ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಕ್ರಮ ಮರಳುಗಾರಿಕೆಯಲ್ಲಿ ಶ್ಯಾಮಿಲಾಗಿರುವ ಯಾರೋಬ್ಬರನ್ನು ಬಿಡುವ ಪ್ರಶ್ನೆಯಿಲ್ಲ. ಇದರ ಹಿಂದಿರುವ ಯಾವ ಶಕ್ತಿಯ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲರ ಮೇಲೂ ಕೇಸ್ ದಾಖಲು ಮಾಡಲಾಗುತ್ತದೆ. ಬಂಧಿಸಿದವರಲ್ಲಿ ಯಾರು ತಪ್ಪು ಮಾಡಿದ್ದಾರೆ ಯಾರು ಮಾಡಿಲ್ಲ ಎಂಬುದು ನ್ಯಾಯಾಲಯದಲ್ಲಿ ನಿರ್ಣಯವಾಗುತ್ತೆ ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರ್ದೇಶಕ ಹರಿಶೇಖರನ್ ಭರವಸೆ ನೀಡಿದರು. ಮರಳು ಅಡ್ಡೆಗಳ ಮೇಲೆ ದಾಳಿ ಮಾಡಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಕಂಡ್ಲೂರಿಗೆ ಭೇಟಿ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಕ್ರಮ ಮರಳುಗಾರಿಕೆ ತಡೆಯ ಜವಾಬ್ದಾರಿ ಪೊಲೀಸ್ ಇಲಾಖೆಗೆ ಮಾತ್ರ ಸಂಬಂಧಿಸಿದ್ದಲ್ಲ. ಕಂದಾಯ, ಗಣಿ ಮತ್ತು ಭೂವಿಜ್ಞಾನ, ಲೋಕಪಯೋಗಿ ಇಲಾಖೆ, ಅರಣ್ಯ ಇಲಾಖೆಗೂ ಸಂಬಂಧಪಟ್ಟಿದ್ದು, ಕಂದಾಯ ಮತ್ತು ಗಣಿ ಹಾಗೂ ಭೂವಿಜ್ಞಾನ ಇಲಾಖೆಗೆ ಗೊತ್ತಿಲ್ಲದೆ ಅಕ್ರಮ ಮರಳು ತೆಗೆಯಯಲು ಸಾಧ್ಯವಿಲ್ಲ. ಎಷ್ಟು ಮರಳು ಅಡ್ಡೆಗಳಿದೆ, ಪರವಾನುಗೆ ಎಷ್ಟಿದೆ, ಎಷ್ಟು ಮರಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಸರಕಾರಿ ಪ್ರಥಮ ದರ್ಜೇ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಶಂಕರನಾರಾಯಣ ಇವರ ಸಂಯಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ಸರಕಾರಿ ಪ್ರಥಮ ದರ್ಜೇ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಶಂಕರನಾರಾಯಣದಲ್ಲಿ ಜರುಗಿತು. ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜಶೇಖರ ವಿ. ಪಾಟೀಲ್ ಇವರು ಉದ್ಘಾಟಸಿ, ಇಂದಿನ ದಿನದಲ್ಲಿ ನೀರಿನ ಬವಣೆ ಹೆಚ್ಚಾಗುತ್ತಿದ್ದು, ನೀರಿನ ಬಳಕೆ ಕಡಿಮೆ ಮಾಡುತ್ತಾ, ನೀರಿನ ಭವಣೆಯಿಂದ ತೊಂದರೆಗೊಳಗಾಗದಂತೆ ಜಾಗೃತಿ ಮೂಡಿಸಬೇಕಾಗಿರುವುದು ಅತೀ ಅಗತ್ಯ ಎಂದು ಹೇಳಿದರು. ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಇದರ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷದ ತಾಪಮಾನ ಅತೀ ಹೆಚ್ಚಾಗಿದ್ದು, ನಮ್ಮ ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕ್ಷಾಮ ಹೆಚ್ಚಾಗಿದ್ದು ಬಿಸಿಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶ್ರೀರಾಮ ಭಗವಂತನಾದರೂ ಮಾನವನಾಗಿ ಹುಟ್ಟಿ ಮಾನವ ಧರ್ಮವನ್ನು ಹೇಗೆ ಪಾಲನೆಮಾಡಬೇಕು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾನೆ. ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶ ಮನುಕುಲಕ್ಕೆ ಎಂದೆಂದಿಗೂ ಅನುಕರಣೀಯ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಶ್ರೀರಾಮ ನವಮಿಯ ಪ್ರಯುಕ್ತ ಗುಜ್ಜಾಡಿಯ ಶ್ರೀರಾಮ್ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀರಾಮ್ ಭಗವಾನ್ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಉಪಾಧ್ಯಕ್ಷ ಶೇಖರ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ. ಗುಜ್ಜಾಡಿ, ರಾಜು ದೇವಾಡಿಗ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಮೇಸ್ತ, ಶ್ರೀ ನಾರಾಯಣಗುರು ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಪೂಜಾರಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಕೆ.ಗೋಪಾಲ ಪೂಜಾರಿ ಮತ್ತು ಬಿಲ್ಲವ ಸಮಾಜದ ಹಿರಿಯರಾದ ಬಾಲ ಪೂಜಾರಿಯವರನ್ನು ಮಂದಿರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲಸ ಹುಡುಕಿ ಬಂದ ವಲಸೆ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆ ಕುಂದಾಪುರದ ನೆಹರೂ ಮೈದಾನದಲ್ಲಿ ರಾತ್ರಿ ವಾಸ್ತವ್ಯ ಮಾಡುವ ಅನಿವಾರ್ಯತೆ ಇದ್ದು, ಬೇರೆಡೆ ವಸತಿ ಕಲ್ಪಿಸುವ ಅಗತ್ಯತೆ ಪರಿವಿದೆ. ಈಗಾಗಲೇ ಪುರಸಭೆ ವ್ಯಾಪ್ತಿಯಲ್ಲಿ ಸ್ಥಳ ಗುರುತಿಸುವ ಪ್ರಕ್ರಿಯೆ ನಡೆದಿದೆ. ಮಾನವೀಯ ನೆಲೆಯಲ್ಲಿ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಕರ್ತವ್ಯ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ.ಟಿ. ಹೇಳಿದರು. ಕುಂದಾಪುರ ಪುರಸಭೆ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ವಲಸೆ ಕಾರ್ಮಿಕರಿಗೆ ಪುನರ್ವಸತಿ ನಿಮಿತ್ತ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಕುಂದಾಪುರದಲ್ಲಿ ಉತ್ತರ ಪ್ರದೇಶ, ಬಿಹಾರದಿಂದ ಬಂದಿರುವ ಮರಳು ತೆಗೆಯುವ ಕಾರ್ಮಿಕರು, ರಾಷ್ಟ್ರೀಯ ಹೆದ್ದಾರಿ ಕಾರ್ಮಿಕರು, ನಿರ್ಮಾಣ ಕಾಮಗಾರಿ, ಕೂಲಿ ಕಾರ್ಮಿಕರನ್ನು ಕಾಣಬಹುದು. ಈ ಕಾರ್ಮಿಕರಿಗೆ ಊರಲ್ಲಿ ಕೃಷಿಭೂಮಿ ಇದ್ದರೂ ಕೂಡಾ, ಬರದ ಕಾರಣದಿಂದ ಅನುವಾರ್ಯವಾಗಿ ಇಲ್ಲಿಗೆ ಬಂದಿದ್ದಾರೆ. ಕಾರ್ಮಿಕ ಕಲ್ಯಾಣ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಸ್ಪಷ್ಟ ಮಾಹಿತಿ ಇವರಿಗೆ ಇಲ್ಲ ಎಂದು ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇವರ ವಿಸ್ತಾರ ಅರಿತುಕೊಂಡಾಗ ಧೇವರನ್ನು ಆರಾಧಿಸಲು ಸಾಧ್ಯವಾಗುತ್ತದೆ. ಉಪಕರಣದ ಜೊತೆಗೆ ಅಂತಃಕರಣವಿದ್ದಾಗ ದೇವರನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಬ್ಯಾಂಕಿನ ಎಜಿಎಂ ವಿದ್ಯಾಲಕ್ಷ್ಮೀ ಆರ್ ಹೇಳಿದರು. ಬಿಜೂರು ಗ್ರಾಪಂ ವ್ಯಾಪ್ತಿಯ ಶ್ರೀಮಕ್ಕಿಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಮಂಡಳಿಯ ೩೦ನೇ ವಾರ್ಷಿಕೋತ್ಸವದ ವಿಶೇಷ ಕಾರ್ಯಕ್ರಮ ಯಕ್ಷೋತ್ಸವ-೨೦೧೭ ಉದ್ಘಾಟಿಸಿ ಮಾತನಾಡಿದರು. ಇಂದು ನಾವು ಜಗತ್ತಿನ ಅಲೌಕಿಕ ಸುಖದ ಭ್ರಮೆಗೆ ಒಳಗಾಗುತ್ತಿದ್ದೇವೆ. ಇದರಿಂದ ಹೊರಬಂದು ನಮ್ಮೊಳಗಿನ ಆನಂದವನ್ನು ಕಾಣುವಂತಾಗಬೇಕು. ಇಂದಿನ ಯುವಪೀಳಿಗೆಗೆ ನಮ್ಮ ಸಂಸ್ಕೃತಿ ಮತ್ತು ದೇಶದ ಪರಂಪರೆಯನ್ನು ಕಲಿಸುವ ಶಿಕ್ಷಣದ ಅವಶ್ಯಕತೆಯಿದೆ. ಶಿಕ್ಷಣದ ಜತೆಗೆ ಸಾಂಸ್ಕೃತಿಕವಾಗಿಯೂ ಮಕ್ಕಳು ಬೆಳೆಯುವಲ್ಲಿ ಪಾಲಕರು ಪ್ರೇರೇಪಿಸಬೇಕು. ಇದು ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುವ ಮೂಲಕ ಜೀವನ ಮೌಲ್ಯಗಳನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಬಲ್ಲದು ಎಂದರು. ನಂತರ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮಾತನಾಡಿ, ನೂರಾರು ವರ್ಷಗಳ ಇತಿಹಾಸವಿದ್ದು, ಶಾಸ್ತ್ರೀಯ ಕನ್ನಡ ಶಬ್ದಗಳನ್ನೇ ಬಳಕೆಮಾಡಿಕೊಂಡು ಬಂದ ಯಕ್ಷಗಾನ ರಂಗಭೂಮಿ ತನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ರಾಜ್ಯ ಸರಕಾರ ಬಜೆಟ್‌ನಲ್ಲಿ ಬೈಂದೂರು ತಾಲೂಕನ್ನು ಹುಟ್ಟುಹಾಕಿ ಗಂಗೊಳ್ಳಿ ಗ್ರಾಮವನ್ನು ನೂತನ ಬೈಂದೂರು ತಾಲೂಕಿಗೆ ಸೇರ್ಪಡೆಯಾಗುವಂತೆ ಮಾಡಲಿದೆ ಎಂಬ ಮಾಹಿತಿ ದೊರೆಯುತ್ತಿರುವುದು ಗಂಗೊಳ್ಳಿಯ ನಾಗರಿಕರ ಮೇಲೆ ಕೊಡಲಿ ಪೆಟ್ಟು ಬಿದ್ದಂತೆ ಆಗಿದೆ. ಪ್ರಮುಖವಾಗಿ ಇಲ್ಲಿನ ಜನರ ಮತ್ಸ್ಯೋದ್ಯಮ, ಉನ್ನತ ಶಿಕ್ಷಣ, ಆರೋಗ್ಯ ಕ್ಷೇತ್ರಗಳ ಮೇಲೆ ಪ್ರಬಲವಾದ ಆಘಾತವಾಗಿದೆ. ಆದ್ದರಿಂದ ನೂತನವಾಗಿ ರಚನೆಯಾಗಲಿರುವ ಬೈಂದೂರು ತಾಲೂಕಿಗೆ ಗಂಗೊಳ್ಳಿ ಗ್ರಾಮವನ್ನು ಯಾವುದೇ ಕಾರಣಕ್ಕೂ ಸೇರ್ಪಡೆಗೊಳಿಸಬಾರದು ಎಂದು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು. ಗಂಗೊಳ್ಳಿ ಗ್ರಾಮವನ್ನು ನೂತನವಾಗಿ ರಚನೆಯಾಗಿರುವ ಬೈಂದೂರು ತಾಲೂಕಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಎದುರು ನಡೆದ ಸಾಂಕೇತಿಕ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಗಂಗೊಳ್ಳಿಯ ಜನರಿಗೆ ಕುಂದಾಪುರದೊಂದಿಗೆ ಅನೇಕ ದಶಕಗಳ ಅವಿನಾಭಾವ ಸಂಬಂಧವಿದೆ. ಗಂಗೊಳ್ಳಿಯ ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಕುಂದಾಪುರವನ್ನೇ ಅವಲಂಬಿಸಿದ್ದಾರೆ. ಕುಂದಾಪುರಕ್ಕೆ ಸಾರಿಗೆ ವ್ಯವಸ್ಥೆ ಕೂಡ ಉತ್ತಮವಾಗಿದೆ. ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ಹಲವು ವರ್ಷಗಳಿಂದ ಹಿಂದು ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ಮುಸ್ಲಿಮ್ ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳಬೇಕು. ಭಾರತದ ಶ್ರೇಷ್ಠತೆ, ಹಿಂದುತ್ವದ ಶ್ರೇಷ್ಠತೆಯನ್ನು ಮನಗಾಣಬೇಕು. ಹಿಂದುತ್ವದ ಬಗ್ಗೆ ಗೌರವ, ಭಕ್ತಿ ಬಂದಾಗ ನಮ್ಮನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ದೊ. ಕೇಶವಮೂರ್ತಿ ಹೇಳಿದರು. ಅವರು ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ಜರಗಿದ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು. ಸ್ವಾತಂತ್ರ್ಯಾನಂತರದ ಹಿಂದುತ್ವವನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಗೋಮಾತೆ ಹಿಂದೂಗಳಿಗೆ ಶ್ರದ್ಧೆ. ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಹಿಂದು ಜಾಗರಣ ವೇದಿಕೆ ಹೋರಾಟ ನಡೆಸಲಿದೆ. ಲವ್ ಜಿಹಾದ್ ಮೂಲಕ ಹಿಂದು ಯುವತಿಯರಿಗೆ ವಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಮನೆ, ನಿವೇಶನ ರಹಿತ ಅರ್ಜಿದಾರರ ಬೃಹತ್ ಸಮಾವೇಶವು ಮರವಂತೆ ಸಾಧನ ಸಭಾ ಭವನದಲ್ಲಿ ಯಶಸ್ವಿಯಾಗಿ ಜರಗಿತು. ಮರವಂತೆ ಗ್ರಾಮ ಮನೆ, ನಿವೇಶನ ರಹಿತರ ಹೋರಾಟ ಸಮಿತಿ ಅಧ್ಯಕ್ಷ ಮನ್ಸೂರ್ ಇಬ್ರಾಹಿಂ ಮರವಂತೆ- ನಿವೇಶನ ರಹಿತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ, ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ – ನಿವೇಶನ ರಹಿತ ೫೩೧ ಅರ್ಜಿಗಳನ್ನು ಗ್ರಾಮ ಪಂಚಾಯತ್ ಕಛೇರಿ ವತಿಯಿಂದ ಪರಿಶೀಲಿಸಿ, ನಿವೇಶನ ರಹಿತರ ಅಂತಿಮ ಪಟ್ಟಿ ಸಿದ್ಧಪಡಿಸಿ ೨ ವರ್ಷ ಸಂದರೂ ಈತನಕ ಸರಕಾರಿ ಜಾಗ ಗುರುತಿಸಿ ನಿವೇಶನದ ಭೂಮಿ ಹಕ್ಕು ಪತ್ರ ಮಂಜೂರು ಮಾಡದ ಸ್ಥಳೀಯ ಆಡಳಿತ ಕ್ರಮವನ್ನು ಖಂಡಿಸಿದರು. ಮನೆ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ – ಭೂಮಿ ಹಕ್ಕು ಪತ್ರ ಸಿಗುವ ತನಕ ಭೂಮಿ ಹಕ್ಕಿನ ಹೋರಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದಲ್ಲಿ ಪೂರ್ವನಿಗದಿತ ಸ್ಥಳದಲ್ಲೇ ಹೆದ್ದಾರಿ ಅಂಡರ್‌ಪಾಸ್ ನಿರ್ಮಿಸಬೇಕೆಂದು ಒಂದು ವರ್ಗದ ಸಾರ್ವಜನಿಕರು ಬುಧವಾರ ಧರಣಿ, ಮೆರವಣಿಗೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲ್ಲೂಕು ಪಂಚಾಯತ್ ಸದಸ್ಯ ಜಗದೀಶ ಪೂಜಾರಿ, ಸ್ಥಳೀಯರಾದ ರಾಮ ಖಾರ್ವಿ, ಅಶೋಕ ಆಚಾರ್, ನರಸಿಂಹ ಆಚಾರ್, ರಾಜೇಶ ಪೂಜಾರಿ ಹೆದ್ದಾರಿ ಚತುಷ್ಪಥಗೊಂಡ ಬಳಿಕ ವಾಹನಗಳ ಒತ್ತಡ ಹೆಚ್ಚುತ್ತದೆ. ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ರಸ್ತೆ ದಾಟುವುದು ಅಪಾಯಕಾರಿಯಾಗಲಿದೆ. ಆದುದರಿಂದ ಅಂಡರ್‌ಪಾಸ್ ಅತ್ಯಂತ ಅಗತ್ಯ. ಅದಕ್ಕೆ ಪೂರ್ವನಿಗದಿತ ಸ್ಥಳವು ಅತ್ಯಂತ ಪ್ರಶಸ್ತವಾಗಿದ್ದು, ಇಲ್ಲಿ ಅದನ್ನು ನಿರ್ಮಿಸುವುದರಿಂದ ಗಾಣಿಗರ ಕೇರಿ, ಹೊಳೆಬದಿ, ಗರಡಿಬೆಟ್ಟು, ಅರೆಹೊಳೆ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದರು. ಈ ಸಂಬಂಧದ ಮನವಿಯನ್ನು ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಬಂದಿದ್ದ ಬೈಂದೂರು ವಿಶೇಷ ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ನೀಡಲಾಯಿತು. ತಾಲೂಕು ಪಂಚಾಯತ್ ಸದಸ್ಯ ಮಹೇಂದ್ರ ಪೂಜಾರಿ, ಮಹಿಳೆಯರೂ ಸೇರಿದಂತೆ ನೂರಾರು ಜನರು ಧರಣಿ, ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರದೇಶದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ಸಮಾಜದ ೩೧ ವಟುಗಳಿಗೆ ಸಾಮೂಹಿಕ ಉಪನಯನ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ವಿಜಯ ಪೇಜಾತ್ತಾಯ ಇವರ ನೇತೃತದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ರಾಮನವಮಿ ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಇದೇ ಸಂದರ್ಭದಲ್ಲಿ ಸಮಾಜದ ಭಕ್ತ ವೃಂದದಿಂದ ಭಜನೆ ಮತ್ತು ನಾಮ ಸಂರ್ಕೀತನೆ ಕಾರ್ಯಕ್ರಮಗಳು ಜರುಗಿದವು. ತಾಲೂಕು ಗಾಣಿಗ ಸೇವಾ ಸಂಘ ಅಧ್ಯಕ್ಷ ಶ್ರೀನಿವಾಸ ಗಾಣಿಗ, ಕಾರ್ಯದರ್ಶಿ ಶಿವಾನಂದ ಗಾಣಿಗ, ಕೋಶಧಿಕಾರಿ ಶಂಕರನಾರಾಯಣ ಗಾಣಿಗ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ಮಾಣ ಸಮಿತಿ ಸದಸ್ಯರು, ಎಲ್ಲಾ ಘಟಕಗಳ ಅಧ್ಯಕ್ಷರು, ಮಹಿಳಾ ಸಂಘಟನೆಯ ಪದಾಧಿಕಾರಿಗಳು ಹಾಗೂ ಸಮಾಜ ಭಾಂದವರೂ ಉಪಸ್ಥಿತರಿದ್ದರು.
