್ತು ಗುರುಕುಲ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 6ನೇ ಜಿಲ್ಲಾ ವಾರ್ಷಿಕ ಮಹಾಸಭೆ ಹಾಗೂ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವು ನಾಗೂರು ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ಜರುಗಲಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಧ್ವನಿಬೆಳಕು ಸಂಘದ ಸದಸ್ಯರಿಗೆ ವೈದ್ಯಕೀಯ ತಪಾಸಣೆ, ಉತ್ತಮ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ, ಸದಸ್ಯರಿಗೆ ಆರೋಗ್ಯ ವಿಮೆ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿರುವುದು ಎಂದು ಉಡುಪಿ ಜಿಲ್ಲಾ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್. ಉದಯ ಆಚಾರ್ಯ ಹೇಳಿದರು. ಅವರು ನಾಗೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಉಡುಪಿ ಜಿಲ್ಲೆಯ ಧ್ವನಿ ಬೆಳಕು ಸಂಯೋಜಕರು ಸೇರಿ ಜಿಲ್ಲೆಯ ಎಲ್ಲ ವೃತ್ತಿ ಬಾಂಧವರನ್ನು ಒಟ್ಟುಗೂಡಿಸಿ ಒಂದೇ ಸಿದ್ಧಾಂತವನ್ನು ರೂಢಿಸಿಕೊಂಡು, ಉತ್ತಮ ಸೇವೆಯನ್ನು ನೀಡುವ ಸಲುವಾಗಿ ಸದುದ್ದೇಶದಿಂದ ಸಂಘಟನೆ ರಚನೆಗೊಂಡಿದ್ದು ಬ್ಯೆಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾರ್ಕಳ ಹಾಗೂ ಕಾಪು ವಲಯಗಳ ೭೦೦ ಸದಸ್ಯರಿದ್ದಾರೆ ಎಂದರು. ಉಚಿತ ವೈದ್ಯಕೀಯ ಶಿಬಿರ, ಆರ್ಥಿಕವಾಗಿ ಹಿಂದುಳಿದವರ ಮನೆಗಳಿಗೆ ಉಚಿತ ವಿದ್ಯುತ್ ವೈರಿಂಗ್…
ಖಾಸಗಿ ರಸ್ತೆಗೆ ಸರಕಾರದ ದುಡ್ಡು ದುರ್ಬಳಕೆ! ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸರಕಾರಿ ಕಾಮಗಾರಿಗಳಿಗೆ ವಿನಿಯೋಗವಾಗಬೇಕಿದ್ದ ಸಂಸದರ ಅನುದಾನ ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರೋರ್ವರ ಮನೆಯ ಖಾಸಗಿ ರಸ್ತೆಗೆ ವಿನಿಯೋಗಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಕಾಮಗಾರಿಗೆ ಅನುಮೋದನೆ ನೀಡಿರುವ ಸ್ಥಳದಲ್ಲಿ ಕಾಮಗಾರಿ ನಡೆಸದೇ ಮನೆಗೆ ತೆರಳುವ ಖಾಸಗಿ ರಸ್ತೆಗೆ ಇಂಟರ್ಲಾಕ್ ಅಳವಡಿಸಿಕೊಂಡು ಸರಕಾರದ ಕಣ್ಣಿಗೆ ಮಣ್ಣೆರೆಚಲು ಹೊರಟಿರುವ ಬಗ್ಗೆ ಕುಂದಾಪ್ರ ಡಾಟ್ ಕಾಂಗೆ ಮಾಹಿತಿ ಲಭ್ಯವಾಗಿದೆ. ಕುಂದಾಪುರದ ವೆಸ್ಟ್ ಬ್ಲಾಕ್ ರೋಡ್ (ದತ್ತಾತ್ರೆಯ ನಗರ ರಸ್ತೆ) ಬಳಿ ಕುಂದಾಪುರದ ಮಾಜಿ ಪುರಸಭಾ ಅಧ್ಯಕ್ಷ, ಹಾಲಿ ಸದಸ್ಯ ಮೋಹನದಾಸ್ ಶೆಣೈ ಅವರ ಮನೆಗೆ ಹೋಗುವ ಖಾಸಗಿ ಕಾಲುದಾರಿಗೆ ಇಂಟರ್ಲಾಕ್ ಅಳವಡಿಕೆಗೆ ಉಡುಪಿ ಚಿಕ್ಕಮಂಗಳೂರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಸರಕಾರದ ಹಣ ಪೋಲು ಮಾಡುತ್ತಿರುವ ಕುರಿತು ಕುಂದಾಪುರ ಪುರಸಭೆಯ ನಾಮ ನಿರ್ದೇಶಿತ ಸದಸ್ಯ ಕೆ. ಕೇಶವ ಭಟ್ ಅವರು ಉಡುಪಿ ಜಿಲ್ಲಾಧಿಕಾರಿಯವರಿಗೆ ದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದುಸ್ಥಾನಿ ಸಂಗೀತ ಗುರುಗಳಾದ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಮತ್ತು ವಿದುಷಿ ಪ್ರತಿಮಾ ಭಟ್ ಅವರ ಶಿಷ್ಯವೃಂದ ರವಿವಾರದ ಗುರು ಪೂರ್ಣಿಮೆಯ ನಿಮಿತ್ತ ಮರವಂತೆಯ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾ ಭವನದಲ್ಲಿ ಗುರುಪೂಜೆ ಮತ್ತು ಸಂಗೀತೋಪಾಸನೆ ನಡೆಸಿತು. ನಿವೃತ್ತ ಶಿಕ್ಷಕ ಹಾಗೂ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಎಚ್. ಶ್ರೀಧರ ಹಂದೆ ಮತ್ತು ಹಿರಿಯ ತಬಲಾ ವಾದಕ ಸತ್ಯವಿಜಯ ಭಟ್ ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಧರ ಹಂದೆ ಈಗ ಪೋಷಕರು ತಮ್ಮ ಮಕ್ಕಳು ಅಂಕಗಳ ಬೆನ್ನು ಹತ್ತುವಂತೆ ಅತಿಯಾದ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಮಕ್ಕಳು ಮುಂದೆ ಬದುಕಿನ ಭಾಗವಾಗಬೇಕಾದ ಸಾಂಸ್ಕೃತಿಕ ಪ್ರಜ್ಞೆ ಮತ್ತು ರಸಾನುಭೂತಿಯಿಂದ ವಂಚಿತರಾಗುವಂತೆ ಮಾಡುತ್ತಿದ್ದಾರೆ. ಮಕ್ಕಳು ಕನಿಷ್ಠ ಒಂದು ಕಲೆಯಲ್ಲಾದೂ ಪರಿಣತಿ ಪಡೆದರೆ ಇಂತಹ ವಂಚನೆಗೆ ಒಳಗಾಗರು ಎಂದರು. ಸಂಗೀತದ ಬಗೆಗೆ ಮಾತನಾಡಿದ ಅವರು ಅದು ಕಲೆಗಳಲ್ಲೇ ಅತ್ಯಂತ ಪ್ರಾಚೀನವಾದುದು. ಅದು ದೇವಾನುದೇವತೆಗಳ ಕೊಡುಗೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಫೋಟೊ ಕಾನ್ಸೈರ್ಜ್ ಸಂಸ್ಥೆಯು ಆಯೋಜಿಸಿದ್ದ ದಿ ಬಿಗ್ ಸಫ್ ಪೋಟೋ ಕಂಟೆಸ್ಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ನಿತೀಶ್ ಪಿ. ಬೈಂದೂರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಲವು ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಿತೀಶ್ ಬೈಂದೂರು ಈವರೆಗೂ ಹಲವಾರು ಪೋಟೋಗ್ರಫಿ ಸ್ವರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ. Read this ► ನಿತೀಶ್ ಸಾಧನೆಯ ಓಘಕ್ಕೆ ವೇಗ ಹೆಚ್ಚಿಸಿದ ಬೆಳದಿಂಗಳ ಗೌರವ – http://kundapraa.com/?p=1460
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ಸರಕಾರಿ ಪದವಿ ಕಾಲೇಜುಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ತರಗತಿ ಆರಂಭಿಸಬೇಕು ಎಂದು ಹೊರಡಿಸಿರುವ ಆದೇಶ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ಆದೇಶ ಹಿಂಪಡೆಯಬೇಕೆಂಬ ಆಗ್ರಹ ಎಲ್ಲೆಡೆಯಿಂದಲೂ ಕೇಳಿ ಬರುತ್ತಿದೆ. ಕಳೆದ ವಾರ ಕಾಲೇಜು ಶಿಕ್ಷಣ ಆಯುಕ್ತರು ಬೆಳಿಗ್ಗೆ 8 ಗಂಟೆಯಿಂದಲೇ ತರಗತಿ ಆರಂಭಿಸಬೇಕು ಎಂದು ಆದೇಶಿಸಿದ್ದರು. ಈ ಆದೇಶದಿಂದಾಗಿ ನಗರ ಭಾಗದ ವಿದ್ಯಾರ್ಥಿಗಳಿಗೆ ಅಂತಹ ತೊಂದರೆ ಆಗದಿದ್ದರೂ ಹತ್ತಾರು ಕಿ.ಮೀ ಬಳಸಿ ಬರಬೇಕಾದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ದೊಡ್ಡ ತಲೆನೋವಾಗಿ ಪರಣಮಿಸಿದೆ. ಇನ್ನು ಶೇ.80ರಷ್ಟು ಅತಿಥಿ ಉಪನ್ಯಾಸಕರೇ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಉಪನ್ಯಾಸಕರ ಸಂಬಳ ಹಾಗೂ ನೇಮಕಾತಿಯ ವಿಚಾರವೇ ಅತಂತ್ರವಾಗಿರುವಾಗ, ಬೆಳಿಗ್ಗೆ 8 ರಿಂದಲೇ ತರಗತಿ ಆರಂಭಿಸಬೇಕೆಂದು ಆದೇಶಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳಿಗ್ಗೆ ಬಸ್ ಸಂಪರ್ಕವಿಲ್ಲ, ಸುರಕ್ಷಿತವೂ ಅಲ್ಲ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇಶ್ವರದ ಕಾವೇರಿ ಮಾರ್ಗದಲ್ಲಿ ಮಧ್ಯದಂಗಡಿಯನ್ನು ತೆರೆಯಲು ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸೋಮವಾರ ಮಧ್ಯದಂಗಡಿಗಾಗಿ ನಿಗದಿಪಡಿಸಿದ ಕಟ್ಟಡದ ಎದುರಿನಲ್ಲಿಯೇ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವೇರಿ ಮಾರ್ಗದ ನಿವಾಸಿ ನಾಗರಾಜ ಗಾಣಿಗ ಬಂಕೇಶ್ವರ ಮಾತನಾಡಿ ಕಾವೇರಿ ಮಾರ್ಗದಲ್ಲಿ ಎಲ್ಲಾ ಸಮುದಾಯದವರೂ ಈವರೆಗೆ ಶಾಂತಿ ಸೌಹಾರ್ದದಿಂದ ಬದುಕುತ್ತಿದ್ದಾರೆ. ಪ್ರತಿನಿತ್ಯವೂ ಹತ್ತಾರು ಮಕ್ಕಳು, ಮಹಿಳೆಯರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಸಮೀಪದಲ್ಲಿ ದೇವಸ್ಥಾನ, ಅಂಗನವಾಡಿ ಕೇಂದ್ರ ಹಾಗೂ ಹತ್ತಾರು ಮನೆಗಳಿದ್ದು ಇಲ್ಲಿಯೇ ಮಧ್ಯದಂಗಡಿ ತೆರೆಯುವುದು ಸೂಕ್ತವಲ್ಲ. ಕಿರಿದಾದ ರಸ್ತೆಗೆ ತಾಕಿಕೊಂಡಿರುವ ಕಟ್ಟಡದಲ್ಲಿ ಅಂಗಡಿ ತೆರೆದರೆ ಈ ಮಾರ್ಗದಲ್ಲಿ ಸಂಚರಿಸುವುದೇ ಕಷ್ಟವಾಗಲಿದೆ. ತಹಶೀಲ್ದಾರರು, ಸ್ಥಳೀಯ ಪಂಚಾಯತ್ ಹಾಗೂ ಅಬಕಾರಿ ಇಲಾಖೆ ಈ ಬಗ್ಗೆ ಕೂಡಲೇ ಗಮನ ಹರಿಸಿ ಮಧ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿದರು. ಕುಂದಾಪ್ರ ಡಾಟ್ ಕಾಂ. ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ಬೈಂದೂರು ತಹಶೀಲ್ದಾರ್ ಕಿರಣ್ ಗೌರಯ್ಯ ಪ್ರತಿಕ್ರಿಯಿಸಿ ಸಾರ್ವಜನಿಕರಿಗೆ ತೀವ್ರ…
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ತಾಲೂಕಿನ ಪ್ರಸಿದ್ಧ ಸೌಕೂರು ದೇವಸ್ಥಾನಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಕಾವ್ರಾಡಿ ಹಾಗೂ ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ದುರಸ್ತಿ ಕಾಣದೇ ವರ್ಷಗಳೇ ಸಂದಿದ್ದು ಸಂಪೂರ್ಣ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸಂಚಾರವೇ ದುಸ್ತರವಾಗಿದ್ದು ಜನಪ್ರತಿನಿಧಿಗಳಿಗೆ ಮನವಿ ನೀಡಿದರೂ ಸಮಸ್ಯೆಯ ಪರಿಹಾರಕ್ಕೆ ಇನ್ನೂ ಕಾಲ ಕೂಡಿಬಂದಿಲ್ಲ. ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ವಾಹನ ಸವಾರರು ಪರಿತಪಿಸುವಂತಾಗಿದೆ. ಕಂಡ್ಲೂರಿನಿಂದ ಸೌಕೂರಿಗೆ ಸಾಗುವ ಸುಮಾರು 1.5 ಕಿ.ಮೀ ಡಾಮರು ರಸ್ತೆ ಸಂಪೂರ್ಣ ಮಾಯವಾಗಿ ಕೆಸರು ಮಯವಾಗಿದೆ. ಮಳೆಗಾಳದಲ್ಲಿ ಸಂಚರಿಸುವುದೇ ಕಷ್ಟಕರವಾಗಿದೆ. ಈ ಹಿಂದೆ ಬಸ್ಸು ಸಂಪರ್ಕವನ್ನು ಹೊಂದಿದ್ದು ರಸ್ತೆಯ ಅವ್ಯವಸ್ಥೆಯನ್ನು ಕಂಡು ಕಳೆದ ಒಂದೂವರೆ ವರ್ಷದಿಂದ ಬಸ್ಸುಗಳೂ ಸಹ ಬರುವುದನ್ನು ನಿಲ್ಲಿಸಿವೆ. ಇಲ್ಲಿನ ಜನರು ಮುಖ್ಯ ರಸ್ತೆಯನ್ನು ತಲುಪಬೇಕಾದರೆ ನಡೆದುಕೊಂಡೇ ಸಾಗಬೇಕಾಗಿದೆ. ದ್ವಿಚಕ್ರ ವಾಹನ ಸವಾರರಿಗೆ ಕಷ್ಟಕರವಾದರೆ ರಸ್ತೆ ಸಮಸ್ಯೆಯಿಂದ ಆಟೋ ರಿಕ್ಷಾ ಚಾಲಕರು ಈ ರಸ್ತೆಯಲ್ಲಿ ಸಂಚರಿಸುವುದಕ್ಕೆ ಇಷ್ಟು ಪಡುತ್ತಿಲ್ಲ. ಈವರೆಗೆ ಜನಪ್ರತಿನಿಧಿಗಳು ರಸ್ತೆ ದುರಸ್ತಿಯ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಳೆಗಾಲ ಆರಂಭವಾದ ಬೆನ್ನಲ್ಲೇ ಮಲೇರಿಯಾ, ಡೆಂಗ್ಯೂ ಮೊದಲಾದ ಕಾಯಿಲೆಗಳ ಆಗಮನವಾಗುತ್ತದೆ. ಈ ಹಿನ್ನಲೆಯಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚು ನಿಗಾ ವಹಿಸಬೇಕಾಗಿದೆ. ಸೊಳ್ಳೆಗಳು ಈ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದ್ದು ಸೊಳ್ಳೆಗಳು ಉತ್ಪತ್ತಿಯಾಗದ ಹಾಗೇ ನಮ್ಮ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಕುಂದಾಪುರ ಪುರಸಭೆಯ ಉಪಾಧ್ಯಕ್ಷ ರಾಜೇಶ್ ಕಾವೇರಿ ಹೇಳಿದರು. ಅವರು ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ ಅಧ್ಯಕ್ಷತೆ ವಹಿಸಿ ಮಲೇರಿಯಾ ವಿರೋಧಿ ಮಾಸಾಚರಣೆಯ ಕರಪತ್ರ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಬಿಸಿಎಂ ವಿಸ್ತರಣಾಧಿಕಾರಿ ಬಸವರಾಜ್, ಫ್ರೆಂಡ್ಸ್ ಸರ್ಕಲ್ ಮೀನು ಮಾರ್ಕೆಟ್ ರಸ್ತೆ ಕುಂದಾಪುರ ಇದರ ಗೌರವಾಧ್ಯಕ್ಷ ಶೀನ ಖಾರ್ವಿ, ಸಂಪನ್ಮೂಲ ವ್ಯಕ್ತಿ ತಾಲೂಕು ಎನ್.ಬಿ.ಡಿ.ಸಿ.ಸಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ದೇಶದ ಅಭಿವೃದ್ಧಿಯ ಬಗೆಗಿನ ಚಿಂತನೆ, ಸಾಮಾಜಿಕ ಜೀವನ, ಸಾಮಾಜಿಕ ಬದ್ಧತೆ ರೋಟರಿ ಕಲಿಸುತ್ತದೆ. ರೋಟರಿಯಲ್ಲಿ ಎಲ್ಲ ವರ್ಗದ ಹಾಗೂ ವಿವಿಧ ಕೆಲಸ ಮಾಡುವ ಜನರು ಇರುತ್ತಾರೆ. ಅವರೆಲ್ಲ ಸಮಾಜ ಸೇವಾ ಕಾರ್ಯ ಮಾಡುತ್ತಾರೆ. ಈ ರೀತಿಯ ಚಿಂತನೆಗಳ ಬಗ್ಗೆ ಯಾವ ಪದವಿ ಹಾಗೂ ಶಿಕ್ಷಣ ಕಲಿಸದ ಶಿಕ್ಷಣ ರೋಟರಿ ಕಲಿಸುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅವರು ಹೇಳಿದರು. ಅವರು ಅಂಪಾರಿನ ಶ್ರೀ ಮಹಿಷಮರ್ದಿನಿ ಸಭಾ ಭವನದಲ್ಲಿ ನಡೆದ ಅಂಪಾರು ರೋಟರಿ ಕ್ಲಬ್ನ ಪದಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ ಕುಂದಾಪುರದಲ್ಲಿ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕವಾಗಿ ನಿರ್ಮಾಣದಿಂದ ಅನೇಕರು ಪ್ರಾಣ ಕಳೆದು ಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬದಿ ಯಲ್ಲಿರುವ ಅನೇಕ ಸರಕಾರಿ ಶಾಲೆಗಳು ಅನಿ ವಾರ್ಯವಾಗಿ ಮುಚ್ಚುವ ಹಂತಕ್ಕೆ ಬಂದಿವೆ. ಈ ಬಗ್ಗೆ ರೋಟರಿಯಂಥ ಸಂಸ್ಥೆಗಳು ಗಂಭೀರ ವಾಗಿ ಚರ್ಚೆಗಳನ್ನು ನಡೆಸಬೇಕು ಎಂದರು. ಅಂಪಾರು…
