Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷ್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮುಗಿಸಿ ತನ್ನ ಮನೆಗೆ ವಾಪಾಸಾಗಿ ಅಣ್ಣನ ಜೊತೆ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಹಾಗೂ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2561966, 9480805432 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಆದೇಶಿಸಿದ್ದು, ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹತ್ತು ಸಾವಿರ ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್  ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು ಇಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಾಲಕ ಮತ್ತು ಬಾಲಕಿಯರ ಶೌಚಾಲಯದ ಭೂಮಿ ಪೂಜೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಸಮಾಜದ ಒಗ್ಗೂಡುವಿಕೆಯಿಂದ ನಮ್ಮ ಊರಿನ ಸರಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಹಾಗೂ ಸಮಾಜದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಶಾಸಕರು ಸೌಲಭ್ಯವನ್ನು ಒದಗಿಸಿದ ಕ್ಯಾನ್ ಫಿನ್ ಹೋಂಮ್ಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷರಾದ ರಾಘವೇಂದ್ರ ಆಚಾರ್ಯ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಶೇಖರ ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೈನುಗಾರರಿಗೆ ಉತ್ತೇಜನ ನೀಡುವಲ್ಲಿ ಕೇಂದ್ರ ರಾಜ್ಯ ಸರಕಾರಗಳು ಪ್ರೋತ್ಸಾಹ ನೀಡುತ್ತಿವೆ. ಹಿಂದೆ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮ೦ತ್ರಿಯಾಗಿದ್ದ ಸ೦ದರ್ಭ ಹೈನುಗಾರರಿಗೆ ನೀಡಲು ಆರಂಭಿಸಿದ ಪ್ರೋತ್ಸಾಹಧನ ಇವತ್ತು ಆಶಾಕಿರಣವಾಗಿ ಪರಿಣಮಿಸಿದೆ. ಯಾವುದೇ ಸರಕಾರ ಬ೦ದರೂ ಇದನ್ನು ನಿಲ್ಲಿಸಲು ಸಾಧ್ಯವಿಲ್ಲ. ದ.ಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ ಇವತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿವೆ. ಇದರ ಹಿಂದೆ ಶ್ರಮಜೀವಿ ಹೈನುಗಾರರ ಪರಿಶ್ರಮವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಸಿದ್ಧಾಪುರದ ಶ್ರೀರಂಗನಾಥ ಸಭಾಭವನದಲ್ಲಿ ನಡೆದ ಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಐದು ದಶಕಗಳಿಂದ ನಿಸ್ವಾರ್ಥ ಸೇವಾ ಮನೋಭಾವದಿಂದ ಗ್ರಾಮೀಣ ಭಾಗದ ಹಾಲು ಉತ್ಪಾದಕರಿಗೆ, ರೈತ ಬಾಂಧವರಿಗೆ ಹಾಗೂ ಮಹಿಳಾ ಶಕ್ತಿಗೆ ಆರ್ಥಿಕ ಭದ್ರತೆ ನೀಡುತ್ತಾ ಸಹಕಾರ ರಂಗದಲ್ಲಿ ಹೆಮ್ಮೆಯ 50 ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂಭ್ರಮದ ಸಂಗತಿ. ಮುಂದಿನ ದಿನಗಳಲ್ಲಿ ಈ ಹಾಲು ಉತ್ಪಾದಕರ ಸಹಕಾರ ಸಂಘ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗುಜ್ಜಾಡಿ ಗ್ರಾಮದ ಲೈಟ್‌ಹೌಸ್ ಪ್ರದೇಶದಲ್ಲಿ ಉಂಟಾಗಿರುವ ಕಡಲ ಕೊರೆತದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಡಲ ಕೊರೆತದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕರಾವಳಿ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಗಳನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಶಾಸಕರು, ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ಮಟ್ಟದಲ್ಲಿಯೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ʼವಿದ್ಯಾರ್ಥಿಗಳು, ಯುವ ಜನರು ರಾಷ್ಟ್ರೀಯ ಸಂಗೀತದ ಬಗ್ಗೆ ಒಲವು ತೋರಿಸುವಂತೆ ಅವರಿಗೆ ಪ್ರೇರಣೆ ನೀಡುವ ಅಗತ್ಯವಿದೆ. ಒಮ್ಮೆಈ ಸಂಗೀತದ ರುಚಿ ಹತ್ತಿದರೆ ಅವರೇ ಆಸಕ್ತಿಯಿಂದ ಪಾಲ್ಗೊಳ್ಳುತ್ತಾರೆ ಎಂದು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಹೇಳಿದರು. ಅವರು ಸಂಗೀತ ಭಾರತಿ ಟ್ರಸ್ಟ್ರ ರಿ. ಕುಂದಾಪುರದ ಪಾರಿಜಾತ ಹೋಟೆಲ್‌ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ ಗ್ರೀಷ್ಮ ಸಂಗೀತ ಮಹೋತ್ಸವ ಜ್ಯೋತಿ ಬೆಳಗಿ ಉದ್ಘಾಟಿಸಿದರು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಗೀತ, ನೃತ್ಯ, ಜನಪದ ಕಲೆ ರಂಗ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ನೊಂದಾಯಿತ ಸಂಘ ಸಂಸ್ಥೆಗಳು, ವಾರ್ಷಿಕ ಲೆಕ್ಕ ಪತ್ರಗಳು ಸರಿ ಇದ್ದರೆ ವಿವಿಧ ಚಟುವಟಿಕೆ ನಡೆಸುತ್ತಿದ್ದರೆ ನೇರವಾಗಿ ಸರಕಾರದ ಸೇವಾ ಸಿಂಧು ಪೋರ್ಟಲ್ ಮೂಲಕವೇ ಕಾರ್ಯಕ್ರಮಕ್ಕಾಗಿ ನೆರವು ಕೋರಿ ಅರ್ಜಿ ಸಲ್ಲಿಸಬಹುದು. ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ ರಿ. 3 ದಶಕಗಳಿಂದ ನಿರಂತರ ಕಾರ್ಯಕ್ರಮ ನಡೆಸುತ್ತಿದ್ದು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮೀಣಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್), ಬ್ರಹ್ಮಾವರ ವತಿಯಿಂದ ಅಗರಬತ್ತಿ ತಯಾರಿಕಾ ತರಬೇತಿ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಹಿರಿಯ ಅಧ್ಯಾಪಕರಾದ ಶಾಮಿಲಿ ಅಜಯ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ತಮ್ಮ ಭಾಷಣದಲ್ಲಿ, ʼಸಣ್ಣ ಮಟ್ಟದ ಉದ್ಯಮವೆಂದು ಯಾವುದೇ ಉದ್ಯಮವನ್ನು ಕೀಳಾಗಿ ಕಾಣಬಾರದು. ಮಿತ ಬಂಡವಾಳದಿಂದಲೂ ಉತ್ತಮ ಉದ್ಯಮವನ್ನು ಆರಂಭಿಸಿ ಯಶಸ್ಸು ಸಾಧಿಸಬಹುದು. ಆದ್ದರಿಂದ ಯಾವುದೇ ಕೌಶಲ್ಯದ ಬಗ್ಗೆ ಕೀಳರಿಮೆ ಹೊಂದಬಾರದು. ಮಿತ ಬಂಡವಾಳದಿಂದಲೂ ಯಶಸ್ವಿ ಉದ್ಯಮ ಆರಂಭಿಸಬಹುದು. ಇಂದಿನ ಸಮಾಜದಲ್ಲಿ ಕೇವಲ ಪದವಿಗಳಿಗಿಂತ ಕೌಶಲ್ಯಾಧಾರಿತ ಉದ್ಯಮಗಳಿಗೆ ಹೆಚ್ಚಿನ ಆದ್ಯತೆ ದೊರೆಯುತ್ತಿದೆ. ಮಹಿಳಾ ಸಬಲೀಕರಣದತ್ತ ನೀವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ತರಬೇತಿಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು,ʼ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕೋಟ: ಪ್ರಾಥಮಿಕ ಹಂತದಲ್ಲೆ ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸಿದರೆ ಪ್ರಕೃತಿಯ ಮೇಲಿನ ಬಹುದೊಡ್ಡ ಹಾನಿಯನ್ನು ತಪ್ಪಿಸಬಹುದು ಎಂದು ಮುಂಬೈ ಒಎನ್‌ಜಿಸಿ ಇದರ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ದೂಳಂಗಡಿ) ಇಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಅನ್ನಪೂರ್ಣ ನರ್ಸರಿ ಪೇತ್ರಿ, ಬ್ರಹಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಹಯೋಗದೊಂದಿಗೆ 312ನೇ ವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಪ್ರಕೃತಿ ಇಲ್ಲದಿದ್ದರೆ ನಾವುಗಳು ಉಳಿಯಲು ಸಾಧ್ಯವಿಲ ಕೋವಿಡ್ ಸಂದರ್ಭದಲ್ಲಿ ನಾವುಗಳು ಕೃತಕ ಆಕ್ಸಿಜನ್ ತೆಗೆದುಕೊಂಡ ದಿನಗಳನ್ನು ಮಕ್ಕಳಿಗೆ ನೆನಪಿಸಿದ ಅವರು ಮುಂದಿನ ತಲೆಮಾರು ಬದುಕಬೇಕಾದರೆ ಈಗಲೇ ಗಿಡ ನಡುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಪಂಚವರ್ಣ ಸಂಘಟನೆಯಂತೆ ಮನೆ ಮನೆಯಲ್ಲಿ ಪರಿಸರವನ್ನು ಪ್ರೀತಿಸುವ ಜನಾಂಗ ಸೃಷ್ಠಿಯಾಗಲಿ ಎಂದು ಹಾರೈಸಿದರು. ಹಂಗಾರಕಟ್ಟೆ ಶಾಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳದ ಯಶಸ್ವಿ ಆಯೋಜನೆಗಾಗಿ ಯುವ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿದ್ದು, ಯುವ ನಾಯಕರು ಈ  ಉದ್ಯೋಗ ಮೇಳದ ಅಧಿಕೃತ ಪಾಲುದಾರರಾಗಿ ಕಾರ್ಯನಿರ್ವಹಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಕರೆ ನೀಡಿದರು.ಅವರು ಆಳ್ವಾಸ್ ಪ್ರಗತಿ ಹಿನ್ನೆಲೆಯಲ್ಲಿ ಭಾನುವಾರ ಮಿಜಾರಿನಲ್ಲಿ ಆಯೋಜಿಸಲಾದ ಯುವ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ  ಎರಡು ದಶಕಗಳಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಯಾವುದೇ ಲಾಭದ ಉದ್ದೇಶವಿಲ್ಲದೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮಹತ್ವದ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು. ಈ ಬಾರಿ 343ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈಗಾಗಲೇ ನೋಂದಾಯಿಸಿಕೊಂಡಿದ್ದು, ಡಿಗ್ರಿ, ಬಿ.ಕಾಂ., ಡಿಪ್ಲೊಮಾ, ಐಟಿಐ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ13ಕ್ಕೂ ಹೆಚ್ಚು ಉದ್ಯೋಗ ವಲಯಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿವೆ. ಅನುಭವ ಹೊಂದಿದವರಿಗೂ ಸೂಕ್ತ ಉದ್ಯೋಗಗಳಿವೆ…

Read More