ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ ಕಾರ್ಯನಿರ್ವಹಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ವಂಡ್ಸೆಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಪಂದನ, ಕೋಟಿ ವೃಕ್ಷ ಅಭಿಯಾನ ಹಾಗೂ ಕಾರ್ಯಕರ್ತರ ಸಭೆಯನ್ನದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಡವರು ಹಾಗೂ ದುರ್ಬಲ ವರ್ಗದವರನ್ನು ಮರೆತಿದೆ. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿಯೂ ಬಿಜೆಪಿಯ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಕಾಯೋನ್ಮಕವಾಗಬೇಕಿದೆ ಎಂದರು. ಕ್ಷೇತ್ರಾಧ್ಯಕ್ಷ ಉಪ್ಪಿನಕುದ್ರು ಸದಾನಂದ ಅಧ್ಯಕ್ಷತೆವಹಿಸಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಭೆ ಜರುಗಿತು. ನೂತನವಾಗಿ ರಚನೆಗೊಂಡ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ವಿಕ್ರಮ ಪೂಜಾರಿ ಗರ್ಜಿನಹಿತ್ಲು, ಕಾರ್ಯದರ್ಶಿಯಾಗಿ ನಾರಾಯಣ ಕೆ. ಬಿಲ್ಲವ ದುರ್ಮಿ, ಜೊತೆ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಹಾಗೂ ಅಶ್ವಿನಿ ಯಡ್ತರೆ ಆಯ್ಕೆಯಾಗಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾಗಿ ವೆಂಕಟಾಚಲ ಮಯ್ಯ, ಜ್ಯೋತಿ ಶೆಟ್ಟಿ ಯಡ್ತರೆ, ಎಸ್. ರಾಜು ಪೂಜಾರಿ, ಶಂಕರ ಪೂಜಾರಿ ತಗ್ಗರ್ಸೆ, ಡಾ. ಮಿಥುನ್ ಶೆಟ್ಟಿ ಅವರನ್ನು ಸೂಚಿಸಿ ಆಯ್ಕೆ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ನೇಹಿತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲವಲವಿಕೆಯಿಂದ ಭಾಗಿಯಾಗಿದ್ದ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ, ಜಡ್ಡಿನಕುದ್ರು ನಿವಾಸಿ ಅಮಿತ್ (18) ಮೃತ ದುರ್ದೈವಿ. ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ ಬಂದಿದ್ದ ಅಮಿತ್ ಧ್ವಜಾರೋಹಣ ಮುಗಿದ ಬಳಿಕ ಸಭಾಂಗಣದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಕುಂದಾಪ್ರ ಡಾಟ್ ಕಾಂ . ಮುಂಬೈಯಲ್ಲಿ ಉದ್ಯೋಗಿಯಾಗಿರುವ ಹಟ್ಟಿಕುದ್ರುವಿನ ಆನಂದ ಪೂಜಾರಿ ಹಾಗೂ ಸುಗಂಧಿ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯವರಾದ ಅಮಿತ್‌ಗೆ ಈ ಹಿಂದಿಯೂ ಹೃದಯ ಸಂಬಂಧಿ ಸಮಸ್ಯೆಯಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆನ್ನಲಾಗಿದೆ. ಅಕಾಲಿಕವಾಗಿ ಮರಣವನ್ನಪ್ಪಿದ್ದ ಅಮಿತ್‌ಗೆ ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಂ ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ : ಸತ್ಯ ಪ್ರಾಮಾಣಿಕತೆಗಳು ಎಂದಿಗೂ ತಮ್ಮ ಬೆಲೆ ಕಳೆದುಕೊಳ್ಳುವುದಿಲ್ಲ. ಅವು ಹೆಚ್ಚು ಮೌಲ್ಯಯುತ ಸಂಗತಿಗಳಾಗಿವೆ. ಎಂದಿಗೂ ಸತ್ಯವೇ ಜಯಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವೈಯುಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾದ ಗರಿಷ್ಠ ಮೌಲ್ಯವೆಂದರೆ ಅದು ಸತ್ಯನಿಷ್ಠೆಯಾಗಿದೆ. ನಮ್ಮ ದೇಶ ನಮಗೆ ಪೂಜನೀಯ, ಮಾತೃ ಸಮಾನ. ಸರ್ವ ಜನಾಂಗಕ್ಕೂ ಇಲ್ಲಿ ಬಾಳ್ವೆಗೆ ಸಮಾನ ಹಕ್ಕುಗಳಿವೆ. ಸಂವಿಧಾನವು ಮೂಲಭೂತವಾಗಿ ನಾಲ್ಕು ಪ್ರಧಾನ ಸ್ಥಂಭಗಳನ್ನು ಹೊಂದಿದ್ದು, ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಪ್ರಾಮುಖ್ಯತೆಯನ್ನು ಹೊಂದಿವೆ. ವಿದ್ಯಾರ್ಥಿಗಳು ದೇಶ ಹಾಗೂ ಸಮಾಜದಿಂದ ಪಡೆದುಕೊಂಡದ್ದನ್ನು ಮತ್ತೆ ಸಮಾಜಕ್ಕಾಗಿ ಧಾರೆಯೆರೆಯಬೇಕು ಹಾಗೂ ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬೇಕು ಎಂದು ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ ಹೆಗ್ಡೆ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಪದವಿನಲ್ಲಿರುವ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯೆಯೆಂಬುದು ಕಠಿಣ ಪರಿಶ್ರಮದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಹೆಚ್ಚಿನ ಯುವಶಕ್ತಿ ಭಾರತ ದೇಶದಲ್ಲಿದೆ. ಆದರೆ ಈ ಶಕ್ತಿಯು ದೇಶದ ಭದ್ರತೆಗೆ ವಿನಿಯೋಗಿಸಲು ಸಿಗುತ್ತಿಲ್ಲ. ಯುವಕರು ಭ್ರಮೆಯ ಗುಂಗಿನಲ್ಲಿ ತೇಲಾಡುತ್ತಿದ್ದಾರೆ. ದೇಶದ ಮುಂದೆ ದೊಡ್ಡ ಸವಾಲುಗಳೇ ಇದ್ದು, ಮುಂದಿನ ದಿನಗಳು ಮತ್ತಷ್ಟು ಕಷ್ಟಕರವಾಗಿದೆ. ಹೀಗಾಗಿ ರಾಷ್ಟ್ರದ ಏಳಿಗೆಗೆ ಒಳಿತಿಗಾಗಿ ನಮ್ಮನ್ನು ಅರ್ಪಿಸಿಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ಜಿಲ್ಲಾ ಉದ್ಯೋಗಿ ಕಾರ್ಯಪ್ರಮುಖ್ ವಿಜಯ ಕೊಡವೂರು ಹೇಳಿದರು. ಅವರು ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತಿಯೊಬ್ಬ ಭಾರತೀಯನ ಕಣಕಣದಲ್ಲಿ ಇದೆ. ರಾಷ್ಟ್ರ ಧರ್ಮವನ್ನು ಮೀರಿದ ಮತ್ತೊಬ್ಬ ಧರ್ಮವು ದೇಶದ ಬೆಳವಣಿಗೆಗೆ ಅಡ್ಡಗಾಲು ಹಾಕುತ್ತಿದೆ. ಇದರ ಕರಾಳ ಮುಖಗಳು ದೇಶ ಕಟ್ಟಲು ನಮಗೆ ತೊಂದರೆಯನ್ನುಂಟು ಮಾಡುತ್ತಿದೆ. ಕೇವಲ ಕೇರಳಕ್ಕೆ ಸೀಮಿತವಾಗಿದ್ದ ಜಿಹಾದಿ ಉಗ್ರವಾದ ಇಂದು ಕರಾವಳಿಯ ಮುಕ್ಕಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರ ಅಭಿವೃದ್ಧಿಯೇ ಆಡಳಿತ ಮಂತ್ರ ಎನ್ನುವ ನಿಟ್ಟಿನಲ್ಲಿ ಮನಸ್ವಿನಿ, ಮೈತ್ರಿ, ಸಕಾಲ, ಅನ್ನಭಾಗ್ಯ, ಕೌಶಲ್ಯ ಕರ್ನಾಟಕ, ಕ್ಷೀರ ಭಾಗ್ಯ ಹೀಗೆ ಹಲವಾರು ಯೋಜನೆಗಳ ರೂಪಿಸಿ ಯಶಸ್ವಿಯಾಗಿ ಜಾರಿಗೊಳಿಸಿದೆ. ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿ ಶೌಚಾಲಯ ನಿರ್ಮಾಣ ಗುರಿ ಪೂರೈಸಿದ್ದು, ಸಂಪೂರ್ಣ ಸ್ವಚ್ಛತೆ ಸಾಧಿಸಿ, ದೇಶದಲ್ಲೇ ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ಏಳನೇ ಸ್ಥಾನ ಪಡೆದಿದದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ.ಟಿ. ಹೇಳಿದರು. ಕುಂದಾಪುರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರಯೋತ್ಸವ ದ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ಸ್ವಚ್ಛ ಭಾರತ್ ಮಿಶನ್ ಯೋಜನೆಯಲ್ಲಿ ಕುಂದಾಪುರ ಪುರಸಭೆ ಬಯಲು ಶೌಚಾಲಯ ಮುಕ್ತ ಎಂದು ಘೋಷಣೆಯಾಗಿದ್ದು, ಹೆಮ್ಮಯ ಸಂಗತಿ ಎಂದ ಅವರು, ಜಿಲ್ಲೆಗೆ ಕ್ರೀಡಾ ಆಕಾಡೆಮಿ ಸ್ಥಾಪನೆಗೆ ಸರ್ಕಾರಸಮ್ಮತಿಸಿದ್ದು, ಜಿಲ್ಲಾ ವಸತಿ ಕ್ರೀಡಾ ಶಾಲೆಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಗ್ರಾಮೀಣ ಭಾಗದ ೧೦೩ ಕಿ.ಮೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಲ್ಲದೇ, ಮಹಾನ್ ಚೇತನರುಗಳು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರ ಸೈದ್ಧಾಂತಿಕ ನಿಲುವುಗಳು ಅವರು ಕಟ್ಟಿಕೊಟ್ಟ ಆದರ್ಶಯುತ ತತ್ವಗಳು ಅಲ್ಲದೇ, ನಮ್ಮ ಸುಧೀರ್ಘ ಪರಂಪರೆಯ ಮೌಲ್ಯಗಳು ಇಂದಿನ ಪೀಳಿಗೆಯ ಯುವಕರಿಗೆ ಮಾರ್ಗದರ್ಶಕಗಳಾಗಬೇಕು. ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಕೇವಲ ಒಂದು ದಿವಸದ ಹಬ್ಬವಾಗಿರದೇ, ಅದರ ನಿರಂತರ ಮೌಲ್ಯಗಳು ನಮಗೆಲ್ಲರಿಗೂ ಪ್ರೇರಣೆಯಾಗಬೇಕು ಎಂದು ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಧ್ವಜರೋಹಣ ಮಾಡಿದ ಶ್ರೀಮಾತಾ ಹಾಸ್ಪಿಟಲ್‌ನ ಖ್ಯಾತ ಮನೋತಜ್ಞರಾದ ಡಾ. ಪ್ರಕಾಶ್ ತೋಳಾರ್ ತಮ್ಮ ಮಾತುಗಳಿಂದ ಶಾಲೆಯ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯನ್ನು ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಧ್ವಜರೋಹಣದ ಜೊತೆಗೆ ವಿವಿಧ ಕವಾಯತುಗಳಾದ ಮಾರ್ಚ್ ಪಾಸ್ಟ್ , ಮಾಸ್ ಡ್ರಿಲ್ , ಪಿರಮಿಡ್ ಮತ್ತು ಕರಾಟೆ ಪ್ರದರ್ಶನಗಳು ನಡೆಯಿತು. ಅಲ್ಲದೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲೆಯ ತಂಡಗಳಾದ ರಾಮನ್, ಕಲ್ಪನಾ, ಆರ್ಯಭಟ ಮತ್ತು ಕಲಾಮ್ ಗಳ ನಡುವೆ ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಐಕ್ಯತೆಯನ್ನು ಸಾರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶ ಸ್ವತಂತ್ರವಾಗುವಲ್ಲಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ, ಮಹಾತ್ಮರ ತ್ಯಾಗ, ಬಲಿದಾನ ಹಾಗೂ ಲಕ್ಷಾಂತರ ವೀರ ಯೋಧರ ಪರಾಕ್ರಮ ಹಾಗೂ ರಕ್ತತರ್ಪಣವನ್ನು ಸ್ಮರಿಸಿದಾಗ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಲಿದೆ ಎಂದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಬೈಂದೂರು ಶಾಸಕರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಷ್ಟ್ರಧ್ವಜಾರೋಹಣಗೈದು ಮಾತನಾಡಿದರು. ನಮ್ಮ ವೀರ ಯೋಧರು ಜೀವದ ಹಂಗುತೊರೆದು ದೇಶ ರಕ್ಷಣೆ ಮಾಡಿದ ಪರಿಣಾಮ ಇಂದು ನಾವೆಲ್ಲರೂ ಕ್ಷೇಮವಾಗಿರಲು ಸಾಧ್ಯವಾಗಿದೆ. ಈ ನೆಲೆಯಲ್ಲಿ ನಾವೆಲ್ಲರೂ ಒಂದಾಗಿ ಪ್ರತಿದಿನವೂ ಯೋಧರನ್ನು ಸ್ಮರಿಸೋಣ. ನೂರಾರು ವರ್ಷಗಳಿಂದ ಎಲ್ಲಾ ಜಾತಿ, ಮತ, ಧರ್ಮದ ಜನರು ಒಂದಾಗಿ ಸೌಹಾರ್ದ ಹಾಗೂ ಸಾಮರಸ್ಯದಿಂದ ಬಾಳುತ್ತಿರುವ ನಮ್ಮ ಪರಿಸರವನ್ನು ಸಾಮಾಜಿಕ ಕಾಳಜಿ ಮೂಡಿಸುವ ಕೇಂದ್ರಗಳಾಗಿ ಪರಿವರ್ತಿಸೋಣ ಎಂಬ ಸಂದೇಶ ನೀಡಿದರು. ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಒ. ಆರ್. ಪ್ರಕಾಶ್, ಬೈಂದೂರು, ಯಡ್ತರೆ,…
ಶ್ರೇಯಾಂಕ್ ಎಸ್. ರಾನಡೆ | ಕುಂದಾಪ್ರ ಡಾಟ್ ಕಾಂ ಲೇಖನ. ಭಾರತ ದೇಶಕ್ಕೆ ಸ್ವಾತಂತ್ರ್ಯ ಹೇಗೆ ಬಂತು? ಈ ಪ್ರಶ್ನೆಯನ್ನು ನಿಮ್ಮ ಆಪ್ತರ, ಸಹೋದ್ಯೋಗಿಗಳ ಹಾಗೂ ಯಾವುದೇ ವಿದ್ಯಾರ್ಥಿಗಳ ಬಳಿ ಕೇಳಿ ನೋಡಿ. ಅದಕ್ಕೆ ನಿಮಗೆ ಸಿಗುವ ಉತ್ತರ ಗಾಂಧೀಜಿ ಕೇಂದ್ರಿತವಾಗಿರುತ್ತದೆ. ಖಂಡಿತವಾಗಿಯೂ ಸ್ವಾತಂತ್ರ್ಯ ಚಳುವಳಿಯ ಕೊನೆಯ ಘಟ್ಟದಲ್ಲಿ 1915-1947 ಗಾಂಧೀಜಿಯ ಪಾಲು ಬಹುಮುಖ್ಯವಾದದ್ದು. ಆದರೆ ಈ ದೇಶದ ಜನರ ಆಸ್ಥೆ, ಗಾಂಧೀಜಿಯ ಅಹಿಂಸಾ ಸತ್ಯಾಗ್ರಹ ಮಾತ್ರವೇ ದಪ್ಪ ಚರ್ಮದ ಬ್ರಿಟಿಷರ ಸೊಕ್ಕು ಮುರಿಯಲಿಲ್ಲ. ಅನೇಕ ಕ್ರಾಂತಿಕಾರಿಗಳು, ಸಣ್ಣ-ಪುಟ್ಟ ಹಳ್ಳಿ, ಪ್ರಾಂತ್ಯ-ಪ್ರದೇಶಗಳಲ್ಲಿ ರೈತ, ಬುಡಕಟ್ಟು ಹೀಗೆ ಅಸಂಖ್ಯಾತ ಜನರು ಆಗಾಗ್ಗೆ ಇಂಗ್ಲೀಷರ ಅಹಂಕಾರಕ್ಕೆ ಪೆಟ್ಟುಕೊಟ್ಟರೆ; ಹೊರಗಿನಿಂದ ನೇರವಾಗಿ ಹಾಗೂ ಒಳಗಿನಿಂದ ಪರೋಕ್ಷವಾಗಿ ಬ್ರಿಟಿಷರ ಸೊಕ್ಕನ್ನು, ಅವರ ಬೃಹತ್ ವಸಾಹತು ಸಾಮ್ರಾಜ್ಯದ ಅಸ್ಮಿತೆಯನ್ನೇ ಕಂಪಿಸುವಂತೆ ಮಾಡಿದ್ದು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕೆಂದು ಹೊರಟಿದ್ದು ಸುಭಾಷ್ ಚಂದ್ರ ಬೋಸ್ರ ಇಂಡಿಯನ್ ನ್ಯಾಷನಲ್ ಆರ್ಮಿ. ಆದರೆ ಐ.ಎನ್.ಎ ಸಾಗಿದ ಹಾದಿಯ ಪ್ರೇರಣೆ ಭಾರತದ ಉದ್ದಗಲಕ್ಕೂ ವ್ಯಾಪಿಸಿತ್ತು. ಶಾಂತಿಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ: ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪತ್ರಕರ್ತರ ವಿವಿಧ ಜಿಲ್ಲೆಯ ಪತ್ರಕರ್ತರ ಬಗ್ಗೆ ತಿಳಿದುಕೊಂಡಿದ್ದೇನೆ. ಆದರೆ ಉಡುಪಿ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಾರ‍್ಯ ನಿರ್ವಹಿಸುವ ಪತ್ರಕರ್ತ ಹೆಚ್ಚೇ ಇದ್ದಾರೆ ಎಂದು ಮೀನುಗಾರಿಕೆ, ಯುವಜನ ಸಬಲೀಕರಣ, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಬ್ರಹ್ಮಾವರದ ವಾರಂಬಳ್ಳಿ ಗ್ರಾ.ಪಂ. ಆವರಣದಲ್ಲಿ ಸೋಮವಾರ ಉದ್ಘಾಟನೆಗೊಂಡ ಬ್ರಹ್ಮಾವರ ಪ್ರೆಸ್ ಕ್ಲಬ್ ನ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಬ್ರಹ್ಮಾವರ ಪ್ರೆಸ್ ಕ್ಲಬ್‌ಗೆ ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ಜಾಗವನ್ನು ಹಾಗೂ ಬೇಕಾಗುವ ಎಲ್ಲ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುವುದಾಗಿ ಹೇಳಿದರು. ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಾತನಾಡಿ, ಇಂದು ಎಲ್ಲರು ಪತ್ರಿಕೆಯನ್ನು ಅವಲಂಭಿರಾಗಿರುವ ಕಾಲ. ಜನಮಾನಸಕ್ಕೆ ಹತ್ತಿರವಾಗಿ ಸಮಾಜದ ಒಳಿತನ್ನು ಪತ್ರಿಕೆ ಕೊಡುತ್ತಿದೆ ಎಂದರು. ಬ್ರಹ್ಮಾವರ ಪ್ರೆಸ್ ಕ್ಲಬ್‌ನ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ…
