Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 210 ಕಾಲೇಜುಗಳ ಪೈಕಿ, ವೈಯಕ್ತಿಕ ಕ್ರೀಡೆ ಮತ್ತು  ಗುಂಪು ಆಟಗಳ 42 ವಿಭಾಗಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು, ಈ ಶೈಕ್ಷಣಿಕ ವರ್ಷದಲ್ಲಿಯೂ ಪುರುಷರ ಹಾಗೂ ಮಹಿಳೆಯರ  ಎರಡು ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್‌ಶಿಪ್‌ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಈ ಸಾಧನೆಯನ್ನು ಮೆರೆಯುತ್ತಾ ಬಂದಿದೆ. ಈ ಬಾರಿ ಪುರುಷರ ವಿಭಾಗದಲ್ಲಿ 308 ಅಂಕಗಳು ಹಾಗೂ ಮಹಿಳೆಯರ ವಿಭಾಗದಲ್ಲಿಯೂ 308 ಅಂಕಗಳನ್ನು ಗಳಿಸಿ ಒಟ್ಟು 616 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಪಡೆದಿದೆ. ಅಥ್ಲೆಟಿಕ್ಸ್, ಕ್ರಾಸ್‌ಕಂಟ್ರಿ, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ, ಖೋ-ಖೋ, ವಾಲಿಬಾಲ್, ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್, ಸಾಫ್ಟ್ಬಾಲ್, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಕ್ರಿಕೆಟ್, ಚೆಸ್, ಕರಾಟೆ, ಟೇಬಲ್ ಟೆನ್ನಿಸ್, ನೆಟ್‌ಬಾಲ್, ಹಾಕಿ, ಫುಟ್‌ಬಾಲ್, ಕುಸ್ತಿ, ಟಗ್ ಆಫ್ ವಾರ್ ಸೇರಿದಂತೆ ಅನೇಕ ಕ್ರೀಡಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಜೀವನ್ ಮಿತ್ರ ಸೇವಾ ಟ್ರಸ್ಟ್ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ, ಅಪಘಾತಕ್ಕಿಡಾದವರಿಗೆ ಸದಾ ನೆರವು ನೀಡುತ್ತಿರುವ ಸಂಸ್ಥೆ ಈ ಸಂಸ್ಥೆ ಇದೀಗ ತನ್ನೂರಿನ ಅನಾರೋಗ್ಯ ಪೀಡಿತರಾದ ಕೋಟತಟ್ಟು ಪಡುಕರೆಯ ವಿಜಯ ಪೂಜಾರಿಯವರ ನೆರವಿಗಾಗಿ ಕೋಟ, ಸಾಲಿಗ್ರಮ, ಸಾಸ್ತಾನ ಟೋಲ್ ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿ ನೆರವು ಕ್ರೂಡಿಕರಿಸಿದೆ. ಇತ್ತೀಚಿಗೆ ಮಣಿಪಾಲದ ಕೆ.ಎಂ.ಸಿಯಲ್ಲಿ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಜಯ್ ಪೂಜಾರಿ ಅವರ ಚಿಕಿತ್ಸಾ ವೆಚ್ಚಕ್ಕಾಗಿ ಸಂಸ್ಥೆಯ ಕಾರ್ಯಕರ್ತರು ಮತ್ತು ಸ್ನೇಹಿತರು ಸೇರಿಕೊಂಡು ಸುಮಾರು 69,000 ಹಣ ಸಂಗ್ರಹಿಸಿ ಮಾನವೀಯತೆಯ ಮೆರೆದಿದ್ದಾರೆ. ಇದನ್ನು ಗುರುವಾರ ಕೋಟದ ಅಮೃತೇಶ್ವರಿ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಕೊಲ್ಲೂರು ಮುಕಾಂಬಿಕೆ ಹಾಗೂ ಕೋಟದ ಅಮೃತೇಶ್ವರಿ ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಆ ಕುಟುಂಬದವರಿಗೆ ಹಸ್ತಾಂತರಿಸಿದರು. ಬುಧವಾರ ಸಾಸ್ತಾನ ಟೋಲ್ ಗೇಟ್ ಬಳಿ ಜೀವನ್ ಮಿತ್ರ ಸೇವಾ ಟ್ರಸ್ಟ್ ಮತ್ತು ವಿಜಯ್ ಪೂಜಾರಿ ಅವರ ಸ್ನೇಹಿತರು ಸೇರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನಾಗರೀಕ ಸೇವಾ ಸಮಾಜದಿಂದ ಒಬ್ಬ ಸದಸ್ಯರನ್ನು ನೇಮಕ ಮಾಡಬೇಕಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಬಯೋ ಡಾಟಾ (ವೈಯಕ್ತಿಕ ಮಾಹಿತಿ) ಹಾಗೂ ಸಹಮತಿ ಪತ್ರ ಸಹಿತ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಆಡಳಿತ ಶಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:0820-2574925 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಕಿಂಗ್ಸ್ ಚೆಸ್ ಅಕಾಡೆಮಿಯವರು ನಡೆಸಿದ 11ನೇ ರಾಷ್ಟ್ರ ಮಟ್ಟದ  ರ್‍ಯಾಪಿಡ್  ಚೆಸ್ ಸ್ಪರ್ಧೆಯಲ್ಲಿ 7ರ ವಯೋಮಾನದ ವಿಭಾಗದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್‌ ಮೀಡಿಯಂ ಸ್ಕೂಲ್‌ನ 2ನೇ ತರಗತಿ ವಿದ್ಯಾರ್ಥಿ ಪ್ರಮುಖ ಬಿ. ಪೂಜಾರಿ 6ರಲ್ಲಿ6 ಪಂದ್ಯವನ್ನು ಗೆದ್ದು ಪ್ರಥಮ  ಸ್ಥಾನವನ್ನು ಪಡೆದಿರುತ್ತಾನೆ . ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ  ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳು ಗುರುವಾರ ಜರುಗಿದವು. ಕುಂದಾಪುರ ಮತ್ತು ಬೈಂದೂರು ತಾಲೂಕಿಗೊಳಪಟ್ಟ ಸುಮಾರು 20ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 1000ಕ್ಕೂ ಹೆಚ್ಚು ಸ್ಪರ್ಧಿಗಳು 22 ಸಾಂಸ್ಕೃತಿಕ, 12 ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಕರಾಮತ್ತನ್ನು ಪ್ರದರ್ಶಿಸಿದರು. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಂಜಾನೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, 28 ವರ್ಷಗಳಿಂದ ನಡೆದು ಬರುತ್ತಿರುವ ಈ ಕಾರ್ಯಕ್ರಮವನ್ನು ದಿವಂಗತ ವೇದಮೂರ್ತಿ ರಾಮಚಂದ್ರ ಭಟ್ಟರು ಆರಂಭಿಸಿದ್ದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನವು ಧಾರ್ಮಿಕ ಕಾರ್ಯಕ್ರಮಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಬಾರಿಕೆರೆ ನಿವಾಸಿ ರಾಘವೇಂದ್ರ ಪೂಜಾರಿ ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದು ಈತನ ನೆರವಿಗೆ ಕೂಲಿ ಕಾರ್ಮಿಕ ಮಂಜುನಾಥ್ ಪೂಜಾರಿ ನೆರವಿನ ಹಸ್ತ ಚಾಚಿದ್ದಾರೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಈ ಮಹಾಕಾರ್ಯವನ್ನು ಮಂಜುನಾಥ್ ಪೂಜಾರಿ ಮಾಡಿದ್ದಾರೆ. ಅವರು ದಿನಂಪ್ರತಿ ಕೂಲಿನಾಲಿ ಮಾಡಿ ಸಂಪಾದಿಸಿದ ಹಣವನ್ನು ಶೇಖರಿಸಿ ಅನಾರೋಗ್ಯಕ್ಕಿಡಾದವರಿಗೆ, ಸ್ಥಳೀಯ ಸರಕಾರಿ, ಅನುದಾನಿತ ಶಾಲೆಗಳಿಗೆ ನೆರವು ನೀಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಸೇವಾಕಾರ್ಯ ಮಾಡಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಬಾರಿಕೆರೆ, ಬಾರಿಕೆರೆ ಯುವಕ ಮಂಡಲದ ಅಭಿಜಿತ್ ಕಾಂಚನ್, ವಿಜಯ್ ಪೂಜಾರಿ, ರತ್ನಾಕರ ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಂಐಟಿ ಕುಂದಾಪುರ ಮತ್ತು ಎಂಎಸ್‌ಡಿಸಿ ಮಣಿಪಾಲ ಸಂಸ್ಥೆಗಳು ಪ್ರಸ್ತುತ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ, ಉದ್ಯಮದ ಅವಶ್ಯಕತೆಗಳಿಗೆ ತಕ್ಕಂತೆ  ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಸಹಯೋಗದೊಂದಿಗೆ ಕೆಲಸ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದವು. ಎಂಎಸ್‌ಡಿಸಿ ಮಣಿಪಾಲ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಬ್ಲಾ ಮತ್ತು ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಡಾ. ಇಂದ್ರವಿಜಯ ಸಿಂಗ್ ಡೀನ್ ಮತ್ತು ವಿಭಾಗ ಮುಖ್ಯಸ್ಥರು ಎಐಎಂಎಲ್ ವಿಭಾಗ ಎಂಐಟಿ ಕುಂದಾಪುರ ಮತ್ತು ಎಂಎಸ್‌ಡಿಸಿ ಮಣಿಪಾಲದ ಅಧಿಕಾರಿಗಳಾದ ಡಾ. ಅಂಜಯ್ಯ ದೇವಿನೇನಿ, ಡಾ. ಎ ಗಣೇಶ್, ಪ್ರೊ. ನಾಗರಾಜ್, ಡಾ. ರಾಮಸ್ವಾಮಿ, ಪ್ರೊ. ಮಂಗಳಾ ಕೆ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾರವಾರದಿಂದ ಮಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಅಮಲುಭರಿತ ಚಾಕಲೇಟ್ ನೀಡಿ 4.86 ಲಕ್ಷ ಮೌಲ್ಯದ ಚಿನ್ನಾಭರಣ ನಗದು ದೋಚಿದ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ.10 ರಂದು ಬಂಟ್ವಾಳದ ಹರೀಶ ಎಂಬವರು ಕಾರವಾರದಿಂದ ಮಂಗಳೂರಿಗೆ ರೈಲಿನಲ್ಲಿ ಬರುವ ಸಂದರ್ಭದಲ್ಲಿ ಅಪರಿಚಿತ 35 ವರ್ಷದ ವ್ಯಕ್ತಿ ಭಟ್ಕಳದಿಂದ ಬಂದಿದ್ದ. ತನ್ನ ಪರಿಚಯ ಮಾಡಿಕೊಂಡು ಈ ಅಪರಿಚಿತ ವ್ಯಕ್ತಿ ಚಾಕಲೇಟ್ ನೀಡಿದ್ದನು. ಇದರಿಂದ ನಿದ್ದೆಗೆ ಜಾರಿದ ಹರೀಶ್ ಬೆಳಿಗ್ಗೆ ಎದ್ದು ನೋಡುವಾಗ ಕುತ್ತಿಗೆಯಲ್ಲಿದ್ದ ಸುಮಾರು 28 ಗ್ರಾಂ ತೂಕದ ರೂ 2,35,000 ಬೆಲೆಯ ಸರ, 08 ಗ್ರಾಂ ತೂಕದ ರೂ 70,000/- ಬೆಲೆಯ ಉಂಗುರ, Fast track watch ಬೆಲೆ ಸುಮಾರು 3500/-,ಮೊಬೈಲ್ ಒನ್ ಪ್ಲಸ್ ಸಿಮ್ ನಂ 9686675271 ಬೆಲೆ ಸುಮಾರು 28,000, ಶರ್ಟ ಜೇಬಿನಲ್ಲಿದ್ದ ರೂ 5000 ನಗದು ಮತ್ತು ಬ್ಯಾಗಿನಲ್ಲಿದ್ದ ರೂ 1,45,000/- ನಗದು ಒಟ್ಟು ಮೊತ್ತ 4,86,500/- ರೂ ಮೌಲ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳ ಅಂತರ್ ಕಾಲೇಜು ಕುಂದಗನ್ನಡ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯ ಉದ್ದೇಶದಿಂದ ಚೆನ್ನಿಮಣಿ 2025 – ಎಲ್ಲಾ ಒಂದ್ ಗಳ್ಗಿ ಬನಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಮಾಜಿ ಸಂಸದರು, ಕುಂದಗನ್ನಡ ಅಧ್ಯಯನ ಪೀಠದ ಸದಸ್ಯರಾದ ಕೆ. ಜಯಪ್ರಕಾಶ ಹೆಗ್ಡೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಇಂದು ಸರಕಾರ ಮಟ್ಟದಲ್ಲಿ ಕುಂದಾಪ್ರ ಕನ್ನಡ ಅಭಿವೃದ್ಧಿಗೆ ಪ್ರೋತ್ಸಾಹ ದೊರಕಿದ್ದು ಈ ನಿಟ್ಟಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಕುಂದಗನ್ನಡ ಅಭಿವೃದ್ಧಿಗೆ ಪೂರಕ ಕ್ರಮ ಕೈಗೊಳ್ಳಲಾಗುತ್ತಿದ್ದು ಕಾಲೇಜು ಮಟ್ಟದಲ್ಲಿ ಹಮ್ಮಿಕೊಂಡ ಇಂತಹ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲ ಸಚಿವರಾದ ರಾಜು ಮೊಗವೀರ ಕಾರ್ಯಕ್ರಮದ ಕುರಿತು ಯಾವುದೇ ಒಂದು ಭಾಷೆ ಕಲಿಯುವಾಗ ಅದರ ಹಿನ್ನೆಲೆಯನ್ನು ಅರ್ಥೈಸಿಕೊಂಡರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್  ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ  ಮಹಿಳೆಯರ ಥ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.

Read More