ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಬೆಂಗಳೂರಿನ ಯಕ್ಷಗಾನ ಅಭಿಮಾನಿಗಳು, ಯಕ್ಷ ಸಂಘಟಕರು ಸೇರಿ ಒಂದು ವಿಭಿನ್ನ ಕಾರ್ಯಕ್ರಮ ಆಯೋಜಿಸಿದ್ದಾರೆ. ಕಲೆಯ ಬೆಳವಣಿಗೆಯಲ್ಲಿ ಕಲೆ, ಕಲಾವಿದ, ಪ್ರೇಕ್ಷಕ ಇವುಗಳು ಒಂದು ಸಾಮರಸ್ಯದ ಕೊಂಡಿ ಹೆಣೆದು ನಿಂತಿವೆ. ಯಕ್ಷಗಾನ ಕಲೆಯ ಸರ್ವಾಂಗೀಣ ತಿಳುವಳಿಕೆ ನೀಡುವ, ಹಿಂದಿನ ಸಂಪ್ರದಾಯ, ಇಂದಿನ ಸ್ಥಿತಿ – ದುಸ್ಥಿತಿಗಳ ಬಗೆಗಿನ ಸಮಷ್ಟಿ ಸಂವಾದವೇ ಈ ” ಯಕ್ಷ ವೇದ ತಾಳ ನಿನಾದ” ಕಾರ್ಯಕ್ರಮ. ಬೆಂಗಳೂರಿನ ಯಕ್ಷ ಕಲಾ ಸಾಗರ ಸೆಪ್ಟೆಂಬರ್ 24 ಭಾನುವಾರ ಮಧ್ಯಾಹ್ನ 3:30ಕ್ಕೆ ರವೀಂದ್ರ ಕಲಾಕ್ಷೇತ್ರ ಮುಂಬಾಗದ ಎಡಿಎ ರಂಗಮಂದಿರದಲ್ಲಿ ಯಕ್ಷ ವೇದ ತಾಳ ನಿನಾದ ಕಾರ್ಯಕ್ರಮ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನದ ರಾಗ, ತಾಳ, ನರ್ತನ, ಸಾಹಿತ್ಯ, ಮಟ್ಟು, ತಿಟ್ಟು, ಪ್ರಬೇಧ ಹೀಗೆ ಎಲ್ಲಾ ಆಯಾಮದ ಸಂವಾದಿಂದ ನಮ್ಮಲ್ಲಿರುವ ಜಿಜ್ಞಾಸೆಗಳಿಗೆ ಉತ್ತರ ದೊರಕಲಿದೆ. ಪ್ರೇಕ್ಷಕರೊಂದಿಗೆ ಸಂವಾದ: ಧಾರೇಶ್ವರರು, ಕೊಳಗಿಯವರು, ವಿಧ್ವಾನ್ರು, ಸರ್ವೇಶ್ವರರು, ಶಂಕರ ಭಾಗವತರು, ಎ.ಪಿ ಪಾಠಕರು, ಕೃಷ್ಣ ಯಾಜಿಯವರು ಭಾಗವಹಿಸಲಿದ್ದಾರೆ. ಪ್ರೇಕ್ಷಕರ ಜೋತೆ ಸಂವಾದದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಜರ್ನಿ ಎನ್ನುವ ಕಿರುಚಿತ್ರದ ಮುಹೂರ್ತವು ನೆರವೇರಿತು. ಛಾಯಾಗ್ರಾಹಕ ದಿನೇಶ್ ಗೋಡೆಯವರು ಕ್ಯಾಮರ ಆನ್ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರು ಕುಂದಾಪುರ್ ಹಾಗೂ 360’ ತಂಡದ ಸದಸ್ಯರಾದ ಸಚಿನ್ ಬಿ ಶೇರುಗಾರ್, ಲೋಕೇಶ್ ಪೂಜಾರಿ, ಅಭಿಷೇಕ್ ಶೇರುಗಾರ್, ನವೀನ್ ಕ್ಷತ್ರಿಯ, ಪ್ರವಿಣ್, ಗಣೇಶ, ರಾಜೇಶ್ ಆಚಾರ್ಯ, ಲಕ್ಷ್ಮೀ ಕಾಂತ್ ಬಿಜೂರು ಮೊದಲಾದವರು ಜೊತೆಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಬಿದ್ಕಲ್ ಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದಾರೆ. ಇಲ್ಲಿನ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ ವತಿಯಿಂದ ಹೋಟೇಲ್ ಪಾರಿಜಾತದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾದ ಖ್ಯಾತ ಗಾಯಕ ಶ್ರೀಪಾದ ಹೆಗಡೆ ಕಂಪ್ಲಿ ಅವರ ಶಾಸ್ತ್ರೀಯ ಸಂಗೀತ ಶ್ರೋತ್ರವರ್ಗದ ಭಾರಿ ಮೆಚ್ಚುಗೆಗೆ ಪಾತ್ರವಾಯಿತು. ಆರಂಭದಲ್ಲಿ ಶ್ರೀಪಾದ ಹೆಗಡೆ ಕಂಪ್ಲಿಯವರು ಕಾರ್ಯಕ್ರಮವನ್ನು ನಂದಾದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಗೀತಭಾರತಿ ಟ್ರಸ್ಟ್‌ನ ನಿರ್ದೇಶಕ ಯು.ಎಸ್.ಶೆಣೈ ಸ್ವಾಗತಿಸಿದರು. ಹಿರಿಯ ನಿರ್ದೇಶಕ ಬಿ.ವಿ. ಬಿಳಿಯ ಕಲಾವಿದರನ್ನು ಗೌರವಿಸಿದರು. ಶ್ರೀಪಾದ ಹೆಗಡೆಯವರಿಗೆ ತಬಲಾದಲ್ಲಿ ಹಿರಿಯ ಕಲಾವಿದ ಗೋಪಾಲಕೃಷ್ಣ ಹೆಗಡೆ, ಹಾರ್ಮೋನಿಯಂನಲ್ಲಿ ಶ್ರೀಪಾದ ಹೆಗಡೆಯವರ ಧರ್ಮಪತ್ನಿ ನಾಗವೇಣಿ ಹೆಗಡೆ, ಸಹಕಲಾವಿದರಾಗಿ ಶ್ರೀಪಾದ ಹೆಗಡೆಯವರ ಪುತ್ರ ವಿಶಾಲ ಹೆಗಡೆ, ತರುಣಗಾಯಕ ಅನಘ, ಹಾಗೂ ನೇಹಾ ಹೊಳ್ಳ ಸಹಕರಿಸಿದ್ದರು. ಸಂಗೀತ ಭಾರತಿ ಕಾರ್ಯದರ್ಶಿ ನಾರಾಯಣ ಕೆ. ಕಾರ್ಯಕ್ರಮ ನಿರೂಪಿಸಿದರು. ಹಿರಿಯ ನಿರ್ದೇಶಕ ಎ. ಭಾಸ್ಕರ ಹೆಬ್ಬಾರ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಘಟನೆಗಳು ಸಾಮಾಜಿಕ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಉಪ್ಪುಂದ ಜೇಸಿಐ ಸಪ್ತಾಹದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಪ್ರೇಕ್ಷಕರಲ್ಲಿ ಹೊಸ ಅಭಿರುಚಿ ಮೂಡಿಸುವ ಜತೆಗೆ ಹೆಚ್ಚುಕಾಲ ನೆನಪಿನಲ್ಲಿ ಉಳಿಯುತ್ತದೆ ಎಂದು ಜಿಪಂ ಮಾಜಿ ಸದಸ್ಯ ಎಸ್. ಮದನ್ ಕುಮಾರ್ ಹೇಳಿದರು. ಉಪ್ಪುಂದ ಜೇಸಿಐ ಘಟಕದ ’ಸ್ನೇಹಜೀವಿ-೨೦೧೭’ರ ಸಪ್ತಾಹದ ಐದನೇ ದಿನದ ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜೇಸಿಐನಿಂದ ಗ್ರಾಮೀಣ ಪ್ರದೇಶದ ಯುವಜನರಲ್ಲಿ ಆತ್ಮವಿಶ್ವಾಸದ ಜತೆಗೆ ಸೇವಾ ಮನೋಭಾವ ಮೂಡಿಸುವ ಕೆಲಸವಾಗುತ್ತಿದೆ. ದೇಶದ ಉನ್ನತೀಕರಣಕ್ಕೆ ಸಂಸ್ಥೆ ಮುನ್ನುಡಿ ಬರೆಯುತ್ತಿದ್ದು, ಯುವಪೀಳಿಗೆಯನ್ನು ಸಮಜದಲ್ಲಿ ಸುದೃಢವಾಗಿಸಲು ಅವರಿಗೆ ತರಬೆತಿಗಳನ್ನು ನೀಡುವ ಮೂಲಕ ತಯಾರುಗೊಳಿಸುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಪ್ಪುಂದ ಘಟಕದ ಅಧ್ಯಕ್ಷ ಮಂಜುನಾಥ ದೇವಾಡಿಗ ಸ್ವಾಗತಿಸಿದರು. ಈ ಸಂದರ್ಭ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಎಂ. ಮತ್ತು ಕರಾಟೆಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ ವಿಶ್ವನಾಥ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ನಿವೃತ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ ನೀಡಲಾಗುತ್ತಿರುವ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿಯು ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಗೋವಿಂದ ಬಿಲ್ಲವ ಕೆ. ಇವರಿಗೆ ದೊರೆತಿದೆ. ಕ್ರೀಯಾಶೀಲ ಶಿಕ್ಷಕರಾಗಿರುವ ಗೋವಿಂದ ಬಿಲ್ಲವ ಅವರು ೧೯೮೨ರಲ್ಲಿ ಶಿಕ್ಷಕರಾಗಿ ನೇಮಕಗೊಂಡು ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಂತರ ಪ್ರೌಢಶಾಲೆ ಶಿಕ್ಷಕರಾಗಿ ಬಡ್ತಿಹೊಂದಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಇವರು ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರಿಗೆ ವಿವಿಧ ತರಬೇತಿಗಳನ್ನು ನೀಡಿದ್ದಾರೆ. ಮುಖ್ಯೋಪಾಧ್ಯಾಯರಾಗಿಯೂ ಶಾಲಾಡಳಿತದ ಅನುಭವ ಹೊಂದಿದ್ದು, ಪ್ರಸ್ತುತ ಕಿರಿಮಂಜೇಶ್ವರ ಶಾಲೆಯಲ್ಲಿ ಒಂಭತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ೩೫ ವರ್ಷ ಸೇವಾ ಅನುಭವ ಹೊಂದಿದ ಇವರು ಇಲಾಖೆ ನೀಡುತ್ತಿರುವ ತರಬೇತಿಗಳನ್ನು ಪಡೆದು ಅದನ್ನು ತರಗತಿಯಲ್ಲಿ ಬೋಧನಾ ಕಲಿಕಾ ಪ್ರಕ್ರೀಯೇಯಲ್ಲಿ ಅಳವಡಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿಯೂ ಕ್ರೀಯಾಶೀಲರಾಗಿರುವ ಇವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೈಂದೂರು ಮಂಡಲ ಯುವಮೋರ್ಚಾ ನೇತೃತ್ವದಲ್ಲಿ ನಂದನವನ ಮಹಾಬಲೇಶ್ವರ ದೇವಸ್ಥಾನದ ಪರಿಸರದ ಸ್ವಚ್ಚತಾ ಕಾರ್ಯ ಜರುಗಿತು. ಈ ಸಂದರ್ಭ ಯುವಮೋರ್ಚ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ಶೆಟ್ಟಿ, ಖಂಬದಕೋಣೆ ಪ್ರಖಂಡ ಯುವಮೋರ್ಚ ಅಧ್ಯಕ್ಷ ರಾಘವೇಂದ್ರ ಖಂಬದಕೋಣೆ, ಪ್ರಧಾನ ಕಾರ್ಯದರ್ಶಿ ರಮೇಶ, ಗೋವಿಂದ, ಕ್ಷೇತ್ರ ಯುವಮೋರ್ಚ ಕಾರ್ಯಕಾರಿಣಿ ಸದಸ್ಯ ನಾಗರಾಜ ಪೂಜಾರಿ ಕೆರ್ಗಾಲು, ಕರಣದಾಸ ಹಾಗೂ ಇತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಮೋಘ ಆರ್ ಎಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಪ್ರತಿಭಾವಂತ ವಿದ್ಯಾರ್ಥಿಯಾದ ಅಮೋಘ್ ಮೂಡನಗದ್ದೆ ಶಾಂತಾ ಮತ್ತು ರಾಘವೇಂದ್ರ ಗಾಣಿಗ ದಂಪತಿಗಳ ಪುತ್ರನಾಗಿರುತ್ತಾನೆ. ಆಯ್ಕೆಯಾದ ವಿದ್ಯಾರ್ಥಿಗೆ, ನಿರ್ದೇಶನ ನೀಡಿದ ಶಿಕ್ಷಕ ಶ್ರೀಧರ್ ಪಿ., ಮತ್ತು ಶಾಲೆಯ ಎಲ್ಲಾ ಶಿಕ್ಷಕ ವೃಂದಕ್ಕೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪ್ರಭಾಕರ್, ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಗಾಣಿಗ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೆಂಕಟ್ರಮಣ ದೇವಾಡಿಗ ಅಭಿನಂದಿಸಿದ್ದಾರೆ.
ಸೋಮಶೇಖರ್ ಪಡುಕೆರೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಕುಂದಾಪುರ ತಾಲೂಕಿನ ವಿಶ್ವನಾಥ್ ಭಾಸ್ಕರ ಗಾಣಿಗ, ದಕ್ಷಿಣ ಆಫ್ರಿಕಾದ ಪೊಷೆಫ್‌ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂರು ಚಿನ್ನ ಹಾಗೂ 1 ಬೆಳ್ಳಿ ಪದಕ ಗೆದ್ದಿದ್ದಾರೆ. 83 ಕೆಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ವಿಶ್ವನಾಥ್, ಸ್ಕ್ವಾಟ್, ಡೆಡ್‌ಲಿಫ್ಟ್ ಹಾಗೂ ಸಮಗ್ರ ವಿಭಾಗದಲ್ಲಿ ಚಿನ್ನ ಗೆದ್ದರೆ, ಬೆಂಚ್‌ಪ್ರೆಸ್‌ನಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ಕೊಯಮತ್ತೂರಿನಲ್ಲಿ ನಡೆದ ಏಷ್ಯನ್ ಪವರ್‌ಲಿಫ್ಟಿಂಗ್‌ನಲ್ಲಿ ಪದಕ ಗೆಲ್ಲುವ ಮೂಲಕ ವಿಶ್ವನಾಥ್ ಮೊದಲ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದರು. ರಾಜ್ಯ, ವಿಶ್ವವಿದ್ಯಾಲಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ದಾಖಲೆಗಳನ್ನು ಬರೆದು ದೇಶದ ಬಲಿಷ್ಠ ಪುರುಷ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರತಿಕೂಲ ಹವಾಮಾನ: ಪೊಷೆಫ್‌ಸ್ಟ್ರೂಮ್‌ನಿಂದ ಮಾತನಾಡಿದ ವಿಶ್ವನಾಥ್, ”ಇಲ್ಲಿನ ಹವಾಮಾನಕ್ಕೆ ಹೊಂದಿಕೊಳ್ಳಲು ಕಷ್ಟವಾಯಿತು. ಇದರಿಂದಾಗಿ ಬೆಂಚ್‌ಪ್ರೆಸ್‌ನಲ್ಲಿ ಎತ್ತಿದ ಭಾರ ಕಡಿಮೆಯಾಯಿತು. ಸ್ಕ್ವಾಟ್‌ನಲ್ಲಿ 270 ಕೆಜಿ, ಬೆಂಚ್‌ಪ್ರೆಸ್‌ನಲ್ಲಿ 155…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಸೇರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ. ಆದರೆ ಈವರೆಗೆ ’ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಿಲ್ಲ. ಸೂಕ್ತ ಸಮಯದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ. ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ. ’ತಾನು ಬಿಜೆಪಿ ಬೆಂಬಲಿಸುತ್ತೇನೆ ಎಂದು ತಿಳಿದಿದ್ದರೂ ಸಿದ್ದರಾಮಯ್ಯ ಅವರು ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ’ ’ಬಿಜೆಪಿ ಅಥವಾ ಕಾಂಗ್ರೆಸ್ ಯಾವ ಪಕ್ಷ ಸೇರಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಕುಂದಾಪುರದ ವಾಜಪೇಯಿ ಎಂದೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಸಿದ್ಧಿ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದರೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸೋಲಿನ ರುಚಿ ತೋರಿಸಿವಷ್ಟು ಜನ ಬೆಂಬಲ ಹಾಲಾಡಿ ಅವರಿಗಿದೆ. ಆದ್ದರಿಂದ, ಅವರನ್ನು ಪಕ್ಷಕ್ಕೆ ಸೆಳೆಯಲು ಎರಡೂ ಪಕ್ಷಗಳು…
