ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದರೆ ಸಮಾಜ ಪ್ರಗತಿ ಕಾಣುತ್ತದೆ. ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವುದರೊಂದಿಗೆ ಪರಸ್ಪರ ಸಹಕಾರ ಮನೋಭಾವದಿಂದ ಜೀವನ ನಡೆಸಬೇಕಿದೆ. ಮಹಿಳಾ ಸಹಕಾರಿ ಸಂಘಗಳ ಸ್ಥಾಪನೆಯ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಶ್ಲಾಘನೀಯ. ಸಹಕಾರಿ ಸಂಘಗಳು ಮಹಿಳೆಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವತ್ತ ಗಮನಹರಿಸಬೇಕು ಹಾಗೂ ಸಂಘವನ್ನು ವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸಿ ಸಹಕಾರಿ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಾಗಬೇಕು ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು. ಅವರು ಕೊಡಪಾಡಿಯ ಪಾಂಡುರಂಗ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭವಾಗಿರುವ ಮಾರಿಕಾಂಬಾ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ನಾರಾಯಣ ಕೆ., ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ ನಾಯ್ಕ್, ಕುಂದಾಪುರದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ ಎಂ.ಜೆ., ಹೆಮ್ಮಾಡಿ ಪ್ರಗತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಕಾರ್ಯಕ್ರಮದ ಅಂಗವಾಗಿ ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದ ಧಾರ್ಮಿಕ ಮುಖಂಡ ಮಂಗೇಶ ಶೆಣೈ ಅವರು ಭಗವದ್ಗೀತೆಯ ಪರಿಚಯ, ಶ್ಲೋಕಗಳ ಉಚ್ಛಾರ, ವ್ಯಾಕರಣ, ಪದಗಳ ಅರ್ಥ, ಭಾವಾರ್ಥ ಮುಂತಾದವುಗಳನ್ನು ತಿಳಿಸಿದರು. ಭಗವದ್ಗೀತೆಯ ಪ್ರಥಮ ಎರಡು ಅಧ್ಯಾಯಗಳನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸಂಸ್ಮರಣೆ ಹಾಗೂ ಗುರುವಂದನ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಂದಿನ ಒಂದು ವರ್ಷ ಪರ್ಯಂತ ಭಗವದ್ಗೀತೆಯ ಬೋಧನೆ ಹಾಗೂ ಮಕ್ಕಳಿಗೆ ಧಾರ್ಮಿಕ, ಬೌದ್ಧಿಕ ವ್ಯಕ್ತಿತ್ವ ವಿಕಸನದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಜಿ.ಸುದರ್ಶನ ಆಚಾರ್ಯ, ಬಿ.ಪ್ರಕಾಶ ಪಡಿಯಾರ್, ನಿನಾದ ಸಂಸ್ಥೆಯ ಪದಾಧಿಕಾರಿಗಳು, ಸಮಾಜಬಾಂಧವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪರಿವರ್ತನ ಪುನರ್ವಸತಿ ಕೇಂದ್ರ, ಕೋಟ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯ ಹಾಗೂ ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ, ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಎ.೦೫ರಂದು ಕೋಟದ ಪರಿವರ್ತನ ಪುನರ್ವಸತಿ ಕೇಂದ್ರದಲ್ಲಿ 18ನೇ ಮಾಸಿಕ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ನಡೆಯಿತು. ಪರಿವರ್ತನ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಕಾಶ್ ಸಿ. ತೋಳರ್ ರವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಈ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುತ್ತಿದ್ದು, ಬಡ ರೋಗಿಗಳು ತಮ್ಮ ಚಿಕಿತ್ಸೆ ಹಾಗೂ ಔಷಧಗಳನ್ನು ಮುಂದುವರಿಸಲು ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ ದಾನಿಗಳ ಸಹಕಾರಕ್ಕಾಗಿ ಅವರನ್ನು ಅಭಿನಂದಿಸಿದರು. ಕುಂದಾಪುರ ಪುರಸಭೆ ಉಪಾಧ್ಯಕ್ಷರಾದ ರಾಜೇಶ್ ಕಾವೇರಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಜೀವನದಲ್ಲಿ ಅವಿಭಕ್ತ ಕುಟುಂಬ ಪದ್ಧತಿ, ನಗು ಮತ್ತು ಸಂತೋಷದ ಮಹತ್ವ ಹಾಗೂ ಮಾನಸಿಕ ರೋಗಗಳಿಗೆ ಬೇಕಾಗುವ ಚಿಕಿತ್ಸೆಗಳ ಮಹತ್ವವನ್ನು ತಿಳಿಸಿ ಎಲ್ಲರೂ ಮಾನಸಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಶಾಲೆ ಮುಚ್ಚುತ್ತಿದ್ದಾರೆ. ಎಂಬ ಕೂಗಿನ ನಡುವೆಯೇ ಒಂದಷ್ಟು ಶಾಲೆಗಳಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಗೋಚರಿಸುತ್ತಿವೆ. ಕನ್ನಡ ಶಾಲೆಗಳ ಕಾಲ ಮುಗಿಯಿತೆನ್ನುವ ಆತಂಕದ ನಡುವೆಯೇ ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಾವು ಕಲಿತ ಶಾಲೆಯನ್ನು ಉಳಿಸಿಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಸಮನಾಗಿ ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕಿಸುವಲ್ಲಿ, ಶಾಲೆಗೆ ಅಗತ್ಯವಾದ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಲ್ಲಿ ಶ್ರಮಿಸುತ್ತಿದ್ದಾರೆ ಎನ್ನುವುದು ಸದಸ್ಯ ಆಶಾದಾಯಕ ಸಂಗತಿ. ಯಳಜಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿಗಳು ಕೂಡ ತಮ್ಮ ಶಾಲೆಯ ಸರ್ವತೋಮುಖ ಏಳಿಗೆಗಾಗಿ ಪಣತೊಟ್ಟಿದ್ದಾರೆ. ತಾವು ಕಲಿತ ಶಾಲೆ ಅಭಿವೃದ್ಧಿಯನ್ನು ಕಾಣಬೇಕು ಇಂದಿನ ವಿದ್ಯಾರ್ಥಿಗಳ ಓದಿಗೆ ಪೂರಕವಾದ ವ್ಯವಸ್ಥೆಯನ್ನು ಮಾಡಕೊಡಬೇಕು ಎಂಬ ನೆಲೆಯಲ್ಲಿ ಹಳೆವಿದ್ಯಾರ್ಥಿಗಳು ಹಾಗೂ ಊರಿನವರ ಜೊತೆಗೂಡಿ ‘ಯಳಜಿತ ವಿದ್ಯಾಚಕ್ರ ಎಜುಕೇಶನಲ್ ಟ್ರಸ್ಟ್’ ಸ್ಥಾಪಿಸಿ ಆ ಮೂಲಕ ಶಾಲೆಗೆ ನೆರವಾಗುವ ಗಟ್ಟಿ ಮನಸ್ಸು ಮಾಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಟ್ರಸ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶಕುಮಾರ್ ಎಂ. ಶೆಟ್ಟಿ ಉಪ್ಪುಂದ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರವು ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಹರೀಶಕುಮಾರ್ ಎಂ, ಶೆಟ್ಟಿ ಉಪ್ಪುಂದ, ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ ಗಾಣಿಗ, ಅಂಬಿಕಾ ರಾಜು ದೇವಾಡಿಗ, ರಾಜೇಶ ಕಾರಂತ, ಜಯಂತಿ ವಿಜಯಕೃಷ್ಣ ಪಡುಕೋಣೆ, ನರಸಿಂಹ ಹಳಗೇರಿ, ಡಾ. ಅಭೀಷೆಕ್ ಪಿಳ್ಳೆ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು. ಕೊಲ್ಲೂರಿನ ಜಗದಾಂಬಿಕಾ ಅತಿಥಿ ಗೃಹದಲ್ಲಿ ಕೊಲ್ಲೂರು ದೇಗುಲದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಗನ್ನಾಥ ಅವರ ನೇತೃತ್ವದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಹರೀಶ್‌ಕುಮಾರ್ ಶೆಟ್ಟಿ ಅವರ ಪರವಾಗಿ ೬ ಮಂದಿ ಸದಸ್ಯರು ಕೈ ಎತ್ತುವ ಮೂಲಕ ಬಹುಮತ ತೋರಿದ್ದರಿಂದಾಗಿ ಅವರು ವ್ಯವಸ್ಥಾಪನಾ ಸಮಿತಿಯ…
ತಗ್ಗರ್ಸೆ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆವಿಷ್ಕಾರ ಮಾಡುವ ಗುಣವಿದ್ದರೆ ಪಠ್ಯ ಚಟುವಟಿಕೆಯೊಂದಿಗೆ ಹೊಸ ಹೊಸ ಯೋಜನೆ ಯೋಜನೆಗಳನ್ನು ಅಳವಡಿಸಿಕೊಂಡು ಪ್ರಾಯೋಗಿಕ ಅನುಭವವನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಧಿತಿ ಶೆಟ್ಟಿ ಹೇಳಿದರು. ಅವರು ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ವತಿಯಿಂದ ಆಯೋಜಿಸಲಾದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ರಾಮನ್ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ತರಗತಿಯಲ್ಲಿ ಎಷ್ಟೇ ಪಾಠ ಪ್ರವಚನಗಳನ್ನು ಮಾಡಿದರೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ದೊರೆಯದು. ವಿದ್ಯಾರ್ಥಿಗಳಿಗೆ ಪ್ರವಾಸ, ಪ್ರಾತ್ಯಕ್ಷಿಕೆ ಹಾಗೂ ವಸ್ತು ಪ್ರದರ್ಶನಗಳನ್ನು ಆಯೋಜಿಸಿ ಸುಲಭವಾಗಿ ಮನವರಿಕೆ ಮಾಡಬಹುದಾಗಿದ್ದು ಆ ದಿಸೆಯಲ್ಲಿ ತಗ್ಗರ್ಸೆ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ಅಭಿಯಾನದ ಮೂಲಕ ಹಮ್ಮಿಕೊಂಡ ಕಾರ್ಯಕ್ರಮ ಸೃಜನಶೀಲ ಚಿಂತನೆಗೆ ದಾರಿಮಾಡಿಕೊಡುತ್ತದೆ ಎಂದರು. ತಾಲೂಕು ಪಂಚಾಯತ್ ಸದಸ್ಯೆ ಮಾಲಿಕೆ ಕೆ. ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನ ಚಿನ್ನಾಭರಣದ ಅಂಗಡಿಯೊಂದರ ಹಿಂಭಾಗದ ಗೋಡೆ ಕೊರೆದು ನುಗ್ಗಿ ಕಳ್ಳತನ ನಡೆಸಲಾಗಿದೆ. ಇಲ್ಲಿನ ಗೋಲ್ಡ್ ಜುವೆಲರ್ಸ್ ಹಿಂಭಾಗದ ಗೋಡೆಯ ಮೇಲ್ಭಾಗದಲ್ಲಿರುವ ಚಿಕ್ಕ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಮೂಲಕ ಕೊರೆದು ಒಳನುಗ್ಗಿದ ಕಳ್ಳರು ಅಪಾರ ಪ್ರಮಾಣದ ಚಿನ್ನಾಭರಣ ದೋಚಿದ್ದಾರೆ. ಅಂಗಡಿಯಲ್ಲಿರುವ ಸಿಸಿ ಕೆಮರಾ ಸಂಪರ್ಕ ಕಡಿತಗೊಳಿಸಿದ್ದಾರೆ. ಮಾತ್ರವಲ್ಲದೇ ಹಾರ್ಡ್ ಡಿಸ್ಕ್ ಕದ್ದೊಯ್ದಿದ್ದಾರೆ. ಅಂಗಡಿಯ ಒಳ ಹೊರಗಿನ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರುವವರೇ ಈ ಕಳವು ನಡೆಸಿರುವ ಸಾಧ್ಯತೆ ಇದೆ. ಸುಮಾರು ಎರಡು ಕೆ.ಜಿ. ಚಿನ್ನಾಭರಣ ಹಾಗೂ 15 ಕೆ.ಜಿ.ಯಷ್ಟು ಬೆಳ್ಳಿಯ ಆಭರಣಗಳು ಕಳವಾಗಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿಗಳು ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನಾದ್ಯಂತ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಮಟ್ಟಹಾಕಲು ತೆರಳಿದ್ದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಅವರ ಮೇಲೆ ಕೊಲೆ ಯತ್ನ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಕುಂದಾಪುರ ಉಪವಿಭಾಗಾಧಿಕಾರಿಗಳಿಗೆ ಹಲವು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳೇ ಸ್ವತಃ ಬಂದು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳೂವಂತೆ ಆಗ್ರಹಿಸುತ್ತಿದ್ದರು. ಹಾಗಾಗಿ ಭಾನುವಾರ ರಾತ್ರಿ ೧೦ ಗಂಟೆಯ ಸುಮಾರಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅವರ ಅಂಗರಕ್ಷಕ ಹಾಗೂ ಜಿಲ್ಲಾಪಂಚಾಯತಿಯ ಗುತ್ತಿಗೆ ವಾಹನದ ಚಾಲಕ, ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್, ಅವರ ಪತಿ, ಹಾಗೂ ಚಾಲಕನೊಂದಿಗೆ ಎರಡು ವಾಹನಗಳಲ್ಲಿ ತೆರಳಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಸ್ಥಳಗಳಿಗೆ ತೆರಳಿದ್ದರು. ಹಳ್ನಾಡಿ – ಕಡ್ಲೂರು ಮರಳು ಧಕ್ಕೆಗೆ ದಾಳಿ: ಹಳ್ನಾಡಿ ಧಕ್ಕೆಯ ಕಡೆಗೆ ವಾಹನದಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಗಳು ಬೈಕಿನಲ್ಲಿ ಬೆಂಬತ್ತಿಕೊಂಡು ಬರುತ್ತಿದ್ದುದು ಗಮನಕ್ಕೆ ಬಂದಿದೆ. ಕೆಲವು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು/ಗಂಗೊಳ್ಳಿ : ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ರೋಟರಿ ಕ್ಲಬ್ ಬೈಂದೂರು ಸಹಕಾರದೊಂದಿಗೆ ಆಯೋಜಿಸಲಾದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್. ರಾಜು ಪೂಜಾರಿ ಮಗುವಿಗೆ ಪೊಲೀಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಕಾರದೊಂದಿಗೆ ಜರಗಿದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಚಾಲನೆ ನೀಡಿ ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಾವುಂದ ಪಂಚಾಯತ್ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ನಾವುಂದ ಅಂಡರ್‌ಪಾಸ್ ಪರ ಮತ್ತು ವಿರೋಧದಿಂದ ಸಾಕಷ್ಟು ಗೊಂದಲ ಉಂಟಾಯಿತು.ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಉಪನಿರೀಕ್ಷಕ ಬಿರ್ತಿರಾಜ್ 1 ಎಕರೆಗೆ 400 ಗಿಡಗಳನ್ನು ಅರಣ್ಯ ಇಲಾಖೆಯಿಂದ ನೀಡುವುದಾಗಿ ತಿಳಿಸಿದರು. ನಾವುಂದದಲ್ಲಿ ಡಿಪೋ ಮಾಡ ಬೇಕೆಂದು ಸಾರ್ವಜನಿಕರು ಆಗ್ರಹಿಸಿ ದರು. ಕಾರ್ಯಕ್ರಮದಲ್ಲಿ ಅರೆಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಹೇಮಲತಾ ಸಮಯೋಚಿತವಾಗಿ ಮಾತನಾಡಿದರು.ಮತ್ತು ನೋಡೆಲ್ ಅಧಿಕಾರಿ ಇಬ್ರಾಹಿಂ ಅವರು ಪ್ರಶ್ನೆಗಳಿಗೆ ಉತ್ತರಿಸಿದರು.ಗ್ರಾ.ಪಂ. ಅಧ್ಯಕ್ಷ ನರಸಿಂಹ ದೇವಾಡಿಗ, ಉಪಾಧ್ಯಕ್ಷೆ ಜಯಂತಿ.ಡಿ, ತಾ.ಪಂ. ಸದಸ್ಯರಾದ ಮಹೇಂದ್ರ ಪೂಜಾರಿ, ಜಗದೀಶ ಪೂಜಾರಿ, ಪಶು ವೈದ್ಯ ಅರುಣ ಕುಮಾರ್, ಪಂ. ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಸ್ವಾಗತಿಸಿ, ರಾಜು ಪೂಜಾರಿ ವಂದಿಸಿದರು.
