Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಠಿಣ ಪರಿಶ್ರಮ ಸಾಧಿಸಬೇಕೆಂಬ ಛಲ ನಮ್ಮಲ್ಲಿ ಆತ್ಮ ವಿಶ್ವಾಸವನ್ನು ನೆಲೆಗೊಳಿಸಿ ಉನ್ನತಿಯೆಡೆಗೆ ಕೊಂಡೊಯ್ಯುವ ಜೊತೆಗೆ ಯಶಸ್ಸನ್ನು ನೀಡುತ್ತದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ನಡೆದ ಕುಟುಂಬ ಸಂಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ೨೦೧೬-೧೭ರ ಸಾಲಿನಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ರಲ್ಲಿ ೬೨೨(ಶೇ.೯೯.೫೨) ಅಂಕ ಪಡೆದು ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಂಡ್ಸೆ ಸರಕಾರಿ ಫ್ರೌಡಶಾಲೆಯ ಚಿನ್ಮಯಿ, ಬೈಂದೂರು ಸರಕಾರಿ ಫ್ರೌಡಶಾಲೆಯ ಮಂಜೇಶ್, ಉಪ್ಪುಂದ ಸರಕಾರಿ ಫ್ರೌಡಶಾಲೆಯ ರಂಜಿತಾ ಅವರನ್ನು ಸನ್ಮಾನಿಸಲಾಯಿತು. ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕುಟುಂಬದ ಸದಸ್ಯರಾದ ಮೇಘನಾ ನಾಯರ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅರ್ಹತಾ ಪರೀಕ್ಷೆಯಲ್ಲಿ ೯ನೇ ರ‍್ಯಾಂಕ್ ಪಡೆದ ಚೈತನ್ಯ ಲಕ್ಷ್ಮೀ ಅವರನ್ನು ಗೌರವಿಸಲಾಯಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸರಕಾರಿ ಶಾಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ನಡೆಯಬೇಕು. ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ಮತ್ತು ಆಂಗ್ಲ ಮಾಧ್ಯಮ ಶಾಲೆಗಳತ್ತ ಪೋಷಕರು ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಭಾಷೆ ಬೋಧನೆಗೆ ಸರಕಾರ ಅನುಮತಿ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಮ್ಮಡಿಗೊಳ್ಳುವ ಸಾಧ್ಯತೆ ಇದೆ ಎಂದು ಬೈಂದೂರು ಶಾಸಕ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಶಾಲಾ ವಾಹನ ಹಸ್ತಾಂತರ ಸಮಾರಂಭದಲ್ಲಿ ಐಶ್ವರ್ಯ ಡಿ.ಮೇಸ್ತ ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಶಾಲಾ ವಾಹನವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನದ ಹೊಸ್ತಿಲಲ್ಲಿರುವ ಗುಜ್ಜಾಡಿ ಶಾಲೆಯು ಕಟ್ಟಡ ನವೀಕರಣವನ್ನು ದಾನಿಗಳ ಸಹಕಾರದಿಂದ ಮಾಡಿಕೊಂಡಿದ್ದು, ಇದೀಗ ಶಾಲೆಯ ಮಕ್ಕಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಗಾಂಧಿಪಥ-ಗ್ರಾಮಪಥ ಯೋಜನೆಯಡಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 22.01 ಕೋಟಿ ರೂಪಾಯಿ ವೆಚ್ಚದಲ್ಲಿ 13 ಕಾಮಗಾರಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಎಸ್‌ಇಪಿ ಯೋಜನೆಯಡಿಯಲ್ಲಿ 1 ಕೋಟಿ ರೂಪಾಯಿ ಅನುದಾನ ಕ್ಷೇತ್ರಕ್ಕೆ ಮಂಜೂರಾಗಿದ್ದು ಇದರ ಸದ್ಭಳಿಕೆಯನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು. ಹೊಸಾಡು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಾವಿ ಸೇತುವೆಗೆ ಕಾಯಕಲ್ಪ: ವೈಯಕ್ತಿಕ ಬಾವಿ ನಿರ್ಮಾಣಕ್ಕಾಗಿ ಹಾಗೂ ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ನೀರಾವರಿ ಅಭಿವೃದ್ಧಿ ನಿಗಮದ ವರಾಹಿ ಯೋಜನೆಯಡಿಯಲ್ಲಿ ತಲಾ 4.5 ಕೋಟಿ ಅನುದಾನವನ್ನು ಕಾಯ್ದಿಡಲಾಗಿದೆ. ವಂಡ್ಸೆಯ ಮೋರ್ಟ್ ಸೇತುವೆ, ಕಟ್‌ಬೇಲ್ತೂರು ಬಾಳಿಕೆರೆ ರಸ್ತೆ ಸೇರಿದಂತೆ ಕ್ಷೇತ್ರದ ಜನರ ಅಗತ್ಯತೆಗಳಿಗೆ ಆದ್ಯತೆ ನೀಡಿ ಲೋಕೋಪಯೋಗಿ ಇಲಾಖೆಯ ವಿವಿಧ ಅನುದಾನಗಳನ್ನು ಜೋಡಿಸಿಕೊಂಡು ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಳ್ಳಿಯ ಪ್ರದೇಶಗಳಲ್ಲಿ ರೈತರು ಹಿಂದಿನಿಂದಲೂ ನಡೆದುಬಂದ ಸಂಪ್ರದಾಯದಂತೆ ಕೃಷಿ ಹಾಗೂ ತೋಟಗಾರಿಕೆ ಮಾಡುತ್ತಿದ್ದಾರೆ. ಆದರೆ ಇಂದಿನ ಆಧುನಿಕ ಪದ್ದತಿಯ ಬಗ್ಗೆ ತಿಳುವಳಿಕೆ ಕಡಿಮೆ ಹಾಗೂ ಸಮರ್ಪಕ ಮಾಹಿತಿ ಕೊರತೆಯಿಂದಾಗಿ ಕೃಷಿಯಲ್ಲಿ ಸ್ವಲ್ಪಮಟ್ಟಿನ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೃಷಿಯ ಕುರಿತಾದ ಸಮಗ್ರ ಮಾಹಿತಿ, ಸರಕಾರದ ಯೋಜನೆಗಳನ್ನು ರೈತರಿಗೆ ಮನವರಿಕೆ ಮಾಡುವುದರ ಮೂಲಕ ಅವರಿಗೆ ಸ್ಪಂದಿಸಬೇಕು ಎಂದು ಕಾಲ್ತೋಡು ಗ್ರಾಪಂ ಅಧ್ಯಕ್ಷ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಪ್ರಾಯೋಜಿತ ರೈತ ಶಕ್ತಿ, ರೈತ ಸೇವಾ ಒಕ್ಕೂಟ, ಉಪ್ಪುಂದ ಇವರ ಸಹಯೋಗದೊಂದಿಗೆ ಶನಿವಾರ ಕಾಲ್ತೋಡು ಅಂಬೇಡ್ಕರ ಭವನದಲ್ಲಿ ನಡೆದ ಅಡಿಕೆ, ತೆಂಗು, ಕಾಳುಮೆಣಸು ಬೇಸಾಯ ಕ್ರಮ ಹಾಗೂ ತೋಟಗಾರಿಕಾ ಮತ್ತು ಕೃಷಿ ಇಲಾಖೆಯಿಂದ ಸಿಗುವ ಸರಕಾರಿ ಸೌಲಭ್ಯಗಳ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಣ್ಣಿನ ಫಲವತ್ತತೆಯ ಅರಿವು, ನೀರಿನ ಸಂರಕ್ಷಣೆ ಮತ್ತು ಸಮರ್ಪಕ ಬಳಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಅನಂತಪದ್ಮನಾಭ ನಾರಿ ಇವರನ್ನು ಸಹಕಾರಿ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಸುಧಾಕರ ಪೂಜಾರಿ, ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ನರಸಿಂಹ ಬಿ. ನಾಯಕ್, ಮಾಲತಿ ಪೂಜಾರಿ, ಶಾಖಾ ವ್ಯವಸ್ಥಾಪಕ ನಾಗರಾಜ, ಸಿಬ್ಬಂದಿಗಳಾದ ಉದಯ್, ಅಶ್ವಿನಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 2016-17ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಬೈಂದೂರು ಸೈಂಟ್ ಥೋಮಸ್ ರೆಸಿಡೆನ್ಸಿಯಲ್ ಸ್ಕೂಲ್‌ನ ವಿದ್ಯಾರ್ಥಿ ರಾಹುಲ್ ಪೂಜಾರಿ 10 ಸಿ.ಜಿ.ಪಿ.ಎ ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈತ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಹಾಗೂ ರತಿ ದಂಪತಿಗಳು ಪ್ರಥಮ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಸೆಸೆಲ್ಸಿ ಓದಿನ ಬಳಿ ಹೆಬ್ರಿಯಲ್ಲಿ ಹೊಲಿಗೆ ತರಬೇತಿಗೆ ಹೋಗುತ್ತಿದ್ದ ಯುವತಿಗೆ ಮೊಬೈಲ್ ಕರೆಯಲ್ಲಿ ಹಾಗೂ ಎದುರಿನಲ್ಲಿ ಸಿಕ್ಕಾಗ ಕಳೆದ ಮೂರು ತಿಂಗಳಿನಿಂದ ಈ ಮೂವರು ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದರು. ಆಕೆಯನ್ನು ತಾವು ಹೇಳಿದ ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದರು ಎನ್ನುವ ಎಂದು ಯುವತಿ ಆರೋಪಿಸಿದ್ದಾಳೆ. ಈ ಬಗ್ಗೆ ಶೇಡಿಮನೆಯ ಪ್ರಸಾದ್ ಹೆಗ್ಡೆ, ಪ್ರಶಾಂತ್ ಹೆಗ್ಡೆ ಮತ್ತು ವಿನಯ ಶೆಟ್ಟಿ ವಿರುದ್ಧ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುವಕರ ಬೆದರಿಕೆಯಿಂದ ಹೆದರಿದ ಯುವತಿ ಅದೇ ದಿನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡ ಯುವತಿಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆಗೆ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಗೆ ತೆರಳಿರುವ ಅಮಾಸೆಬೈಲು ಪೊಲೀಸರು ಯುವತಿಯಿಂದ ಹೇಳಿಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿಯ ಪ್ರತಿಷ್ಠಿತ ಗುರುಕುಲ ಪಬ್ಲಿಕ್ ಶಾಲೆ ಸತತ 7ನೇ ಬಾರಿಗೆ ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 2016-17ನೇ ಸಾಲಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿ ಪರೀಕ್ಷೆಗೆ ಹಾಜರಾದ 62 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ( 10 ಸಿ.ಜಿ.ಪಿ.ಎ) 3 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ( 9.8ಸಿ.ಜಿ.ಪಿ.ಎ ) ಅಲ್ಲದೇ 12 ವಿದ್ಯಾರ್ಥಿಗಳು ( 9ಕ್ಕಿಂತ ಹೆಚ್ಚು ಸಿ.ಜಿ.ಪಿ.ಎ) ಪಡೆದು ಪಾಲಕರು ಮತ್ತು ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪರೀಕ್ಷೆ ಬರೆದ ಇತರೆ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಸಂಸ್ಥೆಯು ದಾಖಲೆಯ ಫಲಿತಾಂಶವನ್ನು ಕಂಡಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಬಾಂಡ್ಯ ಎಜುಕೇಶನ್ ಟ್ರಸ್ಟ್ ಆಡಳಿತಕ್ಕೊಳಪಟ್ಟಿರುವ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಪಿಯು ಕಾಲೇಜು ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಬದುಕಿಗೆ ಪೂರಕವಾದ ವಾತಾವರಣವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಕೇಂದ್ರದಲ್ಲಿ ಅಂತರಾಷ್ಟ್ರೀಯ ಐಕಾನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಕಲ್ಯಾಣ ಕಾರ್ಯಕ್ರಮಗಳ ಹಾಗೂ ದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಉತ್ತಮ ಆಡಳಿತ ನೀಡುತ್ತಿದ್ದು, ಯಶಸ್ವೀಯಾಗಿ ಮೂರು ವರ್ಷ ಪೂರೈಸಿದೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಹೇಳಿದರು. ದಂಪತಿ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರದಲ್ಲಿರುವ ಸರಕಾರ ಕರ್ನಾಟಕದಲ್ಲಿಯೂ ಬೇಕೆಂದು ರಾಜ್ಯದ ಜನತೆ ತೀರ್ಮಾನಿಸಿದ್ದಾರೆ. ರಾಜ್ಯದ ಎಲ್ಲಾ ನಾಯಕರು ಏಕತೆ ಮತ್ತು ಸಕ್ರೀಯತೆಯ ಮನೋಭಾವನೆಯೊಂದಿಗೆ ಕೆಲಸ ಮಾಡಲಿದ್ದೇವೆ. ಬೇರೆ ಕಡೆಗಳಲ್ಲಿ ಬಿಕ್ಕಟ್ಟು ಹಾಗೂ ಇಕ್ಕಟ್ಟಿದ್ದರೆ, ಬಿಜೆಪಿ ನಾಯಕರಲ್ಲಿ ಹಾಗೂ ಪಕ್ಷದಲ್ಲಿ ಒಗ್ಗಟ್ಟಿದೆ. ಒಗ್ಗಟ್ಟಿನ ಪಕ್ಷವಾಗಿ ಮುನ್ನಡೆಯುವ ಮೂಲಕ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುವುದನ್ನೇ ನಾವು ನಿರೀಕ್ಷಿಸುತ್ತಿದ್ದೇವೆ ಎಂದರು. ದೇಶೀಯ ಗೋಸಂತತಿ ಉಳಿಸುವುದಕ್ಕೆ ಭಾರತ ಸರ್ಕಾರ ಬದ್ದವಾಗಿದೆ. ಆದರೆ…

Read More

ಬೈಂದೂರು/ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒಂದೇ ದಿನದಲ್ಲಿ ಸುಮಾರು 2,201.20ಲಕ್ಷ ರೂಪಾಯಿ ಕಾಮಗಾರಿಗೆ ಬೈಂದೂರು ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಗುದ್ದಲಿ ಪೂಜೆ ನೆರವೇರಿಸಿದರು. ಕಟ್‌ಬೆಲ್ತೂರು: ಕಟ್‌ಬೆಲ್ತೂರು ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಅಂದಾಜು 130.50ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಟ್‌ಬೆಲ್ತೂರು ಹರಗೋಡು ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಜಿಲ್ಲಾ ಕೆಡಿಪಿ ಸದಸ್ಯ ಎಸ್.ರಾಜು ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ್‌ಕುಮಾರ ಶೆಟ್ಟಿ ಮುನಿಯಾಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ಮದನ್‌ಕುಮಾರ ಉಪ್ಪುಂದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೌರಿ ದೇವಾಡಿಗ, ಜಿಲ್ಲಾ ಕಟ್‌ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಸೂಯ ಆಚಾರ್, ಪಕ್ಷದ ಪ್ರಮುಖರಾದ ಎಚ್.ಮಂಜಯ್ಯ ಶೆಟ್ಟಿ, ಇಲಾಖಾ ಅಧಿಕಾರಿಗಳಾದ ಸತೀಶ್ ಹಾಗೂ ದುರ್ಗಾದಾಸ್ ಮೊದಲಾದವರು ಇದ್ದರು. ಹಟ್ಟಿಯಂಗಡಿ: ಹಟ್ಟಿಯಂಗಡಿ ಗ್ರಾಮದಲ್ಲಿ ನಮ್ಮ ಗ್ರಾಮ ನಮ್ಮ…

Read More