ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆ ( ಪ್ರೌಢ ಸ್ಕೂಲ್ ) ಇಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇದರ ಮತ್ತು ಶಿವ ಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಜಂಟಿ ಆಶ್ರಯದಲ್ಲಿ “ಮಾನವ ಕಳ್ಳ ಸಾಗಣೆ ಜಾಗ್ರತಿ ಶಿಬಿರ “ಕಾರ್ಯಕ್ರಮವು ಶುಕ್ರವಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷರಾದ ಕಾಲೇಜಿನ ಉಪ ಪ್ರಿನ್ಸಿಪಾಲರಾದ ಹಾಗೂ ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಇದರ ಅಧ್ಯಕ್ಷರಾದ ಎಂ. ಕರುಣಾಕರ ಶೆಟ್ಟಿ ವಹಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಎಸ್‌ಡಿಎಮ್‌ಸಿ ಉಪಾಧ್ಯಕ್ಷರಾದ ಗೌತಮ್ ಶೆಟ್ಟಿ ಉದ್ಘಾಟಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಘವೇಂದ್ರ ಎಸ್. ವಕೀಲರು ಹಾಗೂ ಕಾನೂನು ನೆರವು ಅಭಿರಕ್ಷಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಅವರು ಬಹಳ ಸರಳವಾಗಿ ವಿದ್ಯಾರ್ಥಿಗಳಿಗೆ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಆಮಿಶ ತೋರಿಸಿ ಕದ್ದೋವೈದು ವೇಶ್ಯವಾಟಿಕೆ, ಬಾಲಕಾರ್ಮಿಕ ಪದ್ಧತಿಗೆ ದೂಡುವಾ ಸ0ಭವ ವಿದ್ದು ಜಾಗ್ರತಿ ವಹಿಸುವಂತೆ ಸಲಹೆ, ವಿದ್ಯಾರ್ಥಿಗಳ ಹಕ್ಕುಗಳು ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾ – ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಲ್ಲಿ ಊರಿನ ಜೀವಂತಿಕೆ ಅಡಗಿದೆ. ಇಂತಹ ಚಟುವಟಿಕೆಗಳ ಮೂಲಕ ಊರು ಭಾಷೆಯ ಚಲನಶೀಲತೆ ಹೆಚ್ಚಿಸುವ ಕಾರ್ಯ ಶ್ಲಾಘನಾರ್ಹ ಎಂದು ಸಾಹಿತಿ, ವಾಗ್ಮಿ ಓಂ ಗಣೇಶ್ ಉಪ್ಪುಂದ ಹೇಳಿದರು. ಅವರು ಉಪ್ಪುಂದದ ತಮ್ಮ ನಿವಾಸದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೈಂದೂರು ಆಯೋಜನೆಯಲ್ಲಿ ಹಮ್ಮಿಕೊಂಡ ಮೂರನೇ ವರ್ಷದ “ಗಮ್ಮತ್ತ್” ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದರು. ಕಳೆದೆರಡು ವರ್ಷಗಳಿಂದ ಗಮ್ಮತ್ತ್ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಈ ಭಾರಿಯೂ ಇನ್ನಷ್ಟು ಯಶಸ್ಸು ಕಾಣುವಂತಾಗಲಿ ಎಂದು ಹಾರೈಸಿದರು. ಬೈಂದೂರಿನ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕ ಮಾತನಾಡಿ, ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗಮ್ಮತ್ತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಗಸ್ಟ್ 23ರ ಭಾನುವಾರ ಬೆಳಿಗ್ಗೆಯಿಂದ ಸಂಜೆಯ ತನಕ ಯಡ್ತರೆ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಹಾಲ್ನಲ್ಲಿ ದಿನವಿಡಿ ಕಾರ್ಯಕ್ರಮಗಳು ಜರುಗಲಿದೆ. ಈ ಭಾರಿ ಇನ್ನಷ್ಟು ಕ್ರೀಡೆ, ಸಾಹಿತ್ತಿಕ ಕಾರ್ಯಕ್ರಮಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.24: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳು, ಪಿಯು ಕಾಲೇಜು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಜುಲೈ 25ರ ಶನಿವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರ ಅವರು ಆದೇಶಿಸಿದ್ದಾರೆ. ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ವಿದ್ಯಾರ್ಥಿಗಳಿಗೆ ರಜೆ ಘೋಷಿಸಿಲ್ಲ ಆದರೆ ಹಾಜರಾತಿ ಕಡ್ಡಾಯವಲ್ಲ. ಸೂಕ್ತ ಮನ್ನೆಚ್ಚರಿಕೆ ವಹಿಸುವಂತೆ ಅವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವ್ಯಾಪ್ತಿಯಲ್ಲಿ ಬರುವ ಬನ್ನಾಡಿ, ವಡ್ಡರ್ಸೆ ಸೇರಿದಂತೆ ಕೋಟ ಹದಿನಾಲ್ಕು ಗ್ರಾಮಗಳಲ್ಲಿ ವಾಸವಾಗಿರುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಗತ್ಯ ಇರುವ ಸಮಾಜ ಬಾಂಧವರು ಅಜಿ೯ಗಳನ್ನು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಕಛೇರಿಯಲ್ಲಿ ಪಡೆದು, ಭತಿ೯ ಮಾಡಿ, ಇದೇ ಆಗಸ್ಟ್ ತಿಂಗಳ 31 ರ ಒಳಗೆ ಶ್ರೀ ದೇವಳದ ಕಛೇರಿಯಲ್ಲಿ ಹಿಂದಿರುಗಿಸುವಂತೆ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880390905 ಇದನ್ನು ಸಂಪರ್ಕಿಸಲು ಕೋರಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಅಚ್ಲಾಡಿ ಸಮೀಪದ ಮೂಡುಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ನಡೆಯಿತು. ರೋಟರಿ ಕ್ಲಬ್‌ನ ಸದಸ್ಯ ಭಾಸ್ಕರ್ ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಹಾಯಕ ಗವರ್ನರ್ ಹಾಗೂ ಕ್ಲಬ್‌ನ ಜಿಎಸ್‌ಆರ್ ಚಂದ್ರಶೇಖರ್ ಮೆಂಡನ್, ಮಾತನಾಡಿ, “ಶಿಕ್ಷಣವೇ ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಸಾಧನವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ರೋಟರಿ ಸಂಸ್ಥೆ ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳಿಗೆ ಸದಾ ಆದ್ಯತೆ ನೀಡುತ್ತಿದ್ದು, ಇಂತಹ ಸೇವಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ನೆರವಾಗುತ್ತವೆ. ಸಮಾಜದ ಸಹಕಾರದಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ಮುಂದುವರಿಸಲಾಗುವುದು” ಎಂದು ಹೇಳಿದರು. ರೋಟರಿ ಕ್ಲಬ್ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಚಾತುರ್ಮಾಸ್ಯದ ಪೂರ್ವಭಾವಿ ಸಂಚಾರದ ಅಂಗವಾಗಿ ಎಡನೀರು ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಶ್ರೀ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅವರು ಶ್ರೀಪಾದಂಗಳವರನ್ನು ಪೂರ್ಣಕುಂಭ ಹಾಗೂ ವಾದ್ಯಗೋಷ್ಠಿಯೊಂದಿಗೆ ಭವ್ಯವಾಗಿ ಸ್ವಾಗತಿಸಿ ಫಲಕಾಣಿಕೆಯನ್ನು ಸಮರ್ಪಿಸಿದರು. ಪರ್ಯಾಯ ಅರ್ಚಕರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯ ಶ್ರೀಪಾದಂಗಳವರಿಗೆ ದೇವರ ವಿಶೇಷ ಪ್ರಸಾದವನ್ನು ಅರ್ಪಿಸಿ, ಮುಂಬರುವ ಚಾತುರ್ಮಾಸ್ಯ ವ್ರತವು ಯಶಸ್ವಿಯಾಗಿ ನೆರವೇರಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವೃಂದ, ಪರ್ಯಾಯ ಅರ್ಚಕರು, ದೇವಸ್ಥಾನದ ಸಿಬ್ಬಂದಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀಪಾದಂಗಳವರಿಂದ ಫಲಮಂತ್ರಾಕ್ಷತೆಯನ್ನು ಪಡೆದು ಆಶೀರ್ವಾದ ಪಡೆದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ‍್ಯಾಂಕ್ ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38ನೇ ಸ್ಥಾನ ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಉಳಿದಂತೆ ಕ್ರಮವಾಗಿ ವಿದ್ಯಾರ್ಥಿಗಳಾದ, ಪ್ರಣವ್ ಕುಲಕರ್ಣಿ 79, ಸಮೃದ್ ಪಿ .ಶೆಟ್ಟಿ 91, ಪ್ರಾರ್ಥನಾ ಎಂ. 99, ಅದಿತಿ ನಂದೀಶ್ 107, ಕುಶಾಲ್ ಎಲ್ 115, ಹೆಚ್. ಎಸ್.ಆದ್ಯ 163, ಅಜಯ್ ಕೆ. ಎನ್.181, ಜ್ಯೋತಿ ಎಸ್.211 ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ಬಹುಬೇಡಿಕೆಯನ್ನು ಹೊಂದಿರುವ ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಆರ್ಕಿಟೆಕ್ಚರ್ ಸಂಸ್ಥೆಗಳಿಗೆ ಸೇರಲು ನಡೆಯುವ ರಾಷ್ಟ್ರ ಮಟ್ಟದ NATA (ನ್ಯಾಶನಲ್ ಎಲಿಜಿಬಿಲಿಟಿ ಟೆಸ್ಟ್ ಫಾರ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಗೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯು ಅತ್ಯುತ್ತಮ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ರೋಕುಂದಾಪುರ: ರೋಟರಿ ಕ್ಲಬ್ ತೆಕ್ಕಟ್ಟೆ ಹಾಗೂ ರೋಟರಿ ಕ್ಲಬ್ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನಲ್ಲಿ ಆಷಾಢ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಶಾಲೆಯ ಮುಖ್ಯೋಪಾಧ್ಯಾಯರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕರಾದ ರಾಘವೇಂದ್ರ ದೇವಾಡಿಗ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳು ಕುಂದಾಪ್ರ ಕನ್ನಡದಲ್ಲಿ ಜಾನಪದ ಕಥೆಗಳು, ಗಾದೆಗಳು ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ, ಸ್ಥಳೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪರಿಚಯಿಸಿದರು. ವೇದಿಕೆಯಲ್ಲಿ ರೋಟರಿ (ವಲಯ 2 ) ಸಹಾಯಕ ಗವರ್ನರ್ ಟಿ. ಸುಧಾಕರ್ ಶೆಟ್ಟಿ, ವಲಯ ಸಲಹೆಗಾರ ಪಿಎಚ್‌ಎಫ್ ಗಜೇಂದ್ರ ಶೆಟ್ಟಿ, ವಲಯ ಲರ್ನಿಂಗ್ ಫೆಸಿಲಿಟೇಟರ್ ಸುರೇಶ್ ಬೇಳೂರು, ರೋಟರಿ ಕ್ಲಬ್ ತೆಕ್ಕಟ್ಟೆ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ, ರೋಟರಿ ಕ್ಲಬ್ ಕೋಟೇಶ್ವರ ಅಧ್ಯಕ್ಷೆ ಅಕ್ಷತಾ ಗಿರೀಶ್ ಐತಾಳ್, ಕಾರ್ಯದರ್ಶಿ ಅರುಣ್ ದೇವಾಡಿಗ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಶೆಟ್ಟಿ (ಬೆಳೂರು) ಹಾಗೂ ಎಸ್‌ಡಿಎಂಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಮುದಾಯದ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ್ ನಾಯಕ್ ಕರೆ ನೀಡಿದರು. ಅವರು ಶುಕ್ರವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ “DRUGS ಬೇಡ BRO!” ಮತ್ತು ಮಾದಕ ವಸ್ತುಗಳಿಗೆ NO -ಜೀವನಕ್ಕೆ YES” ಎಂಬ ಯುವಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ವಸ್ತುಸ್ಥಿತಿ ಆತಂಕಕಾರಿಯಾಗಿದೆ. ಹೆಚ್ಚಿನ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಅವರು ತಮ್ಮ ಶೈಕ್ಷಣಿಕ ಹಿನ್ನೆಡೆ, ಮಾನಸಿಕ, ದೈಹಿಕ ಆರೋಗ್ಯವನ್ನು ಕಳೆದುಕೊಂಡು ತಮ್ಮತನ ಕಳೆದುಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ಕುಟುಂಬ, ಸಮಾಜ ಊರು ಮತ್ತು ದೇಶಕ್ಕೆ ಹೊರೆಯಾಗುತ್ತಿದ್ದಾರೆ. ಮಾದಕದ್ರವ್ಯ ಸೇವನೆಯ ವ್ಯಸನಿಗಳ ಸಂಖ್ಯೆ ಸಹ ವಿಪರೀತಕ್ಕೆ ತಲುಪಿದೆ. ಇದು ಸಮಾಜದ ಮತ್ತು ದೇಶದ ಬೆಳವಣಿಗೆಗೆ ಮಾರಕವಾಗಿದೆ. ಹಾಗಾಗಿ ಮಾದಕ ದ್ರವ್ಯಗಳ ಸೇವನೆಯ ವಿರುದ್ದ ಯುವಕರಲ್ಲಿ ಜಾಗೃತಿ ಮೂಡಿಸಬೇಕು . ಉತ್ತಮ ಸಮಾಜ ನಿರ್ಮಾಣಕ್ಕೆ ಸರ್ಕಾರ, ಸಮಾಜ, ಸಂಘ ಸಂಸ್ಥೆಗಳು, ಇಲಾಖೆಗಳು,ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರ ಕೋಟ ಇವರ ಆಶ್ರಯದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗೀತ ನಮನ ಹಾಗೂ ನುಡಿ ನಮನ ಕಾರ್ಯಕ್ರಮ ಕೋಟ ಸಂಗೀತ ಸಂಸ್ಥೆಯಲ್ಲಿ ಯಶಸ್ವಿಯಾಗಿ ಇತ್ತೀಚಿಗೆ ಜರಗಿತು. ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಉಪನ್ಯಾಸಕ ಗಾಯಕ ಕೃಷ್ಣ ಸಾಸ್ತಾನ ಮಾತನಾಡಿ, ಎಸ್. ಜಾನಕಿ ಅಮ್ಮನವರು ಸರಳ ವ್ಯಕ್ತಿತ್ವದ ನೈಜ ಸ್ವರೂಪದ ಒಬ್ಬ ಗಾಯಕಿ. ಹಲವಾರು ಭಾಷೆಗಳಲ್ಲಿ ತನ್ನ ಸಿರಿ ಕಂಠದ ಮೂಲಕ, ಹಾಡಿನ ಮೂಲಕ ಎಲ್ಲರ ಮನಸ್ಸನ್ನು ಗೆದ್ದ ಗಾಯನ ಲೋಕಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು. ಉದ್ಯಮಿ ಎಂ.ಸಿ ಚಂದ್ರಶೇಖರ್ ಪಾಂಡೇಶ್ವರ ಜಾನಕಿ ಅಮ್ಮ ಹಾಡಿರುವ ಹಾಡುಗಳನ್ನು, ಗಾಯಕರಾದ ನಾವೆಲ್ಲರೂ ಅನುಕರಣೆಮಾಡಿ ಹಾಡಿ ಅವರಂತೆ ದೊಡ್ಡ ಗಾಯಕರಾಗಿ ಬೆಳೆಯಬೇಕು ಅನ್ನುವ ಮಾತನ್ನು ವ್ಯಕ್ತ ಪಡಿಸಿದರು. ಕೋಟ ಸಿ ಎ ಬ್ಯಾಂಕನ ನಿರ್ದೇಶಕ ರಂಜಿತ್, ಶ್ರೀ ಶಾಸ್ತ ಮೊಬೈಲ್ ಸೆಂಟರ್ ಕೋಟ…
