Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು) ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಮಿಕರ ಭವನದಲ್ಲಿ ನಡೆಯಿತು. ಕುಂದಾಪುರ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ, ಇಂದು ಚಾಲಕರ ಮಕ್ಕಳು ತಮ್ಮಂತೆ ಚಾಲಕರಾಗಬೇಕೆಂದು ಯಾವ ತಣದೆಯು ಆಸೆ ಪಡೋದಿಲ್ಲ ಆದರೆ ಉನ್ನತ ಹುದ್ದೆಯಲ್ಲಿರುವ ತಂದೆ ತಾಯಿಯರು ತಮ್ಮ ಮಕ್ಕಳು ತಮ್ಮಂತೆ ಉನ್ನತ ಹುದ್ದೆಗೇರ ಬೇಕು ಎಂದು ಆಶೆ ಪಡುತ್ತಾರೆ.ಹಾಗಾಗಿ ಚಾಲಕರ ಮಕ್ಕಳಾದ ನೀವು ಒಳ್ಳೆಯ ವಿದ್ಯಾಭ್ಯಾಸ ಕಲಿತು ಮುಂದೆ ಒಳ್ಳೆಯ ಉದ್ಯೋಗದಲ್ಲಿ ಕೂರುವಂತಾರಗಬೇಕು ಮತ್ತು ಕ್ರೀಡೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಕೆ.ಲಕ್ಷಮಣ ಬರೇಕಟ್ಟು ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಕುಂದಾಪುರ ಅಧ್ಯಕ್ಷ ಉದಯ ಗಾಂವ್ಕರ್, ಸಂಘ ಗೌರವಾಧ್ಯಕ್ಷ ಎಚ್.ಕರುಣಕರ, ಸಲಹೆಗಾರ ಚಂದ್ರ ವಿ., ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕ ಮಲ್ಲಿಕಾರ್ಜುನ ಶೆಟ್ಟಿಗಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ ವಿ., ಶೇಖರ ವಿ. ದೋಣಿಮ ಉಪಸ್ಥಿತರಿದ್ದರು.…

Read More

ಕಲರ‍್ಸ್ ಆಫ್ ದಿ ರೈನ್ ಬೋ’ ಪುಸ್ತಕ ಬಿಡುಗಡೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾಲ್ಯದಿಂದಲೂ ಜೀವನದಲ್ಲಿ ಪಡೆದ ನಿರಂತರ ಶ್ರಮ, ಪಡೆದ ಅನುಭವ, ಪ್ರಾಮಾಣಿಕತೆ, ವಿಶೇಷ ಸಾಧನೆ ಮಾಡಲು ಶಕ್ತಿ, ಸ್ಪೂರ್ತಿ ಒದಗಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿದ್ದ ಕುಟುಂಬದ ವಿದ್ಯಾರ್ಥಿಗಳಲ್ಲಿ ಕೆಲವರು ಹತ್ತಾರು ಮೈಲಿ ನಡೆದು, ಊಟ, ಬಟ್ಟೆ ಪರಿವೆ ಇಲ್ಲದೇ ಕಷ್ಟಪಟ್ಟು ಶಿಕ್ಷಣ ಪಡೆದುದರಿಂದ ಅವರಲ್ಲಿ ಹಲವರು ಮಹತ್ ಸಾಧನೆ ಮಾಡಿದರು. ಕುಂದಾಪುರದ ಡಾ|ಉಮೇಶ್ ಭಟ್ ಅವರೂ ಹಳ್ಳಿ ಬೆಳಗೋಡಿನಿಂದ ಬಳ್ಳಾರಿ ಮೆಡಿಕಲ್ ಕಾಲೇಜಿಗೆ ತಲುಪಲು ಪಟ್ಟ ಶ್ರಮ, ಆನಂತರ ಪಡೆದ ಅನುಭವ, ಶಸ್ತ್ರ ಚಿಕಿತ್ಸಾ ತಜ್ಞರಾಗಿ ತೋರಿಸಿದ ಕರ್ತವ್ಯ ನಿಷ್ಠೆ ಅವರು ಯಶಸ್ವಿಯಾಗಲು ಸಾಧ್ಯವಾಯಿತು ಎಂದು ಖ್ಯಾತ ಚಿತ್ರನಟ, ಮಾಜಿ ಶಾಸಕ ಬಿ,ಸಿ.ಪಾಟೀಲ್ ಹೇಳಿದರು. ಕುಂದಾಪುರದಲ್ಲಿ ಡಾ| ಉಮೇಶ್ ಭಟ್ ಅವರ ಆಂಗ್ಲಭಾಷಾ ಕಾದಂಬರಿ ಕಲರ‍್ಸ್ ಆಫ್ ದಿ ರೈನ್ ಬೋ ಬಿಡುಗಡೆ ಮಾಡುತ್ತಾ ಹೇಳಿದರು. ಮಣಿಪಾಲ ಯುನಿವರ್ಸಿಟ ಪ್ರೆಸ್ ಹಾಗೂ ಕುಂದಪ್ರಭ ಕುಂದಾಪುರ ಆಶ್ರಯದಲ್ಲಿ ಕುಂದಾಪುರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆನಂದ ಬಿಲ್ಲವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಗಂಗೊಳ್ಳಿಯ ಪ್ರಧಾನ ಕಛೇರಿಯಲ್ಲಿ ಜರಗಿದ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಿರಿಯ ನಿರ್ದೇಶಕ ವಾಸುದೇವ ಶೇರುಗಾರ್ ಅವರು ಮುಂದಿನ ಐದು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಆನಂದ ಬಿಲ್ಲವ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಾಸುದೇವ ಶೇರುಗಾರ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಇವರಿಬ್ಬರು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಸುಧೀರ್ ಕುಮಾರ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬ್ಯಾಂಕಿನ ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಸುಭಾಶ್ಚಂದ್ರ ಪೂಜಾರಿ, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಗೋಪಾಲ ನಾಯ್ಕ್ ಜಿ., ಆಶಾಲತಾ, ಯಮುನಾ, ನಾಗರಾಜ ಎಂ., ಲಕ್ಷ್ಮಣ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಗಾಣಿಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟ ಶಿಕ್ಷಣ ನೀಡಲು ಮೂಲಭೂತ ಅವಶ್ಯಕತೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಒಂದು ಪ್ರಮುಖ ಅವಶ್ಯಕತೆ. ತರಗತಿಯಲ್ಲಿ ಬೋಧಿಸಿದ ಪಾಠಗಳ ಸ್ಥಿರೀಕರಣಕ್ಕೆ ಸ್ಮಾರ್ಟ್ ಕ್ಲಾಸ್ ಬಹಳ ಉಪಯುಕ್ತ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸಂಜೀವ ದೇವಾಡಿಗ ಕೊಡುಗೆ ನೀಡಿದ ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕ್ ಪಂಚಾಯತ್ ಸದಸ್ಯೆ ಜೆತಿ ವಿ. ಪುತ್ರನ್, ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಶಿಕ್ಷಣ ತಜ್ಞ ಕೆ.ವಿ.ನಾಯಕ್, ನಿವೃತ್ತ ಉಪನ್ಯಾಸಕ ಜಗದೀಶ್ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಮಾಲಾಡಿ ವಿಶ್ವನಾಥ ಶೆಟ್ಟಿ, ಉದ್ಯಮಿಗಳಾದ ಗಣಪತಿ ನಾಯಕ್, ಟಿ. ಸಂತೋಷ್ ನಾಯಕ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಸಂಜೀವ ದೇವಾಡಿಗ, ಕೋಟೇಶ್ವರ ವೃತ್ತ ಶಿಕ್ಷಣ ಸಂಯೋಜಕಿ ಅನಿತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಫೋರ್ಟ್ಸ್ ಕ್ಲಬ್‌ನ ೩೩ನೇ ವಾರ್ಷಿಕೋತ್ಸವ ಸಮಾರಂಭ ಗಂಗೊಳ್ಳಿ ಕೆ.ಎಫ್.ಡಿ.ಸಿ ವಠಾರದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ರಮೇಶ ಕುಂದರ್ ಮಾತನಾಡಿ ನಮ್ಮೂರಿನ ಶಾಲಾ ಕಾಲೇಜುಗಳಿಂದ ಯುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ಅವರ ಬೆಳವಣಿಗೆ ಸಹಕರಿಸಬೇಕು. ಗ್ರಾಮದ ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಠಲ ವಿ.ಗಾಂವಕರ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ ಕುಮಾರ ಹಾಗೂ ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಶುಭ ಹಾರೈಸಿದರು. ಇದೇ ಸಂದರ್ಭ ರಾಪ್ಟ್ರೀಯ ಜ್ಯೂನಿಯರ್ ಕರಾಟೆ ಪಟು ಕುಂದಾಪುರದ ಸನಿಯಾ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮೋಹನ ಖಾರ್ವಿ ಸ್ವಾಗತಿಸಿದರು. ಸಂಘದ ಶಿಕ್ಷಣನಿಧಿಯ ಗೌರವ ಸದಸ್ಯ ಜಿ.ಪುರುಷೋತ್ತಮ ಆರ್ಕಾಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಸತೀಶ ಜಿ. ಖಾರ್ವಿ ವರದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನೆಗಳಲ್ಲಿ ತಂದೆ ತಾಯಂದಿರು ಸಂಸ್ಕಾರದ ಮೂಲಕ ಸುಸಂಸ್ಕೃತರಾಗಬೇಕು. ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯಬೇಕಾದರೆ ಮನೆ ಹಾಗೂ ಶಾಲೆಗಳಲ್ಲಿ ಹಿಂದು ಸಂಸ್ಕೃತಿಯ ಶಿಕ್ಷಣ ನೀಡಬೇಕು. ಸಂಸ್ಕಾರ ಸಂಸ್ಕೃತಿ ನೀಡುವ ಭಾಷೆಯನ್ನು ಬಾಲ್ಯದಲ್ಲಿ ಮಕ್ಕಳಿಗೆ ನೀಡಬೇಕು. ಮಕ್ಕಳನ್ನು ಸತ್ರ್ಪಜೆಗಳನ್ನಾಗಿ ರೂಪಿಸುವ ಮಹತ್ತರವಾದ ಜವಾಬ್ದಾರಿ ಮಕ್ಕಳ ಪೋಷಕರ ಮೇಲಿದೆ. ಮಕ್ಕಳಿಗೆ ಅಗತ್ಯವಾಗಿರುವ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಬೆಳೆಯಲು ಅವಕಾಶ ಕಲ್ಪಿಸಬೇಕು. ಗೋವುಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಉಡುಪಿಯ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವಿಠಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸುಧೀಂದ್ರ ಕೃಪಾ ಸದನದಲ್ಲಿ ಜರಗಿದ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಗಂಗೊಳ್ಳಿಯಲ್ಲಿ ಕಳೆದ ೩೦ ವರ್ಷಗಳಿಂದ ಪುಟ್ಟ ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಶಿಕ್ಷಣ ನೀಡುತ್ತಿರುವ ಸೇವಾ ಸಂಗಮ ನಿವೇದಿತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಜಾತ್ಯತೀತ ಜನತಾ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮರವಂತೆಯ ಮನ್ಸೂರ್ ಇಬ್ರಾಹಿಂ ನೇಮಕಗೊಂಡಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರಾದ ಎಂ. ಎಸ್. ನಾರಾಯಣ ರಾವ್ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಈ ನೇಮಕ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ಯೋಗೀಶ ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಾಲೆಯ ಸುತ್ತಮುತ್ತ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಳಿ ಮನವಿ ಮಾಡಿಕೊಂಡರು. ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ನೇತೃತ್ವದಲ್ಲಿ ಶಾಲೆಯ ಸಮೀಪದ ಅಂಗಡಿಗಳಿಗೆ ತೆರಳಿದ ವಿದ್ಯಾರ್ಥಿಗಳು ಅಂಗಡಿ ಮಾಲಿಕರಿಗೆ ಗುಲಾಬಿ ಹೂವು ನೀಡಿ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟದಿಂದ ವಿದ್ಯಾರ್ಥಿಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ವಿವರಿಸಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂದು ಆಗ್ರಹಿಸಿದರು. ಶಾಲೆಯ ಶಿಕ್ಷಕ ರಕ್ಷಕ ಸಮಿತಿಯ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ, ಶಾಲೆಯ ಶಿಕ್ಷಕರಾದ ಸುಜಾತಾ, ಶೋಭಾ, ದಿವ್ಯಶ್ರೀ, ಲಕ್ಷ್ಮೀ, ಜ್ಯೋತಿ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಉತ್ತರಪ್ರದೇಶ, ಉತ್ತರಾಖಂಡ ಸಹಿತ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗಣನೀಯ ಸಾಧನೆಗಾಗಿ ಕುಂದಾಪುರ, ಬೈಂದೂರು ಗಂಗೊಳ್ಳಿ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ಬೈಪಾಸ್ ಬಳಿ, ತಲ್ಲೂರು ಪೇಟೆಯಲ್ಲಿ, ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಹಾಗೂ ಗಂಗೊಳ್ಳಿಯ ಸ್ಥಾನೀಯ ಸಮಿತಿ ವತಿಯಿಂದ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಸಂಭ್ರಮ ನಡೆಸಲಾಯಿತು. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದ್ದು, ಮತದಾರರು ಬಿಜೆಪಿ ಕೈಹಿಡಿದಿದ್ದಾರೆ. ಈ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ನೀಡಿದ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ ಅವರು, ಉತ್ತರಪ್ರದೇಶದ ವಿಧಾನಸಭಾ ಚುನಾಚಣಾ ಫಲಿತಾಂಶ ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಆಚರಣೆ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ ಸಮಾಪನಗೊಂಡಿತು. ಜನಪದ ವಾದ್ಯ ಗುಮಟೆ, ಚೆಂಡೆ ವಾದನ, ಹೋಳಿ ನೃತ್ಯ ಮನ ಸೆಳೆದರೇ, ಶಿವನ ಸ್ತಬ್ಧಚಿತ್ರ ಹೋಳಿ ಮೆರವಣಿಗೆಯ ಕಳೆ ಹೆಚ್ಚಿಸಿತು. ಎರಡು ತಾಸಿಗೂ ಮಿಕ್ಕಿ ನಡೆದ ಮೆರವಣಿಗೆಯಲ್ಲಿ ಕೊಂಕಣಿ ಖಾರ್ವಿ ಸಮಾಜದ ಪುರುಷರು, ಮಹಿಳೆಯರು, ಮಕ್ಕಳು ಹಾಗೂ ಊರವರು ಪರಸ್ಪರ ಬಣ್ಣ ಎರಚಿಕೊಂಡು ಬಣ್ಣದ ಹಬ್ಬದ ರಂಗು ತುಂಬಿದರು. ಮೆರವಣಿಗೆಯುದ್ದಕ್ಕೂ ಮೊಳಗಿದ ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ಸಾರ್ವಜನಿಕರೂ ಕೂಡ ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಾರಾಷ್ಟ್ರೀಯ ಎಫ್‌ಎಸ್‌ಎಲ್ ಸೇವಾ ಸಂಸ್ಥೆಯ ವಿದೇಶಿ ಸ್ವಯಂಸೇವಕರು ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಮೆರವಣಿಗೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.

Read More