Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವ ಹಿಂದೂ ಪರಿಷತ್ ಬಜರಂಗದಳ ತ್ರಾಸಿ ಘಟಕದಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ಪಂಜಿನ ಮೆರವಣಿಗೆ ನಡೆಯಿತು. ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಜರುಗಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ತ್ರಾಸಿ ಘಟಕದ ಉದ್ಘಾಟನಾ ಸಮಾರಂಭದ ಹಾಗೂ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಧ್ಯಕ್ಷತೆಯನ್ನು ಅತ್ತಾವರ ಕೆಎಂಸಿಯ ಎಂ. ಸಿ ಅಪ್ಪಣ್ಣ ವಹಿಸಿದ್ದರು. ಬಜರಂಗದಳದ ಪ್ರಾಂತ ಸಹ ಸಂಯೋಜಕ ರಘುಜೀ ಸಕಲೇಶಪುರ ದಿಕ್ಸೂಚಿ ಭಾಷಣ ಮಾಡಿದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್, ಬಜರಂಗದಳ ಮಂಗಳೂರು ವಿಭಾಗ ಸಹ ಸಂಚಾಲಕ ಸುನಿಲ್ ಕೆ.ಆರ್, ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ಸಹ ಸಂಚಾಲಕ ಗಿರೀಶ್ ಕುಂದಾಪುರ, ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು, ಸಂಚಾಲಕ ನಿತ್ಯಾನಂದ ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು. ತ್ರಾಸಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಎಂ. ಆರ್. ಕೇಶವ ತ್ರಾಸಿ ಸ್ವಾಗತಿಸಿ, ಸಂಚಾಲಕ ಸುನಿಲ್ ವಂದಿಸಿದರು. ತ್ರಾಸಿ…

Read More

ಬಡವರಿಗೆ ಹಕ್ಕುಪತ್ರ, ರೇಷನ್ ಕಾರ್ಡ್ ನೀಡಲು ರಾಜ್ಯ ಸರಕಾರ ವಿಫಲ: ಶ್ರೀನಿವಾಸ ಪೂಜಾರಿ ಮಲೇಷಿಯಾದ ಮರಳು ತರಿಸಿ ಜನರೊಂದಿಗೆ ಸರಕಾರ ವ್ಯವಹಾರಕ್ಕಿಳಿದಿದೆ: ಜೆಪಿ ಹೆಗ್ಡೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಕ್ಕುಪತ್ರ ನೀಡುತ್ತೇವೆ ಎಂದು ರಾಜ್ಯ ಸರಕಾರ ಭರವಸೆಯನ್ನಷ್ಟೇ ನೀಡುತ್ತಿದೆ. ಆದರೆ ಆ ಬಗ್ಗೆ ಸಮರ್ಪಕ ನಿಲುವು ತಳೆದಿಲ್ಲ. ಕುಂದಾಪುರ ತಾಲೂಕಿನಲ್ಲಿ ಹನ್ನೆರಡು ಸಾವಿರ ಜನರಿಗೆ ಹಕ್ಕುಪತ್ರ ನೀಡಲು ಬಾಕಿಯಿದ್ದು, ಕೆಲವು ತಿಂಗಳ ಹಿಂದೆ 600 ಜನರಿಗೆ ಮಾತ್ರ ನೀಡಲಾಗಿತ್ತು. ಬಿಜೆಪಿ ಪ್ರತಿಭಟನೆ ಕೈಗೊಂಡ ಬಳಿಕ 1500 ಜನರಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಉಳಿದವರಿಗೆ ಹಕ್ಕುಪತ್ರ ನೀಡದೇ ಸತಾಯಿಸುತ್ತಿರುವುದು ಯಾವ ನ್ಯಾಯ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನಿಸಿದರು. ಜಿಲ್ಲಾ ಬಿಜೆಪಿ ಹಿಂದೂಳಿದ ಮೋರ್ಚಾದ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಹಕ್ಕುಪತ್ರ, ಮರಳುಗಾರಿಕೆ ಹಾಗೂ ಪಡಿತರ ಚೀಟಿ ವಿಚಾರದಲ್ಲಿ ರಾಜ್ಯ ಸರಕಾರ ಬಡವರನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಮಾಬುಕಳದಿಂದ ಕುಂದಾಪುರದ ತನಕ ಹಮ್ಮಿಕೊಂಡಿದ್ದ ಪಾದಯಾತ್ರೆ ಸಮಾರೋಪ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರಿನ ಹೆದ್ದಾರಿ ಬದಿಯಲ್ಲಿದ್ದ ಬಾರ್ ಎಂಡ್ ರೆಸ್ಟೋರಂಟನ್ನು ನಾಗೂರು-ಕೊಡೇರಿ ರಸ್ತೆಯ ನಿವೇಶನಕ್ಕೆ ಸ್ಥಳಾಂತರಿಸಿರುವುದನ್ನು ವಿರೋಧಿಸಿ ಗ್ರಾಮದ ಗಂಗೆಬೈಲು, ಕೊಡೇರಿ, ಆದ್ರಗೋಳಿ, ನಾಗೂರು ಪರಿಸರದ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕೊಡೇರಿ ರಸ್ತೆಯ ಹಾಡಿಸ್ಥಳ ಎಂಬಲ್ಲಿ ಸೇರಿ, ಬಾರ್ ವಿರೋಧಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತ ನೂರಾರು ಪುರುಷರು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಗ್ರಾಮ ಪಂಚಾಯತ್ ಕಚೇರಿಗೆ ಸಾಗಿದರು. ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಾಂತರಕ್ಕೆ ಗ್ರಾಮ ಪಂಚಾಯತ್ ಅನುಮೋದನೆ ನೀಡಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಳಿಕ ಪಂಚಾಯತ್ ತಕ್ಷಣ ಬಾರ್ ಬಂದ್ ಮಾಡಬೇಕೆಂದು ಆಗ್ರಹಿಸಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಪ್ರಮುಖರಾದ ಈಶ್ವರ ದೇವಾಡಿಗ, ಕೃಷ್ಣ ಖಾರ್ವಿ, ತಬ್ರೆಜ್, ವಿಜಯ ಪೂಜಾರಿ, ವಿನೋದಾ ಪೂಜಾರಿ ಬಾರ್ ಆರಂಭವಾದ ಸ್ಥಳದ ಸಮೀಪ ಕೇರಿಸ್ಥಳ ದೈವಸ್ಥಾನವಿದೆ. ಬಾರ್‌ಗೆ ವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲ. ಇದರಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯಕ್ಷಗಾನ (ಬಡಗು, ಬಡಾ ಬಡಗು) ಮ್ಯೂಸಿಯಂ ಲೋಕಾರ್ಪಣೆಗೊಂಡಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ.ಹೆಚ್.ಎಸ್.ಬಲ್ಲಾಳ್ ಮಾತನಾಡಿಯಕ್ಷಗಾನ ವೆನ್ನುವುದು ನಮ್ಮ ಕರಾವಳಿ ಭಾಗದ ವಿಶಿಷ್ಟ ಕಲೆಯಾಗಿದೆ. ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಈ ಯಕ್ಷಗಾನ ವಸ್ತು ಸಂಗ್ರಹಾಲಯ ನಿರ್ಮಿಸಿರುವುದು ಬಹಳ ಒಳ್ಳೆಯ ಕೇಲಸವಾಗಿದೆ. ಹಾಗೆಯೆ ಕರಾವಳಿಯ ಭಾಗವಾದ ಕುಂದಾಪುರದಲ್ಲಿ ಯಕ್ಷಗಾನ ಕಲೆಯ ಕುರಿತಂತೆ ಸಾಕಷ್ಟು ಕೆಲಸಗಳಾಗಿವೆ. ಇದೊಂದು ವಿಶಿಷ್ಟ ಪ್ರಯತ್ನವೆ ಸರಿ. ಅಲ್ಲದೇ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ ಅಧ್ಯಯನ ನಡೆಸಲು ವಿದೇಶಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ನಮ್ಮ ಸಂಸ್ಕೃತಿಯನ್ನು ಪರಿಚಯಿಸಲು ಇದೊಂದು ಒಳ್ಳೆಯ ಅವಕಾಶವನ್ನು ಮಾಡಿಕೊಟ್ಟಿದೆ. ವಿದೇಶಗಳಿಂದ ಬರುವ ವಿದ್ಯಾರ್ಥಿಗಳನ್ನು ಇಲ್ಲಿಗೆ ಅಧ್ಯಯನಕ್ಕೆ ಕಳುಹಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ಡಾ.ಹೆಚ್. ಶಾಂತಾರಾಮ್ ಅವರ ೯೦ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಯಕ್ಷಗಾನ (ಬಡಗು, ಬಡಾ ಬಡಗು) ಮ್ಯೂಸಿಯಂ ಉದ್ಘಾಟನೆಯಾಗಿರುವುದು ಇನ್ನೂ ಸಂತೋಷದಾಯಕ. ಏಕೆಂದರೆ ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ ಈ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನೆಯ ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದ 5 ಜೆರ್ಸಿ ದನಗಳನ್ನು ತಡರಾತ್ರಿ ಕದ್ದೊಯ್ದಿರುವುದಲ್ಲದೇ ಒಂದು ಕರುವನ್ನು ಕತ್ತು ಹಿಸುಕಿ ಸಾಯಿಸಿರುವ ಘಟನೆ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲೂರು ಎಂಬಲ್ಲಿ ನಡೆದಿದೆ. ಎಲ್ಲೂರು ನಿವಾಸಿ ರಾಜೇಶ್ ಕಿಣಿ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಯಿಂದ ದನಗಳನ್ನು ಕದ್ದೊಯ್ಯಲಾಗಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ 9 ದನಗಳಲ್ಲಿ ಪೈಕಿ 5 ದನಗಳನ್ನು (1.70ಲಕ್ಷ) ಅಪಹರಿಸಿದ ದುಷ್ಕರ್ಮಿಗಳು ಒಂದು ಕರುವನ್ನು ಅಮಾನುಷವಾಗಿ ಕತ್ತು ಹಿಸುಕಿ ಸಾಯಿಸಿದ್ದಾರೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರಿಗೆ ಹಾಲು ಕರೆಯಲು ತೆರಳಿದಾಗ ದನಗಳು ನಾಪತ್ತೆಯಾಗಿರುವುದು ಕಂಡು ಬಂದಿದ್ದು, ಬೈಂದೂರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂದಾಪುರ ಡಿವೈಎಸ್‌ಪಿ ಪ್ರವೀಣ ಕುಮಾರ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಹಾಲ್ಕಲ್ ಸಮೀಪದ ಸಿಸಿಟಿವಿ ಪೋಟೇಜ್‌ನ್ನು ಪರಿಶೀಲಿಸಿ ದನಗಳ್ಳರನ್ನು ಶೀಘ್ರ ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ . ದನಗಳರನ್ನು ಪತ್ತೆ ಮಾಡಲು ಆಗ್ರಹ: ಎಲ್ಲೂರು, ಹಾಲ್ಕಲ್ ಭಾಗದಲ್ಲಿ ಕೊಟ್ಟಿಗೆ ನುಗ್ಗಿ ದನಗಳ್ಳತನ ಪ್ರಕರಣ ಇದೇ ಮೊದಲಲ್ಲ, ಹಲವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರಕಾರ ಬಡವರ ಪರವಾಗಿ ಹತ್ತಾರು ಯೋಜನೆಗಳನ್ನು ಕೈಗೆತ್ತಿಕೊಂಡು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಅರ್ಜಿದಾರರಿಗೆ 94ಸಿ ಹಕ್ಕುಪತ್ರ ವಿತರಿಸುವಲ್ಲಿ ಈ ಹಿಂದೆ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಿ 94ಸಿ ಹಾಗೂ 94ಸಿಸಿ ಮೂಲಕ ಬಡವರಿಗೆ ಕಡಿಮೆ ಶುಲ್ಕದಲ್ಲಿ ಭೂಮಿ ಹಕ್ಕುಪತ್ರ ಸಿಗುವಂತೆ ಮಾಡಲಾಗಿದ್ದು ಕ್ಷೇತ್ರದ ಫಲಾನುಭವಿಗಳಿಗೆ ಹಂತ ಹಂತವಾಗಿ ವಿತರಿಸಲಾಗುತ್ತಿದೆ ಎಂದು ಬೈಂದೂರು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಗೊಳಿಹೊಳೆ ಮೂರುಕೈ ಶ್ರೀ ಮಹಿಷಮರ್ಧಿನಿ ಸಭಾಭವನದಲ್ಲಿ ನಡೆದ ಗೊಳಿಹೊಳೆ ಹಾಗೂ ಕಾಲ್ತೋಡು ಗ್ರಾ.ಪಂ ವ್ಯಾಪ್ತಿಯ ಶಾಸಕರ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಡೀಮ್ಡ್ ಫಾರೆಸ್ಟ್‌ನಲ್ಲಿ ವಾಸವಿರುವವರಿಗೂ ಈವರೆಗೆ ಹಕ್ಕುಪತ್ರ ನೀಡಲು ಸಾಧ್ಯವಾಗಿಲ್ಲ. ಒಂದು ತಿಂಗಳಲ್ಲಿ ಸರಕಾರz ಗ್ಯಾಜೆಟ್ ನೋಟಿಪಿಕೇಶ್ ಹೊರಡಿಸಿದ ಬಳಿಕ ಅವರಿಗೂ ಹಕ್ಕಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದ ಶಾಸಕರು ಕಾಲ್ತೋಡು ಹಾಗೂ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮೂಲಭೂತ ಸೌಯರ್ಕಗಳ ಅಭಿವೃದ್ಧಿಗೆಅನುದಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ ಕಾರ್ಯನಿರ್ವಹಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ವಂಡ್ಸೆಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಪಂದನ, ಕೋಟಿ ವೃಕ್ಷ ಅಭಿಯಾನ ಹಾಗೂ ಕಾರ್ಯಕರ್ತರ ಸಭೆಯನ್ನದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಡವರು ಹಾಗೂ ದುರ್ಬಲ ವರ್ಗದವರನ್ನು ಮರೆತಿದೆ. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿಯೂ ಬಿಜೆಪಿಯ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಕಾಯೋನ್ಮಕವಾಗಬೇಕಿದೆ ಎಂದರು. ಕ್ಷೇತ್ರಾಧ್ಯಕ್ಷ ಉಪ್ಪಿನಕುದ್ರು ಸದಾನಂದ ಅಧ್ಯಕ್ಷತೆವಹಿಸಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಭೆ ಜರುಗಿತು. ನೂತನವಾಗಿ ರಚನೆಗೊಂಡ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ವಿಕ್ರಮ ಪೂಜಾರಿ ಗರ್ಜಿನಹಿತ್ಲು, ಕಾರ್ಯದರ್ಶಿಯಾಗಿ ನಾರಾಯಣ ಕೆ. ಬಿಲ್ಲವ ದುರ್ಮಿ, ಜೊತೆ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಹಾಗೂ ಅಶ್ವಿನಿ ಯಡ್ತರೆ ಆಯ್ಕೆಯಾಗಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾಗಿ ವೆಂಕಟಾಚಲ ಮಯ್ಯ, ಜ್ಯೋತಿ ಶೆಟ್ಟಿ ಯಡ್ತರೆ, ಎಸ್. ರಾಜು ಪೂಜಾರಿ, ಶಂಕರ ಪೂಜಾರಿ ತಗ್ಗರ್ಸೆ, ಡಾ. ಮಿಥುನ್ ಶೆಟ್ಟಿ ಅವರನ್ನು ಸೂಚಿಸಿ ಆಯ್ಕೆ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ನೇಹಿತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲವಲವಿಕೆಯಿಂದ ಭಾಗಿಯಾಗಿದ್ದ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ, ಜಡ್ಡಿನಕುದ್ರು ನಿವಾಸಿ ಅಮಿತ್ (18) ಮೃತ ದುರ್ದೈವಿ. ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಬಂದಿದ್ದ ಅಮಿತ್ ಧ್ವಜಾರೋಹಣ ಮುಗಿದ ಬಳಿಕ ಸಭಾಂಗಣದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಕುಂದಾಪ್ರ ಡಾಟ್ ಕಾಂ . ಮುಂಬೈಯಲ್ಲಿ ಉದ್ಯೋಗಿಯಾಗಿರುವ ಹಟ್ಟಿಕುದ್ರುವಿನ ಆನಂದ ಪೂಜಾರಿ ಹಾಗೂ ಸುಗಂಧಿ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯವರಾದ ಅಮಿತ್‌ಗೆ ಈ ಹಿಂದಿಯೂ ಹೃದಯ ಸಂಬಂಧಿ ಸಮಸ್ಯೆಯಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆನ್ನಲಾಗಿದೆ. ಅಕಾಲಿಕವಾಗಿ ಮರಣವನ್ನಪ್ಪಿದ್ದ ಅಮಿತ್‌ಗೆ ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಂ ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಗರಿಷ್ಠ ಮೌಲ್ಯವೆಂದರೆ ಅದು ಸತ್ಯನಿಷ್ಠೆಯಾಗಿದೆ. ನಮ್ಮ ದೇಶ ನಮಗೆ ಪೂಜನೀಯ, ಮಾತೃ ಸಮಾನ. ಸರ್ವ ಜನಾಂಗಕ್ಕೂ ಇಲ್ಲಿ ಬಾಳ್ವೆಗೆ ಸಮಾನ ಹಕ್ಕುಗಳಿವೆ. ಸಂವಿಧಾನವು ಮೂಲಭೂತವಾಗಿ ನಾಲ್ಕು ಪ್ರಧಾನ ಸ್ಥಂಭಗಳನ್ನು ಹೊಂದಿದ್ದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಪ್ರಾಮುಖ್ಯತೆಯನ್ನು ಹೊಂದಿವೆ. ವಿದ್ಯಾರ್ಥಿಗಳು ದೇಶ ಹಾಗೂ ಸಮಾಜದಿಂದ ಪಡೆದುಕೊಂಡದ್ದನ್ನು ಮತ್ತೆ ಸಮಾಜಕ್ಕಾಗಿ ಧಾರೆಯೆರೆಯಬೇಕು ಹಾಗೂ ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬೇಕು ಎಂದು ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಪದವಿನಲ್ಲಿರುವ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯೆಯೆಂಬುದು ಕಠಿಣ ಪರಿಶ್ರಮದಿಂದ…

Read More