ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಆಟೋ ರಿಕ್ಷಾ ಚಾಲಕರ ಬೇಡಿಕೆಗೆ ಅನುಗುಣವಾಗಿ ಮ್ಯಾಂಗೀಸ್ ರಸ್ತೆಯ ವಠಾರದಲ್ಲಿ ತಾಲೂಕು ಪಂಚಾಯತ್ ನಿಧಿಯಿಂದ ಸುಸಜ್ಜಿತವಾದ ಆಟೋ ರಿಕ್ಷಾ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆಟೋ ರಿಕ್ಷಾ ಚಾಲಕ ಮಾಲಕರು ಈ ತಂಗುದಾಣದ ಸದುಪಯೋಗ ಪಡೆದುಕೊಂಡು ಗಂಗೊಳ್ಳಿ ಜನರಿಗೆ ಉತ್ತಮ ಸೇವೆ ನೀಡುವಂತಾಗಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಹೇಳಿದರು. ಅವರು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯ ವಠಾರದಲ್ಲಿ ತಾಲೂಕು ಪಂಚಾಯತ್ ನಿಧಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಆಟೋ ರಿಕ್ಷಾ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿಕ ಎಂ.ರಾಮಕೃಷ್ಣ ಪೈ ಮುಳ್ಳಿಕಟ್ಟೆ ಮಾತನಾಡಿ, ಆಟೋ ಚಾಲಕರು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸಬೇಕು. ಅತಿ ವೇಗದಿಂದ ಚಲಾಯಿಸುವುದು, ಡ್ರೈವಿಂಗ್ ಲೈಸನ್ಸ್ ಇಲ್ಲದೆ ವಾಹನ ಚಲಾಯಿಸುವುದನ್ನು ಮಾಡದೇ ತಮ್ಮ ವಾಹನವನ್ನು ಅತ್ಯಂತ ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಚಾಲನೆ ಸಂದರ್ಭ ಎಲ್ಲಾ ವಾಹನಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆ ಪತ್ರಗಳನ್ನು ತಮ್ಮೊಟ್ಟಿಗೆ ಇಟ್ಟುಕೊಳ್ಳಬೇಕು ಎಂದರು. ಪತ್ರಕರ್ತ ಬಿ.ರಾಘವೇಂದ್ರ ಪೈ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶಾನುಸಾರ ಪ್ರಾಯ:ಶ್ಚಿತ್ತ ಶ್ರೀ ಲಘು ವಿಷ್ಣು ಹವನ, ಶ್ರೀದೇವರಿಗೆ ದ್ವಾದಶ ಕಲಶಾಭಿಷೇಕ ಹಾಗೂ ಕುಳಾವಿ ಬಾಂಧವರಿಂದ ಮುಷ್ಠಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ದ್ವಾದಶ ಕಲಶಾಭಿಷೇಕ, ಮಧ್ಯಾಹ್ನ ಗಂಟೆಗೆ ಶ್ರೀ ಲಘು ವಿಷ್ಣು ಹವನ ಪೂರ್ಣಾಹುತಿ, ೧ ಗಂಟೆಗೆ ಮಹಾಪ್ರಾರ್ಥನೆ ನಡೆದು ಶ್ರೀ ದೇವರಿಗೆ ಮುಷ್ಠಿ ಕಾಣಿಕೆ ಸಮರ್ಪಣೆ ಮಾಡಲಾಯಿತು. ಮಧ್ಯಾಹ್ನ ಮಹಾ ಮಂಗಳಾರತಿ ಹಾಗೂ ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ಯಶಸ್ವಿಯಾಗಿ ಜರಗಿದವು. ದೇವಳದ ಧರ್ಮದರ್ಶಿ ಮಂಡಳಿ ಸದಸ್ಯರು, ಊರ ಪರವೂರ ಸಮಾಜ ಬಾಂಧವರು, ಕುಳಾವಿ ಬಾಂಧವರು, ಭಜಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಏಕಾಗ್ರತೆ ಹಾಗೂ ಆತ್ಮ ಶುದ್ಧಿಯಿಂದ ದೇವರ ಧ್ಯಾನ ಮಾಡಿದಾಗ ಪುಣ್ಯ ಪ್ರಾಪ್ತಿಯಾಗುತ್ತದೆ. ದೇವರ ಧ್ಯಾನದಿಂದ ಸಾರ್ಥಕ ಜೀವನ ಹೊಂದಲು ಸಾಧ್ಯ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಹೇಳಿದರು. ಅವರು ಬೆಳ್ವೆ ಹೊನ್ಕಲ್ಲು ಚಿತ್ತೇರಿ ಶ್ರೀ ವನದುರ್ಗಾ ದೇವಸ್ಥಾನದ ಪುನಃ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರದ್ಧೆ ಭಕ್ತಿಯ ಧಾರ್ಮಿಕ ಆಚರಣೆಗಳಿಂದ ಧರ್ಮ ಸಂಸ್ಕೃತಿಯ ಉಳಿವಿಗೆ ಸಾಧ್ಯ. ದೇವರ ಭಯವೇ ಜ್ಞಾನದ ಆರಂಭ. ಯುವ ಜನತೆ ಹಿರಿಯರನ್ನು ಗೌರವಿಸುವ ಸೇವಾ ಮನೋಭಾವನೆಗಳನ್ನು ಮೈಗೂಡಿಸಿ ಕೊಳ್ಳಬೇಕು. ದೂರದರ್ಶನ ಕಾರ್ಯ ಕ್ರಮಗಳಿಂದ ಧಾರ್ಮಿಕ ಆಚರಣೆಗಳು ವ್ಯತಿರಿಕ್ತ ಸ್ವರೂಪವನ್ನು ಹೊಂದಿ ಕೊಳ್ಳುತ್ತಿರುವುದು ದುರದೃಷ್ಟಕರ. ಧಾರ್ಮಿಕ ಆಚರಣೆಗಳಲ್ಲಿ ಜನರ ಆಸಕ್ತಿ ಒಗ್ಗೂಡುವಿಕೆಯಿಂದ ಊರಿನ ಅಭಿವೃದ್ಧಿ ಹಾಗೂ ಗೌರವ ಹೆಚ್ಚುತ್ತದೆ. ವ್ಯಕ್ತಿಯ ಉತ್ತಮ ಸೇವಾ ಮನೋಭಾವನೆಯಿಂದ ಸಮಾಜದಲ್ಲಿ ಗೌರವಕ್ಕೆ ಅರ್ಹರಾಗುತ್ತಾರೆ ಎಂದರು. ನಿವೃತ್ತ ಶಿಕ್ಷಕ ಶೇಖರ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಯಕ್ಷಗಾನ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿಯವರು ಯಕ್ಷರಂಗದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿ ವೃತ್ತಿ ಮೇಳದ ತಿರುಗಾಟದಿಂದ ನಿವೃತ್ತರಾದ ಪ್ರಯುಕ್ತ “ಹಳ್ಳಾಡಿಗೆ 60, ರಂಗಕ್ಕೆ 50′ ಕಾರ್ಯಕ್ರಮ ಕುಂದಾಪುರ ಆರ್.ಎನ್.ಶೆಟ್ಟಿ ಸಭಾಭವನದ ಆವರಣದಲ್ಲಿ ನಡೆಯಿತು. ಈ ಸಂದರ್ಭ ಯುವ ಬಂಟರ ಸಂಘಟನೆ ಕುಂದಾಪುರ ನೇತೃತ್ವದಲ್ಲಿ, ಹಳ್ಳಾಡಿ ಅಭಿಮಾನಿ ಬಳಗ ಸಾೖಬ್ರಕಟ್ಟೆ, ಅಭಿಮಾನಿ ಬಳಗ ಗಾವಳಿ ಹಾಗೂ ಹಟ್ಟಿಯಂಗಡಿ ಯಕ್ಷಗಾನ ಮೇಳ ಮತ್ತು ಅಭಿಮಾನಿಗಳು, ಹಿತೈಷಿಗಳ ವತಿಯಿಂದ ಹಳ್ಳಾಡಿಯವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಹಳ್ಳಾಡಿಯವರು, ಯಕ್ಷರಂಗ ತನಗೆ ಎಲ್ಲವನ್ನು ಕೊಟ್ಟಿದೆ. ಜಾತಿ-ಮತ ಭೇದವಿಲ್ಲದೆ ತನಗೆ ಅಭಿಮಾನಿಗಳಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು. ಯಕ್ಷಗಾನ ವಿಮರ್ಶಕ ಎಸ್. ವಿ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಯಕ್ಷರಂಗದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಳ್ಳಾಡಿಯವರಿಗೆ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಬೇಕಿದೆ ಎಂದರು. ಕುಂದಾಪುರ ಯುವಬಂಟರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹುಂಡೇಕರ್ ಸಮಿತಿ ವರದಿಯಲ್ಲಿ ದೊಡ್ಡ ತಾಲೂಕುಗಳಲ್ಲಿ ಸಂಪರ್ಕದ ವ್ಯವಸ್ಥೆಗಳು ಅಂದು ಕಡಿಮೆ ಇರುವ ಹಿನ್ನೆಲೆಯಲ್ಲಿ ಜನರಿಗೆ ಹತ್ತಿರದಲ್ಲೇ ಸೌಲಭ್ಯಗಳು ದೊರಕಲಿ ಎನ್ನುವ ಅಭಿವೃದ್ಧಿ ದೃಷ್ಟಿಕೋನದಲ್ಲಿ ಅಂತಹ ತಾಲೂಕನ್ನು ಒಡೆದು ಎರಡು ತಾಲೂಕನ್ನಾಗಿ ಮಾಡಬೇಕೆಂದು ಸೂಚಿಸಿದ್ದರು. ಆದರೆ ಈ ವರದಿಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ವಂಡ್ಸೆಯನ್ನು ತಾಲೂಕು ಕೇಂದ್ರವಾಗಿ ಮಾಡದಿದ್ದರೇ ಬೈಂದೂರು ತಾಲೂಕಿಗೆ ಸೇರಿಸುವುದು ಬೇಡ ಎಂದು ನ್ಯಾಯವಾದಿ ಟಿ.ಬಿ. ಶೆಟ್ಟಿ ಹೇಳಿದರು. ಅವರು ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ನಡೆದ ವಂಡ್ಸೆ ಹೋಬಳಿ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಹುಂಡೇಕರ್ ವರದಿಯಲ್ಲಿ ತಾಲೂಕು ಕೇಂದ್ರ ಎಲ್ಲಿ ಆಗಬೇಕೆಂಬ ಪ್ರಸ್ತಾಪ ಇಲ್ಲ. ಬೈಂದೂರು ತಾಲೂಕು ರಚನೆಯಾದಲ್ಲಿ ಬೈಂದೂರೇ ಕೇಂದ್ರವಾಗಬೇಕೆಂದು ವರದಿಯಲ್ಲಿ ಹೇಳಿಲ್ಲ. ಎ.ಬಿ. ಪ್ರಕಾಶ್ ಸಮಿತಿಯಲ್ಲಿದ್ದ ಚಿರಂಜೀವಿ ಸಿಂಗ್ ಕೂಡಾ ಮುಂದೆ ರಾ.ಹೆ.ಕೇಂದ್ರಿತ ತಾಲೂಕು ಕೇಂದ್ರಗಳಾಗಿ ಮಾಡುವುದು ಸರಿಯಲ್ಲ ಎಂದಿದ್ದರು. ಇದುವರೆಗೆ ಯಾವ ಸರಕಾರವೂ ಕೂಡ ತಾಲೂಕು ರಚನೆಗೆ ಸಂಬಂಧಿಸಿದ ಯಾವುದೇ ವರದಿಗೂ ಗೌರವ ಕೊಟ್ಟಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೇರೂರು ಗ್ರಾಮದ ಕೆಳ ಹೇರೂರಿನ ದುರ್ಗಾಂಬಿಕಾ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಒಳ ಪ್ರವೇಶಿಸಿದ ಕಳ್ಳರು ಗರ್ಭ ಗುಡಿಯ ಬೀಗ ಒಡೆದು ದೇವರಿಗೆ ಹಾಕಿರುವ ಚಿನ್ನ -ಬೆಳ್ಳಿಯ ಆಭರಣಗಳು ಹಾಗೂ ಪರಿಕರಗಳನ್ನು ಕಳವು ಮಾಡಲಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದೇವಸ್ಥಾನದ ಅರ್ಚಕ ರಾಮಯ್ಯ ಬಳೆಗಾರ ಅವರು ಬೆಳಗ್ಗೆ ದೇವಸ್ಥಾನಕ್ಕೆ ಪೂಜೆಗೆ ಬಂದಾಗ ಕಳವು ನಡೆದ ಬಗ್ಗೆ ತಿಳಿದುಬಂದಿದ್ದು ತತ್‌ಕ್ಷಣ ಆಡಳಿತ ಮೊಕ್ತೇಸರರಿಗೆ ಕರೆ ಮಾಡಿ ತಿಳಿಸಿರುತ್ತಾರೆ. ಎದುರಿನ ಬಾಗಿಲಿನ ಬೀಗ ಹಾಕುವ ಕೊಂಡಿಯನ್ನು ಮುರಿದು ಬಾಗಿಲಿಗೆ ಒಳಗಡೆಯಿಂದ ಚಿಲಕ ಹಾಕಿರುವುದು ತಿಳಿದ ಅನಂತರ ದೇವಸ್ಥಾನದ ಉತ್ತರ ಬದಿಯಲ್ಲಿ ಬಾಗಿಲನ್ನು ತೆರೆದು ಹೊಕ್ಕ ಕಳ್ಳರು ದೇವಸ್ಥಾನದ ಒಳಗಿನ ಗರ್ಭಗುಡಿಗೆ ಹೋಗುವ ಬಾಗಿಲಿನ ಬೀಗ ಹಾಕುವ ಕೊಂಡಿಯನ್ನು ಮುರಿದು ಗರ್ಭಗುಡಿಯ ಒಳಗೆ ಪ್ರವೇಶಿಸಿ ದೇವರಿಗೆ ಹಾಕಿರುವ ಬೆಳ್ಳಿಯ ಪ್ರಭಾವಳಿ, ಬೆಳ್ಳಿಯ ತ್ರಿಶೂಲ, ಬೆಳ್ಳಿಯ ಮುಖವಾಡ, ಬೆಳ್ಳಿಯ ಸೊಂಟದ ಪಟ್ಟಿ, ಬೆಳ್ಳಿಯ ಬಳೆ ಒಂದು ಜತೆ, ಬೆಳ್ಳಿಯ…
ಕುಂದಾಪ್ರ ಡಾಟ್ ಕಾಂ ವಿಡಿಯೋ |ಮರವಂತೆ ಸೌಪರ್ಣಿಕ ನದಿಯ ಕುರು ದ್ವೀಪ ನೋಡುಗರ ಕಣ್ಮನ ಸೆಳೆಯುವಂತಿದೆ. ಮರವಂತೆ ಸಮುದ್ರ ತೀರ ಹಾಗೂ ಸೌಪರ್ಣಿಕ ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66 ಇಲ್ಲಿನ ಒಂದು ವೈಶಿಷ್ಟ್ಯವಾದರೇ, ಅದರ ಪಕ್ಕದಲ್ಲಿಯೇ ಇರುವ ಕುರು ದ್ವೀಪವೂ ಸುಂದರ ಪ್ರವಾಸಿ ತಾಣವೆನಿಸಿಕೊಂಡಿದೆ. ಕುಂದಾಪುರದ ಡಿಜೆ ರಂಜು ತಮ್ಮ ಡ್ರೋನ್ ಕ್ಯಾಮರಾ ಮೂಲಕ ಈ ಪ್ರದೇಶವನ್ನು ಸೆರೆಹಿಡಿದಿದ್ದಾರೆ. ಒಮ್ಮೆ ನೋಡಿ ಮತ್ತು ಶೇರ್ ಮಾಡಿ. Aerial View of Kuru Islaland Maravanthe ಇದನ್ನೂ ನೋಡಿ: http://kundapraa.com/aerial-view-of-current-maravanthe-nh-66-beach-and-river/ ಮತ್ತಷ್ಟು ವಿಡಿಯೋಗಳಿಗೆ ನಮ್ಮ ಚಾನೆಲ್ Subscribe ಮಾಡಿಕೊಳ್ಳಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕೀಲರ ಸಂಘದ ಸದಸ್ಯರಾದ ಯುವ ನ್ಯಾಯವಾದಿ ಕೆ. ವಿಕಾಸ ಹೆಗ್ಡೆಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾದ ಬಗ್ಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಯುವ ನ್ಯಾಯವಾದಿಯಾಗಿ ಕ್ರೀಯಾಶೀಲ ವ್ಯಕ್ತಿತ್ವ ಹೊಂದಿರುವ ಕೆ.ವಿಕಾಸ ಹೆಗ್ಡೆಯವರು ರಾಜಕೀಯದಲ್ಲಿ ಅಜಾತಶತ್ರುವಾಗಿದ್ದು, ಅತೀ ಕಿರಿಯ ವಯಸ್ಸಿನಲ್ಲಿ ಉನ್ನತ ಸ್ಥಾನ ಅಲಂಕರಿಸಿರುವುದು ನಮ್ಮ ವಕೀಲರ ಸಂಘಕ್ಕೆ ಅತ್ಯಂತ ಹೆಮ್ಮೆಯ ವಿಚಾರ ಎಂದರು. ಮಾಜಿ ಅಧ್ಯಕ್ಷರುಗಳಾದ ಎ.ಬಿ.ಶೆಟ್ಟಿ, ಗಡಾಹದ್ ರಾಮಕೃಷ್ಣ ರಾವ್, ಜಿ. ಸಂತೋಷ ಕುಮಾರ್ ಶೆಟ್ಟಿ, ಹಿರಿಯ ನ್ಯಾಯವಾದಿ ಟಿ.ಬಿ ಶೆಟ್ಟಿ, ಉಪಾಧ್ಯಕ್ಷರಾದ ಜಯಪ್ರಕಾಶ ಸಾಲಿನ್ಸ್‌ರವರು ಕೆ.ವಿಕಾಸ ಹೆಗ್ಡೆ ಇವರನ್ನು ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕೆ.ವಿಕಾಸ ಹೆಗ್ಡೆಯವರು, ಒಬ್ಬ ನ್ಯಾಯವಾದಿಯಾಗಿ ಇದ್ದುದರಿಂದ ರಾಜಕೀಯವಾಗಿ ಹೆಚ್ಚು ಗೌರವ ಸಿಕ್ಕಿರುವುದಲ್ಲದೆ, ಈ ವಯಸ್ಸಿನಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಲ್ಲದೇ ನಾನು ನ್ಯಾಯವಾದಿಯಾಗಿರುವುದರಿಂದ ಜನರಿಗೂ ಸಹಾ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಹಿಂದೂ ಪರಿಷತ್ – ಬಜರಂಗದಳ ಮರವಂತೆ ಘಟಕದ ಆಶ್ರಯದಲ್ಲಿ ಯುಗಾದಿ ಹಬ್ಬದ ಆಚರಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿದವು. ಕರ್ನಾಟಕ ದಕ್ಷಿಣ ಪ್ರಾಂತ ಮಠ ಮಂದಿರ ಪ್ರಮುಖ್ ಪ್ರೇಮಾನಂದ ಶೆಟ್ಟಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಅಧ್ಯಕ್ಷ ಶ್ರೀಧರ ಬಿಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಸಂಚಾಲಕ ನಿತ್ಯಾನಂದ ಉಪ್ಪುಂದ, ನಾಗರಾಜ್, ಸತೀಶ್ ಮೊದಲಾದವರು ಉಪಸ್ಥಿತರಿದ್ದರು. ಯುಗಾದಿ ಹಬ್ಬದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಘಟಕದ ಕಾರ್ಯಕರ್ತರು ಮರವಂತೆಯ ಮನೆಗಳಿಗೆ ತೆರಳಿ ಬೇವು ಬೆಲ್ಲ ನೀಡಿ ಶುಭಕೋರಿದರು. ರಾತ್ರಿ ಸಹಭೋಜನ ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ – ಕುಂದಾಪುರ: ಕುಂದಾಪುರ ಪುರಸಭೆ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಬಬ್ಬುಕುದ್ರುವಿನ ಶ್ಮಶಾನ ಅಭಿವೃದ್ಧಿಗೆ ಅನುದಾನವನ್ನು ಮೀಸಲಾಗಿರಿಸುವ ಬಗ್ಗೆ , ವಲಸೆ ಕಾರ್ಮಿಕರಿಗೆ ರಾತ್ರಿ ವಸತಿ ಸೌಲಭ್ಯ ಒದಗಿಸುವ ಕುರಿತು ವ್ಯಾಪಕ ಚರ್ಚೆ ನಡೆಯಿತು. ಪ್ರಸ್ತುತ ಕುಂದಾಪುರದಲ್ಲಿ ನೂರಾರು ಮಂದಿ ವಲಸೆ ಕಾರ್ಮಿಕರು ನೆಹರೂ ಮೈದಾನದ ಪಕ್ಕದಲ್ಲಿರುವ ಶಾಲೆ, ಸರಕಾರಿ ಕಟ್ಟಡಗಳಲ್ಲಿ ರಾತ್ರಿ ಹೊತ್ತು ವಸತಿಗಾಗಿ ಆಶ್ರಯ ಪಡೆದುಕೊಳ್ಳುತ್ತಿದ್ದು, ಅವರು ಅಲ್ಲಿ ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸದೇ ಇರುವ ಹಿನೆ°ಲೆಯಲ್ಲಿ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಗಮನ ಹರಿಸಿದ ಕುಂದಾಪುರ ಉಪ ವಿಭಾಗಾಧಿಕಾರಿ ಶಿಲ್ಪಾನಾಗ್ ಅವರು ಕುಂದಾಪುರ ಪುರಸಭೆಯ ವತಿಯಿಂದ ವಲಸೆ ಕಾರ್ಮಿಕರಿಗೆ ನೈಟ್ ಶೆಲ್ಟರ್‌ವೊಂದನ್ನು ನಿರ್ಮಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ತಿಳಿಸಿದ ಪುರಸಭೆಯ ಮುಖ್ಯಾಧಿಕಾರಿ ಅವರು ಈ ಕುರಿತು ಕುಂದಾಪುರದ ಬಸ್ಸು ನಿಲ್ದಾಣದ ಬಳಿ ಇರುವ ಸಂಕೀರ್ಣದ ಎರಡನೇ ಅಂತಸ್ತಿನಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡುವ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲು…
